Tag: Pathan

  • ಪ್ರವಾದಿ ಮೊಹಮ್ಮದ್ ಬಗ್ಗೆ ಸಿನಿಮಾ ಮಾಡಿದ್ರೆ ವಿಶ್ವದಾದ್ಯಂತ ರಕ್ತಪಾತ ಆಗುತ್ತೆ – ಗಿರೀಶ್ ಗೌತಮ್

    ಪ್ರವಾದಿ ಮೊಹಮ್ಮದ್ ಬಗ್ಗೆ ಸಿನಿಮಾ ಮಾಡಿದ್ರೆ ವಿಶ್ವದಾದ್ಯಂತ ರಕ್ತಪಾತ ಆಗುತ್ತೆ – ಗಿರೀಶ್ ಗೌತಮ್

    ಭೋಪಾಲ್: ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ (Narottam Mishra) ನಂತರ, ರಾಜ್ಯದ ವಿಧಾನಸಭಾ ಸ್ಪೀಕರ್ ಗಿರೀಶ್ ಗೌತಮ್ (Girish Gautam) ಅವರು ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ (Deepika Padukone) ನಟನೆಯ `ಪಠಾಣ್’ (Pathan) ಸಿನಿಮಾದ `ಬೇಷರಂ ರಂಗ್’ ಹಾಡಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.

    ಚಿತ್ರಮಂದಿರದಲ್ಲಿ ಪಠಾಣ್ ಸಿನಿಮಾ (Cinema) ನಿಷೇಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಶಾರುಖ್ (Shah Rukh Khan) ಈ ಚಿತ್ರವನ್ನು ತನ್ನ ಮಗಳೊಂದಿಗೆ ನೋಡಬೇಕು. ಮಗಳ ಜೊತೆಗಿನ ಫೋಟೋ ಅಪ್‌ಲೋಡ್ ಮಾಡಿ, ಈ ಸಿನಿಮಾವನ್ನು ತನ್ನ ಮಗಳ ಜೊತೆ ನೋಡುತ್ತಿದ್ದೇನೆ ಎಂದು ಜಗತ್ತಿಗೇ ಹೇಳಬೇಕು ಎಂದು ಸವಾಲ್ ಹಾಕಿದ್ದಾರೆ. ಇದನ್ನೂ ಓದಿ: ‘ಪಠಾಣ್’ ಬಿಕಿನಿ ವಿವಾದ: ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿಡಿಯೋ ವೈರಲ್

    ನಾನು ಮುಕ್ತವಾಗಿ ಹೇಳಬಯಸುತ್ತೇನೆ. ಪ್ರವಾದಿ ಮೊಹಮ್ಮದ್ (Prophet Muhammad) ಅವರ ಮೇಲೆ ಅಂತಹ ಒಂದು ಚಲನಚಿತ್ರವನ್ನು ಮಾಡಿ, ಅದನ್ನು ಅಭಿವ್ಯಕ್ತಿ ಸ್ವಾತಂತ್ರ‍್ಯದ ಹೆಸರಿನಲ್ಲಿ ಬಿಡುಗಡೆ ಮಾಡಿ ನೋಡೋಣ? ವಿಶ್ವದಾದ್ಯಂತ ರಕ್ತಪಾತವಾಗುತ್ತದೆ ಎಂದು ಹೇಳಿದ್ದಾರೆ.

    ವಿರೋಧ ಪಕ್ಷದ ನಾಯಕ ಡಾ.ಗೋವಿಂದ್ ಸಿಂಗ್ ಹಾಗೂ ಮಾಜಿ ಕೇಂದ್ರ ಸಚಿವ ಸುರೇಶ್ ಪಚೌರಿ ಸೇರಿದಂತೆ ಹಿರಿಯ ಕಾಂಗ್ರೆಸ್ (Congress) ನಾಯಕರು ಈ ಚಿತ್ರದ ಹಾಡನ್ನು ವಿರೋಧಿಸಿದ್ದಾರೆ. ಇದು ನಮ್ಮ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಆಕ್ಷೇಪಿಸಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ 150 ಕೋಟಿಗೂ ಅಧಿಕ ಗಳಿಕೆ ಮಾಡಿದ ‘ಅವತಾರ್ 2’ ಸಿನಿಮಾ

    ಇದಕ್ಕೆ ದನಿಗೂಡಿಸಿರುವ ಸುರೇಶ್ ಪಚೌರಿ, ವಿರೋಧ ಇರುವುದು ಪಠಾಣ್ ಸಿನಿಮಾ ಬಗ್ಗೆ ಅಲ್ಲ, ಹಾಡಿನಲ್ಲಿ ಧರಿಸಿರೋ ಬಟ್ಟೆಯ ಬಗ್ಗೆ. ಭಾರತೀಯ ಸಂಸ್ಕೃತಿಯಲ್ಲಿ ಹಿಂದೂ, ಮುಸ್ಲಿಂ ಅಥವಾ ಯಾವುದೇ ಧರ್ಮದ ಅನುಯಾಯಿಗಳಿರಲಿ, ಮಹಿಳೆ ಅಂತಹ ಬಟ್ಟೆಗಳನ್ನು ಧರಿಸುವುದು ಹಾಗೂ ಅಂತಹ ದೃಶ್ಯವನ್ನು ಸಾರ್ವಜನಿಕವಾಗಿ ಪ್ರದರ್ಶಿಸುವುದನ್ನು ಯಾರೂ ಅನುಮತಿಸೋದಿಲ್ಲ ಎಂದು ಹೇಳಿದ್ದಾರೆ.

    `ಪಠಾಣ್’ ಸಿನಿಮಾದ `ಬೇಷರಂ ರಂಗ್’ ಹಾಡನ್ನು ಬಿಡುಗಡೆಗೊಳಿಸಿದ ಎರಡು ದಿನಗಳ ನಂತರ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರ ಹೇಳಿಕೆ ನಂತರ ಕೇಸರಿ ವಿವಾದದ ಅಲೆ ಜೋರಾಗಿದೆ.

    Live Tv
    [brid partner=56869869 player=32851 video=960834 autoplay=true]

  • ‘ಪಠಾಣ್’ ಬಿಕಿನಿ ವಿವಾದ: ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿಡಿಯೋ ವೈರಲ್

    ‘ಪಠಾಣ್’ ಬಿಕಿನಿ ವಿವಾದ: ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿಡಿಯೋ ವೈರಲ್

    ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾದಲ್ಲಿ ಕೇಸರಿ ಬಿಕಿನಿ ಹಾಕಿದ್ದ ವಿವಾದವು ಇದೀಗ ರಾಜಕೀಯ ಬಣ್ಣ ಪಡೆದುಕೊಳ್ಳುತ್ತಿದೆ. ಈ ಹಿಂದೆ ಕೇವಲ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬಾಯ್ಕಾಟ್ ಮಾತುಗಳನ್ನು ಆಡಿದ್ದರು. ಇದೀಗ ನೇರವಾಗಿ ರಾಜಕೀಯ ವ್ಯಕ್ತಿಗಳೇ ಅಖಾಡಕ್ಕೆ ಇಳಿದು ಪರ ವಿರೋಧದ ಮಾತುಗಳನ್ನು ಆಡುತ್ತಿದ್ದಾರೆ. ಅದರಲ್ಲೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಈ ಹಿಂದಿನ ವಿಡಿಯೋವೊಂದನ್ನು ಪೋಸ್ಟ್ ಮಾಡುವ ಮೂಲಕ ವಿವಾದದಲ್ಲಿ ಸುಖಾಸುಮ್ಮನೆ ಸಚಿವೆಯನ್ನು ಎಳೆತಂದಿದ್ದಾರೆ.

