Tag: Parvati

  • ಭೀಮನ ಅಮಾವಾಸ್ಯೆಯ ವಿಶೇಷತೆ ಏನು?

    ಭೀಮನ ಅಮಾವಾಸ್ಯೆಯ ವಿಶೇಷತೆ ಏನು?

    ಭೀಮನ ಅಮಾವಾಸ್ಯೆಯು ದಕ್ಷಿಣ ಭಾರತದಲ್ಲಿ ಹೆಚ್ಚಾಗಿ ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡು ಭಾಗಗಳಲ್ಲಿ ಆಚರಿಸಲಾಗುವ ಹಬ್ಬವಾಗಿದೆ. ಇದನ್ನು ಹಿಂದೂ ಕ್ಯಾಲೆಂಡರ್‍ನ ಆಷಾಢ ಮಾಸದ ಕೊನೆ ಅಮಾವಾಸ್ಯೆವೆಂದು ಆಚರಿಸಲಾಗುತ್ತದೆ.

    ಭಾರತೀಯ ಸಂಪ್ರದಾಯದಂತೆ ಹಿಂದೂಗಳು ಆಷಾಢದಲ್ಲಿ ಯಾವುದೇ ಶುಭಕಾರ್ಯ ಮಾಡುವುದಿಲ್ಲ. ಆದರೆ ಆಷಾಢದ ಅಮಾವಾಸ್ಯೆಯ ದಿನ ಜ್ಯೋತಿರ್ಭೀಮೇಶ್ವರ ವ್ರತವನ್ನು ನವದಂಪತಿಗಳು ಸಡಗರದಿಂದ ಆಚರಿಸುತ್ತಾರೆ. ಈ ವ್ರತಕ್ಕೆ ‘ಪತಿ ಸಂಜೀವಿನಿ ವ್ರತ’ ಎಂದೂ ಕರೆಯುವುದುಂಟು. ಪತಿಗೆ ದೀರ್ಘಾಯುಷ್ಯವನ್ನು ಕರುಣಿಸುವಂತೆ, ತಮ್ಮನ್ನು ದೀರ್ಘ ಸುಮಂಗಲಿಯಾಗಿ ಹರಸುವಂತೆ ಕೋರಿ ಶಿವನನ್ನು ಪೂಜಿಸುವ ಹಬ್ಬವೇ ಭೀಮನ ಅಮಾವಾಸ್ಯೆ.

    ಈ ದಿನ ಮದುವೆಯಾದ ಹೆಂಗಸರು ಮಾತ್ರವಲ್ಲ, ಮದುವೆಯಾಗದ ಹೆಣ್ಣುಮಕ್ಕಳು ಕೂಡ ಆಚರಿಸಬಹುದು. ಮದುವೆಯಾಗದ ಹೆಣ್ಣುಮಕ್ಕಳು ಒಳ್ಳೆ ಗಂಡ ಸಿಗಲಿ ಎಂದು ಹಾಗೂ ಮದುವೆಯಾದ ಹೆಣ್ಣು ತನ್ನ ಗಂಡನ ಆಯುಷ್ಯ ಹೆಚ್ಚಲಿ ಎಂದು ದೇವರನ್ನು ಪ್ರಾರ್ಥಿಸಿ ಈ ವ್ರತ ಕೈಗೊಳ್ಳುತ್ತಾರೆ.

    ಪೂಜಾ ವಿಧಾನ
    ಗೃಹಿಣಿಯರು ಕೈಗೆ ಕಂಕಣ ಕಟ್ಟಿಕೊಂಡು ಜ್ಯೋರ್ತಿಭೀಮೇಶ್ವರನ್ನು ಧ್ಯಾನಿಸಿ, ವ್ರತ ಕೈಗೊಳ್ಳಬೇಕು. ರಾಹುಕಾಲ ಹೊರತುಪಡಿಸಿ ಬೆಳಗ್ಗೆ ಅಥವಾ ಸಂಜೆ ಯಾವುದೇ ಶುಭ ಮುಹೂರ್ತದಲ್ಲಿ ವ್ರತ ಕೈಗೊಳ್ಳಬಹುದು.

