Tag: patna

  • ಫೇಸ್‍ಬುಕ್ ಗೆಳತಿ ಜೊತೆಗಿನ ಮೊದಲ ಭೇಟಿಯಲ್ಲೇ ಓಡಿ ಹೋದ ಯುವಕ!

    ಫೇಸ್‍ಬುಕ್ ಗೆಳತಿ ಜೊತೆಗಿನ ಮೊದಲ ಭೇಟಿಯಲ್ಲೇ ಓಡಿ ಹೋದ ಯುವಕ!

    ಪಾಟ್ನಾ: ಯುವಕನೊಬ್ಬ ತನ್ನ ಫೇಸ್‍ಬುಕ್ ಗೆಳತಿಯನ್ನು ಮೊದಲ ಬಾರಿ ಭೇಟಿಯಾಗಲು ಹೋದಾಗ ಆಕೆಯನ್ನು ನೋಡಿ ಪಾರ್ಕ್ ನಿಂದಲೇ ಓಡಿ ಹೋದ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ.

    ಯುವಕನೊಬ್ಬ ಫೇಸ್‍ಬುಕ್‍ನಲ್ಲಿ ಸುಂದರವಾದ ಯುವತಿಯ ಖಾತೆಯನ್ನು ನೋಡಿ ಆಕೆಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದ. ಯುವತಿ ಕೂಡ ಆ ಯುವಕನ ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿದ್ದಾಳೆ. ನಂತರ ಯುವಕ ಯುವತಿಗೆ ಮೆಸೇಜ್ ಮಾಡಲು ಆರಂಭಿಸಿ ಹತ್ತಿರವಾಗಿದ್ದಾನೆ. ಯುವತಿ ಕೂಡ ಆತನ ಮೆಸೇಜ್‍ಗೆ ಪ್ರತಿಕ್ರಿಯಿಸುತ್ತಿದ್ದಳು. ಹೀಗೆ ಇವರಿಬ್ಬರ ಸ್ನೇಹ ಪ್ರೀತಿಗೆ ತಿರುಗಿ ಇಬ್ಬರು ಮದುವೆಯಾಗಲು ನಿರ್ಧರಿಸಿದ್ದಾರೆ.

    ಮದುವೆ ಆಗುವ ಮೊದಲು ನಾವಿಬ್ಬರು ಭೇಟಿ ಆಗೋಣ ಎಂದು ಯುವಕ ಯುವತಿ ಬಳಿ ಕೋರಿಕೆ ಇಟ್ಟಿದ್ದಾನೆ. ಯುವತಿ ಈ ಕೋರಿಕೆಯನ್ನು ಸ್ವೀಕರಿಸಿ ಭೇಟಿಗೆ ಒಪ್ಪಿಕೊಂಡಿದ್ದಾಳೆ. ಹೊಸ ವರ್ಷದಂದು ಇಬ್ಬರು ಪಾರ್ಕ್ ವೊಂದರಲ್ಲಿ ಭೇಟಿ ಆಗಲು ನಿರ್ಧರಿಸಿದ್ದಾರೆ. ಭೇಟಿಯಾದ ಬಳಿಕ ತಮ್ಮ ಮುಂದಿನ ಜೀವನದ ಬಗ್ಗೆ ಚರ್ಚೆ ನಡೆಸೋಣ ಎಂದು ಇಬ್ಬರು ಮಾತನಾಡಿಕೊಂಡಿದ್ದರು.

    ತನ್ನ ಫೇಸ್‍ಬುಕ್ ಗೆಳತಿಯನ್ನು ಭೇಟಿ ಮಾಡಲು ಯುವಕ ನಿಗದಿತ ಸಮಯಕ್ಕಿಂತ ಅರ್ಧ ಗಂಟೆ ಮೊದಲೇ ಹೂಗುಚ್ಚವನ್ನು ತೆಗೆದುಕೊಂಡು ಪಾರ್ಕಿಗೆ ಬಂದಿದ್ದ. ಯುವತಿ ಪಾರ್ಕಿಗೆ ಬಂದ ಬಳಿಕ ಆಕೆಯನ್ನು ನೋಡಿ ಯುವಕ ಒಂದು ಕ್ಷಣ ದಂಗಾಗಿದ್ದಾನೆ. ಫೇಸ್‍ಬುಕ್ ನಲ್ಲಿದ್ದ ಯುವತಿ ಬೇರೆ ಹಾಗೂ ಎದುರಿಗೆ ಇದ್ದ ಯುವತಿ ಬೇರೆ ಎಂದು ತಿಳಿದ ಯುವಕ ಪಾರ್ಕಿನಿಂದಲೇ ಓಡಿ ಹೋಗಿದ್ದಾನೆ.

    ಯುವಕನಿಂದ ಮೋಸ ಹೋಗಿದ್ದೇನೆ ಎಂದು ಯುವತಿ ಜನವರಿ 2ರಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಆಗ ಪೊಲೀಸರು ಯುವಕನನ್ನು ಠಾಣೆಗೆ ಕರೆಸಿ ಮಾತನಾಡಿಸಿದ್ದಾರೆ. ಆಗ ಯುವಕ “ಈ ಯುವತಿ ಫೇಸ್‍ಬುಕ್‍ನಲ್ಲಿ ಬೇರೆ ಫೋಟೋ ಹಾಕಿ ನನಗೆ ಮೋಸ ಮಾಡಿದಲ್ಲದೇ ನನ್ನ ಬಳಿ ಸುಳ್ಳು ಹೇಳಿದ್ದಾಳೆ. ನಾನು ಶ್ರೀಮಂತೆ ಎಂದು ಆಕೆ ನನ್ನ ಬಳಿ ಹೇಳಿದ್ದಳು. ಆದರೆ ಆಕೆ ಬೇರೆಯವರ ಮನೆಯಲ್ಲಿ ಕೆಲಸ ಮಾಡುತ್ತಾಳೆ” ಎಂದು ತಿಳಿಸಿದ್ದಾನೆ.

