Tag: Pawan Wodeyar

  • ಸೆಟ್ಟೇರಿತು ಪವನ್ ಒಡೆಯರ್ ನಿರ್ಮಾಣದ ‘ವೆಂಕ್ಯಾ’ ಸಿನಿಮಾ

    ಸೆಟ್ಟೇರಿತು ಪವನ್ ಒಡೆಯರ್ ನಿರ್ಮಾಣದ ‘ವೆಂಕ್ಯಾ’ ಸಿನಿಮಾ

    ಸ್ಯಾಂಡಲ್ ವುಡ್ ನಲ್ಲಿ ಯಶ್, ಪುನೀತ್ ರಾಜ್ ಕುಮಾರ್ ಅವರಂತಹ ಸ್ಟಾರ್ ನಟರಿಗೆ ಸಿನಿಮಾ ಮಾಡಿ ಸೈ ಎನಿಸಿಕೊಂಡವರು ಪವನ್ ಒಡೆಯರ್ (Pawan Wodeyar). ನಿರ್ದೇಶನದಲ್ಲಿ ಗೆದ್ದಿರುವ ಪವನ್ ನಿರ್ಮಾಪಕರಾಗಿಯೂ ಮೊದಲ ಹೆಜ್ಜೆಯಲ್ಲಿ ಶಹಬಾಸ್ ಗಿರಿ ಪಡೆದುಕೊಂಡಿದ್ದಾರೆ. ಡೊಳ್ಳು ಸಿನಿಮಾ ಮೂಲಕ ನಿರ್ಮಾಣಕ್ಕಿಳಿದು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಬಾಚಿಕೊಂಡಿದ್ದ ಪವನ್ ಒಡೆಯರ್ ಮತ್ತೊಮ್ಮೆ ಸಾಗರ್ ಪುರಾಣಿಕ್ ಜೊತೆ ಕೈ ಜೋಡಿಸಿರುವುದು ಗೊತ್ತೇ ಇದೆ.

    ಡೊಳ್ಳು ಸಾರಥಿ ಸಾಗರ್ ಪುರಾಣಿಕ್ (Sagar Puranik) ಹಾಗೂ ಪವನ್ ಒಡೆಯರ್ ಮತ್ತೊಂದು ಸಂಗಮದ ಸಿನಿಮಾ ಸೆಟ್ಟೇರಿದೆ. ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ಇತ್ತೀಚೆಗಷ್ಟೇ ಮುಹೂರ್ತ ನೆರವೇರಿದೆ. ಈ ಚಿತ್ರಕ್ಕೆ ವೆಂಕ್ಯಾ (Venkya) ಎಂಬ ಟೈಟಲ್ ಇಡಲಾಗಿದೆ. ವೆಂಕ್ಯಾನಿಗೆ ಸಾಗರ್ ಪುರಾಣಿಕ್ ಆಕ್ಷನ್ ಕಟ್ ಹೇಳುವುದರ ಜೊತೆಗೆ ನಾಯಕನಾಗಿಯೂ ಮೊದಲ ಹೆಜ್ಜೆ ಇಟ್ಟಿದ್ದಾರೆ. ನಿರ್ದೇಶನದ ಜೊತೆಗೆ ಸಾಗರ್ ನಟನೆ ಜವಾಬ್ದಾರಿನ್ನು ಹೊತ್ತುಕೊಂಡಿದ್ದಾರೆ.

    ವೆಂಕ್ಯಾ ಶೂಟಿಂಗ್ ಈಗಾಗಲೇ ಚಾಲುವಾಗಿದೆ. ಇದೊಂದು ವಿಭಿನ್ನ ಪ್ರಯತ್ನದ ಸಿನಿಮಾ. ಉತ್ತರ ಕರ್ನಾಟಕದ ಕಥೆಯಾದ್ರೂ ಅದು ದೇಶ ಎಲ್ಲಾ ಸುತ್ತಲಿದೆ. ಇದೊಂದು ಹೊಸ ಬಗೆಯ ಕಮರ್ಷಿಯಲ್ ಸಿನಿಮಾ  ಅಂತಿದೆ ಚಿತ್ರತಂಡ. ಶೀಘ್ರದಲ್ಲೇ ಉಳಿದ ತಾರಾ ಬಳಗ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಚಿತ್ರತಂಡ ಮಾಹಿತಿ ನೀಡಲಿದೆ.

    ಅಪೇಕ್ಷಾ ಒಡೆಯರ್ ಮತ್ತು ಪವನ್ ಒಡೆಯರ್ ಹಣ ಹಾಕುತ್ತಿರುವ ವೆಂಕ್ಯಾ ಚಿತ್ರಕ್ಕೆ ಸ್ನೇಹಿತರಾದ ಅವಿನಾಶ್ ವಿ ರೈ ಮತ್ತು ಮೋಹನ್ ಲಾಲ್ ಮೆನನ್ ಸಹ ನಿರ್ಮಾಣವಿರಲಿದೆ.

  • ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಗೆಲುವಿಗೆ ಸ್ಯಾಂಡಲ್ ವುಡ್ ಜೈ ಹೋ

    ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಗೆಲುವಿಗೆ ಸ್ಯಾಂಡಲ್ ವುಡ್ ಜೈ ಹೋ

    ಬಾರಿಯ ವಿಧಾನಸಭೆ ಚುನಾವಣೆಯಲ್ಲಿ 135 ಸೀಟುಗಳನ್ನು ಗೆಲ್ಲಿಸುವ ಮೂಲಕ ಮತದಾರ ಕಾಂಗ್ರೆಸ್ (Congress) ಪಕ್ಷಕ್ಕೆ ಬಹುಮತ ಘೋಷಣೆ ಮಾಡಿದ್ದಾನೆ. ಐದು ವರ್ಷದ ಮಹಾ ಅಜ್ಞಾತವಾಸವನ್ನು ಮುಗಿಸಿಕೊಂಡು ಕಾಂಗ್ರೆಸ್ ನಾಯಕರು ಅಧಿಕಾರದ ಗದ್ದುಗೆ ಏರಲು ಸಜ್ಜಾಗಿದ್ದಾರೆ. ಬಿಜೆಪಿ ಪರವಾಗಿ ಸ್ಟಾರ್ ನಟರು ಕ್ಯಾಂಪೇನ್ ಮಾಡಿದರೂ, ಅಂದುಕೊಂಡಷ್ಟು ಸೀಟು ಗೆಲ್ಲಲಿಲ್ಲ ಎನ್ನುವ ನೋವಿನ ನಡುವೆಯೂ ಕೆಲ ನಟ ನಟಿಯರು ಹಾಗೂ ನಿರ್ದೇಶಕರು ಕಾಂಗ್ರೆಸ್ ಪಕ್ಷದ ಗೆಲುವಿನ ಬಗ್ಗೆ ತಮ್ಮದೇ ಆದ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ.

    ರಾಜಕಾರಣದಲ್ಲಿ ಗುರುತಿಸಿಕೊಂಡಿರುವ ಪ್ರಕಾಶ್ ರಾಜ್ ಮೊದಲಿನಿಂದಲೂ ಬಿಜೆಪಿ ವಿರೋಧಿ ಹೇಳಿಕೆಗಳನ್ನು ಕೊಡುತ್ತಾ ಬಂದಿದ್ದಾರೆ. ಆದರೆ, ಅಚ್ಚರಿ ಎನ್ನುವಂತೆ ಬಿಜೆಪಿ ಸರಕಾರದ ವಿರುದ್ಧ ಕೆಲ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳು ಕಿಡಿಕಾರಿದ್ದಾರೆ. ಇನ್ನೂ ಕೆಲವರು ಕಾಂಗ್ರೆಸ್ ಪಕ್ಷದ ಗೆಲುವನ್ನು ಸಂಭ್ರಮಿಸಿದ್ದಾರೆ.

    ಗೂಗ್ಲಿ ಸೇರಿದಂತೆ ಸಾಕಷ್ಟು ಹಿಟ್ ಚಿತ್ರಗಳನ್ನು ಕೊಟ್ಟಿರುವ ನಿರ್ದೇಶಕ ಪವನ್ ಒಡೆಯರ್ (Pawan Wodeyar), ಟ್ವೀಟ್ ಮಾಡಿ, ‘ಸಿಎಂ ಬಸವರಾಜ್ ಬೊಮ್ಮಾಯಿ ಅವರದ್ದು ದುರಹಂಕಾರದ ವ್ಯಕ್ತಿತ್ವ’ ಎಂದಿದ್ದಾರೆ. ‘ಡೊಳ್ಳು ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ಬಂದಾಗ ಬೊಮ್ಮಾಯಿ ಮಾಮಗೆ ಚಿತ್ರ ವೀಕ್ಷಿಸಲು ಕೊರಿದ್ದೆವು. ಮಾಮ ತೋರಿದ ದುರಹಂಕಾರ ನನ್ನ ಕಣ್ಣಿನಲ್ಲಿ ಇನ್ನೂ ಹಾಗೆ ಇದೆ. ತೆಲುಗು ಚಿತ್ರದ ಕಾರ್ಯಕ್ರಮಕ್ಕೆ ಮಾಮ 3 ತಾಸು ಕುಳಿತುಕೊಳ್ಳುವಷ್ಟು ಸಮಯವಿದೆ. ಕನ್ನಡಿಗರು ಮುಟ್ಟಾಳರಲ್ಲ’ ಎಂದು ಟ್ವೀಟ್ ಮಾಡಿದ್ದಾರೆ.

    ಕನ್ನಡದಲ್ಲಿ ‘ರಾಮ ಬಾಮಾ ಶ್ಯಾಮ’ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ಕಮಲ್ ಹಾಸನ್ (Kamal Haasan) ಕೂಡ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ‘ರಾಹುಲ್ ಗಾಂಧಿ ಅವರೆ, ಈ ಅದ್ಭುತ ವಿಜಯಕ್ಕೆ ನಿಮಗೆ ಅಭಿನಂದನೆಗಳು. ಗಾಂಧೀಜಿಯವರಂತೆ ನೀವು ಜನರ ಹೃದಯದೊಳಗೆ ನಡೆದುಕೊಂಡು ಹೋದಿರಿ’ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.  ಇದನ್ನೂ ಓದಿ: ಸಿದ್ಧಾಂತದ ಸೋಲಲ್ಲ, ವೈಯಕ್ತಿಕ ಸೋಲು: ಸಿ.ಟಿ ರವಿ

    ನಟ ದುನಿಯಾ ವಿಜಯ್ (Dunia Vijay) ಕೂಡ ಟ್ವೀಟ್ ಮಾಡಿದ್ದು, ‘ತಾವು ಪ್ರಜ್ಞಾವಂತ ಮತದಾರರು ಎಂಬುದನ್ನು ಸಾಬೀತುಪಡಿಸಿದ್ದೀರಿ. ಗೆದ್ದವರಿಗೆ ಶುಭಾಶಯಗಳು. ಸೋತವರು ಆತ್ಮವಿಮರ್ಶೆ ಮಾಡಿಕೊಳ್ಳುವ ಕಾಲ. ಸಂಪೂರ್ಣ ಬಹುಮತ ಪಡೆದುಕೊಂಡ ಕಾಂಗ್ರೆಸ್ ಪಕ್ಷಕ್ಕೆ ಶುಭಾಶಯಗಳು. ಸಾಮಾನ್ಯ ಜನ ನೆಮ್ಮದಿಯಿಂದ ಜೀವನ ನಡೆಸುವಂತೆ ಉತ್ತಮ ಆಡಳಿತ ನೀಡಿ’ ಎಂದು ಬರೆದುಕೊಂಡಿದ್ದಾರೆ.

    ನಟ ಶಿವರಾಜ್ ಕುಮಾರ್, ಕಾರುಣ್ಯ ರಾಮ್, ನಿರ್ದೇಶಕ ಮಂಸೋರೆ ಸೇರಿದಂತೆ ಅನೇಕರು ಕಾಂಗ್ರೆಸ್ ಪಕ್ಷದ ಗೆಲುವನ್ನು ಸಂಭ್ರಮಿಸಿದ್ದಾರೆ. ಜೊತೆಗೆ ಉತ್ತಮ ಆಡಳಿತ ಕೊಡಲಿ ಎಂದು ಹಾರೈಸಿದ್ದಾರೆ. ನಿನ್ನೆಯಿಂದಲೂ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರು ಶುಭಾಶಯಗಳನ್ನು ಹೇಳಿದ್ದು, ಚಿತ್ರೋದ್ಯಮಕ್ಕೂ ಪಕ್ಷ ಸಹಕಾರ ನೀಡಲಿ ಎಂದು ಆಶಿಸಿದ್ದಾರೆ.

  • ಇಂದಿನಿಂದ ಪವನ್ ಒಡೆಯರ್ ನಿರ್ದೇಶನದ ‘ರೇಮೊ’ ಒಟಿಟಿಗೆ

    ಇಂದಿನಿಂದ ಪವನ್ ಒಡೆಯರ್ ನಿರ್ದೇಶನದ ‘ರೇಮೊ’ ಒಟಿಟಿಗೆ

    ವನ್ ಒಡೆಯರ್ (Pawan Wodeyar) ನಿರ್ದೇಶನದ ಇಶಾನ್ (Ishan) ಹಾಗೂ ಆಶಿಕಾ ರಂಗನಾಥ್ (Ashika Ranganath) ನಟನೆಯ ‘ರೇಮೊ’ (Raymo)ಸಿನಿಮಾ ಒಟಿಟಿ ಎಂಟ್ರಿಗೆ ಡೇಟ್ ಫಿಕ್ಸ್ ಆಗಿದೆ. ಬಿಗ್ ಬಜೆಟ್, ಅದ್ದೂರಿ ಮೇಕಿಂಗ್, ಇಶಾನ್ ಸ್ಟೈಲಿಶ್ ಅವತಾರ ಹೀಗೆ ಸಾಕಷ್ಟು ಕಾರಣಗಳಿಂದ ‘ರೇಮೊ’ ನಿರೀಕ್ಷೆ ಹುಟ್ಟಿಸಿತ್ತು. ನವೆಂಬರ್ 25ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ತೆರೆಕಂಡು ಉತ್ತಮ ವಿಮರ್ಶೆ ಪಡೆದುಕೊಂಡ ಸಿನಿಮಾ ಇದೀಗ ZEE5 ಮೂಲಕ ಒಟಿಟಿ ಪ್ರೇಕ್ಷಕರ ಮನ ಗೆಲ್ಲಲು ಸಜ್ಜಾಗಿದೆ.

    ಮಾರ್ಚ್ 10ರಂದು ‘ರೇಮೊ’ ಸಿನಿಮಾ ZEE5 ನಲ್ಲಿ ಬಿಡುಗಡೆಯಾಗುತ್ತಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ವೇದ’ ಸಿನಿಮಾ ಸೂಪರ್ ಸಕ್ಸಸ್ ಆದ ಬೆನ್ನಲ್ಲೇ ಮತ್ತೊಂದು ಹಿಟ್ ಸಿನಿಮಾವನ್ನು ತನ್ನ ಪ್ರೇಕ್ಷಕರಿಗೆ ನೀಡುತ್ತಿದೆ ZEE5. ‘ವೇದ’ ಸಿನಿಮಾ ಬಿಡುಗಡೆಯಾಗಿ ಅತಿ ಕಡಿಮೆ ಅವಧಿಯಲ್ಲೇ 125 ಮಿಲಿಯನ್ ಸ್ಟ್ರೀಮಿಂಗ್ ಮಿನಿಟ್ಸ್ ವೀವ್ಸ್ ಪಡೆದುಕೊಂಡಿತ್ತು. ಆ ಖುಷಿಯನ್ನು ZEE5 ಸೆಲೆಬ್ರೆಟ್ ಕೂಡ ಮಾಡಿತ್ತು. ಇದೀಗ ಅದರ ಬೆನ್ನಲ್ಲೇ ಅದ್ದೂರಿ ಮೇಕಿಂಗ್, ಮ್ಯೂಸಿಕಲ್ ಲವ್ ಸ್ಟೋರಿ ಮೂಲಕ ಗಮನ ಸೆಳೆದ ‘ರೇಮೊ’ ಸಿನಿಮಾವನ್ನು ಬಿಡುಗಡೆ ಮಾಡುತ್ತಿದೆ. ಇದನ್ನೂ ಓದಿಮತ್ತೆಂದೂ ಮದುವೆಯಾಗಲಾರೆ ಎಂದು ಘೋಷಿಸಿದ ನಟಿ ರಾಖಿ ಸಾವಂತ್

