Tag: pavagada

  • ನಿಧಿ ನಿಕ್ಷೇಪ ತೋರಿಸುವುದಾಗಿ 16 ಲಕ್ಷ ರೂ. ನಾಮ – ವಂಚಿತರಿಂದ ಜ್ಯೋತಿಷಿಯ ಕಿಡ್ನಾಪ್

    ನಿಧಿ ನಿಕ್ಷೇಪ ತೋರಿಸುವುದಾಗಿ 16 ಲಕ್ಷ ರೂ. ನಾಮ – ವಂಚಿತರಿಂದ ಜ್ಯೋತಿಷಿಯ ಕಿಡ್ನಾಪ್

    ತುಮಕೂರು: ನಿಧಿ (Treasure) ನಿಕ್ಷೇಪ ತೋರಿಸುವುದಾಗಿ ಜ್ಯೋತಿಷಿಯೊಬ್ಬರು (Astrologer) 16 ಲಕ್ಷ ರೂ. ಪಡೆದು ನಾಮ ಹಾಕಿದ್ದು, ನಿಧಿ ಸಿಗದ ಹಿನ್ನೆಲೆ ಬೆಂಗಳೂರಿನ ಕಮಲಾ ನಗರ ನಿವಾಸಿಗಳು ಜ್ಯೋತಿಷಿಯನ್ನು ಕಿಡ್ನಾಪ್ (Kidnap) ಮಾಡಿದ ಘಟನೆ ಪಾವಗಡ (Pavagada) ತಾಲೂಕಿನ ರಾಜವಂತಿ ಗ್ರಾಮದಲ್ಲಿ ನಡೆದಿದೆ.

    ರಾಜವಂತಿ ಗ್ರಾಮದ ಜ್ಯೋತಿಷಿ ರಾಮಣ್ಣ ಸ್ವಾಮಿ ಎನ್ನುವವರನ್ನು ಬೆಂಗಳೂರಿನ ಕಮಲಾನಗರದ ನಿವಾಸಿಗಳು ಕಿಡ್ನಾಪ್ ಮಾಡಿದ್ದು, ಪಾವಗಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಶಿವರಾಜು (32), ಮೇದರಹಳ್ಳಿ ಚಿಕ್ಕಬಾಣಾವರದ ಅನಂತಕೃಷ್ಣ (21), ಆಂಧ್ರದ ಮಡಕಶಿರಾ ತಾಲೂಕಿನ ಕೊತಾಲಗುಟ್ಟದ ನರೇಶ್ (25) ಬಂಧಿತ ಆರೋಪಿಗಳು. ಅತಿಯಾಸೆಗೆ ಬಿದ್ದು ಹಣ ಕೊಟ್ಟವರು ಹಣ ವಸೂಲಿಗಾಗಿ ಜ್ಯೋತಿಷಿಯ ಕಿಡ್ನಾಪ್ ಪ್ಲಾನ್ ಮಾಡಿದ್ದು, ಪೊಲೀಸರು ಕಿಡ್ನಾಪ್ ಮಾಡಿದ ಟೀಂ ಅನ್ನು ಕೇವಲ 12 ಗಂಟೆಯೊಳಗೆ ಬಂಧಿಸಿದ್ದಾರೆ. ಇದನ್ನೂ ಓದಿ: ಕೆಪಿಎಸ್‍ಸಿ ಪರೀಕ್ಷೆಗೆ ತಾಳಿ, ಕಾಲುಂಗುರ ತೆಗೆಸಿ ಸಿಬ್ಬಂದಿ ಯಡವಟ್ಟು – ಸುದ್ದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು

    ರಾತ್ರಿ 9 ಗಂಟೆಗೆ ಜ್ಯೋತಿಷಿಯನ್ನು ರಕ್ಷಿಸಿ ಕಿಡ್ನಾಪರ್ಸ್‌ಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮತ್ತೊಬ್ಬ ಆರೋಪಿ ಹರೀಶ್ ಎಸ್ಕೇಪ್ ಆಗಿದ್ದಾನೆ. ಬೈಕ್‌ನಲ್ಲಿ ಹೊರಟಿದ್ದ ಜ್ಯೋತಿಷಿ ರಾಮಣ್ಣನವರನ್ನು ಎರಡು ಕಾರುಗಳಲ್ಲಿ ಬಂದು ಕಿಡ್ನಾಪ್ ಮಾಡಿದ್ದರು. ಪಾವಗಡದ ಅರಣ್ಯ ಇಲಾಖೆ ಕಚೇರಿ ಎದುರು ಆರೋಪಿಗಳು ರಾಮಣ್ಣನವರನ್ನು ಕಿಡ್ನಾಪ್ ಮಾಡಿದ್ದು, ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದನ್ನೂ ಓದಿ: ನ.19ಕ್ಕೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬೇಡಿ – ಖಲಿಸ್ತಾನಿ ಭಯೋತ್ಪಾದಕನ ಬೆದರಿಕೆ ವೀಡಿಯೋ

    ರಾಮಣ್ಣನವರ ಮೊಬೈಲ್‌ನಿಂದಲೇ ಆರೋಪಿಗಳು ರಾಮಣ್ಣರ ಮಗನಿಗೆ ಕರೆ ಮಾಡಿದ್ದರು. ನಿಮ್ಮ ತಂದೆ 16 ಲಕ್ಷ ರೂ. ಸಾಲ ಪಡೆದಿದ್ದಾರೆ. ಆ ಹಣ ಕೊಟ್ಟು ನಿಮ್ಮ ತಂದೆಯನ್ನು ಬಿಡಿಸಿಕೊಂಡು ಹೋಗಿ ಎಂದು ಹೇಳಿದ್ದರು. ಈ ಕುರಿತು ದೂರು ದಾಖಲಿಸಿಕೊಂಡ ಪೊಲೀಸರು ಬೆಂಗಳೂರಿನ ಉಳ್ಳಾಲ ಬಳಿ ರಾಮಣ್ಣನವರನ್ನು ರಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಚಾಕು ಇರಿದು ಉಪನಿರ್ದೇಶಕಿಯ ಬರ್ಬರ ಹತ್ಯೆ

