Tag: patna

  • ಬಿಜೆಪಿ ಮಾಜಿ ಶಾಸಕನ ಸಹೋದರರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

    ಬಿಜೆಪಿ ಮಾಜಿ ಶಾಸಕನ ಸಹೋದರರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

    ಪಾಟ್ನಾ: ಗ್ಯಾಂಗ್ ವಾರ್‌ನಲ್ಲಿ ಬಿಜೆಪಿಯ ಮಾಜಿ ಶಾಸಕ ಚಿತ್ತರಂಜನ್ ಶರ್ಮಾ ಅವರ ಇಬ್ಬರು ಸಹೋದರರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿರುವ ಘಟನೆ ನಗರದ ವಿಜಯ್ ನಗರದ ಜನನಿಬಿಡ ಮಾರುಕಟ್ಟೆಯಲ್ಲಿ ನಡೆದಿದೆ.

    ಇಡೀ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆರೋಪಿಗಳು ನಡುರಸ್ತೆಯಲ್ಲೇ ಇಬ್ಬರನ್ನು ಹೇಗೆ ಕೊಂದಿದ್ದಾರೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ. ಗೌತಮ್ ಮತ್ತು ಶಂಭು ಗುಂಡಿನ ದಾಳಿಗೊಳಗಾದ ಚಿತ್ತರಂಜನ್ ಶರ್ಮಾ ಅವರ ಇಬ್ಬರು ಸಹೋದರರು. ಆರೋಪಿಗಳು ಮತ್ತು ಸಂತ್ರಸ್ತರು ಮೋಟಾರ್ ಸೈಕಲ್ ಚೇಸ್‍ನಲ್ಲಿ ತೊಡಗಿದ್ದರು. ನಂತರ ಅವರು ಗೌತಮ್ ಮೇಲೆ ಗುಂಡು ಹಾರಿಸಿದ್ದಾರೆ. ಒಮ್ಮೆ ಬೈಕ್‍ನಿಂದ ಬಿದ್ದ ಆರೋಪಿಗಳು ಹತ್ತಿರದಿಂದಲೇ ಗೌತಮ್ ತಲೆಗೆ ಗುಂಡು ಹಾರಿಸಿದ್ದಾರೆ. ಇದನ್ನೂ ಓದಿ: ಕೌಟುಂಬಿಕ ಕಲಹಕ್ಕೆ ಬೇಸತ್ತು ಮಗಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

    ದುಷ್ಕರ್ಮಿಗಳು ಶಂಬು ಅವರ ಮೇಲೂ ಹಲ್ಲೆ ನಡೆಸಿ ತೀವ್ರವಾಗಿ ಗಾಯಗೊಳಿಸಿದ್ದು, ಜನ ಗುಂಪು ಸೇರುತ್ತಿರುವುದನ್ನು ಕಂಡು ಸ್ಥಳದಿಂದ ಪರಾರಿಯಾಗಿದ್ದಾರೆ. ಇತ್ತ ಮಾರುಕಟ್ಟೆಯಲ್ಲಿದ್ದ ಸಾರ್ವಜನಿಕರಲ್ಲಿ ಭಯ, ಗಾಬರಿ ಆವರಿಸಿತು. ಗಾಯಗೊಂಡ ಇಬ್ಬರ ಪೈಕಿ ಗೌತಮ್ ಸ್ಥಳದಲ್ಲೇ ಮೃತಪಟ್ಟರೆ, ಶಂಬು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ರಾಮಮಂದಿರ ಸುತ್ತಮುತ್ತಲಿನ ಮದ್ಯ ಮಾರಾಟಗಾರರ ಪರವಾನಗಿ ರದ್ದು: ಯುಪಿ ಸರ್ಕಾರ 

    ಘಟನಾ ಸ್ಥಳದಿಂದ ನಾವು ಅರ್ಧ ಡಜನ್ ಖಾಲಿ ಕಾಟ್ರ್ರಿಡ್ಜ್‍ಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ಪಾಟ್ನಾದ ಹಿರಿಯ ಪೊಲೀಸ್ ಅಧೀಕ್ಷಕ (ಎಸ್‍ಎಸ್‍ಪಿ) ಮಾನವಜಿತ್ ಸಿಂಗ್ ಧಿಲ್ಲೋನ್ ಹೇಳಿದ್ದಾರೆ.

    ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

  • ಸಹೋದರಿಯ ಸ್ನೇಹಿತೆಯನ್ನೇ ಗರ್ಭಿಣಿ ಮಾಡಿ, ಗರ್ಭಪಾತವನ್ನೂ ಮಾಡಿಸಿದ!

    ಸಹೋದರಿಯ ಸ್ನೇಹಿತೆಯನ್ನೇ ಗರ್ಭಿಣಿ ಮಾಡಿ, ಗರ್ಭಪಾತವನ್ನೂ ಮಾಡಿಸಿದ!

    ಪಾಟ್ನಾ: ವ್ಯಕ್ತಿಯೊಬ್ಬ ಮದುವೆಯಾಗುವ ನೆಪದಲ್ಲಿ ಸಹೋದರಿಯ ಸ್ನೇಹಿತೆಯೊಂದಿಗೆ ದೈಹಿಕ ಸಂಬಂಧ ಬೆಳೆಸಿ ಆಕೆಯನ್ನು ಗರ್ಭಿಣಿ ಮಾಡಿದ್ದಲ್ಲದೇ ಅವಳಿಗೆ ಮತ್ತು ಬರುವ ಪಾನೀಯ ನೀಡಿ ಗರ್ಭಪಾತ ಮಾಡಿಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.