    ಯುವಕನ ಮಾತು ಕೇಳಿ ಯುವತಿ ಪೊಲೀಸ್ ಠಾಣೆಯಲ್ಲಿ ಗಲಾಟೆ ಮಾಡಿದ್ದಾಳೆ. ಅಲ್ಲದೇ ಇಬ್ಬರು ಪೊಲೀಸ್ ಠಾಣೆಯಲ್ಲೇ ಆರೋಪ, ಪ್ರತ್ಯಾರೋಪ ಮಾಡಿದ್ದಾರೆ. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ಗಲಾಟೆಯನ್ನು ನಿಲ್ಲಿಸಿ, ಇಬ್ಬರಿಗೂ ಬುದ್ಧಿ ಹೇಳಿ ಅವರ ಮನೆಗೆ ಕಳುಹಿಸಿಕೊಟ್ಟಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv
  • ಶೌಚಾಲಯದಲ್ಲೇ ಮಹಿಳಾ ಕೈದಿಯ ಮೇಲೆ ಕಾಮುಕರಿಂದ ಗ್ಯಾಂಗ್‍ರೇಪ್!

    ಶೌಚಾಲಯದಲ್ಲೇ ಮಹಿಳಾ ಕೈದಿಯ ಮೇಲೆ ಕಾಮುಕರಿಂದ ಗ್ಯಾಂಗ್‍ರೇಪ್!

    ಪಾಟ್ನಾ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳಾ ಕೈದಿಯ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದ ಮುಜಫರ್ ಪುರ್ ಪಟ್ಟಣದಲ್ಲಿ ನಡೆದಿದೆ.

    ಸಂತ್ರಸ್ತ ಮಹಿಳೆ ಮುಜಾಫುರ್ ಪುರದ ಶ್ರೀಕೃಷ್ಣ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದರು. ಅಲ್ಲಿಂದ ಚಿಕಿತ್ಸೆ ಪಡೆದು ಬಂದ ನಂತರ ಜೈಲಿನ ಸೂಪರಿಟೆಂಡೆಂಟ್ ಗೆ ಮಾಹಿತಿ ತಿಳಿಸಿದ ಬಳಿಕ ಈ ಘಟನೆ ಬೆಳಕಿಗೆ ಬಂದಿದೆ.

    ನವೆಂಬರ್ 14ರಂದು ಆಸ್ಪತ್ರೆಗೆ ಬಂದಿದ್ದ ಇಬ್ಬರು ಕಾಮುಕರು ಈ ರೀತಿ ಕೈದಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಆರೋಪಿಗಳಿಬ್ಬರ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ಮನೋಜ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

    ನವೆಂಬರ್ 14ರಂದು ರಾತ್ರಿ ವೇಳೆ ಸಂತ್ರಸ್ತೆ ಆಸ್ಪತ್ರೆಯಲ್ಲಿದ್ದ ಶೌಚಾಲಯಕ್ಕೆ ಹೋಗಿದ್ದಾರೆ. ಈ ವೇಳೆ ಸಲೇಶ್ ಕುಮಾರ್ ಮತ್ತು ಚೋಟಾಲ್ ಕುಮಾರ್ ಇಬ್ಬರು ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.

    ಈ ಪ್ರಕರಣ ಕುರಿತು ನಿಷ್ಪಕ್ಷಪಾತವಾಗಿ ತನಿಖೆ ಮಾಡಲಾಗುವುದು. ಜೊತೆಗೆ ಶೀಘ್ರದಲ್ಲೇ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ನಾನು ಭರವಸೆ ನೀಡುತ್ತೇನೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ರಂಜೀತ್ ಕುಮಾರ್ ಸಿಂಗ್ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಬ್ಯಾಂಕ್ ಅಧಿಕಾರಿ ಕೊಲೆಗೈದು, 10 ಲಕ್ಷ ರೂ. ದೋಚಿದ ದುಷ್ಕರ್ಮಿಗಳು

    ಬ್ಯಾಂಕ್ ಅಧಿಕಾರಿ ಕೊಲೆಗೈದು, 10 ಲಕ್ಷ ರೂ. ದೋಚಿದ ದುಷ್ಕರ್ಮಿಗಳು

    ಪಾಟ್ನಾ: ದುಷ್ಕರ್ಮಿಗಳ ತಂಡವೊಂದು ಬ್ಯಾಂಕ್ ಅಧಿಕಾರಿಯೊಬ್ಬರನ್ನು ಗುಂಡಿಟ್ಟು ಕೊಂದು 10 ಲಕ್ಷ ರೂಪಾಯಿ ದೋಚಿ ಪರಾರಿಯಾಗಿರುವ ಘಟನೆ ಬಿಹಾರ್ ರಾಜ್ಯದ ಕಟಿಹಾರ್ ಜಿಲ್ಲೆಯಲ್ಲಿ ನಡೆದಿದೆ.

    ಮಂಗಳವಾರ ಮಧ್ಯಾಹ್ನ ಕಟಿಹಾರ್ ಜಿಲ್ಲೆಯ ಅಮೀನ್ ಚೌಕ್ ಪ್ರದೇಶದಲ್ಲಿರುವ ಬಂಧನ್ ಬ್ಯಾಂಕ್ ಶಾಖೆಗೆ ದುಷ್ಕರ್ಮಿಗಳು ನುಗ್ಗಿದ್ದಾರೆ. ಈ ವೇಳೆ ಬ್ಯಾಂಕಿನಲ್ಲಿದ್ದ ಸಿಬ್ಬಂದಿಯನ್ನು ಹೆದರಿಸಿ ಹಣ ದೋಚಲು ಯತ್ನಿಸಿದ್ದಾರೆ. ಈ ವೇಳೆ ದುಷ್ಕರ್ಮಿಗಳನ್ನು ತಡೆಯಲು ಮುಂದಾದ ಬ್ಯಾಂಕ್ ಅಧಿಕಾರಿಯೊಬ್ಬರಿಗೆ ಗುಂಡಿಟ್ಟಿ ಕೊಂದಿದ್ದಾರೆ. ಅಲ್ಲದೇ ಮತ್ತೋರ್ವ ಬ್ಯಾಂಕ್ ಸಿಬ್ಬಂದಿ ಮೇಲೆ ಮಾರಣಾಂತಿಕವಾಗಿ ದಾಳಿ ನಡೆಸಿದ್ದಾರೆ.

