Tag: paycm poster

  • PayCM ಪೋಸ್ಟರ್‌ ಅಂಟಿಸಲು ಕಾಲೇಜು ವಿದ್ಯಾರ್ಥಿಗಳ ಬಳಕೆ – ಸ್ಟೂಡೆಂಟ್ಸ್‌ ಸೇರಿ 6 ಮಂದಿ ವಿರುದ್ಧ ಎಫ್‌ಐಆರ್‌

    PayCM ಪೋಸ್ಟರ್‌ ಅಂಟಿಸಲು ಕಾಲೇಜು ವಿದ್ಯಾರ್ಥಿಗಳ ಬಳಕೆ – ಸ್ಟೂಡೆಂಟ್ಸ್‌ ಸೇರಿ 6 ಮಂದಿ ವಿರುದ್ಧ ಎಫ್‌ಐಆರ್‌

    ಬೆಂಗಳೂರು/ನೆಲಮಂಗಲ: ಪೇ ಸಿಎಂ ಪೋಸ್ಟರ್ (PayCM) ಅಭಿಯಾನ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದೆ. ಪೋಸ್ಟರ್‌ ಅಂಟಿಸಿದ ಆರೋಪದ ಮೇಲೆ ಮೂವರು ಕಾಲೇಜು ವಿದ್ಯಾರ್ಥಿಗಳು ಸೇರಿ ಅನೇಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

    ಕಳೆದ ರಾತ್ರಿ ಬೆಂಗಳೂರು ಹೊರವಲಯ ನೆಲಮಂಗಲದಲ್ಲಿ ಮೂವರು ಪೋಸ್ಟರ್ ಅಂಟಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ನೆಲಮಂಗಲ (Nelamangala) ಟೌನ್ ಠಾಣೆಯಲ್ಲಿ ಆರು ಜನರು ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತಾಲೂಕು ಯೂತ್ ಕಾಂಗ್ರೆಸ್ (Congress) ಅಧ್ಯಕ್ಷ ನಾರಾಯಣಗೌಡ ಹಾಗೂ ಕಾರ್ಮಿಕ ಘಟಕದ ಅಧ್ಯಕ್ಷ ರಾಮಕೃಷ್ಣ ಮೇಲೂ ಎಫ್‌ಐಆರ್‌ ದಾಖಲಾಗಿದೆ. ವಿದ್ಯಾರ್ಥಿಗಳಿಗೆ ಪೋಸ್ಟರ್ ಅಂಟಿಸುವಂತೆ ಹೇಳಿದ್ದಾರೆಂದು ಇವರ ಮೇಲೆ ಕೇಸ್ ದಾಖಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್‍ನ PayCM ಅಸ್ತ್ರಕ್ಕೆ ಬಿಜೆಪಿಯಿಂದ KaiPe ಪ್ರತ್ಯಸ್ತ್ರ

    ಮೂವರು ಕಾಲೇಜು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇಬ್ಬರು ವಿದ್ಯಾರ್ಥಿಗಳು ನೆಲಮಂಗಲದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಯಲದವರು. ವಿದ್ಯಾರ್ಥಿಗಳಿಗೆ ಕುಮ್ಮಕ್ಕು ನೀಡಿಲಾಗಿದೆಯೇ ಎಂಬ ಅನುಮಾನದ ಆಧಾರದಲ್ಲಿ ಪೊಲೀಸರ ತನಿಖೆ ಕೈಗೊಂಡಿದ್ದಾರೆ.