    ಯುವತಿಯು ಗರ್ಭಿಣಿಯಾದ ನಂತರ ಮದುವೆಯಾಗುವಂತೆ ಅವನಿಗೆ ಹಲವು ಬಾರಿ ಒತ್ತಾಯಿಸಿದ್ದಳು. ಆದರೆ ಆರೋಪಿ ಅದಕ್ಕೆ ನಿರಾಕರಿಸಿದ್ದನು ಎನ್ನಲಾಗಿದೆ. ನಂತರ ಅವನು ಆಕೆಗೆ ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿದ್ದಲ್ಲದೇ ಅವಳಿಗೆ ಅಮಲು ಪದಾರ್ಥ ನೀಡಿ ಆಸ್ಪತ್ರೆಗೆ ಕರೆದೊಯ್ದು ಗರ್ಭಪಾತ ಮಾಡಿಸಿದ್ದಾನೆ. ಇದನ್ನೂ ಓದಿ: ವಿದ್ಯಾಭ್ಯಾಸ ಕೊಡಿಸಲು ಆತ್ಮಹತ್ಯೆಗೆ ಶರಣಾಗಿದ್ದ ರೈತನ ಮಗಳು ಯುಪಿಎಸ್‍ಸಿಯಲ್ಲಿ ಟಾಪರ್ 

    ಈ ಹಿಂದೆ ಯುವತಿಯು ತನ್ನ ಹೆತ್ತವರಿಗೆ ಹುಡುಗನನ್ನು ಮದುವೆಯಾಗುವಂತೆ ಕೇಳಲು ಒತ್ತಾಯಿಸಿದಳು. ಆದರೆ ಅವಳ ಕುಟುಂಬವು ಸಹ ಈ ಬಗ್ಗೆ ಯಾವುದೇ ಗಮನವನ್ನು ನೀಡಲಿಲ್ಲ. ಗರ್ಭಪಾತದ ನಂತರ ಆಕೆಯ ಆರೋಗ್ಯ ಹದಗೆಟ್ಟಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಈ ಕುರಿತು ಯುವತಿಯು ಆರೋಪಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಬಳಿಕ ಎಫ್‍ಐಆರ್ ದಾಖಲಿಸಲಾಗಿದೆ. ಸಂತ್ರಸ್ತೆ ಪೊಲೀಸ್ ಠಾಣೆಯಲ್ಲಿ ನೀಡಿದ ಅರ್ಜಿ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ ಎಂದು ಎಸ್‍ಎಚ್‍ಒ ಕುಮಾರ್ ಬ್ರಜೇಶ್ ತಿಳಿಸಿದ್ದಾರೆ. ಇದನ್ನೂ ಓದಿ:  ಕಪಿಲೇಶ್ವರ ಮಂದಿರ ಕೆಡವಿ ಏನು ಕಟ್ಟಿದ್ದಾರೆ ಎಂಬ ಬಗ್ಗೆಯೂ ಸರ್ವೇ ಆಗಲಿ: ಲತೀಫ್‍ಖಾನ್ ಹೊಸ ಬಾಂಬ್ 

    ಸದ್ಯ ಆರೋಪಿಯು ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಶೋಧ ಕಾರ್ಯ ನಡೆಯುತ್ತಿದೆ.

  • ಮಗಳನ್ನೇ ಅತ್ಯಾಚಾರ ಮಾಡುವ ಶಿಕ್ಷಕನಿಗೆ ಪತ್ನಿಯೂ ಸಾಥ್

    ಮಗಳನ್ನೇ ಅತ್ಯಾಚಾರ ಮಾಡುವ ಶಿಕ್ಷಕನಿಗೆ ಪತ್ನಿಯೂ ಸಾಥ್

    ಪಾಟ್ನಾ: ಪಾಪಿ ತಂದೆಯೊಬ್ಬ ತನ್ನ ಮಗಳ ಮೇಲೆಯೇ ನಿರಂತರ ಅತ್ಯಾಚಾರ ಎಸಗಿದ್ದು, ಇದಕ್ಕೆ ತಾಯಿ ಕೂಡ ಸಾಥ್ ನೀಡಿರುವ ವಿಲಕ್ಷಣ ಘಟನೆಯೊಂದು ಬಿಹಾರದ ಸಮಸ್ತಿಪುರ ನಡೆದಿರುವುದಾಗಿ ಬೆಳಕಿಗೆ ಬಂದಿದೆ.