    ಬಳಿಕ ಬ್ಯಾಂಕಿನಲ್ಲಿದ್ದ 10 ಲಕ್ಷ ರೂಪಾಯಿಯನ್ನು ದೋಚಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಬ್ಯಾಂಕ್ ಸಿಬ್ಬಂದಿಯನ್ನು ಪೂರ್ನಿಯ ಬಳಿಯಿರುವ ಆಸ್ಪತ್ರೆಗೆ ರವಾನಿಸಿದ್ದಾರೆ.

    ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪರಾರಿಯಾಗಿರುವ ದುಷ್ಕರ್ಮಿಗಳ ಪತ್ತೆಗೆ ವ್ಯಾಪಕ ಶೋಧ ನಡೆಸಿದ್ದಾರೆ. ಘಟನೆ ಸಂಬಂಧ ಪೊತಿಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • 3 ತಿಂಗ್ಳ ಹಿಂದೆ ಗ್ಯಾಂಗ್‍ರೇಪ್, ಈಗ ವಿಡಿಯೋ ವೈರಲ್ – ಆರೋಪಿಗಳು ಅರೆಸ್ಟ್

    3 ತಿಂಗ್ಳ ಹಿಂದೆ ಗ್ಯಾಂಗ್‍ರೇಪ್, ಈಗ ವಿಡಿಯೋ ವೈರಲ್ – ಆರೋಪಿಗಳು ಅರೆಸ್ಟ್

    ಪಾಟ್ನಾ: ಸಾಮಾಜಿಕ ಜಾಲತಾಣಗಳಲ್ಲಿ ಹುಡುಗಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ವಿಡಿಯೋ ವೈರಲ್ ಆಗಿದ್ದು, ಬಳಿಕ ಬಿಹಾರ್ ಪೊಲೀಸರು ಮೂವರು ಕಾಮುಕರನ್ನು ಬಂಧಿಸಿದ್ದಾರೆ.

    ರಾಹುಲ್ ಕುಮಾರ್, ರಮೇಶ್ ವಿಶ್ವಕರ್ಮ ಮತ್ತು ಅಂಕಿತ್ ಕುಮಾರ್ ಬಂಧಿತ ಆರೋಪಿಗಳು. ಈ ಘಟನೆ ಬಿಹಾರದ ನವಾಡಾ ಜಿಲ್ಲೆಯ ನಾರತ್ ಗ್ರಾಮದಲ್ಲಿ ಸುಮಾರು ಮೂರು ತಿಂಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಐವರು ಆರೋಪಿಗಳು ಸಂತ್ರಸ್ತೆಯನ್ನು ಕೋಚಿಂಗ್ ತರಬೇತಿಗೆ ಹೋಗಿದ್ದಾಗ ಅಪಹರಿಸಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ.

    ಸಂತ್ರಸ್ತೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಲ್ಲದೇ ಅದನ್ನು ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ನಂತರ ಆರೋಪಿಗಳು ಸಂತ್ರಸ್ತೆಯ ಮೇಲೆ ಹಲ್ಲೆ ಮಾಡಿ ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಿಗೆ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

    ಸದ್ಯ ಅತ್ಯಾಚಾರದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹೀಗಾಗಿ ವಿಡಿಯೋ ಮೂಲಕ ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸಲಾಗಿದೆ. ಆರೋಪಿಗಳು 3 ತಿಂಗಳುಗಳಿಂದ ಪದೇಪದೇ ಬೆದರಿಕೆ ಒಡ್ಡಿ, ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸ್ ಅಧೀಕ್ಷಕ ಅಮೃತೆಂಡು ಶೇಖರ್ ಠಾಕೂರ್ ಹೇಳಿದ್ದಾರೆ.

    ಆರೋಪಿಗಳು ಮತ್ತೆ ಭಾನುವಾರ ಸಂತ್ರಸ್ತೆಯನ್ನು ಕರೆದಿದ್ದಾರೆ. ಆದರೆ ಸಂತ್ರಸ್ತೆ ಹೋಗಲು ನಿರಾಕರಿಸಿದ್ದಾಳೆ. ಆದ್ದರಿಂದ ಕಾಮುಕರು ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಿಗೆ ಅಪ್ಲೋಡ್ ಮಾಡಿದ್ದಾರೆ. ಬಳಿಕ ಸಂತ್ರಸ್ತೆಯ ಕುಟುಂಬದವರು ಸ್ಥಳೀಯ ಪೊಲೀಸರನ್ನು ಭೇಟಿ ನೀಡಿ ಈ ಕುರಿತು ದೂರು ಸಲ್ಲಿಸಿದ್ದಾರೆ.

    ಸದ್ಯಕ್ಕೆ ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ನಾವು ಪ್ರಕರಣವನ್ನು ತನಿಖೆ ಮಾಡುತ್ತಿದ್ದು, ಸಂತ್ರಸ್ತೆ ಸಲ್ಲಿಸಿದ ದೂರಿನ ಆಧಾರದ ಮೇರೆಗೆ ಮೂವರನ್ನು ಬಂಧಿಸಿದ್ದೇವೆ. ಬಂಧಿತ ಆರೋಪಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಇಬ್ಬರು ಆರೋಪಿಗಳಾಗಿ ಶೋಧಕಾರ್ಯ ನಡೆಸುತ್ತಿದ್ದೇವೆ ಎಂದು ಠಾಕೂರ್ ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಮದ್ವೆಗೂ ಮುನ್ನ ವಧುವಿನಿಂದ ಷರತ್ತು – ಕಂಡಿಷನ್ ಕೇಳಿ ನಾಚಿ ನೀರಾದ ವರ

    ಮದ್ವೆಗೂ ಮುನ್ನ ವಧುವಿನಿಂದ ಷರತ್ತು – ಕಂಡಿಷನ್ ಕೇಳಿ ನಾಚಿ ನೀರಾದ ವರ

    ಪಾಟ್ನಾ: ಇತ್ತೀಚಿನ ದಿನಗಳಲ್ಲಿ ಮದುವೆಗೂ ಮುಂಚೆ ವಧು ಷರತ್ತು ಹಾಕುವುದು ಸಾಮಾನ್ಯವಾಗಿದೆ. ಅದೇ ರೀತಿ ವಧುವೊಬ್ಬಳು ತಾನು ಮದುವೆಯಾಗುವ ವರನಿಗೆ ಎರಡು ಷರತ್ತುಗಳನ್ನು ವಿಧಿಸಿ ಸುದ್ದಿಯಾಗಿದ್ದಾಳೆ.