    ಪೋಸ್ಟರ್‌ ಅಂಟಿಸಿದವರು ನರ್ಸಿಂಗ್‌ ಕಾಲೇಜಿನ ವಿದ್ಯಾರ್ಥಿಗಳು ಎನ್ನಲಾಗಿದ್ದು, ರಾತ್ರಿ ಹಾಸ್ಟೆಲ್‌ನಿಂದ ಹೊರಬಂದು ವಿದ್ಯಾರ್ಥಿಗಳು ʻಪೇ ಸಿಎಂʼ ಪೋಸ್ಟರ್ ಅಂಟಿಸಿದ್ದಾರೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ವಿಜಯಪುರ ಮೂಲದ ಇಬ್ಬರು ಹಾಗೂ ತಮಿಳುನಾಡಿನ ಓರ್ವ ವಿದ್ಯಾರ್ಥಿ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೆಲಸ ಮಾಡದೇ ಬಿಲ್ ಮಾಡಿಕೊಂಡಿರುವ 100% ಅಕ್ರಮ ಪಕ್ಷ ಕಾಂಗ್ರೆಸ್: ಲಕ್ಷ್ಮಣ ಸವದಿ

    Live Tv
    [brid partner=56869869 player=32851 video=960834 autoplay=true]

  • ʼPAY CMʼ ಪೋಸ್ಟರ್ ಅಂಟಿಸಿದ ಪ್ರಕರಣ ಸಿಸಿಬಿಗೆ ವರ್ಗಾವಣೆ

    ʼPAY CMʼ ಪೋಸ್ಟರ್ ಅಂಟಿಸಿದ ಪ್ರಕರಣ ಸಿಸಿಬಿಗೆ ವರ್ಗಾವಣೆ

    ಬೆಂಗಳೂರು: ಅಸೆಂಬ್ಲಿ ಚುನಾವಣೆಗೆ ಆರು ತಿಂಗಳಿರುವಾಗಲೇ ರಾಜ್ಯ ರಾಜಕೀಯ ಕಾವೇರಿದೆ. ಬಿಜೆಪಿ (BJP) ಸರ್ಕಾರದ ವಿರುದ್ಧ 40% ಕಮೀಷನ್ ಆರೋಪ ಮಾಡ್ತಿರುವ ಕಾಂಗ್ರೆಸ್ (Congress), ಈ ವಿಚಾರದಲ್ಲಿ ದಿನಕ್ಕೊಂದು ಅಸ್ತ್ರ ಪ್ರಯೋಗಿಸಿ ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಲು ಪ್ರಯತ್ನ ನಡೆಸಿದೆ. ಇಂದು ಯುಪಿಐ ಪೇಮೆಂಟ್ (UPI Payment) ಆಪ್ `ಪೇಟಿಎಂ” ಮಾದರಿಯಲ್ಲಿ `ಪೇ ಸಿಎಂ’ (PayCM) Poster ಪೋಸ್ಟರ್‌ಗಳನ್ನು ಅಂಟಿಸಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಚಾಟಿ ಬೀಸಿದೆ. ಇತ್ತ ಪೋಸ್ಟರ್ ಅಭಿಯಾನವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಜೆಪಿ ಸರ್ಕಾರ ಪೋಸ್ಟರ್ ಅಂಟಿಸಿದ ಪ್ರಕರಣವನ್ನು ಸಿಸಿಬಿಗೆ (CCB) ವರ್ಗಾಯಿಸಿದೆ.

    ಉದ್ಯೋಗಾಕಾಂಕ್ಷಿಗಳನ್ನು ಮುಂದಿಟ್ಟುಕೊಂಡು ಲಂಚ ತಗೊಳಿ. ಕೆಲಸ ಕೊಡಿ ಅಭಿಯಾನ ನಡೆಸಿದ್ದ ಕಾಂಗ್ರೆಸ್, ಇದೀಗ ಯುಪಿಐ ಪೇಮೆಂಟ್ ಆಪ್ `ಪೇಟಿಎಂ” ಮಾದರಿಯಲ್ಲಿ `ಪೇ ಸಿಎಂ’ ಪೋಸ್ಟರ್‌ಗಳನ್ನು ಸಿಎಂ ಓಡಾಡೋ ಕಡೆ ಅಂಟಿಸಿದೆ. ಸಿಎಂ ಬೊಮ್ಮಾಯಿ ಫೋಟೋ ಒಳಗೊಂಡಿರುವ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿದ್ರೇ, ಇತ್ತೀಚಿಗಷ್ಟೇ ಕಾಂಗ್ರೆಸ್ ಆರಂಭಿಸಿದ್ದ `40% ಪರ್ಸೆಂಟ್ ಸರ್ಕಾರ್’ ವೆಬ್‍ಸೈಟ್ ಓಪನ್ ಆಗುತ್ತದೆ. ಸರ್ಕಾರದ ಭ್ರಷ್ಟಾಚಾರಗಳ ಬಗ್ಗೆ ಈ ವೆಬ್‍ಸೈಟ್‍ನಲ್ಲಿ ದೂರು ಕೂಡ ನೀಡಬಹುದಾಗಿದೆ. `ಪೇ ಸಿಎಂ’ ಪೋಸ್ಟರ್‌ಗಳು ಸೋಷಿಯಲ್ ಮೀಡಿಯಾದಲ್ಲಿಯೂ ವೈರಲ್ ಆಗಿದೆ. ಕೇವಲ ಒಂದೇ ದಿನದಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚು ಮಂದಿ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿದ್ದಾರೆ. ಈ ಬೆಳವಣಿಗೆ ಆಡಳಿತ ಪಕ್ಷವನ್ನು ತೀವ್ರ ಮುಜುಗರಕ್ಕೀಡುಮಾಡಿದೆ. ನಗರದ ಹತ್ತಕ್ಕೂ ಹೆಚ್ಚು ಕಡೆ ಪೋಸ್ಟರ್‌ಗಳನ್ನು ಕಿಡಿಗೇಡಿಗಳು ಅಂಟಿಸಿದ್ದರು. ಈ ಸಂಬಂಧ ಹಲವು ಠಾಣೆಗಳಲ್ಲಿ ಎಫ್.ಐ.ಆರ್ ದಾಖಲಾಗಿತ್ತು. ಇದನ್ನೂ ಓದಿ: ಭ್ರಷ್ಟಾಚಾರ ಮುಗಿಸಲು ನಾವು ಬಂದಿದ್ದೇವೆ – ಬಿಜೆಪಿ, ಕಾಂಗ್ರೆಸ್ ನಡುವೆ ವಾಕ್ಸಮರ

    ಸದಾಶಿವನಗರ, ಹೈಗ್ರೌಂಡ್ಸ್, ಶೇಷಾದ್ರಿಪುರಂ, ಭಾರತೀನಗರ ಸೇರಿದಂತೆ ಐದಕ್ಕೂ ಹೆಚ್ಚು ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು. ಈ ಎಲ್ಲಾ ಪ್ರಕರಣಗಳನ್ನು ಸಿಸಿಬಿಗೆ ವರ್ಗಾಯಿಸಿ ತನಿಖೆಗೆ ಆದೇಶಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶಸಿದ್ದು, ಪ್ರಕರಣ ವರ್ಗಾವಣೆ ಆಗುತ್ತಿದ್ದಂತೆ ಸಿಸಿಬಿ ಪೊಲೀಸರು ಮಾಹಿತಿ ಪಡೆದಿದ್ದಾರೆ. ಇದನ್ನೂ ಓದಿ: PayCM ಪೋಸ್ಟರ್‌ಗೆ ಸಿಎಂ ಗರಂ – ಎಫ್‌ಐಆರ್‌ ದಾಖಲು

