Tag: patiyala court

  • ನಿರ್ಭಯಾ ಹಂತಕರ ಗಲ್ಲಿಗೆ ತಡೆಯಾಜ್ಞೆ – ನಾಳೆ ಬೆಳಗ್ಗೆ ಮರಣದಂಡನೆ ಇಲ್ಲ

    ನಿರ್ಭಯಾ ಹಂತಕರ ಗಲ್ಲಿಗೆ ತಡೆಯಾಜ್ಞೆ – ನಾಳೆ ಬೆಳಗ್ಗೆ ಮರಣದಂಡನೆ ಇಲ್ಲ

    ನವದೆಹಲಿ: ಫೆಬ್ರವರಿ 1 ರಂದು ನಿರ್ಭಯಾ ಅಪರಾಧಿಗಳಿಗೆ ಗಲ್ಲು ಶಿಕ್ಷೆಗೆ ವಿಧಿಸಿದ್ದ ಡೆತ್ ವಾರಂಟ್‍ಗೆ ಪಟಿಯಾಲ ಕೋರ್ಟ್ ತಡೆಯಾಜ್ಞೆ ನೀಡಿದ್ದು, ಗಲ್ಲುಶಿಕ್ಷೆಗೆ ಮುಂದೂಡಿಕೆಯಾಗಿದೆ.

    ಫೆ. 1ರಂದು ಬೆಳಗ್ಗೆ 6 ಗಂಟೆಗೆ ನಿರ್ಭಯಾ ಅಪರಾಧಿಗಳಿಗೆ ಗಲ್ಲಿಗೆ ಏರಿಸಲು ಕೋರ್ಟ್ ಆದೇಶ ನೀಡಿತ್ತು. ಆದರೆ ಅಪರಾಧಿಗಳು ಗಲ್ಲುಶಿಕ್ಷೆ ಜಾರಿ ಮುಂದೂಡಲು ನಾನಾ ಪ್ರಯತ್ನವನ್ನು ಮುಂದುವರಿಸಿದ್ದರು.

    ಬುಧವಾರ ಅಪರಾಧಿ ವಿನಯ್ ಶರ್ಮಾ ರಾಷ್ಟ್ರಪತಿ ಅವರಿಗೆ ಎರಡನೇ ಬಾರಿ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದನು. ಆದರೆ ಈಗ ರಾಷ್ಟ್ರಪತಿಯವರ ತೀರ್ಮಾನ ಪ್ರಕಟಗೊಂಡಿರಲಿಲ್ಲ.

    ಇನ್ನೊಂದೆಡೆ ಪವನ್, ನಾನು ಅಪ್ರಾಪ್ತನಾಗಿದ್ದಾಗ ಈ ಘಟನೆ ನಡೆದಿತ್ತು. ಹಾಗಾಗಿ ನನ್ನನ್ನು ಮರಣದಂಡನೆಗೆ ಒಳಪಡಿಸಬಾರದು ಎಂದು ಸುಪ್ರಿಂ ಕೋರ್ಟ್‍ಗೆ ಮತ್ತೊಮ್ಮೆ ಮನವಿ ಮಾಡಿದ್ದಾನೆ. ಈ ಹಿಂದೆಯೇ ತ್ರಿಸದಸ್ಯ ಪೀಠ ಪವನ್ ಅರ್ಜಿಯನ್ನು ತಿರಸ್ಕೃತ ಮಾಡಿತ್ತು. ಈಗ ಸುಪ್ರೀಂಕೋರ್ಟಿನ ಸಂವಿಧಾನಿಕ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿದ್ದಾನೆ.

    ರಾಷ್ಟ್ರಪತಿಗಳ ಕ್ಷಮಾದಾನದ ತೀರ್ಪಿನ ವಿರುದ್ಧ ಮುಖೇಶ್ ಸುಪ್ರೀಂಕೋರ್ಟ್ ಮೊರೆ ಹೋಗಿದ್ದನು. ಬುಧವಾರ ಸುಪ್ರೀಂಕೋರ್ಟ್ ಮುಖೇಶ್ ಅರ್ಜಿಯನ್ನು ವಜಾಗೊಳಿಸಿತ್ತು. ಮುಖೇಶ್ ನಂತೆಯೇ ಉಳಿದ ಅಪರಾಧಿಗಳು ಅರ್ಜಿ ಸಲ್ಲಿಸುವ ಮೂಲಕ ಗಲ್ಲು ಏರುವುದಕ್ಕೆ ವಿಳಂಬ ಮಾಡುವ ತಂತ್ರ ಮಾಡುತ್ತಿದ್ದಾರೆ.