    ಬಿಹಾರದ ಪೂರ್ನಿಯಾ ಜಿಲ್ಲೆಯಲ್ಲಿ ನವೆಂಬರ್ 19 ರಂದು ಅಂದರೆ ನಾಳೆ ವರ ಕೈಸರ್ ಹಾಗೂ ವಧು ಸೋನಿ ಜೋಡಿಯ ಮದುವೆ ನಿಶ್ಚಯವಾಗಿದೆ. ಆದರೆ ವಧು ಮದುವೆಗೂ ಮುನ್ನ ವರನಿಗೆ ಎರಡು ಷರತ್ತುಗಳನ್ನು ಹಾಕಿದ್ದಾಳೆ.

    ಮನೆಯಲ್ಲಿ ಶೌಚಾಲಯ ನಿರ್ಮಾಣವಾಗಬೇಕು. ಇದು ಆಕೆಯ ಮೊದಲನೇಯ ಷರತ್ತು. ಮದುವೆಯ ಪತ್ರಿಕೆಯಲ್ಲಿ ಕುಟುಂಬ ಯೋಜನೆ (ಫ್ಯಾಮಿಲಿ ಪ್ಲ್ಯಾನಿಂಗ್) ಬಗ್ಗೆ ಸಂದೇಶ ನೀಡಬೇಕು ಎರಡನೇ ಷರತ್ತು ಹಾಕಿದ್ದಾಳೆ. ಎರಡನೇ ಕಂಡೀಷನ್ ಕೇಳಿ ವರ ನಾಚಿಕೊಂಡು ನಕ್ಕಿದ್ದಾನೆ.

    ವಧು ಸೋನುವಿನ ಎರಡು ಷರತ್ತಿಗೂ ವರ ಒಪ್ಪಿಗೆ ಸೂಚಿಸಿದ್ದಾನೆ. ಅಷ್ಟೇ ಅಲ್ಲದೇ ವಧು ಮದುವೆ ಕಾರ್ಡ್ ನಲ್ಲಿ ಕುಟುಂಬ ಯೋಜನೆ ಸ್ಲೋಗನ್ ಜೊತೆ ಸ್ವಚ್ಛತೆ ಬಗ್ಗೆ ಜಾಗೃತಿ ಹಾಗೂ ಬೇಟಿ ಬಚಾವೋ ಬೇಟಿ ಪಡಾವೋ ಬಗ್ಗೆ ಸಂದೇಶ ಹಾಕಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾಳೆ.

    ವರ ಕೈಸರ್ ಭಾವಿ ಪತ್ನಿಯ ಎಲ್ಲ ಮನವಿ ಹಾಗೂ ಷರತ್ತಿಗೂ ಖುಷಿಯಾಗಿ ಒಪ್ಪಿಕೊಂಡಿದ್ದಾನೆ. ವಧು ಸೋನು ಈ ರೀತಿಯ ಜಾಗೃತಿಯ ಸಂದೇಶವನ್ನು ಸಾರಲು ಮುಂದಾಗಿದ್ದಕ್ಕೆ ವರ ಕೈಸರ್ ತುಂಬಾ ಸಂತಸವನ್ನು ವ್ಯಕ್ತಪಡಿಸಿದ್ದಾನೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಪತ್ನಿ ಮೇಲಿನ ಸಿಟ್ಟಿನಿಂದ 4ರ ಮಗಳನ್ನೇ ನೆಲಕ್ಕೆ ಬಡಿದು ಕೊಂದ..!

    ಪತ್ನಿ ಮೇಲಿನ ಸಿಟ್ಟಿನಿಂದ 4ರ ಮಗಳನ್ನೇ ನೆಲಕ್ಕೆ ಬಡಿದು ಕೊಂದ..!

    ಪಾಟ್ನಾ: ಪತ್ನಿ ಮಟನ್ ಸಾಂಬಾರ್ ಮಾಡಲು ತಡಮಾಡಿದ್ದಕ್ಕೆ ಕೋಪಗೊಂಡ ಪತಿ ತನ್ನ 4 ವರ್ಷದ ಮಗಳನ್ನು ಕೊಲೆ ಮಾಡಿರುವ ಅಮಾನವೀಯ ಘಟನೆ ಬಿಹಾರದಲ್ಲಿ ನಡೆದಿದೆ.

    ಶಾಲು ಕುಮಾರಿ ಕೊಲೆಯಾದ ದುರ್ದೈವಿ. ಪುರ್ನಿಯಾ ಜಿಲ್ಲೆಯ ಅಮೌರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಫಕ್ರಿಟೋಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಶಂಬು ಲಾಲ್ ಶರ್ಮಾ ಎಂದು ಗುರುತಿಸಲಾಗಿದೆ. ಈತ ನಾಲ್ಕು ವರ್ಷದ ಮಗಳನ್ನು ನೆಲಕ್ಕೆ ಬಡಿದು ಕೊಲೆ ಮಾಡಿದ್ದಾನೆ.

    ನೆಲಕ್ಕೆ ಬಡಿದಿದ್ದರಿಂದ ಗಾಯಗೊಂಡಿದ್ದ ಶಾಲು ಕುಮಾರಿಯನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಅಷ್ಟರಲ್ಲಿಯೇ ಮಗು ಸಾವನ್ನಪ್ಪಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮಗು ಮೃತಪಟ್ಟ ಕೆಲವು ಗಂಟೆಯಲ್ಲಿಯೇ ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.