    ಇಂದು ಬೆಳಗ್ಗೆ ಪೇ ಸಿಎಂ ಮಾಧ್ಯಮಗಳಲ್ಲಿ ವರದಿ ಆಗುತ್ತಲೇ ಸಿಎಂ ಬೊಮ್ಮಾಯಿ (Basavaraj Bommai) ಗರಂ ಆಗಿದ್ದಾರೆ. ಗುಪ್ತಚರ ಪಡೆ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಏನ್ ಮಾಡ್ತಿದ್ದೀರಾ. ಇದು ನಿಮ್ಮ ಗಮನಕ್ಕೆ ಬರಲಿಲ್ವಾ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಬೆನ್ನಲ್ಲೇ ಪೊಲೀಸರು, ಬಿಬಿಎಂಪಿ ಸಿಬ್ಬಂದಿ `ಪೇ ಸಿಎಂ’ ಪೋಸ್ಟರ್‌ಗಳನ್ನು ಹರಿಯೋ ಕೆಲಸ ಶುರು ಮಾಡ್ಕೊಂಡಿದ್ದಾರೆ. ಸಾರ್ವಜನಿಕ ಆಸ್ತಿ ನಾಶ, ನಗರದ ಸೌಂದರ್ಯಕ್ಕೆ ಅಡ್ಡಿ ಮಾಡಿದ ಆರೋಪದಡಿ ಪೊಲೀಸರು ಐದು ಕಡೆ ಕೇಸ್ ದಾಖಲಿಸಿಕೊಂಡಿದ್ದಾರೆ. ಪೋಸ್ಟರ್ ಅಂಟಿಸಿದವರ ಪತ್ತೆಗೆ ಮುಂದಾಗಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಗಂಜಿ ಗಿರಾಕಿಗಳಿಂದ ದೂರವಿರಿ – ಬಿಜೆಪಿಯಿಂದ ರಿಡೂ ಸಿದ್ದರಾಮಯ್ಯ, ಇಡಿ ಡಿಕೆಶಿ ಅಭಿಯಾನ

    Live Tv
    [brid partner=56869869 player=32851 video=960834 autoplay=true]

  • 40 ಪರ್ಸೆಂಟ್‌ ಸರ್ಕಾರ ಅಣಕ – ಪೇಟಿಎಂ ಮಾದರಿಯಲ್ಲಿ ʻಪೇ ಸಿಎಂʼ ಪೋಸ್ಟರ್‌ ವೈರಲ್‌

    40 ಪರ್ಸೆಂಟ್‌ ಸರ್ಕಾರ ಅಣಕ – ಪೇಟಿಎಂ ಮಾದರಿಯಲ್ಲಿ ʻಪೇ ಸಿಎಂʼ ಪೋಸ್ಟರ್‌ ವೈರಲ್‌

    ಬೆಂಗಳೂರು: ಗುತ್ತಿಗೆದಾರರಿಂದ 40 ಪರ್ಸೆಂಟ್‌ ಕಮಿಷನ್‌ (40 Percent Commission) ಪಡೆಯುವ ಆರೋಪ ಹೊತ್ತಿರುವ ಸರ್ಕಾರದ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಭ್ರಷ್ಟಾಚಾರ ಆರೋಪ ಹೊತ್ತಿರುವ ಸರ್ಕಾರ ಅಣಕಿಸುವ ಪೋಸ್ಟರ್‌ನ್ನು ನಗರದ ಹಲವೆಡೆ ಅಂಟಿಸಲಾಗಿದೆ. ಪೇಟಿಎಂ (Paytm) ಮಾದರಿಯಲ್ಲೇ ಪೇ ಸಿಎಂ (Paycm Poster) ಎಂಬ ಪೋಸ್ಟರ್‌ ವೈರಲ್‌ ಆಗಿದೆ.

    ನಗರದ ಜಯಮಹಲ್‌ ರಸ್ತೆ, ಇಂಡಿಯನ್ ಎಕ್ಷ್‌ಪ್ರೆಸ್‌ ಬಳಿ ಗೋಡೆಗೆ ಪೇ ಸಿಎಂ ಎಂದು ಬಸವರಾಜ ಬೊಮ್ಮಾಯಿ (Basavaraj Bommai) ಅವರ ಭಾವಚಿತ್ರವಿರುವ ಪೋಸ್ಟರ್‌ ಅಂಟಿಸುವ ಮೂಲಕ ಭ್ರಷ್ಟ ಸರ್ಕಾರ ಎಂದು ಅಣಕಿಸಲಾಗಿದೆ. 40% accepted here ಎಂದು ಪೋಸ್ಟರ್‌ನಲ್ಲಿ ಒಕ್ಕಣೆ ಬರೆಯಲಾಗಿದೆ. ಇದನ್ನೂ ಓದಿ: ಮತ್ತೆ 40 ಪರ್ಸೆಂಟ್ ಕಮಿಷನ್ ದಂದೆ ಸದ್ದು – SC, ST ಗುತ್ತಿಗೆದಾರರಿಂದಲೂ ಆರೋಪ

    ಪೇಟಿಎಂ ಮಾದರಿಯಲ್ಲಿ ಪೇ ಸಿಎಂ ಎಂದು ಕ್ಯೂಆರ್ ಕೋಡ್ ಮೇಲೆ ಸಿಎಂ ಬಸವರಾಜ ಬೊಮ್ಮಾಯಿ‌ ಫೋಟೋ ಹಾಕಲಾಗಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪದ ದೂರು ನೀಡಲು ಸಹಾಯವಾಣಿ ನಂಬರ್ ಹಾಕಿರುವ ಪೋಸ್ಟರ್‌ನ್ನು ಬೆಂಗಳೂರಿನ ಹಲವೆಡೆ ಅಂಟಿಸಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದ ಬಳಿಯೂ ಪೋಸ್ಟರ್ ಹಾಕಲಾಗಿದೆ.

    ಇದನ್ನು ಸ್ಕ್ಯಾನ್‌ ಮಾಡಿದರೆ 40% ಸ್ಕ್ಯಾಮ್ ಸ್ಟಾರ್ಸ್ ಎನ್ನುವ ಪೇಜ್‌ ಓಪನ್‌ ಆಗುತ್ತದೆ. ರೋಡ್ ಸ್ಕ್ಯಾಮ್, ಬಿಟ್‌ಕಾಯಿನ್ ಸ್ಕ್ಯಾಮ್, ಪಿಎಸ್‌ಐ ಸ್ಕ್ಯಾಮ್ ಎನ್ನುವ ಪೇಜ್‌ ಬರುತ್ತದೆ. ಸ್ಕ್ಯಾನ್ ಮಾಡಿದವರ ಸಂಖ್ಯೆ ಇಲ್ಲಿಯವರೆಗೆ 95,428 ಆಗಿದೆ. ಸ್ಕ್ಯಾನ್ ಮಾಡಿದ ಕೂಡಲೇ ಅಭಿಯಾನಕ್ಕೆ ಆ್ಯಡ್ ಆಗಿದ್ದೀರಿ ಎಂದು ಮೆಸೇಜ್ ಬರುತ್ತದೆ. ಇದನ್ನೂ ಓದಿ: 40 ಪರ್ಸೆಂಟ್‌ ಸರ್ಕಾರದಲ್ಲಿ 3ನೇ ಸಿಎಂ ಸೀಟು ಹತ್ತುವ ಕಾಲ ಬಂದಿದೆ: ಬೊಮ್ಮಾಯಿ ಕಾಲೆಳೆದ ಕಾಂಗ್ರೆಸ್‌

    ಸರ್ಕಾರ ಗುತ್ತಿಗೆದಾರರಿಂದ 40 ಪರ್ಸೆಂಟ್‌ ಕಮಿಷನ್‌ ಪಡೆಯುತ್ತದೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘದವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದರು. ಈ ಬಗ್ಗೆ ಸೂಕ್ತ ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದರು. ಇತ್ತೀಚೆಗೆ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ (Santosh patil) ಕೂಡ ಕಮಿಷನ್‌ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಗ ಸಚಿವರಾಗಿದ್ದ ಈಶ್ವರಪ್ಪ (K.S.Eshwarappa) ಅವರ ವಿರುದ್ಧ ಸಂತೋಷ್‌ ಗಂಭೀರ ಆರೋಪ ಮಾಡಿದ್ದರು. ನಂತರ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು.

    Live Tv
    [brid partner=56869869 player=32851 video=960834 autoplay=true]