Tag: Pavan Wodeyar

  • ಶಿವಣ್ಣ ನಟನೆಯ ಮತ್ತೊಂದು ಹೊಸ ಸಿನಿಮಾ ಘೋಷಣೆ- ಮಾಸ್‌ ಲೀಡರ್‌ಗೆ ಕೈ ಜೋಡಿಸಿದ ‌’ಗೂಗ್ಲಿ’ ಡೈರೆಕ್ಟರ್

    ಶಿವಣ್ಣ ನಟನೆಯ ಮತ್ತೊಂದು ಹೊಸ ಸಿನಿಮಾ ಘೋಷಣೆ- ಮಾಸ್‌ ಲೀಡರ್‌ಗೆ ಕೈ ಜೋಡಿಸಿದ ‌’ಗೂಗ್ಲಿ’ ಡೈರೆಕ್ಟರ್

    ಭೈರತಿ ರಣಗಲ್ ಬ್ಲಾಕ್ ಬಸ್ಟರ್ ಸಕ್ಸಸ್ ಖುಷಿಯಲ್ಲಿರುವ ಭಜರಂಗಿ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈಗಾಗಲೇ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗಿರುವ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ (Shivarajkumar) ಸ್ಯಾಂಡಲ್‌ವುಡ್‌ನ ಯಶಸ್ವಿ ನಿರ್ದೇಶಕರಾದ ಪವನ್‌ ಒಡೆಯರ್‌ ಜೊತೆ ಕೈ ಜೋಡಿಸಿದ್ದಾರೆ. ಇದನ್ನೂ ಓದಿ:ಬಿಗ್‌ ಬಾಸ್‌ ತೆಲುಗು ಸೀಸನ್‌ 8; ಕರ್ನಾಟಕ ಮೂಲದ ನಿಖಿಲ್‌ ವಿನ್ನರ್‌

    ನಿರ್ದೇಶಕರಾಗಿ ಮಾತ್ರವಲ್ಲದೇ ಪವನ್ ಒಡೆಯರ್ (Pavan Wadeyar) ನಿರ್ಮಾಪಕರಾಗಿಯೂ ಹೆಸರು ಮಾಡಿದ್ದಾರೆ. ‘ಡೊಳ್ಳು’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಪಕರಾಗಿ ಸಿನಿರಂಗದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದ ಅವರು ಮೊದಲ ಚಿತ್ರ ನಿರ್ಮಾಣದಲ್ಲಿಯೇ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅವಸ್ತಿ vs ಅವಸ್ತಿ ಎಂಬ ಬಾಲಿವುಡ್ ಚಿತ್ರ ನಿರ್ಮಿಸಿರುವ ಪವನ್ ಒಡೆಯರ್ ಸದ್ಯ ‘ವೆಂಕ್ಯಾ’ ಚಿತ್ರ ನಿರ್ಮಾಣದಲ್ಲಿ ತೊಡಗಿಸಿದ್ದಾರೆ. ಈಗ ಪವನ್ ಒಡೆಯರ್ ತಮ್ಮ ಒಡೆಯರ್ ಮೂವೀಸ್ ಬ್ಯಾನರ್ ನಡಿ ನಾಲ್ಕನೇ ಚಿತ್ರ ನಿರ್ಮಿಸುತ್ತಿದ್ದಾರೆ‌‌. ಅದು ಶಿವಣ್ಣನಿಗೆ ಎನ್ನುವುದೇ ವಿಶೇಷ.

    2025ಕ್ಕೆ ಶಿವಣ್ಣ ಹಾಗೂ ಪವನ್ ಕಾಂಬೋದ ಹೊಸ ಚಿತ್ರ ಟೇಕಾಫ್ ಆಗಲಿದೆ. ಶಿವಣ್ಣಗೆ ನಿರ್ದೇಶನ ಮಾಡುತ್ತಿರುವ ಸಂತಸ ಹಂಚಿಕೊಂಡರು ಪವನ್ ಒಡೆಯರ್, ಪ್ರತಿಯೊಬ್ಬ ನಿರ್ದೇಶಕರಿಗೂ ಶಿವಣ್ಣನಿಗೆ ಚಿತ್ರ ಮಾಡಬೇಕೆಂಬ ಕನಸು ಇರುತ್ತದೆ. ನನ್ನ ಈ ಕನಸು ಈಗ ನನಸಾಗುತ್ತದೆ. ಥ್ರಿಲ್ಲರ್ ಜೊತೆಗೆ ಔಟ್ ಅಂಡ್ ಔಟ್ ಕಮರ್ಷಿಯಲ್ ಎಂಟರ್ ಟೈನರ್ ಚಿತ್ರ ನಿರ್ದೇಶನ ಮಾಡುತ್ತಿದ್ದು, ಹೆಚ್ಚಿನ ಮಾಹಿತಿಯನ್ನು ಸದ್ಯ ರಿವೀಲ್ ಮಾಡಲು ಆಗುತ್ತಿಲ್ಲ. ಆದರೆ ಈ ಹಿಂದಿನ ಸಿನಿಮಾಗಳಿಗಿಂತ ಈ ಚಿತ್ರದಲ್ಲಿ ಶಿವಣ್ಣ ವಿಭಿನ್ನವಾಗಿ ಕಾಣಲಿದ್ದಾರೆ ಎಂದರು.