    ಬಿಜೆಪಿಯ ಹಲವು ಮುಖಂಡರು ದೀಪಿಕಾ ಪಡುಕೋಣೆ ಧರಿಸಿದ್ದ ಕೇಸರಿ ಬಿಕಿನಿ ಬಗ್ಗೆ ವಿರೋಧ ವ್ಯಕ್ತ ಪಡಿಸಿದ್ದರು. ಶಾರುಖ್ ಖಾನ್ ಮತ್ತು ತಂಡವನ್ನು ತರಾಟೆಗೆ ತಗೆದುಕೊಂಡಿದ್ದರು. ತರಾಟೆಗೆ ತಗೆದುಕೊಂಡವರ ಪಕ್ಷದಲ್ಲೇ ಇರುವ ಸ್ಮೃತಿ ಇರಾನಿ 1998ರಲ್ಲಿ ನಡೆದ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಕೇಸರಿ ತುಂಡುಡುಗೆಯಲ್ಲೇ ಕಾಣಿಸಿಕೊಂಡಿದ್ದರು ಎನ್ನುವುದಕ್ಕೆ ಸಾಕ್ಷಿಯಾಗಿ ಅವರು ಆ ವಿಡಿಯೋವನ್ನು ಬಳಸಿಕೊಳ್ಳಲಾಗುತ್ತಿದೆ. ಆ ವಿಡಿಯೋ ವೈರಲ್ ಕೂಡ ಆಗಿದೆ.

    ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾದ ಹಾಡಿನ ಬಗ್ಗೆ ಈವರೆಗೂ ವಿವಾದ ಎದ್ದಿತ್ತು. ಈ ಬಾರಿ ಟೈಟಲ್ ಬಗ್ಗೆಯೂ ಅಪಸ್ವರ ಶುರುವಾಗಿದೆ. ಈ ಟೈಟಲ್ ಇಡುವ ಮೂಲಕ ಮುಸ್ಲಿಂ ಸಮುದಾಯದ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕೂಡಲೇ ಈ ಶೀರ್ಷಿಕೆಯನ್ನು ಬದಲಾಯಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

    ಮುಸ್ಲಿಂ ಸಮುದಾಯದಲ್ಲಿ ಪಠಾಣರು ಎಂದರೆ ಗೌರವದಿಂದ ಇರುವವರು ಎಂದರ್ಥ. ಆದರೆ, ಈ ಸಿನಿಮಾದಲ್ಲಿ ಅದನ್ನು ಬೇರೆ ರೀತಿಯಲ್ಲಿ ಬಿಂಬಿಸುವ ಯತ್ನ ಮಾಡಲಾಗಿದೆ. ಕೂಡಲೇ ಶೀರ್ಷಿಕೆಯನ್ನು ಬದಲಾಯಿಸಿ ಎಂದು ಹಲವು ಮುಸ್ಲಿಂ ಸಂಘಟನೆಗಳು ಒತ್ತಾಯಿಸಿವೆ. ಅಲ್ಲದೇ, ಈ ಟೈಟಲ್ ಇಟ್ಟುಕೊಂಡು ನಾಯಕಿಗೆ ಬಿಕಿನಿ ಹಾಕಿಸುವ ಮೂಲಕ ಗೌರವವನ್ನು ಕಳೆಯುವ ಪ್ರಯತ್ನ ಮಾಡಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

    ಬಾಲಿವುಡ್ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದ ವಿಚಾರ, ಇದೀಗ ದೇಶಭಕ್ತಿಯನ್ನು ಪ್ರಶ್ನಿಸುವಲ್ಲಿಗೆ ಹೋಗಿದೆ. ಹಿಂದೂಗಳ ಭಾವನೆಗೆ ಧಕ್ಕೆ ತರುವುದಕ್ಕಾಗಿಯೇ ಕೇಸರಿ ಬಿಕಿನಿ ಹಾಕಿಸಲಾಗಿದೆ ಎಂದು ನಟ ಶಾರುಖ್ ಖಾನ್ ಮೇಲೆ ಆರೋಪಗಳನ್ನು ಮಾಡಲಾಗುತ್ತಿದೆ. ಈ ಕುರಿತು ಶಾರುಖ್ ಖಾನ್ ಮತ್ತೊಂದು ಟ್ವಿಟ್ ಮಾಡಿದ್ದು, ‘ಪಠಾಣ್ ಸಿನಿಮಾ ಕೂಡ ದೇಶಭಕ್ತಿಯನ್ನು ಸಾರುತ್ತದೆ’ ಎಂದು ಬರೆದುಕೊಂಡಿದ್ದಾರೆ. ಸಿನಿಮಾವನ್ನು ಬಾಯ್ಕಾಟ್ ಮಾಡುವುದರಲ್ಲಿ ಅರ್ಥವೇ ಇಲ್ಲವೆಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಪಠಾಣ್’ ಟೈಟಲ್ ಬದಲಾಯಿಸಿ: ಮುಸ್ಲಿಂ ಮುಖಂಡರ ಒತ್ತಾಯ

    ‘ಪಠಾಣ್’ ಟೈಟಲ್ ಬದಲಾಯಿಸಿ: ಮುಸ್ಲಿಂ ಮುಖಂಡರ ಒತ್ತಾಯ

    ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾದ ಹಾಡಿನ ಬಗ್ಗೆ ಈವರೆಗೂ ವಿವಾದ ಎದ್ದಿತ್ತು. ಈ ಬಾರಿ ಟೈಟಲ್ ಬಗ್ಗೆಯೂ ಅಪಸ್ವರ ಶುರುವಾಗಿದೆ. ಈ ಟೈಟಲ್ ಇಡುವ ಮೂಲಕ ಮುಸ್ಲಿಂ ಸಮುದಾಯದ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕೂಡಲೇ ಈ ಶೀರ್ಷಿಕೆಯನ್ನು ಬದಲಾಯಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

    ಮುಸ್ಲಿಂ ಸಮುದಾಯದಲ್ಲಿ ಪಠಾಣರು ಎಂದರೆ ಗೌರವದಿಂದ ಇರುವವರು ಎಂದರ್ಥ. ಆದರೆ, ಈ ಸಿನಿಮಾದಲ್ಲಿ ಅದನ್ನು ಬೇರೆ ರೀತಿಯಲ್ಲಿ ಬಿಂಬಿಸುವ ಯತ್ನ ಮಾಡಲಾಗಿದೆ. ಕೂಡಲೇ ಶೀರ್ಷಿಕೆಯನ್ನು ಬದಲಾಯಿಸಿ ಎಂದು ಹಲವು ಮುಸ್ಲಿಂ ಸಂಘಟನೆಗಳು ಒತ್ತಾಯಿಸಿವೆ. ಅಲ್ಲದೇ, ಈ ಟೈಟಲ್ ಇಟ್ಟುಕೊಂಡು ನಾಯಕಿಗೆ ಬಿಕಿನಿ ಹಾಕಿಸುವ ಮೂಲಕ ಗೌರವವನ್ನು ಕಳೆಯುವ ಪ್ರಯತ್ನ ಮಾಡಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ: ಮಗು ಯಾವ ಧರ್ಮಕ್ಕೆ ಸೇರುತ್ತೆ ಎಂದು ಕೇಳಿದವರಿಗೆ ಖಡಕ್ ಉತ್ತರ ಕೊಟ್ಟ ನಟಿ ದೆವೊಲೀನಾ