    ‘ರೇಮೊ’ ಮ್ಯೂಸಿಕಲ್ ಲವ್ ಸ್ಟೋರಿ ಸಿನಿಮಾ. ‘ರೋಗ್’ ಸಿನಿಮಾ ನಂತರ ಬ್ರೇಕ್ ಪಡೆದುಕೊಂಡಿದ್ದ ನಟ ಇಶಾನ್ ಸಾಕಷ್ಟು ತಯಾರಿಯೊಂದಿಗೆ, ನಯಾ ಲುಕ್ ನೊಂದಿಗೆ ಈ ಚಿತ್ರದಲ್ಲಿ ಕಂ ಬ್ಯಾಕ್ ಮಾಡಿದ್ದಾರೆ. ಶರತ್ ಕುಮಾರ್, ರಾಜೇಶ್ ನಟರಂಗ, ಅಚ್ಯುತ್ ಕುಮಾರ್, ಮಧು, ಶರಣ್ಯ ಒಳಗೊಂಡ ತಾರಾಬಳಗ ಚಿತ್ರದಲ್ಲಿದೆ. ಜಯಾದಿತ್ಯ ಬ್ಯಾನರ್ ನಡಿ ಸಿ. ಆರ್. ಮನೋಹರ್ ಅದ್ದೂರಿಯಾಗಿ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಸಿ. ಆರ್ ಗೋಪಿ ಸಹ ನಿರ್ಮಾಣವಿದೆ. ವೈದಿ ಕ್ಯಾಮೆರಾ ವರ್ಕ್, ಕೆ.ಎಂ. ಪ್ರಕಾಶ್ ಸಂಕಲನ, ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

  • ಆಶಿಕಾ ರಂಗನಾಥ್ ಕುಡಿದು ರಂಪಾಟ: ಚಿತ್ರದ ಮಾರ್ಕೆಟಿಂಗ್ ಟೀಮ್ ತಪ್ಪು ಎಂದ ಡೈರೆಕ್ಟರ್

    ಆಶಿಕಾ ರಂಗನಾಥ್ ಕುಡಿದು ರಂಪಾಟ: ಚಿತ್ರದ ಮಾರ್ಕೆಟಿಂಗ್ ಟೀಮ್ ತಪ್ಪು ಎಂದ ಡೈರೆಕ್ಟರ್

    ನಿನ್ನೆಯಷ್ಟೇ ನಟಿ ಆಶಿಕಾ ರಂಗನಾಥ್ ಕುಡಿದು ತೂರಾಡುತ್ತಿರುವ ಮತ್ತು ಮಧ್ಯದ ಬೆರಳು ತೋರಿಸಿ ಅಸಭ್ಯವಾಗಿ ವರ್ತಿಸುವಂತಹ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದು ಸಿನಿಮಾದ ದೃಶ್ಯವಾ? ಅಥವಾ ನಿಜವಾಗಿಯೂ ಅವರು ಕುಡಿದು ತೂರಾಡಿದ್ದಾರಾ ಎಂಬ ಚರ್ಚೆ ಕೂಡ ಮೂಡಿತ್ತು. ಇದೀಗ ರೇಮೋ ಸಿನಿಮಾದ ನಿರ್ದೇಶಕರಿಂದಲೇ ಸ್ಪಷ್ಟನೆ ಬಂದಿದ್ದು, ಅದು ಆಶಿಕಾ ರಂಗನಾಥ್ ಕುಡಿದು ತೂರಾಡಿದ ದೃಶ್ಯವಲ್ಲ. ಸಿನಿಮಾದ ದೃಶ್ಯ. ನಮ್ಮ ಮಾರ್ಕೆಟಿಂಗ್ ಟೀಮ್ ತಪ್ಪಿನಿಂದಾಗಿ ಅದು ಲೀಕ್ ಆಗಿದೆ ಎಂದಿದ್ದಾರೆ.

    ಚುಟುಚುಟು ಖ್ಯಾತಿಯ ನಟಿ ಆಶಿಕಾ ರಂಗನಾಥ್ ಅವರ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿತ್ತು. ಶೂಟಿಂಗ್ ಸ್ಪಾಟ್ ನಲ್ಲಿ ಕುಡಿದು, ಮಧ್ಯೆ ಬೆರಳು ತೋರಿಸುವಂತಹ ವಿಡಿಯೋ ಅದಾಗಿದ್ದು, ಈ ವಿಡಿಯೋಗೆ ನೆಗೆಟಿವ್ ಕಾಮೆಂಟ್ಸ್ ಹೆಚ್ಚಾಗಿ ಬಂದವು. ಇದು ಸಿನಿಮಾವೊಂದರ ದೃಶ್ಯವಾ ಅಥವಾ ಅವರ ನಟನೆಯ ಸಿನಿಮಾವೊಂದು ಮುಂದಿನ ವಾರ ಬಿಡುಗಡೆ ಆಗುತ್ತಿದ್ದು, ಆ ಸಿನಿಮಾದ ಪ್ರಮೋಷನ್ನಾ ಎನ್ನುವ ಅನುಮಾನ ಕೂಡ ಮೂಡಿತ್ತು.

    ಮೇಲ್ನೋಟಕ್ಕೆ ಈ ದೃಶ್ಯವು ಪವನ್ ಒಡೆಯರ್ ನಿರ್ದೇಶನದ ರೇಮೋ ಸಿನಿಮಾದ್ದು ಎಂದು ಹಲವರು ಹೇಳಿದ್ದರೆ, ಇನ್ನೂ ಕೆಲವರು ತಮಾಷೆಯಾಗಿ ಸೆಟ್ ನಲ್ಲಿ ಈ ರೀತಿ ಆಶಿಕಾ ನಡೆದುಕೊಂಡಿದ್ದಾರೆ ಎಂದೂ ಹೇಳಲಾಗಿತ್ತು. ಶೂಟಿಂಗ್ ಸ್ಪಾಟ್ ನಲ್ಲಿ ಗಲಾಟೆ ಮಾಡಿಕೊಂಡು ಈ ರೀತಿ ಅಸಭ್ಯವಾಗಿ ನಡೆದುಕೊಳ್ಳುವಂತಹ ಪ್ಲ್ಯಾನ್ ಸಿನಿಮಾ ಪ್ರಮೋಷನ್ ಗಾಗಿ ಮಾಡಿದ್ದು ಎಂದೂ ಊಹೆ ಮಾಡಲಾಗಿತ್ತು. ಇದನ್ನೂ ಓದಿ:ನನ್ನ ಮಗನ ಕಾರು ಅಪಘಾತಕ್ಕೆ ‘ಬುಧ ಭಕ್ತಿ’ ಕಾರಣ ಎಂದ ಜಗ್ಗೇಶ್

    ಈವರೆಗೂ ಯಾವತ್ತೂ ವಿವಾದಕ್ಕೆ ಗುರಿಯಾದವರಲ್ಲ ಆಶಿಕಾ. ತಮ್ಮ ಪಾಡಿಗೆ ತಾವು ಇದ್ದವರು. ಪಬ್, ಗಲಾಟೆ, ಬಾಯ್ ಫ್ರೆಂಡ್ ಅಂತ ಹೆಸರು ಕೆಡಿಸಿಕೊಂಡವರಲ್ಲ. ಹಾಗಾಗಿ ಇದು ಸಿನಿಮಾದ ದೃಶ್ಯ ಅಥವಾ ಸಿನಿಮಾ ಪ್ರಮೋಷನ್ ಗಾಗಿ ಚಿತ್ರೀಕರಿಸಿರುವ ವಿಡಿಯೋ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಇದು ಸಿನಿಮಾದ ದೃಶ್ಯವೇ ಆಗಿದ್ದರೆ, ಆಶಿಕಾ ರೇಮೋ ಸಿನಿಮಾದಲ್ಲಿ ಯಾವ ರೀತಿಯ ಪಾತ್ರವನ್ನು ಮಾಡಿದ್ದಾರೆ ಎನ್ನುವ ಕುತೂಹಲ ಕೂಡ ಮೂಡಿದೆ.

    ಆಶಿಕಾ ಪ್ರತಿಭಾವಂತ ನಟಿ. ಎಂತಹ ಪಾತ್ರ ಕೊಟ್ಟರೂ ಮಾಡುವಂತಹ ಕಲಾವಿದೆ. ಹಾಗಾಗಿ ರೇಮೋ ಸಿನಿಮಾದಲ್ಲಿ ಅವರು ವಿಶೇಷ ಪಾತ್ರವನ್ನು ನಿರ್ವಹಿಸಿದ್ದಾರೆ. ಈವರೆಗೂ ಮಾಡದೇ ಇರುವಂತಹ ಪಾತ್ರ ಅದಾಗಿದೆ ಎಂದು ಹೇಳಿದ್ದಾರೆ. ಈ ಸಿನಿಮಾದಲ್ಲಿ ನಾಯಕನಷ್ಟೇ ನಾಯಕಿಗೂ ಮಹತ್ವ ನೀಡಲಾಗಿದೆ ಎನ್ನುವುದು ನಿರ್ದೇಶಕ ಪವನ್ ಒಡೆಯರ್ ಅವರು ಮಾತು.

