Tag: Pedestrians

  • ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮೇಲಕ್ಕೆ ಹಾರಿದ ಪಾದಚಾರಿಗಳು – ಓರ್ವ ಸಾವು, ನಿರ್ದೇಶಕ ಅರೆಸ್ಟ್

    ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮೇಲಕ್ಕೆ ಹಾರಿದ ಪಾದಚಾರಿಗಳು – ಓರ್ವ ಸಾವು, ನಿರ್ದೇಶಕ ಅರೆಸ್ಟ್

    ಬೆಂಗಳೂರು: ಕಿರುತೆರೆ ಅಸಿಸ್ಟೆಂಟ್ ಡೈರೆಕ್ಟರ್ ಒಬ್ಬ ಕಾರಿನಲ್ಲಿ ವೇಗವಾಗಿ ಬಂದು ನಾಲ್ವರು ಪಾದಾಚಾರಿಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಕತ್ರಿಗುಪ್ಪೆ ಬಳಿ ನಡೆದಿದೆ. ಘಟನೆಯಲ್ಲಿ ಒಬ್ಬ ಪಾದಾಚಾರಿ ನಾವನ್ನಪ್ಪಿದ್ದಾನೆ.

    ಶುಕ್ರವಾರ ಶೂಟಿಂಗ್ ಮುಗಿಸಿಕೊಂಡು ಬನಶಂಕರಿ ಕಡೆಯಿಂದ ಕಾರಿನಲ್ಲಿ ವೇಗವಾಗಿ ಬಂದ ಕಿರುತೆರೆ ಅಸಿಸ್ಟೆಂಟ್ ಡೈರೆಕ್ಟರ್ ಮುಖೇಶ್, ನಾಲ್ವರು ಪಾದಾಚಾರಿಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಪಾದಾಚಾರಿಗಳು ಮೇಲಕ್ಕೆ ಚಿಮ್ಮಿದ್ದಾರೆ. ಮಾತ್ರವಲ್ಲದೇ ಸ್ಥಳದಲ್ಲೇ ಇದ್ದ ಇನ್ನೊಂದು ಕಾರು ಹಾಗೂ ಬೈಕಿಗೂ ಡಿಕ್ಕಿಯಾಗಿದೆ. ಇದನ್ನೂ ಓದಿ: ಬಸ್‍ನಲ್ಲಿ ಕೊಡೆ ಹಿಡಿದು ಕುಳಿತ ಪ್ರಯಾಣಿಕರು

    ಇಟ್ಟಮಡು ಬಳಿ ಇಳಿಜಾರು ಇದ್ದ ಕಾರಣ ಕಾರು ವೇಗವಾಗಿ ಬಂದು ಪಾದಾಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸುರೇಶ್ ಮೃತಪಟ್ಟಿದ್ದು, ಕಾರು ಚಾಲಕ ಮುಖೇಶ್ ನಿರ್ಲಕ್ಷ್ಯ ಹಾಗೂ ವೇಗದ ಚಾಲನೆಯೇ ಕಾರಣ ಎಂದು ಪಶ್ಚಿಮ ವಿಭಾಗ ಸಂಚಾರಿ ಡಿಸಿಪಿ ಕುಲದೀಪ್ ಕುಮಾರ್ ಜೈನ್ ಹೇಳಿದ್ದಾರೆ. ಇದನ್ನೂ ಓದಿ: ಶಾಸಕರೇ ಉದ್ಘಾಟಿಸಬೇಕೆಂದು ರಸ್ತೆಗೆ ಬೇಲಿ- ಸ್ಥಳೀಯರಿಂದ ತೆರವು

    ಗಾಯಾಳುಗಳಲ್ಲಿ ಮೂವರು ಕ್ಯಾಟರಿಂಗ್‌ನಲ್ಲಿ ಕೆಲಸ ಮಾಡುತ್ತಿದ್ದು, ಒಬ್ಬ ವಿದ್ಯಾರ್ಥಿ ಎಂಬುದು ತಿಳಿದುಬಂದಿದೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಚಾಲಕ ಮುಖೇಶ್‌ನನ್ನು ಪೊಲೀಸರು ಬಂಧಿಸಿದ್ದು, ಆತನ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

  • 60ಕ್ಕೂ ಹೆಚ್ಚು ಮಂದಿ ಜೀವಕ್ಕೆ ಕಂಟಕ ತಂದಿಟ್ಟ ಹುಚ್ಚು ನಾಯಿ!

    60ಕ್ಕೂ ಹೆಚ್ಚು ಮಂದಿ ಜೀವಕ್ಕೆ ಕಂಟಕ ತಂದಿಟ್ಟ ಹುಚ್ಚು ನಾಯಿ!

    ಸೇಲಂ: ಹುಚ್ಚು ಹಿಡಿದಿದ್ದ ಬೀದಿ ನಾಯಿಯೊಂದು ಬರೋಬ್ಬರಿ 60ಕ್ಕೂ ಹೆಚ್ಚು ಮಂದಿ ಪಾದಚಾರಿಗಳ ಮೇಲೆ ದಾಳಿ ನಡೆಸಿ, ಅವರನ್ನು ಆಸ್ಪತ್ರೆಯತ್ತ ಮುಖಮಾಡುವಂತೆ ಮಾಡಿರುವ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ.

    ಮೊದಲು ಕಿಚ್ಚಪಾಳ್ಯಂ ಪ್ರದೇಶದಲ್ಲಿ ಕಾಣಿಸಿಕೊಂಡ ಹುಚ್ಚು ನಾಯಿ ತನ್ನಷ್ಟಕ್ಕೆ ಬೀದಿ ಬೀದಿಗಳಲ್ಲಿ ಓಡಾಡುತ್ತಿತ್ತು. ಆದರೆ ಏಕಾಏಕಿ ಶುಕ್ರವಾರದಂದು ದಾರಿಹೋಕರಿಗೆ ಕಚ್ಚಿದೆ. ಬಳಿಕ ಸೇಲಂನ ಗಾಂಧಿ ಮಹಾನ್ ಪ್ರದೇಶ, ಕಲರಂಪಟ್ಟಿ, ಕುರಿಂಜಿನಗರ, ನಾರಾಯಣನ್ ನಗರ ಹಾಗೂ ಪಂಚಪಟ್ಟಿ ಪ್ರದೇಶಕ್ಕೆ ತೆರಳಿ ಸುಮಾರು 60ಕ್ಕೂ ಹೆಚ್ಚು ಮಂದಿ ಪಾದಚಾರಿಗಳಿಗೆ ಕಚ್ಚಿ ಹಲ್ಲೆ ಮಾಡಿದೆ.

    ಕಣ್ಣಿಗೆ ಕಂಡವರ ಮೇಲೆಲ್ಲಾ ಹುಚ್ಚು ನಾಯಿ ಎಗರಿ ಕಚ್ಚಿದಾಗ ರೊಚ್ಚಿಗೆದ್ದ ಸ್ಥಳೀಯರು, ತಕ್ಷಣ ನಾಯಿಯನ್ನು ಹೊಡೆದು ಕೊಂದಿದ್ದಾರೆ. ಮೊದಲು ಕಿಚ್ಚಪಾಳ್ಯಂ ಪ್ರದೇಶದಲ್ಲಿ ಓಡಾಡುತ್ತಿತ್ತು, ಆದರೆ ಏಕಾಏಕಿ ಈ ರೀತಿ ಕಚ್ಚಿ ನಾಗರೀಕರನ್ನು ಆಸ್ಪತ್ರೆ ಪಾಲು ಮಾಡಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಆ ಬಳಿಕ ನಾಯಿ ಕಡಿತಕ್ಕೆ ತುತ್ತಾದವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, 2 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಬೀದಿಗಳಲ್ಲಿ ನಾಯಿಗಳ ಕಾಟ ಹೆಚ್ಚಾಗಿದೆ ಎಂದು ದೂರು ನೀಡಿದ್ದರೂ ಸೇಲಂ ನಗರಪಾಲಿಕೆ ಕ್ಯಾರೆ ಎನ್ನುತ್ತಿಲ್ಲ. ಈ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ನಗರಪಾಲಿಕೆ ಸಿಬ್ಬಂದಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಪಾದಚಾರಿಗಳ ಮೇಲೆ ಹರಿದ ವ್ಯಾನ್-10 ಮಂದಿ ದುರ್ಮರಣ

    ಪಾದಚಾರಿಗಳ ಮೇಲೆ ಹರಿದ ವ್ಯಾನ್-10 ಮಂದಿ ದುರ್ಮರಣ

    ಒಟ್ಟಾವಾ: ಪಾದಚಾರಿಗಳ ಮೇಲೆ ವ್ಯಾನ್ ಹರಿದು ಸುಮಾರು 10 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಕೆನಡಾದ ದೊಡ್ಡ ನಗರ ಟೊರಾಂಟೋದಲ್ಲಿ ಸೋಮವಾರ ನಡೆದಿದೆ.

    ಘಟನೆಗೆ ಸಂಬಂಧಿಸಿದಂತೆ ಪೊಲೀಸರು 25 ವರ್ಷದ ಉತ್ತರ ಟೊರಾಂಟೋದ ನಿವಾಸಿ ಅಲೆಕ್ಸ್ ಮಿನಸ್ಸಿಯಾನ್ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

    ವಾಹನಗಳನ್ನು ಬಾಡಿಗೆ ನೀಡುವ ರೈಡರ್ ಸಂಸ್ಥೆಯ ವಾಹನ ಇದಾಗಿದ್ದು, ಜನನಿಬಿಡ ಪ್ರದೇಶದಲ್ಲಿ ಹಾಡಹಗಲೇ ಆರೋಪಿ ಬಿಳಿ ಬಣ್ಣದ ವ್ಯಾನೊಂದನ್ನು ಬಾಡಿಗೆ ಪಡೆದು ಈ ಕೃತ್ಯ ಎಸಗಿದ್ದಾನೆ. ಘಟನೆಯನ್ನು ಉದ್ದೇಶಪೂರ್ವಕವಾಗಿಯೇ ನಡೆಸಲಾಗಿದೆ ಅಂತ ಅಲ್ಲಿನ ಪೊಲೀಸ್ ಅಧಿಕಾರಿ ಮಾರ್ಕ್ ಸೌಂಡರ್ಸ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

    ಘಟನೆಯಲ್ಲಿ ಗಾಯಗೊಂಡ 15 ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಬಗ್ಗೆ ತೀವ್ರ ಕಾರ್ಯಾಚರಣೆ ನಡೆಯುತ್ತಿದ್ದು, ಶಂಕಿತನ ವಿಚಾರಣೆ ಮುಂದುವರೆದಿದೆ.

    ಪಾದಚಾರಿಗಳ ಮೇಲೆ ವಾಹನ ಹರಿದ ಸಂದರ್ಭದಲ್ಲಿ ವ್ಯಾನ್ ವಿಪರೀತ ವೇಗದಲ್ಲಿತ್ತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.