    ಏನಿದು ಪ್ರಕರಣ?
    ಆರೋಪಿ ಶರ್ಮಾ ತನ್ನ ಪತ್ನಿ ರಾಜ್‍ಕುಮಾರಿ ದೇವಿ ಜೊತೆ ಮಟನ್ ಸಾರು ಬೇಗ ಮಾಡು ಎಂದು ಜಗಳವಾಡುತ್ತಿದ್ದನು. ಇಬ್ಬರ ನಡುವೆ ವಾದ ನಡೆಯುತ್ತಿತ್ತು. ಈ ವೇಳೆ ಮಗು ಪಕ್ಕದಲ್ಲೇ ಆಟವಾಡುತ್ತಾ ಕುಳಿತಿದ್ದಳು. ಈ ವೇಳೆ ಪತ್ನಿಯ ಮೇಲಿನ ಕೋಪದಿಂದ ಶರ್ಮಾ ಮಗಳ ಕುತ್ತಿಗೆ ಹಿಡಿದುಕೊಂಡು ನಾಲ್ಕೈದು ಬಾರಿ ನೆಲಕ್ಕೆ ಬಡಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಘಟನೆಯ ಬಳಿಕ ಮಗು ಗಾಯಗೊಂಡಿದ್ದು, ಪ್ರಜ್ಞಾಹೀನ ಸ್ಥಿತಿಗೆ ತಲುಪಿತ್ತು. ತಕ್ಷಣ ಆರೋಪಿ ಶರ್ಮಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾನೆ. ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಮಾರ್ಗ ಮಧ್ಯೆಯೇ ಮಗು ಮೃತಪಟ್ಟಿದೆ ಎಂದು ವೈದ್ಯರು ಹೇಳಿದ್ದಾರೆ.

    ಆರೋಪಿ ಶರ್ಮಾ ಮದ್ಯವ್ಯಸನಿಯಾಗಿದ್ದು, ಮಟನ್‍ಗಾಗಿ ಗಲಾಟೆ ಮಾಡಿಕೊಂಡು ಕೊಲೆ ಮಾಡಿದ್ದಾನೆ ಅಂತ ಪತ್ನಿ ಹೇಳಿಕೆ ಕೊಟ್ಟಿದ್ದಾರೆ. ಈ ದಂಪತಿ ಏಳು ವರ್ಷಗಳ ಹಿಂದೆ ಮದುವೆಯಾಗಿದ್ದರು. ಸದ್ಯಕ್ಕೆ ಆರೋಪಿ ಶರ್ಮಾನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪಲೀಸ್ ಅಧಿಕಾರಿ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಆಶ್ರಯ ತಾಣದಿಂದ ನಾಲ್ವರು ಅಪ್ತಾಪ್ತೆಯರು ಪರಾರಿ

    ಆಶ್ರಯ ತಾಣದಿಂದ ನಾಲ್ವರು ಅಪ್ತಾಪ್ತೆಯರು ಪರಾರಿ

    ಪಾಟ್ನಾ: ನಾಲ್ವರು ಅಪ್ರಾಪ್ತ ಬಾಲಕಿಯರು ದುಪ್ಪಟ್ಟಾ ಬಳಸಿ ಬಾಲಕಿಯರ ಆಶ್ರಯ ತಾಣಗಳಿಂದ ಪರಾರಿಯಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ.

    ನಾಲ್ವರು ಬಾಲಕಿಯರು ರಾಜ್ಯದ ಪಾಟಲೀಪುತ್ರ ಕಾಲನಿಯಲ್ಲಿರುವ ಸರ್ಕಾರಿ ಅನುದಾನಿತ ಆಶಾ ಕಿರಣ ಬಾಲಕಿಯರ ನಿಲಯದಿಂದ ಭಾನುವಾರ ಎಸ್ಕೇಪ್ ಆಗಿದ್ದಾರೆ. ಅವರಲ್ಲಿ 16 ವರ್ಷದ ಮೂವರು ಬಾಲಕಿಯರು ಮತ್ತು 12 ವರ್ಷದ ಒಬ್ಬ ಬಾಲಕಿ ಇದ್ದಳು. ಇವರು ನಿಲಯ ಕಟ್ಟಡದ ಎರಡನೇ ಮಹಡಿಯಿಂದ ದುಪ್ಪಟ್ಟಾದಿಂದ ಕೆಳಗಿಳಿದು ಪರಾರಿಯಾಗಿದ್ದಾರೆ ಎಂದು  ಪೊಲೀಸ್ ಅಧಿಕಾರಿ ತರ್ಕೇಶ್ವರ್ ನಾಥ್ ತಿವಾರಿ ಹೇಳಿದ್ದಾರೆ.

    ಬಾಲಕಿಯರು ಕಳೆದ ತಿಂಗಳಷ್ಟೇ ಆಶ್ರಯ ತಾಣಕ್ಕೆ ಬಂದಿದ್ದರು. ಆದರೆ ನಾಲ್ವರು ಏಕಕಾಲಕ್ಕೆ ಪರಾರಿಯಾಗಿದ್ದು, ಇದರಿಂದ ಅನೇಕ ಅನುಮಾನಗಳು ಮೂಡುತ್ತಿವೆ. ಸದ್ಯಕ್ಕೆ ಬಾಲಕಿಯರು ತಪ್ಪಿಸಿಕೊಂಡು ಹೋಗಲು ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ತಿವಾರಿ ಹೇಳಿದರು.

    ಬಾಲಕಿಯರು ತಪ್ಪಿಸಿಕೊಂಡು ಹೋಗುವಾಗ ಆಶ್ರಯ ತಾಣದ ಭದ್ರತಾ ಸಿಬ್ಬಂದಿ ಕಟ್ಟಡದ ಒಳಗೆ ಇದ್ದರು ಎಂದು ತಿಳಿದು ಬಂದಿದೆ. ಆಶ್ರಯ ತಾಣದ ಅಧಿಕಾರಿಗಳು ಈ ಬಗ್ಗೆ ಎಫ್‍ಐಆರ್ ದಾಖಲಿಸಿದ್ದಾರೆ. ಪೊಲೀಸರು ದೂರು ದಾಖಲಿಸಿಕೊಂಡು ಈ ಬಗ್ಗೆ ತನಿಖೆಯನ್ನು ಆರಂಭಿಸಿದ್ದಾರೆ.