    18 ವರ್ಷದ ಯುವತಿಯು ಪ್ರತಿದಿನ ತನ್ನ ತಂದೆಯಿಂದ ಅತ್ಯಾಚಾರಕ್ಕೆ ಒಳಗಾಗುತ್ತಿದ್ದಳು. ಈ ಕೊಳಕು ಕೃತ್ಯಕ್ಕೆ ಅವರ ತಾಯಿಯೂ ಕೂಡಾ ಬೆಂಬಲ ನೀಡುತ್ತಿದ್ದಳು. ಮಗಳು ಈ ಕುರಿತು ದನಿ ಎತ್ತಿದಾಗಲೆಲ್ಲ ತಂದೆ-ತಾಯಿ ಇಬ್ಬರೂ ಆಕೆಯನ್ನು ಬೆದರಿಸಿ ಬಾಯಿ ಮುಚ್ಚಿಸುತ್ತಿದ್ದರು. ಕೊನೆಗೆ ಯುವತಿ ತನ್ನ ತಂದೆಯ ಈ ಕೃತ್ಯವನ್ನು ವೀಡಿಯೋ ಮಾಡಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಇದಾದ ಬಳಿಕ ಆರೋಪಿ ತಂದೆಯನ್ನು ಬಂಧಿಸಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ದೇಶದ್ರೋಹಿ ಶಕ್ತಿ ಇನ್ನೂ ಜೀವಂತ ಅನ್ನೋದಕ್ಕೆ ಛೋಟಾ ಪಾಕಿಸ್ತಾನ ಘೋಷಣೆಯೇ ಸಾಕ್ಷಿ: ಮುತಾಲಿಕ್

    ಸಂತ್ರಸ್ತೆಯ ತಂದೆ ವೃತ್ತಿಯಲ್ಲಿ ಶಿಕ್ಷಕನಾಗಿದ್ದನು. 50 ವರ್ಷದ ಈತ ಪ್ರತಿದಿನ ತನ್ನ ಸ್ವಂತ ಮಗಳನ್ನೇ ರೇಪ್ ಮಾಡುತ್ತಿದ್ದನು. ಈ ಬಗ್ಗೆ ಮಗಳು ತನ್ನ ತಾಯಿಗೆ ದೂರು ನೀಡಿದಾಗ, ತಾಯಿಯು ಆಕೆಯೇ ಮೇಲೆಯೇ ಆರೋಪ ಮಾಡಲು ಪ್ರಾರಂಭಿಸಿದಳು. ಸಂತ್ರಸ್ತೆ ತನ್ನ ತಂದೆಯ ಕೊಳಕು ವರ್ತನೆಗಳಿಂದ ಬೇಸತ್ತು, ಅದನ್ನು ವೀಡಿಯೋ ಮಾಡಿ ರೋಸ್ಡಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಶ್ರೀವಲ್ಲಿ ಹಾಡಿಗೆ ಡ್ಯಾನ್ಸ್ ಮಾಡಿದ ಪ್ರಿನ್ಸಿಪಾಲ್ ಸಸ್ಪೆಂಡ್

    ಈ ಹಿಂದೆ ಪೊಲೀಸರು ಯುವತಿಯ ದೂರು ದಾಖಲಿಸಿಕೊಳ್ಳದೆ ಠಾಣೆಯಿಂದ ಹೊರಹಾಕಿದ್ದರು ಎಂದು ಯುವತಿಯು ಆರೋಪಿಸಿದ್ದರು. ಆದರೆ ಈ ನೀಚ ಕೃತ್ಯ ಉನ್ನತ ಅಧಿಕಾರಿಗಳ ಗಮನಕ್ಕೆ ಬಂದಾಗ ಸಂತ್ರಸ್ತೆಯ ದೂರಿನ ಮೇರೆಗೆ ಪೊಲೀಸರು ಆರೋಪಿ ತಂದೆಯನ್ನು ಬಂಧಿಸಿದ್ದಾರೆ.

    ದೂರಿನ ಆಧಾರದ ಮೇಲೆ ಆರೋಪಿ ತಂದೆಯನ್ನು ಬಂಧಿಸಲಾಗಿದೆ. ಈ ಕುರಿತು ವಿಚಾರಣೆ ನಡೆಸಲಾಗುತ್ತಿದೆ. ಸರಿಯಾದ ಮಾಹಿತಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುವುದು ಎಂದು ಎಸ್‍ಡಿಪಿಒ ಸಹ್ರಿಯಾರ್ ಅಖ್ತರ್ ಹೇಳಿದ್ದಾರೆ.

  • ದೂರು ನೀಡಿದ್ದಕ್ಕೆ ಅಪ್ರಾಪ್ತೆಯ ಮೇಲೆ ಗ್ಯಾಂಗ್‍ರೇಪ್- ಮೂವರು ಅರೆಸ್ಟ್

    ದೂರು ನೀಡಿದ್ದಕ್ಕೆ ಅಪ್ರಾಪ್ತೆಯ ಮೇಲೆ ಗ್ಯಾಂಗ್‍ರೇಪ್- ಮೂವರು ಅರೆಸ್ಟ್

    ಪಾಟ್ನಾ: ಅಪ್ರಾಪ್ತ ಬಾಲಕಿಯ ಮೇಲೆ ಐವರು ವಿದ್ಯಾರ್ಥಿಗಳು ಸಾಮೂಹಿಕ ಅತ್ಯಚಾರಗೈದಿರುವ ಘಟನೆ ಬಿಹಾರದ ಜಮುಯಿ ಜಿಲ್ಲೆಯ ಕೋಚಿಂಗ್ ಸೆಂಟರ್‌ನಲ್ಲಿ ನಡೆದಿದೆ.