    ಒಂದು ತಟ್ಟೆಯಲ್ಲಿ ಅಕ್ಕಿ ಹಾಕಿ, ಅದರ ಮೇಲೆ ಎರಡು ದೀಪದ ಕಂಭ ನೆಟ್ಟು, ದೀಪದ ಎಣ್ಣೆ ಹಾಕಿ ಹಚ್ಚಬೇಕು. ಈ ದೀಪಸ್ತಂಭದಲ್ಲಿ ಶಿವ ಪಾರ್ವತಿಯನ್ನು ಆವಾಹನೆ ಮಾಡಿ ಪೂಜೆ ಸಲ್ಲಿಸುತ್ತಾರೆ. ಪೂಜಾ ಸಾಮಗ್ರಿಗಳ ಜೊತೆಗೆ 9 ಗಂಟಿನ ಗೌರಿ ದಾರ ಇಟ್ಟು ಪೂಜೆ ಮಾಡಿ ಆ ಬಳಿಕ ಕೈಗೆ ಕಟ್ಟಿಕೊಳ್ಳಬೇಕು. ಮೊದಲು ಗಣಪತಿ ಪೂಜೆ ಮಾಡಿ ನಂತರ ಭೀಮೇಶ್ವರನ ಪೂಜೆ ಮಾಡುತ್ತಾರೆ. ನೈವೇದ್ಯಕ್ಕೆ 9 ಕರಿಗಡುಬು ಅರ್ಪಿಸಲಾಗುತ್ತದೆ. ಆ ಬಳಿಕ ಗಂಡನ ಪಾದಪೂಜೆಯನ್ನು ನೆರವೇರಿಸಬೇಕು.

    ಆಚರಣೆ ವಿಧಾನ ಭಿನ್ನ
    ವ್ರತಾಚರಣೆ ಪ್ರಾಂತ್ಯದಿಂದ ಪ್ರಾಂತ್ಯಕ್ಕೆ ಭಿನ್ನತೆಯಿಂದ ಕೂಡಿದೆ. ಉದ್ದೇಶ ಒಂದೇ ಆದರೂ, ಆಚರಣೆಯಲ್ಲಿ ವಿವಿಧತೆಯನ್ನು ಕಾಣಬಹುದು. ದಕ್ಷಿಣ ಕನ್ನಡದಲ್ಲಿ ಇದನ್ನು ‘ಆಟಿ ಅಮಾವಾಸ್ಯೆ’ ಎಂದು ಕರೆಯುತ್ತಾರೆ. ಈ ದಿನದಂದು ಆ ಭಾಗದ ಸಂಸ್ಕೃತಿ, ಆಚಾರ, ವಿಚಾರಗಳನ್ನು ಬಿಂಬಿಸುವ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಉತ್ತರ ಕನ್ನಡದ ಕೆಲವು ಭಾಗಗಳಲ್ಲಿ ಇದಕ್ಕೆ ‘ಕೊಡೆ ಅಮಾವಾಸ್ಯೆ’ ಎಂದು ಕರೆಯುತ್ತಾರೆ. ಈ ದಿನದಂದು ಮಗಳೊಂದಿಗೆ ಮನೆಗೆ ಬಂದು ಅಳಿಯನಿಗೆ ಮಾವ ಕೊಡೆ ನೀಡಿ ಸತ್ಕರಿಸುತ್ತಾರೆ.

    ಪೌರಾಣಿಕ ಹಿನ್ನೆಲೆ
    ಪುರಾಣಗಳ ಪ್ರಕಾರ ಶಿವನು ಪಾರ್ವತಿಯನ್ನು ಪತ್ನಿಯನ್ನಾಗಿ ಸ್ವೀಕರಿಸಿದ್ದು, ಭೀಮನ ಅಮಾವಾಸ್ಯೆ ದಿನ. ಪಾರ್ವತಿ ಸಮೃದ್ಧಿ, ಸಂತಾನ, ಪತಿವ್ರತೆ, ಶಕ್ತಿಯ ಸಂಕೇತ. ಹೀಗಾಗಿ ಈ ದಿನದಂದು ಹೆಂಗಳೆಯರು ವ್ರತ ಕೈಗೊಂಡು ಶಿವ ಮತ್ತು ಪಾರ್ವತಿಯನ್ನು ಆರಾಧಿಸಿದರೆ ಅವರಿಗೆ ಉತ್ತಮನಾದ ಗಂಡ ಸಿಗುತ್ತಾನೆ. ಅದೇ ರೀತಿ ವಿವಾಹಿತ ಹೆಂಗಸರು ಗಂಡನಿಗೆ ದೀರ್ಘಾಯುಷ್ಯ, ಯಶಸ್ಸು ಹಾಗೂ ಸಂತೋಷವನ್ನು ಬಯಸಿ ಪೂಜೆ ಸಲ್ಲಿಸುತ್ತಾರೆ.