    ಬಾಲಿವುಡ್ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದ ವಿಚಾರ, ಇದೀಗ ದೇಶಭಕ್ತಿಯನ್ನು ಪ್ರಶ್ನಿಸುವಲ್ಲಿಗೆ ಹೋಗಿದೆ. ಹಿಂದೂಗಳ ಭಾವನೆಗೆ ಧಕ್ಕೆ ತರುವುದಕ್ಕಾಗಿಯೇ ಕೇಸರಿ ಬಿಕಿನಿ ಹಾಕಿಸಲಾಗಿದೆ ಎಂದು ನಟ ಶಾರುಖ್ ಖಾನ್ ಮೇಲೆ ಆರೋಪಗಳನ್ನು ಮಾಡಲಾಗುತ್ತಿದೆ. ಈ ಕುರಿತು ಶಾರುಖ್ ಖಾನ್ ಮತ್ತೊಂದು ಟ್ವಿಟ್ ಮಾಡಿದ್ದು, ‘ಪಠಾಣ್ ಸಿನಿಮಾ ಕೂಡ ದೇಶಭಕ್ತಿಯನ್ನು ಸಾರುತ್ತದೆ’ ಎಂದು ಬರೆದುಕೊಂಡಿದ್ದಾರೆ. ಸಿನಿಮಾವನ್ನು ಬಾಯ್ಕಾಟ್ ಮಾಡುವುದರಲ್ಲಿ ಅರ್ಥವೇ ಇಲ್ಲವೆಂದಿದ್ದಾರೆ.

    ಪಠಾಣ್ ಸಿನಿಮಾ ಬಾಯ್ಕಾಟ್ ಮಾಡಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಶುರುವಾಗಿದೆ. ಈ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ತೊಟ್ಟಿದ್ದಾರೆ ಎನ್ನುವುದು ಒಂದು ಕಡೆಯಾದರೆ, ಈ ಬಿಕಿನಿ ತೊಟ್ಟ ಸಂದರ್ಭದಲ್ಲಿ ಬರುವ ಹಾಡೊಂದರ ಸಾಹಿತ್ಯ ‘ನಾಚಿಕೆ ಇಲ್ಲದ ಬಣ್ಣ’ ಎನ್ನುವುದಾಗಿದೆ. ಇದು ಹಿಂದೂಗಳನ್ನು ಹೀಯಾಳಿಸುವ ಉದ್ದೇಶದಿಂದಲೇ ಮಾಡಿದ ಕೃತ್ಯ ಎಂದು ಹೇಳಲಾಗುತ್ತಿದೆ. ಹಾಗಾಗಿ ಪಠಾಣ್ ಸಿನಿಮಾವನ್ನು ಬಾಯ್ಕಾಟ್ ಮಾಡಿ ಎನ್ನುವ ಧ್ವನಿ ಜೋರಾಗಿದೆ.

    Live Tv
    [brid partner=56869869 player=32851 video=960834 autoplay=true]

  • ದೀಪಿಕಾ ಹಾಕಿದ ಬಿಕಿನಿ ಪ್ರಚೋದನಕಾರಿ, ಅಶ್ಲೀಲಕಷ್ಟೇ ಸೀಮಿತ ಮಾಡಬೇಡಿ : ಶಕ್ತಿಮಾನ್ ಹೊಸ ಬಾಂಬ್

    ದೀಪಿಕಾ ಹಾಕಿದ ಬಿಕಿನಿ ಪ್ರಚೋದನಕಾರಿ, ಅಶ್ಲೀಲಕಷ್ಟೇ ಸೀಮಿತ ಮಾಡಬೇಡಿ : ಶಕ್ತಿಮಾನ್ ಹೊಸ ಬಾಂಬ್

    ಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಹಾಕಿರುವ ಬಿಕಿನಿ ಕೇವಲ ಅಶ್ಲೀಲವಷ್ಟೇ ಅಲ್ಲ, ಅದು ಪ್ರಚೋದನಕಾರಿ ಕೂಡ ಆಗಿದೆ ಎಂದು ಶಕ್ತಿಮಾನ್ ಪಾತ್ರಧಾರಿ ಮುಕೇಶ್ ಖನ್ನಾ ಪ್ರತಿಕ್ರಿಯೆ ನೀಡಿದ್ದಾರೆ. ಬೇಷರಂ ಹಾಡಿನಲ್ಲಿ ದೀಪಿಕಾ ಕೇಸರಿ ಬಣ್ಣದ ಬಿಕಿನಿ ಹಾಕಿದ್ದಾರೆ ಎನ್ನುವುದು ಪ್ರಶ್ನೆಯಲ್ಲ. ಅದು ಚರ್ಚೆಯ ವಿಷಯ ಕೂಡ ಆಗಬಾರದು. ಚರ್ಚೆ ಮಾಡಬೇಕಾಗಿದ್ದು ಪ್ರಚೋದನಕಾರಿ ಆಗುವಂತಹ ಬಟ್ಟೆಗಳನ್ನು ಹಾಕಿದ್ದಾರೆ ಎನ್ನುವುದು ಎಂದಿದ್ದಾರೆ ಖನ್ನಾ.

    ನಟಿಯೊಬ್ಬಳು ಪ್ರಚೋದನಕಾರಿ ಆಗುವಂತಹ ಬಟ್ಟೆ ಮತ್ತು ಭಂಗಿಯಲ್ಲಿ ಇದ್ದಾರೆ ಎನ್ನುವ ಅಂಶವನ್ನು ಸೆನ್ಸಾರ್ ಮಂಡಳಿಯು ಗಮನಿಸದೇ ಇರುವುದು ಅಚ್ಚರಿ ತಂದಿದೆ ಎಂದಿರುವ ಖನ್ನಾ. ವಿವೇಚನೆ ಇಲ್ಲದೇ ಈ ಹಾಡನ್ನು ಸೆನ್ಸಾರ್ ಮಾಡಲಾಯಿತಾ ಎಂದು ಪ್ರಶ್ನೆ ಮಾಡಿದ್ದಾರೆ. ಸೆನ್ಸಾರ್ ಮಂಡಳಿಯಲ್ಲಿ ಇರುವವರು ವಿವೇಚನೆ ಬಳಸಿಕೊಂಡು ಸೆನ್ಸಾರ್ ಮಾಡಬೇಕು ಎಂದು ಅವರು ಸಲಹೆಯನ್ನೂ ನೀಡಿದ್ದಾರೆ. ಇದನ್ನೂ ಓದಿ: ಪುನೀತ್ ಬಯೋಗ್ರಫಿ ‘ನೀನೇ ರಾಜಕುಮಾರ’ 4ನೇ ಆವೃತ್ತಿ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜ ಕುಮಾರ

    ಬಾಲಿವುಡ್ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದ ವಿಚಾರ, ಇದೀಗ ದೇಶಭಕ್ತಿಯನ್ನು ಪ್ರಶ್ನಿಸುವಲ್ಲಿಗೆ ಹೋಗಿದೆ. ಹಿಂದೂಗಳ ಭಾವನೆಗೆ ಧಕ್ಕೆ ತರುವುದಕ್ಕಾಗಿಯೇ ಕೇಸರಿ ಬಿಕಿನಿ ಹಾಕಿಸಲಾಗಿದೆ ಎಂದು ನಟ ಶಾರುಖ್ ಖಾನ್ ಮೇಲೆ ಆರೋಪಗಳನ್ನು ಮಾಡಲಾಗುತ್ತಿದೆ. ಈ ಕುರಿತು ಶಾರುಖ್ ಖಾನ್ ಮತ್ತೊಂದು ಟ್ವಿಟ್ ಮಾಡಿದ್ದು, ‘ಪಠಾಣ್ ಸಿನಿಮಾ ಕೂಡ ದೇಶಭಕ್ತಿಯನ್ನು ಸಾರುತ್ತದೆ’ ಎಂದು ಬರೆದುಕೊಂಡಿದ್ದಾರೆ. ಸಿನಿಮಾವನ್ನು ಬಾಯ್ಕಾಟ್ ಮಾಡುವುದರಲ್ಲಿ ಅರ್ಥವೇ ಇಲ್ಲವೆಂದಿದ್ದಾರೆ.

    ಪಠಾಣ್ ಸಿನಿಮಾ ಬಾಯ್ಕಾಟ್ ಮಾಡಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಶುರುವಾಗಿದೆ. ಈ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ತೊಟ್ಟಿದ್ದಾರೆ ಎನ್ನುವುದು ಒಂದು ಕಡೆಯಾದರೆ, ಈ ಬಿಕಿನಿ ತೊಟ್ಟ ಸಂದರ್ಭದಲ್ಲಿ ಬರುವ ಹಾಡೊಂದರ ಸಾಹಿತ್ಯ ‘ನಾಚಿಕೆ ಇಲ್ಲದ ಬಣ್ಣ’ ಎನ್ನುವುದಾಗಿದೆ. ಇದು ಹಿಂದೂಗಳನ್ನು ಹೀಯಾಳಿಸುವ ಉದ್ದೇಶದಿಂದಲೇ ಮಾಡಿದ ಕೃತ್ಯ ಎಂದು ಹೇಳಲಾಗುತ್ತಿದೆ. ಹಾಗಾಗಿ ಪಠಾಣ್ ಸಿನಿಮಾವನ್ನು ಬಾಯ್ಕಾಟ್ ಮಾಡಿ ಎನ್ನುವ ಧ್ವನಿ ಜೋರಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಪಠಾಣ್ ದೇಶಭಕ್ತಿ ಸಿನಿಮಾ ಎಂದು ಟ್ವೀಟ್ ಮಾಡಿದ ನಟ ಶಾರುಖ್ ಖಾನ್

    ಪಠಾಣ್ ದೇಶಭಕ್ತಿ ಸಿನಿಮಾ ಎಂದು ಟ್ವೀಟ್ ಮಾಡಿದ ನಟ ಶಾರುಖ್ ಖಾನ್

    ಬಾಲಿವುಡ್ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದ ವಿಚಾರ, ಇದೀಗ ದೇಶಭಕ್ತಿಯನ್ನು ಪ್ರಶ್ನಿಸುವಲ್ಲಿಗೆ ಹೋಗಿದೆ. ಹಿಂದೂಗಳ ಭಾವನೆಗೆ ಧಕ್ಕೆ ತರುವುದಕ್ಕಾಗಿಯೇ ಕೇಸರಿ ಬಿಕಿನಿ ಹಾಕಿಸಲಾಗಿದೆ ಎಂದು ನಟ ಶಾರುಖ್ ಖಾನ್ ಮೇಲೆ ಆರೋಪಗಳನ್ನು ಮಾಡಲಾಗುತ್ತಿದೆ. ಈ ಕುರಿತು ಶಾರುಖ್ ಖಾನ್ ಮತ್ತೊಂದು ಟ್ವಿಟ್ ಮಾಡಿದ್ದು, ‘ಪಠಾಣ್ ಸಿನಿಮಾ ಕೂಡ ದೇಶಭಕ್ತಿಯನ್ನು ಸಾರುತ್ತದೆ’ ಎಂದು ಬರೆದುಕೊಂಡಿದ್ದಾರೆ. ಸಿನಿಮಾವನ್ನು ಬಾಯ್ಕಾಟ್ ಮಾಡುವುದರಲ್ಲಿ ಅರ್ಥವೇ ಇಲ್ಲವೆಂದಿದ್ದಾರೆ.

    ಪಠಾಣ್ ಸಿನಿಮಾ ಬಾಯ್ಕಾಟ್ ಮಾಡಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಶುರುವಾಗಿದೆ. ಈ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ತೊಟ್ಟಿದ್ದಾರೆ ಎನ್ನುವುದು ಒಂದು ಕಡೆಯಾದರೆ, ಈ ಬಿಕಿನಿ ತೊಟ್ಟ ಸಂದರ್ಭದಲ್ಲಿ ಬರುವ ಹಾಡೊಂದರ ಸಾಹಿತ್ಯ ‘ನಾಚಿಕೆ ಇಲ್ಲದ ಬಣ್ಣ’ ಎನ್ನುವುದಾಗಿದೆ. ಇದು ಹಿಂದೂಗಳನ್ನು ಹೀಯಾಳಿಸುವ ಉದ್ದೇಶದಿಂದಲೇ ಮಾಡಿದ ಕೃತ್ಯ ಎಂದು ಹೇಳಲಾಗುತ್ತಿದೆ. ಹಾಗಾಗಿ ಪಠಾಣ್ ಸಿನಿಮಾವನ್ನು ಬಾಯ್ಕಾಟ್ ಮಾಡಿ ಎನ್ನುವ ಧ್ವನಿ ಜೋರಾಗಿದೆ. ಇದನ್ನೂ ಓದಿ: ನಾನು ಪಠಾಣ್ ಸಿನಿಮಾ ನೋಡುತ್ತೇನೆ: ಬಹಿರಂಗವಾಗಿ ಘೋಷಿಸಿಕೊಂಡ ನಟ ಪ್ರಕಾಶ್ ಬೆಳವಾಡಿ

    ಈ ಕುರಿತು ನಟ ಪ್ರಕಾಶ್ ಬೆಳವಾಡಿ ಮಾಧ್ಯಮವೊಂದರ ಜೊತೆ ಮಾತನಾಡಿ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ‘ಸಿನಿಮಾ ರಂಗದಲ್ಲಿ ಬಿಗುವಿನ ವಾತಾವರಣವಿದೆ. ಸಿನಿಮಾವನ್ನು ಬಾಯ್ಕಾಟ್ ಮಾಡಬೇಕಾ ಅಥವಾ ಬೇಡವಾ ಎನ್ನುವುದರ ಕುರಿತು ಚರ್ಚೆಯಾಗುತ್ತಿದೆ. ಚರ್ಚೆ ಆಗುತ್ತಿರುವ ವಿಷಯ ಎಷ್ಟು ಸಭ್ಯ ಎಂದು ಯೋಚಿಸಬೇಕಿದೆ. ಮಾತಾಡೋಕೆ ತುಂಬಾ ವಿಷಯ ಇದೆ. ಆದರೆ, ಪರಿಸ್ಥಿತಿ ಕೆಟ್ಟದಾಗಿದೆ. ಚರ್ಚೆ, ವಿವಾದ ಏನೇ ಇರಲಿ, ನಾನು ಆ ಸಿನಿಮಾವನ್ನು ನೋಡುತ್ತೇನೆ’ ಎಂದು ಹೇಳಿದ್ದಾರೆ. ಅಂದಹಾಗೆ ಪ್ರಕಾಶ್ ಬೆಳವಾಡಿ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ.

