Tag: pc shekar

  • ಪಿ.ಸಿ ಶೇಖರ್ ನಿರ್ದೇಶನ ಮಹಾನ್ ಚಿತ್ರದಲ್ಲಿ ಮಿತ್ರ ವಿಶೇಷ ಪಾತ್ರ

    ಪಿ.ಸಿ ಶೇಖರ್ ನಿರ್ದೇಶನ ಮಹಾನ್ ಚಿತ್ರದಲ್ಲಿ ಮಿತ್ರ ವಿಶೇಷ ಪಾತ್ರ

    ನ್ನಡದಲ್ಲಿ (Kannada) ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಪಿ.ಸಿ.ಶೇಖರ್ (PC Shekar) ನಿರ್ದೇಶನದ, ಪ್ರತಿಷ್ಠಿತ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ಅವರು ನಿರ್ಮಿಸುತ್ತಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ವಿಜಯ ರಾಘವೇಂದ್ರ (Vijay Raghavendra) ನಾಯಕರಾಗಿ ನಟಿಸುತ್ತಿರುವ ಮಹಾನ್ (Mahan) ಚಿತ್ರದ ಪ್ರಮುಖಪಾತ್ರದಲ್ಲಿ ಹೆಸರಾಂತ ನಟ ಮಿತ್ರ (Mithra) ಅಭಿನಯಿಸುತ್ತಿದ್ದಾರೆ. “ಮಹಾನ್” ಚಿತ್ರದ ಪಾತ್ರದ ಕುರಿತು ಮಿತ್ರ ತಮ್ಮ ಮಾತುಗಳ ಮೂಲಕ ತಿಳಿಸಿದ್ದಾರೆ.  ಇದನ್ನೂ ಓದಿ: ಎಷ್ಟೇ ದುಡ್ಡು ಕೊಟ್ರೂ `ಆ’ ಕೆಲಸ ಮಾಡಲ್ಲವೆಂದ ರಶ್ಮಿಕಾ!

    ನಾನು “ರಾಗ” ಚಿತ್ರದ ನಂತರ ನಿರ್ದೇಶಕ ಪಿ.ಸಿ.ಶೇಖರ್ ಅವರೊಟ್ಟಿಗೆ ಕೆಲಸ ಮಾಡುತ್ತಿದ್ದೇನೆ. “ರಾಗ” ಚಿತ್ರದ ನನ್ನ ಪಾತ್ರಕ್ಕೆ ಎಲ್ಲಾ ಕಡೆ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ “ಮಹಾನ್” ಚಿತ್ರದಲ್ಲೂ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದೇನೆ. ನಿರ್ದೇಶಕರು ಈ ಚಿತ್ರದ ಕಥೆ ಹೇಳಿದ ತಕ್ಷಣ ಇಷ್ಟವಾಗಿ ನಟಿಸಲು ಒಪ್ಪಿಕೊಂಡೆ. ನಿರ್ಮಾಪಕ ಪ್ರಕಾಶ್ ಬುದ್ದೂರು ಅವರು ಇಂತಹ ಉತ್ತಮ ಕಥಾಹಂದರ ಹೊಂದಿರುವ ಚಿತ್ರವನ್ನು ನಿರ್ಮಾಣ ಮಾಡುತ್ತಿರುವುದು ಹಾಗೂ ನಟ ವಿಜಯ ರಾಘವೇಂದ್ರ ಬಹಳ ಅದ್ಭುತವಾದ ನಟ. ಅವರೊಂದಿಗೆ ನಟಿಸುತ್ತಿರುವಿದು ಬಹಳ ಖುಷಿಯಾಗಿದೆ. ಸಾಮಾಜಿಕ ಕಳಕಳಿಯುಳ್ಳ ಕಥಾಹಂದರ ಹೊಂದಿರುವ ಚಿತ್ರವನ್ನು ಪಿ.ಸಿ.ಶೇಖರ್ ನಿರ್ದೇಶಿಸುತ್ತಿದ್ದು, ಈ ಚಿತ್ರದಲ್ಲಿ ವಿಜಯ ರಾಘವೇಂದ್ರ ಅವರಿಗೆ ಹೇಳಿ ಮಾಡಿಸಿದ ಪಾತ್ರವಿದೆ. ನನ್ನ ಪಾತ್ರ ಕೂಡ ನಾಯಕನ ಪಾತ್ರದ ಜೊತೆಗೆ ಸಾಗುತ್ತದೆ. ನಮ್ಮಿಬ್ಬರ ಕಾಂಬಿನೇಶನ್ ಪ್ರೇಕ್ಷಕರಿಗೆ ಇಷ್ಟವಾಗುತ್ತದೆ ಎನ್ನುತ್ತಾರೆ ನಟ ಮಿತ್ರ. ಇದನ್ನೂ ಓದಿ: `ರಾಮ್‌ಚರಣ್‌ಗೆ ಚಿತ್ರ ಮಾಡಿ ಕೆಟ್ಟೆ’ ಎಂದ ಪ್ರೊಡ್ಯೂಸರ್

    ನನ್ನ ಹಾಗೂ ಮಿತ್ರ ಅವರ ಕಾಂಬಿನೇಶನ್ ನಲ್ಲಿ ಬಂದ “ರಾಗ” ಚಿತ್ರ ಇಂದು ಕೂಡ ಜನಪ್ರಿಯ. ಆನಂತರ ನನ್ನ ನಿರ್ದೇಶನದ ಚಿತ್ರಗಳಲ್ಲಿ ಮಿತ್ರ ಅವರು ನಟಿಸಿಲ್ಲ. ಏಕೆಂದರೆ, ಮಿತ್ರ ಅವರು ಸಣ್ಣ ಪುಟ್ಟ ಪಾತ್ರದಲ್ಲಿ ನನ್ನ ನಿರ್ದೇಶನದ ಚಿತ್ರದಲ್ಲಿ ಅಭಿನಯಿಸುವುದು ನನಗೆ ಇಷ್ಟವಿಲ್ಲ. “ರಾಗ” ಚಿತ್ರದ ಅಭಿನಯಕ್ಕಾಗಿ ಮಿತ್ರ ಅವರಿಗೆ ರಾಜ್ಯ ಪ್ರಶಸ್ತಿ ಬಂದಿತ್ತು. ಆ ಚಿತ್ರದಲ್ಲಿ ಅಂತಹ ಅದ್ಭುತ ನಟನೆ ನೀಡಿದ್ದ ಮಿತ್ರ ಅವರಿಗೆ “ಮಹಾನ್” ಚಿತ್ರದಲ್ಲೂ ಎಲ್ಲರ ನೆನಪಿನಲ್ಲುಳಿಯುವಂತ ಪಾತ್ರ ಇರುತ್ತದೆ. ಚಿತ್ರಕಥೆ ಬರೆಯುವಾಗ ಈ ಪಾತ್ರಕ್ಕೆ ಮಿತ್ರ ಅವರೆ ಸೂಕ್ತ ಎನಿಸಿತು. ಅವರಿಗೆ ಸರಿಯಾದ ಪಾತ್ರವಿದು. ಇಡೀ ಚಿತ್ರ ಪೂರ್ತಿ ನಾಯಕನ ಪಾತ್ರದ ಜೊತೆಗೆ ಸಾಗುವ ಪಾತ್ರ ಅವರದು. ಕುರುಕ್ಷೇತ್ರದಲ್ಲಿ ಅರ್ಜುನನ ಜೊತೆಗೆ ಶ್ರೀಕೃಷ್ಣ ಸದಾ ಇರುತ್ತಾನೆ. ಆ ಸ್ಪೂರ್ತಿಯಿಂದ ಈ ಎರಡು ಪಾತ್ರಗಳನ್ನು ಹೆಣೆಯಲಾಗಿದೆ. “ಮಹಾನ್” ಚಿತ್ರದ ಮಿತ್ರ ಅವರ ಪಾತ್ರ ಕೂಡ ಎಲ್ಲರ ಮನಸ್ಸಿಗೂ ಇಷ್ಟವಾಗುತ್ತದೆ ಎಂದು ನಿರ್ದೇಶಕ ಪಿ.ಸಿ.ಶೇಖರ್ ತಿಳಿಸಿದ್ದಾರೆ.ದನ್ನೂ ಓದಿಎಷ್ಟೇ ದುಡ್ಡು ಕೊಟ್ರೂ `ಆ’ ಕೆಲಸ ಮಾಡಲ್ಲವೆಂದ ರಶ್ಮಿಕಾ!

    ತಮ್ಮ ಸಂಸ್ಥೆಯ ಮೊದಲ ನಿರ್ಮಾಣದ ಚಿತ್ರದಲ್ಲಿ ಮಿತ್ರ ಅವರಂತಹ ಅನುಭವಿ ನಟರು ಅಭಿನಯಿಸುತ್ತಿರುವುದಕ್ಕೆ ನಿರ್ಮಾಪಕ ಪ್ರಕಾಶ್ ಬುದ್ದೂರು ಸಂತಸ ವ್ಯಕ್ತಪಡಿಸಿದ್ದಾರೆ.

  • ‘ಕಡ್ಡಿಪುಡಿ’ ಚಂದ್ರು ವಿರುದ್ಧ ಠಾಣೆ ಮೆಟ್ಟಿಲೇರಿದ ‘ರೊಮಿಯೋ’ ಖ್ಯಾತಿಯ ಪಿಸಿ ಶೇಖರ್

    ‘ಕಡ್ಡಿಪುಡಿ’ ಚಂದ್ರು ವಿರುದ್ಧ ಠಾಣೆ ಮೆಟ್ಟಿಲೇರಿದ ‘ರೊಮಿಯೋ’ ಖ್ಯಾತಿಯ ಪಿಸಿ ಶೇಖರ್

    ನ್ನಡದ ಸಿನಿಮಾರಂಗದ ನಿರ್ಮಾಪಕ ಕಡ್ಡಿಪುಡಿ ಚಂದ್ರು (Kadipudi Chandru) ವಿರುದ್ಧ ‘ರೊಮಿಯೋ’ ಖ್ಯಾತಿಯ ನಿರ್ದೇಶಕ ಪಿಸಿ ಶೇಖರ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಇಬ್ಬರೂ ಡಾರ್ಲಿಂಗ್ ಕೃಷ್ಣ ನಟನೆಯ ‘ಲವ್ ಬರ್ಡ್ಸ್’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಸಿನಿಮಾ ರಿಲೀಸ್ ಆಗಿ ಅನೇಕ ದಿನಗಳ ಬಳಿಕ ಇಬ್ಬರೂ ಹಣಕಾಸಿನ ವಿಚಾರಕ್ಕೆ ಕಿತ್ತಾಡಿಕೊಂಡಿದ್ದು, ಈಗ ಠಾಣೆ ಮೆಟ್ಟಿಲೇರಿದ್ದಾರೆ. ತನಗೆ ಬರಬೇಕಾದ ಸಂಭಾವನೆ ನೀಡಿಲ್ಲ ಎಂದು ನಿರ್ಮಾಪಕ ಚಂದ್ರು ವಿರುದ್ಧ ನಿರ್ದೇಶಕ ಪಿಸಿ ಶೇಖರ್ ಆರೋಪಿಸಿದ್ದಾರೆ. ಸಂಭಾವನೆ ಕೇಳಿದ್ದಕ್ಕೆ ‘ಕಡ್ಡಿಪುಡಿ’ ಚಂದ್ರು ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎಂದು ಪಿಸಿ. ಶೇಖರ್ ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ:ಭಾವಿಪತಿಗೆ ಸಿಹಿಮುತ್ತು ಕೊಟ್ಟು, ನಿಶ್ಚಿತಾರ್ಥದ ಸುದ್ದಿ ಹಂಚಿಕೊಂಡ ಅನುರಾಗ್‌ ಕಶ್ಯಪ್‌ ಪುತ್ರಿ

    ಈ ವರ್ಷ ತೆರೆಕಂಡ ಡಾರ್ಲಿಂಗ್ ಕೃಷ್ಣ (Darling Krishna) ಮತ್ತು ಮಿಲನಾ ನಟನೆಯ ‘ಲವ್ ಬರ್ಡ್ಸ್’ (Love Birds) ಸಿನಿಮಾದಲ್ಲಿ ನಿರ್ದೇಶಕರಾಗಿ ಪಿಸಿ ಶೇಖರ್ (Pc Shekar) ಕೆಲಸ ಮಾಡಲು 20 ಲಕ್ಷ ರೂಪಾಯಿಗೆ ಅಗ್ರಿಮೆಂಟ್ ಆಗಿತ್ತು. ಅಗ್ರಿಮೆಂಟ್‌ಗೆ ತಕ್ಕಂತೆ ಪಿಸಿ ಶೇಖರ್ ಕೆಲಸ ಮಾಡಿದ್ದಾರೆ. ಈ ನಡುವೆ ಸಿನಿಮಾ ಎಡಿಟಿಂಗ್ ಸಲುವಾಗಿ ಐದು ಲಕ್ಷ ರೂಪಾಯಿ ಹೆಚ್ಚುವರಿ ಖರ್ಚು ಆಗಿತ್ತು. ಒಟ್ಟು 25 ಲಕ್ಷ ರೂಪಾಯಿ ಹಣವನ್ನು ನಿರ್ದೇಶಕ ಪಿಸಿ ಶೇಖರ್ ಅವರಿಗೆ ಕಡ್ಡಿಪುಡಿ ಚಂದ್ರು ನೀಡಬೇಕಿತ್ತು. ಆದರೆ ಅವರು ಕೊಟ್ಟಿರುವುದು 6.5 ಲಕ್ಷ ರೂಪಾಯಿ ಮಾತ್ರ. ಬಾಕಿ ಹಣ ಕೇಳಿದ್ದಕ್ಕೆ ಕೆಟ್ಟ ಪದಗಳಿಂದ ನಿಂದಿಸಿದ್ದಾರೆ. ತಮ್ಮಿಂದ ಕ್ಲಿಯರೆನ್ಸ್ ಪಡೆದಿರುವುದಾಗಿ ಚಂದ್ರು ನಕಲಿ ಸಹಿ ಮಾಡಿದ್ದಾರೆ ಎಂದು ನಿರ್ದೇಶಕ ಪಿಸಿ ಶೇಖರ್ ಆರೋಪ ಮಾಡಿದ್ದಾರೆ.

    ದೂರಿನಲ್ಲಿ ಹದಿನೆಂಟೂವರೆ ಲಕ್ಷ ರೂಪಾಯಿ ಹಣ ಕೊಟ್ಟಿಲ್ಲ. ನಕಲಿ ಸಹಿ ಮಾಡಿ ನನಗೆ ಕೊಡಬೇಕಿದ್ದ ಹಣ ನೀಡಿಲ್ಲ. ನನ್ನ ಬಗ್ಗೆಯೇ ಕೆಟ್ಟದಾಗಿ ಚಿತ್ರರಂಗದಲ್ಲಿ ಮಾತನಾಡಿದ್ದಾರೆ. ಹಲವಾರು ನಿರ್ಮಾಪಕರ ಬಳಿ ಸಿನಿಮಾದಲ್ಲಿ ಅವಕಾಶ ನೀಡದಂತೆ ಬೆದರಿಸಿದ್ದಾರೆ ಎಂದು ಪಿ.ಸಿ. ಶೇಖರ್ ದೂರಿನಲ್ಲಿ ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

    ಈ ವಿಚಾರಕ್ಕೆ ಸಂಬಂಧಿಸಿದಂತೆ ಚಂದ್ರು ಅವರು ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಅವರಿಗೆ ಎಷ್ಟು ಸಂಭಾವನೆ ಕೊಡುತ್ತೇನೆ ಎಂದು ಹೇಳಿದ್ದೆನೋ, ಅಷ್ಟು ನಾನು ಕೊಟ್ಟಿದ್ದೇನೆ. ಈ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ತಿಳಿಸಿದ್ದೇನೆ. ಅಲ್ಲಿಯೂ ಚರ್ಚೆ ನಡೆಯುತ್ತಿದೆ. ಹಾಗೆಯೇ ಸದ್ಯ ನಾನು ಇದನ್ನು ಕಾನೂನು ಮೂಲಕ ಬಗೆಹರಿಸಿಕೊಳ್ಳುತ್ತೇನೆ ಎಂದು ಮಾತನಾಡಿದ್ದಾರೆ.