    Live Tv
    [brid partner=56869869 player=32851 video=960834 autoplay=true]

  • ಶಿವ ಪಾರ್ವತಿ ವೇಷಧಾರಿ ಪ್ರತಿಭಟನೆ: ಕಲಾವಿದರನ್ನು ಬಂಧಿಸಿದ ಅಸ್ಸಾಂ ಪೊಲೀಸ್

    ಶಿವ ಪಾರ್ವತಿ ವೇಷಧಾರಿ ಪ್ರತಿಭಟನೆ: ಕಲಾವಿದರನ್ನು ಬಂಧಿಸಿದ ಅಸ್ಸಾಂ ಪೊಲೀಸ್

    ಸ್ಸಾಂನಲ್ಲಿ ಶಿವ ಪಾರ್ವತಿ ವೇಷ ಹಾಕಿಕೊಂಡು ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಬಿರಿಂಚಿ ಬೋರಾ ಅವರನ್ನು ಅಲ್ಲಿ ಪೊಲೀಸರು ಬಂಧಿಸಿದ್ದಾರೆ. ತೈಲ ಬೆಲೆ ಏರಿಕೆ ಸೇರಿದಂತೆ ಹಲವು ವಿಚಾರಗಳಿಗಾಗಿ ಈ ಬಿರಿಂಚಿ ತನ್ನ ಸ್ನೇಹಿತೆಗೆ ಪಾರ್ವತಿ ವೇಷ ಹಾಕಿಸಿ, ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದರು. ಆ ಪ್ರತಿಭಟನೆಗೆ ಧಾರ್ಮಿಕ ಮುಖವಾಡ ಹಾಕಿ, ಬಂಧಿಸಲಾಗಿದೆ ಎನ್ನಲಾಗುತ್ತಿದೆ.

    ಅಗತ್ಯ ವಸ್ತುಗಳು ಬೆಲೆ ಏರಿಕೆಯಾಗುತ್ತಿವೆ. ಬಡವರಿಗೆ ಅವುಗಳನ್ನು ಕೊಳ್ಳಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಕೇಂದ್ರ ಸರಕಾರದ ವಿರುದ್ಧ ನಾನು ಪ್ರತಿಭಟಿಸುತ್ತೇನೆ. ಆ ಪ್ರತಿಭಟನೆಯಲ್ಲಿ ಎಲ್ಲರೂ ಭಾಗಿಯಾಗಿ ಎಂದು ಬಿರಿಂಚಿ ಪೋಸ್ಟ್ ಮಾಡಿದ್ದ. ಹಲವರು ಈ ಪ್ರತಿಭಟನೆಯಲ್ಲಿ ಭಾಗಿ ಕೂಡ ಆಗಿದ್ದರು. ಈ ಸಂದರ್ಭದಲ್ಲಿ ಪಾರ್ವತಿ ಮತ್ತು ಶಿವ ಜಗಳ ಮಾಡಿದಂತೆ ಅಣಕು ಪ್ರದರ್ಶನ ನಡೆಸಿದ್ದಾರೆ. ಇದೇ ಆ ಹುಡುಗನಿಗೆ ಮುಳುವಾಗಿದೆ. ಇದನ್ನೂ ಓದಿ:ಟ್ವೀಟರ್‌ನಲ್ಲಿ ಯಶ್ ಹೆಸರು ಟ್ರೇಂಡಿಂಗ್: ಯಶ್ 19ನೇ ಚಿತ್ರದ ಅಪ್‌ಡೇಟ್ ಇಲ್ಲಿದೆ

    ಶಿವ ಮತ್ತು ಪಾರ್ವತಿಯ ಜಗಳವನ್ನು ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿದ್ದಾರೆ ಎಂದು ಆರೋಪಿಸಿ, ಬಿರಿಂಚಿ ಬೋರಾನನ್ನು ಬಂಧಿಸಲಾಗಿದೆ. ಈ ಕುರಿತಂತೆ ಅಸ್ಸಾಂನಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಅದು ಕಲೆಯ ಮೂಲಕ ಅಭಿವ್ಯಕ್ತಿ. ಅವರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿಲ್ಲ ಎಂದು ಹಲವರು ಪ್ರತಿಕ್ರಿಯೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪಾರುಲ್ ಯಾದವ್ ಈಗ ಪಾರ್ವತಿ!

    ಪಾರುಲ್ ಯಾದವ್ ಈಗ ಪಾರ್ವತಿ!