    ವಿವಾದದ ಕುರಿತು ಮಾತನಾಡಿರುವ ಶಾರುಖ್ ಖಾನ್. ನಾವು ಸಿನಿಮಾವನ್ನು ಸಿನಿಮಾದಂತೆ ನೋಡಬೇಕು. ನಾನಂತೂ ಸಿನಿಮಾವಾಗಿಯೇ ಅಲ್ಲಿ ಕೆಲಸ ಮಾಡಿದ್ದೇನೆ. ಈ ವಿವಾದವನ್ನು ಯಾಕೆ ಎಬ್ಬಿಸುತ್ತಿದ್ದಾರೆ ಎಂದು ಎಲ್ಲರಿಗೂ ಗೊತ್ತು. ನನ್ನ ಮನಸ್ಸಲ್ಲಂತೂ ಯಾವುದೇ ಕೆಟ್ಟ ಆಲೋಚನೆಗಳು ಇಲ್ಲ. ಈ ವಿವಾದದಿಂದ ಸಿನಿಮಾ ಸಾಕಷ್ಟು ಪ್ರಚಾರ ಪಡೆದುಕೊಂಡಿದೆ. ಹಾಗಾಗಿ ಜನರು ಚಿತ್ರವನ್ನು ಗೆಲ್ಲಿಸುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಅವರು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಾನು ಪಠಾಣ್ ಸಿನಿಮಾ ನೋಡುತ್ತೇನೆ: ಬಹಿರಂಗವಾಗಿ ಘೋಷಿಸಿಕೊಂಡ ನಟ ಪ್ರಕಾಶ್ ಬೆಳವಾಡಿ

    ನಾನು ಪಠಾಣ್ ಸಿನಿಮಾ ನೋಡುತ್ತೇನೆ: ಬಹಿರಂಗವಾಗಿ ಘೋಷಿಸಿಕೊಂಡ ನಟ ಪ್ರಕಾಶ್ ಬೆಳವಾಡಿ

    ಠಾಣ್ ಸಿನಿಮಾ ಬಾಯ್ಕಾಟ್ ಮಾಡಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಶುರುವಾಗಿದೆ. ಈ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ತೊಟ್ಟಿದ್ದಾರೆ ಎನ್ನುವುದು ಒಂದು ಕಡೆಯಾದರೆ, ಈ ಬಿಕಿನಿ ತೊಟ್ಟ ಸಂದರ್ಭದಲ್ಲಿ ಬರುವ ಹಾಡೊಂದರ ಸಾಹಿತ್ಯ ‘ನಾಚಿಕೆ ಇಲ್ಲದ ಬಣ್ಣ’ ಎನ್ನುವುದಾಗಿದೆ. ಇದು ಹಿಂದೂಗಳನ್ನು ಹೀಯಾಳಿಸುವ ಉದ್ದೇಶದಿಂದಲೇ ಮಾಡಿದ ಕೃತ್ಯ ಎಂದು ಹೇಳಲಾಗುತ್ತಿದೆ. ಹಾಗಾಗಿ ಪಠಾಣ್ ಸಿನಿಮಾವನ್ನು ಬಾಯ್ಕಾಟ್ ಮಾಡಿ ಎನ್ನುವ ಧ್ವನಿ ಜೋರಾಗಿದೆ.

    ಈ ಕುರಿತು ನಟ ಪ್ರಕಾಶ್ ಬೆಳವಾಡಿ ಮಾಧ್ಯಮವೊಂದರ ಜೊತೆ ಮಾತನಾಡಿ, ‘ಸಿನಿಮಾ ರಂಗದಲ್ಲಿ ಬಿಗುವಿನ ವಾತಾವರಣವಿದೆ. ಸಿನಿಮಾವನ್ನು ಬಾಯ್ಕಾಟ್ ಮಾಡಬೇಕಾ ಅಥವಾ ಬೇಡವಾ ಎನ್ನುವುದರ ಕುರಿತು ಚರ್ಚೆಯಾಗುತ್ತಿದೆ. ಚರ್ಚೆ ಆಗುತ್ತಿರುವ ವಿಷಯ ಎಷ್ಟು ಸಭ್ಯ ಎಂದು ಯೋಚಿಸಬೇಕಿದೆ. ಮಾತಾಡೋಕೆ ತುಂಬಾ ವಿಷಯ ಇದೆ. ಆದರೆ, ಪರಿಸ್ಥಿತಿ ಕೆಟ್ಟದಾಗಿದೆ. ಚರ್ಚೆ, ವಿವಾದ ಏನೇ ಇರಲಿ, ನಾನು ಆ ಸಿನಿಮಾವನ್ನು ನೋಡುತ್ತೇನೆ’ ಎಂದು ಹೇಳಿದ್ದಾರೆ. ಅಂದಹಾಗೆ ಪ್ರಕಾಶ್ ಬೆಳವಾಡಿ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ‘ಕೋಟಿಗೊಬ್ಬ’ ಕ್ಯಾಲೆಂಡರ್ ರಿಲೀಸ್: 20 ಕಲಾವಿದರ ಕುಂಚದಲ್ಲಿ ಮೂಡಿಬಂದ ವಿಷ್ಣುವರ್ಧನ್

    ವಿವಾದದ ಕುರಿತು ಮಾತನಾಡಿರುವ ಶಾರುಖ್ ಖಾನ್. ನಾವು ಸಿನಿಮಾವನ್ನು ಸಿನಿಮಾದಂತೆ ನೋಡಬೇಕು. ನಾನಂತೂ ಸಿನಿಮಾವಾಗಿಯೇ ಅಲ್ಲಿ ಕೆಲಸ ಮಾಡಿದ್ದೇನೆ. ಈ ವಿವಾದವನ್ನು ಯಾಕೆ ಎಬ್ಬಿಸುತ್ತಿದ್ದಾರೆ ಎಂದು ಎಲ್ಲರಿಗೂ ಗೊತ್ತು. ನನ್ನ ಮನಸ್ಸಲ್ಲಂತೂ ಯಾವುದೇ ಕೆಟ್ಟ ಆಲೋಚನೆಗಳು ಇಲ್ಲ. ಈ ವಿವಾದದಿಂದ ಸಿನಿಮಾ ಸಾಕಷ್ಟು ಪ್ರಚಾರ ಪಡೆದುಕೊಂಡಿದೆ. ಹಾಗಾಗಿ ಜನರು ಚಿತ್ರವನ್ನು ಗೆಲ್ಲಿಸುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಅವರು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ದೀಪಿಕಾ ಕೇಸರಿ ಬಿಕಿನಿ ವಿವಾದ: ವಿರೋಧಿಗಳಿಗೆ ಸಮಸ್ಯೆಯಿದೆ ಎಂದ ಸಂಸದೆ ನುಸ್ರತ್ ಟ್ರೋಲ್

    ದೀಪಿಕಾ ಕೇಸರಿ ಬಿಕಿನಿ ವಿವಾದ: ವಿರೋಧಿಗಳಿಗೆ ಸಮಸ್ಯೆಯಿದೆ ಎಂದ ಸಂಸದೆ ನುಸ್ರತ್ ಟ್ರೋಲ್

    ಠಾಣ್ ಸಿನಿಮಾದ ಹಾಡೊಂದರಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ ವಿವಾದ ದಿನಕ್ಕೊಂದು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಪರ ವಿರೋಧದ ಚರ್ಚೆಗೆ ದಿನಕ್ಕೊಬ್ಬರು ಪ್ರವೇಶ ಮಾಡುತ್ತಿದ್ದಾರೆ. ಈ ವಿವಾದ ಸಿನಿಮಾದಾಚೆ ರಾಜಕೀಯ ಬಣ್ಣ ಕೂಡ ಪಡೆದುಕೊಳ್ಳುತ್ತಿದೆ. ಕೇಸರಿ ಬಿಕಿನಿ ಹಾಕಿದ್ದಕ್ಕೆ ಗರಂ ಆಗಿರುವ ಬಿಜೆಪಿ ಜನಪ್ರತಿನಿಧಿಗಳಿಗೆ ಟಿಎಂಸಿ ಸಂಸದೆ ನುಸ್ರತ್, ತಿರುಗೇಟು ನೀಡಿದ್ದು ‘ಬಿಜೆಪಿ ಅವರಿಗೆ ಏನೇ ಹಾಕಿದರೂ ಸಮಸ್ಯೆ. ಬಿಕಿನಿ ಹಾಕಿದರೂ ಮಾತಾಡ್ತಾರೆ, ಹಿಜಬ್ ಧರಿಸಿದ್ರೂ ಸಮಸ್ಯೆ ಮಾಡುತ್ತಾರೆ’ ಎಂದು ಪ್ರತಿಕ್ರಿಯಿಸಿದ್ದಾರೆ. ಈಗ ಅವರ ಮಾತು ಟ್ರೋಲ್ ಆಗುತ್ತಿದೆ.