    ಒಡೆಯರ್‌ ಮೂವೀಸ್ ಬ್ಯಾನರ್ ನಡಿ ಅಪೇಕ್ಷಾ ಪವನ್ ಒಡೆಯರ್ ಹಾಗೂ ಪವನ್ ಒಡೆಯರ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಅರ್ನಾ ಕ್ರಿಯೇಟಿವ್ ನಿರ್ಮಾಣದಲ್ಲಿ ಸಾಥ್ ಕೊಡಲಿದ್ದಾರೆ.

  • ‘ಡೊಳ್ಳು’ ನಂತರ ಮತ್ತೆ ಒಂದಾಯಿತು ರಾಷ್ಟ್ರ ಪ್ರಶಸ್ತಿ ವಿಜೇತ ಜೋಡಿ

    ‘ಡೊಳ್ಳು’ ನಂತರ ಮತ್ತೆ ಒಂದಾಯಿತು ರಾಷ್ಟ್ರ ಪ್ರಶಸ್ತಿ ವಿಜೇತ ಜೋಡಿ

    ಡೊಳ್ಳು ಬಾರಿಸಿದ ಪವನ್ ಒಡೆಯರ್ ಮತ್ತೊಂದು ಗೂಗ್ಲಿಗೆ ಸಜ್ಜಾಗಿದ್ದಾರೆ. ಅರ್ಥಾತ್ ಪವನ್ ಒಡೆಯರ್ (Pavan Wodeyar) ತಮ್ಮದೇ ಒಡೆಯರ್ ಮೂವೀಸ್ ಬ್ಯಾನರ್ ನಡಿಯಲ್ಲಿ ಚೊಚ್ಚಲ ಬಾರಿಗೆ ನಿರ್ಮಾಣದ ಮಾಡಿದ್ದ ಡೊಳ್ಳು ಎಲ್ಲೆಡೆ ಮಾರ್ಧನಿಸಿತ್ತು. ಪ್ರಶಸ್ತಿಗಳ ಬೇಟೆಯಾಡಿತ್ತು. ರಾಷ್ಟ್ರಪ್ರಶಸ್ತಿಯಿಂದ ಹಿಡಿದು ಹಲವಾರು ಅಂತರಾಷ್ಟ್ರೀಯ ಪ್ರಶಸ್ತಿ ಬಾಚಿಕೊಂಡು ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿತ್ತು. ಕರ್ನಾಟಕದ ಜನಪದ ಕಲೆ ಡೊಳ್ಳುಗೆ ಕೈಗನ್ನಡಿ ಹಿಡಿದ್ದ ಈ ಚಿತ್ರಕ್ಕೆ ಸಾಗರ್ ಪುರಾಣಿಕ್ (Sagar Puranik) ಆಕ್ಷನ್ ಕಟ್ ಹೇಳಿದ್ದರು.  2021 ರಲ್ಲಿ ಬಿಡುಗಡೆಯಾದ ಡೊಳ್ಳು ಸಿನಿಮಾ ಸಂಪ್ರದಾಯವನ್ನು ಪುನರುಜ್ಜೀವನಗೊಳಸಿ, ಸಾಂಸ್ಕೃತಿಕ ವೈವಿಧ್ಯತೆಯ ಮೇಲೆ ಬೆಳಕು ಚೆಲ್ಲಿತ್ತು. ಈ ಚಿತ್ರದ ಬಗ್ಗೆ ಇಷ್ಟೆಲ್ಲಾ ವಿವರ ಹೇಳೋದಿಕ್ಕೆ ಕಾರಣ ಈ ಜೋಡಿ ಮತ್ತೆ ಒಂದಾಗುತ್ತಿದೆ.