    Live Tv
    [brid partner=56869869 player=32851 video=960834 autoplay=true]

  • ‘ರೇಮೊ’  ಸಿನಿಮಾದ ಟ್ರೇಲರ್ ರಿಲೀಸ್ ಮಾಡಿ ಹಾರೈಸಿದ ಶಿವರಾಜ್ ಕುಮಾರ್

    ‘ರೇಮೊ’ ಸಿನಿಮಾದ ಟ್ರೇಲರ್ ರಿಲೀಸ್ ಮಾಡಿ ಹಾರೈಸಿದ ಶಿವರಾಜ್ ಕುಮಾರ್

    ಸಿ.ಆರ್.ಮನೋಹರ್ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಪವನ್ ಒಡೆಯರ್ (Pawan Wodeyar) ನಿರ್ದೇಶನದ ‘ರೇಮೊ’ (Raymo) ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ.  ಕರುನಾಡ ಚಕ್ರವರ್ತಿ ಶಿವರಾಜಕುಮಾರ್  ‘ರೇಮೊ’ ಟ್ರೇಲರ್ ಬಿಡುಗಡೆ ಮಾಡಿದ್ದಾರೆ.  ಇಶಾನ್ ಮತ್ತು ಆಶಿಕಾ ರಂಗನಾಥ್ ಈ ಚಿತ್ರದ ನಾಯಕ, ನಾಯಕಿಯಾಗಿ ನಟಿಸಿದ್ದಾರೆ. ‘ಕನ್ನಡ ಚಿತ್ರರಂಗ ಯಾರಿಗೂ ಕಡಿಮೆ ಇಲ್ಲ. “ಕಾಂತಾರ” ಚಿತ್ರ ನಮಗೆಲ್ಲ ಒಂದು ಹೆಮ್ಮೆ. ಆ ಚಿತ್ರದ ಟ್ರೇಲರ್ ಮತ್ತು ಸಾಂಗ್ ನೋಡಿ ನಾನು ರಿಷಬ್ ಶೆಟ್ಟಿ ಅವರಿಗೆ ಫೋನ್ ಮಾಡಿದ್ದೆ. ‘ರೇಮೊ’ ಕೂಡ ಅದೇ ರೀತಿ ಸೂಪರ್ ಹಿಟ್ ಆಗಲಿ ಅಂತ ದೇವರಲ್ಲಿ ನಾನು ಪ್ರಾರ್ಥನೆ ಮಾಡಿಕೊಳ್ಳುತ್ತೇನೆ. ಇಶಾನ್ ಹಾಗೂ ಆಶಿಕಾ ಮುದ್ದಾಗಿ ಕಾಣುತ್ತಿದ್ದಾರೆ.  ನಿರ್ದೇಶಕ ಪವನ್ ಒಡೆಯರ್ ಬಗ್ಗೆ ಹೇಳುವಂತೆಯೇ ಇಲ್ಲ. ಸಿ.ಆರ್. ಮನೋಹರ್ ಅವರಂತಹ ನಿರ್ಮಾಪಕರು ಕನ್ನಡ ಚಿತ್ರರಂಗಕ್ಕೆ ಬೇಕು’ ಎಂದು ಶಿವರಾಜಕುಮಾರ್ (Shivraj Kumar) ಹೇಳಿದರು.

    ‘ರೇಮೊ’ ಚಿತ್ರದ ಕೆಲಸ ಶುರುವಾಗಿ 3 ವರ್ಷ ಆಯಿತು. ಈಗ ಬಿಡುಗಡೆ ಹಂತಕ್ಕೆ ಬಂದಿದೆ. ನನ್ನನ್ನು ಚಿತ್ರರಂಗಕ್ಕೆ ಬರಲು ಹೇಳಿದ್ದು ಶಿವಣ್ಣ. ಇವತ್ತು ಅವರಿಂದಲೇ ನಮ್ಮ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು ಖುಷಿಯಾಗಿದೆ. ನವೆಂಬರ್ 25 ರಂದು ನಮ್ಮ ಚಿತ್ರ ಬಿಡುಗಡೆಯಾಗಲಿದೆ. ಅಂದೇ ನಮ್ಮ ಚಿತ್ರವನ್ನು ನೋಡುವುದಾಗಿ ಶಿವಣ್ಣ ಹೇಳಿದ್ದಾರೆ.  ಅವರೇ ನನಗೆ ಸ್ಫೂರ್ತಿ. ನಾನು ಎಷ್ಟೇ ಸಿನಿಮಾ ಮಾಡಬಹುದು. ಆದರೆ ‘ರೇಮೊ’ ಚಿತ್ರ ಯಾವಾಗಲೂ ನನ್ನ ಹೃದಯಕ್ಕೆ ಹತ್ತಿರವಾಗಿರುತ್ತದೆ ಎನ್ನುತ್ತಾರೆ ನಾಯಕ ಇಶಾನ್. ಇದನ್ನೂ ಓದಿ:ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಅಶೋಕ್ ಕಶ್ಯಪ್

    ನಟಿ ಆಶಿಕಾ ರಂಗನಾಥ್ ಅವರಿಗೂ ‘ರೇಮೊ’ ಚಿತ್ರ ವಿಶೇಷ ಅಂತೆ. ‘ಇಷ್ಟು ದಿನ ನನ್ನನ್ನು ಕ್ಯೂಟ್ ಹುಡುಗಿಯ ಪಾತ್ರದಲ್ಲಿ ನೋಡಿದ್ದೀರಿ. ಆದರೆ ಈ ಸಿನಿಮಾದಲ್ಲಿನ ಪಾತ್ರ ಭಿನ್ನವಾಗಿದೆ.  ಈವರೆಗೆ ನಾನು ಮಾಡಿದ ಪಾತ್ರಗಳಲ್ಲಿ ಇದೇ ಬೆಸ್ಟ್. ಹೀರೋಗೆ ಸಮನಾಗಿ ಇರುವಂತಹ ಪಾತ್ರ ನನಗೆ ಸಿಕ್ಕಿದೆ. ಅದಕ್ಕೆ ನನ್ನನ್ನು ಆಯ್ಕೆ ಮಾಡಿದ ಪವನ್ ಒಡೆಯರ್   ಅವರಿಗೆ ಧನ್ಯವಾದಗಳು’ ಎನ್ನುತ್ತಾರೆ (Ashika Ranganath) ಆಶಿಕಾ ರಂಗನಾಥ್.

    ಪ್ರೀತಿಯಲ್ಲಿ ಹಲವು ವಿಧಗಳಿದೆ. ಅದರಲ್ಲಿ ನಾನು ಮ್ಯೂಸಿಕಲ್ ಲವ್ ಸ್ಟೋರಿ ಆಯ್ಕೆ ಮಾಡಿಕೊಂಡಿದ್ದೀನಿ. ಈ ಚಿತ್ರದಲ್ಲಿ ಎಮೋಷನ್ ಸಹ ಇದೆ. ವೈದಿ ಅವರ ಛಾಯಾಗ್ರಹಣ ಹಾಗೂ ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಚಿತ್ರವನ್ನು ಮತ್ತಷ್ಟು ಸುಂದರವಾಗಿಸಿದೆ. ಇಶಾನ್ ಹಾಗೂ ಆಶಿಕಾ ರಂಗನಾಥ್ ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ. ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಶಿವರಾಜಕುಮಾರ್ ಅವರಿಗೆ ಧನ್ಯವಾದ ಎಂದರು ನಿರ್ದೇಶಕ ಪವನ್ ಒಡೆಯರ್.