    ಬಾಲಿವುಡ್ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ ವಿಚಾರ ದೇಶಾದ್ಯಂತ ಚರ್ಚೆ ಆಗುತ್ತಿದೆ. ಈ ಸಿನಿಮಾವನ್ನು ಬ್ಯಾನ್ ಮಾಡಿ ಎಂದು ಒಂದು ಗುಂಪು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಮಾಡುತ್ತಿದ್ದರೆ, ಸಿನಿಮಾಗೆ ಬಣ್ಣದ ರಾಜಕೀಯ ತರಬೇಡಿ ಎಂದು ಮತ್ತೊಂದು ಗುಂಪು ವಾದ ಮಾಡುತ್ತಿದೆ. ಪಠಾಣ್ ಸಿನಿಮಾದ ಹಾಡು ರಿಲೀಸ್ ಆದ ದಿನದಿಂದ ಈ ತಿಕ್ಕಾಟ ನಡೆದಿದೆ. ಆದರೆ, ಈವರೆಗೂ ಸಿನಿಮಾ ತಂಡವಾಗಲಿ ಅಥವಾ ಶಾರುಖ್ ಖಾನ್ ಆಗಲಿ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದನ್ನೂ ಓದಿ: ಬಾಡಿಗೆ ತಾಯಿಯ ಮೂಲಕ ಮಗು ಪಡೆಯುತ್ತಿದ್ದಾರಾ ರಾಮ್‌ಚರಣ್ ದಂಪತಿ?

    ಇದೇ ಮೊದಲ ಬಾರಿಗೆ ವಿವಾದದ ಕುರಿತು ಮಾತನಾಡಿರುವ ಶಾರುಖ್ ಖಾನ್. ನಾವು ಸಿನಿಮಾವನ್ನು ಸಿನಿಮಾದಂತೆ ನೋಡಬೇಕು. ನಾನಂತೂ ಸಿನಿಮಾವಾಗಿಯೇ ಅಲ್ಲಿ ಕೆಲಸ ಮಾಡಿದ್ದೇನೆ. ಈ ವಿವಾದವನ್ನು ಯಾಕೆ ಎಬ್ಬಿಸುತ್ತಿದ್ದಾರೆ ಎಂದು ಎಲ್ಲರಿಗೂ ಗೊತ್ತು. ನನ್ನ ಮನಸ್ಸಲ್ಲಂತೂ ಯಾವುದೇ ಕೆಟ್ಟ ಆಲೋಚನೆಗಳು ಇಲ್ಲ. ಈ ವಿವಾದದಿಂದ ಸಿನಿಮಾ ಸಾಕಷ್ಟು ಪ್ರಚಾರ ಪಡೆದುಕೊಂಡಿದೆ. ಹಾಗಾಗಿ ಜನರು ಚಿತ್ರವನ್ನು ಗೆಲ್ಲಿಸುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಅವರು ಹೇಳಿದ್ದಾರೆ.

    ಪಠಾಣ್ ಸಿನಿಮಾದ ಬೇಷರಂ ಹಾಡಿನಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದಾರೆ ಎನ್ನುವ ವಿವಾದ ತಾರಕಕ್ಕೇರಿದೆ. ಇದು ಬೇಕು ಅಂತಾನೇ ಮಾಡಿದ ಹುನ್ನಾರ ಎಂದು ಹಿಂದೂಪರ ಸಂಘಟನೆಗಳು ಆರೋಪಿಸುತ್ತಿವೆ. ಕೆಲ ಪ್ರಗತಿಪರ ಹೋರಾಟಗಾರರ ಜೊತೆ ದೀಪಿಕಾ ಪಡುಕೋಣೆ ಗುರುತಿಸಿಕೊಂಡಿದ್ದಾರೆ ಎಂದು ಜೆಎನ್ಯು ಹೋರಾಟದಲ್ಲಿ ದೀಪಿಕಾ ಭಾಗಿಯಾಗದ್ದ ಫೋಟೋವನ್ನು ಟ್ರೋಲ್ ಮಾಡಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಶಾಂತ್ ಸಂಬರಗಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

    ಬಿಗ್ ಬಾಸ್ ಮನೆಯಿಂದ ಈ ವಾರ ಹೊರ ಬಂದಿರುವ ಪ್ರಶಾಂತ್ ಸಂಬರಗಿ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಹಾಕಿರುವ ಕೇಸರಿ ಬಿಕಿನಿ ಬಗ್ಗೆ ತಕರಾರು ಎತ್ತಿದ್ದಾರೆ. ಬಾಲಿವುಡ್ ಚಿತ್ರೋದ್ಯಮ ಹಿಂದೂಗಳ ಭಾವನೆಗೆ ಹೀಗೆ ನೋವು ಮಾಡುತ್ತಿರುವುದು ಹೊಸದೇನೂ ಅಲ್ಲ, ಬಾಲಿವುಡ್ ನಟರ ಮದುವೆಗಳನ್ನು ನೋಡಿದರೆ ಲವ್ ಜಿಹಾದ್ ಬಗ್ಗೆ ಅನುಮಾನ ಮೂಡುತ್ತದೆ ಎಂದು ಅವರು ಮಾತನಾಡಿದ್ದಾರೆ. ದೀಪಿಕಾ ಅವರಿಗೆ ಬೇಕು ಅಂತಾನೇ ಕೇಸರಿ ಬಿಕಿನಿ ಹಾಕಿಸಲಾಗಿದೆ ಎಂದು ಅವರು ಆರೋಪ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ದೀಪಿಕಾ ಅಸಭ್ಯ ನೃತ್ಯ ಸಿನಿಮಾ ನೋಡದಂತೆ ಮಾಡಿದೆ – `ಪಠಾಣ್’ ಹೆಸರು ಬಳಕೆಗೆ ಮುಸ್ಲಿಂ ಧರ್ಮಗುರು ಆಕ್ಷೇಪ

    ದೀಪಿಕಾ ಅಸಭ್ಯ ನೃತ್ಯ ಸಿನಿಮಾ ನೋಡದಂತೆ ಮಾಡಿದೆ – `ಪಠಾಣ್’ ಹೆಸರು ಬಳಕೆಗೆ ಮುಸ್ಲಿಂ ಧರ್ಮಗುರು ಆಕ್ಷೇಪ

    ಭೋಪಾಲ್/ಮುಂಬೈ: ಬಾಲಿವುಡ್ ನಟ ಶಾರೂಕ್ ಖಾನ್ (Shah Rukh Khan), ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಚಿತ್ರದ ವಿರುದ್ಧ ಹಿಂದೂ ಸಂಘಟನೆಗಳ (Hindu organisations) ಆಕ್ರೋಶದ ಜ್ವಾಲೆ ಹೆಚ್ಚಾಗ್ತಿದ್ದಂತೆ, ಮಧ್ಯಪ್ರದೇಶದ ಉಲೇಮಾ ಮಂಡಳಿಯ ಅಧ್ಯಕ್ಷ ಸೈಯದ್ ಅನಸ್ ಅಲಿ ಅವರು `ಪಠಾಣ್’ (Pathan) ಹೆಸರು ಬಳಕೆಗೆ ಆಕ್ಷೇಪಿಸಿದ್ದಾರೆ.