    ಡೊಳ್ಳು ಜೋಡಿ ಈಗ ಮತ್ತೊಂದು ಚಿತ್ರಕ್ಕಾಗಿ ಸಜ್ಜಾಗಿದೆ. ಒಡೆಯರ್ ಮೂವೀಸ್ ಬ್ಯಾನರ್ ಮೂರನೇ ಕಾಣಿಕೆಯಾಗಲಿರುವ ಈ ಚಿತ್ರವನ್ನು ಸಾಗರ್ ಪುರಾಣಿಕ್ ನಿರ್ದೇಶನ ಮಾಡಲಿದ್ದಾರೆ. ಇದೊಂದು ವಿಭಿನ್ನ ಪ್ರಯತ್ನದ ಸಿನಿಮಾ. ಉತ್ತರ ಕರ್ನಾಟಕದ ಕಥೆಯಾದ್ರೂ ಅದು ದೇಶ ಎಲ್ಲಾ ಸುತ್ತಲಿದೆ. ಇದೊಂದು ಹೊಸ ಬಗೆಯ ಕಮರ್ಷಿಯಲ್ ಸಿನಿಮಾ ಅಂತಾರೇ ನಿರ್ಮಾಪಕ ಪವನ್ ಒಡೆಯರ್..

    ಅಪೇಕ್ಷಾ ಒಡೆಯರ್ ಮತ್ತು ಪವನ್ ಒಡೆಯರ್ ಹಣ ಹಾಕುತ್ತಿರುವ ಈ ಚಿತ್ರಕ್ಕೆ ಸ್ನೇಹಿತರಾದ ಅವಿನಾಶ್ ವಿ ರೈ ಮತ್ತು ಮೋಹನ್ ಲಾಲ್ ಮೆನನ್ ಸಹ ನಿರ್ಮಾಣವಿರಲಿದೆ. ಸದ್ಯ ಪ್ರೀ ಪ್ರೊಡಕ್ಷನ್ ಹಂತದಲ್ಲಿರುವ ಸಿನಿಮಾದ ಟೈಟಲ್ ಶೀಘ್ರದಲ್ಲೇ ರಿವೀಲ್ ಮಾಡಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.

    ಮತ್ತೊಂದೆಡೆ, ಪವನ್ ಒಡೆಯರ್ ತಮ್ಮ ಚೊಚ್ಚಲ ನಿರ್ದೇಶನದ ಮೂಲಕ ಬಾಲಿವುಡ್ಗೆ ಕಾಲಿಟ್ಟಿದ್ದಾರೆ. ಅವಸ್ಥಿ ವರ್ಸಸ್ ಅವಸ್ಥಿ ಚಿತ್ರದಲ್ಲಿ ಪರಂಬ್ರತ ಚಟರ್ಜಿ ನಟಿಸಿದ್ದಾರೆ ಮತ್ತು ಗೀತಾ ಬಾಸ್ರಾ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ಕೋರ್ಟ್ ರೂಮ್ ಡ್ರಾಮ್ ಕಥೆ ಕೂಡ ಇದೆ. ಆದರೆ ಅದರ ಹೊರತಾಗಿ ಇಲ್ಲಿ ಬೇರೆ ಬೇರೆ ವಿಚಾರವೂ ಇದೆ ಎಂದು ಹೇಳುವ ಡೈರೆಕ್ಟರ್ ಪವನ್ ಒಡೆಯರ್ ಸದ್ಯ, ಚಿತ್ರದ ಪೊಸ್ಟ್ ಪ್ರೋಡಕ್ಷನ್ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಪವನ್ ಒಡೆಯರ್ ಈ ಸಿನಿಮಾ ಮೂಲಕ ಬಾಲಿವುಡ್ನಲ್ಲೂ ಹೊಸದೊಂದು ಅಲೆ ಎಬ್ಬಿಸೋ ಹಾಗೆ ಕಾಣುತ್ತಿದೆ. ಸಿನಿಮಾದಲ್ಲಿ ಅದ್ಭುತ ಕಥೆ ಕೂಡ ಇದ್ದು, ಅದ್ಭುತ ಕಲಾವಿದರ ಸಿನಿಮಾ ಇದಾಗಿದೆ.