Tag: pavan

  • ಪವಿತ್ರಾಗೆ 5 ತಿಂಗಳಿಂದ ಮೆಸೇಜ್- ರೇಣುಕಾಸ್ವಾಮಿ ಚಾಟ್ ರಹಸ್ಯ ಬಯಲು

    ಪವಿತ್ರಾಗೆ 5 ತಿಂಗಳಿಂದ ಮೆಸೇಜ್- ರೇಣುಕಾಸ್ವಾಮಿ ಚಾಟ್ ರಹಸ್ಯ ಬಯಲು

    ಬೆಂಗಳೂರು: ಸ್ಯಾಂಡಲ್‍ವುಡ್ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan) ಹಾಗೂ ಗ್ಯಾಂಗ್‍ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪವಿತ್ರಾ ಗೌಡಗೆ ಮೆಸೇಜ್ ಮಾಡ್ತಿದ್ದ ರಹಸ್ಯ ಬಯಲಾಗಿದೆ.

    ಮೃತ ರೇಣುಕಾಸ್ವಾಮಿ ಕಳೆದ 5 ತಿಂಗಳಿಂದ ಪವಿತ್ರಾಗೆ (Pavithra Gowda) ಮೆಸೇಜ್ ಮಾಡುತ್ತಿದ್ದರು. ಫೆಬ್ರವರಿಯಿಂದ ಸುಮಾರು 200ಕ್ಕೂ ಹೆಚ್ಚು ಮೆಸೇಜ್ ಬಂದಿದ್ದು, ಎಲ್ಲ ಮೆಸೇಜ್‍ಗಳು ಕೂಡ ಅಶ್ಲೀಲ ಮೆಸೇಜ್‍ಗಳಾಗಿವೆ ಎಂಬುದು ತನಿಖೆ ವೇಳೆ ಬಯಲಾಗಿದೆ.

    ರೇಣುಕಾಸ್ವಾಮಿ (Renukaswamy) ಅಷ್ಟು ಮೆಸೇಜ್ ಮಾಡಿದ್ದರೂ ಪವಿತ್ರಾ ಗೌಡ ಮಾತ್ರ ರಿಪ್ಲೈ ಮಾಡಿರಲಿಲ್ಲ. ಇದರಿಂದ ಸಿಟ್ಟಿಗೆದ್ದ ರೇಣುಕಾಸ್ವಾಮಿ ಮೆಸೇಜ್ ಜೊತೆ ಅಶ್ಲೀಲ ಫೋಟೋ ಕೂಡ ರವಾನೆ ಮಾಡಿದ್ದಾರೆ. ಇದರಿಂದ ಕೋಪಗೊಂಡ ಪವಿತ್ರಾ ಗೌಡ ಈ ವಿಷಯವನ್ನು ಪವನ್‍ಗೆ ಹೇಳಿದ್ದಾರೆ. ಇದನ್ನೂ ಓದಿ: ಯಾರೂ ಜೈಲಿನ ಬಳಿ ಬರಬೇಡಿ: ಅಭಿಮಾನಿಗಳಿಗೆ ನಟ ದರ್ಶನ್‌ ಮನವಿ

    ಪವನ್, ಪವಿತ್ರಾ ಗೌಡ ರೀತಿ ಚಾಟ್ ಮಾಡಿದ್ದ. ರಿಪ್ಲೈ ಬಂದ ಖುಷಿಗೆ ರೇಣುಕಾಸ್ವಾಮಿ ಕೂಡ ಚಾಟ್ ಮಾಡ್ತಿದ್ದ. ಹೀಗೆ ಮಾತಾಡ್ತಾ ಮಾತಾಡ್ತಾ ರೇಣುಕಾಸ್ವಾಮಿ ಬಳಿ ಪವನ್ ಪೋಟೋ ಕಳುಹಿಸುವಂತೆ ಹೇಳಿದ್ದಾರೆ. ಅಂತೆಯೇ ರೇಣುಕಾಸ್ವಾಮಿ ತನ್ನ ಫೋಟೋವನ್ನು ಕಳುಹಿಸಿದ್ದಾನೆ. ಫೋಟೋ ಸಿಕ್ಕ ಮೇಲೆ ಡಿ ಗ್ಯಾಂಗ್ ಆಟ ಶುರುವಾಗಿದು, ರೇಣುಕಾಸ್ವಾಮಿ ಕೊಲೆಯಲ್ಲಿ ಅಂತ್ಯವಾಗಿದೆ.

  • ರೇಣುಕಾಸ್ವಾಮಿ ಕೊಲೆ ಪ್ರಕರಣ- ಪವನ್ ಮನೆಯಿಂದ ನಾಲ್ಕೂವರೆ ಲಕ್ಷ ಸೀಜ್!

    ರೇಣುಕಾಸ್ವಾಮಿ ಕೊಲೆ ಪ್ರಕರಣ- ಪವನ್ ಮನೆಯಿಂದ ನಾಲ್ಕೂವರೆ ಲಕ್ಷ ಸೀಜ್!

    ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕಿಡ್ನಾಪ್ ಹಾಗೂ ಕೊಲೆ (Renukaswamy Kidnap & Murder Case) ಪ್ರಕರಣದ ತನಿಖೆ ದಿನದಿಂದ ದಿನಕ್ಕೆ ಜಟಿಲವಾಗುತ್ತಿದೆ. ಪ್ರಕರಣ ತನಿಖೆ ನಡೆಸುತ್ತಿರುವ ಪೊಲೀಸರು ಇಂದು ಆರೋಪಿ ಪವನ್ (Accused Pavan) ಮನೆಯಿಂದ 4 ಲಕ್ಷ 50 ಸಾವಿರ ಹಣವನ್ನು ಸೀಜ್ ಮಾಡಿದ್ದಾರೆ.

    ವಿನಯ್ ತಾಯಿಗೆ ಪವನ್ 1 ಲಕ್ಷ ಅಡ್ವಾನ್ಸ್ ಹಣ ನೀಡಿದ್ದ. ಬಳಿಕ ವಿನಯ್‍ಗೆ ನೀಡಬೇಕಾಗಿದ್ದ ಹಣವನ್ನ ಪವನ್ ತನ್ನ ಮನೆಯಲ್ಲಿಟ್ಟಿದ್ದ. ಇದೀಗ ಪೊಲೀಸರು ಒಟ್ಟು 4 ಲಕ್ಷ 50 ಸಾವಿರವನ್ನು ಪೊಲೀಸರು ಸೀಜ್ ಮಾಡಿದ್ದಾರೆ.

    ಈ ಹಿಂದೆ 30 ಲಕ್ಷ ಸೀಜ್: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಒಪ್ಪಿಕೊಳ್ಳಲು, ಮೃತದೇಹ ಸಾಗಿಸಲು ಮತ್ತು ನಟ ದರ್ಶನ್ ಹೆಸರನ್ನು ಬಾಯಿಬಿಡದಿರಲು ಬಂಧಿತರ ಪೈಕಿ ಐವರಿಗೆ 30 ಲಕ್ಷಕ್ಕೆ ಸುಪಾರಿ ನೀಡಲಾಗಿತ್ತು. ಮೃತದೇಹ ಯಾರಿಗೂ ಸಿಗದಂತೆ ಸಾಗಿಸಲು ಮೂವರು ಆರೋಪಿಗಳಿಗೆ ಮುಂಗಡವಾಗಿ ಒಟ್ಟು 5 ಲಕ್ಷ ಸಂದಾಯ ಮಾಡಲಾಗಿತ್ತು. ಉಳಿದ ಇಬ್ಬರು ಆರೋಪಿಗಳು ಜೈಲಿಗೆ ಹೋದ ಮೇಲೆ ಅವರ ಮನೆಯವರಿಗೆ ಹಣ ತಲುಪಿಸುವುದಾಗಿ ಹೇಳಲಾಗಿತ್ತು. ಈ ವಿಚಾರವನ್ನು ಆರೋಪಿಗಳು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದರು.

    ಪ್ರಕರಣ ಸಂಬಂಧ ದರ್ಶನ್ ಆಪ್ತನೊಬ್ಬನ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ಹಣವನ್ನು ವಶಕ್ಕೆ ಪಡೆದಿದ್ದಾರೆ. ನಟ ಕೊಟ್ಟಿದ್ದ 30 ಲಕ್ಷ ಹಣವನ್ನು ಆಪ್ತನೊಬ್ಬನ ಮನೆಯಲ್ಲಿ ಇಡಲಾಗಿತ್ತು. ವಿಚಾರಣೆ ವೇಳೆ ಆರೋಪಿಗಳು ಹಣದ ಬಗ್ಗೆ ಬಾಯಿಬಿಟ್ಟಿದ್ದಾರೆ. ನಂತರ ಪೊಲೀಸರು ಹಣವನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

  • ಕೊಲೆ ಮಾಡ್ತಾರೆ ಅಂದ್ರೆ ನಾನೇ ಕಂಪ್ಲೆಂಟ್ ಕೊಟ್ಟು ಸರಿ ಮಾಡಿಕೊಳ್ತಿದ್ದೆ: ಪವಿತ್ರಾ ಗೌಡ

    ಕೊಲೆ ಮಾಡ್ತಾರೆ ಅಂದ್ರೆ ನಾನೇ ಕಂಪ್ಲೆಂಟ್ ಕೊಟ್ಟು ಸರಿ ಮಾಡಿಕೊಳ್ತಿದ್ದೆ: ಪವಿತ್ರಾ ಗೌಡ

    ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ (Renukaswamy Case) ಕಿಡ್ನಾಪ್ ಹಾಗೂ ಕೊಲೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಪೊಲೀಸರ ವಿಚಾರಣೆಯ ವೇಳೆ ಒಬ್ಬೊಬ್ಬ ಆರೋಪಿನೂ ಸತ್ಯ ವಿಚಾರಗಳನ್ನು ಕಕ್ಕುತ್ತಿದ್ದಾರೆ.