    ನಿರ್ಮಾಪಕ ಸಿ.ಆರ್.ಮನೋಹರ್  ಶಿವರಾಜಕುಮಾರ್ ಅವರನ್ನು ಸನ್ಮಾನಿಸಿದರು. ಚಿತ್ರ ಉತ್ತಮವಾಗಿ ಮೂಡಿಬರಲು ಸಹಕರಿಸಿದ ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದರು. ಪವನ್ ಒಡೆಯರ್ ಪತ್ನಿ ಅಪೇಕ್ಷಾ ಪುರೋಹಿತ್ ಅವರು ಈ ಚಿತ್ರಕ್ಕೆ ವಸ್ತ್ರ ವಿನ್ಯಾಸ ಮಾಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಇಮ್ರಾನ್ ಸರ್ದಾರಿಯಾ ನೃತ್ಯ ನಿರ್ದೇಶನ,  ವೈದಿ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನ, ಪಿ. ಗುಣಶೇಖರನ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ರಾಜೇಶ್ ನಟರಂಗ, ಶರಣ್ಯ ಸೇರಿದಂತೆ ಹಲವು ನಟ ನಟಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

  • ಇಶಾನ್- ಆಶಿಕಾ ರಂಗನಾಥ್ ಜೋಡಿಯ ‘ರೇಮೊ’ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್

    ಇಶಾನ್- ಆಶಿಕಾ ರಂಗನಾಥ್ ಜೋಡಿಯ ‘ರೇಮೊ’ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್

    ನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿ ಚಿತ್ರಗಳನ್ನು ನೀಡಿರುವ ಸಿ.ಆರ್. ಮನೋಹರ್ ಅವರ ನಿರ್ಮಾಣದ , ಉತ್ತಮ ಪ್ರೇಮಕಥೆಯುಳ್ಳ ಚಿತ್ರಗಳನ್ನು ನಿರ್ದೇಶಿಸಿರುವ ಪವನ್ ಒಡೆಯರ್ (Pawan Wodeyar) ನಿರ್ದೇಶನದ ಹಾಗೂ ಸ್ಪುರದ್ರೂಪಿ ನಟ ಇಶಾನ್ – ಚೆಲುವೆ ಆಶಿಕಾ ರಂಗನಾಥ್ ನಾಯಕ-ನಾಯಕಿಯಾಗಿ  ನಟಿಸಿರುವ, ಬ್ಯೂಟಿಫುಲ್‌ ಮ್ಯೂಸಿಕಲ್ ಲವ್ ಸ್ಟೋರಿ “ರೇಮೊ” (Raymo) ನವೆಂಬರ್ 25 ರಂದು ಬಿಡುಗಡೆಯಾಗಲಿದೆ. ಸಿ.ಆರ್.ಗೋಪಿ ಈ ಚಿತ್ರದ ಸಹ ನಿರ್ಮಾಪಕರು.

    ನಾನು ಮೊದಲ ಬಾರಿ ಇಶಾನ್ (Ishaan) ಅವರನ್ನು ಭೇಟಿ ಮಾಡಿದ್ದು ದುಬೈನಲ್ಲಿ.  ಇಷ್ಟು ಚೆನ್ನಾಗಿದ್ದಾರೆ. ಇವರನ್ನು ಹೀರೋ ಮಾಡಬೇಕು ಅಂದು ಕೊಂಡೆ. ನಂತರ “ರೇಮೊ” ಚಿತ್ರದ ಕಥೆ ಬರೆದೆ. 2019ರಲ್ಲಿ ಚಿತ್ರೀಕರಣ ಬೆಂಗಳೂರಿನಲ್ಲಿ ಆರಂಭವಾಯಿತು. ಆನಂತರ ಹೈದರಾಬಾದ್, ಜಮ್ಮು-ಕಾಶ್ಮೀರ, ಸೌತ್ ಆಫ್ರಿಕಾ, ಸಿಂಗಾಪುರ ಮುಂತಾದ ಕಡೆ ಚಿತ್ರೀಕರಣ ನಡೆಸಲಾಯಿತು. ಇದನ್ನೂ ಓದಿ:ಸಿಮ್ ಖರೀದಿಸಲು ಬಂದ ನಟಿಯನ್ನು ಕೂಡಿ ಹಾಕಿದ ಕಚೇರಿ ಸಿಬ್ಬಂದಿ

    ಇದೊಂದು ಮ್ಯೂಸಿಕಲ್  ಲವ್ ಸ್ಟೋರಿ. ಮ್ಯಾಜಿಕಲ್‌ ಕಂಪೋಸರ್  ಅರ್ಜುನ್ ಜನ್ಯ ಅವರು ಸಂಗೀತ ನೀಡಿರುವ ಆರು ಅದ್ಭುತ ಹಾಡುಗಳು ಈ ಚಿತ್ರದಲ್ಲಿದೆ.   ಇಶಾನ್ – ಆಶಿಕಾ ರಂಗನಾಥ್  (Ashika Ranganath) ಅವರ  ಸುಂದರ ಜೋಡಿಯನ್ನು ತೆರೆ ಮೇಲೆ ನೋಡಿದವರು ಫಿದಾ ಆಗುವುದು ಖಂಡಿತಾ. ವೈದಿ ಅವರ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ “ರೇಮೊ” ಚಿತ್ರದ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ ಎಂದರೆ ತಪ್ಪಾಗಲಾರದು.

    ಸದ್ಯದಲ್ಲೇ ಲಿರಿಕಲ್ ಸಾಂಗ್, ಒಂದು ವಿಡಿಯೋ ಸಾಂಗ್ ಮತ್ತು ಟ್ರೇಲರ್ ಬಿಡುಗಡೆ (release) ಮಾಡುತ್ತೇವೆ. “ರೇಮೊ” ಚಿತ್ರದಲ್ಲಿ ಪರಿಶುದ್ಧ ಪ್ರೇಮಕಥೆಯೊಂದಿಗೆ ಭಾವನಾತ್ಮಕ ಸನ್ನಿವೇಶಗಳು ನೋಡುಗರ ಮನಸ್ಸಿಗೆ ಹತ್ತಿರವಾಗಲಿದೆ. ನವೆಂಬರ್ 25 ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರವನ್ನು ತೆರೆಯ ಮೇಲೆ ನೋಡಲು ನಾನು ಕಾತುರದಿಂದ ಕಾಯುತ್ತಿದ್ದೇನೆ. ನೀವೆಲ್ಲರು ನೋಡಿ ಹರಿಸಿ ಎನ್ನುತ್ತಾರೆ ನಿರ್ದೇಶಕ ಪವನ್ ಒಡೆಯರ್.

    Live Tv
    [brid partner=56869869 player=32851 video=960834 autoplay=true]

  • ಪವನ್ ಒಡೆಯರ್ ಬಾಲಿವುಡ್ ಚಿತ್ರಕ್ಕೆ ಕ್ರಿಕೆಟಿಗ ಹರ್ಭಜನ್ ಸಿಂಗ್ ಪತ್ನಿ ನಾಯಕಿ

    ಪವನ್ ಒಡೆಯರ್ ಬಾಲಿವುಡ್ ಚಿತ್ರಕ್ಕೆ ಕ್ರಿಕೆಟಿಗ ಹರ್ಭಜನ್ ಸಿಂಗ್ ಪತ್ನಿ ನಾಯಕಿ

    ನ್ನಡದ ಹೆಸರಾಂತ ನಿರ್ದೇಶಕ ಪವನ್ ಒಡೆಯರ್ (Pawan Wodeyar) ಇದೀಗ ಬಾಲಿವುಡ್ (Bollywood) ಗೆ ಹಾರಿದ್ದಾರೆ. ಸದ್ದಿಲ್ಲದೇ ನೋಟರಿ ಸಿನಿಮಾದ ಶೂಟಿಂಗ್ ಕೂಡ ಶುರು ಮಾಡಿದ್ದಾರೆ. ಬೆಂಗಾಲಿ ಮತ್ತು ಹಿಂದಿಯಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ಈ ಚಿತ್ರಕ್ಕೆ ಭಾರತದ ಖ್ಯಾತ ಕ್ರಿಕೆಟಿಗ ಹರ್ಭಜನ್ ಸಿಂಗ್ ಅವರ ಪತ್ನಿ ಗೀತಾ ಬಸ್ರಾ (Geeta Basra) ನಾಯಕಿ ಎನ್ನುವುದು ವಿಶೇಷ. ಪರಂಬ್ರತಾ ಚಟ್ಟೋಪಾಧ್ಯಾಯ (Parambrata Chattopadhyay) ನಾಯಕ ನಟನಾಗಿ ನಟಿಸುತ್ತಿದ್ದು, ಈಗಾಗಲೇ ‘ಕಹಾನಿ’, ‘ಪರಿ’ ಸೇರಿದಂತೆ ಹಲವು ಹಿಂದಿ ಸಿನಿಮಾಗಳಲ್ಲಿ ಪರಂಬ್ರತಾ ಚಟ್ಟೋಪಾಧ್ಯಾಯ ನಟಿಸಿ ಗಮನ ಸೆಳೆದಿದ್ದಾರೆ.

    ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಿನ್ನೆ ವಿಜಯದಶಮಿಯ ಶುಭ ದಿನದಂದು ಸಿನಿಮಾ ಸೆಟ್ಟೇರಿದ್ದು, ಈಗಾಗಲೇ ಚಿತ್ರೀಕರಣ ಆರಂಭವಾಗಿದೆ ಎಂದು ನಿರ್ದೇಶಕ ಪವನ್ ಒಡೆಯರ್ ತಿಳಿಸಿದ್ದಾರೆ. ಭೋಪಾಲ್ ನಲ್ಲಿ 20 ದಿನಗಳ ಚಿತ್ರೀಕರಣ ನಂತರ ಮುಂಬೈನಲ್ಲಿ ‘ನೋಟರಿ’ (Notary) ಸಿನಿಮಾ ಚಿತ್ರೀಕರಣ ನಡೆಯಲಿದೆ.

    ಚಿತ್ರದ ನಾಯಕ ಎಂದೂ ಕೂಡ ಸುಳ್ಳು ಹೇಳುವುದಿಲ್ಲ. ಇದು ಅವನ ಜೀವನದ ಸಿದ್ದಾಂತವಾಗಿರುತ್ತೆ. ಆದ್ರೆ ಕೆಲಸ ಮಾಡುವ ಕ್ಷೇತ್ರ ನಿತ್ಯ ಒಂದಿಲ್ಲೊಂದು ಸುಳ್ಳು ಹೇಳುವಂತ ಪರಿಸ್ಥಿತಿಯನ್ನು ತಂದೊಡ್ಡುತ್ತಿರುತ್ತೆ. ಅಂತಹ ಸಂದರ್ಭಗಳು ಎದುರಾದಾಗ ಆತ ಸುಳ್ಳು ಹೇಳದೇ ಅದನ್ನು ಹೇಗೆ ನಿಭಾಯಿಸುತ್ತಾನೆ ಎನ್ನುವುದರ ಸುತ್ತ ಕಥೆ ಸುತ್ತಲಿದ್ದು, ಇಡೀ ಸಿನಿಮಾ ಹಾಸ್ಯಮಯವಾಗಿರುತ್ತೆ ಎಂದು ‘ನೋಟರಿ’ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ ಪವನ್ ಒಡೆಯರ್. ಇದನ್ನೂ ಓದಿ: ಜೋಗಿ ಪ್ರೇಮ್- ಧ್ರುವ ಸರ್ಜಾ ಚಿತ್ರದ ಟೈಟಲ್ ಟೀಸರ್ ಕಾರ್ಯಕ್ರಮಕ್ಕೆ ಮೋಹನ್ ಲಾಲ್

    ಪರಂ ಅವರು ಅಭಿನಯದಲ್ಲಿ ತಮ್ಮ ಸಾಮರ್ಥ್ಯವನ್ನು ಈಗಾಗಲೇ ಸಾಬೀತು ಮಾಡಿದ್ದಾರೆ. ನನ್ನ ಕಥೆಗೆ ಬಹಳ ಸೂಕ್ತ ವ್ಯಕ್ತಿ ಎನಿಸಿದರು. ಆದ್ರಿಂದಲೇ ಅವರ ಆಯ್ಕೆ ಸೂಕ್ತ ಎನಿಸಿ ಕಥೆ ಹೇಳಿದೆ ಅವರು ಕೂಡ ಕಥೆ ಕೇಳಿ ಇಷ್ಟ ಪಟ್ಟು ನಟಿಸಲು ಒಪ್ಪಿಕೊಂಡ್ರು ಎಂದು ಚಿತ್ರದ ನಾಯಕನ ಆಯ್ಕೆ ಬಗ್ಗೆ ಪವನ್ ಒಡೆಯರ್ ಮಾಹಿತಿ ಹಂಚಿಕೊಂಡಿದ್ದಾರೆ. ‘ನೋಟರಿ’ ಚಿತ್ರಕ್ಕೆ ಕಥೆ ಬರೆದು ಪವನ್ ಒಡೆಯರ್ ನಿರ್ದೇಶನ ಮಾಡುತ್ತಿದ್ದು, ಪವನ್ ಒಡೆಯರ್ ಮತ್ತು ಮುಂಬೈ ಮೂಲದ ತಶಾ ಭಂಬ್ರಾ, ಸ್ಪರ್ಶ್ ಖೆಟರ್ ಪಾಲ್ ಚಿತ್ರಕಥೆ ಚಿತ್ರಕ್ಕಿದೆ. ವೈದಿ.ಎಸ್ ಕ್ಯಾಮೆರಾ ನಿರ್ದೇಶನ, ರೋಹಿತ್ ಕುಲಕರ್ಣಿ, ಮೌಸಿನ್ ಜಾವೇದ್ ಸಂಗೀತ  ನಿರ್ದೇಶನ ಚಿತ್ರಕ್ಕಿರಲಿದೆ.

    Live Tv
    [brid partner=56869869 player=32851 video=960834 autoplay=true]

  • ಬಾಲಿವುಡ್ ಗೆ ಪವನ್ ಒಡೆಯರ್: ‘ನೋಟರಿ’ ಮೂಲಕ ಬಿಟೌನ್ ಗೆ ಎಂಟ್ರಿ

    ಬಾಲಿವುಡ್ ಗೆ ಪವನ್ ಒಡೆಯರ್: ‘ನೋಟರಿ’ ಮೂಲಕ ಬಿಟೌನ್ ಗೆ ಎಂಟ್ರಿ

    ನ್ನಡದಲ್ಲಿ ದಶಕದಿಂದ ನಿರ್ದೇಶಕನಾಗಿ ಹಾಗೂ ನಿರ್ಮಾಪಕನಾಗಿ ಗುರುತಿಸಿಕೊಂಡಿರುವ ಪವನ್ ಒಡೆಯರ್ ಹಿಂದಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ನಿನ್ನೆ ಅವರ ನೂತನ ಹಿಂದಿ ಸಿನಿಮಾ ಸೆಟ್ಟೇರಿದ್ದು ಚಿತ್ರಕ್ಕೆ ‘ನೋಟರಿ’ ಎಂಟು ಟೈಟಲ್ ಇಡಲಾಗಿದೆ. ಈ ಚಿತ್ರವನ್ನು ಕಾಶ್ ಎಂಟಟೈನ್ಮೆಂಟ್ ಪ್ರೊಡಕ್ಷನ್ ಜೊತೆ ಒಡೆಯರ್ ಮೂವೀಸ್ ಮತ್ತು ಬೌಂಡ್ ಲೆಸ್ ಮೀಡಿಯಾ ಸಹಯೋಗದೊಂದಿಗೆ ನಿರ್ಮಾಣ ಮಾಡಲಾಗುತ್ತಿದೆ.

    ಈ ಚಿತ್ರದಲ್ಲಿ ಬೆಂಗಾಲಿ ಹಾಗೂ ಹಿಂದಿ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ನಟ ಪರಂಬ್ರತಾ ಚಟ್ಟೋಪಾಧ್ಯಾಯ ನಾಯಕ ನಟನಾಗಿ ನಟಿಸುತ್ತಿದ್ದು, ಈಗಾಗಲೇ ‘ಕಹಾನಿ’, ‘ಪರಿ’ ಸೇರಿದಂತೆ ಹಲವು ಹಿಂದಿ ಸಿನಿಮಾಗಳಲ್ಲಿ ಪರಂಬ್ರತಾ ಚಟ್ಟೋಪಾಧ್ಯಾಯ ನಟಿಸಿ ಗಮನ ಸೆಳೆದಿದ್ದಾರೆ. ಇದೀಗ ಕನ್ನಡದ ಪ್ರತಿಭಾವಂತ ನಿರ್ದೇಶಕ ಪವನ್ ಒಡೆಯರ್ ಜೊತೆ ಕೈ ಜೋಡಿಸಿದ್ದಾರೆ.  ನಾಯಕಿಯಾಗಿ ಕ್ರಿಕೆಟರ್ ಹರ್ ಭಜನ್ ಸಿಂಗ್ ಪತ್ನಿ ಗೀತಾ ಬಸ್ರಾ ನಟಿಸುತ್ತಿದ್ದಾರೆ. ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಿನ್ನೆ ವಿಜಯದಶಮಿಯ ಶುಭ ದಿನದಂದು ಸಿನಿಮಾ ಸೆಟ್ಟೇರಿದ್ದು, ಇಂದಿನಿಂದ ಚಿತ್ರೀಕರಣ ಆರಂಭವಾಗಿದೆ ಎಂದು ನಿರ್ದೇಶಕ ಪವನ್ ಒಡೆಯರ್ ತಿಳಿಸಿದ್ದಾರೆ. ಭೋಪಾಲ್ ನಲ್ಲಿ 20 ದಿನಗಳ ಚಿತ್ರೀಕರಣ ನಂತರ ಮುಂಬೈನಲ್ಲಿ ‘ನೋಟರಿ’ ಸಿನಿಮಾ ಚಿತ್ರೀಕರಣ ನಡೆಯಲಿದೆ.

    ಚಿತ್ರದ ನಾಯಕ ಎಂದೂ ಕೂಡ ಸುಳ್ಳು ಹೇಳುವುದಿಲ್ಲ. ಇದು ಅವನ ಜೀವನದ ಸಿದ್ದಾಂತವಾಗಿರುತ್ತೆ. ಆದ್ರೆ ಕೆಲಸ ಮಾಡುವ ಕ್ಷೇತ್ರ ನಿತ್ಯ ಒಂದಿಲ್ಲೊಂದು ಸುಳ್ಳು ಹೇಳುವಂತ ಪರಿಸ್ಥಿತಿಯನ್ನು ತಂದೊಡ್ಡುತ್ತಿರುತ್ತೆ. ಅಂತಹ ಸಂದರ್ಭಗಳು ಎದುರಾದಾಗ ಆತ ಸುಳ್ಳು ಹೇಳದೇ ಅದನ್ನು ಹೇಗೆ ನಿಭಾಯಿಸುತ್ತಾನೆ ಎನ್ನುವುದರ ಸುತ್ತ ಕಥೆ ಸುತ್ತಲಿದ್ದು, ಇಡೀ ಸಿನಿಮಾ ಹಾಸ್ಯಮಯವಾಗಿರುತ್ತೆ ಎಂದು ‘ನೋಟರಿ’ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ ಪವನ್ ಒಡೆಯರ್. ಇದನ್ನೂ ಓದಿ:ಮಣಿರತ್ನಂ ನಿರ್ದೇಶನದ ‘ಪೊನ್ನಿಯಿನ್ ಸೆಲ್ವನ್’ ಮೂರು ದಿನದ ಗಳಿಕೆ 230 ಕೋಟಿಗೂ ಅಧಿಕ

    ಪರಂ ಅವರು ಅಭಿನಯದಲ್ಲಿ ತಮ್ಮ ಸಾಮರ್ಥ್ಯವನ್ನು ಈಗಾಗಲೇ ಸಾಬೀತು ಮಾಡಿದ್ದಾರೆ. ನನ್ನ ಕಥೆಗೆ ಬಹಳ ಸೂಕ್ತ ವ್ಯಕ್ತಿ ಎನಿಸಿದರು. ಆದ್ರಿಂದಲೇ ಅವರ ಆಯ್ಕೆ ಸೂಕ್ತ ಎನಿಸಿ ಕಥೆ ಹೇಳಿದೆ ಅವರು ಕೂಡ ಕಥೆ ಕೇಳಿ ಇಷ್ಟ ಪಟ್ಟು ನಟಿಸಲು ಒಪ್ಪಿಕೊಂಡ್ರು ಎಂದು ಚಿತ್ರದ ನಾಯಕನ ಆಯ್ಕೆ ಬಗ್ಗೆ ಪವನ್ ಒಡೆಯರ್ ಮಾಹಿತಿ ಹಂಚಿಕೊಂಡಿದ್ದಾರೆ.

    ‘ನೋಟರಿ’ ಚಿತ್ರಕ್ಕೆ ಕಥೆ ಬರೆದು ಪವನ್ ಒಡೆಯರ್ ನಿರ್ದೇಶನ ಮಾಡುತ್ತಿದ್ದು, ಪವನ್ ಒಡೆಯರ್ ಮತ್ತು ಮುಂಬೈ ಮೂಲದ ತಶಾ ಭಂಬ್ರಾ, ಸ್ಪರ್ಶ್ ಖೆಟರ್ ಪಾಲ್ ಚಿತ್ರಕಥೆ ಚಿತ್ರಕ್ಕಿದೆ. ವೈದಿ.ಎಸ್ ಕ್ಯಾಮೆರಾ ನಿರ್ದೇಶನ, ರೋಹಿತ್ ಕುಲಕರ್ಣಿ, ಮೌಸಿನ್ ಜಾವೇದ್ ಸಂಗೀತ  ನಿರ್ದೇಶನ ಚಿತ್ರಕ್ಕಿರಲಿದೆ.

    Live Tv
    [brid partner=56869869 player=32851 video=960834 autoplay=true]

  • ‘ಆಸ್ಕರ್’ ಗಾಗಿ ಭಾರತದಿಂದ ಕಳುಹಿಸುವ ಸಿನಿಮಾ ಆಯ್ಕೆ ಸಮಿತಿಯಲ್ಲಿ ನಿರ್ದೇಶಕ ಪವನ್ ಒಡೆಯರ್

    ‘ಆಸ್ಕರ್’ ಗಾಗಿ ಭಾರತದಿಂದ ಕಳುಹಿಸುವ ಸಿನಿಮಾ ಆಯ್ಕೆ ಸಮಿತಿಯಲ್ಲಿ ನಿರ್ದೇಶಕ ಪವನ್ ಒಡೆಯರ್

    ಪ್ರತಿಷ್ಠಿತ ಆಸ್ಕರ್ (Oscar) ಅವಾರ್ಡ್ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ಬಾರಿ ಆಸ್ಕರ್ ಪ್ರಶಸ್ತಿ ಯಾರ ಯಾರ ಪಾಲಾಗುತ್ತೆ ಎಂಬ ಲೆಕ್ಕಾಚಾರಗಳು ಜೋರಾಗಿದೆ. ಭಾರತದಿಂದ ಬೇರೆ ಬೇರೆ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿಗೆ ಹಲವಾರು ಸಿನಿಮಾಗಳು ನಾಮ ನಿರ್ದೇಶನವಾಗಿ ಗಮನ ಸೆಳೆಯುತ್ತಿವೆ. ಸದ್ಯ ಲೇಟೆಸ್ಟ್ ಸಮಾಚಾರವೇನಪ್ಪ ಅಂದ್ರೆ ಆಸ್ಕರ್ ಅವಾರ್ಡ್ ಜ್ಯೂರಿ (Jury) ಸದಸ್ಯರಾಗಿ ಕನ್ನಡದ ನಿರ್ದೇಶಕರು ಪಾಲ್ಗೊಂಡಿರೋದು. ಹೌದು, ಕನ್ನಡದ ಪ್ರತಿಭಾವಂತ ನಿರ್ದೇಶಕ ಹಾಗೂ ನಿರ್ಮಾಪಕ ಪವನ್ ಒಡೆಯರ್ ಆಸ್ಕರ್ ಅವಾರ್ಡ್ ಸೆಲೆಕ್ಷನ್ ಕಮಿಟಿಯ ಸದಸ್ಯರಾಗಿ ಭಾಗಿಯಾಗಿದ್ದಾರೆ. ಈ ಖುಷಿಯ ಕ್ಷಣವನ್ನು ಪವನ್ ಒಡೆಯರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

    ಈ ಬಗ್ಗೆ ಮಾತನಾಡಿರುವ ಪವನ್ ಒಡೆಯರ್ (Pawan Wodeyar) ಆಸ್ಕರ್ ಕಮಿಟಿಯಿಂದ ನನಗೆ ಕರೆ ಬರುತ್ತದೆಂದು ನಾನು ನಿರೀಕ್ಷೆ ಕೂಡ ಮಾಡಿರಲಿಲ್ಲ. ಆರಂಭದಲ್ಲಿ ನನಗೆ ನಂಬಲೂ ಸಾಧ್ಯವಾಗಲಿಲ್ಲ. ನನ್ನ ಸಿನಿಮಾ ಕೆಲಸಗಳನ್ನು ಗುರುತಿಸಿ ಜ್ಯೂರಿಯಾಗಿ ಭಾಗವಹಿಸಲು ಆಹ್ವಾನ ನೀಡಿದ್ದು ಬಹಳ ಸಾರ್ಥಕತೆ ನೀಡಿದೆ. ನನ್ನ ನಿರ್ಮಾಣದ ‘ಡೊಳ್ಳು’ ಸಿನಿಮಾ ಇಂತಹದ್ದೊಂದು ಪ್ರತಿಷ್ಠಿತ ವೇದಿಕೆಯನ್ನು ನನಗೆ ಕಲ್ಪಿಸಿಕೊಟ್ಟಿದೆ. ಇದು ಬಹಳ ದೊಡ್ಡ ಗೌರವ ಎಂದೇ ನಾನು ಭಾವಿಸುತ್ತೇನೆ. 17 ಜನರ ತಂಡದಲ್ಲಿ ಕನ್ನಡ ಚಿತ್ರರಂಗದಿಂದ ನಾನೂ ಒಬ್ಬ ಜ್ಯೂರಿಯಾಗಿ ಭಾಗವಹಿಸಿದ್ದು ಬಹಳ ಸಂತಸ ತಂದಿದೆ ಎಂದು ಪವನ್ ಒಡೆಯರ್ ಹರುಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಆಸ್ಪತ್ರೆ ದಾಖಲು: ಅಭಿಮಾನಿಗಳಿಗೆ ಹೆಚ್ಚಿದೆ ಆತಂಕ

    ಹಿಂದಿ, ಬೆಂಗಾಲಿ, ತೆಲುಗು, ತಮಿಳು, ಗುಜರಾತಿ, ಮಲಯಾಳಂ ಭಾಷೆಗಳಿಂದ ಸಿನಿಮಾಗಳು ಆಸ್ಕರ್ ಗೆ ಆಯ್ಕೆಯಾಗಿದ್ವು. ನಮ್ಮ ಭಾಷೆಯಿಂದ ಯಾವ ಸಿನಿಮಾಗಳು ಆಸ್ಕರ್ ಗೆ ಆಯ್ಕೆ ಆಗಿಲ್ಲದಿರುವುದು ಬೇಸರದ ಸಂಗತಿ. ಮುಂದಿನ ದಿನಗಳಲ್ಲಿ ಖಂಡಿತ ನಮ್ಮ ಸಿನಿಮಾಗಳು ಆಸ್ಕರ್ ಗೆ ನಾಮ ನಿರ್ದೇಶನವಾಗಲಿವೆ ಎಂದು ಭರವಸೆಯ ಮಾತುಗಳನ್ನಾಡಿದ್ದಾರೆ ಪವನ್ ಒಡೆಯರ್. ಪವನ್ ಒಡೆಯರ್ ನಿರ್ಮಾಣದಲ್ಲಿ ಮೂಡಿ ಬಂದಿರುವ ‘ಡೊಳ್ಳು’ (Dollu) ಸಿನಿಮಾ ಜನ ಮೆಚ್ಚುಗೆ ಗಳಿಸಿಕೊಂಡಿದ್ದು,  ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದೆ. ಸದ್ಯ ಪವನ್ ಒಡೆಯರ್ ನಿರ್ದೇಶನದ ‘ರೇಮೋ’ ಸಿನಿಮಾ ಬಿಡುಗಡೆಯಾಗಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಡೊಳ್ಳು ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತ ಪಡಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ

    ಡೊಳ್ಳು ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತ ಪಡಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ

    ನಾನಾ ಕಾರಣಗಳಿಂದ ಚಿತ್ರಪ್ರೇಮಿಗಳನ್ನು ಆವರಿಸಿಕೊಳ್ಳುತ್ತಿರುವ ಡೊಳ್ಳು ಸಿನಿಮಾವನ್ನು ವಿಪಕ್ಷ ನಾಯಕ,  ಸಿದ್ದರಾಮಯ್ಯ ನಿನ್ನೆ ಬೆಂಗಳೂರಿನ ಒರಾಯನ್ ಮಾಲ್ ನಲ್ಲಿ ಕಣ್ತುಂಬಿಕೊಂಡು, ಚಿತ್ರದ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜಕೀಯದ ಕೆಲಸದ ನಡುವೆಯೂ ಬಿಡುವು ಮಾಡಿಕೊಂಡು ಸಿನಿಮಾ ವೀಕ್ಷಣೆ ಅವರು, ಸಿನಿಮಾ ತುಂಬಾ ಚೆನ್ನಾಗಿದೆ. ಗ್ರಾಮೀಣ ಪ್ರದೇಶದಲ್ಲಿರುವ ಜನಪದ ಕಲೆಯನ್ನು ಬೆಳೆಸಬೇಕು, ಉಳಿಯಬೇಕು ಎಂಬ ನಿಟ್ಟಿನಲ್ಲಿ ಸಿನಿಮಾ ಮಾಡಿದ್ದಾರೆ. ಕಲೆಗೆ ಜಾತಿ ಧರ್ಮ ಲಿಂಗಭೇದ ಯಾವುದು ಇರುವುದಿಲ್ಲ. ನಾಡಿನ ಸಾಂಪ್ರದಾಯಿಕ ಡೊಳ್ಳು ಬಾರಿಸುವ ಕಲೆಯನ್ನು ಪ್ರಧಾನವಾಗಿರಿಸಿಕೊಂಡು ನಿರ್ಮಿಸಿದ ಈ ಸಿನಿಮಾ ಅತ್ಯಂತ ಸೊಗಸಾಗಿ ಮೂಡಿಬಂದಿದೆ. ಚಿತ್ರ ತಂಡಕ್ಕೆ ನನ್ನ ಶುಭ ಹಾರೈಕೆಗಳು.  ಇಂತಹ ಸಿನಿಮಾಗಳು ಬರಬೇಕು. ಇಡೀ ತಂಡ ಒಳ್ಳೆದಾಗಲಿ ಎಂದು ಶುಭ ಹಾರೈಸಿದರು.

    ತನ್ನ ವಿಭಿನ್ನ ಕಂಟೆಂಟ್ ಜೊತೆಗೆ ರಾಷ್ಟ್ರಪ್ರಶಸ್ತಿಗೂ ಭಜನವಾಗಿರುವ, ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಮೆಚ್ಚುಗೆ ಪಡೆದಿರುವ ಡೊಳ್ಳು ಸಿನಿಮಾವನ್ನು ರಾಷ್ಟ್ರಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ನಿರ್ದೆಶನ ಮಾಡಿದ್ದು, ಕಾರ್ತಿಕ್ ಮಹೇಶ್ ಮತ್ತು ನಿಧಿ ಹೆಗಡೆ ಜೊತೆಗೆ ಬಾಬು ಹಿರಣ್ಣಯ್ಯ, ಚಂದ್ರ ಮಯೂರ್, ಶರಣ್ಯ ಸುರೇಶ್​ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಇದನ್ನೂ ಓದಿ:ಮೂರನೇ ವಾರ ನಾಮಿನೇಷನ್‌ ಸ್ಟಾರ್ಟ್‌: ಉದಯ್‌ ಸೂರ್ಯಗೆ ಮನೆಯಿಂದ ಗೇಟ್‌ ಪಾಸ್?

    ನಾಡಿನ ಜಾನಪದ ಕಲೆಯನ್ನು ಜಗತ್ತಿನ ಮುಂದೆ ತೆರೆದಿಡುವಂತಹ ಈ ಸಿನಿಮಾವನ್ನು ಒಡೆಯರ್ ಮೂವೀಸ್ ಬ್ಯಾನರ್ ನಡಿ ಪವನ್ ಒಡೆಯರ್, ಪತ್ನಿ ಅಪೇಕ್ಷಾ ಜೊತೆಗೂಡಿ ನಿರ್ಮಾಣ ಮಾಡಿದ್ದಾರೆ. ಆಗಸ್ಟ್​ 26ರಂದು ‘ಡೊಳ್ಳು’ ಚಿತ್ರ ರಾಜ್ಯಾದ್ಯಂತ ರಿಲೀಸ್​ ಆಗಲಿದೆ. ಸಂಭಾಷಣೆ ಮತ್ತು ಚಿತ್ರಕಥೆಯನ್ನು ಶ್ರೀನಿಧಿ ಬರೆದಿದ್ದಾರೆ. ಅನಂತ್ ಕಾಮತ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಅಭಿಲಾಷ್ ಕಲಾಥಿ ಛಾಯಾಗ್ರಹಣ ಈ ಚಿತ್ರಕ್ಕಿದೆ. ಈ ಚಿತ್ರವನ್ನು ನೋಡುವಂತೆ ರಾಜ್ಯಪಾಲರಾದ ಥಾವರ್ ಚಂದ್​ ಗೆಹ್ಲೋಟ್ ಅವರಿಗೂ ಚಿತ್ರತಂಡ ಇತ್ತೀಚೆಗೆ ಆಮಂತ್ರಣ ನೀಡಿತ್ತು. ಶೀರ್ಘದಲ್ಲಿಯೇ ರಾಜ್ಯಪಾಲರು ಸಿನಿಮಾ ವೀಕ್ಷಣೆ ಮಾಡಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]