Tag: pathankot

  • ಪಾಕಿಸ್ತಾನದ ನುಸುಳುಕೋರನನ್ನು ಹೊಡೆದುರುಳಿಸಿದ ಬಿಎಸ್‌ಎಫ್

    ಪಾಕಿಸ್ತಾನದ ನುಸುಳುಕೋರನನ್ನು ಹೊಡೆದುರುಳಿಸಿದ ಬಿಎಸ್‌ಎಫ್

    ನವದೆಹಲಿ: ಅಕ್ರಮವಾಗಿ ಗಡಿ ದಾಟಲು ಯತ್ನಿಸುತ್ತಿದ್ದ ಪಾಕಿಸ್ತಾನದ ನುಸುಳುಕೋರನೊಬ್ಬನನ್ನು (Pakistani Intruder) ಗಡಿ ಭದ್ರತಾ ಪಡೆ (BSF) ಹೊಡೆದುರುಳಿಸಿದ ಘಟನೆ ಪಠಾಣ್‌ಕೋಟ್‌ನಲ್ಲಿರುವ (Pathankot) ಅಂತಾರಾಷ್ಟ್ರೀಯ ಗಡಿಯಲ್ಲಿ ನಡೆದಿದೆ.

    ಪಠಾಣ್‌ಕೋಟ್‌ನ ಗಡಿ ಪ್ರದೇಶದ ಬಿಒಪಿ ತಾಶ್‌ಪತನ್‌ನಲ್ಲಿ ಈ ಘಟನೆ ನಡೆದಿದೆ. ಈ ಭಾಗದಲ್ಲಿ ನಿಯೋಜಿಸಿದ್ದ ಬಿಎಸ್‌ಎಫ್ ಸಿಬ್ಬಂದಿ ನುಸುಳುಕೋರನ ಚಲನವಲನಗಳನ್ನು ಗಮನಿಸಿ ಅನುಮಾನಗೊಂಡಿದ್ದಾರೆ. ಇದನ್ನೂ ಓದಿ: ಪತ್ನಿ ಕೊಲೆ ಮಾಡಿ ಅಂತ್ಯಕ್ರಿಯೆ – ಕೊನೆ ಕ್ಷಣದಲ್ಲಿ ಎಂಟ್ರಿ ಕೊಟ್ಟ ಪೊಲೀಸರು, ಅರೆಸ್ಟ್ ಆದ ಗಂಡ

    ತಕ್ಷಣವೇ ಕಾರ್ಯಪ್ರವೃತ್ತರಾದ ಬಿಎಸ್‌ಎಫ್ ಪಡೆ ನುಸುಳುಕೋರನಿಗೆ ಎಚ್ಚರಿಕೆ ನೀಡಿದೆ. ಹಲವು ಬಾರಿ ಎಚ್ಚರಿಕೆ ನೀಡಿದ ಬಳಿಕವೂ ನುಸುಳುಕೋರ ಗಡಿ ದಾಟಲು ಪ್ರಯತ್ನಿಸಿದ್ದಾನೆ. ಈ ವೇಳೆ ಬಿಎಸ್‌ಎಫ್ ಸಿಬ್ಬಂದಿ ಆತನನ್ನು ಗುಂಡಿಕ್ಕಿ ಕೊಂದಿದ್ದಾರೆ. ಇದನ್ನೂ ಓದಿ: ಶ್ರೀ ಸಾಯಿ ಮಿನರಲ್ಸ್ ಗಣಿಗಾರಿಕೆ ಅಕ್ರಮ ಕೇಸ್‌ – ಹೆಚ್‌ಡಿಕೆ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿದ SIT

    ಒಳನುಸುಳುವಿಕೆಗೆ ಕಾರಣ ಮತ್ತು ಅದರ ಗುರುತು ಪತ್ತೆ ಹಚ್ಚಲು ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಹೇಮಾವತಿ ಎಡದಂಡೆ ನಾಲೆಗಳಿಗಿಲ್ಲ ನೀರು – ಕೆ.ಆರ್ ಪೇಟೆ, ನಾಗಮಂಗಲ ರೈತರು ಕಂಗಾಲು

  • ಚಾಲಕನಿಲ್ಲದೇ 70 ಕಿಮೀ ಚಲಿಸಿದ ಗೂಡ್ಸ್ ರೈಲು – ಮರದ ದಿಮ್ಮಿಗಳನ್ನು ಹಳಿಗೆ ಹಾಕಿ ತಡೆದು ನಿಲ್ಲಿಸಿದ ಸಿಬ್ಬಂದಿ

    ಚಾಲಕನಿಲ್ಲದೇ 70 ಕಿಮೀ ಚಲಿಸಿದ ಗೂಡ್ಸ್ ರೈಲು – ಮರದ ದಿಮ್ಮಿಗಳನ್ನು ಹಳಿಗೆ ಹಾಕಿ ತಡೆದು ನಿಲ್ಲಿಸಿದ ಸಿಬ್ಬಂದಿ

    ಚಂಡೀಗಢ: ರೈಲಿನಿಂದ ಇಳಿಯುವ ಮುನ್ನ ಲೋಕೋಪೈಲೆಟ್ ಹ್ಯಾಂಡ್ ಬ್ರೇಕ್ ಹಾಕಲು ಮರೆತ ಪರಿಣಾಮ ಗೂಡ್ಸ್ ರೈಲೊಂದು ಸುಮಾರು 70 ಕಿಲೋಮೀಟರ್‌ಗಳವರೆಗೂ ವೇಗವಾಗಿ ಚಲಿಸಿದ ಘಟನೆ ಪಂಜಾಬ್‍ನಲ್ಲಿ (Punjab) ನಡೆದಿದೆ.

    ಕಲ್ಲುಗಳನ್ನು ತುಂಬಿದ್ದ ಗೂಡ್ಸ್ ರೈಲನ್ನು ಪಠಾಣ್‍ಕೋಟ್ (Pathankot) ನಿಲ್ದಾಣದಲ್ಲಿ ನಿಲ್ಲಿಸಲಾಗಿತ್ತು. ಬಳಿಕ ಚಾಲಕ ರೈಲಿನಿಂದ ಇಳಿದಿದ್ದರು. ಈ ವೇಳೆ ರೈಲು ಇದ್ದಕ್ಕಿದ್ದಂತೆ ಚಲಿಸಲು ಆರಂಭಿಸಿದೆ. ಸ್ವಲ್ಪ ಸಮಯದ ಬಳಿಕ ರೈಲು ಸುಮಾರು 100 ಕಿ.ಮೀ ವೇಗವನ್ನು ಪಡೆದುಕೊಂಡು, ಐದು ರೈಲ್ವೇ ನಿಲ್ದಾಣಗಳನ್ನು ದಾಟಿ 70 ಕಿಲೋಮೀಟರ್ ವರೆಗೂ ಸಂಚರಿಸಿದೆ. ಇದನ್ನೂ ಓದಿ: ಸುರಪುರ ಕಾಂಗ್ರೆಸ್‌ ಶಾಸಕ ರಾಜಾ ವೆಂಕಟಪ್ಪ ನಾಯಕ ಹೃದಯಾಘಾತದಿಂದ ನಿಧನ