  • ಮೊಬೈಲ್ ಚಾರ್ಜರ್ ಕೊಡ್ಲಿಲ್ಲ ಎಂದು ನೇಣಿಗೆ ಶರಣಾದ ಯುವಕ

    ಮೊಬೈಲ್ ಚಾರ್ಜರ್ ಕೊಡ್ಲಿಲ್ಲ ಎಂದು ನೇಣಿಗೆ ಶರಣಾದ ಯುವಕ

    ತುಮಕೂರು: ಮೊಬೈಲ್ ಚಾರ್ಜರ್ (Mobile Charger) ಕೊಡಲಿಲ್ಲ ಎಂದು ಯುವಕ ನೇಣಿಗೆ ಶರಣಾದ ಘಟನೆ ತುಮಕೂರು (Tumakuru) ಜಿಲ್ಲೆಯ ಪಾವಗಡ (Pavagada) ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಸಿಂಗರೆಡ್ಡಿ ಹಳ್ಳಿಯಲ್ಲಿ ನಡೆದಿದೆ.

    ನಿಖಿಲ್ (18) ನೇಣಿಗೆ ಶರಣಾದ ಯುವಕ. ಮೃತ ನಿಖಿಲ್ ಆಶಾ ಕಾರ್ಯಾಕರ್ತೆಯಾಗಿರುವ ವರಲಕ್ಷ್ಮಮ್ಮ ಎಂಬವರ ಪುತ್ರನಾಗಿದ್ದು, ಪಾವಗಡ ಪಟ್ಟಣದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ. ಇದನ್ನೂ ಓದಿ: ಬೀದರ್‌ನಲ್ಲಿ ಸ್ವಂತ ತಂದೆಯಿಂದಲೇ 12 ವಯಸ್ಸಿನ ಮಗಳ ಮೇಲೆ ನಿರಂತರ ಅತ್ಯಾಚಾರ

    ಘಟನೆಯ ಮೊದಲು ಯುವಕ ತಾಯಿಯ ಬಳಿ ನನಗೆ ಚಾರ್ಜರ್ ಕೊಡು ಎಂದಿದ್ದಾನೆ. ಈ ವೇಳೆ ತಾಯಿ ನನ್ನ ಹತ್ತಿರ ಮೊಬೈಲ್ ಚಾರ್ಜರ್ ಇಲ್ಲವೆಂದು ಹೇಳಿ ಅಲ್ಲೇ ಹತ್ತಿರದ ಮನೆಯೊಂದರಲ್ಲಿ ಹೂ ಕಟ್ಟಲು ಹೋಗಿದ್ದಾರೆ. ಇದನ್ನೂ ಓದಿ: ಉಡುಪಿ ಕೇಸಲ್ಲಿ ಸಂತ್ರಸ್ತೆ, ಆರೋಪಿಗಳ ವಿಚಾರಣೆ- ಪ್ರಕರಣಕ್ಕೆ ಕೇರಳ ಲಿಂಕ್ ಕೊಟ್ಟು ಬಿಜೆಪಿ ಪ್ರತಿಭಟನೆ

    ವಾಪಸ್ ಮನೆಗೆ ಬಂದು ಬಾಗಿಲು ಬಡಿದಾಗ ನಿಖಿಲ್ ಬಾಗಿಲು ತೆಗೆಯಲಿಲ್ಲ. ಅನುಮಾನಗೊಂಡು ಸ್ಥಳೀಯರ ಸಹಾಯದಿಂದ ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ವೈ.ಎನ್.ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಗುಪ್ತಾಂಗಕ್ಕೆ ವಿಕೆಟ್‍ನಿಂದ ಚುಚ್ಚಿದ ಪತಿ- ಪತ್ನಿ ಸ್ಥಿತಿ ಗಂಭೀರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಾವಗಡ ಪೊಲೀಸ್ ಠಾಣೆಗೆ ಗೃಹ ಸಚಿವ ದಿಢೀರ್ ಭೇಟಿ

    ಪಾವಗಡ ಪೊಲೀಸ್ ಠಾಣೆಗೆ ಗೃಹ ಸಚಿವ ದಿಢೀರ್ ಭೇಟಿ

    ತುಮಕೂರು: ಪಾವಗಡ ಪೊಲೀಸ್ ಠಾಣೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಶನಿವಾರ ಸಂಜೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಈ ವೇಳೆ ಠಾಣೆಯಲ್ಲಿನ ವಿಸಿಟರ್ ಪುಸ್ತಕವನ್ನು ತೆರೆದು ದೂರುದಾರನೊಬ್ಬನಿಗೆ ಕರೆ ಮಾಡಿದ್ದಾರೆ. ಆತ ನೀಡಿದ ದೂರಿಗೆ ಪೊಲೀಸರ ಸ್ಪಂದನೆಯ ಬಗ್ಗೆ ವಿಚಾರಿಸಿದ್ದಾರೆ. ಬಳಿಕ ಪೊಲೀಸ್ ಠಾಣೆಯ ಕಟ್ಟಡಗಳ ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕನಿಮೊಳಿಗೆ ಟಿಕೆಟ್ – ಕೆಲಸ ತೊರೆದ ತಮಿಳುನಾಡಿನ ಮೊದಲ ಬಸ್ ಚಾಲಕಿ

    ಪೊಲೀಸರು ಸಾರ್ವಜನಿಕರ ಸಮಸ್ಯೆಗೆ ಉತ್ತಮವಾಗಿ ಸ್ಪಂದಿಸಬೇಕು. ದೂರುದಾರರು ನೀಡಿದ ದೂರುಗಳ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿ ತೆರಳಿದ್ದಾರೆ. ಇದನ್ನೂ ಓದಿ: ಅನ್ನಭಾಗ್ಯಕ್ಕೆ ಮತ್ತಷ್ಟು ಸಂಕಷ್ಟ- ರಾಜ್ಯಗಳು ಹೇಳಿದ್ದೇನು?

  • ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಗ್ರಾಮ ಪಂಚಾಯಿತಿ

    ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಗ್ರಾಮ ಪಂಚಾಯಿತಿ

    ತುಮಕೂರು: ವಿದ್ಯುತ್ ಪ್ರಸರಣದಲ್ಲಿ ಏರುಪೇರಿನಿಂದ ಶಾರ್ಟ್ ಸರ್ಕ್ಯೂಟ್ (Short Circuit) ಉಂಟಾಗಿ ಗ್ರಾಮ ಪಂಚಾಯಿತಿ (Gram Panchayat) ಕಚೇರಿಯ ಕಂಪ್ಯೂಟರ್ ಸೇರಿದಂತೆ ಕಡತಗಳಿಗೆ ಬೆಂಕಿ ತಗಲಿ ಸುಟ್ಟು ಭಸ್ಮವಾದ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ.

    ಪಾವಗಡ (Pavagada) ತಾಲೂಕಿನ ಪೊನ್ನಸಂದ್ರ (Ponnasandra) ಗ್ರಾಮ ಪಂಚಾಯಿತಿಯಲ್ಲಿ ಈ ಘಟನೆ ನಡೆದಿದ್ದು, ವಿದ್ಯುತ್‌ನ ವೋಲ್ಟೇಜ್ ಹೆಚ್ಚಾದ ಹಿನ್ನೆಲೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಪ್ರಮುಖ ಫೈಲ್‌ಗಳು ಸೇರಿದಂತೆ ಕಂಪ್ಯೂಟರ್‌ಗಳು ಸಹ ಬೆಂಕಿಯಲ್ಲಿ ಸುಟ್ಟು ಕರಕಲಾಗಿದೆ. ಘಟನೆ ನಡೆದ ಸಮಯದಲ್ಲಿ ಸ್ಥಳೀಯ ಗ್ರಾಮಸ್ಥರು ನೀರಿನಿಂದ ಬೆಂಕಿಯನ್ನು ಆರಿಸಲು ಹರಸಾಹಸ ಪಟ್ಟರೂ ಸಾಧ್ಯವಾಗಲಿಲ್ಲ. ಇದನ್ನೂ ಓದಿ: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

    ಬಳಿಕ ಸ್ಥಳಕ್ಕೆ ಪಾವಗಡ ಅಗ್ನಿಶಾಮಕ (Fire Extinguisher) ಠಾಣೆಯ ಸಿಬ್ಬಂದಿ ಭೇಟಿ ನೀಡಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಪೊಲೀಸರಿಂದ ತಪ್ಪಿಸಿಕೊಳ್ಳುವ ಸಲುವಾಗಿ ಸೇತುವೆ ಮೇಲಿನಿಂದ ಹಾರಿ ವ್ಯಕ್ತಿ ಸಾವು

  • ದೇಶದ್ರೋಹಿ ಶಕ್ತಿಗಳನ್ನು ಸಹಿಸಲಾಗುವುದಿಲ್ಲ: ಸಿಎಂ ಬೊಮ್ಮಾಯಿ

    ದೇಶದ್ರೋಹಿ ಶಕ್ತಿಗಳನ್ನು ಸಹಿಸಲಾಗುವುದಿಲ್ಲ: ಸಿಎಂ ಬೊಮ್ಮಾಯಿ

    ಬೆಂಗಳೂರು: ದೇಶದ ಕಾನೂನು ಮತ್ತು ಸುವ್ಯವಸ್ಥೆಗೆ ಸವಾಲನ್ನು ಹಾಕುವ ದೇಶದ್ರೋಹಿ ಶಕ್ತಿಗಳನ್ನು ಸಹಿಸಲಾಗುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

    ಆರ್.ಟಿ.ನಗರ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ತಮಿಳುನಾಡಿನಲ್ಲಿ ಕರ್ನಾಟಕದ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳೂ ಸೇರಿದಂತೆ ಒಟ್ಟು 3 ಜನ ನ್ಯಾಯಮೂರ್ತಿಗಳ ಮೇಲೆ ಕೊಲೆ ಬೆದರಿಕೆ ಬಂದಿದೆ. ಈ ಸಂಬಂಧ ಮೊಕದ್ದಮೆ ದಾಖಲಾಗಿದೆ. ನ್ಯಾಯಾಂಗದ ತೀರ್ಪನ್ನು ಎಲ್ಲರೂ ಒಪ್ಪಬೇಕಾಗುತ್ತದೆ. ಅರ್ಜಿದಾರರಿಗೆ ತೀರ್ಪು ಸಮಂಜಸವೆನಿಸದಿದ್ದರೆ ಮೇಲ್ಮನವಿ ಸಲ್ಲಿಸಲು ಎಲ್ಲ ಅವಕಾಶಗಳಿವೆ. ಆದರೂ ಈ ವಿಚ್ಛಿದ್ರಕಾರಿ ಶಕ್ತಿಗಳು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರನ್ನು ಪ್ರಚೋದಿಸಿ ವ್ಯವಸ್ಥೆಯ ವಿರುದ್ಧ ಎತ್ತಿಕಟ್ಟುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚಾಗುತ್ತಿವೆ ಡೇಜರಸ್ ಫ್ಲೈ ಓವರ್‌ಗಳು

    ತಮಿಳುನಾಡಿನಲ್ಲಿ ಪ್ರಕರಣ ದಾಖಲಾಗಿದೆ. ಕರ್ನಾಟಕ ಉಚ್ಛನ್ಯಾಯಾಲಯದ ಬಾರ್ ಕೌನ್ಸಿಲ್ ಅವರೂ ಸಹ ವಿಧಾನಸೌಧದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಈ ಬಗ್ಗೆ ಕೂಡಲೇ ತನಿಖೆ ನಡೆಸಲು ಸೂಚಿಸಲಾಗಿದೆ. ತಮಿಳುನಾಡಿನಿಂದ ರಾಜ್ಯದ ವಶಕ್ಕೆ ಆರೋಪಿಗಳನ್ನು ಪಡೆದು, ಕಠಿಣ ಕಾನೂನು ಕ್ರಮ ಕೈಗೊಳ್ಳಲು ಈಗಾಗಲೇ ಆದೇಶ ನೀಡಲಾಗಿದೆ. ಮೂರು ನ್ಯಾಯಾಧೀಶರಿಗೆ ಈಗಿರುವ ಭದ್ರತೆಯ ಜೊತೆಗೆ ‘ವೈ’ ಕೆಟಗರಿಯ ಭದ್ರತೆಯನ್ನು ನೀಡುವ ತೀರ್ಮಾವನ್ನು ಸರ್ಕಾರ ಕೈಗೊಂಡಿದೆ ಎಂದರು.