    ಮುಸ್ಲಿಮರಲ್ಲಿ ಪಠಾಣ್ (Pathan) ಸಮುದಾಯವಿದ್ದು, ಇದು ಸಮುದಾಯ ಮಾತ್ರವಲ್ಲ, ಇಡೀ ಮುಸ್ಲಿಂ ಸಮುದಾಯಕ್ಕೆ (Muslim Community) ಮಾಡಿದ ಅವಮಾನವಾಗಿದೆ. ದೀಪಿಕಾ ಅಸಭ್ಯ ನೃತ್ಯ ಸಿನಿಮಾವನ್ನೇ ನೋಡದಂತೆ ಮಾಡಿದೆ. ಕೂಡಲೇ ಸಿನಿಮಾದ ಶೀರ್ಷಿಕೆ ಬದಲಿಸಬೇಕು. ಇಲ್ಲದಿದ್ದರೇ ಮಧ್ಯಪ್ರದೇಶ (Madhya Pradesh) ಮಾತ್ರವಲ್ಲ ಇಡೀ ದೇಶದಲ್ಲಿ ಎಲ್ಲೂ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ಕೇಸರಿ ಬಿಕಿನಿಗೆ ನೆಟ್ಟಿಗರು ಗರಂ: ಬೈಕಾಟ್ ಪಠಾಣ್ ಟ್ರೆಂಡ್

    ಕೇಸರಿ ಬಿಕಿನಿ (Saffron Bikini) ಬಣ್ಣವನ್ನು ಬದಲಾಯಿಸಿ, ಇಲ್ಲವೇ ಪರಿಣಾಮ ಎದುರಿಸಿ ಅಂತಾ ಮಹಾರಾಷ್ಟ್ರ ಬಿಜೆಪಿ ಶಾಸಕ ರಾಮ್ ಕದಂ ಎಚ್ಚರಿಸಿದ್ದಾರೆ. ನಿಮ್ಮ ಮಗಳ ಜೊತೆ ಕೂತು `ಬೇಷರಂ ರಂಗ್’ ಹಾಡನ್ನು ನೀವು ನೋಡ್ತೀರಾ? ಯಾಕೆ ಹಿಂದೂ ಧರ್ಮವನ್ನೇ ಗುರಿಯಾಗಿಸಲಾಗ್ತಿದೆ? ಅಂತಾ ಮಧ್ಯಪ್ರದೇಶದ ಸ್ಪೀಕರ್ ಗಿರೀಶ್ ಗೌತಮ್ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ದೀಪಿಕಾ ಪಡುಕೋಣೆ ಆಯ್ತು, ಈಗ ಕಂಗನಾ ರಣಾವತ್‌ಗೂ ಕೇಸರಿ ಕಂಟಕ

    ಶಾರೂಖ್ ಖಾನ್ ಮಾತ್ರ ತಮ್ಮ ನಿಲುವಿಗೆ ಬದ್ಧವಾಗಿದ್ದಾರೆ. ಸಂಕುಚಿತ ಮನಸ್ಥಿತಿಯವರು ಸೋಷಿಯಲ್ ಮೀಡಿಯಾದಲ್ಲಿ ಅಪಪ್ರಚಾರ, ಋಣಾತ್ಮಕತೆಯನ್ನೇ ಹರಡುತ್ತಿದ್ದಾರೆ ಅಂದಿದ್ದಾರೆ.

    ಈ ಮಧ್ಯೆ, ನಟಿ ಕಂಗನಾಗೂ (Kangana Ranaut) ವಿವಾದ ತಾಕಿದೆ. `ಲಾಕಪ್’ ಪೋಸ್ಟರ್‌ನಲ್ಲಿ ಕೇಸರಿ ಬಣ್ಣದ ಮೇಲೆ ಕಂಗನಾ ಬೂಟು ಇಟ್ಟಿದ್ದು, ಈಗ ಇದರ ವಿರುದ್ಧ ಪ್ರತಿಭಟನೆ ನಡೆಸಲ್ವಾ ಅಂತಾ ನೆಟ್ಟಿಗರು ಕಾಲೆಳೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಇವರಿಗೆ ಮಹಿಳೆಯರು ಹಿಜಬ್, ಬಿಕಿನಿ ಏನೇ ಧರಿಸಿದ್ರು ಸಮಸ್ಯೆ: ಪಠಾಣ್ ಪರ ನಿಂತ ನುಸ್ರತ್

    ಇವರಿಗೆ ಮಹಿಳೆಯರು ಹಿಜಬ್, ಬಿಕಿನಿ ಏನೇ ಧರಿಸಿದ್ರು ಸಮಸ್ಯೆ: ಪಠಾಣ್ ಪರ ನಿಂತ ನುಸ್ರತ್

    ದೀಪಿಕಾ ಕೇಸರಿ ವಿವಾದ ದಿನಕ್ಕೊಂದು ರೀತಿಯಲ್ಲಿ ತಿರುವು ಪಡೆದುಕೊಳ್ಳುತ್ತಿದೆ. ಇತ್ತೀಚೆಗಷ್ಟೇ ದೀಪಿಕಾ ಪಡುಕೋಣೆ(Deepika Padukone) ಪರ ರಮ್ಯಾ (Ramya)  ಬೆಂಬಲಕ್ಕೆ ನಿಂತಿದ್ದರು. ಇದೀಗ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್ (Nusrat Jahan) ಕೂಡ ದೀಪಿಕಾ ಪರ ಬ್ಯಾಟಿಂಗ್ ಮಾಡಿದ್ದಾರೆ. ಇವರಿಗೆ ಹಿಜಬ್ ಧರಿಸಿದ್ರು ಸಮಸ್ಯೆ, ಬಿಕಿನಿ ಧರಿಸಿದ್ರು ಸಹಿಸಲ್ಲ ಎಂದು ಹೇಳುವ ಮೂಲಕ ಪಠಾಣ್‌ಗೆ (Pathan) ನುಸ್ರತ್ ಬೆಂಬಲ ಸೂಚಿಸಿದ್ದಾರೆ.

    ‌ʻಪಠಾಣ್ʼ ಸಿನಿಮಾದ ಬೇಷರಂ ರಂಗ್ ಹಾಡಿನಲ್ಲಿ ದೀಪಿಕಾ ಪಡುಕೋಣೆ (Deepika Padukone) ಕೇಸರಿ ಬಣ್ಣ ಬಿಕಿನಿ ಧರಿಸಿ, ಕೊಂಚ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು. ಈ ಕುರಿತು ಕಳೆದ ನಾಲ್ಕೈದು ದಿನಗಳಿಂದ ನಟಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ದೀಪಿಕಾ ಕೇಸರಿ ಬಿಕಿನಿ ವಿರುದ್ಧ ಅನೇಕರು ಆಕ್ರೋಶ ಹೊರಹಾಕಿದ್ದಾರೆ. ಈ ಬೆನ್ನಲ್ಲೇ ಕಾಂಗ್ರೆಸ್ ಸಂಸದೆ ನುಸ್ರತ್ ಕೂಡ ಚಿತ್ರತಂಡದ ಪರ ನಿಂತಿದ್ದಾರೆ. ಇದನ್ನೂ ಓದಿ: ಐಶ್ವರ್ಯ ರೈ ಹೆಸರಿನಲ್ಲಿ ನಕಲಿ ಪಾಸ್‌ಪೋರ್ಟ್ ಬಳಕೆ ಮಾಡಿದ ವಿದೇಶಿಗರು ಅಂದರ್

    ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಇದು ಯಾರ ಸಿದ್ಧಾಂತದ ಬಗ್ಗೆ ಅಲ್ಲ. ಇದು ಅಧಿಕಾರದಲ್ಲಿರುವ ಒಂದು ಪಕ್ಷದ ಜನರ ಗುಂಪಿನವರು ಮಾಡುತ್ತಿರುವ ಯೋಜಿತ ಪಿತ್ತೂರಿ. ಇಲ್ಲಿ ಅವರು ಏನು ಮಾಡಲು ಹೋರಟಿದ್ದಾರೆ, ಈ ವಿಚಾರದಲ್ಲಿ ಆಧ್ಯಾತ್ಮಿಕ, ಧಾರ್ಮಿಕವಾದ ವಿಚಾರಗಳನ್ನು ತರುತ್ತಿದ್ದಾರೆ. ಇದಕ್ಕೆ ಬಿಜೆಪಿ (Bjp) ಸರ್ಕಾರದ ಬೆಂಬಲ ಇದೆ. ಇಲ್ಲಿ ಮಹಿಳೆಯರು ಬಿಕಿನಿ ಧರಿಸಿದರು ಸಮಸ್ಯೆ, ಹಿಜಬ್ ಧರಿಸಿದರು ಸಮಸ್ಯೆ, ಅವರಿಗೆ ಎಲ್ಲದರಲ್ಲೂ ಸಮಸ್ಯೆ ಇದೆ ಎಂದು ಹೇಳಿದ್ದಾರೆ.

    ಭಾರತದ ಹೊಸ ಯುಗದ ಮಹಿಳೆಯರಿಗೆ ಏನು ಧರಿಸಬೇಕೆಂದು ಅವರೇ ಹೇಳುತ್ತಿದ್ದಾರೆ ಎಂದು ನುಸ್ರತ್ ಜಹಾನ್ ಹೇಳಿದರು. ಏನು ಧರಿಸಬೇಕು, ಏನು ತಿನ್ನಬೇಕು, ಹೇಗೆ ಮಾತನಾಡಬೇಕು, ಹೇಗೆ ನಡೆಯಬೇಕು, ಶಾಲೆಯಲ್ಲಿ ಏನನ್ನು ಕಲಿಯಬೇಕು, ಟಿವಿಯಲ್ಲಿ ಏನನ್ನು ನೋಡಬೇಕು ಎಂದು ಹೇಳುವ ಮೂಲಕ ಅವರು ಮಹಿಳೆಯರ ಜೀವನವನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ರೀತಿಯ ವರ್ತನೆ ಎಲ್ಲಿಗೆ ಕೊಂಡೊಯ್ಯುತ್ತದೆ ಎಂದು ನನಗೆ ತಿಳಿದಿಲ್ಲ ಎಂದು ನುಸ್ರತ್ ಮಾತನಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ದೀಪಿಕಾ ಪಡುಕೋಣೆ ಆಯ್ತು, ಈಗ ಕಂಗನಾ ರಣಾವತ್‌ಗೂ ಕೇಸರಿ ಕಂಟಕ

    ದೀಪಿಕಾ ಪಡುಕೋಣೆ ಆಯ್ತು, ಈಗ ಕಂಗನಾ ರಣಾವತ್‌ಗೂ ಕೇಸರಿ ಕಂಟಕ

    ಕಾಂಟ್ರವರ್ಸಿ ಕ್ವೀನ್ ಕಂಗನಾ(Kangana Ranaut) ಮತ್ತೆ ಸುದ್ದಿಯಲ್ಲಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಕಳೆದ ನಾಲ್ಕೈದು ದಿನಗಳಿಂದ ದೀಪಿಕಾ ಕೇಸರಿ ಬಿಕಿನಿ ವಿವಾದ ದೊಡ್ಡ ಮಟ್ಟದಲ್ಲಿ ಸದ್ದು ಮಾಡ್ತಿರುವ ಬೆನ್ನಲ್ಲೇ ಕಂಗನಾ ರಣಾವತ್ ಕೂಡ ಇದೀಗ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ರಿಯಾಲಿಟಿ ಶೋವೊಂದರ ಪೋಸ್ಟರ್‌ನಲ್ಲಿ ಕಂಗನಾ ಕೇಸರಿ ಬಣ್ಣಕ್ಕೆ ಬೂಟುಗಾಲಿಟ್ಟಿದ್ದಾರೆ ಎಂಬ ವಿಚಾರಕ್ಕೆ ನೆಟ್ಟಿಗರು ನಟಿಯ ವಿರುದ್ಧ ಗರಂ ಆಗಿದ್ದಾರೆ.

    `ಪಠಾಣ್’ (Pathan) ಚಿತ್ರದ ಬೇಷರಂ ರಂಗ್ ಹಾಡಿನಲ್ಲಿ ದೀಪಿಕಾ (Deepika Paukone) ಕೇಸರಿ ಬಿಕಿನಿ ವಿವಾದ ಸೃಷ್ಟಿಸಿರುವ ಬೆನ್ನಲ್ಲೇ ಕಂಗನಾ ರಣಾವತ್ ಈಗ ಟ್ರೋಲಿಗರ ಬಾಯಿಗೆ ಆಹಾರವಾಗಿದ್ದಾರೆ. `ಲಾಕಪ್’ (Lock Upp) ಎಂಬ ರಿಯಾಲಿಟಿ ಶೋವೊಂದರಲ್ಲಿ ಕಂಗನಾ ರಣಾವತ್ ನಿರೂಪಣೆ ಜವಾಬ್ದಾರಿಯನ್ನ ಹೊತ್ತಿದ್ದರು. ಈ ಶೋನಲ್ಲಿನಪೋಸ್ಟರ್‌ನಲ್ಲಿ ಕಂಗನಾ ಕೇಸರಿ ಬಣ್ಣಕ್ಕೆ ಬೂಟುಗಾಲಿಟ್ಟಿದ್ದಾರೆ. ಈ ವಿಚಾರವಾಗಿ ನಟಿ ಟ್ರೋಲ್ ಆಗ್ತಿದ್ದಾರೆ.

    ಪದ್ಮಶ್ರೀ ಪುರಸ್ಕೃತ ನಟಿ ಕಂಗನಾರನ್ನ ಚಿತ್ರರಂಗದಿಂದ ಬ್ಯಾನ್ (Ban) ಮಾಡಿ ಅಂತಾ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡುವ ಮೂಲಕ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತ ಟ್ರೋಲ್ (Troll) ಇಂಟರ್‌ನೆಟ್‌ನಲ್ಲಿ ಸಂಚಲನ ಮೂಡಿಸುತ್ತಿದೆ. ಇದನ್ನೂ ಓದಿ: ಕೇಸರಿ ಬಿಕಿನಿಗೆ ನೆಟ್ಟಿಗರು ಗರಂ: ಬೈಕಾಟ್ ಪಠಾಣ್ ಟ್ರೆಂಡ್

    ದೀಪಿಕಾ (Deepika) ಕೇಸರಿ ಬಿಕಿನಿ ವಿವಾದ ನಂತರ ಕಂಗನಾ ಅನೇಕರ ಕಂಗೆಣ್ಣಿಗೆ ಗುರಿಯಾಗಿದ್ದಾರೆ. ಇನ್ನೂ ಈ ವಿವಾದದ ಬಗ್ಗೆ ಕಂಗನಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕಂಗನಾ ಕೇಸರಿ ವಿವಾದ ಯಾವ ರೀತಿಯ ತಿರುವು ಪಡೆಯಲಿದೆ ಎಂಬುದನ್ನ ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]