    ಬಿಹಾರದಲ್ಲಿ ಈ ಮೊದಲು ಏಪ್ರಿಲ್ ನಲ್ಲಿ ಮುಜಾಫರ್ ಪುರ್ ಆಶ್ರಯ ನಿಲಯದಲ್ಲಿ 34 ಬಾಲಕಿಯರ ಮೇಲೆ ಅತ್ಯಾಚಾರ ನಡೆದಿತ್ತು. ಈ ಸುದ್ದಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಇನ್ನೂ ಸೆಪ್ಟಂಬರ್ 24ರಂದು ಪಾಟ್ನಾದ ಆಶ್ರಯ ನಿಲಯದಿಂದ ಮಹಿಳೆಯೊಬ್ಬರು ಪರಾರಿಯಾಗಿದ್ದರು.

    ಅಕ್ಟೋಬರ್ 29 ರಂದು ಖಗಾರಿಯಾ ಜಿಲ್ಲೆಯ ಆಶ್ರಯ ತಾಣದಲ್ಲಿದ್ದ ಇಬ್ಬರು ಬಾಲಕಿಯರು ಎಸ್ಕೇಪ್ ಆಗಿದ್ದರು. ಪಾಟ್ನಾ ಆಶ್ರಯ ನಿಲಯದಿಂದ ಪರಾರಿಯಾಗಿದ್ದ ಮಹಿಳೆ ನಂತರ ಪತ್ತೆಯಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಮದ್ವೆಯಾದ 6 ತಿಂಗ್ಳಿಗೆ ಲಾಲು ಪುತ್ರನಿಂದ ವಿಚ್ಛೇದನಕ್ಕೆ ಅರ್ಜಿ

    ಮದ್ವೆಯಾದ 6 ತಿಂಗ್ಳಿಗೆ ಲಾಲು ಪುತ್ರನಿಂದ ವಿಚ್ಛೇದನಕ್ಕೆ ಅರ್ಜಿ

    ಪಾಟ್ನಾ: ಮದುವೆಯಾದ ಆರು ತಿಂಗಳಲ್ಲೇ ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು ಯಾದವ್ ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ವಿಚ್ಛೇದನಕ್ಕಾಗಿ ಶುಕ್ರವಾರ ಪಾಟ್ನಾದ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.

    ಆರು ತಿಂಗಳ ಹಿಂದೆಯಷ್ಟೇ ತೇಜ್ ಪ್ರತಾಪ್ ಯಾದವ್ ಅವರು ಬಿಹಾರದ ಮಾಜಿ ಸಚಿವರ ಪುತ್ರಿ ಐಶ್ವರ್ಯಾ ರೈ ಅವರನ್ನು ಅದ್ಧೂರಿಯಾಗಿ ಮದುವೆಯಾಗಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ಐಶ್ವರ್ಯಾ ರೈ ಮತ್ತು ಅವರ ಪೋಷಕರು ತೇಜ್ ಪ್ರತಾಪ್ ಯಾದವ್ ರ ತಾಯಿ ರಾಬ್ರಿ ದೇವಿಯನ್ನು ಅವರ ನಿವಾಸದಲ್ಲಿ ಭೇಟಿಯಾಗಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

    ಬಹುಕೋಟಿ ಮೇವು ಹಗರಣದಲ್ಲಿ ಆರ್ ಜೆಡಿ ಮುಖ್ಯಸ್ಥರಾದ ಲಾಲು ಪ್ರಸಾದ್ ಯಾದವ್ ರಾಂಚಿಯ ಜೈಲಿನಲ್ಲಿದ್ದಾರೆ. ಸದ್ಯಕ್ಕೆ ವಿಚ್ಛೇದನ ಅರ್ಜಿಯನ್ನು ಹಿಂತೆಗೆದುಕೊಳ್ಳುವ ಪ್ರಯತ್ನಗಳು ನಡೆದಿವೆ ಎಂದು ಸಂಬಂಧಿಗಳು ತಿಳಿಸಿದ್ದಾರೆ.

    ಕೆಲವು ದಿನಗಳ ಹಿಂದೆ ತೇಜ್ ಪ್ರತಾಪ್ ಯಾದವ್ ವಿಚ್ಛೇದನ ಅರ್ಜಿಯೊಂದಿಗೆ ನ್ಯಾಯಾಲಯಕ್ಕೆ ಹೋಗಿದ್ದರು. ಆದರೆ ಅಂದು ತಾಂತ್ರಿಕದೋಷದ ಕಾರಣಗಳಿಂದಾಗಿ ವಿಚ್ಛೇದನ ಅರ್ಜಿಯನ್ನು ತಿರಸ್ಕರಿಸಲಾಗಿದೆ. ಆದರೆ ಈ ಬಗ್ಗೆ ಲಾಲು ಪ್ರಸಾದ್ ಯಾದವ್ ಕುಟುಂಬದ ಸದಸ್ಯರೂ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.

    ಈ ಬಗ್ಗೆ ತೇಜ್ ಪ್ರತಾಪ್ ಯಾದವ್ ಅವರ ವಕೀಲ ಯಶವಂತ್ ಕುಮಾರ್ ಶರ್ಮಾ ಮಾತನಾಡಿ, ಇಬ್ಬರ ನಡುವೆ ಸಾಂಸರಿಕ ಜೀವನ ಚೆನ್ನಾಗಿರಲಿಲ್ಲ ಎಂದು ದೃಢಪಡಿಸಿದ್ದಾರೆ. ಜೊತೆಗೆ ತೇಜ್ ಪ್ರತಾಪ್ ಯಾದವ್ ಅವರ ಪರವಾಗಿ ಹಿಂದೂ ಮದುವೆ ಕಾಯ್ದೆಯಡಿಯಲ್ಲಿ ಅರ್ಜಿ ಸಲ್ಲಿಸಲಾಗಿದೆ. ಇದನ್ನು ಬಿಟ್ಟು ಈ ಸಂದರ್ಭದಲ್ಲಿ ಬೇರೆ ಯಾವುದನ್ನೂ ಹೇಳಲಾರೆ ಅಂತ ತಿಳಿಸಿದ್ದಾರೆ.