    ಬಾಲಕಿಯು ಕೋಚಿಂಗ್ ಕ್ಲಾಸ್‍ನಿಂದ ಹಿಂತಿರುಗುತ್ತಿದ್ದಾಗ ಆರೋಪಿಗಳು ಬಾಲಕಿಯನ್ನು ಬಲವಂತವಾಗಿ ಸಮೀಪದ ಕಾಡಿಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಪ್ರಕರಣದಲ್ಲಿ ಇದುವರೆಗೆ ಮೂವರನ್ನು ಬಂಧಿಸಲಾಗಿದೆ. ಆ ಐವರು ಆರೋಪಿಗಳಲ್ಲಿ ವಿದ್ಯಾರ್ಥಿಯೋರ್ವ ಅದೇ ಕೋಚಿಂಗ್ ಸೆಂಟರ್‌ನಲ್ಲಿ ಓದುತ್ತಿದ್ದ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಮರ್ಯಾದಾ ಹತ್ಯೆ – ತಹಶೀಲ್ದಾರ್ ಕಚೇರಿಯಲ್ಲೇ ಚಾಕುವಿನಿಂದ ಇರಿದು ವ್ಯಕ್ತಿ ಬರ್ಬರ ಕೊಲೆ

    ಅವನು ಈ ಹಿಂದೆ ಆ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದು, ಈ ಬಗ್ಗೆ ಕೋಚಿಂಗ್ ಸೆಂಟರ್‌ನ ಮುಖ್ಯಸ್ಥರಿಗೆ ಬಾಲಕಿಯ ಕುಟುಂಬದವರು ದೂರು ನೀಡಿದ್ದರು. ಈ ಹಿನ್ನೆಲೆ ಇನ್ನು ಮುಂದೆ ಬಾಲಕಿಗೆ ತೊಂದರೆಯಾಗುವುದಿಲ್ಲ ಅಂತಾ ಮುಖ್ಯಸ್ಥ ಭರವಸೆ ನೀಡಿದ್ದರು. ನಂತರ ಕುಟುಂಬವು ಅದೇ ಕೋಚಿಂಗ್ ಸೆಂಟರ್‌ಗೆ ಬಾಲಕಿಯನ್ನು ಕಳುಹಿಸಲು ನಿರ್ಧರಿಸಿದರು. ದೂರಿನ ಮೇರೆಗೆ ಕೋಪಗೊಂಡ ಆರೋಪಿ ಮತ್ತು ಅವನ ಸ್ನೇಹಿತರು ಬಾಲಕಿಯನ್ನು ಸಾಮೂಹಿಕ ಅತ್ಯಾಚಾರಕ್ಕೆ ಯೋಜನೆ ರೂಪಿಸಿದ್ದರು. ಇದನ್ನೂ ಓದಿ: ಕ್ಷುಲ್ಲಕ ವಿಚಾರಕ್ಕೆ ಪತ್ನಿಯ ಕತ್ತು ಹಿಸುಕಿ ಕೊಲೆ?

    ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯಕೀಯ ವರದಿಯ ನಂತರ ಸಾಮೂಹಿಕ ಅತ್ಯಾಚಾರ ನಡೆದಿರುವುದು ದೃಢಪಡಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಚಾಕುವಿನಿಂದ ಇರಿದ ದುಷ್ಕರ್ಮಿಗಳು

    ಪಾಟ್ನಾ: ಇಬ್ಬರು ದುಷ್ಕರ್ಮಿಗಳು ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ ಚಾಕುವಿನಿಂದ ಇರಿದ ಘಟನೆ ಗುರುಗ್ರಾಮದ ಡಿಎಲ್‍ಎಫ್ 3ನೇ ಹಂತದ ಪ್ರದೇಶವೊಂದರಲ್ಲಿ ಸೋಮವಾರ ನಡೆದಿದೆ.

    ಗುರುಗ್ರಾಮದ ಡಿಎಲ್‍ಎಫ್ 3ನೇ ಹಂತದ ಪ್ರದೇಶದ ನಾಥುಪುರದಲ್ಲಿ 23 ವರ್ಷದ ಮಹಿಳೆಯೊಬ್ಬಳ ಮೇಲೆ ಇಬ್ಬರು ವ್ಯಕ್ತಿಗಳು ಅತ್ಯಾಚಾರವೆಸಗಿ ಚಾಕುವಿನಿಂದ ಇರಿದಿದ್ದಾರೆ. ಈ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬನಿಗಾಗಿ ಶೋಧ ಕಾರ್ಯ ನಡೆದಿದೆ. ಆರೋಪಿಯನ್ನು ಬಿಹಾರ ನಿವಾಸಿ ಅನಿಲ್ ಠಾಕೂರ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ರೇಪ್ ಕೇಸ್ ದಾಖಲಿಸಲು ಠಾಣೆಗೆ ಹೋದ ಬಾಲಕಿ ಮೇಲೆ ಪೊಲೀಸ್‌ನಿಂದಲೂ ಅತ್ಯಾಚಾರ!