    ಬೆಂಗಳೂರು: ಪ್ಯಾರ್ ಗೆ ಆಗ್ಬಿಟೈತೆ ಅಂತ ಹಾಡುತ್ತಲೇ ಕನ್ನಡ ಚಿತ್ರ ಪ್ರೇಕ್ಷಕರ ಮನಸಿಗೆ ಲಗ್ಗೆಯಿಟ್ಟಿದ್ದವರು ಪಾರೂಲ್ ಯಾದವ್. ಪರಭಾಷಾ ನಟಿಯಾದರೂ ಕನ್ನಡಿಗರಿಗೆ ಹತ್ತಿರವಾಗಿದ್ದ ಅವರು ಆ ನಂತರವೂ ಹಲವಾರು ಚಿತ್ರಗಳಲ್ಲಿ ನಟಿಸಿದ್ದಾರೆ. ಆದರೆ ಈಗೊಂದಷ್ಟು ಕಾಲದಿಂದ ಕಣ್ಮರೆಯಾದಂತಿದ್ದ ಪಾರುಲ್ ಈಗ ಪಾರ್ವತಿಯ ಅವತಾರದಲ್ಲಿ ಪ್ರೇಕ್ಷಕರ ಮುಂದೆ ಬರೋ ಖುಷಿಯಲ್ಲಿದ್ದಾರೆ.

    ರಮೇಶ್ ಅರವಿಂದ್ ಕನ್ನಡ ಮತ್ತು ತಮಿಳಿನಲ್ಲಿ ಏಕಕಾಲದಲ್ಲಿಯೇ ನಿರ್ದೇಶನ ಮಾಡುತ್ತಿರೋ ಚಿತ್ರ ಬಟರ್ ಫ್ಲೈ. ಈ ಮೂರೂ ಭಾಷೆಗಳಲ್ಲಿ ಆಯಾ ಭಾಷೆಯ ನಟಿಯರು ಮುಖ್ಯ ಪಾತ್ರ ಮಾಡುತ್ತಿದ್ದಾರೆ. ಕನ್ನಡದಲ್ಲಿ ಕಂಗನಾ ಪಾತ್ರವನ್ನು ಪಾರುಲ್ ಯಾದವ್ ನಿರ್ವಹಿಸುತ್ತಿದ್ದಾರೆ. ಈ ಬಗ್ಗೆ ಖುದ್ದು ಅವರೇ ಸಾಮಾಜಿಕ ಜಾಲತಾಣಗಳ ಮೂಲಕ ವಿಚಾರ ಹಂಚಿಕೊಂಡಿದ್ದಾರೆ. ತಾನು ಪಾರ್ವತಿಯಾಗಿ ಕನ್ನಡದ ಪ್ರೇಕ್ಷಕರ ಮುಂದೆ ಬರಲು ಅಣಿಯಾಗಿರೋದರ ಬಗ್ಗೆ ಖುಷಿಯಿಂದಲೇ ಹೇಳಿಕೊಂಡಿರೋ ಪಾರುಲ್, ಪಾರ್ವತಿಯಾಗಿ ತಮ್ಮ ಲುಕ್ಕು ಹೇಗಿದೆ ಎಂಬುದಕ್ಕೆ ಒಂದು ಭಾವಚಿತ್ರವನ್ನೂ ಜಾಹೀರು ಮಾಡಿದ್ದಾರೆ.

    ತಮಿಳಿನಲ್ಲಿ ಈ ಪಾತ್ರವನ್ನು ಕಾಜಲ್ ನಿರ್ವಹಿಸಿದ್ದಾರೆ. ತೆಲುಗಿನಲ್ಲಿ ಈ ಪಾತ್ರ ಮಿಲ್ಕಿ ಬ್ಯೂಟಿ ತಮನ್ನಾ ಪಾಲಾಗಿದೆ. ಕನ್ನಡದಲ್ಲಿ ಪಾರುಲ್ ಪಾರ್ವತಿಯಾಗಿ ಈ ಪಾತ್ರಕ್ಕೆ ಜೀವ ತುಂಬಿದ್ದಾರೆ. ಈ ಚಿತ್ರದಲ್ಲಿ ಕೇವಲ ನಾಯಕಿ ಮಾತ್ರವಲ್ಲದೇ ಪಾರುಲ್ ನಿರ್ಮಾಪಕಿಯಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಈ ಮೂಲಕವೇ ಕನ್ನಡದಲ್ಲಿ ತನ್ನ ಮತ್ತೊಂದು ಇನ್ನಿಂಗ್ಸ್ ಭರ್ಜರಿಯಾಗಿ ಶುರುವಾಗೋ ನಿರೀಕ್ಷೆ ಪಾರುಲ್ ಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv