Tag: Pathan

  • ದೀಪಿಕಾ ಕೇಸರಿ ಬಿಕಿನಿ ವಿವಾದ: `ಪಠಾಣ್’ ನಟಿಯ ಪರ ನಿಂತ ನಟಿ ರಮ್ಯಾ

    ದೀಪಿಕಾ ಕೇಸರಿ ಬಿಕಿನಿ ವಿವಾದ: `ಪಠಾಣ್’ ನಟಿಯ ಪರ ನಿಂತ ನಟಿ ರಮ್ಯಾ

    ಮೋಹಕತಾರೆ ರಮ್ಯಾ (Ramya) ಮತ್ತೆ ಚಿತ್ರರಂಗದಲ್ಲಿ ಆಕ್ಟೀವ್ ಆಗಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಆಗಾಗ ತಮ್ಮ ಅಭಿಪ್ರಾಯ, ಫೋಟೋಗಳನ್ನ ಶೇರ್ ಮಾಡುವ ಮೂಲಕ ಆಕ್ಟೀವ್ ಆಗಿದ್ದಾರೆ. ಇನ್ನೂ ಸಾಕಷ್ಟು ಟ್ರೋಲ್‌ಗಳಿಗೆ ಒಳಗಾಗಿರುವ ಸಮಂತಾ, ರಶ್ಮಿಕಾ, ಸಾಯಿ ಪಲ್ಲವಿ, ದೀಪಿಕಾ(Deepika Padukone) ಪರ ನಟಿ ರಮ್ಯಾ ಧ್ವನಿ ಎತ್ತಿದ್ದಾರೆ. ಈ ಮೂಲಕ ದೀಪಿಕಾ ಪಡುಕೋಣೆ ಪರ ರಮ್ಯಾ ಬ್ಯಾಟಿಂಗ್ ಮಾಡಿದ್ದಾರೆ. ದೀಪಿಕಾ ಕೇಸರಿ ಬಿಕಿನಿ ವಿವಾದಕ್ಕೆ ರಮ್ಯಾ ಟ್ವೀಟ್‌ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

    ಇತ್ತೀಚೆಗೆ ಸಿಕ್ಕಾಪಟ್ಟೆ ಚರ್ಚೆಯಲ್ಲಿರುವ ವಿಚಾರ `ಪಠಾಣ್’ (Pathan) ಸಿನಿಮಾದ `ಬೇಷರಂ ರಂಗ್’ ಹಾಡಿನ ಕಾಂಟ್ರವರ್ಸಿಗೆ ಹೊಸ ಟ್ವಿಸ್ಟ್‌ ಸಿಕ್ಕಿದೆ. ಈ ಚಿತ್ರದ ಹಾಡಿನಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಧರಿಸಿದ್ದಾರೆ ಎಂದು ಹಲವರ ವಿರೋಧದಕ್ಕೆ ಕಾರಣವಾಗಿತ್ತು. ನಾಲ್ಕೈದು ದಿನಗಳಿಂದ ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಇದೀಗ ಈ ವಿಚಾರವಾಗಿ ದೀಪಿಕಾ ಪರ ರಮ್ಯಾ ನಿಂತಿದ್ದಾರೆ. ʻಪಠಾಣ್ʼ ನಟಿಯ ಪರವಾಗಿ ರಮ್ಯಾ ಟ್ವಿಟ್ ಮಾಡಿದ್ದಾರೆ. ಇದನ್ನೂ ಓದಿ:ದೀಪಿಕಾ ಕೇಸರಿ ಬಿಕಿನಿ ವಿವಾದ : ಅಖಾಡಕ್ಕಿಳಿದ ನಟ ಚೇತನ್

    ಡಿವೋರ್ಸ್ ವಿಚಾರಕ್ಕೆ ಸಮಂತಾ ಟ್ರೋಲ್, ತಮ್ಮ ಅಭಿಪ್ರಾಯ ಹೇಳಿದ್ದಕ್ಕೆ ಸಾಯಿಪಲ್ಲವಿ, ಪ್ರೀತಿಸಿ ಬೇರೆಯಾಗಿದ್ದಕ್ಕೆ ರಶ್ಮಿಕಾ, ಬಟ್ಟೆ ವಿಚಾರಕ್ಕೆ ದೀಪಿಕಾರನ್ನು ಟ್ರೋಲ್ ಮಾಡಲಾಗಿದೆ. ಆಯ್ಕೆಯ ಸ್ವಾತಂತ್ರ್ಯ ನಮ್ಮ ಮೂಲಭೂತ ಹಕ್ಕು ಎಂದು ಹೇಳುವ ಮೂಲಕ ದೀಪಿಕಾ ಪರ ರಮ್ಯಾ ಬ್ಯಾಟಿಂಗ್‌ ಮಾಡಿದ್ದಾರೆ.

    ಆಯ್ಕೆಯ ಸ್ವಾತಂತ್ರ‍್ಯ ನಮ್ಮ ಮೂಲಭೂತ ಹಕ್ಕಾಗಿದೆ. ಮಹಿಳೆಯರು ತಾಯಿ ದುರ್ಗೆಯ ಮೂರ್ತರೂಪವಾಗಿದ್ದಾರೆ. ಸ್ತ್ರೀದ್ವೇಷವು ನಾವು ಹೋರಾಡಬೇಕಾದ ದುಷ್ಟತನವಾಗಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ನಟಿ ರಮ್ಯಾ ಟ್ವೀಟ್‌ ಮಾಡಿದ್ದಾರೆ. ಈ ಮೂಲಕ ಸ್ತ್ರೀ ದ್ವೇಷಿಗಳ ವಿರುದ್ಧ ನಟಿ ಕಿಡಿಕಾರಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಪಠಾಣ್’ ಚಿತ್ರಕ್ಕೆ ಒಳ್ಳೆಯ ಪ್ರಚಾರ ಸಿಕ್ತು, ಸಿನಿಮಾ ಗೆಲ್ಲುತ್ತೆ ಎಂದ ಶಾರುಖ್ ಖಾನ್

    ‘ಪಠಾಣ್’ ಚಿತ್ರಕ್ಕೆ ಒಳ್ಳೆಯ ಪ್ರಚಾರ ಸಿಕ್ತು, ಸಿನಿಮಾ ಗೆಲ್ಲುತ್ತೆ ಎಂದ ಶಾರುಖ್ ಖಾನ್

    ಬಾಲಿವುಡ್ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ ವಿಚಾರ ದೇಶಾದ್ಯಂತ ಚರ್ಚೆ ಆಗುತ್ತಿದೆ. ಈ ಸಿನಿಮಾವನ್ನು ಬ್ಯಾನ್ ಮಾಡಿ ಎಂದು ಒಂದು ಗುಂಪು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಮಾಡುತ್ತಿದ್ದರೆ, ಸಿನಿಮಾಗೆ ಬಣ್ಣದ ರಾಜಕೀಯ ತರಬೇಡಿ ಎಂದು ಮತ್ತೊಂದು ಗುಂಪು ವಾದ ಮಾಡುತ್ತಿದೆ. ಪಠಾಣ್ ಸಿನಿಮಾದ ಹಾಡು ರಿಲೀಸ್ ಆದ ದಿನದಿಂದ ಈ ತಿಕ್ಕಾಟ ನಡೆದಿದೆ. ಆದರೆ, ಈವರೆಗೂ ಸಿನಿಮಾ ತಂಡವಾಗಲಿ ಅಥವಾ ಶಾರುಖ್ ಖಾನ್ ಆಗಲಿ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.

    ಇದೇ ಮೊದಲ ಬಾರಿಗೆ ವಿವಾದದ ಕುರಿತು ಮಾತನಾಡಿರುವ ಶಾರುಖ್ ಖಾನ್. ನಾವು ಸಿನಿಮಾವನ್ನು ಸಿನಿಮಾದಂತೆ ನೋಡಬೇಕು. ನಾನಂತೂ ಸಿನಿಮಾವಾಗಿಯೇ ಅಲ್ಲಿ ಕೆಲಸ ಮಾಡಿದ್ದೇನೆ. ಈ ವಿವಾದವನ್ನು ಯಾಕೆ ಎಬ್ಬಿಸುತ್ತಿದ್ದಾರೆ ಎಂದು ಎಲ್ಲರಿಗೂ ಗೊತ್ತು. ನನ್ನ ಮನಸ್ಸಲ್ಲಂತೂ ಯಾವುದೇ ಕೆಟ್ಟ ಆಲೋಚನೆಗಳು ಇಲ್ಲ. ಈ ವಿವಾದದಿಂದ ಸಿನಿಮಾ ಸಾಕಷ್ಟು ಪ್ರಚಾರ ಪಡೆದುಕೊಂಡಿದೆ. ಹಾಗಾಗಿ ಜನರು ಚಿತ್ರವನ್ನು ಗೆಲ್ಲಿಸುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಅವರು ಹೇಳಿದ್ದಾರೆ.