    ತೇಜ್ ಪ್ರತಾಪ್ ಪತ್ನಿ ಐಶ್ವರ್ಯ ತಂದೆ ಕೂಡಾ ಹಾಲಿ ಆರ್ ಜೆಡಿ ಶಾಸಕರಾಗಿದ್ದಾರೆ. ತೇಜ್ ಪ್ರತಾಪ್ ಯಾದವ್ ಮೇ 12 ರಂದು ಅದ್ಧೂರಿಯಾಗಿ ಮದುವೆಯಾಗಿದ್ದರು. ಈ ಮದುವೆಗೆ ಸುಮಾರು 10,000ಕ್ಕೂ ಹೆಚ್ಚಿನ ಅತಿಥಿಗಳು ಹಾಜರಿದ್ದರು.

    ಇತ್ತೀಚೆಗೆ ತೇಜ್ ಪ್ರತಾಪ್ ಯಾದವ್ ‘ರುದ್ರ: ದಿ ಅವತಾರ್” ಚಿತ್ರದ ಪೋಸ್ಟರ್ ಗಳನ್ನು ಟ್ವೀಟ್ ಮಾಡುವ ಮೂಲಕ ಹಿಂದಿ ಚಿತ್ರರಂಗಕ್ಕೆ ಎಂಟ್ರಿ ಕೊಡುವುದಾಗಿ ತಿಳಿಸಿದ್ದರು. ಎರಡು ವರ್ಷಗಳ ಹಿಂದೆ ಅಂದರೆ ಬಿಹಾರ ಕ್ಯಾಬಿನೆಟ್ ನಲ್ಲಿ ಸಚಿವರಾಗಿದ್ದಾಗ ಇವರು ಭೋಜ್ಪುರಿ ಸಿನಿಮಾದಲ್ಲಿ ಅಭಿನಯಿಸಿದ್ದರು. ಲಾಲು ಯಾದವ್ ಅವರ 2ನೇ ಮಗ ತೇಜಶ್ವಿ ಯಾದವ್ ಅವಿವಾಹಿತರಾಗಿದ್ದು, ಇವರು ತಮ್ಮ ತಂದೆ ಬಂಧನಕ್ಕೊಳಗಾದ ಬಳಿಕ ಪಕ್ಷದ ಮುಖ್ಯಸ್ಥರಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪ್ರೇಮಿಗಳಿಬ್ಬರು ಸೆಕ್ಸ್ ನಲ್ಲಿ ತೊಡಗಿದ್ದಾಗ ಏಕಾಏಕಿ ನುಗ್ಗಿದ್ರು 10 ಮಂದಿ..!

    ಪ್ರೇಮಿಗಳಿಬ್ಬರು ಸೆಕ್ಸ್ ನಲ್ಲಿ ತೊಡಗಿದ್ದಾಗ ಏಕಾಏಕಿ ನುಗ್ಗಿದ್ರು 10 ಮಂದಿ..!

    ಪಾಟ್ನಾ: ಯುವಕನೊಬ್ಬ ತನ್ನ ಪ್ರಿಯತಮೆಯ ಜೊತೆ ಸೆಕ್ಸ್ ನಲ್ಲಿ ತೊಡಗಿದ್ದಾಗ ಇದ್ದಕ್ಕಿದ್ದಂತೆ 10 ಮಂದಿ ನುಗ್ಗಿ ಅವರ ಮೇಲೆ ಹಲ್ಲೆ ಮಾಡಿರುವ ಘಟನೆ ಬಿಹಾರದ ಸುಪೌಲ್ ಜಿಲ್ಲೆಯಲ್ಲಿ ನಡೆದಿದೆ.

    ಸುಪೌಲ್‍ನ ಗ್ರಾಮದ ಯುವಕನೊಬ್ಬ ತನ್ನ ರೂಮಿನಲ್ಲಿ ಯುವತಿಯ ಜೊತೆ ಸೆಕ್ಸ್ ನಲ್ಲಿ ತೊಡಗಿದ್ದಾನೆ. ಸ್ಥಳೀಯರು ಅನುಮಾನಗೊಂಡು ಏಕಾಏಕಿ ಅವರ ರೂಮಿಗೆ ನುಗ್ಗಿ ರೆಡ್ ಹ್ಯಾಂಡ್ ಆಗಿ ಇಬ್ಬರನ್ನು ಹಿಡಿದಿದ್ದಾರೆ. ಬಳಿಕ ಸ್ಥಳೀಯರು ಯುವಕನಿಗೆ ಮಾತ್ರವಲ್ಲದೇ ಹುಡುಗಿಯ ಮೇಲೂ ಹಲ್ಲೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಅಲ್ಲಿದ್ದವರು ಅವರಿಬ್ಬರ ವಿಡಿಯೋವನ್ನು ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ.

    ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಜೋಡಿಗೆ ಸ್ಥಳೀಯರು ಥಳಿಸಿ ಬಳಿಕ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಹಲ್ಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವ ಬದಲು, ಪ್ರೇಮಿಗಳನ್ನು ಸುಪೌಲ್ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ನಂತರ ಕೆಲವು ಗಂಟೆಗಳ ಬಳಿಕ ಅವರಿಬ್ಬರನ್ನು ಬಿಡುಗಡೆ ಮಾಡಿ ಕಳುಹಿಸಿದ್ದಾರೆ.

    ಸದಾನನ್ ಪೊಲೀಸ್ ಠಾಣೆಯ ಬಾಪೂವ್ ರಾಯ್ ಅವರು ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಈ ಘಟನೆ ಸಂಬಂಧಿಸಿದಂತೆ ಎಫ್‍ಐಆರ್ ದಾಖಲಾಗಿಲ್ಲ ಎಂದು ಡಿಎಸ್‍ಪಿ ವಿದ್ಯಾ ಸಾಗರ್ ಹೇಳಿದರು.