    ಎ1 ಆರೋಪಿಯಾಗಿರುವ ದರ್ಶನ್ (Darshan) ಗೆಳತಿ ಪವಿತ್ರಾ ಗೌಡ (Pavithra Gowda) ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾರೆ. ಕೊಲೆ ಮಾಡುತ್ತಾರೆ ಅಂತ ಗೊತ್ತಿದ್ದರೆ ನಾನೇ ಪೊಲೀಸ್ ಕಂಪ್ಲೆಂಟ್ ಕೊಡುತ್ತಿದ್ದೆ ಎಂದು ಪಶ್ಚಾತ್ತಾಪದ ಮಾತುಗಳನ್ನು ಆಡಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಪವಿತ್ರಾ ಗೌಡ ಹೇಳಿದ್ದೇನು..?: ರೇಣುಕಾಸ್ವಾಮಿಯ ಅಶ್ಲೀಲ ಫೋಟೋ ಮೆಸೇಜ್ ಅನ್ನು ನಾನು ಪವನ್‍ಗೆ ಕಳಿಸಿದ್ದೆ. ದರ್ಶನ್‍ಗೆ ಈ ವಿಚಾರ ಗೊತ್ತಾಗಬಾರದು ಅಂತಾ ಕೂಡ ಹೇಳಿದ್ದೆ. ದರ್ಶನ್‍ಗೆ ಗೊತ್ತಾದ್ರೆ ಏನಾದ್ರು ಅನಾಹುತ ಆಗಬಹುದು ಅಂದಿದ್ದೆ. ಆದರೆ ಅವನು ದರ್ಶನ್‍ಗೆ ಹೇಳಿದ್ದಾನೆ ಎಂದರು.

    ಕೊಲೆ ಮಾಡ್ತಾರೆ ಅಂತಾ ಸಣ್ಣ ಕಲ್ಪನೆಯೂ ನನಗೆ ಇರಲಿಲ್ಲ. ಅಶ್ಲೀಲ ಮೆಸೇಜ್ ಮಾಡಿದ್ನಲ್ಲಾ ಅಂತಾ ಚಪ್ಪಲಿಯಲ್ಲಿ ಹೊಡೆದು ವಾಪಸ್ಸಾಗಿದ್ದೆ. ಕೊಲೆ ಮಾಡ್ತಾರೆ ಅಂದ್ರೆ ನಾನೇ ಕಂಪ್ಲೆಂಟ್ ಕೊಟ್ಟು ಸರಿ ಮಾಡಿಕೊಳ್ತಿದ್ದೆ ಎಂದು ಪವಿತ್ರಾ ಪೊಲೀಸರ ಮುಂದೆ ಹೇಳಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಡೀಲ್‌ ಮಾಡಲಾಗಿದ್ದ 30 ಲಕ್ಷ ಹಣ ಸೀಜ್‌

  • ಹೃದಯಾಘಾತವಾಗಿ 24 ವರ್ಷದ ಯುವನಟ ದುರ್ಮರಣ

    ಹೃದಯಾಘಾತವಾಗಿ 24 ವರ್ಷದ ಯುವನಟ ದುರ್ಮರಣ

    ಮಂಡ್ಯ: ಹೃದಯಾಘಾತವಾಗಿ 24 ವರ್ಷ ಯುವ ನಟ ದುರ್ಮರಣಕ್ಕೀಡಾದ ಘಟನೆ ನಡೆದಿದೆ.

    ಮೃತನನ್ನು ಪವನ್ ಎಂದು ಗುರುತಿಸಲಾಗಿದೆ. ಮೂಲತಃ ಇವರು ಮಂಡ್ಯ (Mandya) ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಹರಿಹರಪುರ ಗ್ರಾಮದವರಾಗಿದ್ದು, ತಂದೆ ನಾಗರಾಜು, ತಾಯಿ ಸರಸ್ವತಿಯೊಂದಿಗೆ ಮುಂಬೈನಲ್ಲಿ (Mumbai) ನೆಲೆಸಿದ್ದರು.

    ಮೃತ ಪವನ್ ಹಿಂದಿ ಹಾಗೂ ತಮಿಳು ಕಿರುತೆರೆಯಲ್ಲಿ ಕಲಾವಿದರಾಗಿ ಹೊರಹೊಮ್ಮುತ್ತಿದ್ದರು. ಅಲ್ಲದೆ ಬೆಳ್ಳಿ ತೆರೆ ಚಿತ್ರಗಳಲ್ಲಿ ಅಭಿನಯಿಸುವ ಕನಸು ಕೂಡ ಕಂಡಿದ್ದರು. ಆದರೆ ಪವನ್ ಗುರುವಾರ ನಸುಕಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇದನ್ನೂ ಓದಿ: ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್ ತಾತ್ಕಾಲಿಕ ಸ್ಥಗಿತ- ಪ್ರವಾಸಿಗರಿಗೆ ನಿರಾಸೆ

    ಇಂದು ಹುಟ್ಟೂರಿನಲ್ಲಿ ಯುವನಟನ ಅಂತ್ಯಸಂಸ್ಕಾರ ನಡೆಯಲಿದೆ ಎಂಬುದಾಗಿ ಕುಟುಂಬದ ಮೂಲಗಳು ತಿಳಿಸಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]