Tag: PDF

  • ಶಿವಕುಮಾರ್ ಪಿಎಫ್ಐ ಸೇರಿದ್ರೆ ಒಳ್ಳೆದು:  ಸಿ.ಸಿ ಪಾಟೀಲ್

    ಶಿವಕುಮಾರ್ ಪಿಎಫ್ಐ ಸೇರಿದ್ರೆ ಒಳ್ಳೆದು: ಸಿ.ಸಿ ಪಾಟೀಲ್

    ಗದಗ: ಡಿಕೆಶಿ ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ (ಪಿಎಫ್ಐ) ಸೇರಿದರೆ ಒಳ್ಳೆಯದು ಎಂದು ಹೇಳುವ ಮೂಲಕ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಸಚಿವ ಸಿಸಿ. ಪಾಟೀಲ್ ಹರಿಹಾಯ್ದಿದ್ದಾರೆ.

    ಬೆಂಗಳೂರಿನಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರ ಹರಿದ ವಿಚಾರಕ್ಕೆ ಸಂಬಂಧಿಸಿದಂತೆ ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಲಾಪಾನಿ ಶಿಕ್ಷೆ ಅಂದರೆ ಡಿಕೆಶಿಗೆ ಗೊತ್ತಿದೆಯಾ? ಟಿಪ್ಪು ಸುಲ್ತಾನನ ಕೊಡುಗೆ ಏನಿದೆ? ಟಿಪ್ಪು ಸುಲ್ತಾನ್ ಭಾವಚಿತ್ರ ಹರಿದವರನ್ನು ಬಂದಿಸಬೇಕಾ? ಸಾವರ್ಕರ್ ಭಾವಚಿತ್ರ ತೆರವು ಮಾಡಿದವರನ್ನು ಮೆರವಣಿಗೆ ಮಾಡಬೇಕಾ? ತುಷ್ಟಿಕರಣಕ್ಕೆ ಇತಿಮಿತಿ ಇರಬೇಕು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮುಸ್ಲಿಂ ಕಾನೂನುಗಳು ಕುರಾನ್‌ಗೆ ವಿರುದ್ಧವಾಗಿವೆ – ರಶ್ದಿ ಮೇಲಿನ ದಾಳಿ ಬಗ್ಗೆ ಕೇರಳ ರಾಜ್ಯಪಾಲ ಹೇಳಿದ್ದಿಷ್ಟು

    tippu

    ಇಂತವರ ಕೈಗೆ ದೇಶ, ರಾಜ್ಯ ಸಿಕ್ಕರೆ ಏನಾಗುತ್ತದೆ. ಕೇವಲ ಓಟ್ ಬ್ಯಾಂಕ್‍ಗಾಗಿ ಮತ್ತೊಮ್ಮೆ ಶಾಸಕರಾಗಲು ರಾಜ್ಯ, ದೇಶವನ್ನು ಅಡವಿಡುವ ಕೆಲಸ ಮಾಡಬಾರದು. ಸಾವರ್ಕರ್ ಅವರ ಹೋರಾಟದ ಪ್ರತಿಫಲವಾಗಿಯೇ ಇಂದು ಸಾವಿರಾರು ಕೋಟಿ ಒಡೆಯರಾಗಿ ಮೆರೆಯುತ್ತಿದ್ದಾರೆ ಅಂತ ಡಿಕೆಶಿ ವಿರುದ್ದ ಪರೋಕ್ಷವಾಗಿ ಚಾಟಿ ಬೀಸಿದ್ದಾರೆ. ಇದನ್ನೂ ಓದಿ: ತಿರಂಗಾ ಯಾತ್ರೆಗೆ ಬಂದವರಿಗೆ ಫ್ರೀ ಪೆಟ್ರೋಲ್, ಹೆಲ್ಮೆಟ್ ಆಫರ್ – ಕೊಡದಿದ್ದಕ್ಕೆ ಬೈಕ್ ಸವಾರರ ಗಲಾಟೆ

    ಈ ವೇಳೆ ನಗರಸಭೆ ಅಧ್ಯಕ್ಷೆ ಉಷಾ ದಾಸರ, ಎಮ್.ಎಸ್ ಕರಿಗೌಡ್ರ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸಿದ್ದು ಪಲ್ಲೆದ, ಬಿಜೆಪಿ ಮುಖಂಡರಾದ ಅನಿಲ ಮೆಣಸಿನಕಾಯಿ, ರಾಜು ಕುರುಡಗಿ ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]