    ಗಂಭೀರ ಗಾಯಗೊಂಡ ಮಹಿಳೆಯನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಾಗಿರುವ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

    ಸಂತ್ರಸ್ತೆಯ ಪತಿ, ಆಟೋರಿಕ್ಷಾ ಚಾಲಕನಾಗಿದ್ದು, ಪೊಲೀಸ್ ದೂರಿನಲ್ಲಿ ತಮ್ಮ ಹೆಂಡತಿಯಿಂದ ಕರೆ ಬಂದಿತ್ತು. ಇಬ್ಬರು ಪುರುಷರು ನನ್ನ ಮೇಲೆ ಅತ್ಯಾಚಾರವೆಸಗಿ ಚಾಕುವಿನಿಂದ ಇರಿದಿದ್ದಾರೆ ಎಂದು ಹೇಳಿದಳು. ನಾನು ಸ್ಥಳದ ಬಗ್ಗೆ ಅವಳನ್ನು ಕೇಳಿದಾಗ, ಅವಳು ಅದನ್ನು ಬಹಿರಂಗಪಡಿಸಲು ಸಾಧ್ಯವಾಗಲಿಲ್ಲ. ಆದರೆ ಹೇಗಾದರೂ ಅವಳು ಮನೆಗೆ ತಲುಪಿದಳು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗಾಂಧಿನಗರ ಕಾಂಗ್ರೆಸ್ ಪಕ್ಷದ ವಕ್ತಾರರಾಗಿ ಲಕ್ಷ್ಮೀಕಾಂತ್ ನೇಮಕ

    ಮಹಿಳೆಯ ಹೇಳಿಕೆಯನ್ನು ಇನ್ನೂ ದಾಖಲಿಸಿಕೊಳ್ಳಬೇಕಾಗಿದೆ. ಈಗಾಗಲೇ ಪತಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

    ಪತಿಯ ದೂರಿನ ಆಧಾರದ ಮೇಲೆ ಇಬ್ಬರ ವಿರುದ್ಧವು ವಿವಿಧ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

  • ಅನೈತಿಕ ಸಂಬಂಧ ಆರೋಪ – ಮಹಿಳೆಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ ಕುಟುಂಬದ ಸದಸ್ಯರು

    ಅನೈತಿಕ ಸಂಬಂಧ ಆರೋಪ – ಮಹಿಳೆಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ ಕುಟುಂಬದ ಸದಸ್ಯರು

    ಪಾಟ್ನಾ: ಗ್ರಾಮವೊಂದರಲ್ಲಿ ಬೇರೊಬ್ಬ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿ ಮಹಿಳೆಯನ್ನು ಪತಿ ಸೇರಿದಂತೆ ಕುಟುಂಬಸ್ಥರು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಘಟನೆ ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ ನಡೆದಿದೆ.

    CRIME 2

    ಆಕೆಯ ಪತಿ ದೀಪಕ್ ರಾಮ್ ಶುಕ್ರವಾರ ಪೊಲೀಸರನ್ನು ಸಂಪರ್ಕಿಸಿದ್ದು, ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಕೇಳಿಕೊಂಡಿದ್ದಾರೆ. ನಂತರ ಮೂವರು ಮಕ್ಕಳಿರುವ ದಂಪತಿಯನ್ನು ಠಾಣೆಗೆ ಕರೆಸಿ ಠಾಣಾಧಿಕಾರಿ ಕೌನ್ಸೆಲಿಂಗ್ ಮಾಡಿದ್ದಾರೆ. ಇದನ್ನೂ ಓದಿ: ಕಾರು, ಮೋಟಾರ್ ಬೈಕ್ ಡಿಕ್ಕಿ – ಝೊಮ್ಯಾಟೋ ಡೆಲಿವರಿ ಬಾಯ್, ಇಬ್ಬರು ಯುವತಿಯರು ಸಾವು

    ನಂತರ ದಂಪತಿ ತಮ್ಮ ಸ್ವಗ್ರಾಮ ಸಿಂಗ್‍ಪುರ ತಲುಪಿದ ನಂತರ, ದೀಪಕ್ ರಾಮ್, ಅವರ ತಂದೆ ಶಿವಪೂಜನ್ ರಾಮ್ ಮತ್ತು ಇತರ ಮೂವರು ಕುಟುಂಬ ಸದಸ್ಯರು ಸೇರಿ ಮಹಿಳೆಯನ್ನು ತಮ್ಮ ಮನೆಯ ಹೊರಗಿನ ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ್ದಾರೆ. ಇದನ್ನೂ ಓದಿ: ನೇಣು ಬಿಗಿದ ಸ್ಥಿತಿಯಲ್ಲಿ ನರ್ಸ್ ಮೃತದೇಹ ಪತ್ತೆ – ಅತ್ಯಾಚಾರ ಆರೋಪ ಮಾಡಿದ ಕುಟುಂಬಸ್ಥರು

    ಈ ವೇಳೆ ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿ ಮಹಿಳೆಯನ್ನು ರಕ್ಷಿಸಿದೆ ಎಂದು ರೋಹ್ತಾಸ್ ಪೊಲೀಸ್ ವರಿಷ್ಠಾಧಿಕಾರಿ ಆಶಿಶ್ ಭಾರ್ತಿ ಹೇಳಿದ್ದಾರೆ.

  • ಪೊಲೀಸ್ ಕಾಲೋನಿಯಲ್ಲೇ ಗುಂಡಿನ ದಾಳಿ: ಹೆಂಡತಿ, ಮಗಳನ್ನು ಕೊಂದು ತಾನೂ ಆತ್ಮಹತ್ಯೆ

    ಪೊಲೀಸ್ ಕಾಲೋನಿಯಲ್ಲೇ ಗುಂಡಿನ ದಾಳಿ: ಹೆಂಡತಿ, ಮಗಳನ್ನು ಕೊಂದು ತಾನೂ ಆತ್ಮಹತ್ಯೆ

    ಪಾಟ್ನಾ: ಇಲ್ಲಿನ ಗಾರ್ಡನಿಬಾಗ್ ಪ್ರದೇಶದ ಪೊಲೀಸ್ ಕಾಲೋನಿಯಲ್ಲಿ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ತನ್ನ ಪತ್ನಿ ಮತ್ತು ಮಗಳನ್ನು ಕೊಂದು ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.

