Tag: Patna police

  • ಪಾಟ್ನಾದಲ್ಲಿ ಭೀಕರ ರಸ್ತೆ ಅಪಘಾತ – ಐವರು ಉದ್ಯಮಿಗಳು ಸ್ಥಳದಲ್ಲೇ ಸಾವು

    ಪಾಟ್ನಾದಲ್ಲಿ ಭೀಕರ ರಸ್ತೆ ಅಪಘಾತ – ಐವರು ಉದ್ಯಮಿಗಳು ಸ್ಥಳದಲ್ಲೇ ಸಾವು

    ಪಾಟ್ನಾ: ಇಲ್ಲಿನ ಪರ್ಸಾ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತಕ್ಕೆ (Patna Road Accident) ಐವರು ಉದ್ಯಮಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

    ಪಾಟ್ನಾ-ಗಯಾ-ದೋಭಿ ಚತುಷ್ಪಥ ರಸ್ತೆಯಲ್ಲಿ ಘಟನೆ ನಡೆದಿದೆ. ಮೃತ ಉದ್ಯಮಿಗಳನ್ನು (Businessmen) ರಾಜೇಶ್ ಕುಮಾರ್ (50), ಸಂಜಯ್ ಸಿಂಗ್ (55), ಕಮಲ್ ಕಿಶೋರ್ (38), ಪ್ರಕಾಶ್ ಚೌರಾಸಿಯಾ (35) ಮತ್ತು ಸುನಿಲ್ ಕುಮಾರ್ (38) ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಪಾಟ್ನಾದ ಪ್ರತಿಷ್ಠಿತ ಉದ್ಯಮಿಗಳಾಗಿದ್ದು, ಫತುಹಾದಿಂದ ತಡರಾತ್ರಿ ಕೆಲವು ಕೆಲಸ ಮುಗಿಸಿ ಪಾಟ್ನಾಕ್ಕೆ ಹಿಂತಿರುಗುತ್ತಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಕೊಲೆ, ಸುಲಿಗೆ ಸೇರಿ 18 ಪ್ರಕರಣದಲ್ಲಿ ಬೇಕಾಗಿದ್ದ ಬಿಹಾರದ ಶಂಕಿತ ನಕ್ಸಲ್‌ ರಾಯಚೂರಲ್ಲಿ ಅರೆಸ್ಟ್‌

    ಫತುಹಾದಿಂದ ಪಾಟ್ನಾಗೆ ಹಿಂತಿರುಗುತ್ತಿದ್ದ ವೇಳೆ ಕಾರು ರಸ್ತೆಯಲ್ಲಿ ನಿಂತಿದ್ದ ಟ್ರಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿತ್ತು, ಅರ್ಧ ಕಾರು ಟ್ರಕ್‌ ಕೆಳಗೆ ನುಗ್ಗಿದೆ. ಇದರಿಂದಾಗಿ ಕಾರಿನಲ್ಲಿದ್ದ ಎಲ್ಲಾ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: Bengaluru| ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ – ಒಂದೂವರೆ ವರ್ಷದ ಮಗು ದುರ್ಮರಣ

    ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಪರ್ಸಾ ಬಜಾರ್ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸಾಕಷ್ಟು ಹರಸಾಹಸದ ಬಳಿಕ ಪೊಲೀಸರು ಕಾರನ್ನು ತುಂಡು ಮಾಡಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಹತ್ತಿರದ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ.


    ಇನ್ನು ಪ್ರಾಥಮಿಕ ಮೂಲಗಳ ಪ್ರಕಾರ ಅತಿವೇಗದ ಚಾಲನೆಯೇ ಕಾರಣ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಅಶ್ಲೀಲ ಕಾಮೆಂಟ್ ಕೇಸ್‌ – ಪೊಲೀಸರ ತನಿಖೆಗೆ ವಿಜಯಲಕ್ಷ್ಮಿ ನಿರಾಸಕ್ತಿ 

  • ತಪಾಸಣೆ ವೇಳೆ ಪೊಲೀಸರಿಗೆ ಗುದ್ದಿದ ಕಾರು – ಓರ್ವ ಮಹಿಳಾ ಕಾನ್‌ಸ್ಟೆಬಲ್ ಸಾವು, ಇಬ್ಬರು ಅಧಿಕಾರಿಗೆ ಗಾಯ

    ತಪಾಸಣೆ ವೇಳೆ ಪೊಲೀಸರಿಗೆ ಗುದ್ದಿದ ಕಾರು – ಓರ್ವ ಮಹಿಳಾ ಕಾನ್‌ಸ್ಟೆಬಲ್ ಸಾವು, ಇಬ್ಬರು ಅಧಿಕಾರಿಗೆ ಗಾಯ

    ಪಾಟ್ನಾ: ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ವೇಗವಾಗಿ ಬಂದ ಸ್ಕಾರ್ಪಿಯೋ ಕಾರು ಪೊಲೀಸರಿಗೆ ಡಿಕ್ಕಿಯೊಡೆದ ಪರಿಣಾಮ ಓರ್ವ ಮಹಿಳಾ ಕಾನ್ಸ್‌ಟೆಬಲ್‌ (Woman Constable) ಸಾವನ್ನಪ್ಪಿದ್ದು, ಇಬ್ಬರು ಅಧಿಕಾರಿಗಳು ಗಾಯಗೊಂಡಿರುವ ಘಟನೆ ಪಾಟ್ನಾದ ಅಟಲ್ ಪಥ್‌ನಲ್ಲಿ (Atal Path) ನಡೆದಿದೆ.

    ಬುಧವಾರ ತಡರಾತ್ರಿ ಪಾಟ್ನಾದ (Patna) ಶ್ರೀಕೃಷ್ಣ ಪುರಿ ಪ್ರದೇಶದ ಅಟಲ್ ಪಥ್‌ನಲ್ಲಿ ಗಸ್ತಿನಲ್ಲಿದ್ದ ಪೊಲೀಸರ ತಂಡ ವಾಹನ ತಪಾಸಣೆ ನಡೆಸುತ್ತಿತ್ತು. ಶ್ರೀಕೃಷ್ಣ ಪುರಿ ಪೊಲೀಸ್ ಠಾಣೆಯ ಸಬ್-ಇನ್ಸ್‌ಪೆಕ್ಟರ್, ಸಹಾಯಕ ಸಬ್-ಇನ್ಸ್‌ಪೆಕ್ಟರ್ ಮತ್ತು ಮಹಿಳಾ ಕಾನ್‌ಸ್ಟೆಬಲ್ ಸ್ಥಳದಲ್ಲಿದ್ದರು. ಕಾರು ತಪಾಸಣೆ ನಡೆಸುವ ವೇಳೆ ವೇಗವಾಗಿ ಬಂದ ಮತ್ತೊಂದು ಕಾರು (Scorpio SUV) ತಪಾಸಣೆ ನಡೆಸುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆಡಿದೆ. ಪರಿಣಾಮ ಕಾನ್ಸ್‌ಟೆಬಲ್‌ ಇಬ್ಬರು ಅಧಿಕಾರಿಗಳು ಗಾಯಗೊಂಡಿದ್ದಾರೆ. ಇದನ್ನೂ ಓದಿ:  `ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ

    ಗಾಯಗೊಂಡ ಪೊಲೀಸರನ್ನ ತಕ್ಷಣ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆದ್ರೆ ಚಿಕಿತ್ಸಾ ಸಮಯದಲ್ಲಿ ಮಹಿಳಾ ಕಾನ್‌ಸ್ಟೆಬಲ್ ಸಾವನ್ನಪ್ಪಿದ್ದಾರೆ. ಉಳಿದ ಇಬ್ಬರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪಾಟ್ನಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅವ್ಕಾಶ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ 11 ವರ್ಷದಲ್ಲಿ ಸಾಧನೆಗಳನ್ನ ಕಡಿದು ಕಟ್ಟೆ ಹಾಕಿದ್ದಾರೆ – ದೇಶದ ಭದ್ರತೆ, ರೈತರ ವಿಚಾರದಲ್ಲಿ ಕೇಂದ್ರ ಫೇಲ್: ಪ್ರದೀಪ್‌ ಈಶ್ವರ್‌

    ಅಪಘಾತದ ಬಳಿಕ ಸ್ಕಾರ್ಪಿಯೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಆದ್ರೆ ವಾಹನವನ್ನ ವಶಪಡಿಸಿಕೊಂಡಿದ್ದು, ಕಾರಿನಲ್ಲಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಚಾಲಕನಿಗಾಗಿ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕ್‌ ಮಹಾನ್‌ ಪಾಲುದಾರ; ಪಾಕ್‌ ಹೊಗಳಿದ ಅಮೆರಿಕ

  • ರಿಯಾ ವಿರುದ್ಧ 48 ಪುಟಗಳ ಸಾಕ್ಷಿ ಸಂಗ್ರಹಿಸಿದ ಪಾಟ್ನಾ ಪೊಲೀಸ್

    ರಿಯಾ ವಿರುದ್ಧ 48 ಪುಟಗಳ ಸಾಕ್ಷಿ ಸಂಗ್ರಹಿಸಿದ ಪಾಟ್ನಾ ಪೊಲೀಸ್

    -ಅರೆಸ್ಟ್ ವಾರೆಂಟ್‍ಗಾಗಿ ಸಿದ್ಧತೆ

    ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಿಯಾ ವಿರುದ್ಧ ಪಾಟ್ನಾ ಪೊಲೀಸರು 48 ಪುಟಗಳ ಸಾಕ್ಷಿ ಸಂಗ್ರಹಿಸಿದ್ದಾರೆ ಎಂದು ವರದಿಯಾಗಿದೆ.

    ಸುಶಾಂತ್ ನಿಧನದ ಬಳಿಕ ಅಜ್ಞಾತ ಸ್ಥಳದಲ್ಲಿರುವ ರಿಯಾ ಚಕ್ರವರ್ತಿ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಇತ್ತೀಚೆಗೆ ವಿಡಿಯೋ ಮೂಲಕ ರಿಯಾ ಚಕ್ರವರ್ತಿ ಸಂದೇಶ ರವಾನಿಸಿದ್ದರು. ಪ್ರಕರಣದ ತನಿಖೆಯನ್ನು ಮುಂಬೈ ಪೊಲೀಸರು ನಡೆಸುತ್ತಿದ್ದು, ಸುಶಾಂತ್ ತಂದೆ ಕೆ.ಕೆ.ಸಿಂಗ್ ಪಾಟ್ನಾದಲ್ಲಿ ರಿಯಾ ಚಕ್ರವರ್ತಿ ಮತ್ತು ಕುಟುಂಬಸ್ಥರ ವಿರುದ್ಧ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪಾಟ್ನಾ ಪೊಲೀಸರು ರಿಯಾ ಬಂಧನಕ್ಕಾಗಿ ಸಾಕ್ಷಿ ಸಂಗ್ರಹಿಸುತ್ತಿದ್ದಾರೆ.

    ಈಗಾಗಲೇ ಪಾಟ್ನಾ ಪೊಲೀಸರು 48 ಪುಟಗಳಷ್ಟು ಸಾಕ್ಷಿ ಸಂಗ್ರಹಿಸಿದ್ದಾರೆ ಎನ್ನಲಾಗಿದೆ. ಈ 48 ಪುಟಗಳಲ್ಲಿ ರಿಯಾ ಮತ್ತು ಸುಶಾಂತ್ ನಡುವೆ ನಡೆದ ಬ್ಯಾಂಕ್ ವ್ಯವಹಾರಗಳ ಮಾಹಿತಿ ಇದೆ. 13 ಪುಟಗಳಲ್ಲಿ ಸುಶಾಂತ್ ಮಾಜಿ ಗೆಳತಿ, ನಟಿ ಅಂಕಿತಾ ಲೋಖಂಡೆ ಜೊತೆ ವಾಟ್ಸಪ್ ಸಂದೇಶಗಳ ಸ್ಕ್ರೀನ್ ಶಾಟ್, ಆರು ಜನರ ಹೇಳಿಕೆಗಳು ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಕ್ಷಿಯ ಟೆಲಿಫೋನ್ ಹೇಳಿಕೆ ಸಹ ಈ ಪುಟಗಳಲ್ಲಿದೆ ಎಂದು ಪ್ರಕಟವಾಗಿದೆ. ಇದನ್ನೂ ಓದಿ: ಬಾಲಿವುಡ್‍ಗೆ ಬೈ ಹೇಳಿ ಕೊಡಗಿನಲ್ಲಿ ಕೃಷಿ ಮಾಡೋಕೆ ಮುಂದಾಗಿದ್ದ ಸುಶಾಂತ್ ಸಿಂಗ್

    ಈ ಎಲ್ಲ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿ ರಿಯಾ ಚಕ್ರವರ್ತಿಯ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿಗೊಳಿಸುವಂತೆ ಪೊಲೀಸರು ಮನವಿ ಮಾಡಿಕೊಳ್ಳಲಿದ್ದಾರೆ. ಸುಶಾಂತ್ ಹೊಂದಿದ್ದ ಮೂರು ಬ್ಯಾಂಕ್ ಖಾತೆಗಳ ಮಾಹಿತಿ, ಯುಪಿಐ ಪೇಮೆಂಟ್, ಸ್ಟೇಟ್‍ಮೆಂಟ್ ಮತ್ತು ಚಾರ್ಟೆಡ್ ಅಕೌಂಟೆಂಟ್ ಲೇಜರ್ ಬ್ಯಾಲೆನ್ಸ್ ಕಾಪಿಯನ್ನು ಸಹ ಪೊಲೀಸರು ತರಿಸಿಕೊಂಡಿದ್ದಾರೆ. ಇದನ್ನೂ ಓದಿ: ಸುಶಾಂತ್ ಸಿಂಗ್ ಸೋದರಿಯಿಂದ ಪ್ರಧಾನಿ ಮೋದಿಗೆ ಬಹಿರಂಗ ಪತ್ರ – ಸಹೋದರನಿಗಾಗಿ ಮನವಿ

    ಸುಶಾಂತ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಟ್ನಾ ಮತ್ತು ಮುಂಬೈ ಪೊಲೀಸರು ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದ್ದಾರೆ. ಇನ್ನು ಬಿಹಾರ ಸಿಎಂ ನಿತೀಶ್ ಕುಮಾರ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ.