ಬೆಂಗಳೂರು: ಕುಡಿಯಲು ನೀರು ಕೊಡಲಿಲ್ಲ ಎಂದಿದ್ದಕ್ಕೆ ಪತ್ನಿ (Wife) ಮೇಲೆ ಪತಿ ಮಾರಣಾಂತಿಕ ಹಲ್ಲೆ ನಡೆಸಿದ್ದು, ಇದೀಗ ಪತ್ನಿ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ಪೀಣ್ಯದ (Peenya) ಬಳಿಯ ಚೊಕ್ಕಸಂದ್ರದಲ್ಲಿ ನಡೆದಿದೆ.
ಛೋಟೆಲಾಲ್ ಸಿಂಗ್ ಹಾಗೂ ಪ್ರೀತಿ ಸಿಂಗ್ ಇಬ್ಬರೂ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಸೆ.24 ರಂದು ಕುಡಿದು ಮನೆಗೆ ಬಂದ ಛೋಟೆಲಾಲ್ ಹೆಂಡತಿ ಬಳಿ ನೀರು ಕೇಳಿದ್ದ. ನಾನು ಕೆಲಸಕ್ಕೆ ಹೋಗ್ಬೇಕು, ನೀನೇ ನೀರು ತಗೊಂಡು ಕುಡಿ ಎಂದು ಪತ್ನಿ ಹೇಳಿದ್ದಳು ಎನ್ನಲಾಗಿದೆ.
ಇದರಿಂದ ಕೋಪಗೊಂಡ ಛೋಟೆಲಾಲ್ ಲಟ್ಟಣಿಗೆಯಿಂದ ಪತ್ನಿಯ ತಲೆಗೆ ಹೊಡೆದಿದ್ದ. ಈ ವೇಳೆ ಗಂಭೀರ ಗಾಯಗೊಂಡ ಪ್ರೀತಿ ಅಲ್ಲೇ ಕೋಮಾಗೆ ಜಾರಿದ್ದಳು. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೂಡ ನೀಡಲಾಗಿತ್ತು. ಆದ್ರೆ, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ.
ಇದೀಗ ಕೊಲೆ ಪ್ರಕರಣ ದಾಖಲಿಸಿಕೊಂಡ ಪೀಣ್ಯ ಪೊಲೀಸರು, ಆರೋಪಿ ಛೋಟೆಸಿಂಗ್‌ನನ್ನು ಬಂಧಿಸಿ, ತನಿಖೆ ಮುಂದುವರಿಸಿದ್ದಾರೆ.
ಬೆಂಗಳೂರು: ಬಿಎಂಟಿಸಿ (BMTC) ಎಲೆಕ್ಟ್ರಿಕ್ ಬಸ್ ಹೋಟೆಲ್ಗೆ ಡಿಕ್ಕಿಯಾದ ಪರಿಣಾಮ ಯುವತಿಯೊಬ್ಬಳು ಬಲಿಯಾಗಿರುವ ಪ್ರಕರಣ ಸಂಬಂಧ ಕಂಡಕ್ಟರ್ ಹಾಗೂ ಡ್ರೈವರ್ ವಿರುದ್ಧ ಪೀಣ್ಯ ಪೊಲೀಸ್ (Peenya Police) ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಏನಿದು ಪ್ರಕರಣ?
ಜುಲೈ 18ರಂದು ಬೆಳಗ್ಗೆ ಪೀಣ್ಯ (Peenya) 2ನೇ ಹಂತದಲ್ಲಿ ಬಸ್ ಡ್ರೈವರ್ ಮತ್ತು ಕಂಡಕ್ಟರ್ ನಡುವೆ ಜಗಳವಾಗಿತ್ತು. ಈ ವೇಳೆ ಡ್ರೈವರ್ ಬಸ್‌ನಿಂದ ಕೆಳಗಿಳಿದು ಹೋಗಿದ್ದ. ಈ ವೇಳೆ ಕಂಡಕ್ಟರ್ ಬಸ್ ಚಲಾಯಿಸಿದ್ದ. ಈ ಸಂದರ್ಭ ಬಸ್ ನಿಯಂತ್ರಣ ತಪ್ಪಿ, ಫುಟ್ಪಾತ್ ಏರಿ ಹೋಟೆಲ್ಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಹೋಟೆಲ್ ಬಳಿ ನಿಂತಿದ್ದ ಓರ್ವ ಯುವತಿ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದರು.