    CRIME 2

    ಗುಂಡಿನ ದಾಳಿ ನಡೆಸಿದ ವ್ಯಕ್ತಿಯನ್ನು ರಾಜೀವ್‌ಕುಮಾರ್ ಎಂದು ಗುರುತಿಸಲಾಗಿದೆ. ಈತ ನಿರುದ್ಯೋಗಿಯಾಗಿದ್ದರು ಎನ್ನಲಾಗಿದೆ. ಇದನ್ನೂ ಓದಿ: ನನ್ನೊಂದಿಗೆ ಮಲಗದಿದ್ದರೆ ಇನ್ನೂ 20 ಪುರುಷರನ್ನು ಕರೆತರುವೆ: ರೇಪ್‌ಗೂ ಮುನ್ನ ರಷ್ಯಾ ಸೈನಿಕನ ಮಾತು

    ಈ ಕುರಿತು ಮಾಹಿತಿ ನೀಡಿರುವ ಪಾಟ್ನಾ ಎಸ್‌ಎಸ್‌ಪಿ ಮಾನವಜೀತ್ ಸಿಂಗ್ ಧಿಲ್ಲೋನ್, ಇಂದು ಮಧ್ಯಾಹ್ನ 12:40ರ ವೇಳೆಗೆ ನಿಸಾಬಾದ್‌ನ ಪೊಲೀಸ್ ಕಾಲೋನಿಯಲ್ಲಿ ಹೋಗುತ್ತಿದ್ದ ವೇಳೆ ರಾಜೀವ್ ಗುಂಡಿನ ದಾಳಿ ನಡೆಸಿದ್ದಾನೆ. ಮಾಹಿತಿ ಪಡೆದು ತಕ್ಷಣ ಸ್ಥಳಕ್ಕೆ ಧಾವಿಸಿದ ನಮ್ಮ ಪೊಲೀಸರ ತಂಡ ಪ್ರತ್ಯಕ್ಷದರ್ಶಿಗಳ ಹೇಳಿಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದೆ. ಇದನ್ನೂ ಓದಿ; ವಿವಾಹ ಸಮಾರಂಭದಲ್ಲಿ ಹಾವಿನೊಂದಿಗೇ ನೃತ್ಯ – ಮುಂದೇನಾಯ್ತು ಗೊತ್ತಾ?

    crime

    ಪ್ರಾಥಮಿಕ ತನಿಖೆಗಳ ಪ್ರಕಾರ, ರಾಜೀವ್ ಮೊದಲ ಪತ್ನಿ ಕೆಲವು ವರ್ಷಗಳ ಹಿಂದೆ ಸಹಜ ಕಾರಣಗಳಿಂದ ನಿಧನರಾದರು. ನಂತರ ಈತ ತನ್ನ ಅತ್ತಿಗೆ ಪ್ರಿಯಾಂಕಾಳನ್ನೇ ವಿವಾಹವಾದರು. ಕೊಲೆಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ, ಪೊಲೀಸರಿಂದ ತನಿಖೆ ಮುಂದುವರಿದಿದೆ.

  • ಹೆಂಡತಿ ಬಾರದಿದ್ದಕ್ಕೆ ಅಪ್ರಾಪ್ತ ನಾದಿನಿಯೊಂದಿಗೆ ಪರಾರಿಯಾಗಿದ್ದ 4 ಮಕ್ಕಳ ತಂದೆ

    ಹೆಂಡತಿ ಬಾರದಿದ್ದಕ್ಕೆ ಅಪ್ರಾಪ್ತ ನಾದಿನಿಯೊಂದಿಗೆ ಪರಾರಿಯಾಗಿದ್ದ 4 ಮಕ್ಕಳ ತಂದೆ

    ಪಾಟ್ನಾ: ತವರು ಮನೆಯಿಂದ ಪತ್ನಿಯನ್ನು ಕರೆದುಕೊಂಡು ಬರಲು ಹೋಗಿದ್ದ ವ್ಯಕ್ತಿಯೊಬ್ಬ, ತನ್ನ ಹೆಂಡತಿ ಮನೆಗೆ ಬರಲು ನಿರಾಕರಿಸಿದ ನಂತರ ವ್ಯಕ್ತಿ ತನ್ನ ನಾದಿನಿಯೊಂದಿಗೆ ಪರಾರಿಯಾಗಿರುವ ಘಟನೆ ಬಿಹಾರದ ಛಪ್ರಾ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.

    Child Marriage Bride

    ಕೃಷ್ಣರಾಮ್ ಎಂಬ ವ್ಯಕ್ತಿ ತನ್ನ ಹೆಂಡತಿ ಸಂಕಾಂತಿ ದೇವಿಯನ್ನು ಮರಳಿ ಕರೆತರಲು ಅತ್ತೆಯ ಮನೆಗೆ ಹೋಗಿದ್ದಾಗ, ಆಕೆ ಅವನೊಂದಿಗೆ ಬರಲು ನಿರಾಕರಿಸಿದ್ದಾಳೆ. ಇದರಿಂದ ಕೃಷ್ಣರಾಮ್ ತನ್ನ ಅಪ್ರಾಪ್ತ ನಾದಿನಿಯನ್ನು ಪುಸಲಾಯಿಸಿ, ಸುಳ್ಳು ಭರವಸೆ ನೀಡಿ ಆಕೆಯೊಂದಿಗೆ ಓಡಿ ಹೋಗಿದ್ದಾನೆ. ಇದನ್ನೂ ಓದಿ: ನನ್ನೊಂದಿಗೆ ಮಲಗದಿದ್ದರೆ ಇನ್ನೂ 20 ಪುರುಷರನ್ನು ಕರೆತರುವೆ: ರೇಪ್‌ಗೂ ಮುನ್ನ ರಷ್ಯಾ ಸೈನಿಕನ ಮಾತು

    Child Marriage Bride

    ಪೋಷಕರಿಗೆ ಕಾದಿತ್ತು ಶಾಕ್: ತನ್ನ ಮಗಳನ್ನು ಅಪಹರಿಸಿದ್ದಕ್ಕಾಗಿ ಹುಡುಗಿಯ ತಂದೆ ತಕ್ಷಣವೇ ಕೃಷ್ಣರಾಮ್ ವಿರುದ್ಧ ದೂರು ದಾಖಲಿಸಿದ್ದಾರೆ. ಆದರೆ, ವಿಷಯ ಮಹಿಳಾ ಸಹಾಯವಾಣಿಗೆ ತಲುಪಿದಾಗ, ಅಪ್ರಾಪ್ತ ಹುಡುಗಿ ಸ್ವಂತ ಕುಟುಂಬದ ವಿರುದ್ಧವೇ ಬಾಲ್ಯ ವಿವಾಹದ ಆರೋಪ ಮಾಡಿರುವುದು ಕಂಡುಬಂದಿದೆ. ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿದ ನಂತರವೇ ಸತ್ಯಾಂಶ ತಿಳಿದು ಬಂದಿದೆ. ಅಲ್ಲದೆ, ರಾಮ್ ಅಪ್ರಾಪ್ತ ಹುಡುಗಿಯನ್ನು ಮಹಿಳಾ ಮತ್ತು ಮಕ್ಕಳ ಸಹಾಯವಾಣಿ ಕೇಂದ್ರಕ್ಕೆ ಕರೆದೊಯ್ದು ಅಲ್ಲಿ ಕುಟುಂಬದ ವಿರುದ್ಧವೇ ಸುಳ್ಳು ದೂರು ದಾಖಲಿಸುವಂತೆ ಮಾಡಿದ್ದಾನೆ ಎನ್ನುವುದೂ ಗೊತ್ತಾಗಿದೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ. ಇದನ್ನೂ ಓದಿ: ವಿವಾಹ ಸಮಾರಂಭದಲ್ಲಿ ಹಾವಿನೊಂದಿಗೇ ನೃತ್ಯ – ಮುಂದೇನಾಯ್ತು ಗೊತ್ತಾ?

    CRIME 2

    ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಪೊಲೀಸರು ರಾಮ್ ನನ್ನು ಬಂಧಿಸಿದ್ದಾರೆ. ಆರೋಪಿ ರಾಮ್‌ಗೆ ಕಳೆದ 12 ವರ್ಷಗಳಿಂದ ಸಂಕಾಂತಿ ದೇವಿ ಅವರೊಂದಿಗೆ ಸಂಸಾರ ನಡೆಸುತ್ತಿದ್ದ. ಈತನಿಗೆ 4 ಮಕ್ಕಳಿದ್ದಾರೆ. ಈತನಿಂದ ತೊಂದರೆಗೀಡಾದ ದೇವಿ ಮತ್ತೆ ತನ್ನ ತಂದೆ ತಾಯಿಯ ಮನೆಗೆ ಹೋಗಿದ್ದಳು ಎನ್ನಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

  • ಗ್ಯಾಸ್ ಸಿಲಿಂಡರ್‌ನಲ್ಲಿ 50 ಲೀಟರ್ ಮದ್ಯ ಸಾಗಿಸುತ್ತಿದ್ದ ಚಾಲಾಕಿ ಬಂಧನ

    ಗ್ಯಾಸ್ ಸಿಲಿಂಡರ್‌ನಲ್ಲಿ 50 ಲೀಟರ್ ಮದ್ಯ ಸಾಗಿಸುತ್ತಿದ್ದ ಚಾಲಾಕಿ ಬಂಧನ

    ಪಾಟ್ನಾ: LPG ಸಿಲಿಂಡರ್‌ನಲ್ಲಿ ಮದ್ಯ ಸಾಗಿಸುತ್ತಿದ್ದ ಚಾಲಾಕಿಯೊಬ್ಬನನ್ನು ಬಿಹಾರದ ಪೊಲೀಸರು ಬಂಧಿಸಿದ್ದಾರೆ.

    ಭೂಷಣ್ ರೈ ಬಂಧಿತ ಆರೋಪಿ. ಮದ್ಯ ಸಾಗಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಕಂದಘಾಟ್ ಸಮೀಪ ದಾಳಿ ನಡೆಸಿ, ಸಿಲಿಂಡರ್‌ನಲ್ಲಿದ್ದ 50 ಲೀ. ಮದ್ಯವನ್ನು ಜಪ್ತಿ ಮಾಡಿದ್ದಾರೆ. ಇದನ್ನೂ ಓದಿ: ಮಗನನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ತಾಯಿ

    spurious_liquor

    ವ್ಯಕ್ತಿಯು ಬಿಹಾರದ ಅಬಕಾರಿ ತಿದ್ದುಪಡಿ-2022ರ ಅಡಿಯಲ್ಲಿ ದಂಡ ಪಾವತಿಸಲು ನಿರಾಕರಿಸಿದ್ದಾನೆ. ಇದರಿಂದಾಗಿ ನಿಯಮ ಉಲ್ಲಂಘಿಸಿದವರಿಗೆ ಒಂದು ತಿಂಗಳ ಕಾಲ ಜೈಲುಶಿಕ್ಷೆ ವಿಧಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

  • ಶಾಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿ 20 ಮಕ್ಕಳು ಅಸ್ವಸ್ಥ

    ಶಾಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿ 20 ಮಕ್ಕಳು ಅಸ್ವಸ್ಥ

    ಪಾಟ್ನಾ: ಶಾಲೆಯಲ್ಲಿ ಮಧ್ಯಾಹ್ನ ವೇಳೆ ನೀಡಲಾಗಿದ್ದ ಉಪಹಾರ ಸೇವಿಸಿ 20 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಬಿಹಾರದ ಮಾಧೇಪುರ ಜಿಲ್ಲೆಯ ಕಾಶಿಪುರದಲ್ಲಿ ಬೆಳಕಿಗೆ ಬಂದಿದೆ.

    ಮಕ್ಕಳು ಸೇವಿಸಿದ ಆಹಾರ ಕಲುಷಿತಗೊಂಡಿದ್ದರಿಂದ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಹುತೇಕ ಮಕ್ಕಳು ಸಹಜ ಸ್ಥಿತಿಗೆ ಮರಳಿದ್ದು, ಇಬ್ಬರು ಮಕ್ಕಳಿಗೆ ಇನ್ನೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರಾದ ಡಾ.ಮುಖೇಶ್‌ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಆಂಬುಲೆನ್ಸ್‌ಗೆ ದಾರಿ ಕಲ್ಪಿಸಲು ತಮ್ಮ ಬೆಂಗಾವಲು ವಾಹನ ನಿಲ್ಲಿಸಿದ ಯೋಗಿ ಆದಿತ್ಯನಾಥ್‌

    MEALS

    ಘಟನೆ ಸಂಬಂಧ ಶಾಲಾ ಶಿಕ್ಷಕಿ ಬಬಿತಾ ಕುಮಾರಿ ಅವರಿಂದ ಮಾಹಿತಿ ಪಡೆದ ಬ್ಲಾಕ್ ಶಿಕ್ಷಣಾಧಿಕಾರಿ ಗುಣಾನಂದ್‌ಸಿಂಗ್, ಮಕ್ಕಳಿಗೆ ಮಧ್ಯಾಹ್ನ ನೀಡಲಾದ ಆಹಾರವು ಹಳಸಾಗಿತ್ತು ಎಂದು ತಿಳಿದು ಬಂದಿದೆ. ಈ ಕುರಿತು ಉನ್ನತ ಅಧಿಕಾರಿಗಳಿಗೆ ದೂರು ನೀಡಲಾಗುವುದು. ಅಲ್ಲದೆ, ಇನ್ನು ಮುಂದೆ ಅಂತಹ ಗುಣಮಟ್ಟದ ಆಹಾರ ನೀಡದಂತೆ ಕ್ರಮವಹಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: 20 ಕಡೆ ದಾಳಿ, ಸಾವಿರಾರು ಜನರ ಹತ್ಯೆ – ಮೋದಿಗೆ ಕೊಲೆ ಬೆದರಿಕೆ

    ಸರ್ಕಾರೇತರ ಸಂಸ್ಥೆಯೊಂದು ಮಕ್ಕಳಿಗೆ ಮಧ್ಯಾಹ್ನದ ಉಪಹಾರ ನೀಡಲು ಪ್ರಾರಂಭಿಸಿದಾಗಿನಿಂದಲೂ ಕಳಪೆ ಗುಣಮಟ್ಟದ ಆಹಾರವನ್ನು ಪೂರೈಸುತ್ತಿದೆ. ಈ ಬಗ್ಗೆ ಪೋಷಕರು ಶಾಲಾ ಮುಖ್ಯಸ್ಥರಿಗೆ ದೂರು ನೀಡಿದ್ದರು. ಅಲ್ಲದೆ, ಶಾಲೆಗಳಲ್ಲಿ ಬೇಯಿಸಿದ ಆಹಾರವನ್ನೇ ನೀಡುವಂತೆ ಮನವಿ ಮಾಡಿದ್ದರು. ಕ್ರಮ ಕೈಗೊಳ್ಳದ ಪರಿಣಾಮ ಇಂದು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಿದೆ ಎಂದು ಪೋಷಕರು ವಿಷಾದ ವ್ಯಕ್ತಪಡಿಸಿದ್ದಾರೆ.ಶಾಲೆ, ಪಾಟ್ನಾ, ಬಿಹಾರ, ಶಿಕ್ಷಣಾಧಿಕಾರಿ.