    ಇದು ಪರಸ್ಪರ ಒಪ್ಪಿಗೆಯಿಂದ ನಡೆದಿದೆ. ಆದ್ದರಿಂದ ಕಾನೂನು ಕ್ರಮದ ಬಗ್ಗೆ ಯಾವುದೇ ಪ್ರಶ್ನೆಯಿಲ್ಲ. ಇನ್ನು ಪ್ರೇಮಿಗಳು ತಮ್ಮ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಯಾವುದೇ ರೀತಿ ಕ್ರಮ ತೆಗೆದುಕೊಳ್ಳಿ ಎಂದು ಹೇಳಿಲ್ಲ. ಆದ್ದರಿಂದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿ ಕ್ರಮಕೈಗೊಳ್ಳಲು ಸಾಧ್ಯವಿಲ್ಲ ಎಂದು ವಿದ್ಯಾ ಸಾಗರ್ ಅವರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಾಮುಕರಿಂದ ತಪ್ಪಿಸಿಕೊಳ್ಳಲು 3ನೇ ಮಹಡಿಯಿಂದ ಹಾರಿದ್ಳು- ಹೈ ವೋಲ್ಟೆಜ್ ತಂತಿಯಲ್ಲಿ ಸಿಲುಕಿಕೊಂಡ ಬಾಲಕಿ!

    ಕಾಮುಕರಿಂದ ತಪ್ಪಿಸಿಕೊಳ್ಳಲು 3ನೇ ಮಹಡಿಯಿಂದ ಹಾರಿದ್ಳು- ಹೈ ವೋಲ್ಟೆಜ್ ತಂತಿಯಲ್ಲಿ ಸಿಲುಕಿಕೊಂಡ ಬಾಲಕಿ!

    ಪಾಟ್ನಾ: ಒಂಬತ್ತನೇ ತರಗತಿ ವಿದ್ಯಾರ್ಥಿನಿಯ ಮೇಲೆ ಸಾಮಾಹಿಕ ಅತ್ಯಾಚಾರ ನಡೆದಿದ್ದು, ಈ ವೇಳೆ ಕಾಮುಕರಿಂದ ತಪ್ಪಿಸಿಕೊಳ್ಳಲು ಬಾಲಕಿ ಕಟ್ಟಡದಿಂದ ಜಿಗಿದ್ದಾಳೆ. ಪರಿಣಾಮ ಹೈ ವೋಲ್ಟೇಜ್ ವಿದ್ಯುತ್ ತಂತಿಗಳಿಗೆ ಸಿಲುಕಿ ಗಂಭೀರ ಗಾಯಗೊಂಡಿದ್ದಾಳೆ.

    ಈ ಘಟನೆ ಬಿಹಾರದ ಲಖಿಸರಯಿ ಜಿಲ್ಲೆಯಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಚಿತ್ರಂಜನ್ ಎಂಬಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಬಳಿಕ ಆಕೆ ಕಾಮುಕರಿಂದ ತಪ್ಪಿಸಿಕೊಳ್ಳಲು ಮೂರು ಅಂತಸ್ತಿನ ಕಟ್ಟಡದಿಂದ ಜಿಗಿದಿದ್ದಾಳೆ. ಪರಿಣಾಮ ಹೈ ವೋಲ್ಟೇಜ್ ತಂತಿ ಮೇಲೆ ಬಿದ್ದಿದ್ದು, ಸದ್ಯ ಬಾಲಕಿ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾಳೆ ಅಂತ ಪೊಲೀಸ್ ಆಯುಕ್ತ ಕಾರ್ತಿಕ್ ಶರ್ಮಾ ತಿಳಿಸಿದ್ದಾರೆ.

    ಗುರುವಾರ ಬಾಲಕಿ ತನ್ನ ಸಹಪಾಠಿ ಜೊತೆ ದುರ್ಗಾ ನವಮಿ ಹಬ್ಬಕ್ಕೆ ತೆರಳಿದ್ದಾಳೆ. ಆದ್ರೆ ಆಕೆಗೆ ಕಟ್ಟಡದ 3ನೇ ಮಹಡಿಗೆ ಹೇಗೆ ಹೋಗಿರುವುದಾಗಿ ತಿಳಿದಿಲ್ಲ ಅಂತ ಶರ್ಮಾ ಹೇಳಿದ್ದಾರೆ.

    ಕಾಮುಕರು ಬಾಲಕಿಗೆ ಒತ್ತಾಯಪೂರ್ವಕವಾಗಿ ಮತ್ತು ಬರುವ ಪಾನೀಯವನ್ನು ಕುಡಿಸಿದ್ದಾರೆ. ಪರಿಣಾಮ ಆಕೆ ಅರೆಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದಾಳೆ. ಈ ವೇಳೆ ಆಕೆಯ ಮೇಲೆ ಅತ್ಯಾಚಾರ ನಡೆದಿದೆ. ಸ್ವಲ್ಪ ಸಮಯದ ಬಳಿಕ ಆಕೆಗೆ ಪ್ರಜ್ಞೆ ಬಂದಿದ್ದು, ಆಕೆ ಅರೆ ನಗ್ನವಾಗಿದ್ದಳು. ಇದರಿಂದ ಗಾಬರಿಗೊಂಡು ಮೂರನೇ ಮಹಡಿಯಿಂದ ಜಿಗಿದಿದ್ದಾಳೆ ಅಂತ ಅವರು ತಿಳಿಸಿದ್ದಾರೆ.

    ಘಟನೆಯಿಂದ ಬಾಲಕಿ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾಳೆ. ಬಾಲಕಿ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನಲ್ಲಿ ಸುಧಾರಣೆಯಾದ ಬಳಿಕ ಆಕೆಯ ಬಳಿಯಿಂದ ಹೇಳಿಕೆ ಪಡೆದುಕೊಳ್ಳಲಾಗುವುದು ಅಂತ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ಗೆಳತಿ, ಕಟ್ಟಡದ ಮಾಲೀಕ ಹಾಗೂ ಮತ್ತೊಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಅಲ್ಲದೇ ಕಟ್ಟಡದಲ್ಲಿದ್ದ ಬಾಲಕಿಯ ಬಟ್ಟೆ, ಆಲ್ಕೋಹಾಲ್ ಬಾಟಲಿ ಹಾಗೂ ಗ್ಲಾಸ್ ಗಳನ್ನು ವಶಪಡಿಸಿಕೊಂಡಿದ್ದಾರೆ.

    ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಪ್ರದೇಶದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪ್ರತಿಭಟನೆಗಳು ನಡೆದವು. 100ಕ್ಕೂ ಹೆಚ್ಚು ಮಂದಿ ರಸ್ತೆ ತಡೆದು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ ಎಂಬುದಾಗಿ ವರದಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv