Tag: PayCM

  • ಕಾಂಗ್ರೆಸ್‌ PayCM ಕ್ಯಾಂಪೇನ್‌ – ಬಿಜೆಪಿ ನಾಯಕರಿಗೆ ಹೈಕಮಾಂಡ್‌ ಕ್ಲಾಸ್‌

    ಕಾಂಗ್ರೆಸ್‌ PayCM ಕ್ಯಾಂಪೇನ್‌ – ಬಿಜೆಪಿ ನಾಯಕರಿಗೆ ಹೈಕಮಾಂಡ್‌ ಕ್ಲಾಸ್‌

    ಬೆಂಗಳೂರು: ಕಾಂಗ್ರೆಸ್‌(Congress) ಪೇ ಸಿಎಂ(PayCM) ಕ್ಯಾಂಪೇನ್‍ಗೆ ರಾಜ್ಯ ಬಿಜೆಪಿ(BJP) ನಾಯಕರಿಗೆ ಹೈಕಮಾಂಡ್ ತೀವ್ರ ತರಾಟೆಗೆ ತೆಗೆದುಕೊಂಡ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    ನಿನ್ನೆ ರಾತ್ರಿ ಬಂದ ಉಸ್ತುವಾರಿ ಅರುಣ್ ಸಿಂಗ್(Arun Singh) ತಡರಾತ್ರಿ 2 ಗಂಟೆಗಳ ಕಾಲ ಸಿಎಂ ಬೊಮ್ಮಾಯಿ, ರಾಜ್ಯಾಧ್ಯಕ್ಷ ಕಟೀಲ್ ಜೊತೆ ಸಭೆ ನಡೆಸಿ ಗರಂ ಆಗಿದ್ದಾರೆ. ಹೈಕಮಾಂಡ್(BJP High Command) ನಾಯಕರ ಅಸಮಾಧಾನದ ಸಂದೇಶವನ್ನು ತಿಳಿಸಿದ್ದಾರೆ. ಇದನ್ನೂ ಓದಿ: ಟಿಪ್ಪು ಎಕ್ಸ್‌ಪ್ರೆಸ್ ಇನ್ನುಮುಂದೆ ಒಡೆಯರ್ ಎಕ್ಸ್‌ಪ್ರೆಸ್ – ಶಿವಮೊಗ್ಗಕ್ಕೆ ಕುವೆಂಪು ಎಕ್ಸ್‌ಪ್ರೆಸ್

    ಪೇ ಸಿಎಂ ಕ್ಯಾಂಪೇನ್ ಬಗ್ಗೆ ಮೊದಲೇ ಏಕೆ ತಿಳಿಯಲಿಲ್ಲ? ಅಭಿಯಾನ ನಡೆಯುವ ತನಕ ಸರ್ಕಾರ ಏನ್ ಮಾಡುತ್ತಿತ್ತು? ಪೇ ಸಿಎಂ ಕ್ಯಾಂಪೇನ್ ರಾಷ್ಟ್ರಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಪೇ ಸಿಎಂ ಕೌಂಟರ್ ಅಟ್ಯಾಕ್‍ನಲ್ಲಿ ಸಿಎಂ ಮತ್ತು ಟೀಂ ವಿಫಲವಾಗಿದೆ. ಎಲೆಕ್ಷನ್ ಸಮಯದಲ್ಲಿ ಸಚಿವರು, ನಾಯಕರ ಸಪ್ಪೆ ವರ್ತನೆ ಯಾಕೆ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸ್ಕ್ಯಾನ್‌ಮಾಡಿ `ಸಿದ್ರಾಮುಲ್ಲನ ಉಗ್ರಭಾಗ್ಯ’ ಲೀಲೆ ನೋಡಿ – PayCM ಅಭಿಯಾನಕ್ಕೆ ಬಿಜೆಪಿ ಟಕ್ಕರ್

    ಸ್ಕ್ಯಾನ್‌ಮಾಡಿ `ಸಿದ್ರಾಮುಲ್ಲನ ಉಗ್ರಭಾಗ್ಯ’ ಲೀಲೆ ನೋಡಿ – PayCM ಅಭಿಯಾನಕ್ಕೆ ಬಿಜೆಪಿ ಟಕ್ಕರ್

    ಬೆಂಗಳೂರು: ಕಾಂಗ್ರೆಸ್‌ನಿಂದ (Congress) ನಡೆಯುತ್ತಿರುವ ಪೇ-ಸಿಎಂ (PayCM) ಅಭಿಯಾನಕ್ಕೆ ಟಕ್ಕರ್ ಕೊಡಲು ಬಿಜೆಪಿ (BJP) ಸಿದ್ದರಾಮಯ್ಯ (Siddaramaiah) ವಿರುದ್ಧ ಪೋಸ್ಟರ್ ರಿಲೀಸ್ ಮಾಡಿದೆ.

    ಪಿಎಫ್‌ಐ ಭಾಗ್ಯ (PFI Bhagya) ಹ್ಯಾಟ್‌ಟ್ಯಾಗ್‌ನೊಂದಿಗೆ `ಸಿದ್ರಾಮುಲ್ಲಮನ ಉಗ್ರಭಾಗ್ಯ ಲೀಲೆಗಳನ್ನು ತಿಳಿಯಲು ಕ್ಯೂಆರ್‌ಕೋಡ್ ಸ್ಕ್ಯಾನ್‌ ಮಾಡಿ ಎಂದು ಸಿದ್ದರಾಮಯ್ಯ ಅವರು ಪಿಎಫ್‌ಐ (PFI) ಚಿನ್ಹೆ ಹಿಡಿದಿರುವಂತೆ ಪೋಸ್ಟರ್ ಅನ್ನು ಬಿಡುಗಡೆ ಮಾಡಿದೆ. ಈ ಕ್ಯೂರ್ ಕೋಡ್ ಸ್ಕ್ಯಾನ್‌  ಮಾಡಿದರೆ ಪಿಎಫ್‌ಐ ಕಾರ್ಯಕರ್ತರನ್ನು ಬಿಡುಗಡೆ ಮಾಡಿದ ಸುದ್ದಿಗಳಿರುವ ಪೇಜ್ ಕಾಣಿಸುತ್ತದೆ.

    ಟ್ವೀಟ್‌ನಲ್ಲಿ ಏನಿದೆ?
    `ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಈ ಪರಿಯ ಒಂಟಿತನ ಯಾವತ್ತೂ ಕಾಡಿರಲಾರದು. ಪಿಎಫ್‌ಐ ಸ್ನೇಹಿತರು ಜೈಲಿಗೆ ಹೋದಾಗಿನಿಂದ ಸಿದ್ದರಾಮಯ್ಯ ಅವರು ಒಬ್ಬಂಟಿಯಾಗಿದ್ದಾರೆಯೇ? ಜಿಹಾದಿಗಳ ಜೊತೆ ಕಾಂಗ್ರೆಸ್ (Congress) ಹೊಂದಿರುವ ಸಂಬಂಧ ತಿಳಿಯಲು ಈ ಕ್ಯೂಆರ್‌ಕೋಡ್ (QR Code)  ‌ಸ್ಕ್ಯಾನ್‌ ಮಾಡಿ. ಇದನ್ನೂ ಓದಿ: ಔಷಧಿ ನಕಲಿಯೋ? ಅಸಲಿಯೋ? – ಇನ್ಮುಂದೆ ನೀವೇ ಚೆಕ್ ಮಾಡಬಹುದು

    ಇತ್ತ ಕರ್ನಾಟಕದಲ್ಲಿ ಸಿದ್ದರಾಮಯ್ಯ ಅವರು ಪಿಎಫ್‌ಐ ಜಿಹಾದಿಗಳನ್ನು ಸಂಬಂಧಿಗಳಂತೆ ಸಾಕುತ್ತಿದ್ದರೆ, ಅತ್ತ ಕಾಂಗ್ರೆಸ್ ಪಕ್ಷ ಕಾಶ್ಮೀರದ ಕಣಿವೆಯಲ್ಲಿ ಉಗ್ರರನ್ನು ಬೆಂಬಲಿಸುತ್ತಿತ್ತು. ಜಿಹಾದಿಗಳ ಜೊತೆ ಕಾಂಗ್ರೆಸ್ ಹೊಂದಿರುವ ನಂಟಿನ ಬಗ್ಗೆ ತಿಳಿಯಲು ಈ ಕೆಳಗಿನ ಕ್ಯುಆರ್ ಕೋಡ್ ಸ್ಕ್ಯಾನ್‌ ಮಾಡಿ.

    ತುಕಡೆ ತುಕಡೆ ಗ್ಯಾಂಗಿನ ನಾಯಕರಾಗಿರುವ ರಾಹುಲ್ ಗಾಂಧಿ (Rahul Gandhi) ಹಾಗೂ ಜಿಹಾದಿ ಬೆಂಬಲಿಗ ಸಿದ್ದರಾಮಯ್ಯಅವರ ಪ್ರೀತಿ ಹಾಲು ಜೇನಿನಂತೆ. ಜಿಹಾದಿಗಳ ಜೊತೆ ಕಾಂಗ್ರೆಸ್ ಹೊಂದಿರುವ ನಂಟಿನ ಬಗ್ಗೆ ತಿಳಿಯಲು ಈ ಕೆಳಗಿನ ಕ್ಯುಆರ್ ಕೋಡ್ ಸ್ಕ್ಯಾನ್‌ ಮಾಡಿ ಎಂದು ಕುಟುಕಿದೆ. ಇದನ್ನೂ ಓದಿ: ದಸರಾ ಸಂಭ್ರಮ – 85 ದೇಶಗಳ 1.50 ಲಕ್ಷ ಭಕ್ತರಿಂದ ಪ್ರಾರ್ಥನೆ

    ಇದರೊಂದಿಗೆ ಭಾರತ್ ಜೋಡೋ ಯಾತ್ರೆ ಹಿನ್ನೆಲೆ ಸೋನಿಯಾಗಾಂಧಿ ಆಗಮನವನ್ನು ಟೀಕಿಸಿದ್ದು, `ನ್ಯಾಷನಲ್ ಹೆರಾಲ್ಡ್ ಪ್ರಕರಣದ ಆರೋಪಿ, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ (Sonia Gandhi) ಅವರಿಗೆ ಕರ್ನಾಟಕಕ್ಕೆ ಸ್ವಾಗತ. ಜಾಮೀನಿನ ಮೇಲೆ ಜೈಲಿನಿಂದ ಹೊರಗಿರುವ ಸೋನಿಯಾ ಆಗಮನದಿಂದ ಜೈಲುಹಕ್ಕಿ ಡಿಕೆಶಿ (DK Shivakumar) ಹಾಗೂ ಭ್ರಷ್ಟರಾಮಯ್ಯ ಅವರಿಗೆ ಶಕ್ತಿ ಬಂದಿದ್ದು ಸುಳ್ಳಲ್ಲ. ಭ್ರಷ್ಟರೆಲ್ಲ ಒಂದೆಡೆ ಸೇರುವಾಗ ಹುರುಪು, ಶಕ್ತಿ ಸಹಜವಾದದ್ದೇ’ ಎಂದು ಲೇವಡಿ ಮಾಡಿದೆ.

    ಪ್ರಧಾನಮಂತ್ರಿ ಮುದ್ರಾ ಯೋಜನೆ ಅಡಿಯಲ್ಲಿ 34 ಕೋಟಿ ಪರಿಶಿಷ್ಟ ಸಮುದಾಯದ ಫಲಾನುಭವಿಗಳು ತಲಾ 10 ಲಕ್ಷ ಸಾಲ ಪಡೆಯುತ್ತಿದ್ದಾರೆ. ಶ್ರೀಮಂತರ ಪರವಾದ ಸರ್ಕಾರ ಎನ್ನುವ ನಿರುದ್ಯೋಗಿ ರಾಹುಲ್ ಗಾಂಧಿ ಅವರಿಗೆ ಇದೆಲ್ಲಾ ಏಕೆ ಕಾಣಿಸುತ್ತಿಲ್ಲ? ಅಂಬಾನಿ ಅದಾನಿಗಳೆಲ್ಲಾ ಮೋದಿ ಸರ್ಕಾರದ ಅವಧಿಯಲ್ಲಿ ಶ್ರೀಮಂತರಾಗಿದ್ದೇ? ಎಂದು ಬಿಜೆಪಿ ಟ್ವೀಟ್ ಮೂಲಕ ಪ್ರಶ್ನಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಹುಬ್ಬಳ್ಳಿಯಲ್ಲೀಗ `PAY MAYOR’ ಅಭಿಯಾನ

    ಹುಬ್ಬಳ್ಳಿಯಲ್ಲೀಗ `PAY MAYOR’ ಅಭಿಯಾನ

    ಹುಬ್ಬಳ್ಳಿ: ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿಗಳಿಗೆ (President of India) ಪೌರ ಸನ್ಮಾನ ಮಾಡುವ ಮೂಲಕ ರಾಜ್ಯಕ್ಕೆ ಹೆಮ್ಮೆ ತಂದಿದ್ದ ಹುಬ್ಬಳ್ಳಿ (Hubballi) ಧಾರವಾಡ ಮಹಾನಗರ ಪಾಲಿಕೆ (City Corporation) ಮೇಲಿಗ ಗಂಭೀರ ಆರೋಪ ಕೇಳಿ ಬಂದಿದೆ.

    ರಾಷ್ಟ್ರಪತಿಗಳ (President Of India) ಕಾರ್ಯಕ್ರಮಕ್ಕೆ ಹಾಕಿದ್ದ ವೇದಿಕೆ ನಿರ್ಮಾಣದಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ಕೆಲ ಕಾಂಗ್ರೆಸ್ ಕಾರ್ಯಕರ್ತರು, ಪೇ ಸಿಎಂ (PayCM) ಅಭಿಯಾನದ ಮಾದರಿಯಲ್ಲಿ ಪೇ ಮೆಯರ್ (Pay Mayor) ಅಭಿಯಾನ ಆರಂಭಿಸಿದ್ದಾರೆ. ಈ ಪರಿಣಾಮ ಹುಬ್ಬಳ್ಳಿ ಪ್ರಮುಖ ವೃತ್ತಗಳಲ್ಲಿ ಪೇ ಮೇಯರ್ ಅಂತ ಈರೇಶ್ ಅಂಚಟಗೇರಿ ಅವರ ಪೋಸ್ಟರ್ ಹಾಕಲಾಗಿದೆ. ಇದನ್ನೂ ಓದಿ: ದಸರಾ ಸಂಭ್ರಮ – ಲಾರ್ಡ್ಸ್ ಪೆವಿಲಿಯನ್‌ನಲ್ಲಿ ನಿಂತು ತ್ರಿವರ್ಣ ಧ್ವಜ ಹಾರಿಸಿದ ಗಂಗೂಲಿ

    ಇದೇ ಸೆಪ್ಟೆಂಬರ್ 26ರಂದು ನಡೆದ ರಾಷ್ಟ್ರಪತಿಗಳ ಪೌರ ಸನ್ಮಾನ ಕಾರ್ಯಕ್ರಮಕ್ಕಾಗಿ ದೇಶಪಾಂಡೆ ನಗರದ ಜೀಮ್ ಖಾನ್ ಮೈದಾನದಲ್ಲಿ 5 ಸಾವಿರ ಜನಕ್ಕೆ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿತ್ತು. ಈ ವೇದಿಕೆ ಮತ್ತು ರಾಷ್ಟ್ರಪತಿಗಳ ಪೌರಸನ್ಮಾನಕ್ಕೆ ಬರೊಬ್ಬರಿ 1.5 ಕೋಟಿ ಖರ್ಚಾಗಿದೆ. ಈ ಖರ್ಚು ಮಾಡುವುದರಲ್ಲಿ ಪಾಲಿಕೆ ನಿಯಮ ಪಾಲನೆ ಮಾಡಿಲ್ಲ ಹಾಗೂ ಪೆಂಡಾಲ್ ಹಾಕಿಸಿದ ಬಳಿಕ ಕೊಟೇಶನ್ ಆಹ್ವಾನ ಮಾಡಲಾಗಿದೆ. ಇದರಿಂದಾಗಿ ಕಾರ್ಯಕ್ರಮದ ನಿರ್ವಹಣೆ ಖರ್ಚಿನಲ್ಲಿ ಬ್ರಹ್ಮಾಂಡದ ಭ್ರಷ್ಟಾಚಾರ ನಡೆದಿದ್ದು, ಇದರಲ್ಲಿ ಮೇಯರ್ ಕೈವಾಡಯಿದೆ ಎಂಬುದು ಕಾಂಗ್ರೆಸ್ ಕಾರ್ಯಕರ್ತರ ಆರೋಪವಾಗಿದೆ. ಆದ್ದರಿಂದ ಹುಬ್ಬಳ್ಳಿ ನಗರದ ಕೆಲವಡೆ ಪೇ ಮೇಯರ್ ಪೋಸ್ಟರ್ ಅಂಟಿಸಿ ಕಾಂಗ್ರೆಸ್ (Congress) ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಪಿಎಫ್‌ಐ ನಂತೆಯೇ RSSನ್ನೂ ಬ್ಯಾನ್‌ ಮಾಡಿ: ಕೇರಳ ವಿಪಕ್ಷಗಳ ಒತ್ತಾಯ

    ಕಾಂಗ್ರೆಸ್ ಕಾರ್ಯಕರ್ತರ ಈ ಅಭಿಯಾನಕ್ಕೆ ಮೇಯರ್ ಈರೇಶ್ ಅಂಚಟಗೇರಿ ಕೆಂಡಾಮಂಡಲರಾಗಿದ್ದಾರೆ. ರಾಷ್ಟ್ರಪತಿಗಳ ಕಾರ್ಯಕ್ರಮದ ಖರ್ಚಿನಲ್ಲಿ ಒಂದು ರೂಪಾಯಿ ಸಹ ಭ್ರಷ್ಟಾಚಾರವಾಗಿಲ್ಲ. ಇನ್ನೂ ಕಾರ್ಯಕ್ರಮದ ನಿರ್ವಹಣೆಯಲ್ಲಿ ಮೇಯರ್ ಪಾತ್ರವೇ ಬರುವುದಿಲ್ಲ. ಕಾಂಗ್ರೆಸ್ ಕಾರ್ಯಕರ್ತರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಇದರಿಂದ ಒಂದು ಕಡೆ ರಾಷ್ಟ್ರಪತಿಗಳಿಗೆ ಅಪಮಾನ ಮಾಡಿದಂತಾದ್ರೆ ಮತ್ತೊಂದು ಕಡೆ ಮೇಯರ್ ಸ್ಥಾನ ಘನತೆಯನ್ನು ಹಾಳು ಮಾಡುವ ಹುನ್ನಾರ ಇದಾಗಿದೆ. ಹೀಗಾಗಿ ಪೋಸ್ಟರ್ ಅನ್ನು ಸಾಮಾಜಿಕ ತಾಣದಲ್ಲಿ ಶೇರ್ ಮಾಡಿದವರ ಮತ್ತು ಪೊಸ್ಟ್ ಅಂಟಿಸಿದವರ ವಿರುದ್ಧ ಪೊಲೀಸ್ ಕಮಿಷನರ್‌ (Police Commissioner Hubballi) ಗೆ ದೂರು ನೀಡಿರುವುದಾಗಿ ಮೇಯರ್ ಮಾಧ್ಯಮಗಳ ಮುಂದೆ ಅಸಮಾಧಾನ ಹೊರಹಾಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ತಾಲೂಕು, ಗ್ರಾಮ ಮಟ್ಟದಲ್ಲೂ `PayCM’ ಅಭಿಯಾನ- ಕಾಂಗ್ರೆಸ್ ನಿಂದ ಮಾಸ್ಟರ್ ಪ್ಲ್ಯಾನ್

    ತಾಲೂಕು, ಗ್ರಾಮ ಮಟ್ಟದಲ್ಲೂ `PayCM’ ಅಭಿಯಾನ- ಕಾಂಗ್ರೆಸ್ ನಿಂದ ಮಾಸ್ಟರ್ ಪ್ಲ್ಯಾನ್

    ಬೆಂಗಳೂರು: `ಪೇ ಸಿಎಂ’ (PayCM) ಅಭಿಯಾನ ಯಶಸ್ವಿಯಾದ ಕೂಡಲೇ ಕಾಂಗ್ರೆಸ್ (Congress) ಮತ್ತೆ ಅಖಾಡಕ್ಕೆ ಇಳಿದಿದೆ. ಪೇ ಸಿಎಂ ಅಭಿಯಾನ ಯಾವುದೇ ಕಾರಣಕ್ಕೂ ನಿಲ್ಲಿಸಬಾರದು ಅನ್ನೋ ನಿರ್ಧಾರವನ್ನ ತೆಗೆದುಕೊಂಡಿದೆ. ರಾಜ್ಯ ಮಟ್ಟ, ಜಿಲ್ಲಾ ಮಟ್ಟದ ಬಳಿಕ ತಾಲೂಕು (Taluk), ಬೂತ್, ಗ್ರಾಮ ಪಂಚಾಯತಿ (Gram Panchayat) ಮಟ್ಟದಲ್ಲೂ ಅಭಿಯಾನ ಶುರು ಮಾಡೋದಕ್ಕೆ ಪ್ಲ್ಯಾನ್‌ ಮಾಡಿದೆ.

    ಪ್ರತಿ ಗ್ರಾಮ ಪಂಚಾಯತಿ ಮಟ್ಟ ಹಾಗೂ ಬೂತ್ ಮಟ್ಟದಲ್ಲೂ (Boot Level) ಪೇ ಸಿಎಂ ಅಭಿಯಾನ (PayCm Campain) ಆಗಬೇಕು. ಅಂತ ಗ್ರಾಮ ಪಂಚಾಯಿತಿ. ಮತ್ತು ಬೂತ್ ಮಟ್ಟದ ಕಾರ್ಯಕರ್ತರಿಗೆ ಕೆಪಿಸಿಸಿ (KPCC) ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಟಾರ್ಗೆಟ್ ನೀಡಿದ್ದಾರೆ ಎನ್ನಲಾಗಿದೆ. ಟಾರ್ಗೆಟ್ ರೀಚ್ ಆಗಲೇಬೇಕು ಅಂತ ಲಿಖಿತ ಆದೇಶ ಹೊರಡಿಸಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿದೆ. ಇದನ್ನೂ ಓದಿ: ಭಾರತ Vs ಆಸ್ಟ್ರೇಲಿಯಾ ಹೈವೋಲ್ಟೆಜ್ ಪಂದ್ಯದ ನಡುವೆ ಮೊಳಗಿತು ಜೈಶ್ರೀರಾಮ್ ಉದ್ಘೋಷ

    ಪೇ ಸಿಎಂ ಅಭಿಯಾನ ಪ್ರತಿ ಗ್ರಾಮ ಪಂಚಾಯತಿ ಮತ್ತು ಬೂತ್ ಮಟ್ಟದಲ್ಲಿ ಪ್ರಚಾರ ಆಗಬೇಕು. ಭಾರತ್ ಜೋಡೋ (Bharat Jodo) ಜೊತೆ-ಜೊತೆಗೆ ಪೇ ಸಿಎಂ ಅಭಿಯಾನ ಸಹ ನಡೆಸಬೇಕು. ಭಾರತ್ ಜೋಡೋ ರ‍್ಯಾಲಿಯ ವೇಳೆ ಪೇ ಸಿಎಂ ಅಭಿಯಾನ ಮತ್ತಷ್ಟು ಯಶಸ್ವಿ ಮಾಡಬೇಕು ಎಂದು ಅಧ್ಯಕ್ಷರು ತಿಳಿಸಿದ್ದಾರೆ. ಇದನ್ನೂ ಓದಿ: ಶಾರುಖ್ ಖಾನ್ ಚಿತ್ರಕ್ಕೆ ಹಣ ಹೂಡುತ್ತಾ ಹೊಂಬಾಳೆ ಫಿಲ್ಮ್ಸ್: ಸ್ಯಾಂಡಲ್ ವುಡ್ ಅಂಗಳದಲ್ಲಿ ಗುಸುಗುಸು

    ಗ್ರಾಮಗಳಲ್ಲಿರುವ ಪಕ್ಷದ ಅಧ್ಯಕ್ಷರು, ಬೂತ್ ಅಧ್ಯಕ್ಷರು ಅಭಿಯಾನ ಮಾಡಬೇಕು. ಪ್ರತಿಯೊಬ್ಬರ ಬಾಯಲ್ಲಿ ಪೇ ಸಿಎಂ ಮಾತು ಉಳಿಯಬೇಕು. ಎಲ್ಲಾ ಜನರಿಗೂ 40 ಪರ್ಸೆಂಟ್ ಭ್ರಷ್ಟಾಚಾರ ಪೇ ಸಿಎಂ ಅಭಿಯಾನ ಮುಟ್ಟಬೇಕು. ಗ್ರಾಮಗಳಲ್ಲಿ ಗೋಡೆಗಳು, ಸಾರ್ವಜನಿಕ ಜಾಗದಲ್ಲಿ ಪೇ ಸಿಎಂ ಪೋಸ್ಟರ್ ಅಂಟಿಸಬೇಕು. ಪೇ ಸಿಎಂ ಪೋಸ್ಟರ್ ಮೂಲಕ ಸರ್ಕಾರದ ವಿರುದ್ಧ ಜನಾಂದೋಲನ ನಡೆಸಬೇಕು. ಪೇ ಸಿಎಂ ಪೋಸ್ಟರ್‌ಗಳು ಅಗತ್ಯ ಇದ್ದರೇ ಪ್ರತಿ ಗ್ರಾಮಗಳಿಗೂ ಪೋಸ್ಟರ್‌ಗಳನ್ನ ರಾಜ್ಯ ಕಚೇರಿಯಿಂದ ಕಳಿಸಿಕೊಡಲಾಗುತ್ತದೆ ಅಂತಾ ಸಂದೇಶ ರವಾನೆ ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • PFI, SDPI, ಭಜರಂಗದಳ ಬ್ಯಾನ್ ಮಾಡಿ: ನಲಪಾಡ್

    PFI, SDPI, ಭಜರಂಗದಳ ಬ್ಯಾನ್ ಮಾಡಿ: ನಲಪಾಡ್

    ರಾಯಚೂರು: ಪಿಎಫ್‌ಐ (PFI), ಎಸ್‌ಡಿಪಿಐ (SDPI) ಹಾಗೂ ಭಜರಂಗದಳ (Bajrang Dal) ಸಂಘಟನೆಗಳನ್ನು ಬ್ಯಾನ್ ಮಾಡಿ ಎಂದು ರಾಜ್ಯ ಕಾಂಗ್ರೆಸ್ ಯುವ (Youth Congress) ಘಟಕದ ಅಧ್ಯಕ್ಷ ಮೊಹಮ್ಮದ್ ನಲಪಾಡ್ (Mohammed Haris Nalapad) ಒತ್ತಾಯಿಸಿದ್ದಾರೆ.

    ಭಾರತ್ ಜೋಡೊ (Bharat Jodo) ಯಾತ್ರೆ ಪೂರ್ವಭಾವಿ ಸಭೆ ಹಿನ್ನೆಲೆಯಲ್ಲಿ ರಾಯಚೂರಿಗೆ ಆಗಮಿಸಿದ ವೇಳೆ ಮಾತನಾಡಿದ ಅವರು, ನಾವು ಮೊದಲಿನಿಂದಲೂ ಈ ಸಂಘಟನೆಗಳನ್ನ ಬ್ಯಾನ್ ಮಾಡಿ ಅಂತಲೇ ಹೇಳುತ್ತಿದ್ದೇವೆ. ಅಷ್ಟೇ ಅಲ್ಲ ಕೋಮು ಸೌಹಾರ್ದ ಕೆಡಿಸುವ ಯಾವುದೇ ಸಂಘಟನೆಯನ್ನಾಗಲಿ ಬ್ಯಾನ್ ಮಾಡಲೇಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

    ಭಯೋತ್ಪಾದನೆಗೆ (Terrorism) ನಿರುದ್ಯೋಗವೇ (Unemployment) ಕಾರಣ ಅಂತ ನಾನು ಹೇಳಿಲ್ಲ, ಆದರೆ ನನ್ನ ಹೇಳಿಕೆಯನ್ನ ತಿರುಚಲಾಗಿದೆ. ನಾನು ಹೇಳಿದ್ದರ ಉದ್ದೇಶ ಬೇರೆಯಿತ್ತು, ಕೆಲಸ ಇಲ್ಲದಿರೋದಕ್ಕೆ ಯುವಕರು ದಾರಿ ತಪ್ಪುತ್ತಿದ್ದಾರೆ. ಕೆಲವರ ಬೌದ್ಧಿಕ ಮಟ್ಟ ಹಾಗೇ ಇರುತ್ತದೆ. ಅಂತಹ ದೇಶದ್ರೋಹಿಗಳಿಗೆ ಗಲ್ಲು ಶಿಕ್ಷೆ ಕೊಡಿ, ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ್ದಾರೆ.

    ಪರ್ಸೆಂಟೇಜ್ ವಿಚಾರ ನಾವು ಹೇಳಿರೋದಲ್ಲ:
    ಗುತ್ತಿಗೆದಾರ ಸಂತೋಷ್ ಪಾಟೀಲ್ ಜೀವ ಕಳೆದುಕೊಂಡಿದ್ದಾನೆ. ಪಿಎಸ್‌ಐ (PSI) ಹಗರಣ ಮಾಡಿದ್ದು ನಾವಾ? `ಪೇ-ಸಿಎಂ’ (Pay CM) ಪೋಸ್ಟರ್ ಹಾಕಿದ್ದಕ್ಕೆ ನಮ್ಮನ್ನ ಅರೆಸ್ಟ್ ಮಾಡ್ತಾರೆ. ರಾತ್ರಿ 1 ಗಂಟೆ ಸಮಯದಲ್ಲಿ ಕಚೇರಿ ಮೇಲೆ ರೇಡ್ ಮಾಡ್ತಾರೆ. ಆರೋಪ ಸುಳ್ಳು ಅನ್ನೋದಾದ್ರೆ ನೀವೆಕೆ ಟೆನ್ಷನ್ ತೆಗೆದುಕೊಳ್ತೀರಿ? ಜನರೇ ಸರಿ ತಪ್ಪು ತೀರ್ಮಾನ ಮಾಡುತ್ತಾರೆ. ಆರೋಪ ಸತ್ಯ ಆಗಿರೋದಕ್ಕೆ ನೀವು ಹೀಗೆ ಮಾಡುತ್ತಿದ್ದೀರಿ ಎಂದು ಕುಟುಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಾನು Law  ಓದಿದ್ದೀನಿ, ಬೊಮ್ಮಾಯಿ ಲಾ ಓದಿಲ್ಲ – ಕಾನೂನು ಕ್ರಮ ತಗೊಂಡ್ರೆ ನಾವ್ ಸುಮ್ನೆ ಇರ್ತೀವಾ?: ಸಿದ್ದರಾಮಯ್ಯ

    ನಾನು Law ಓದಿದ್ದೀನಿ, ಬೊಮ್ಮಾಯಿ ಲಾ ಓದಿಲ್ಲ – ಕಾನೂನು ಕ್ರಮ ತಗೊಂಡ್ರೆ ನಾವ್ ಸುಮ್ನೆ ಇರ್ತೀವಾ?: ಸಿದ್ದರಾಮಯ್ಯ

    ಚಿಕ್ಕಬಳ್ಳಾಪುರ: ಇಂತಹ ಬೆದರಿಕೆಗಳಿಗೆಲ್ಲಾ ನಾವು ಹೆದರಲ್ಲ. ಕಾನೂನುಗಳು ನಮಗೂ ಗೊತ್ತಿದೆ. ನಾ ಲಾ (Law)  ಓದಿದ್ದೀನಿ ಬೊಮ್ಮಾಯಿ ಲಾ ಓದಿಲ್ಲ. ಇಂಜಿನಿಯರಿಂಗ್ ಓದಿರೋದು. ಕಾನೂನು ಕ್ರಮ ತಗೊಂಡ್ರೆ ನಾವ್ ಸುಮ್ನೆ ಇರ್ತೀವಾ ಎಂದು ಪೇಸಿಎಂ (PayCM) ಪೋಸ್ಟರ್ ಅಭಿಯಾನದ ವಿರುದ್ಧ ಕಾನೂನು ಕ್ರಮ ಎಂಬ ಸಿಎಂ ಬಸವರಾಜ ಬೊಮ್ಮಾಯಿ (Basavarj Bommai) ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ತಿರುಗೇಟು ನೀಡಿದ್ದಾರೆ.

    ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಮೋದಿ (Narendra Modi) 2018ರಲ್ಲಿ ಸಿದ್ದರಾಮಯ್ಯ ಸರ್ಕಾರ 10% ಸರ್ಕಾರ ಅಂದ್ರಲ್ಲ, ಈಗ ನಾ ಏನು ಅಂತ ಕರಿಯೋಣ. ಭ್ರಷ್ಟಾಚಾರ ಯಾರೇ ಮಾಡಲಿ ಅದು ಕಾನೂನು ಬಾಹಿರ. ಅದು ಸಾಮಾಜಿಕ ರೋಗ. ಅಭಿವೃದ್ಧಿಗೆ ಮಾರಕ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಯುಪಿಎ ಅವಧಿಯಲ್ಲಿ ಆರ್ಥಿಕ ಚಟುವಟಿಕೆ ಸ್ಥಗಿತ – ಇನ್ಫಿ ನಾರಾಯಣ ಮೂರ್ತಿ

    ಕೆಂಪಣ್ಣ ವಿರುದ್ದ ಕ್ರಮ ತಗೊಳ್ಳಿ
    40% ಕಮಿಷನ್ ಅಂತ ಕೆಂಪಣ್ಣ ಹೇಳ್ತಾರಲ್ಲ. ಹಾಗಾದ್ರೆ ಕೆಂಪಣ್ಣನ ಮೇಲೆ ಕ್ರಮ ತಗೊಳ್ಳಿ. ಯಾಕೆ 1 ವರ್ಷ ಆದ್ರೂ ಕ್ರಮ ತಗೊಂಡಿಲ್ಲ. ಯಾಕೆ ಅಂದ್ರೆ ಇವರ ಬಣ್ಣ ಬಯಲಾಗುತ್ತೆ ಅಂತ ತಗೊಂಡಿಲ್ಲ. ಬಿಜೆಪಿಯವರು (BJP) ತಪ್ಪಿತಸ್ಥರು ಹಾಗಾಗಿ ಪಲಾಯನವಾದ ಮಾಡ್ತಿದ್ದಾರೆ. ಭ್ರಷ್ಟಾಚಾರ ವ್ಯಾಪಕವಾಗಿ ಈ ಸರ್ಕಾರದಲ್ಲಿ ನಡೀತಿದೆ. ಅದಕ್ಕೆ ಪಲಾಯನ ಮಾಡ್ತಿದ್ದಾರೆ. ಅಧಿವೇಶನದಲ್ಲಿ ಮಂಗಳವಾರ 40% ಕಮಿಷನ್ ಬಗ್ಗೆ ಚರ್ಚೆಗೆ ಅವಕಾಶ ಕೇಳಿದೆ. ಅದು ಚರ್ಚೆಗೆ ಬಾರದ ಹಾಗೆ ನೋಡಿಕೊಂಡ್ರು ಚರ್ಚೆ ಮಾಡಲು ಅವಕಾಶ ಕೊಡಲಿಲ್ಲ. ಬೆಳಗಾವಿಯಲ್ಲೂ ಚರ್ಚೆ ಆಗಲಿಲ್ಲ ಈಗಲೂ ಆಗಲಿಲ್ಲ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಮಹಿಳೆಯರು ಸುರಕ್ಷಿತವಾಗಿದ್ದರೆ ಮಾತ್ರ ಭಾರತದ ಪ್ರಗತಿ ಸಾಧ್ಯ – ರಾಹುಲ್ ಗಾಂಧಿ

    ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಅಲ್ಲ ಎಲ್ಲಾ ಬೆಲೆಗಳು ಗಗನಕ್ಕೆ ಏರಿದೆ. ಬೆಲೆ ಏರಿಸೋದು ಬಡವರ ಹೊಟ್ಟೆ ಮೇಲೆ ಹೊಡೆಯೋದು ಬಿಜೆಪಿ ಕೆಲಸ. ಬಡವರ ರಕ್ತ ಹಿರೋದು ಇವರ ಕಾಯಕ ಎಂದರು. ಇದೇ ವೇಳೆ ಸಚಿವ ಸುಧಾಕರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ರೆ ಲಿಂಗಾಯತ ಸಿಎಂ ಟಾರ್ಗೆಟ್ ಮಾಡಿದ ಹಾಗೆನಾ? ಒಂದು ಧರ್ಮದ ಬಗ್ಗೆ ಮಾತನಾಡಿದ ಹಾಗೆನಾ? ಭ್ರಷ್ಟಾಚಾರದ ಬಗ್ಗೆ ಮಾತನಾಡಬಾರದಾ? ನಮಗೆ ಎಲ್ಲಾ ಜಾತಿಯವರು ಒಂದೇ ಎಲ್ಲರೂ ಸಮಾನರು. ಜಾತಿ ಪ್ರಶ್ನೆ ಇಲ್ಲ ಭ್ರಷ್ಟಾಚಾರದ ಪ್ರಶ್ನೆ ಇರೋದು. 40% ಭ್ರಷ್ಟಾಚಾರ ಹೇಳಿದವರು ಯಾರು ಕೆಂಪಣ್ಣ. ನಾನು ಹೇಳಿದ್ನಾ ಎಂದು ಪ್ರಶ್ನಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪರೀಕ್ಷೆ ಪಾಸ್ ಆಗ್ಬೇಕು ಅಂದ್ರೆ 35 ಮಾರ್ಕ್ಸ್ ಪಡಿಬೇಕು – ಬಿಜೆಪಿ ಸರ್ಕಾರದಲ್ಲಿ ಬಿಲ್ ಪಾಸ್ ಆಗ್ಬೇಕು ಅಂದ್ರೆ 40% ಕೊಡಬೇಕು: ಕಾಂಗ್ರೆಸ್

    ಪರೀಕ್ಷೆ ಪಾಸ್ ಆಗ್ಬೇಕು ಅಂದ್ರೆ 35 ಮಾರ್ಕ್ಸ್ ಪಡಿಬೇಕು – ಬಿಜೆಪಿ ಸರ್ಕಾರದಲ್ಲಿ ಬಿಲ್ ಪಾಸ್ ಆಗ್ಬೇಕು ಅಂದ್ರೆ 40% ಕೊಡಬೇಕು: ಕಾಂಗ್ರೆಸ್

    ಬೆಂಗಳೂರು: ಪೇಸಿಎಂ (PayCM) ಪರೀಕ್ಷೆ (Exam) ಪಾಸ್ ಆಗ್ಬೇಕು ಅಂದ್ರೆ 35 ಮಾರ್ಕ್ಸ್ ಪಡೆಯಬೇಕು. ಬಿಜೆಪಿ (BJP) ಸರ್ಕಾರದಲ್ಲಿ ಬಿಲ್ ಪಾಸ್ ಆಗ್ಬೇಕು ಅಂದ್ರೆ 40% (Commission) ಕೊಡಲೇಬೇಕು ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

    ಟ್ವೀಟ್‍ನಲ್ಲಿ ಏನಿದೆ?
    40% ಕಮಿಷನ್‌ಗಾಗಿ ಕಿರುಕುಳ ನೀಡಿ ಕೊಲೆ ಮಾಡಿದ ಸಂತೋಷ್ ಪಾಟೀಲ್ ಕೂಡ ಲಿಂಗಾಯತ. ಲಿಂಗಾಯತನೊಬ್ಬನ ಜೀವ ತೆಗೆದ ಬಿಜೆಪಿ ಸರ್ಕಾರ ಲಿಂಗಾಯತ ವಿರೋಧಿಯಲ್ಲವೇ? ಕಮಿಷನ್ ಕಿರುಕುಳದ ಸಂತ್ರಸ್ತರಲ್ಲಿ ಲಿಂಗಾಯತ ಗುತ್ತಿಗೆದಾರರು ಇಲ್ಲವೇ? ಬಿಜೆಪಿ ಲಿಂಗಾಯತ ವಿರೋಧಿ ಮಾತ್ರವಲ್ಲ, ಇಡೀ ಮನುಕುಲದ ವಿರೋಧಿ. ಜಾತಿ ಶೀಲ್ಡ್ ಹಿಡಿದು ಕಮಿಷನ್ ಭ್ರಷ್ಟಾಚಾರವನ್ನು ರಕ್ಷಿಸಲು ಬಿಜೆಪಿ ವಿಫಲ ಯತ್ನ ನಡೆಸುತ್ತಿದೆ. ಮಠಗಳ ಅನುದಾನದಲ್ಲೂ 30% ಕಮಿಷನ್ ದೋಚಲಾಗಿದೆ ಎಂದು ಲಿಂಗಾಯತ ಸ್ವಾಮಿಗಳೇ ಆರೋಪಿಸಿದ್ದರು. ಇದು ಲಿಂಗಾಯತರಿಗೆ ಮಾಡಿದ ಅವಮಾನವಲ್ಲವೇ? ಇದನ್ನೂ ಓದಿ: ಶಾಲೆ ಕ್ಲೋಸ್ ಮಾಡಿರುವ ಬಗ್ಗೆ ಯಾವುದೇ ಮಾಹಿತಿಯಿಲ್ಲ: ಬಿ.ಸಿ ನಾಗೇಶ್

    40% ಕಮಿಷನ್‌ಗಾಗಿ ಸರ್ಕಾರದ್ದು “ಜಾತ್ಯತೀತ ಭ್ರಷ್ಟಾಚಾರ” ಇದರಲ್ಲಿ ಲಿಂಗಾಯತರೂ ಸಂತ್ರಸ್ತರೇ. ಪೇಸಿಎಂ ಪರೀಕ್ಷೆ ಪಾಸ್ ಆಗ್ಬೇಕು ಅಂದ್ರೆ 35 ಮಾರ್ಕ್ಸ್ ಪಡೆಯಬೇಕು! ಬಿಜೆಪಿ ಸರ್ಕಾರದಲ್ಲಿ ಬಿಲ್ ಪಾಸ್ ಆಗ್ಬೇಕು ಅಂದ್ರೆ 40% ಕೊಡಲೇಬೇಕು! ನಿನ್ನೆ ಬಿಜೆಪಿಯವರು ಕಳಿಸಿದ ಬಸ್ಸು “ಡಕೋಟಾ ಇಂಜಿನ್ ಸರ್ಕಾರ, ಬ್ರೇಕ್ ಇಲ್ಲದ ಭ್ರಷ್ಟಾಚಾರ” ಎಂದು ರೋಧಿಸುತ್ತಿತ್ತು! ಕರ್ನಾಟಕ ಈಗ ಪೇಸಿಎಂ ಮುಕ್ತ ರಾಜ್ಯವಾಗಬೇಕಿದೆ ಎಂದು ಕಾಂಗ್ರೆಸ್‌ ಆಶಯ ವ್ಯಕ್ತಪಡಿಸಿದೆ. ಇದನ್ನೂ ಓದಿ: ಕರಾಟೆ ಕ್ಲಾಸ್‌ನಲ್ಲಿ ನಡೀತಿತ್ತು PFI ಉಗ್ರ ಚಟುವಟಿಕೆಯ ರಣತಂತ್ರ – NIA ದಾಳಿಗೂ ಅದೇ ಕಾರಣ

    Live Tv
    [brid partner=56869869 player=32851 video=960834 autoplay=true]

  • ಕಾಂಗ್ರೆಸ್‍ನ PayCM ಅಸ್ತ್ರಕ್ಕೆ ಬಿಜೆಪಿಯಿಂದ KaiPe ಪ್ರತ್ಯಸ್ತ್ರ

    ಕಾಂಗ್ರೆಸ್‍ನ PayCM ಅಸ್ತ್ರಕ್ಕೆ ಬಿಜೆಪಿಯಿಂದ KaiPe ಪ್ರತ್ಯಸ್ತ್ರ

    ಬೆಂಗಳೂರು: ಕಾಂಗ್ರೆಸ್‍ನ ಪೇಸಿಎಂ (PayCM) ಅಸ್ತ್ರಕ್ಕೆ ಪ್ರತಿಯಾಗಿ ಬಿಜೆಪಿ ಪ್ರತ್ಯಸ್ತ್ರ ಹೂಡಿದೆ. ಫೋನ್‍ಪೇ (PhonePay) ಮಾದರಿಯಲ್ಲಿ `ಕೈ’ಪೇ (KaiPe) ಕ್ಯೂ ಆರ್ ಕೋಡ್ ಪೋಸ್ಟರ್ ರಿಲೀಸ್ ಮಾಡಿದೆ.

    ನಕಲಿ ಗಾಂಧಿ ಕುಟುಂಬಕ್ಕೆ ಗಾಂಧಿ ಹೆಸರು ಬಂದಿದ್ದು ಹೇಗೆ.? ಅಸಲಿ ಸತ್ಯ ತಿಳಿಯಲು ಇಲ್ಲಿ ಸ್ಕ್ಯಾನ್ ಮಾಡಿ ಅಂತ ಪೋಸ್ಟರ್ ನಲ್ಲಿ ಬರೆದಿದೆ. ಅಷ್ಟೇ ಅಲ್ಲ ಪೇಸಿಎಂ ಅಂದ್ರೆ ಪೇ ಟು ಕಾಂಗ್ರೆಸ್ ಮೇಡಂ.. ಕೆಸಿಸಿ ಅಂದ್ರೆ ಕಂಗಾಲ್ ಕಾಂಗ್ರೆಸ್ ಕಂಪನಿ ಅಂತ ಪೋಸ್ಟರ್ ರಿಲೀಸ್ ಮಾಡಿದೆ. ಇದರಲ್ಲಿ ಸಿದ್ದರಾಮಯ್ಯ, ಡಿಕೆಶಿ, ಪ್ರಿಯಾಂಕ್ ಖರ್ಗೆ, ಕೆಜೆ ಜಾರ್ಜ್, ಎಂಬಿ ಪಾಟೀಲ್ ಹಾಗೂ ರಾಮಲಿಂಗಾರೆಡ್ಡಿ ಹೆಸರುಗಳನ್ನು ಉಲ್ಲೇಖಿಸಿದೆ. ಆದರೆ ಇದಕ್ಕೆಲ್ಲಾ ಡೋಂಟ್‍ಕೇರ್ ಎನ್ನುತ್ತಾ ಕಾಂಗ್ರೆಸ್ (Congress), ಪೇಸಿಎಂ ಕ್ಯಾಂಪೇನ್ ಮುಂದುವರಿದ ಭಾಗವಾಗಿ ಇವತ್ತು ಗ್ರಾಫಿಕ್ Graphic) ವಿಡಿಯೋವೊಂದನ್ನು ಬಿಡುಗಡೆ ಮಾಡಿದೆ.

    ಅಷ್ಟೇ ಅಲ್ಲ ಕಾಂಗ್ರೆಸ್ ನಾಯಕರು, ರೇಸ್‍ಕೋರ್ಸ್ ರಸ್ತೆಯಲ್ಲಿ ಗೋಡೆ, ಪೊಲೀಸ್ ಬ್ಯಾರಿಕೇಡ್, ಬಿಎಂಟಿಸಿ, ಟೋಯಿಂಗ್ ವಾಹನ. ಹೀಗೆ ಎದುರಿಗೆ ಏನು ಕಾಣುತ್ತೋ ಅದರ ಮೇಲೆಲ್ಲಾ ಪೇಸಿಎಂ ಪೋಸ್ಟರ್ ಅಂಟಿಸಲು ಪ್ರಯತ್ನ ನಡೆಸಿದ್ರು. ಖುದ್ದು ಸಿದ್ದರಾಮಯ್ಯ (Siddaramaiah), ಡಿಕೆ ಶಿವಕುಮಾರ್ (DK Shivakumar) ಇದರ ನೇತೃತ್ವ ವಹಿಸಿದ್ರು. ಕೈ ನಾಯಕರು ಪೋಸ್ಟರ್ ಅಂಟಿಸಿದಂತೆಲ್ಲಾ ಪೊಲೀಸರು ಹರಿಯುತ್ತಿದ್ರು. ಈ ವೇಳೆ ಬಿ.ಕೆ. ಹರಿಪ್ರಸಾದ್ (B.K Hariprasad) ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ರು. ಇದನ್ನೂ ಓದಿ: ಕೆಲಸ ಮಾಡದೇ ಬಿಲ್ ಮಾಡಿಕೊಂಡಿರುವ 100% ಅಕ್ರಮ ಪಕ್ಷ ಕಾಂಗ್ರೆಸ್: ಲಕ್ಷ್ಮಣ ಸವದಿ

    ಕುಣಿಗಲ್ ಶಾಸಕ ರಂಗನಾಥ್ (Ranganath) ಪೊಲೀಸರ ಮೇಲೆ ಹಲ್ಲೆಗೂ ಮುಂದಾದ್ರು. ಇಬ್ಬರು ಪೊಲೀಸರು ಕೆಳಕ್ಕೆ ಬಿದ್ದ ಘಟನೆಯೂ ನಡೀತು. ಕೊನೆಗೆ ಎಲ್ಲರನ್ನು ಪೊಲೀಸರು ವಶಕ್ಕೆ ಪಡೆದುಬಿಟ್ರು. ಈ ಹೈಡ್ರಾಮಾ ಪರಿಣಾಮ ರೇಸ್‍ಕೋರ್ಸ್ ರಸ್ತೆಲಿ ಟ್ರಾಫಿಕ್ ಜಾಮ್ (Traffic Jam) ಆಗಿ ವಾಹನ ಸವಾರರು ಪರದಾಡಿದ್ರು. ಮತ್ತೊಂದ್ಕಡೆ ಮುಖ್ಯಮಂತ್ರಿ ಟಾರ್ಗೆಟ್ ಮಾಡಿ ಕಾಂಗ್ರೆಸ್ ಸರಣಿ ಟ್ವೀಟ್ (Tweet) ಮಾಡಿದೆ. ಪೇಸಿಎಂ ಎಂದಾಕ್ಷಣ ಸಿಎಂ ಬೊಮ್ಮಾಯಿ ಹೆಗಲು ಮುಟ್ಟಿಕೊಳ್ಳೋದೇಕೆ? ಕಳ್ಳನ ಮನಸ್ಸು ಹುಳ್ಳುಳ್ಳಗೆ ಎಂಬ ಮಾತು ನಿಜವೇ ಎಂದು ಪ್ರಶ್ನಿಸಿದೆ. ಇದನ್ನೂ ಓದಿ: ವಕ್ಫ್ ಆಸ್ತಿ ವರದಿ, 40% ಸರ್ಕಾರ ಹಗರಣ ಗಲಾಟೆ ನಡುವೆ ಮಳೆಗಾಲದ ಅಧಿವೇಶನ ಬಲಿ

    ಪಿಎಸ್‍ಐ ಹಗರಣ ನಿರಾಕರಿಸಿದ್ರಿ. ದಡೆಸುಗೂರ್, ಅಶ್ವಥ್‍ನಾರಾಯಣ್ (Ashwath Narayan) ವಿಚಾರಣೆಗೆ ಒಪ್ಪಲಿಲ್ಲ. ಪೇಮೆಂಟ್ ಪಾಲು ನಿಮಗೂ ತಲುಪಿದೆಯೇ ಎಂದು ಕೇಳಿದೆ. ಕಾಂಗ್ರೆಸ್ ಪೋಸ್ಟರ್ ರಾಜಕೀಯ ಖಂಡಿಸಿ ಬಿಜೆಪಿಗರು ವಿಧಾನಸೌಧ (VidhanaSoudha) ದ ಗಾಂಧಿ ಪ್ರತಿಮೆ ಮುಂದೆ ಬಿಜೆಪಿಗರು ಪ್ರತಿಭಟನೆ ನಡೆಸಿದ್ರು. ತಲೆಮಾರುಗಳಿಂದ ಭ್ರಷ್ಟಾಚಾರ ಮಾಡೋ ಪಕ್ಷ ಕಾಂಗ್ರೆಸ್ ಎಂದು ಧಿಕ್ಕಾರ ಕೂಗಿದ್ರು. ಮಜವಾದಿ ಸಿದ್ದರಾಮಯ್ಯ, ಚೀಟಿ ನುಂಗಿದ ಡಿಕೆಶಿ ಎಂದು ವ್ಯಂಗ್ಯ ಮಾಡಿದ್ರು.

    Live Tv
    [brid partner=56869869 player=32851 video=960834 autoplay=true]

  • ಕೆಲಸ ಮಾಡದೇ ಬಿಲ್ ಮಾಡಿಕೊಂಡಿರುವ 100% ಅಕ್ರಮ ಪಕ್ಷ ಕಾಂಗ್ರೆಸ್: ಲಕ್ಷ್ಮಣ ಸವದಿ

    ಕೆಲಸ ಮಾಡದೇ ಬಿಲ್ ಮಾಡಿಕೊಂಡಿರುವ 100% ಅಕ್ರಮ ಪಕ್ಷ ಕಾಂಗ್ರೆಸ್: ಲಕ್ಷ್ಮಣ ಸವದಿ

    ಬೆಂಗಳೂರು: ಕಾಂಗ್ರೆಸ್ (Congress) ತಟ್ಟೆಯಲ್ಲಿ ಕತ್ತೆ ಬಿದ್ದಿದೆ. ನಮ್ಮಲ್ಲಿ ನೊಣ ಹುಡುಕುತ್ತಿದ್ದಾರೆ. ಹೀಗೆ ತಪ್ಪು ಸುದ್ದಿ ಹೇಳಿ ಅಧಿಕಾರಕ್ಕೆ ಬರೋದು ಕಾಂಗ್ರೆಸ್ ಚಾಳಿ. ಕಾಂಗ್ರೆಸ್ ಸರ್ಕಾರ 100% ಅಕ್ರಮದ ಸರ್ಕಾರ. ಕೆಲಸವೇ ಮಾಡದೇ ಬಿಲ್ ಮಾಡಿಕೊಂಡಿರೋದು ಕಾಂಗ್ರೆಸ್ ಅವರು. ಕಾಂಗ್ರೆಸ್ ಸರ್ಕಾರ 100% ಅಕ್ರಮ ಸರ್ಕಾರ ಎಂದು ಮಾಜಿ ಸಚಿವ ಲಕ್ಷ್ಮಣ ಸವದಿ (Laxman Savadi) ಕಿಡಿಕಾರಿದರು.

    ಸಿದ್ದರಾಮಯ್ಯ (Siddaramaiah) ಮತ್ತು ಡಿ.ಕೆ ಶಿವಕುಮಾರ್ (D.K Shivakumar) ಹಾಗೂ ಕಾಂಗ್ರೆಸ್ ವಿರುದ್ಧ ಬಿಜೆಪಿ (BJP) ವಿಧಾನ ಪರಿಷತ್ ಸದಸ್ಯರು ಪ್ರತಿಭಟನೆ ನಡೆಸಿದರು. ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ ಸದಸ್ಯರು, ಸಿದ್ದರಾಮಯ್ಯ ಕಾಲದ ಹಗರಣಗಳ ಭಿತ್ತಿಪತ್ರ ಹಿಡಿದು ಘೋಷಣೆ ಕೂಗಿದರು. ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಅಕ್ರಮಗಳ ಸರದಾರರು ಅಂತ ಕಿಡಿಕಾರಿದರು. ಕಾಂಗ್ರೆಸ್ ತಲೆ ಮಾರಿನಿಂದ ಭ್ರಷ್ಟಾಚಾರ ಮಾಡ್ತಿದೆ ಅಂತ ಘೋಷಣೆ ಕೂಗಿದರು. ರಿಡೂ, ಕೆಪಿಎಸ್‍ಸಿ (KPSC) ಹಗರಣ, ಇಂಧನ ಹಗರಣದ ಪಿತಾಮಹ ಅಂತ ಲೇವಡಿ ಮಾಡಿದರು. ಇದನ್ನೂ ಓದಿ: PFI ನಾಯಕನ ಮನೆಯಲ್ಲಿ ಸಾವರ್ಕರ್‌ ಪುಸ್ತಕ – ಶಿವಮೊಗ್ಗದಲ್ಲಿ 19 ಲಕ್ಷ ಪತ್ತೆ

    ಬಳಿಕ ಈ ಬಗ್ಗೆ ಮಾತನಾಡಿ ಲಕ್ಷ್ಮಣ ಸವದಿ, ಪೇ ಸಿಎಂ ಅಂತ ಕಾಂಗ್ರೆಸ್ ಮಾಡುತ್ತಿದೆ. ಸಿಎಂ ಬೊಮ್ಮಾಯಿ 13 ತಿಂಗಳಿಂದ ಒಂದೇ ಒಂದು ಕಪ್ಪುಚುಕ್ಕೆ ಇಲ್ಲದೆ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಅವರು ಸಿಎಂ, ಬಿಜೆಪಿ ಹೆಸರು ಕೆಡಿಸೋಕೆ ಅಪಪ್ರಚಾರ ಮಾಡ್ತಿದ್ದಾರೆ. ದಿಂಬು ಹಾಸಿಗೆಯಲ್ಲೂ ಕಾಂಗ್ರೆಸ್ ಭ್ರಷ್ಟಾಚಾರ ಮಾಡಿದೆ. ಕೆಲಸಕ್ಕೆ ಬಾರದವನು 40% ಅಂತ ಪತ್ರ ಬರೆಯುತ್ತಾನೆ. ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಭೇಟಿ ಆಗಿ ಅವರು ಹೇಳಿದಂತೆ 40% ಆರೋಪ ಕೆಂಪಣ್ಣ ಮಾಡ್ತಾರೆ. ಅವರ ಹತ್ತಿರ ದಾಖಲಾತಿ ಇದ್ದರೆ ಲೋಕಾಯುಕ್ತಕ್ಕೆ ಕೊಡಲಿ. ನ್ಯಾಯಾಲಯಕ್ಕೆ ಹೋಗಲಿ. ಅನವಶ್ಯಕವಾಗಿ ಉತ್ತಮ ಸಿಎಂ ಹೆಸರು ಕೆಡಿಸೋಕೆ ಕಾಂಗ್ರೆಸ್ ಈ ಕೆಲಸ ಮಾಡಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರಾಷ್ಟ್ರೀಯ ಮೇಯರ್ ಸಮ್ಮೇಳನ – ಉಡುಪಿ ನಗರಸಭೆಯನ್ನು ಹಾಡಿಹೊಗಳಿದ ಮೋದಿ

    ಸಿಎಂ ಅವರಿಗೆ ಕಪ್ಪು ಮಸಿ ಬಳೆಯಲು ಹೋಗಿದ್ದಾರೆ. ಅದಕ್ಕೆ ಜನ ಉತ್ತರ ಕೊಡ್ತಾರೆ. ರಮೇಶ್ ಕುಮಾರ್ 3 ತಲೆಮಾರಿಗೆ ಆಗುವಷ್ಟು ಮಾಡಿದ್ದೇವೆ ಅಂತ ಹೇಳಿದ್ದರು. ಕಾಂಗ್ರೆಸ್ ಅಕ್ರಮ ಹೇಳಿದ್ದು ಅವರ ಪಕ್ಷದವರೇ, ಇದನ್ನು ಕಾಂಗ್ರೆಸ್ ಅರ್ಥ ಮಾಡಿಕೊಳ್ಳಬೇಕು. ಕಾಂಗ್ರೆಸ್ ಅವ್ರ ಆಸ್ತಿ ನೋಡಿದ್ರೆ ಶಾಕ್ ಆಗುತ್ತೆ. ಕಬ್ಬು ಅರಿಲಿಲ್ಲ, ಒಕ್ಕಲು ತನ ಮಾಡಿಲ್ಲ. ಅಕ್ರಮ ಮಾಡಿ ಹಣ ಸಂಪಾದನೆ ಮಾಡಿದ್ದಾರೆ. ಕಾಂಗ್ರೆಸ್ ಭ್ರಷ್ಟಾಚಾರದ ಬುಕ್‍ಗಳನ್ನು ಮನೆ ಮನೆಗೆ ಮುಟ್ಟಿಸುವ ಕೆಲಸ ಮಾಡ್ತೀವಿ ಅಂತ ತಿಳಿಸಿದರು.

    ಬಳಿಕ ಈ ವೇಳೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ರವಿಕುಮಾರ್, ನಮ್ಮ ಸಿಎಂ ವಿರುದ್ದ ಪೇ ಸಿಎಂ ಅಂತ ಅಭಿಯಾನ ಕಾಂಗ್ರೆಸ್ ಮಾಡ್ತಿದ್ದಾರೆ. ಕರ್ನಾಟಕದ ಇತಿಹಾಸದಲ್ಲಿ ಇದೊಂದು ಭ್ರಷ್ಟ ನಡೆ. ನಮ್ಮ ಸರ್ಕಾರ ಮತ್ತು ಸಿಎಂಗೆ ಕೆಟ್ಟ ಹೆಸರು ತರಲು ಹೀಗೆ ಕಾಂಗ್ರೆಸ್‍ನವರು ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡ್ತಿದ್ದಾರೆ. ಅವರ ತಟ್ಟೆಯಲ್ಲಿ ಹೆಗ್ಗಣ, ಕತ್ತೆ ಬಿದ್ದಿದೆ. ಕ್ಲೀನ್ ಆಗಿರೋ ಬಿಜೆಪಿ ಬಗ್ಗೆ ಅವ್ರು ಮಾತಾಡ್ತಿದ್ದಾರೆ. ಇದಕ್ಕೆ ನಮ್ಮ ಪ್ರತಿಭಟನೆ ಅಂತ ನುಡಿದರು.

    Live Tv
    [brid partner=56869869 player=32851 video=960834 autoplay=true]

  • PayCM ಅಂದ್ರೆ ಪೇ ಟು ಕಾಂಗ್ರೆಸ್ ಮೇಡಂ – ನಳಿನ್ ಕುಮಾರ್ ಕಟೀಲ್ ತಿರುಗೇಟು

    PayCM ಅಂದ್ರೆ ಪೇ ಟು ಕಾಂಗ್ರೆಸ್ ಮೇಡಂ – ನಳಿನ್ ಕುಮಾರ್ ಕಟೀಲ್ ತಿರುಗೇಟು

    ಬೆಂಗಳೂರು: ಪೇ ಸಿಎಂ ಅಂದ್ರೆ ‘ಪೇ ಕಾಂಗ್ರೆಸ್ ಮೇಡಂ’ (Pay Congress Madam) ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ (Nalin Kumar Kateel) ಅವರು ತಿಳಿಸಿದರು.

    ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲಿಂದು ಸಿದ್ದರಾಮಣ್ಣ ಅಧಿಕಾರಾವಧಿಯ ಶೇ 100 ಭ್ರಷ್ಟಾಚಾರವನ್ನು ಅನಾವರಣಗೊಳಿಸುವ ʻಸ್ಕ್ಯಾಮ್ ರಾಮಯ್ಯ” (Scam Ramaiah) ಪುಸ್ತಕ ಬಿಡುಗಡೆ ಮಾಡಿದರು. ಕಾಂಗ್ರೆಸ್ (Congress) ಮೇಡಂಗೆ ಮಾಡುವ ಪೇಮೆಂಟ್ ಬಗ್ಗೆ ಉಲ್ಲೇಖ ಇದಾಗಿದೆ. ಶಿವಕುಮಾರ್ (DK Shivakumar) ಚೀಟಿ ನುಂಗಿದ್ದನ್ನು ನೋಡಿದ್ದೀರಿ. ಅವರು ಚೀಟಿ ಶಿವಕುಮಾರ್ ಆಗಿದ್ದಾರೆ. ಪೇ ಸಿಎಂ ಅಭಿಯಾನವು ಕರ್ನಾಟಕಕ್ಕೆ (Karnataka) ಮಾಡುತ್ತಿರುವ ಅವಮಾನ. ಸಿದ್ದರಾಮಯ್ಯ ಅವರು ಕೋರ್ಟಿನ (Court) ಆದೇಶದನ್ವಯ ಬಂಧನಕ್ಕೆ ಒಳಗಾಗಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಗೌರವ ಹೋದ್ರೆ ಎಲ್ಲರದ್ದೂ ಹೋಗಲಿದೆ – ಪೇ ಸಿಎಂ ಗದ್ದಲ, ಗಲಾಟೆ: ಕಲಾಪ ಮುಂದೂಡಿಕೆ

    ಕಾಂಗ್ರೆಸ್‌ ಪಕ್ಷವು ತನ್ನ ಸುದೀರ್ಘ ರಾಜಕಾರಣದಲ್ಲಿ (Politics) ಭ್ರಷ್ಟಾಚಾರಕ್ಕೆ ಅತಿದೊಡ್ಡ ಕೊಡುಗೆ ನೀಡಿದೆ. ದೇಶದಲ್ಲಿ ಉಗ್ರವಾದ ಭಯೋತ್ಪಾದನೆಗೂ (Terrorism) ಕಾಂಗ್ರೆಸ್ ಪಕ್ಷವೇ ಕಾರಣ. 1947ರಿಂದ 2014ರವರೆಗೆ ಗರಿಷ್ಠ ವರ್ಷಗಳ ಕಾಲ ದೇಶವನ್ನು ಆಳಿದ ಕಾಂಗ್ರೆಸ್ (Congress) ಪಕ್ಷವು ಭ್ರಷ್ಟಾಚಾರಕ್ಕೆ ಬೃಹತ್ತಾದ ಕೊಡುಗೆ ನೀಡಿದೆ ಎಂದು ಟೀಕಿಸಿದರು. ಇದನ್ನೂ ಓದಿ: ನಾನು ಆರೋಗ್ಯವಾಗಿದ್ದೇನೆ, ಕಾರ್ಯಕರ್ತರು ಆತಂಕ ಪಡೋ ಅಗತ್ಯವಿಲ್ಲ: ಹೆಚ್.ಡಿ ದೇವೇಗೌಡ

    ಕಾಂಗ್ರೆಸ್‍ನ ಅತಿ ಹೆಚ್ಚು ಜನರು ಕಾಂಗ್ರೆಸ್‍ನ ರಾಷ್ಟ್ರೀಯ ನಾಯಕರು (National Congress Leader), ರಾಜ್ಯದ ನಾಯಕರು ಹಗರಣಗಳಲ್ಲಿ ಸಿಲುಕಿದ್ದಾರೆ. ತನಿಖೆಯ ಫಲಿತಾಂಶಗಳು ಕಾಂಗ್ರೆಸ್ ಪಕ್ಷವನ್ನು ಮುಜುಗರಕ್ಕೆ ಈಡುಮಾಡಿವೆ. ಜನರ ದಾರಿ ತಪ್ಪಿಸಲು ಕಾಂಗ್ರೆಸ್ ಪಕ್ಷ ಪ್ರಯತ್ನಿಸುತ್ತಿದೆ. ಸಿದ್ದರಾಮಣ್ಣನ ಕಾಲಘಟ್ಟದಲ್ಲೂ ಅತಿಹೆಚ್ಚು ಹಗರಣಗಳು ನಡೆದಿದ್ದು, ಲೋಕಾಯುಕ್ತ ಶಕ್ತಿ ಕುಂದಿಸಿ ಹಗರಣಗಳನ್ನು ಮುಚ್ಚಿ ಹಾಕಲು ಆಗಿನ ಸರ್ಕಾರ ಮುಂದಾಗಿತ್ತು ಎಂದು ತಿಳಿಸಿದರು.

    ಸಾಲು ಸಾಲು ಹಗರಣ:
    ನೆಹರೂರಿಂದ ಆರಂಭಿಸಿ ಮನಮೋಹನ್ ಸಿಂಗ್ (Manmohan Singh) ಕಾಲಘಟ್ಟದವರೆಗೆ ಈ ದೇಶದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ, ಲಾಲ್ ಬಹದ್ದೂರ್ ಶಾಸ್ತ್ರಿ ಅವರನ್ನು ಹೊರತುಪಡಿಸಿ ಕಾಂಗ್ರೆಸ್ ಪಕ್ಷದ ಇತರ ಎಲ್ಲ ಪ್ರಧಾನಮಂತ್ರಿಗಳು ಭ್ರಷ್ಟಾಚಾರ ಮತ್ತು ವಿವಿಧ ಹಗರಣಗಳಲ್ಲಿ ಸಿಲುಕಿದವರೇ ಆಗಿದ್ದಾರೆ. 1948ರ ಜೀಪ್ ಹಗರಣದಿಂದ ಬೊಫೋರ್ಸ್ (Bofors Case), ಸಿಮೆಂಟ್ ಹಗರಣ, ಕಾಮನ್‍ವೆಲ್ತ್ ಹಗರಣದಿಂದ 2ಜಿ ಹಗರಣದವರೆಗೆ ಆಕಾಶ, ನೀರು, ಮಣ್ಣು ಮತ್ತು ಗಾಳಿಯಲ್ಲಿ ಗರಿಷ್ಠ ಹಗರಣಗಳನ್ನು ಕಾಂಗ್ರೆಸ್ ಪಕ್ಷ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಅನ್ವರ್ ಮಾಣಿಪ್ಪಾಡಿ ವರದಿ 2.5 ಲಕ್ಷ ಕೋಟಿ ಹಗರಣವನ್ನು ಬೆಳಕಿಗೆ ತರಲಿದೆ. ಅರ್ಕಾವತಿ, ಮೊಟ್ಟೆ, ಹಾಸಿಗೆ, ದಿಂಬು ಸೇರಿ ಅನೇಕ ಹಗರಣಗಳು ನಡೆದಿದ್ದವು. ಇವೆಲ್ಲವುಗಳನ್ನು ಮುಚ್ಚಿಡಲು ಕಾಂಗ್ರೆಸ್ ಪ್ರಯತ್ನಿಸಿತು. ಡ್ರಗ್ ದಂಧೆ, ಮರಳು ಮಾಫಿಯಾಗಳು ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ನಡೆಸುತ್ತಿದ್ದವು. ಆ ದಂಧೆಗಳನ್ನು ನಮ್ಮ ಸರ್ಕಾರ ನಿಯಂತ್ರಿಸಿದೆ ಎಂದು ವಿವರಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದವರ ಬಂಧನವೇಕಿಲ್ಲ?: ದಿನೇಶ್ ಗುಂಡೂರಾವ್

    ಕಾಂಗ್ರೆಸ್ ಹಗರಣಗಳ ಸಂಪೂರ್ಣ ತನಿಖೆ ನಡೆಯಲಿದ್ದು, ತಪ್ಪಿತಸ್ಥರ ಬಂಧನವಾಗಲಿದೆ. ನಮ್ಮ ಸಾಧನೆ ಮತ್ತು ಅಭಿವೃದ್ಧಿಗಳನ್ನು ನೋಡಿ ಆತಂಕಗೊಂಡ ಕಾಂಗ್ರೆಸ್ ಸುಳ್ಳು ಆರೋಪ ಮಾಡುತ್ತಿದೆ. ಹಾಗಾಗಿ ದಾಖಲೆಗಳನ್ನು ಸಂಗ್ರಹಿಸಿ, ʻಸ್ಕ್ಯಾಮ್ ರಾಮಯ್ಯʼ ಪುಸ್ತಕ ಹೊರತಂದಿದ್ದೇವೆ. ಅಧಿಕಾರಿಗಳಾದ ಕೆಂಪಯ್ಯ ಮತ್ತು ಕಾಂಟ್ರಾಕ್ಟರ್ ಕೆಂಪಣ್ಣನ ಮೂಲಕ ಸಿದ್ದರಾಮಣ್ಣ ರಾಜಕೀಯ ಮಾಡುತ್ತಿದ್ದಾರೆ. ಆದರೆ, ನಾವು ಲೋಕಾಯುಕ್ತಕ್ಕೆ ಜೀವ ಕೊಡುವ ಕೆಲಸ ಮಾಡಿದ್ದೇವೆ. ಕಾಂಗ್ರೆಸ್ ಆಡಳಿತ ಅವಧಿಯ ಎಲ್ಲ ಹಗರಣಗಳನ್ನು ತನಿಖೆ ಮಾಡಿಸಲಿದ್ದೇವೆ. ಪ್ರಕರಣ ದಾಖಲಿಸಿ, ಎಷ್ಟೇ ದೊಡ್ಡವರಿದ್ದರೂ ಬಂಧಿಸಲಿದ್ದೇವೆ. ಪಾರದರ್ಶಕ ಆಡಳಿತ ನಡೆಸಲಿದ್ದೇವೆ ಎಂದು ನುಡಿದರು.

    ಉಗ್ರವಾದವನ್ನು ಪೋಷಿಸಿದ ಪಕ್ಷ ಕಾಂಗ್ರೆಸ್. ನಾವು ಉಗ್ರರನ್ನು ಮಟ್ಟ ಹಾಕಲು ಎನ್‍ಐಎ ಮೂಲಕ ದಾಳಿಗಳನ್ನು ಸಂಘಟಿಸಿದ್ದೇವೆ. ಇದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಅಭಿನಂದನೆಗಳು. ಕಾಶ್ಮೀರ ಉಳಿಸಲು ನಮ್ಮ ಸರ್ಕಾರ ಕ್ರಮ ಕೈಗೊಂಡಿತ್ತು ಎಂದ ಅವರು, ಸಿದ್ದರಾಮಯ್ಯರ ಎಲ್ಲ ಹಗರಣಗಳ ದಾಖಲೆ ಸಂಗ್ರಹಿಸಲಾಗಿದೆ. ಈಗ ತನಿಖೆ ಮುಂದುವರಿಯಲಿದೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ಎನ್‌ಐಎ ದಾಳಿ- ಅಪರಾಧಗಳ ಹಿನ್ನೆಲೆ ಮಾತ್ರ ಗಣನೆ, ಧರ್ಮ ಅಲ್ಲ: ಆರಗ ಜ್ಞಾನೇಂದ್ರ

    ಕಾಂಗ್ರೆಸ್ ಶಾಪಗ್ರಸ್ಥ ಪಕ್ಷ:
    ಕಾಂಗ್ರೆಸ್ ಪಕ್ಷವು ಭ್ರಷ್ಟರ ಮೂಲ ಕೇಂದ್ರ. ಭಾರತ್ ಜೋಡೋಗಿಂತ ಮೊದಲು ಕಾಂಗ್ರೆಸ್ ಜೋಡೋ ಮಾಡಬೇಕಿದೆ. ಜಾತಿ-ಜಾತಿಗಳನ್ನು ಒಡೆದ, ರಾಜ್ಯಗಳನ್ನು ಮತ್ತು ದೇಶ ಒಡೆದ ಶಾಪ ಕಾಂಗ್ರೆಸ್‍ಗಿದೆ. ಅದೊಂದು ಶಾಪಗ್ರಸ್ಥ ಪಕ್ಷ. ಡಿಕೆಶಿ ಡೀಲ್ ಮಾಸ್ಟರ್ ಎಂದು ಅವರ ಪಕ್ಷದವರೇ ಹೇಳಿದ್ದಾರೆ. ಇಲ್ಲಿಯೂ ಡಿಕೆಶಿ- ಸಿದ್ದರಾಮಣ್ಣ ನಡುವೆ ಜಗಳ ನಡೆಯುತ್ತಿದೆ. ಪಿಎಸ್‍ಐ ನೇಮಕಾತಿ ಹಗರಣದಲ್ಲಿ ಡಿಐಜಿ ಮಟ್ಟದ ಅಧಿಕಾರಿಯನ್ನು ನಮ್ಮ ಸರ್ಕಾರ ಬಂಧಿಸಿದೆ ಎಂದು ಮಾಹಿತಿ ನೀಡಿದರು.

    ಭ್ರಷ್ಟಾಚಾರ ಕುರಿತು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನಿಗೆ ಕಾಲಾವಕಾಶ ಕೊಟ್ಟಿದ್ದರೂ ದಾಖಲೆ ಕೊಟ್ಟಿಲ್ಲ. ಇಂದಿನ ವರೆಗೆ ಕಾಂಗ್ರೆಸ್ ಮತ್ತು ಅವರ ಏಜೆಂಟರು ದಾಖಲೆಗಳನ್ನು ಕೊಟ್ಟಿಲ್ಲ. ಸಾಕ್ಷಿ ಇಲ್ಲದೆ ತನಿಖೆ ಮಾಡಲು ಹೇಗೆ ಸಾಧ್ಯ? ಅದಕ್ಕಾಗಿ ಪಕ್ಷದ ಮೂಲಕ ಮಾನನಷ್ಟ ಮೊಕದ್ದಮೆ ದಾಖಲಿಸಲಿದ್ದೇವೆ ಎಂದು ಹೇಳಿದರು.

    ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್. ರವಿಕುಮಾರ್ ಹಾಗೂ ಸಿದ್ದರಾಜು, ರಾಜ್ಯ ಬಿಜೆಪಿ ವಕ್ತಾರ ಎಂ.ಜಿ. ಮಹೇಶ್, ಎಸ್ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]