    ಡೋಂಗಿ ಜಾತ್ಯತೀತರು ಮೌನವಹಿಸಿದ್ದಾರೆ
    ಇದೇ ವೇಳೆ ನ್ಯಾಯಮೂರ್ತಿಗಳು ನೀಡುವ ತೀರ್ಪಿಗಾಗಿ ಅವರಿಗೆ ಕೊಲೆ ಬೆದರಿಕೆ ಹಾಕಿರುವ ಪ್ರಕರಣದ ಮೇಲೆ ಡೋಂಗಿ ಜಾತ್ಯತೀತರು ಮೌನ ವಹಿಸಿದ್ದಾರೆ. ಒಂದು ವರ್ಗದ ಜನರನ್ನು ಈ ರೀತಿ ಓಲೈಸುವುದು ಜಾತ್ಯತೀತತೆ ಅಲ್ಲ, ಕೋಮುವಾದ ಎಂದೆನಿಸುತ್ತದೆ. ಈ ಪ್ರಕರಣದ ಬಗ್ಗೆ ಎಲ್ಲರೂ ಒಗ್ಗಾಟ್ಟಾಗಿ ಕ್ರಮ ಕೈಗೊಂಡು ಈ ದೇಶದ ನ್ಯಾಯಾಂಗ ವ್ಯವಸ್ಥೆಯನ್ನು ಕಾಯ್ದುಕೊಳ್ಳಬೇಕಿದೆ. ಈ ರೀತಿಯ ಪ್ರಕರಣಗಳು ದೇಶದ ಪ್ರಜಾಪ್ರಭುತ್ವಕ್ಕೆ ಆತಂಕವನ್ನು ಒಡ್ಡುತ್ತವೆ. ಸರ್ಕಾರದಿಂದ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕವಾಗಿ ಈ ಪ್ರಕರಣವನ್ನು ಖಂಡಿಸಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಭಿಕ್ಷುಕನ ಜೊತೆ ಪತ್ನಿ ರೊಮ್ಯಾನ್ಸ್ ನೋಡಿ ಬೆಚ್ಚಿಬಿದ್ದ ಪತಿ

    ತುಮಕೂರಿನ ಪಾವಗಡ ಬಸ್ ಅಪಘಾತ
    ಶಾಲಾ ಕಾಲೇಜುಗಳು ಇರುವ ಸಂದರ್ಭದಲ್ಲಿ ಬಸ್‍ಗಳಲ್ಲಿ ಅದರ ಮಿತಿಗಿಂತ ಹೆಚ್ಚಿನ ಜನರನ್ನು ಒಯ್ಯುವ ಬಸ್‌ಗಳನ್ನು ಪತ್ತೆ ಹಚ್ಚಲು ಸೂಚಿಸಲಾಗಿದೆ. ಆ ರೀತಿಯ ಬಸ್‍ಗಳ ಲೈಸೆನ್ಸ್‌ಗಳನ್ನು ರದ್ದು ಮಾಡಲು ಸೂಚನೆ ನೀಡಲಾಗಿದೆ. ಇಂತಹ ಬಸ್‍ಗಳು ಸಂಚರಿಸುವ ಮಾರ್ಗದಲ್ಲಿ ನಿರಂತರ ತಪಾಸಣೆ ಮಾಡಲೂ ಸಹ ಸೂಚಿಸಲಾಗಿದೆ. ಗಾಯಾಳುಗಳಿಗೆ ಅವಶ್ಯಕತೆ ಇದ್ದಲ್ಲಿ ಬೆಂಗಳೂರಿಗೆ ಸ್ಥಳಾಂತರಿಸಲು ತಿಳಿಸಲಾಗಿದೆ. ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದರು.

  • ಅಪಘಾತಕ್ಕೆ ಅಕ್ಕ, ತಂಗಿ ಬಲಿ-ತಂಗಿಯ ಪಾರ್ಥಿವ ಶರೀರ ಬಂದ ಬಳಿಕ ಇಬ್ಬರ ಅಂತ್ಯಕ್ರಿಯೆ

    ಅಪಘಾತಕ್ಕೆ ಅಕ್ಕ, ತಂಗಿ ಬಲಿ-ತಂಗಿಯ ಪಾರ್ಥಿವ ಶರೀರ ಬಂದ ಬಳಿಕ ಇಬ್ಬರ ಅಂತ್ಯಕ್ರಿಯೆ

    ತುಮಕೂರು: ಪಾವಗಡ ಬಸ್ ಅಪಘಾತದಲ್ಲಿ ಮೃತಪಟ್ಟ ಅಕ್ಕ, ತಂಗಿ ಅಂತ್ಯಕ್ರಿಯೆಯನ್ನು ಒಟ್ಟಿಗೆ ಮಾಡಲು ಕುಟುಂಬಸ್ಥರು ಸಕಲ ಸಿದ್ಧತೆ ಮಾಡಿದ್ದಾರೆ.

    ಅಮೂಲ್ಯಾ, ಹರ್ಷಿತಾ ಮೃತರಾಗಿದ್ದಾರೆ. ಈ ಸಹೋದರಿಯರು ಪೋತಗಾನ ಹಳ್ಳಿಯ ನಿವಾಸಿಗಳಾಗಿದ್ದಾರೆ. ರಸ್ತೆ ಅಪಘಾತದಲ್ಲಿ ಮನೆ ಮಕ್ಕಳನ್ನು ಕಳಕೊಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

    ನಿನ್ನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಮೇಲೆ ವೈ.ಎನ್ ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಬಸ್ ಪಲ್ಟಿಯಾಗಿ 6ಮಂದಿ ಸಾವನ್ನಪ್ಪಿದ್ದಾರೆ. ಈ ಅಪಘಾದಲ್ಲಿ ಸಹೋದರಿಯರು ಸಾವನ್ನಪಿದ್ದಾರೆ. ಮನೆ ಮಕ್ಕಳನ್ನು ಕಳಕೊಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ:  ಪಾವಗಡ ಬಸ್ ದುರಂತ – ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಶ್ರೀರಾಮುಲು

    ಅಕ್ಕಂದಿರ ಅಗಲಿಕೆ ನೆನೆದು ಕಣ್ಣೀರಿಟ್ಟ ತಮ್ಮ ತೇಜು, ನನಗೆ ಊಟಕ್ಕೆ ಕರಿಯೋರು ಈಗ ಯಾರೂ ಇಲ್ಲ. ಇಬ್ಬರೂ ಅಕ್ಕಂದಿರು ನನ್ನನ್ನು ಬಿಟ್ಟು ಹೊರಟು ಹೋಗಿದ್ದಾರೆ. ನಾನು ಈಗ ಒಬ್ಬನೇ ಆಗಿದ್ದೇನೆ ಎಂದು ಮೃತ ಸಹೋದರಿಯರನ್ನು ನೆನಪು ಮಾಡಿಕೊಂಡು ಕಣ್ಣೀರು ಹಾಕಿದ್ದಾನೆ.

    ಬಸ್ ನಂಬರ್ ಸೂಚಿಸಿ ಡ್ರೈವರ್ ಮೇಲೆ ಎಫ್‍ಐಆರ್ ದಾಖಲಾಗಿದ್ದು, ಡ್ರೈವರ್ ರಘುನನ್ನು ಪಾವಗಡ  ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಅಪಘಾತವಾಗಿದ್ದು ಹೇಗೆ?: ನಿನ್ನೆ ಬೆಳಗ್ಗೆ ಶ್ರೀನಿವಾಸ್ ಮೂರ್ತಿ ಒಡೆತನದ ಎಸ್.ವಿ.ಟಿ. ಎಂಬ ಖಾಸಗಿ ಬಸ್ ವೈ.ಎನ್ ಹೊಸಕೋಟೆಯಿಂದ ಪಾವಗಡಕ್ಕೆ ಹೋಗುತ್ತಿತ್ತು. ಬಸ್ ಟಾಪ್‍ನಲ್ಲಿ 50ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಕುಳಿತಿದ್ದರು. ಆದರೆ ಬಸ್ ಓವರ್ ಲೋಡ್ ಹಾಗೂ ಚಾಲಕನ ನಿರ್ಲಕ್ಷ್ಯದಿಂದ ಪಾವಗಡದ ತಾಲೂಕಿನ ಪಳವಳ್ಳಿ ಕಟ್ಟೆಯ ಕೆರೆ ಏರಿ ಮೇಲೆ ಬಸ್ ಉರುಳಿದೆ. ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, ಪಾವಗಡದ ರಸ್ತೆ ಮೇಲೆ, ಬೇಲಿ ಮೇಲೆಯೂ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಘಟನೆಯಲ್ಲಿ 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಪಾವಗಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲ ಗಾಯಾಳುಗಳನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.

  • ಖಾಸಗಿ ಬಸ್‍ಗಳ ಲೈಸನ್ಸ್ ರದ್ದು ಮಾಡುತ್ತೇವೆ: ಶ್ರೀರಾಮುಲು

    ಖಾಸಗಿ ಬಸ್‍ಗಳ ಲೈಸನ್ಸ್ ರದ್ದು ಮಾಡುತ್ತೇವೆ: ಶ್ರೀರಾಮುಲು

    ತುಮಕುರು: ಜನರ ಜೀವವನ್ನು ಕಾಪಾಡುವುದು ನಮ್ಮ ಮೊದಲ ಆದ್ಯತೆಯಾಗಿದೆ. ಪಾವಗಡದಿಂದ ತುಮಕೂರು ಮಾರ್ಗವಾಗಿ ಸಂಚರಿಸುವ ಖಾಸಗಿ ಬಸ್‍ಗಳನ್ನು ರದ್ದು ಮಾಡುತ್ತೇವೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಖಾಸಗಿ ಬಸ್ ಪಲ್ಟಿಯಾಗಿ 6 ಮಂದಿ ಸಾವನ್ನಪ್ಪಿದ್ದಾರೆ. ಈ ಸ್ಥಳಕ್ಕೆ ಉನ್ನತ ಮಟ್ಟದ ಅಧಿಕಾರಿಗಳನ್ನು ನಾನು ತನಿಖೆಗೆ ಕಳುಹಿಸಿಕೊಟ್ಟಿದ್ದೆ. ತನಿಖೆಯ ಪ್ರಾಥಮಿಕ ಹಂತದಲ್ಲಿ ನನಗೆ ಬಂದಿರುವ ವರದಿಯ ಪ್ರಕಾರ ಲೋಡ್ ಹೆಚ್ಚಾಗಿತ್ತು ಎನ್ನಲಾಗಿದೆ. ಬಸ್ ಟಾಪ್ ಮೇಲೆ ಕೂಡಾ ಜನರು ಕುಳಿತುಕೊಂಡಿದ್ದರು. ಈ ವೇಳೆ ಬಸ್ ಯಾವ ಸ್ಪೀಡ್‍ನಲ್ಲಿ ಓಡಿಸಬೇಕು ಎನ್ನುವ ಜ್ಞಾನ ಚಾಲಕನಿಗೆ ಇರಬೇಕಾಗಿತ್ತು. ಚಾಲಕನೊಬ್ಬನಿಗೆ ಶಿಕ್ಷೆ ಆಗಬೇಕಾದದ್ದು ಅಲ್ಲ, ಖಾಸಗಿ ಬಸ್ ಮಾಲೀಕರು ಇದಕ್ಕೆ ಹೊಣೆಯಾಗಿರುತ್ತಾರೆ. ಆ ಭಾಗದಲ್ಲಿ ಸಂಚರಿಸುವ ಖಾಸಗಿ ಬಸ್‍ಗಳ ಲೈಸನ್ಸ್ ರದ್ದು ಮಾಡಿದರೆ ಮಾತ್ರ ಅವರಿಗೆ ಬುದ್ದಿ ಬರುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಮುಂದಿನ ಮೂರು ದಿನ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

    ಇಷ್ಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೆಲ್ಲ ಹೊಣೆ ಯಾರು? ಬೇಜವಬ್ದಾರಿತನದಿಂದ ಕಾನೂನನ್ನು ಉಲ್ಲಂಘಿಸಲು ಅವರಿಗೆ ಯಾರು ಅಧಿಕಾರ ಕೊಟ್ಟಿದ್ದಾರೆ. ನಾನು ಆ ಭಾಗದಲ್ಲಿ ಸಂಚರಿಸುವ ಬಸ್‍ಗಳ ಲೈಸನ್ಸ್ ರದ್ದು ಮಾಡುತ್ತೇನೆ ಎಂದು ಹೇಳಿದ್ದಾರೆ.  ಇದನ್ನೂ ಓದಿ:  ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಬಸ್ ಪಲ್ಟಿ:8 ಮಂದಿ ಸಾವು

    ಖಾಸಗಿ ಅವರು ಬದುಕಬೇಕು. ಸರ್ಕಾರಿ ಬಸ್ ವ್ಯವಸ್ಥೆ ಇಲ್ಲದ ಭಾಗಗಳಿಗೆ ಸಂಚರಿಸಬೇಕು. ಅವರು ಸರ್ಕಾರದ ನಿಯಮಾನುಸಾರ ಸಂಚರ ಮಾಡಬೇಕು. ಆದರೆ ಕೇವಲ ಲಾಭದಾಯಕ ಕಾರಣದಿಂದ ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಜನರ ಪ್ರಾಣಕ್ಕೆ ಕುತ್ತು ತರುವಂತೆ ಮಾಡಿದರೆ, ಕ್ಷಮಿಸುವ ಮಾತಿಲ್ಲ ಎಂದು ಖಾಸಗಿ ಬಸ್ ಮಾಲೀಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

  • ಪಾವಗಡ ಬಸ್ ದುರಂತ – ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಶ್ರೀರಾಮುಲು

    ಪಾವಗಡ ಬಸ್ ದುರಂತ – ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಶ್ರೀರಾಮುಲು

    – ಗಾಯಾಳುಗಳಿಗೆ ಶ್ರೀರಾಮುಲು ವೈಯಕ್ತಿಕವಾಗಿ 50 ಸಾವಿರ ಘೋಷಣೆ

    ತುಮಕೂರು: ಇಂದು ಬೆಳಗ್ಗೆ ಖಾಸಗಿ ಬಸ್ ಪಲ್ಟಿಯಾಗಿ 6 ಜನ ಮೃತಪಟ್ಟಿರುವ ಅಪಘಾತ ಸ್ಥಳಕ್ಕೆ ಸಾರಿಗೆ ಸಚಿವ ಶ್ರೀರಾಮುಲು ಭೇಟಿ ನೀಡಿ ಪರಿಹಾರ ಘೋಷಿಸಿದ್ದಾರೆ.

    ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಮೇಲೆ ವೈ.ಎನ್ ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಬಸ್ ಪಲ್ಟಿಯಾಗಿ 6 ಮಂದಿ ಮೃತಪಟ್ಟು 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿತ್ತು. ಇದೀಗ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಶ್ರೀರಾಮುಲು ಮೃತರಿಗೆ 5 ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೇ ವೈಯಕ್ತಿಕವಾಗಿ ಶ್ರೀರಾಮುಲು ಗಾಯಳುಗಳಿಗೆ 50 ಸಾವಿರ ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಬಸ್ ಪಲ್ಟಿ:8 ಮಂದಿ ಸಾವು

    ಅಪಘಾತದ ಕುರಿತಾಗಿ ಆರ್.ಟಿ.ಓ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಬಳಿಕ ಪಾವಗಡದ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಇದನ್ನೂ ಓದಿ: ಪಾವಗಡ ಬಳಿಕ ಬೀದರ್‌ನಲ್ಲೂ ಖಾಸಗಿ ಬಸ್ ಪಲ್ಟಿ

    ಅಪಘಾತವಾಗಿದ್ದು ಹೇಗೆ?
    ಇಂದು ಬೆಳಗ್ಗೆ ಶ್ರೀನಿವಾಸ್ ಮೂರ್ತಿ ಒಡೆತನದ ಎಸ್.ವಿ.ಟಿ. ಎಂಬ ಖಾಸಗಿ ಬಸ್ ವೈ.ಎನ್ ಹೊಸಕೋಟೆಯಿಂದ ಪಾವಗಡಕ್ಕೆ ಹೋಗುತ್ತಿತ್ತು. ಬಸ್ ಟಾಪ್‍ನಲ್ಲಿ 50ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಕುಳಿತಿದ್ದರು. ಆದರೆ ಬಸ್ ಓವರ್ ಲೋಡ್ ಹಾಗೂ ಚಾಲಕನ ನಿರ್ಲಕ್ಷ್ಯದಿಂದ ಪಾವಗಡದ ತಾಲೂಕಿನ ಪಳವಳ್ಳಿ ಕಟ್ಟೆಯ ಕೆರೆ ಏರಿ ಮೇಲೆ ಬಸ್ ಉರುಳಿದೆ. ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, ಪಾವಗಡದ ರಸ್ತೆ ಮೇಲೆ, ಬೇಲಿ ಮೇಲೆಯೂ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಘಟನೆಯಲ್ಲಿ 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಪಾವಗಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲ ಗಾಯಾಳುಗಳನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

     

     

  • ಬಸ್ ಅವಘಡದಲ್ಲಿ ಕೂಲಿನಾಲಿ ಮಾಡುವ ಜನರಿದ್ದರೆ ಹೆಚ್ಚಿನ ಪರಿಹಾರ ನೀಡಬೇಕು: ಹೆಚ್‍ಡಿಕೆ

    ಬಸ್ ಅವಘಡದಲ್ಲಿ ಕೂಲಿನಾಲಿ ಮಾಡುವ ಜನರಿದ್ದರೆ ಹೆಚ್ಚಿನ ಪರಿಹಾರ ನೀಡಬೇಕು: ಹೆಚ್‍ಡಿಕೆ

    ರಾಮನಗರ: ಬಸ್ ಅವಘಡದಲ್ಲಿ ಕೂಲಿನಾಲಿ ಮಾಡುವ ಜನರಿದ್ದರೆ ಹೆಚ್ಚಿನ ಪರಿಹಾರ ನೀಡಬೇಕು ಎಂದು ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಒತ್ತಾಯಿಸಿದರು.

    ಬಸ್ ಅವಘಡ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇವತ್ತು ರಾಜ್ಯದಲ್ಲಿ ಮೂರು ಕಡೆ ಅವಘಡ ಸಂಭವಿಸಿವೆ. ತುಮಕೂರಿನ ಪಾವಗಡದಲ್ಲಿ ಬಸ್ ಅನಾಹುತವಾಗಿದೆ. ಈ ಆಕ್ಸಿಡೆಂಟ್‍ನಲ್ಲಿ ಎಂಟತ್ತು ಮಂದಿ ಸಾವಿಗೀಡಾಗಿದ್ದಾರೆ. ಬಡಮಂದಿ ಬಸ್ ಅವಘಡದಲ್ಲಿ ಸಾವಿಗೀಡಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ:  ಪಾವಗಡ ಬಳಿಕ ಬೀದರ್‌ನಲ್ಲೂ ಖಾಸಗಿ ಬಸ್ ಪಲ್ಟಿ

    ಹಲವರು ಗಂಭೀರವಾಗಿ ಗಾಯಗೊಂಡು ಚಿಂತಾಜನಕವಾಗಿದ್ದಾರೆ. ಸರ್ಕಾರ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಕಳುಹಿಸಬೇಕು. ಸಾರಿಗೆ ಸಚಿವರು ಹಾಗೂ ಸರ್ಕಾರ ಮಾಹಿತಿ ಪಡೆಯಬೇಕು. ಕೂಡಲೇ ಮಾಹಿತಿ ಪಡೆದು ಪರಿಹಾರ ನೀಡುವ ಕಾರ್ಯವಾಗಬೇಕು. ಪಾವಗಡ ಅತ್ಯಂತ ಬರಗಾಲ ಇರುವ ತಾಲೂಕು. ಬಸ್ ಅವಘಡದಲ್ಲಿ ಕೂಲಿನಾಲಿ ಮಾಡುವ ಜನರಿದ್ದರೆ ಹೆಚ್ಚಿನ ಪರಿಹಾರ ನೀಡಬೇಕು. ಹೆಚ್ಚಿನ ಪರಿಹಾರ ನೀಡಬೇಕಾಗಿರುವುದು ರಾಜ್ಯ ಸರ್ಕಾರದ ಕರ್ತವ್ಯ ಎಂದು ಆಗ್ರಹಿಸಿದರು.

    ಉಡುಪಿ ಹಾಗೂ ಬಳ್ಳಾರಿಯಲ್ಲಿ ಆಕ್ಸಿಜನ್ ಪ್ಲಾಂಟ್ ಅವಘಡವಾಗಿದೆ. ಅಲ್ಲಿ ಸ್ಥಳ ಪರಿಶೀಲನೆ ಮಾಡಿ ಅವಘಡ ನಡೆಯದಂತೆ ಎಚ್ಚರಿಕೆ ವಹಿಸಬೇಕಿದೆ. ಈ ಅನಾಹುತದಲ್ಲಿ ನೊಂದವರಿಗೆ ನೆರವು ಸಿಗಬೇಕು. ಜನರ ನೆರವಿಗೆ ಮುಂದಾಗಲಿ ಎಂದು ಸರ್ಕಾರಕ್ಕೆ ಹೇಳಬಯಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಬಸ್ ಪಲ್ಟಿ:8 ಮಂದಿ ಸಾವು

  • ಪಾವಗಡದಲ್ಲಿ ಭೀಕರ ಅಪಘಾತ- ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಶವಗಳು..!

    ಪಾವಗಡದಲ್ಲಿ ಭೀಕರ ಅಪಘಾತ- ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಶವಗಳು..!

    ತುಮಕೂರು: ಪಾವಗಡದ ತಿರುವಿನಲ್ಲಿ ನಡೆದ ಖಾಸಗಿ ಬಸ್‍ನ ಭೀಕರ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದು, ರಸ್ತೆಯಲ್ಲಿ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

    ಇಂದು ಬೆಳಗ್ಗೆ ಖಾಸಗಿ ಬಸ್ ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಹೋಗುತ್ತಿತ್ತು. ಬಸ್‍ನ ಟಾಪ್‍ನಲ್ಲಿ 50ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಕುಳಿತಿದ್ದರು. ಆದರೆ ಬಸ್ ಓವರ್ ಲೋಡ್ ಹಾಗೂ ಚಾಲಕನ ನಿರ್ಲಕ್ಷ್ಯದಿಂದ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆಯ ಕೆರೆ ಏರಿ ಮೇಲೆ ಬಸ್ ಉರುಳಿದೆ. ಇದರಿಂದಾಗಿ 8 ಮಂದಿ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ.