    ಬಳಿಕ ರೈಲ್ವೇ ಅಧಿಕಾರಿಗಳು ರೈಲನ್ನು ತಡೆಯಲು ಸಿದ್ಧತೆ ಮಾಡಿಕೊಂಡು ರೈಲ್ವೇ ಹಳಿಗಳ ಮೇಲೆ ಮರದ ದಿಮ್ಮಿಗಳನ್ನು ಹಾಕಿದ ನಂತರ ರೈಲು ನಿಂತಿದೆ. ಘಟನೆಯಲ್ಲಿ ಯಾವುದೇ ಅನಾಹುತಗಳು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಮುಂದಿನ ದಿನಗಳಲ್ಲಿ ಇಂತಹ ಘಟನೆಗಳನ್ನು ನಡೆಯದಂತೆ ಎಚ್ಚರವಹಿಸುತ್ತೇವೆ. ಇಂದಿನ ಘಟನೆಯಲ್ಲಿ ಸುರಕ್ಷತಾ ಲೋಪಗಳನ್ನು ಗುರುತಿಸಲು ಪ್ರಯತ್ನಿಸುತ್ತಿದ್ದೇವೆ. ಈ ಘಟನೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ರೈಲು ವೇಗವಾಗಿ ಸಂಚರಿಸುತ್ತಿರುವ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ದೇವಾಲಯದ ಹಣ ಸರ್ಕಾರದ ಒಳ್ಳೆಯ ಕೆಲಸಕ್ಕೆ ಉಪಯೋಗವಾಗುತ್ತಿದೆ: ಬಿಜೆಪಿ ವಿರುದ್ಧ ಅರ್ಚಕರ ಸಂಘ ಕಿಡಿ

  • ಯೋಧನ ಗುಂಡಿನ ದಾಳಿಗೆ ಇಬ್ಬರು ಅಧಿಕಾರಿಗಳು ಸಾವು

    ಯೋಧನ ಗುಂಡಿನ ದಾಳಿಗೆ ಇಬ್ಬರು ಅಧಿಕಾರಿಗಳು ಸಾವು

    ಚಂಡೀಗಢ: ಗುಂಡಿನ ದಾಳಿಗೆ ಇಬ್ಬರು ಸೇನಾ ಅಧಿಕಾರಿಗಳು ಬಲಿಯಾಗಿರುವ ಘಟನೆ ಪಂಜಾಬ್‌ನ ಪಠಾಣ್‌ಕೋಟ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಭಾರತೀಯ ಸೇನೆಗೆ ಸೇರಿದ ಯೋಧನೇ ಇಬ್ಬರು ಅಧಿಕಾರಿಗಳ ಮೇಲೆ ಗುಂಡು ಹಾರಿಸಿದ್ದಾನೆ ಎಂದು ವರದಿಯಾಗಿದೆ. ಇದನ್ನೂ ಓದಿ: ಅಗ್ನಿಪಥ್‌ಗೆ ಭರ್ಜರಿ ಪ್ರತಿಕ್ರಿಯೆ – 4 ದಿನಕ್ಕೆ 94 ಸಾವಿರ ಅರ್ಜಿ

    ಅಧಿಕಾರಿಗಳು ಮಲಗಿದ್ದ ವೇಳೆ ಗುಂಡಿನ ದಾಳಿ ನಡೆದಿದೆ. ಘಟನೆ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: 60 ಕಿ.ಮೀ ಒಳಗಿನ ಎಲ್ಲ ಟೋಲ್ ತೆರವಿಗೆ ಸೂಚಿಸಿದ್ರೂ ದ.ಕನ್ನಡ ಜಿಲ್ಲೆಯಲ್ಲಿದೆ 48 ಕಿ.ಮೀನಲ್ಲಿ 4 ಟೋಲ್

    ಯೋಧನೇ ಅಧಿಕಾರಿಗಳಿಗೆ ಗುಂಡು ಹಾರಿಸಿರುವ ಹಿಂದಿನ ಉದ್ದೇಶ ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

    Live Tv

  • ಕಥುವಾ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ – 6 ಮಂದಿ ದೋಷಿಗಳು

    ಕಥುವಾ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ – 6 ಮಂದಿ ದೋಷಿಗಳು

    ನವದೆಹಲಿ: ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಜಮ್ಮು-ಕಾಶ್ಮೀರದ ಕಥುವಾ ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರು ದೋಷಿಗಳು ಎಂದು ಪಂಜಾಬ್‍ನ ಪಠಾಣ್‍ಕೋಟ್ ನ್ಯಾಯಾಲಯವು ತೀರ್ಪು ನೀಡಿದೆ.

    ಕಳೆದ ವರ್ಷ ಜೂನ್ ಮೊದಲ ವಾರದಲ್ಲಿ 8 ವರ್ಷದ ಬಾಲಕಿಯನ್ನು ಅತ್ಯಾಚಾರಗೈದು ಕೊಲೆ ಮಾಡಲಾಗಿತ್ತು. ಆದರೆ ಪ್ರಕರಣದ ಕುರಿತು ವಿಚಾರಣೆಯ ವಿಳಂಬಕ್ಕೆ ಅಸಮಾಧಾನ ಹೊರ ಹಾಕಿದ್ದ ಸುಪ್ರೀಂ ಕೋರ್ಟ್ ಪ್ರಕರಣವನ್ನು ಶೀಘ್ರವೇ ಮುಗಿಸಬೇಕು ಆದೇಶ ನೀಡಿ ಪ್ರಕರಣವನ್ನು ಪಠಾಣ್‍ಕೋಟ್ ನ್ಯಾಯಾಲಯಕ್ಕೆ ವರ್ಗಾಯಿಸಿತ್ತು.

    ಸುಪ್ರೀಂ ಕೋರ್ಟ್ ಆದೇಶದನ್ವಯ ವಿಚಾರಣೆ ನಡೆಸಿದ ಪಂಜಾಬಿನ ಪಠಾಣ್ ಕೋಟ್ ನ್ಯಾಯಾಲಯವು, 8 ಜನ ಆರೋಪಿಗಳ ಪಟ್ಟಿಯಲ್ಲಿ 6 ಜನರು ಅಪರಾಧಿಗಳು ಎಂದು ತೀರ್ಪು ನೀಡಿದೆ. ಅಪರಾಧಿಗಳ ಶಿಕ್ಷೆಯ ಪ್ರಮಾಣವನ್ನು ಇಂದು ಮಧ್ಯಾಹ್ನದ ಪ್ರಕಟಿಸಲಾಗುತ್ತದೆ ಎಂದು ಕೋರ್ಟ್ ತಿಳಿಸಿದೆ.

    ಅಪರಾಧಿಗಳ ಪಟ್ಟಿಯಲ್ಲಿ ಸಾಂಜಿ ರಾಮ್, ತಿಲಕ್ ರಾಜ್, ಅರವಿಂದ್ ದತ್ತಾ ಪ್ರಮುಖರು. ಈ ಪ್ರಕಣವನ್ನು ಮುಚ್ಚಿ ಹಾಕಲು ಸಹಕರಿಸಿದ್ದ ಪೊಲೀಸ್ ಅಧಿಕಾರಿಗಳಾದ ದೀಪಕ್ ಕಜೂರಿಯ ವಿರುದ್ಧವು ಆರೋಪ ಸಾಬೀತಾಗಿದೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಥುವ ಗ್ರಾಮದ ಮುಖಂಡ ಸಂಜಿ ರಾಮ್, ಆತನ ಮಗ ವಿಶಾಲ್, ಗೆಳೆಯರಾದ ಆನಂದ್ ದತ್ತ ಹಾಗೂ ಪ್ರಕರಣದಲ್ಲಿ ಅತ್ಯಾಚಾರಿಗಳಿಗೆ ಸಹಕರಿಸಿದ ಪೊಲೀಸ್ ಅಧಿಕಾರಿಗಳಾದ ದೀಪಕ್ ಕಜೂರಿಯ, ಸುರೇಂದ್ರ ವರ್ಮ, ಮುಖ್ಯ ಪೇದೆ ತಿಲಕ್ ರಾಜ್ ಮೇಲಿನ ಆರೋಪ ಸಾಬೀತಾಗಿದೆ ಎಂದು ಕೋರ್ಟ್ ತೀರ್ಪಿನಲ್ಲಿ ಹೇಳಿದೆ. ಪ್ರಕರಣವನ್ನು ಜೂನ್ 3 ರಂದು ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ತೇಜ್‍ವಿಂದರ್ ಸಿಂಗ್ ಜೂನ್ 10ಕ್ಕೆ ತೀರ್ಪನ್ನು ಕಾಯ್ದಿರಿಸಿದ್ದರು.

    ಏನಿದು ಪ್ರಕರಣ?:
    ಸಂಜೀ ರಾಮ್ ಹಾಗೂ ಆತನ ಗುಂಪು ಜಮ್ಮು-ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ನೆಲೆಸಿದ್ದ ಅಲ್ಪಸಂಖ್ಯಾತ ಅಲೆಮಾರಿಗಳನ್ನು ತೆರುವುಗೊಳಿಸಲು ಷಡ್ಯಂತ್ರ ರೂಪಿಸಿತ್ತು. ಹೀಗಾಗಿ ಜಿಲ್ಲೆಯ 8 ವರ್ಷದ ಬಾಲಕಿ ಕುದುರೆಗೆ ಮೇವು ತಿನ್ನಿಸಲು ಮನೆಯಿಂದ ಹೊರ ಹೋಗಿದ್ದಾಗ ಆಕೆಯನ್ನು ಅಪಹರಿಸಿದ್ದರು. ಬಾಲಕಿಯನ್ನು ದೇವಾಲಯದಲ್ಲಿ ಇರಿಸಿ ಮೂರು ದಿನಗಳ ಕಾಲ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದರು ಎನ್ನುವ ಆರೋಪ ಕೇಳಿ ಬಂದಿತ್ತು.

    ಬಾಲಕಿ ಅಪಹರಣವಾದ ಮೂರು ದಿನಗಳ ನಂತರ ಆಕೆಯ ಮೃತ ದೇಹ ದೇವಾಲಯದ ಬಳಿ ಪತ್ತೆಯಾಗಿತ್ತು. ಈ ಪ್ರಕರಣ ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ದೇಶದಲ್ಲಿ ವಿವಿಧೆಡೆ ಪ್ರತಿಭಟನೆ ನಡೆಸಿ, ಬಾಲಕಿ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು. ಮಗಳನ್ನು ಕಳೆದುಕೊಂಡ ಪೋಷಕರು, ನಾವು ಜೀವ ಬೆದರಿಕೆ ಎದುರಿಸುತ್ತಿದ್ದೇವೆ. ಇಲ್ಲಿ ನ್ಯಾಯ ಸಿಗುವ ವಿಶ್ವಾಸವಿಲ್ಲ ಎಂದು ಸುಪ್ರೀಂ ಕೋರ್ಟ್ ಗೆ ದೂರು ನೀಡಿದ್ದರು.

    ಮೃತ ಬಾಲಕಿಯ ಪೋಷಕರ ಮನವಿಗೆ ಸ್ಪಂದಿಸಿದೆ ಸುಪ್ರೀಂ ಕೋರ್ಟ್ ಪ್ರಕರಣವನ್ನು ಜಮ್ಮು-ಕಾಶ್ಮೀರದಿಂದ 30 ಕಿ.ಮೀ ದೂರ ವಿರುವ ಪಂಜಾಬ್ ಪ್ರಾಂತ್ಯದ ಪಠಾಣ್‍ಕೋಟ್‍ಗೆ ಹಸ್ತಾಂತರಿಸಿತ್ತು. ಅಷ್ಟೇ ಅಲ್ಲದೆ ಪ್ರತಿದಿನ ವಿಡಿಯೋ ಕ್ಯಾಮೆರಾ ಮೂಲಕ ವಿಚಾರಣೆ ನಡೆಸಿ ಶೀಘ್ರದಲ್ಲಿ ತೀರ್ಪು ನೀಡಬೇಕು ಎಂದು ಸೂಚಿಸಿತ್ತು.

  • ಪಠಾಣ್‍ಕೋಟ್ ಹುತಾತ್ಮ ಯೋಧ ನಿರಂಜನ್‍ಗೆ ರಾಜ್ಯ ಸರ್ಕಾರದಿಂದ ಅವಮಾನ

    ಪಠಾಣ್‍ಕೋಟ್ ಹುತಾತ್ಮ ಯೋಧ ನಿರಂಜನ್‍ಗೆ ರಾಜ್ಯ ಸರ್ಕಾರದಿಂದ ಅವಮಾನ

    ಬೆಂಗಳೂರು: ಕರುನಾಡ ಮಣ್ಣಿನ ವೀರ ಯೋಧ ಹುತಾತ್ಮ ಲೆಫ್ಟಿನೆಂಟ್ ಕರ್ನಲ್ ನಿರಂಜನ್ ಸಮಾಧಿಯಲ್ಲೂ ರಾಜಕೀಯದಾಟ, ರಸ್ತೆಗೆ ಯೋಧನ ಹೆಸರಿಡಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸಚಿವರೇ ಅಡ್ಡ, ಬೆಂಗಳೂರಿನ ವೀರ ಯೋಧನಿಗೆ ಕನ್ನಡ ಮಣ್ಣಿನಲ್ಲೇ ಅವಮಾನ.

    ಹೌದು. ಪಂಜಾಬಿನಲ್ಲಿರುವ ವಾಯುನೆಲೆ ಪಠಾಣ್ ಕೋಟ್‍ನಲ್ಲಿ ಲೆಫ್ಟಿನೆಂಟ್ ನಿರಂಜನ್ ಎದೆಯುಬ್ಬಿಸಿ ಉಗ್ರರ ವಿರುದ್ಧ ಹೋರಾಡಿ ವೀರಮರಣವನ್ನಪ್ಪಿದ್ದರು. ಕನ್ನಡ ಮಣ್ಣಿನ ಯೋಧ, ನಮ್ಮ ಬೆಂಗಳೂರಿನ ಹೆಮ್ಮೆಯ ನಿರಂಜನ್ ದೇಶಕ್ಕಾಗಿ ಪ್ರಾಣವನ್ನೇ ಕೊಟ್ಟರು.

    ಆದರೆ ನಮ್ಮ ನೀಚ ರಾಜಕೀಯ ವ್ಯವಸ್ಥೆ ನಿರಂಜನ್ ಹೆಸರನ್ನು ರಸ್ತೆಗೆ ಇಡುವುದಕ್ಕೆ ರಾಜಕೀಯದಾಟ ಆಡುತ್ತಿದೆ. ದೊಡ್ಡ ಬೊಮ್ಮಸಂದ್ರ ಹೆಬ್ಬಾಗಿಲಿನಿಂದ ವಿದ್ಯಾರಣ್ಯಪುರದ ನಂಜಪ್ಪ ವೃತ್ತದವರೆಗಿನ ಮುಖ್ಯರಸ್ತೆಗೆ ನಿರಂಜನ್ ಹೆಸರು ಇಡೋದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ರು. ಅಂತಿಮ ತೀರ್ಮಾನವೂ ಆಗಿತ್ತು.

    ಈ ಮಧ್ಯೆ ಇದಕ್ಕಿದ್ದ ಹಾಗೆ ಕೃಷಿ ಸಚಿವ ಕೃಷ್ಣಬೈರೇಗೌಡರು ಯೋಧನ ಹೆಸರು ಬೇಡ, ಸ್ವಾತಂತ್ರ್ಯ ಹೋರಾಟಗಾರ ಪೇಟಾ ಸಿದ್ದಪ್ಪನ ಹೆಸರು ಇಡಿ ಎಂದು ಬಿಬಿಎಂಪಿಗೆ ಆದೇಶ ಕೊಟ್ಟು ಪತ್ರ ಬರೆದಿದ್ದಾರೆ. ಅಸಲಿಗೆ ಈ ಹೆಸರಿನ ಸ್ವಾತಂತ್ರ್ಯ ಹೋರಾಟಗಾರರು ಯಾರು ಇಲ್ಲ ಎಂದು ದೊರೆಸ್ವಾಮಿಯೇ ಹೇಳಿದ್ದಾರಂತೆ. ಆದ್ರೆ ಮಿನಿಸ್ಟರ್ ಮಾತನ್ನು ಪಾಲಿಸೋದಕ್ಕೆ ಮೇಯರ್ ಅವರು ಮುಂದಾಗುತ್ತಿದ್ದಾರೆ ಎಂದು ನಿರಂಜನ್ ಸ್ನೇಹಿತ ಶಶಾಂಕ್ ಹೇಳಿದ್ದಾರೆ.

    ಶೌರ್ಯ ಚಕ್ರ ಪ್ರಶಸ್ತಿ ವಾಪಾಸ್:
    ಹರ್ಯಾಣ ಸರ್ಕಾರ ನಿರಂಜನ್ ಅವರ ಹೆಸರಿನಲ್ಲಿ ಆಡಿಟೋರಿಯಂ ಸ್ಥಾಪನೆ ಮಾಡಿದೆ. ಆದರೆ ಇಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಸಚಿವರಿಗೆ ನಿಜಕ್ಕೂ ಮಾನ ಮರ್ಯಾದೆ ಇಲ್ಲ, ನಿರಂಜನ್ ಹೆತ್ತವರು ಈ ಬೆಳವಣಿಗೆ ನೋಡಿ ಕಣ್ಣೀರಿಡುತ್ತಿದ್ದಾರೆ. ಕೇಂದ್ರ ಸರ್ಕಾರ ನಿರಂಜನ್‍ಗೆ ಶೌರ್ಯ ಚಕ್ರ ಪ್ರಶಸ್ತಿ ನೀಡಿದೆ. ಆದ್ರೇ ನಮ್ಗೆ ಈಗ ಬೇಸರವಾಗಿದೆ, ಇದನ್ನು ವಾಪಾಸ್ ಮಾಡುವ ಬಗ್ಗೆಯೂ ಯೋಚನೆ ಮಾಡುತ್ತೇವೆ ಅಂತಾ ಶಶಾಂಕ್ ಹೇಳಿದ್ದಾರೆ.

    ನಿರಂಜನ್ ಯಾರು?
    2016ರ ಜನವರಿ 1 ಮತ್ತು 2ರ ನಡುರಾತ್ರಿಯಲ್ಲಿ ಉಗ್ರರು ಪಠಾಣ್‍ಕೋಟ್ ವಾಯುನೆಲೆ ಮೇಲೆ ದಾಳಿ ನಡೆಸಿದಾಗ, ಎನ್‍ಎಸ್‍ಜಿ ಯೋಧರನ್ನು ಅಲ್ಲಿಗೆ ಕಳುಹಿಸಲಾಯಿತು. ಎನ್‍ಎಸ್‍ಜಿ ತಂಡದಲ್ಲಿ ಕರ್ನಾಟಕದ ನಿರಂಜನ್ ಅವರೂ ಇದ್ದರು. ದಾಳಿ ಎಸಗಿದ್ದ ಉಗ್ರನ ಬಳಿಯಿದ್ದ ಗ್ರೆನೇಡ್ ನಿಷ್ಕ್ರಿಯಗೊಳಿಸಲು ನಿರಂಜನ್ ಮುಂದಾಗಿದ್ದ ವೇಳೆ ಅದು ಸ್ಫೋಟಗೊಂಡಿತ್ತು. ಗ್ರೆನೇಡ್ ಸ್ಫೋಟದಿಂದಾಗಿ ಅವರ ಶ್ವಾಸಕೋಶಗಳು ಒಡೆದಿದ್ದವು. ಆಸ್ಪತ್ರೆಗೆ ಸಾಗಿಸುವ ಮುನ್ನವೇ ನಿರಂಜನ್ ಹುತಾತ್ಮರಾಗಿದ್ದರು. ನಿರಂಜನ್ ಅವರು ಅಮೆರಿಕದ ಎಫ್‍ಬಿಐನಿಂದ ತರಬೇತಿ ಪಡೆದಿದ್ದರು. ಪಾಲಕ್ಕಾಡ್ ಜಿಲ್ಲೆಯ ಮುನ್ನರಾರ್ ಕಾಡ್ ಮೂಲದ ನಿರಂಜನ್, ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲೇ. 40 ವರ್ಷದ ಹಿಂದೆಯೇ ಅವರ ಕುಟುಂಬವು ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿತ್ತು.