    ಪಠಾಣ್ ಸಿನಿಮಾದ ಬೇಷರಂ ಹಾಡಿನಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದಾರೆ ಎನ್ನುವ ವಿವಾದ ತಾರಕಕ್ಕೇರಿದೆ. ಇದು ಬೇಕು ಅಂತಾನೇ ಮಾಡಿದ ಹುನ್ನಾರ ಎಂದು ಹಿಂದೂಪರ ಸಂಘಟನೆಗಳು ಆರೋಪಿಸುತ್ತಿವೆ. ಕೆಲ ಪ್ರಗತಿಪರ ಹೋರಾಟಗಾರರ ಜೊತೆ ದೀಪಿಕಾ ಪಡುಕೋಣೆ ಗುರುತಿಸಿಕೊಂಡಿದ್ದಾರೆ ಎಂದು ಜೆಎನ್‌ಯು ಹೋರಾಟದಲ್ಲಿ ದೀಪಿಕಾ ಭಾಗಿಯಾಗದ್ದ ಫೋಟೋವನ್ನು ಟ್ರೋಲ್ ಮಾಡಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಶಾಂತ್ ಸಂಬರಗಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ಸಿನಿಮಾ ಮೂಲಕ ಪತಿಯ ಪ್ರಜಾಕೀಯಕ್ಕೆ ಸಾಥ್ ನೀಡಿದ ಪ್ರಿಯಾಂಕ ಉಪೇಂದ್ರ

    ಬಿಗ್ ಬಾಸ್ ಮನೆಯಿಂದ ಈ ವಾರ ಹೊರ ಬಂದಿರುವ ಪ್ರಶಾಂತ್ ಸಂಬರಗಿ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಹಾಕಿರುವ ಕೇಸರಿ ಬಿಕಿನಿ ಬಗ್ಗೆ ತಕರಾರು ಎತ್ತಿದ್ದಾರೆ. ಬಾಲಿವುಡ್ ಚಿತ್ರೋದ್ಯಮ ಹಿಂದೂಗಳ ಭಾವನೆಗೆ ಹೀಗೆ ನೋವು ಮಾಡುತ್ತಿರುವುದು ಹೊಸದೇನೂ ಅಲ್ಲ, ಬಾಲಿವುಡ್ ನಟರ ಮದುವೆಗಳನ್ನು ನೋಡಿದರೆ ಲವ್ ಜಿಹಾದ್ ಬಗ್ಗೆ ಅನುಮಾನ ಮೂಡುತ್ತದೆ ಎಂದು ಅವರು ಮಾತನಾಡಿದ್ದಾರೆ. ದೀಪಿಕಾ ಅವರಿಗೆ ಬೇಕು ಅಂತಾನೇ ಕೇಸರಿ ಬಿಕಿನಿ ಹಾಕಿಸಲಾಗಿದೆ ಎಂದು ಅವರು ಆರೋಪ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ದೀಪಿಕಾ ಕೇಸರಿ ಬಿಕಿನಿ ವಿವಾದ : ಅಖಾಡಕ್ಕಿಳಿದ ನಟ ಚೇತನ್

    ದೀಪಿಕಾ ಕೇಸರಿ ಬಿಕಿನಿ ವಿವಾದ : ಅಖಾಡಕ್ಕಿಳಿದ ನಟ ಚೇತನ್

    ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾದ ಹಾಡೊಂದರಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದಾರೆ ಎನ್ನುವ ಕಾರಣಕ್ಕಾಗಿ ನಾಲ್ಕೈದು ದಿನಗಳಿಂದ ಸಾಕಷ್ಟು ಚರ್ಚೆ ಆಗುತ್ತಿದೆ. ನಟಿ ಕೇಸರಿ ಬಿಕಿನಿ ಹಾಕಿದ್ದಾರೆ ಎನ್ನುವ ಕಾರಣಕ್ಕಾಗಿ ಹಿಂದೂ ಕಾರ್ಯಕರ್ತರು ದೀಪಿಕಾ ಮೇಲೆ ಮುಗಿಬಿದ್ದಿದ್ದಾರೆ. ಸಿನಿಮಾವನ್ನು ಬಾಯ್ಕಾಟ್ ಮಾಡಬೇಕು ಎಂದು ಒತ್ತಡ ಹೇರುತ್ತಿದ್ದಾರೆ. ಬಹಳಷ್ಟು ಈ ನಡೆಗೆ ವಿರೋಧ ವ್ಯಕ್ತ ಪಡಿಸುತ್ತಿದ್ದರೆ, ಕೆಲವರು ಸಿನಿಮಾ ಪರವಾಗಿ ಮಾತನಾಡುತ್ತಿದ್ದಾರೆ.

    ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ನಟ ಚೇತನ್, ‘ಪಠಾಣ್ ಚಿತ್ರದ ಹಾಡು ಈಗ ಅದರ ಕೇಸರಿ ಬಿಕಿನಿ ಮತ್ತು ಹಸಿರು ಶರ್ಟ್ ಕಾರಣದಿಂದ ರಾಜಕೀಯಗೊಳ್ಳುತ್ತಿದೆ. ಬಟ್ಟೆಯ ಬಣ್ಣದ ಕಾರಣಕ್ಕೆ ವ್ಯಕ್ತಿಸುತ್ತಿರುವ ವಿರೋಧವು ಬಹಳ ಕ್ಷುಲ್ಲಕವಾಗಿದೆ. ಬುದ್ಧ ಮತ್ತು ಬಸವನವರ ಬಣ್ಣವಾದ ಕೇಸರಿಯನ್ನು  ಹಿಂದುತ್ವವು ತನ್ನದಾಗಿಸಿಕೊಳ್ಳುತ್ತಿದೆ. ಪ್ರಕೃತಿ ಮತ್ತು ರೈತರ ಸಂಕೇತವಾದ ಹಸಿರು ಬಣ್ಣವು ಇಸ್ಲಾಮೀಕರಣಗೊಳ್ಳುತ್ತಿದೆ. ಮಾಡಬೇಕೆಂದೇ ಮಾಡುತ್ತಿರುವ ವಿವಾದವಿದು’ ಎಂದು ಅವರು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಪ್ರೆಗ್ನೆನ್ಸಿ ಬಗ್ಗೆ ಸೀಕ್ರೆಟ್ ಮಾಡಿದ್ಯಾಕೆ ಎಂದು ಅಸಲಿ ವಿಚಾರ ಬಿಚ್ಚಿಟ್ಟ `ಕಬ್ಜ’ ಸುಂದರಿ

    ಪಠಾಣ್ ಸಿನಿಮಾದ ಬೇಷರಂ ಹಾಡಿನಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದಾರೆ ಎನ್ನುವ ವಿವಾದ ತಾರಕಕ್ಕೇರಿದೆ. ಇದು ಬೇಕು ಅಂತಾನೇ ಮಾಡಿದ ಹುನ್ನಾರ ಎಂದು ಹಿಂದೂಪರ ಸಂಘಟನೆಗಳು ಆರೋಪಿಸುತ್ತಿವೆ. ಕೆಲ ಪ್ರಗತಿಪರ ಹೋರಾಟಗಾರರ ಜೊತೆ ದೀಪಿಕಾ ಪಡುಕೋಣೆ ಗುರುತಿಸಿಕೊಂಡಿದ್ದಾರೆ ಎಂದು ಜೆ.ಎನ್.ಯೂ ಹೋರಾಟದಲ್ಲಿ ದೀಪಿಕಾ ಭಾಗಿಯಾಗದ್ದ ಫೋಟೋವನ್ನು ಟ್ರೋಲ್ ಮಾಡಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಶಾಂತ್ ಸಂಬರಗಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

    ಬಿಗ್ ಬಾಸ್ ಮನೆಯಿಂದ ಈ ವಾರ ಹೊರ ಬಂದಿರುವ ಪ್ರಶಾಂತ್ ಸಂಬರಗಿ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಹಾಕಿರುವ ಕೇಸರಿ ಬಿಕಿನಿ ಬಗ್ಗೆ ತಕರಾರು ಎತ್ತಿದ್ದಾರೆ. ಬಾಲಿವುಡ್ ಚಿತ್ರೋದ್ಯಮ ಹಿಂದೂಗಳ ಭಾವನೆಗೆ ಹೀಗೆ ನೋವು ಮಾಡುತ್ತಿರುವುದು ಹೊಸದೇನೂ ಅಲ್ಲ, ಬಾಲಿವುಡ್ ನಟರ ಮದುವೆಗಳನ್ನು ನೋಡಿದರೆ ಲವ್ ಜಿಹಾದ್ ಬಗ್ಗೆ ಅನುಮಾನ ಮೂಡುತ್ತದೆ ಎಂದು ಅವರು ಮಾತನಾಡಿದ್ದಾರೆ. ದೀಪಿಕಾ ಅವರಿಗೆ ಬೇಕು ಅಂತಾನೇ ಕೇಸರಿ ಬಿಕಿನಿ ಹಾಕಿಸಲಾಗಿದೆ ಎಂದು ಅವರು ಆರೋಪ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೇಸರಿ ಬಟ್ಟೆ ಧರಿಸಿ ಅಶ್ಲೀಲ ನೃತ್ಯ – ದೀಪಿಕಾ ವಿರುದ್ಧ ಮುತಾಲಿಕ್ ಕಿಡಿ

    ಕೇಸರಿ ಬಟ್ಟೆ ಧರಿಸಿ ಅಶ್ಲೀಲ ನೃತ್ಯ – ದೀಪಿಕಾ ವಿರುದ್ಧ ಮುತಾಲಿಕ್ ಕಿಡಿ

    ಧಾರವಾಡ: ಪಠಾಣ್ ಸಿನಿಮಾದಲ್ಲಿ (Pathan Cinema) `ಬೇಷರಂ ರಂಗ್’ ಶಾರುಖ್‌ಖಾನ್ (Shah Rukh Khan) ಹಾಗೂ ದೀಪಿಕಾ ಪಡುಕೋಣೆ (Deepika Padukone) ಹಾಟ್ ನೃತ್ಯದಿಂದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಸಿಡಿಮಿಡಿಗೊಂಡಿದ್ದಾರೆ.

    ಧಾರವಾಡದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಇತ್ತೀಚೆಗೆ ರಿಲೀಸ್ ಆಗಿರುವ ಪಠಾಣ್ ಸಿನೆಮಾದ `ಬೇಷರಂ ರಂಗ್’ ಹಾಡಿನ ನೃತ್ಯ ಅಶ್ಲೀಲ ಹಾಗೂ ಅಸಭ್ಯವಾಗಿದೆ, ಇದು ನಾಚಿಗೇಡಾಗುವಂತಹದ್ದು ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ‘ಅಸಹ್ಯಕರ.. ಬಣ್ಣದ ಕುರುಡುತನ’ ಎನ್ನುತ್ತಾ ದೀಪಿಕಾ ಪರ ಬ್ಯಾಟ್ ಮಾಡಿದ ಪ್ರಕಾಶ್ ರಾಜ್

    ದೇಶಾದ್ಯಂತ ಪಠಾಣ್ ಸಿನಿಮಾ ಹಾಡಿಗೆ ಬೈಕಾಟ್ ಅಭಿಯಾನ ಆರಂಭಿಸಿದ್ದು, ಶ್ರೀರಾಮಸೇನೆ (Sriramsena) ಸಹ ಬೈಕಾಟ್‌ಗೆ ಬೆಂಬಲ ವ್ಯಕ್ತಪಡಿಸಿದೆ. ಹಿಂದಿ ಚಿತ್ರರಂಗ ಮುಂಬೈನ ದಾವುದ್ ಕೈಯಲ್ಲಿದೆ. ಕಮ್ಯುನಿಸ್ಟರು ಹಾಗೂ ನಾಸ್ತಿಕವಾದಿಗಳ ಹಿಡಿತದಲ್ಲಿದೆ. ಇಲ್ಲಿವರೆಗೂ ಹಿಂದೂಗಳನ್ನೇ ಟಾರ್ಗೆಟ್ ಮಾಡಿ, ನಂಬಿಕೆಗಳನ್ನು ಕೆಡಿಸುವ ಪ್ರವೃತ್ತಿ ಬೆಳೆದುಬಂದಿದೆ. ಪಠಾಣ್ ಸಿನಿಮಾದಲ್ಲೂ ಕೇಸರಿ (Saffron) ಬಣ್ಣವನ್ನು ಟಾರ್ಗಟ್ ಮಾಡಿ ಬೇಷರಂ ರಂಗ್ ಹಾಡಿನಲ್ಲಿ ಈ ಬಣ್ಣ ತರಲಾಗಿದೆ. ಇದನ್ನು ನಾವು ವಿರೋಧಿಸುತ್ತೇವೆ ಎಂದು ಹೇಳಿದ್ದಾರೆ.

    ಈ ರೀತಿಯ ಮಾನಸಿಕತೆಯ ಚಿತ್ರಗಳಿಂದಲೇ ಲಿವಿಂಗ್ ಟುಗೆದರ್ (Live In Relationship), ಲವ್‌ಜಿಹಾದ್ (Love Jihad), ರೇಪ್, ಕಿಡ್ನ್ಯಾಪ್‌ಗಳು ಆಗುತ್ತದೆ. ಸೆನ್ಸಾರ್ ಮಂಡಳಿ ಇದನ್ನ ಗಂಭೀರವಾಗಿ ಪರಿಗಣಿಸಬೇಕು. ಸಮಾಜ ಹಾಳು ಮಾಡುವ ಇಂಥ ಚಲನಚಿತ್ರಗಳನ್ನ ಬ್ಯಾನ್ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಕೇಸರಿ ಬಿಕಿನಿ ವಿವಾದ: ಅಕ್ಷಯ್ ಕುಮಾರ್ ಮಾಡಿದ್ರೆ ಓಕೆನಾ? ಅಂತಿದೆ ಮತ್ತೊಂದು ಟೀಮ್

    ಹಿಂದೂ ದೇವತೆಗಳನ್ನ (Hindu Gods) ಅಸಭ್ಯವಾಗಿ ತೋರಿಸುವುದು ಅವಹೇಳನ ಮಾಡುವುದು ನಡೆದುಕೊಂಡೇ ಬಂದಿದೆ. ಪಿ.ಕೆ ಸಿನಿಮಾದಲ್ಲಿ ನಮ್ಮ ದೇವರುಗಳನ್ನ ಅಸಭ್ಯವಾಗಿ ಮಾಡಿದ್ದಾರೆ. ಪಾಕಿಸ್ತಾನದ ಹುಡುಗ ಹಾಗೂ ಭಾರತದ ದೇಶದ ಹುಡುಗಿಯ ಜೊತೆ ಪ್ರೀತಿ-ಪ್ರೇಮ ತೋರಿಸ್ತಾರೆ. ಉದ್ದೇಶ ಪೂರ್ವಕವಾಗಿ ಈ ರೀತಿ ಮಾಡಲಾಗುತ್ತಿದೆ. ಸಿನಿಮಾದಲ್ಲಿ ಗುಂಡಾ ರೋಲ್‌ನಲ್ಲಿ ಹಿಂದೂಗಳನ್ನ ತೋರಿಸ್ತಾರೆ. ನಮ್ಮನ್ನೆ ಪ್ರಚೋದನೆ ಮಾಡ್ತಾರೆ. ನಾವು ಎಷ್ಟು ದಿನ ತಾಳ್ಮೆಯಿಂದ ಇರಬೇಕು ಎಂದು ಪ್ರಶ್ನಿಸಿದ್ದಾರೆ.

    ಇನ್ನೂ ದೀಪಿಕಾ ಪಡುಕೋಣೆ ಪರ ಬ್ಯಾಟಿಂಗ್ ಮಾಡಿರುವ ಬಹುಭಾಷಾ ನಟ ಪ್ರಕಾಶ್ ರಾಜ್ (Prakash Raj) ವಿರುದ್ಧ ಮುತಾಲಿಕ್ ಗರಂ ಆಗಿದ್ದಾರೆ. ಸ್ವಾಮಿ ನಾವು ಸಹನೆ ಮಾಡಿಕೊಳ್ಳುತಿದ್ದೇವೆ. ನಾವು ಎಷ್ಟು ದಿನ ಹಿಂದೂ ವಿರೋಧಿ ನೀತಿ ಸಹಿಸಬೇಕು? ಕಳೆದ 50 ವರ್ಷಗಳಿಂದ ಇದನ್ನೆ ಮಾಡುತ್ತಾ ಬಂದಿದ್ದೀರಿ. ನಮ್ಮನ್ನೆ ಟಾರ್ಗೆಟ್ ಮಾಡಿದ್ದೀರಿ. ಮುಸ್ಲಿಮರು ಬುರ್ಕಾ ಹಾಕಿಕೊಂಡು ಕುಣಿಯಲಿ, ಕ್ರಿಶ್ಚಿಯನ್ನರು ಚರ್ಚ್ನಲ್ಲಿ ಡಾನ್ಸ್ ಮಾಡಲಿ ನೋಡೋಣ ಎಂದು ಸವಾಲ್ ಹಾಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಅಸಹ್ಯಕರ.. ಬಣ್ಣದ ಕುರುಡುತನ’ ಎನ್ನುತ್ತಾ ದೀಪಿಕಾ ಪರ ಬ್ಯಾಟ್ ಮಾಡಿದ ಪ್ರಕಾಶ್ ರಾಜ್

    ‘ಅಸಹ್ಯಕರ.. ಬಣ್ಣದ ಕುರುಡುತನ’ ಎನ್ನುತ್ತಾ ದೀಪಿಕಾ ಪರ ಬ್ಯಾಟ್ ಮಾಡಿದ ಪ್ರಕಾಶ್ ರಾಜ್

    ಭಾರತೀಯ ಸಿನಿಮಾ ರಂಗದ ಖ್ಯಾತ ನಟ ಪ್ರಕಾಶ್ ರಾಜ್ ‘ಪಠಾಣ್’ ಸಿನಿಮಾದ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಣ್ಣದ ಕುರುಡುತನವನ್ನು ಇನ್ನೆಷ್ಟು ದಿನ ಸಹಿಸಿಕೊಳ್ಳಬೇಕು ಎಂದು ಅವರು ಖಾರವಾಗಿಯೇ ಪ್ರಶ್ನೆ ಮಾಡಿದ್ದಾರೆ. ಕೇಸರಿ ಬಣ್ಣ ಎನ್ನುವ ಕಾರಣಕ್ಕಾಗಿ ಪಠಾಣ್ ಚಿತ್ರತಂಡಕ್ಕೆ ಕೊಡುತ್ತಿರುವ ತೊಂದರೆಯು ಅಸಹ್ಯಕರವಾದದ್ದು ಎನ್ನುವ ರೀತಿಯಲ್ಲಿ ಅವರು ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

    ಪಠಾಣ್ ಸಿನಿಮಾದ ಬೇಷರಂ ರಂಗ್ ಹಾಡಿನಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ತೊಟ್ಟಿದ್ದಾರೆ. ಶಾರುಖ್ ಖಾನ್ ಹಸಿರು ಬಣ್ಣದ ಕಾಸ್ಟ್ಯೂಮ್ ತೊಟ್ಟಿದ್ದಾರೆ. ಬೇಷರಂ ರಂಗ್ ಅಂದರೆ, ನಾಚಿಕೆ ಇಲ್ಲದ ಬಣ್ಣ ಎಂದರ್ಥ. ಕೇಸರಿಯನ್ನು ನಾಚಿಕೆ ಇಲ್ಲದ ಬಣ್ಣಕ್ಕೆ ಹೋಲಿಸಲಾಗಿದೆ ಎನ್ನುವುದು ಹಲವರ ಆರೋಪ. ಇದನ್ನೇ ಇಟ್ಟುಕೊಂಡು ಪಠಾಣ್ ಸಿನಿಮಾ ಬೈಕಾಟ್ ಮಾಡಿ ಎಂಬ ಅಭಿಯಾನ ಕೂಡ ಶುರುವಾಗಿದೆ. ಈ ಎಲ್ಲರಿಗೂ ಪ್ರಕಾಶ್ ರಾಜ್ ಪ್ರಶ್ನೆ ಮಾಡಿದ್ದಾರೆ. ಬಣ್ಣದ ಗಲಾಟೆ ಬಿಡುವುದು ಯಾವಾಗ? ಎಂದು ಕೇಳಿದ್ದಾರೆ.

    ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದರು ಎನ್ನುವ ಕಾರಣಕ್ಕಾಗಿ ಮೂರು ದಿನದಿಂದ ವಿವಾದ ಭುಗಿಲೆದ್ದಿದೆ. ಪಠಾಣ್ ಸಿನಿಮಾವನ್ನು ಬಾಯ್ಕಾಟ್ ಮಾಡಬೇಕು ಎಂದು ಹಲವರು ಸೋಷಿಯಲ್ ಮೀಡಿಯಾದಲ್ಲಿ ಕ್ಯಾಂಪೇನ್ ಶುರು ಮಾಡಿದ್ದಾರೆ. ಶಾರುಖ್ ಖಾನ್ ಬೇರೆ ಧರ್ಮದವರು ಎನ್ನುವ ಕಾರಣಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ ಎನ್ನುವ ಆರೋಪ ಕೂಡ ಇದೆ. ಕೆಲವರು ಶಾರುಖ್  ಪರವಾಗಿ ನಿಂತಿದ್ದು, ಅಕ್ಷಯ್ ಕುಮಾರ್ ನಟನೆಯ ಸಿನಿಮಾವೊಂದನ್ನು ಈ ಪ್ರಕರಣದಲ್ಲಿ ಎಳೆತಂದಿದ್ದಾರೆ.  ಇದನ್ನೂ ಓದಿ: ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ವಿವಾದ: ಪ್ರಶಾಂತ್ ಸಂಬರಗಿ ಎಂಟ್ರಿ

    ಅಕ್ಷಯ್ ಕುಮಾರ್ ಮತ್ತು ಕತ್ರೀನಾ ಕಾಂಬಿನೇಷನ್ ನ ‘ದೆ ದನಾ ದನ್’ ಸಿನಿಮಾದಲ್ಲೂ ಕತ್ರೀನಾ ಕೇಸರಿ ಬಣ್ಣದ ತುಂಡುಡುಗೆ ತೊಟ್ಟು ಸೆಕ್ಸಿಯಾಗಿ ಡಾನ್ಸ್ ಮಾಡಿದ್ದಾರೆ. ಆಗ ಮೌನವಹಿಸಿದವರು ಈಗೇಕೆ ಕೂಗಾಡುತ್ತಿದ್ದಾರೆ ಎಂದು ಹಲವರು ಕಾಮೆಂಟ್ ಮಾಡಿದ್ದಾರೆ. ಅಕ್ಷಯ್ ಕುಮಾರ್ ಏನೇ ಮಾಡಿದರೂ ಅದು ಸರೀನಾ? ಎಂದು ಹಲವರು ಪ್ರಶ್ನೆ ಮಾಡಿದ್ದಾರೆ. ದೇ ದನಾ ದನ್ ಸಿನಿಮಾದ ಫೋಟೋವನ್ನೂ ಸಾಕ್ಷಿಯಾಗಿ ನೀಡಿದ್ದಾರೆ. ಹಾಗಾಗಿ ಕೇಸರಿ ಬಿಕಿನಿಗೆ ಸಂಬಂಧಿಸಿದಂತೆ ಅಕ್ಷಯ್ ಕುಮಾರ್ ನನ್ನು ಎಳೆತರಲಾಗಿದೆ.

    ಪಠಾಣ್ ಸಿನಿಮಾದ ಬೇಷರಂ ಹಾಡಿನಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದಾರೆ ಎನ್ನುವ ವಿವಾದ ತಾರಕಕ್ಕೇರಿದೆ. ಇದು ಬೇಕು ಅಂತಾನೇ ಮಾಡಿದ ಹುನ್ನಾರ ಎಂದು ಹಿಂದೂಪರ ಸಂಘಟನೆಗಳು ಆರೋಪಿಸುತ್ತಿವೆ. ಕೆಲ ಪ್ರಗತಿಪರ ಹೋರಾಟಗಾರರ ಜೊತೆ ದೀಪಿಕಾ ಪಡುಕೋಣೆ ಗುರುತಿಸಿಕೊಂಡಿದ್ದಾರೆ ಎಂದು ಜೆಎನ್ಯು ಹೋರಾಟದಲ್ಲಿ ದೀಪಿಕಾ ಭಾಗಿಯಾಗದ್ದ ಫೋಟೋವನ್ನು ಟ್ರೋಲ್ ಮಾಡಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಶಾಂತ್ ಸಂಬರಗಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೇಸರಿ ಬಿಕಿನಿ ವಿವಾದ: ಅಕ್ಷಯ್ ಕುಮಾರ್ ಮಾಡಿದ್ರೆ ಓಕೆನಾ? ಅಂತಿದೆ ಮತ್ತೊಂದು ಟೀಮ್

    ಕೇಸರಿ ಬಿಕಿನಿ ವಿವಾದ: ಅಕ್ಷಯ್ ಕುಮಾರ್ ಮಾಡಿದ್ರೆ ಓಕೆನಾ? ಅಂತಿದೆ ಮತ್ತೊಂದು ಟೀಮ್

    ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದರು ಎನ್ನುವ ಕಾರಣಕ್ಕಾಗಿ ಮೂರು ದಿನದಿಂದ ವಿವಾದ ಭುಗಿಲೆದ್ದಿದೆ. ಪಠಾಣ್ ಸಿನಿಮಾವನ್ನು ಬಾಯ್ಕಾಟ್ ಮಾಡಬೇಕು ಎಂದು ಹಲವರು ಸೋಷಿಯಲ್ ಮೀಡಿಯಾದಲ್ಲಿ ಕ್ಯಾಂಪೇನ್ ಶುರು ಮಾಡಿದ್ದಾರೆ. ಶಾರುಖ್ ಖಾನ್ ಬೇರೆ ಧರ್ಮದವರು ಎನ್ನುವ ಕಾರಣಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ ಎನ್ನುವ ಆರೋಪ ಕೂಡ ಇದೆ. ಕೆಲವರು ಶಾರುಖ್  ಪರವಾಗಿ ನಿಂತಿದ್ದು, ಅಕ್ಷಯ್ ಕುಮಾರ್ ನಟನೆಯ ಸಿನಿಮಾವೊಂದನ್ನು ಈ ಪ್ರಕರಣದಲ್ಲಿ ಎಳೆತಂದಿದ್ದಾರೆ.

    ಅಕ್ಷಯ್ ಕುಮಾರ್ ಮತ್ತು ಕತ್ರೀನಾ ಕಾಂಬಿನೇಷನ್ ನ ‘ದೆ ದನಾ ದನ್’ ಸಿನಿಮಾದಲ್ಲೂ ಕತ್ರೀನಾ ಕೇಸರಿ ಬಣ್ಣದ ತುಂಡುಡುಗೆ ತೊಟ್ಟು ಸೆಕ್ಸಿಯಾಗಿ ಡಾನ್ಸ್ ಮಾಡಿದ್ದಾರೆ. ಆಗ ಮೌನವಹಿಸಿದವರು ಈಗೇಕೆ ಕೂಗಾಡುತ್ತಿದ್ದಾರೆ ಎಂದು ಹಲವರು ಕಾಮೆಂಟ್ ಮಾಡಿದ್ದಾರೆ. ಅಕ್ಷಯ್ ಕುಮಾರ್ ಏನೇ ಮಾಡಿದರೂ ಅದು ಸರೀನಾ? ಎಂದು ಹಲವರು ಪ್ರಶ್ನೆ ಮಾಡಿದ್ದಾರೆ. ದೇ ದನಾ ದನ್ ಸಿನಿಮಾದ ಫೋಟೋವನ್ನೂ ಸಾಕ್ಷಿಯಾಗಿ ನೀಡಿದ್ದಾರೆ. ಹಾಗಾಗಿ ಕೇಸರಿ ಬಿಕಿನಿಗೆ ಸಂಬಂಧಿಸಿದಂತೆ ಅಕ್ಷಯ್ ಕುಮಾರ್ ನನ್ನು ಎಳೆತರಲಾಗಿದೆ. ಇದನ್ನೂ ಓದಿ: ಆಲ್ವಿನ್ ಹೆನ್ರಿ ನಿರ್ದೇಶನದ ‘ಕ್ರಿಸ್ಟಿ’ ಚಿತ್ರದ ಫಸ್ಟ್ ಲುಕ್ ರಿಲೀಸ್

    ಪಠಾಣ್ ಸಿನಿಮಾದ ಬೇಷರಂ ಹಾಡಿನಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದಾರೆ ಎನ್ನುವ ವಿವಾದ ತಾರಕಕ್ಕೇರಿದೆ. ಇದು ಬೇಕು ಅಂತಾನೇ ಮಾಡಿದ ಹುನ್ನಾರ ಎಂದು ಹಿಂದೂಪರ ಸಂಘಟನೆಗಳು ಆರೋಪಿಸುತ್ತಿವೆ. ಕೆಲ ಪ್ರಗತಿಪರ ಹೋರಾಟಗಾರರ ಜೊತೆ ದೀಪಿಕಾ ಪಡುಕೋಣೆ ಗುರುತಿಸಿಕೊಂಡಿದ್ದಾರೆ ಎಂದು ಜೆಎನ್‌ಯು ಹೋರಾಟದಲ್ಲಿ ದೀಪಿಕಾ ಭಾಗಿಯಾಗಿದ್ದ ಫೋಟೋವನ್ನು ಟ್ರೋಲ್ ಮಾಡಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಶಾಂತ್ ಸಂಬರಗಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

    ಬಿಗ್ ಬಾಸ್ ಮನೆಯಿಂದ ಈ ವಾರ ಹೊರ ಬಂದಿರುವ ಪ್ರಶಾಂತ್ ಸಂಬರಗಿ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಹಾಕಿರುವ ಕೇಸರಿ ಬಿಕಿನಿ ಬಗ್ಗೆ ತಕರಾರು ಎತ್ತಿದ್ದಾರೆ. ಬಾಲಿವುಡ್ ಚಿತ್ರೋದ್ಯಮ ಹಿಂದೂಗಳ ಭಾವನೆಗೆ ಹೀಗೆ ನೋವು ಮಾಡುತ್ತಿರುವುದು ಹೊಸದೇನೂ ಅಲ್ಲ. ಬಾಲಿವುಡ್ ನಟರ ಮದುವೆಗಳನ್ನು ನೋಡಿದರೆ ಲವ್ ಜಿಹಾದ್ ಬಗ್ಗೆ ಅನುಮಾನ ಮೂಡುತ್ತದೆ ಎಂದು ಅವರು ಮಾತನಾಡಿದ್ದಾರೆ. ದೀಪಿಕಾ ಅವರಿಗೆ ಬೇಕು ಅಂತಾನೇ ಕೇಸರಿ ಬಿಕಿನಿ ಹಾಕಿಸಲಾಗಿದೆ ಎಂದು ಅವರು ಆರೋಪ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ವಿವಾದ: ಪ್ರಶಾಂತ್ ಸಂಬರಗಿ ಎಂಟ್ರಿ

    ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ವಿವಾದ: ಪ್ರಶಾಂತ್ ಸಂಬರಗಿ ಎಂಟ್ರಿ

    ಠಾಣ್ ಸಿನಿಮಾದ ಬೇಷರಂ ಹಾಡಿನಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದಾರೆ ಎನ್ನುವ ವಿವಾದ ತಾರಕಕ್ಕೇರಿದೆ. ಇದು ಬೇಕು ಅಂತಾನೇ ಮಾಡಿದ ಹುನ್ನಾರ ಎಂದು ಹಿಂದೂಪರ ಸಂಘಟನೆಗಳು ಆರೋಪಿಸುತ್ತಿವೆ. ಕೆಲ ಪ್ರಗತಿಪರ ಹೋರಾಟಗಾರರ ಜೊತೆ ದೀಪಿಕಾ ಪಡುಕೋಣೆ ಗುರುತಿಸಿಕೊಂಡಿದ್ದಾರೆ ಎಂದು ಜೆಎನ್ಯು ಹೋರಾಟದಲ್ಲಿ ದೀಪಿಕಾ ಭಾಗಿಯಾಗದ್ದ ಫೋಟೋವನ್ನು ಟ್ರೋಲ್ ಮಾಡಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಶಾಂತ್ ಸಂಬರಗಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

    ಬಿಗ್ ಬಾಸ್ ಮನೆಯಿಂದ ಈ ವಾರ ಹೊರ ಬಂದಿರುವ ಪ್ರಶಾಂತ್ ಸಂಬರಗಿ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಹಾಕಿರುವ ಕೇಸರಿ ಬಿಕಿನಿ ಬಗ್ಗೆ ತಕರಾರು ಎತ್ತಿದ್ದಾರೆ. ಬಾಲಿವುಡ್ ಚಿತ್ರೋದ್ಯಮ ಹಿಂದೂಗಳ ಭಾವನೆಗೆ ಹೀಗೆ ನೋವು ಮಾಡುತ್ತಿರುವುದು ಹೊಸದೇನೂ ಅಲ್ಲ, ಬಾಲಿವುಡ್ ನಟರ ಮದುವೆಗಳನ್ನು ನೋಡಿದರೆ ಲವ್ ಜಿಹಾದ್ ಬಗ್ಗೆ ಅನುಮಾನ ಮೂಡುತ್ತದೆ ಎಂದು ಅವರು ಮಾತನಾಡಿದ್ದಾರೆ. ದೀಪಿಕಾ ಅವರಿಗೆ ಬೇಕು ಅಂತಾನೇ ಕೇಸರಿ ಬಿಕಿನಿ ಹಾಕಿಸಲಾಗಿದೆ ಎಂದು ಅವರು ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಪರಪುರುಷನನ್ನು ಮನೆಗೆ ಕರೆತರುತ್ತಿದ್ದರು, ಚಿತ್ರಹಿಂಸೆ ನೀಡುತ್ತಿದ್ದರು: ಖ್ಯಾತನಟಿ ಅಭಿನಯ ಅತ್ತಿಗೆ ಕಣ್ಣೀರು

    ಪಠಾಣ್ ಸಿನಿಮಾ ಹಾಡಿನಲ್ಲಿ ದೀಪಿಕಾ ಪಡುಕೋಣೆ ಕಾಣಿಸಿಕೊಂಡ ಪರಿ ಹಲವರ ಕೆಂಗಣ್ಣಿಗೆ ಕಾರಣವಾಗಿದೆ. ಕೇಸರಿ ಬಿಕಿನಿಯಲ್ಲಿ ದೀಪಿಕಾ ಕುಣಿದಿದ್ದಾರೆ ಎನ್ನುವುದು ಮತ್ತು ಅದು ಶಾರುಖ್ ಖಾನ್ ನಟನೆಯ ಚಿತ್ರ ಎನ್ನುವ ಕಾರಣಕ್ಕಾಗಿ ವಿವಾದ ಎದ್ದಿದೆ. ಇದರ ಬೆನ್ನಲ್ಲೆ ಪಠಾಣ್ ಸಿನಿಮಾವನ್ನು ಬೈಕಾಟ್ ಮಾಡಬೇಕು ಎಂದು ಸೋಷಿಯಲ್ ಮೀಡಿಯಾದಲ್ಲಿ ಹಲವರು ಒತ್ತಾಯ ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ ದೀಪಿಕಾರ ಹಳೆ ಫೋಟೋವೊಂದನ್ನು ವೈರಲ್ ಮಾಡುತ್ತಿದ್ದು ಅದನ್ನೂ ಸೇರಿಸಿ ಸಿನಿಮಾ ಬೈಕಾಟ್ ಮಾಡಿ ಎಂದು ಹೇಳಲಾಗುತ್ತಿದೆ.

    ಈ ಹಿಂದೆ 2020ರಲ್ಲಿ ಜೆಎನ್ ಯೂ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಖಂಡಿಸಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ನಡೆಸುತ್ತಿದ್ದ ಹೋರಾಟದಲ್ಲಿ ದೀಪಿಕಾ ಪಡುಕೋಣೆ ಭಾಗಿಯಾಗಿದ್ದರು. ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿದ್ದರು. ತುಕ್ಡೆ ಗ್ಯಾಂಗ್ ಜೊತೆ ದೀಪಿಕಾ ಸೇರಿದ್ದಾರೆ ಎಂದು ಕಾರಣವನ್ನಿಟ್ಟುಕೊಂಡು ಪ್ರತಿಭಟನೆ ಮಾಡಲಾಯಿತು. ಆ ಫೋಟೋವನ್ನು ಪಠಾಣ್ ಜೊತೆ ಸೇರಿಸಿ ಈ ಸಿನಿಮಾವನ್ನು ಬೈಕಾಟ್ ಮಾಡಿ ಎಂದು ಹೊಸ ಹೋರಾಟ ಶುರು ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ದೀಪಿಕಾಗೆ ಬೈಕಾಟ್ ಬಿಸಿ: ತುಕ್ಡೆ ಗ್ಯಾಂಗ್ ಜೊತೆ ಕಾಣಿಸಿಕೊಂಡಿದ್ದ ನಟಿ ಎಂಬ ಆರೋಪ

    ದೀಪಿಕಾಗೆ ಬೈಕಾಟ್ ಬಿಸಿ: ತುಕ್ಡೆ ಗ್ಯಾಂಗ್ ಜೊತೆ ಕಾಣಿಸಿಕೊಂಡಿದ್ದ ನಟಿ ಎಂಬ ಆರೋಪ

    ಠಾಣ್ ಸಿನಿಮಾ ಹಾಡಿನಲ್ಲಿ ದೀಪಿಕಾ ಪಡುಕೋಣೆ ಕಾಣಿಸಿಕೊಂಡ ಪರಿ ಹಲವರ ಕೆಂಗಣ್ಣಿಗೆ ಕಾರಣವಾಗಿದೆ. ಕೇಸರಿ ಬಿಕಿನಿಯಲ್ಲಿ ದೀಪಿಕಾ ಕುಣಿದಿದ್ದಾರೆ ಎನ್ನುವುದು ಮತ್ತು ಅದು ಶಾರುಖ್ ಖಾನ್ ನಟನೆಯ ಚಿತ್ರ ಎನ್ನುವ ಕಾರಣಕ್ಕಾಗಿ ವಿವಾದ ಎದ್ದಿದೆ. ಇದರ ಬೆನ್ನಲ್ಲೆ ಪಠಾಣ್ ಸಿನಿಮಾವನ್ನು ಬೈಕಾಟ್ ಮಾಡಬೇಕು ಎಂದು ಸೋಷಿಯಲ್ ಮೀಡಿಯಾದಲ್ಲಿ ಹಲವರು ಒತ್ತಾಯ ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ ದೀಪಿಕಾರ ಹಳೆ ಫೋಟೋವೊಂದನ್ನು ವೈರಲ್ ಮಾಡುತ್ತಿದ್ದು ಅದನ್ನೂ ಸೇರಿಸಿ ಸಿನಿಮಾ ಬೈಕಾಟ್ ಮಾಡಿ ಎಂದು ಹೇಳಲಾಗುತ್ತಿದೆ.

    ಈ ಹಿಂದೆ 2020ರಲ್ಲಿ ಜೆಎನ್ ಯೂ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಖಂಡಿಸಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ನಡೆಸುತ್ತಿದ್ದ ಹೋರಾಟದಲ್ಲಿ ದೀಪಿಕಾ ಪಡುಕೋಣೆ ಭಾಗಿಯಾಗಿದ್ದರು. ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿದ್ದರು. ತುಕ್ಡೆ ಗ್ಯಾಂಗ್ ಜೊತೆ ದೀಪಿಕಾ ಸೇರಿದ್ದಾರೆ ಎಂದು ಕಾರಣವನ್ನಿಟ್ಟುಕೊಂಡು ಪ್ರತಿಭಟನೆ ಮಾಡಲಾಯಿತು. ಆ ಫೋಟೋವನ್ನು ಪಠಾಣ್ ಜೊತೆ ಸೇರಿಸಿ ಈ ಸಿನಿಮಾವನ್ನು ಬೈಕಾಟ್ ಮಾಡಿ ಎಂದು ಹೊಸ ಹೋರಾಟ ಶುರು ಮಾಡಿದ್ದಾರೆ.

    ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ನಟನೆಯ ಪಠಾಣ್ ಸಿನಿಮಾದ ‘ಬೇಷರಂ ರಂಗ್’ ಹಾಡು ಮೂರು ದಿನಗಳ ಹಿಂದೆಯಷ್ಟೇ ರಿಲೀಸ್ ಆಗಿದೆ. ಈ ಹಾಡನ್ನು ಇಪ್ಪತ್ತು ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ. ಆದರೆ, ಈ ಹಾಡಿನಲ್ಲಿ ದೀಪಿಕಾ ಹಾಕಿರುವ ಡ್ರೆಸ್ ಇದೀಗ ವಿವಾದಕ್ಕೆ ಕಾರಣವಾಗಿದೆ. ಕೇಸರಿಯ ಬಿಕಿನಿಯಲ್ಲಿ ದೀಪಿಕಾ ಕಾಣಿಸಿಕೊಂಡಿದ್ದು, ಈ ಹಾಡಿನ ಸಾಲಿಗೆ ಹಾಕಿರುವ ಡ್ರೆಸ್ ಗೂ ಹೊಂದಾಣಿಕೆ ಮಾಡಿಕೊಂಡು ನೆಟ್ಟಿಗರು ಗರಂ ಆಗಿದ್ದಾರೆ. ಈ ಕಾರಣದಿಂದಾಗಿ ಚಿತ್ರಕ್ಕೆ ಬಹಿಷ್ಕಾರ ಹಾಕುವಂತೆ ಸೋಷಿಯಲ್ ಮೀಡಿಯಾದಲ್ಲಿ ಕರೆ ನೀಡುತ್ತಿದ್ದಾರೆ.

    ಬೇಷರಂ ರಂಗ್ ಹಾಡಿನಲ್ಲಿ ದೀಪಿಕಾ ಕೇಸರಿ ಬಣ್ಣದ ತುಂಡುಡುಗೆ ತೊಟ್ಟಿದ್ದಾರೆ. ‘ಬೇಷರಂ ರಂಗ್’ ಅಂದರೆ ಕನ್ನಡದಲ್ಲಿ ನಾಚಿಕೆ ಇಲ್ಲದ ಬಣ್ಣ ಎಂದಾಗುತ್ತದೆ. ಕೇಸರಿ ಬಣ್ಣಕ್ಕೆ ನಾಚಿಕೆ ಇಲ್ಲದ ಬಣ್ಣ ಎಂದು ಜರಿದಿದ್ದಾರೆ ಎಂದು ಹೋಲಿಕೆ ಮಾಡಿಕೊಂಡು ಹಲವರು ಗರಂ ಆಗಿದ್ದಾರೆ. ಬೇಕು ಅಂತಾನೇ ಈ ರೀತಿ ಕೇಸರಿ ಬಣ್ಣಕ್ಕೆ ಅವಮಾನ ಮಾಡಲಾಗಿದೆ ಎಂದು ಕಾಮೆಂಟ್ ಕೂಡ ಮಾಡುತ್ತಿದ್ದಾರೆ. ಹೀಗಾಗಿ ಬೈಕಾಟ್ ಪಠಾಣ್ ಟ್ರೆಂಡ್ ಹೆಚ್ಚಿದೆ. ಇದನ್ನೂ ಓದಿ: ದೀಪಿಕಾ ದಾಸ್ ವರ್ತನೆಗೆ ಕಿಡಿಕಾರಿದ ರೂಪೇಶ್ ರಾಜಣ್ಣ

    ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಮೂಲಕ ಸಾಕಷ್ಟು ಭರವಸೆ ಮೂಡಿಸಿರುವ ಈ ಸಿನಿಮಾ, ಮೊದಲ ಹಾಡಿನ ಮೂಲಕ ಪ್ರಚಾರ ಆರಂಭಿಸಲಿದೆ. ದೀಪಿಕಾ ಪಡುಕೋಣೆ ಮತ್ತು ಶಾರುಖ್ ಖಾನ್ ಕಾಂಬಿಷೇನ್ ನ ಸಿನಿಮಾ ಇದಾಗಿದ್ದು, ಶುರುವಿನಿಂದ ಈವರೆಗೂ ಕುತೂಹಲವನ್ನು ಕಾಪಾಡಿಕೊಂಡೇ ಬರುತ್ತಿದೆ. ಶಾರುಖ್ ಈ ಸಿನಿಮಾದಲ್ಲಿ ಮತ್ತೆ ಸಿಕ್ಸ್ ಪ್ಯಾಕ್ ನಲ್ಲಿ ಕಾಣಿಸಿಕೊಂಡು ಅಭಿಮಾನಿಗಳು ಸಂಭ್ರಮಿಸುವಂತೆ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೇಸರಿ ಬಿಕಿನಿಗೆ ನೆಟ್ಟಿಗರು ಗರಂ: ಬೈಕಾಟ್ ಪಠಾಣ್ ಟ್ರೆಂಡ್

    ಕೇಸರಿ ಬಿಕಿನಿಗೆ ನೆಟ್ಟಿಗರು ಗರಂ: ಬೈಕಾಟ್ ಪಠಾಣ್ ಟ್ರೆಂಡ್

    ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ನಟನೆಯ ಪಠಾಣ್ ಸಿನಿಮಾದ ‘ಬೇಷರಂ ರಂಗ್’ ಹಾಡು ಎರಡು ದಿನಗಳ ಹಿಂದೆಯಷ್ಟೇ ರಿಲೀಸ್ ಆಗಿದೆ. ಈ ಹಾಡನ್ನು ಹದಿನೈದು ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ. ಆದರೆ, ಈ ಹಾಡಿನಲ್ಲಿ ದೀಪಿಕಾ ಹಾಕಿರುವ ಡ್ರೆಸ್ ಇದೀಗ ವಿವಾದಕ್ಕೆ ಕಾರಣವಾಗಿದೆ. ಕೇಸರಿಯ ಬಿಕಿನಿಯಲ್ಲಿ ದೀಪಿಕಾ ಕಾಣಿಸಿಕೊಂಡಿದ್ದು, ಈ ಹಾಡಿನ ಸಾಲಿಗೆ ಹಾಕಿರುವ ಡ್ರೆಸ್ ಗೂ ಹೊಂದಾಣಿಕೆ ಮಾಡಿಕೊಂಡು ನೆಟ್ಟಿಗರು ಗರಂ ಆಗಿದ್ದಾರೆ. ಈ ಕಾರಣದಿಂದಾಗಿ ಚಿತ್ರಕ್ಕೆ ಬಹಿಷ್ಕಾರ ಹಾಕುವಂತೆ ಸೋಷಿಯಲ್ ಮೀಡಿಯಾದಲ್ಲಿ ಕರೆ ನೀಡುತ್ತಿದ್ದಾರೆ.

    ಬೇಷರಂ ರಂಗ್ ಹಾಡಿನಲ್ಲಿ ದೀಪಿಕಾ ಕೇಸರಿ ಬಣ್ಣದ ತುಂಡುಡುಗೆ ತೊಟ್ಟಿದ್ದಾರೆ. ‘ಬೇಷರಂ ರಂಗ್’ ಅಂದರೆ ಕನ್ನಡದಲ್ಲಿ ನಾಚಿಕೆ ಇಲ್ಲದ ಬಣ್ಣ ಎಂದಾಗುತ್ತದೆ. ಕೇಸರಿ ಬಣ್ಣಕ್ಕೆ ನಾಚಿಕೆ ಇಲ್ಲದ ಬಣ್ಣ ಎಂದು ಜರಿದಿದ್ದಾರೆ ಎಂದು ಹೋಲಿಕೆ ಮಾಡಿಕೊಂಡು ಹಲವರು ಗರಂ ಆಗಿದ್ದಾರೆ. ಬೇಕು ಅಂತಾನೇ ಈ ರೀತಿ ಕೇಸರಿ ಬಣ್ಣಕ್ಕೆ ಅವಮಾನ ಮಾಡಲಾಗಿದೆ ಎಂದು ಕಾಮೆಂಟ್ ಕೂಡ ಮಾಡುತ್ತಿದ್ದಾರೆ. ಹೀಗಾಗಿ ಬೈಕಾಟ್ ಪಠಾಣ್ ಟ್ರೆಂಡ್ ಹೆಚ್ಚಿದೆ.

    ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಮೂಲಕ ಸಾಕಷ್ಟು ಭರವಸೆ ಮೂಡಿಸಿರುವ ಈ ಸಿನಿಮಾ, ಮೊದಲ ಹಾಡಿನ ಮೂಲಕ ಪ್ರಚಾರ ಆರಂಭಿಸಲಿದೆ. ದೀಪಿಕಾ ಪಡುಕೋಣೆ ಮತ್ತು ಶಾರುಖ್ ಖಾನ್ ಕಾಂಬಿಷೇನ್ ನ ಸಿನಿಮಾ ಇದಾಗಿದ್ದು, ಶುರುವಿನಿಂದ ಈವರೆಗೂ ಕುತೂಹಲವನ್ನು ಕಾಪಾಡಿಕೊಂಡೇ ಬರುತ್ತಿದೆ. ಶಾರುಖ್ ಈ ಸಿನಿಮಾದಲ್ಲಿ ಮತ್ತೆ ಸಿಕ್ಸ್ ಪ್ಯಾಕ್ ನಲ್ಲಿ ಕಾಣಿಸಿಕೊಂಡು ಅಭಿಮಾನಿಗಳು ಸಂಭ್ರಮಿಸುವಂತೆ ಮಾಡಿದ್ದಾರೆ. ಇದನ್ನೂ ಓದಿ: `ಕಾಂತಾರ’ ನೋಡಿ ತುಂಬಾ ಕಲಿತೆ: ರಿಷಬ್ ಚಿತ್ರಕ್ಕೆ ಹೃತಿಕ್ ರೋಷನ್ ಮೆಚ್ಚುಗೆ

    ಹಾಡು ರಿಲೀಸ್ ಆಗುತ್ತಿರುವ ವಿಷಯವನ್ನು ಸ್ವತಃ ಶಾರುಖ್ ಖಾನ್ ಅವರೇ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದರು. ಈ ಹಾಡನ್ನು ನೋಡಲು ತಾವೂ ಕೂಡ ಕಾತರದಿಂದ ಕಾಯುತ್ತಿರುವುದಾಗಿಯೂ ಅವರು ಹೇಳಿಕೊಂಡಿದ್ದರು. ಅಲ್ಲದೇ ಅಭಿಮಾನಿಗಳು ಕೂಡ  ಅಷ್ಟೇ ಕುತೂಹಲದಿಂದಲೇ ಹಾಡಿಗಾಗಿ ಕಾದಿದ್ದರು. ಬಿಡುಗಡೆಯಾದ ಹಾಡಿಗೆ ಅಭಿಮಾನಿಗಳು ಕೂಡ ಜೈಕಾರ ಹಾಕಿದ್ದಾರೆ.

    ಇದು ಶಾರುಖ್ ಖಾನ್ ವೃತ್ತಿ ಜೀವನದ ಮಹತ್ವದ ಸಿನಿಮಾ ಎನ್ನಲಾಗುತ್ತಿದ್ದು, ಸತತ ಸೋಲಿನ ಬಳಿಕೆ ಬಾಲಿವುಡ್ ಗೆ ಈ ಸಿನಿಮಾ ಶಕ್ತಿ ತುಂಬಲಿದೆ ಎಂದು ಹೇಳಲಾಗುತ್ತಿದೆ. ದೀಪಿಕಾ ಪಡುಕೋಣೆ ಮತ್ತು ಶಾರುಖ್ ಕಾಂಬಿನೇಷನ್ ಇರುವುದರಿಂದ ಬಾಕ್ಸ್ ಆಫೀಸಿನಲ್ಲೂ ಈ ಸಿನಿಮಾ ಹಿಟ್ ಆಗಲಿದೆ ಎನ್ನುವುದು ಸಿನಿ ಪಂಡಿತರ ಲೆಕ್ಕಾಚಾರ. ಇಂದು ಬಿಡುಗಡೆ ಆಗಿರುವ ಹಾಡು ಅಂಥದ್ದೊಂದು ಭರವಸೆಯನ್ನೂ ಮೂಡಿಸಿದೆ.

    Live Tv
    [brid partner=56869869 player=32851 video=960834 autoplay=true]

  • ವೈಷ್ಣೋದೇವಿ ದರ್ಶನಕ್ಕೆ ಮುಖ ಮುಚ್ಚಿಕೊಂಡು ಬಂದ ಶಾರುಖ್ ಖಾನ್

    ವೈಷ್ಣೋದೇವಿ ದರ್ಶನಕ್ಕೆ ಮುಖ ಮುಚ್ಚಿಕೊಂಡು ಬಂದ ಶಾರುಖ್ ಖಾನ್

    ಮ್ಮ ನಟನೆಯ ಪಠಾಣ್ ಸಿನಿಮಾದ ಚೊಚ್ಚಲು ಹಾಡು ರಿಲೀಸ್ ಆದ ಬೆನ್ನಲ್ಲೇ ಬಾಲಿವುಡ್ ನಟ ಶಾರುಖ್ ಖಾನ್ ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ವೈಷ್ಣೋದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಬೆಳಗ್ಗೆಯೇ ದೇವಸ್ಥಾನಕ್ಕೆ ಆಗಮಿಸಿದ್ದ ಶಾರುಖ್, ಮುಖ ಮುಚ್ಚಿಕೊಂಡು ದೇವರ ದರ್ಶನ ಪಡೆದಿದ್ದಾರೆ. ಅವರ ಈ ನಡೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

    ಬಾಡಿಗಾಡ್ ಜೊತೆ ಕಾರಿನಲ್ಲಿ ಬಂದಿಳಿದ ಶಾರುಖ್, ಕಾರಿನಿಂದ ಇಳಿದು ನೇರವಾಗಿ ವೈಷ್ಣೋದೇವಿ ದೇವಸ್ಥಾನದ ಒಳಗೆ ಹೋಗಿದ್ದಾರೆ. ದೇವಸ್ಥಾನದ ಒಳಗೆ ಬಾಡಿಗಾಡ್ ಜೊತೆ ಹೋಗುತ್ತಿರುವ ಶಾರುಖ್ ವಿಡಿಯೋ ಕೂಡ ವೈರಲ್ ಆಗಿದ್ದು, ಆ ವಿಡಿಯೋದಲ್ಲಿ ಶಾರುಖ್ ಮುಖಕ್ಕೆ ಬಟ್ಟೆಯಿಂದ ಮುಚ್ಚಿದ್ದಾರೆ. ಶಾರುಖ್ ಬಂದಿರುವ ವಿಚಾರ ತಿಳಿಯುತ್ತಿದ್ದಂತೆಯೇ ಅಲ್ಲಿದ್ದವರು ಅವರನ್ನು ಸುತ್ತುವರೆದಿದ್ದಾರೆ. ಬಾಡಿಗಾಡ್ ಅಲ್ಲಿ ನೆರದಿದ್ದ ಜನರನ್ನು ಸರಿಸುತ್ತಾ ದೇವರ ದರ್ಶನಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

    ಪಠಾನ್ ಸಿನಿಮಾ ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಮೂಲಕ ಸಾಕಷ್ಟು ಭರವಸೆ ಮೂಡಿಸಿರುವ ಈ ಸಿನಿಮಾ, ಮೊದಲ ಹಾಡಿನ ಮೂಲಕ ಪ್ರಚಾರ ಆರಂಭಿಸಲಿದೆ. ದೀಪಿಕಾ ಪಡುಕೋಣೆ ಮತ್ತು ಶಾರುಖ್ ಖಾನ್ ಕಾಂಬಿಷೇನ್ ನ ಸಿನಿಮಾ ಇದಾಗಿದ್ದು, ಶುರುವಿನಿಂದ ಈವರೆಗೂ ಕುತೂಹಲವನ್ನು ಕಾಪಾಡಿಕೊಂಡೇ ಬರುತ್ತಿದೆ.

    ನಿನ್ನೆ ಹಾಡು ರಿಲೀಸ್ ಆಗುತ್ತಿರುವ ವಿಷಯವನ್ನು ಸ್ವತಃ ಶಾರುಖ್ ಖಾನ್ ಅವರೇ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದರು. ಈ ಹಾಡನ್ನು ನೋಡಲು ತಾವೂ ಕೂಡ ಕಾತರದಿಂದ ಕಾಯುತ್ತಿರುವುದಾಗಿಯೂ ಅವರು ಹೇಳಿಕೊಂಡಿದ್ದರು. ಅಲ್ಲದೇ ಅಭಿಮಾನಿಗಳು ಕೂಡ  ಅಷ್ಟೇ ಕುತೂಹಲದಿಂದಲೇ ಹಾಡಿಗಾಗಿ ಕಾದಿದ್ದರು. ಬಿಡುಗಡೆಯಾದ ಹಾಡಿಗೆ ಅಭಿಮಾನಿಗಳು ಕೂಡ ಜೈಕಾರ ಹಾಕಿದ್ದಾರೆ. ಇದನ್ನೂ ಓದಿ: ‘ಸೀತಾ ಸರ್ಕಲ್ ಶ್ರೀ ಕೃಷ್ಣನ್ ಮನೆ’ ಸಿನಿಮಾ ಫಸ್ಟ್ ಲುಕ್ ರಿಲೀಸ್

    ಇದು ಶಾರುಖ್ ಖಾನ್ ವೃತ್ತಿ ಜೀವನದ ಮಹತ್ವದ ಸಿನಿಮಾ ಎನ್ನಲಾಗುತ್ತಿದ್ದು, ಸತತ ಸೋಲಿನ ಬಳಿಕೆ ಬಾಲಿವುಡ್ ಗೆ ಈ ಸಿನಿಮಾ ಶಕ್ತಿ ತುಂಬಲಿದೆ ಎಂದು ಹೇಳಲಾಗುತ್ತಿದೆ. ದೀಪಿಕಾ ಪಡುಕೋಣೆ ಮತ್ತು ಶಾರುಖ್ ಕಾಂಬಿನೇಷನ್ ಇರುವುದರಿಂದ ಬಾಕ್ಸ್ ಆಫೀಸಿನಲ್ಲೂ ಈ ಸಿನಿಮಾ ಹಿಟ್ ಆಗಲಿದೆ ಎನ್ನುವುದು ಸಿನಿ ಪಂಡಿತರ ಲೆಕ್ಕಾಚಾರ. ಇಂದು ಬಿಡುಗಡೆ ಆಗಿರುವ ಹಾಡು ಅಂಥದ್ದೊಂದು ಭರವಸೆಯನ್ನೂ ಮೂಡಿಸಿದೆ.

    Live Tv
    [brid partner=56869869 player=32851 video=960834 autoplay=true]