    ವೈ.ಎನ್ ಹೋಸಕೋಟೆಯ ಕಲ್ಯಾಣ (18), ಬೆಸ್ತರಹಳ್ಳಿ ನಿವಾಸದ ಶಹನವಾಜ್ (20), ಸೂಲನಾಯಕನಹಳ್ಳಿಯ ಅಮೂಲ್ಯ (17), ಅಜಿತ್ (28) ಮೃತರು. ಮೃತರೆಲ್ಲರೂ ತಿರುಮಣಿ, ಪಳವಳ್ಳಿ, ವೈ ಎನ್ ಹೊಸಕೋಟೆ ಮೂಲದವರಾಗಿದ್ದಾರೆ. ಮೃತದೇಹ ಎಲ್ಲೆಂದರಲ್ಲಿ ಬಿದ್ದಿದೆ. ಬಸ್‍ನಲ್ಲಿದ್ದ ಕೆಲವು ಪ್ರಯಾಣಿಕರು ಬಸ್ ಅಡಿಗೆ ಬಿದ್ದಿದ್ದರೇ, ಇನ್ನೂ ಕೆಲವರು ಕೆರೆಗೆ ಬಿದ್ದಿದ್ದಾರೆ. ಕೆರೆಯಲ್ಲಿ ಬಿದ್ದ ಪ್ರಯಾಣಿಕರು ಮೇಲೆ ಬರುತ್ತಿದ್ದಾರೆ. ಈಗಾಗಲೇ ಘಟನಾ ಸ್ಥಳದಲ್ಲಿ ಜನ ಜಮಾಯಿಸಿದ್ದಾರೆ.

    ಈ ಬಗ್ಗೆ ಸ್ಥಳೀಯ ಅಧಿಕಾರಿಗಳು ಮಾತನಾಡಿ, 8 ಜನರು ಸಾವನ್ನಪ್ಪಿದ್ದಾರೆ. 4 ಮೃತ ದೇಹಗಳ ರವಾನೆ ಆಗಿದೆ. ಸಾಕಷ್ಟು ಜನರಿಗೆ ಗಂಭೀರ ಗಾಯ ಆಗಿದೆ. ಅತಿಯಾದ ಸ್ಪೀಡ್‍ನಿಂದ ಘಟನೆ ಆಗಿದೆ. ಸ್ಥಳೀಯವಾಗಿ ಎಲ್ಲಾ ತುರ್ತು ಆರೋಗ್ಯ ಸೇವೆ ಉಪಯೋಗಿಸಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

    50ಕ್ಕೂ ಹೆಚ್ಚು ಮಂದಿಗೆ ಗಾಯಗೊಂಡಿದ್ದು, ಬಸ್‍ನ ಟಾಪ್‍ನಲ್ಲಿ ಕುತಿದ್ದವರೇ ಸಾವನ್ನಪ್ಪಿದ್ದಾರೆ. ಚಾಲಕನ ನಿರ್ಲಕ್ಷ್ಯದಿಂದ ಕೆರೆ ಕಟ್ಟೆ ಮೇಲೆ ಬಸ್ ಉರುಳಿದೆ ಎಂದು ಪಬ್ಲಿಕ್ ಟಿವಿಗೆ ತುಮಕೂರು ಎಸ್ಪಿ ರಾಹುಲ್ ಸ್ಪಷ್ಟನೆ ನೀಡಿದ್ದಾರೆ. ಬಸ್‍ನಲ್ಲಿದ್ದ ಕೆಲವರ ಸ್ಥಿತಿ ಗಂಭೀರವಾಗಿದೆ. ಗಂಭೀರ ಗಾಯಗೊಂಡವರನ್ನು ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ತಾಲೂಕಾ ಆಸ್ಪತ್ರೆಗೆ ಭೇಟಿ ಕೊಟ್ಟ ಪಾವಗಡ ಶಾಸಕ ವೆಂಕಟರಮಣಪ್ಪ ಭೇಟಿ ನೀಡಿದ್ದು, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಇದನ್ನೂ ಓದಿ: ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಬಸ್ ಪಲ್ಟಿ: 8 ಮಂದಿ ಸಾವು

    ಈ ಬಗ್ಗೆ ಗಾಯಳು ಮಾತನಾಡಿ, ಪ್ರಯಾಣಿಕರು ಟಾಪ್‍ನಲ್ಲಿ ಕೂತು ಬರುತ್ತಿದ್ದರು. ಬಸ್ ವೇಗವಾಗಿ ಬರುತ್ತಿತ್ತು. ಟರ್ನಿಂಗ್‍ನಲ್ಲಿ ಬಸ್ ಕಂಟ್ರೋಲ್‍ಗೆ ಬರಲಿಲ್ಲ. ಟಾಪ್‍ನಲ್ಲಿ ಎಷ್ಟು ಜನ ಇದ್ರು ನೋಡಲಿಲ್ಲ ಎಂದು ತಿಳಿಸಿದ್ದಾರೆ. ಮತ್ತೊಬ್ಬ ಮಾತನಾಡಿ, ಬಸ್‍ನಲ್ಲಿ ಸುಮಾರು 70-100 ಜನ ಇದ್ದರು. ಟಾಪ್‍ನಲ್ಲಿ 50 ಜನ ಇದ್ದರು. ಆ ಬಸ್‍ನಲ್ಲಿ ಇದ್ದವರು ಎಲ್ಲರೂ ಕಾಲೇಜು ವಿದ್ಯಾರ್ಥಿಗಳು. ವೈ.ಎನ್. ಹೊಸಕೋಟೆ ಕಡೆಯಿಂದ ಪಾವಗಡಕ್ಕೆ ಬರುವ ಬಸ್ ಅದು. ತುಂಬಾ ಸ್ಪೀಡ್ ಬರ್ತಾರೆ. ಡೋರ್‌ನಲ್ಲಿ ಕಾಲೇಜು ವಿದ್ಯಾರ್ಥಿಗಳೇ ಇರ್ತಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಭಗವದ್ಗೀತೆ ಯಾವುದೇ ಧಾರ್ಮಿಕ ಗ್ರಂಥವಲ್ಲ: ಪ್ರತಾಪ್ ಸಿಂಹ

    ತುಮಕೂರು ಎಸ್ಪಿ ಜೊತೆ ಗೃಹ ಸಚಿವ ಆರಗ ಜ್ಞಾನೇಂದ್ರ ಚರ್ಚೆ ನಡೆಸಿದ್ದು, ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ರಕ್ಷಣಾ ವ್ಯವಸ್ಥೆ ಮಾಡಲು ಸಚಿವರು ಸೂಚನೆ ನೀಡಿದರು.