ಬೆಂಗಳೂರು: ಮದುವೆ ಆಗುವಾಗ ತೆಳ್ಳಗೆ ಸುಂದರವಾಗಿದ್ದೆ, ಈಗ ದಪ್ಪಗಾಗಿದ್ದೀಯಾ ಎಂದು ವ್ಯಕ್ತಿಯೊಬ್ಬ ತನ್ನ ಪತ್ನಿ (Wife), ಮಾವ ಹಾಗೂ ಮಗನ ಮೇಲೆ ಖಾರದ ಪುಡಿ ಎರಚಿ ಹಲ್ಲೆ ನಡೆಸಿರುವುದು ನಗರದ (Bengaluru) ನೆಲಗೆದರನಹಳ್ಳಿಯಲ್ಲಿ ನಡೆದಿದೆ.
ಹಲ್ಲೆ ನಡೆಸಿದ ಪತಿ ಪುಲಿ ಸಾಯಿಕುಮಾರ್ ವಿರುದ್ಧ ಪತ್ನಿ ದೂರು ದಾಖಲಿಸಿದ್ದಾಳೆ. ದೂರಿನಲ್ಲಿ, ಸೌಂದರ್ಯದ ವಿಚಾರಕ್ಕೆ ಪದೇ ಪದೇ ಪತಿ ಗಲಾಟೆ ಮಾಡುತ್ತಿದ್ದ. ಅಲ್ಲದೇ ವರದಕ್ಷಿಣೆ ವಿಚಾರಕ್ಕೂ ಜಗಳ ನಡೆಯುತ್ತಿತ್ತು. ಇದೇ ವಿಚಾರಕ್ಕೆ ನನ್ನ, ಮಗ ಹಾಗೂ ನನ್ನ ತಂದೆಯ ಮೇಲೆ ಶನಿವಾರ ಪತಿ ಹಲ್ಲೆ ಮಾಡಿದ್ದಾನೆ ಎಂದು ಉಲ್ಲೇಖಿಸಿದ್ದಾಳೆ.
ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದ ಮಹಿಳೆಗೆ ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿದ್ದ ಪುಲಿ ಸಾಯಿಕುಮಾರ್ 2021ರಲ್ಲಿ ಮ್ಯಾಟ್ರಿಮೋನಿಯಲ್ಲಿ ಪರಿಚಯನಾಗಿದ್ದ. ಬಳಿಕ ಇಬ್ಬರಿಗೂ ಮದುವೆಯಾಗಿತ್ತು. ಆಗಿನಿಂದಲೂ ವರದಕ್ಷಿಣೆಗಾಗಿ ಪೀಡಿಸುತ್ತಿದ್ದ ಎಂದು ಮಹಿಳೆ ಆರೋಪಿಸಿದ್ದಾಳೆ.
ಈ ಹಿಂದೆಯೂ ಪುಲಿ ಸಾಯಿಕುಮಾರ್ ವಿರುದ್ಧ ಆರ್‌ಆರ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿತ್ತು. ಇದೀಗ ಮತ್ತೆ ಗಲಾಟೆ ಮಾಡಿ ಹಲ್ಲೆ ಮಾಡಿದ್ದು, ಪೀಣ್ಯ (Peenya) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
– ಬೈಕ್‌ಗೆ ಹಚ್ಚಿದ ಬೆಂಕಿಯಿಂದ ಸಿಗರೇಟ್ ಹಚ್ಚಿ ಧಮ್ ಹೊಡೆದು ಎಸ್ಕೇಪ್
ಬೆಂಗಳೂರು: ಪಿಜಿ ಮುಂದೆ ನಿಲ್ಲಿಸಿದ್ದ ಬುಲೆಟ್ ಬೈಕ್‌ಗೆ (Bullet Bike) ಬೆಂಕಿ ಹಚ್ಚಿದ್ದ ಆರೋಪಿಯನ್ನು ಪೀಣ್ಯ ಪೊಲೀಸರು (Peenya Police) ಬಂಧಿಸಿದ್ದಾರೆ.
ಪುಲ್ಕಿತ್ (25) ಬಂಧಿತ ಆರೋಪಿ. ಈತ ಪೀಣ್ಯಾದ ಹೆಚ್‌ಎಂಟಿ ಲೇಔಟ್‌ನ (HMT Layout) ಪಿಜಿಯೊಂದರ ಮುಂದೆ ನಿಲ್ಲಿಸಿದ್ದ ಬುಲೆಟ್ ಬೈಕ್‌ಗೆ ಬೆಂಕಿ ಹಚ್ಚಿದ್ದ. ಸೆ.19ರಂದು ಬೈಕ್‌ನಿಂದಲೇ ಪೆಟ್ರೋಲ್ ತೆಗೆದು ಅದೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ. ಇಷ್ಟು ಮಾತ್ರವಲ್ಲದೇ ಬೈಕ್‌ಗೆ ಹೊತ್ತಿಕೊಂಡ ಬೆಂಕಿಯಿಂದಲೇ ಸಿಗರೇಟ್‌ಗೆ ಬೆಂಕಿ ಹಚ್ಚಿ ಧಮ್ ಹೊಡೆದು ಎಸ್ಕೇಪ್ ಆಗಿದ್ದ. ಬುಲೆಟ್ ಬೈಕ್‌ಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಅಕ್ಕಪಕ್ಕದಲ್ಲಿದ್ದ ಮೂರು ಬೈಕ್‌ಗಳು ಬೆಂಕಿಗೆ ಆಹುತಿಯಾಗಿತ್ತು. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್; ಸ್ಮಶಾನದಲ್ಲಿ ನಿರ್ಮಾಣವಾಗುತ್ತಿದ್ದ ಇಂದಿರಾ ಕ್ಯಾಂಟೀನ್ ಸ್ಥಳಾಂತರ
ಬೈಕ್ ಬೆಂಕಿಗಾಹುತಿಯಾದ ಬಳಿಕ ಬುಲೆಟ್ ಬೈಕ್ ಸವಾರ ದೀಪಾಂಶು ಎಂಬವರು ಈ ಬಗ್ಗೆ ಪೀಣ್ಯಾ ಪೊಲೀಸರಿಗೆ ದೂರು ನೀಡಿದ್ದರು. ಸದ್ಯ ಬುಲೆಟ್ ಬೈಕ್‌ಗೆ ಬೆಂಕಿ ಹಚ್ಚಿದ್ದ ಪುಲ್ಕಿತ್‌ನನ್ನು ಪೀಣ್ಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹಲವು ದಿನಗಳಿಂದ ರಾಯಲ್ ಎನ್‌ಫೀಲ್ಡ್ ಬುಲೆಟ್ ಬೈಕ್ ಖರೀದಿಸುವ ಆಸೆಯನ್ನು ಪುಲ್ಕಿತ್ ಹೊಂದಿದ್ದ. ಬುಲೆಟ್ ಖರೀದಿಗೆ ಹಣ ಹೊಂದಿಸಲಿಕ್ಕೆ ಆಗದಿದ್ದಾಗ ಬೇರೆಯವರ ಬುಲೆಟ್ ಬೈಕ್ ಸೌಂಡ್ ಆದರೆ ಕೋಪಗೊಳ್ಳುತ್ತಿದ್ದ. ಬುಲೆಟ್ ಬೈಕ್ ತೆಗೆದುಕೊಳ್ಳುವ ಆಸೆಯಿತ್ತು. ಹಣವಿಲ್ಲದ್ದಕ್ಕೆ ಅದು ಸಾಧ್ಯವಾಗಲಿಲ್ಲ. ಹೀಗಾಗಿ ಕೋಪಬಂದು ಪಿಜಿಗಳ ಮುಂದೆ ನಿಲ್ಲಿಸಿದ್ದ ಬುಲೆಟ್ ಬೈಕ್‌ಗೆ ಬೆಂಕಿ ಹಚ್ಚಿದೆ ಎಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಹುಬ್ಬಳ್ಳಿ ಆಸ್ಪತ್ರೆಯಲ್ಲಿ ಗಣೇಶ ಪ್ರತಿಷ್ಠಾಪಿಸಿದ ಸಿಬ್ಬಂದಿಗೆ ನೋಟಿಸ್ – ಅಧೀಕ್ಷಕರ ವಿರುದ್ಧ ಹಿಂದೂ ಸಂಘಟನೆಗಳು ಕಿಡಿ
– ಫೆಬ್ರವರಿ ಮೊದಲ ವಾರದಲ್ಲಿ ವಾಹನ ಸಂಚಾರಕ್ಕೆ ಸಿಗ್ನಲ್ ಕೊಟ್ಟ ಐಐಎಸ್‌ಸಿ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಿಂದ (Bengaluru) ರಾಜ್ಯದ 22 ಜಿಲ್ಲೆಗಳು ಸೇರಿದಂತೆ ಗೋವಾ, ಮಹಾರಾಷ್ಟ್ರಕ್ಕೆ ಸಂಪರ್ಕಿಸುವ ಪೀಣ್ಯ ಫ್ಲೈಓವರ್ (Peenya Flyover) ಮೇಲೆ ಸಂಚರಿಸುವ ವಾಹನ ಸವಾರರಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಹೆವಿ ವಾಹನಗಳ (Heavy Vehicle) ಸಂಚಾರಕ್ಕೆ ಫ್ಲೈಓವರ್ ಫಿಟ್ ಆಗಿರುವ ಬಗ್ಗೆ ಐಐಎಸ್‌ಸಿ (IISC) ತಜ್ಞರ ವರದಿ ಎನ್‌ಹೆಚ್‌ಎಐ ಕೈ ಸೇರಿದೆ.
ಬೆಂಗಳೂರಿನಿಂದ ರಾಜ್ಯದ ಶೇ.80ರಷ್ಟು ಜಿಲ್ಲೆಗಳಿಗೆ ಸಂಪರ್ಕಿಸುವ ಪೀಣ್ಯ ಫ್ಲೈಓವರ್‌ಗೆ ಹಿಡಿದಿದ್ದ ಗ್ರಹಣ ದೂರಾಗುವ ಸಂದರ್ಭ ಬಂದಿದೆ. ಇದೇ ಫೆಬ್ರವರಿ ಮೊದಲ ವಾರದಿಂದಲೇ ಹೆವಿ ವೆಹಿಕಲ್ ಓಡಾಟಕ್ಕೆ ಸಂಚಾರ ಮುಕ್ತವಾಗುವ ಸಾಧ್ಯತೆ ಇದೆ. ಫ್ಲೈಓವರ್ ಲೋಡ್ ಟೆಸ್ಟಿಂಗ್ ಬಳಿಕ ಫ್ಲೈಓವರ್ ಫಿಟ್ನೆಸ್ ಬಗ್ಗೆ ಪರೀಕ್ಷೆ ಮಾಡಿದ್ದ ಐಐಎಸ್‌ಸಿ ತಜ್ಞರ ತಂಡ ವರದಿ ಸಿದ್ಧಪಡಿಸಿ ಎನ್‌ಹೆಚ್‌ಎಐ ಅಧಿಕಾರಿಗಳಿಗೆ ರಿಪೋರ್ಟ್ ನೀಡಿದೆ. ಇದನ್ನೂ ಓದಿ: ಕೆ.ಎನ್.ರಾಜಣ್ಣ, ಶಾಮನೂರು ಶಿವಶಂಕರಪ್ಪಗೆ ಕೈ ಹೈಕಮಾಂಡ್ ವಾರ್ನಿಂಗ್
2 ವರ್ಷದಿಂದ ಹೆವಿ ವಾಹನಗಳ ಸಂಚಾರಕ್ಕೆ ಹೇರಿದ್ದ ನಿರ್ಬಂಧ ಸದ್ಯ ಇದೇ ಫೆಬ್ರವರಿ ಮೊದಲ ವಾರದಲ್ಲಿ ತೆರವು ಮಾಡುವ ಸಾಧ್ಯತೆ ಇದೆ. ಫ್ಲೈಓವರ್ ಎರಡು ಪಿಲ್ಲರ್‌ಗಳಲ್ಲಿ ಕಾಣಿಸಿಕೊಂಡ ಸಮಸ್ಯೆಯಿಂದಾಗಿ ಹೆವಿ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಸಮಸ್ಯೆ ಪತ್ತೆಗೆ ಮುಂದಾಗಿದ್ದ ಐಐಎಸ್‌ಸಿ ತಜ್ಞರು ಫ್ಲೈಓವರ್ ಕೇಬಲ್‌ಗಳು ಹಾಳಾಗಿದ್ದ ಕಾರಣವನ್ನು ಪತ್ತೆ ಹಚ್ಚಿದ್ದಾರೆ. ಈ ಹಿಂದೆ ಪಿಲ್ಲರ್‌ಗಳಿಗೆ ಅಳವಡಿಕೆ ಮಾಡಿದ್ದ ಕೇಬಲ್‌ಗಳು ತುಕ್ಕು ಹಿಡಿದಿದ್ದೆ ದೋಷಕ್ಕೆ ಕಾರಣ ಎಂಬ ರಿಪೋರ್ಟ್ ನೀಡಿವೆ. ಇದನ್ನೂ ಓದಿ: ಕೆರೆಗೋಡು ಹನುಮ ಧ್ವಜ ಪ್ರಕರಣ – ಪಿಡಿಓ ಅಮಾನತು
ಕೇಬಲ್‌ಗಳಿಗೆ ನೀರು ತಗುಲಿದ್ದ ಕಾರಣ ಸಂಪೂರ್ಣ ಕೇಬಲ್ ತುಕ್ಕು ಹಿಡಿದಿದ್ದ ಪರಿಣಾಮ ಪಿಲ್ಲರ್‌ಗಳಲ್ಲಿ ಅಳವಡಿಕೆ ಮಾಡಿದ್ದ ಕೇಬಲ್ ಹಾಳಾಗಿತ್ತು. ಸದ್ಯ ಈಗ ಆ ಎಲ್ಲವನ್ನು ತೆರವು ಮಾಡಿ ಈ ಹಿಂದೆ ಅಳವಡಿಕೆ ಮಾಡಿದ್ದ ಕೇಬಲ್‌ಗಳಿಗಿಂತ 4 ಪಟ್ಟು ಸದೃಢವಾದ ಕೇಬಲ್ ಅಳವಡಿಕೆ ಮಾಡುವುದರ ಜೊತೆಗೆ ತುಕ್ಕು ಹಿಡಿಯದಂತೆ ಗ್ರೀಸ್ ಇರುವ ಕೇಬಲ್ ಅನ್ನು ಅಳವಡಿಕೆ ಮಾಡಲಾಗಿದೆ. ಜೊತೆಗೆ ಮುಂದೆ ಈ ರೀತಿ ಸಮಸ್ಯೆಯಾದರೆ ವಾಹನ ಓಡಾಟ ನಿಲ್ಲಿಸದೇ ಹಾಗೇ ಸರಿ ಮಾಡಬಹುದಾದ ಕ್ಷಮತೆ ಕೂಡ ಕೇಬಲ್‌ಗೆ ಇದೆ ಎಂದು ಐಐಎಸ್‌ಸಿ ವರದಿ ನೀಡಿದೆ. ಇದನ್ನೂ ಓದಿ: ವಿಷ್ಣುವಿನ 11ನೇ ಅವತಾರವಾಗಲು ಮೋದಿ ಪ್ರಯತ್ನಿಸ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ
ಸದ್ಯ ಇದೇ ವಾರ ಐಐಎಸ್‌ಸಿ ತಜ್ಞರು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಭೆ ಮಾಡಲಿದ್ದು, ಸಭೆ ಬಳಿಕ ಸಂಚಾರ ಮುಕ್ತ ಯಾವಾಗ ಎಂಬ ಅಧಿಕೃತ ಮಾಹಿತಿ ನೀಡುವ ಸಾಧ್ಯತೆ ಇದೆ. ಕಳೆದೆರಡು ವರ್ಷಗಳಿಂದ ಟ್ರಾಫಿಕ್‌ನಿಂದ ಪರದಾಡುತ್ತಿದ್ದ ಹೆವಿ ವಾಹನಗಳಿಗೆ ಸದ್ಯ ಗುಡ್‌ನ್ಯೂಸ್ ಸಿಕ್ಕಿದ್ದು, ಇನ್ಮುಂದೆ ಟ್ರಾಫಿಕ್ ಕಿರಿಕಿರಿ ಇಲ್ಲದೆ ಸಂಚಾರ ಮಾಡಬಹುದಾಗಿದೆ. ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆದ್ದರೆ ಕಾಂಗ್ರೆಸ್ ಸರ್ಕಾರ ತೆಗೆಯುವ ಗ್ಯಾರಂಟಿ: ಬೊಮ್ಮಾಯಿ
ಬೆಂಗಳೂರು: ಬರೋಬ್ಬರಿ 22 ಜಿಲ್ಲೆಗಳ ಸಂಚಾರ ರಹದಾರಿ ಪೀಣ್ಯ ಫ್ಲೈಓವರ್ (Peenya Flyover) ಇಂದಿನಿಂದ ಮತ್ತೆ ಮೂರು ದಿನಗಳ ಕಾಲ ಬಂದ್ ಆಗಲಿದೆ. ಲೋಡ್ ಟೆಸ್ಟಿಂಗ್‌ಗಾಗಿ (Load Testing) ಎನ್‌ಹೆಚ್‌ಎ (NHA) ಮನವಿ ಮೇರೆಗೆ ಸಂಚಾರಿ ಪೊಲೀಸರು ಇಂದಿನಿಂದ ಫ್ಲೈಓವರ್ ಕ್ಲೋಸ್ ಮಾಡಲಿದ್ದಾರೆ.
ಸುಮಾರು ಮೂರು ವರ್ಷದಿಂದ ಪೀಣ್ಯ ಫ್ಲೈಓವರ್ ಭಾರಿ ವಾಹನಗಳಿಗೆ ಬಂದ್ ಆಗಿದೆ. 2021ರಲ್ಲಿ ಪೀಣ್ಯ ಫ್ಲೈಓವರ್‌ನಲ್ಲಿ ತಾಂತ್ರಿಕ ತೊಂದರೆ ಉಂಟಾಗಿ ಭಾರಿ ಪ್ರಮಾಣದ ವಾಹನಗಳ ಸಂಚಾರ ನಿಷೇಧ ಮಾಡಲಾಗಿತ್ತು. ಪೀಣ್ಯ ಫ್ಲೈಓವರ್‌ನ ಗುಣಮಟ್ಟ ಸರಿಯಿಲ್ಲ, ಕಳಪೆ ಕಾಮಾಗಾರಿ, ಇಡೀ ಫ್ಲೈಓವರ್ ಅನ್ನು ಕೆಡವಬೇಕು ಎಂಬ ಚರ್ಚೆ ಆರಂಭವಾಗಿತ್ತು. ಆದರೆ ಕೆಲ ದಿನಗಳ ನಂತರ ಸಣ್ಣಪುಟ್ಟ ಕಾಮಾಗಾರಿ ಮಾಡಿ ಕೆಲ ಕೇಬಲ್‌ಗಳನ್ನು ಅಳವಡಿಸಿ ಸಣ್ಣ ಪ್ರಮಾಣದ ವೆಹಿಕಲ್ ಓಡಾಟಕ್ಕೆ ಅವಕಾಶ ಮಾಡಲಾಗಿತ್ತು. ಫ್ಲೈಓವರ್ ಮೇಲೆ ಸಂಪೂರ್ಣವಾಗಿ ಹೆವಿ ವೆಹಿಕಲ್‌ಗಳ ಓಡಾಟ ನಿರ್ಬಂಧಿಸಲಾಗಿತ್ತು. ಇದೀಗ ಮತ್ತೆ ಮೂರು ದಿನಗಳ ಕಾಲ ಪೀಣ್ಯ ಫ್ಲೈಓವರ್ ಬಂದ್ ಮಾಡಲಾಗುತ್ತದೆ. ಇದನ್ನೂ ಓದಿ: ನನಗೆ ತುಂಬಾ ಖುಷಿಯಾಗಿದೆ: ಅಯೋಧ್ಯೆ ರಾಮಮಂದಿರಕ್ಕೆ ಮಗ ಕೆತ್ತಿರುವ ರಾಮಲಲ್ಲಾ ಮೂರ್ತಿ ಆಯ್ಕೆಯಾಗಿದ್ದಕ್ಕೆ ತಾಯಿ ಸಂತಸ
ಇಂದು ರಾತ್ರಿ 11 ಗಂಟೆಯಿಂದ ಜನವರಿ 19ರ ಬೆಳಗ್ಗೆ 11 ಗಂಟೆವರೆಗೆ ಪೀಣ್ಯ ಫ್ಲೈಓವರ್ ಬಂದ್ ಮಾಡಲಾಗುತ್ತದೆ. ಎನ್‌ಹೆಚ್‌ಎಐ ಅಧಿಕಾರಿಗಳು ಕೇಬಲ್ ಅಳವಡಿಕೆ ಕಾರ್ಯ ಪೂರ್ಣಗೊಳಿಸಿದ್ದು, ಹೆವಿ ವೆಹಿಕಲ್‌ಗಳ ಓಡಾಟ ನಡೆಸಿ ಪರೀಕ್ಷೆ ನಡೆಸಲಿದ್ದಾರೆ. ಹೆವಿ ವೆಹಿಕಲ್‌ಗಳ ಓಡಾಟಕ್ಕೆ ತಂತ್ರಜ್ಞರು ಯೆಸ್ ಅಂದರೆ ಇನ್ಮುಂದೆ ಬಸ್ಸು, ಲಾರಿಗಳು ಫ್ಲೈಓವರ್ ಮೇಲೆಯೇ ಸಾಗಬಹುದು. ಹೀಗಾಗಿ ಎನ್‌ಹೆಚ್‌ಎಐ ಅಧಿಕಾರಿಗಳ ಮನವಿ ಮೇರೆಗೆ ಮೂರು ದಿನಗಳ ಕಾಲ ಸಂಚಾರಿ ಪೊಲೀಸರು ಫ್ಲೈಓವರ್ ಬಂದ್ ಮಾಡಲಿದ್ದಾರೆ. ಮೂರು ದಿನಗಳ ಕಾಲ ಎನ್‌ಹೆಚ್ 48ರಲ್ಲಿ ಟ್ರಾಫಿಕ್ ಸಮಸ್ಯೆ ಎದುರಾಗಲಿದ್ದು, ವಾಹನ ಸವಾರರು ಪರ್ಯಾಯ ರಸ್ತೆ ಬಳಸುವುದು ಒಳಿತು. ಇದನ್ನೂ ಓದಿ: ಕೆಎಸ್‌ಆರ್‌ಟಿಸಿ ಬಸ್‌ಗೆ ಫುಡ್ ಡೆಲಿವರಿ ಬಾಯ್ ಬಲಿ
ಬೆಂಗಳೂರು: ಲೋಡ್ ಟೆಸ್ಟಿಂಗ್ (Load Testing) ಮಾಡುವ ಸಲುವಾಗಿ ಜನವರಿ 16ರಿಂದ ಮೂರು ದಿನಗಳ ಕಾಲ ಪೀಣ್ಯ ಫ್ಲೈಓವರ್ (Peenya Flyover) ಬಂದ್ ಆಗಲಿದೆ.
ಜನವರಿ 16ರ ರಾತ್ರಿ 11 ಗಂಟೆಯಿಂದ ಜನವರಿ 19ರ ಬೆಳಗ್ಗೆ 11 ಗಂಟೆಯವರೆಗೆ ಈ ಫ್ಲೈಓವರ್ ಕ್ಲೋಸ್ ಆಗಲಿದೆ. ಈ ಹಿನ್ನೆಲೆ ಎಲ್ಲಾ ವಾಹನ ಸವಾರರು ಸರ್ವಿಸ್ ರಸ್ತೆ ಬಳಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಇದರಿಂದಾಗಿ ಮುಂದಿನ ವಾರ ತುಮಕೂರು ರಸ್ತೆಯಲ್ಲಿ ಬೃಹತ್ ವಾಹನ ದಟ್ಟಣೆ ಉಂಟಾಗಲಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಮೂರು ಡಿಸಿಎಂ ಚರ್ಚೆ ಹೈಕಮಾಂಡ್ ಅಂಗಳಕ್ಕೆ ಬಂದಿಲ್ಲ: ಖರ್ಗೆ ಸ್ಪಷ್ಟನೆ
ಈ ಕುರಿತು ಎನ್‌ಹೆಚ್‌ಎಐ ಯೋಜನಾ ನಿರ್ದೇಶಕ ಜಯಕುಮಾರ್ ಮಾತನಾಡಿದ್ದು, ಕಾಮಗಾರಿ ಪೂರ್ಣಗೊಂಡಿದೆ. ಪ್ರಿಸ್ಟ್ರೆಸ್ಡ್ ಕೇಬಲ್‌ಗಳ ಸಾಮರ್ಥ್ಯವನ್ನು ನಿರ್ಣಯಿಸಲು ನಾವು ಲೋಡ್ ಪರೀಕ್ಷೆಗಳನ್ನು ನಡೆಸಬೇಕಾಗಿದೆ. ಲೋಡ್ ಪರೀಕ್ಷೆಯ ಸಮಯದಲ್ಲಿ ತಲಾ 32 ಟನ್‌ಗಳನ್ನು ಹೊತ್ತ 8 ಟ್ರಕ್‌ಗಳನ್ನು 48 ಗಂಟೆಗಳಿಗೂ ಹೆಚ್ಚು ಕಾಲ ಫ್ಲೈಓವರ್ ಮೇಲೆ ಓಡಿಸಲಾಗುತ್ತದೆ. ನಾವು ಎರಡು ಸ್ಪ್ಯಾನ್‌ಗಳನ್ನು ಮಾತ್ರ ಪರಿಶೀಲಿಸುತ್ತೇವೆ. ಇದಕ್ಕಾಗಿ 105-106 ಮತ್ತು 117-118 ಕಂಬಗಳನ್ನು ಸಂಪರ್ಕಿಸುವ ವ್ಯಾಪ್ತಿಯನ್ನು ಎನ್‌ಹೆಚ್‌ಎಐ ಗುರುತಿಸಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮುಸ್ಲಿಮರ ಜನಸಂಖ್ಯೆ ಹೆಚ್ಚಾದ್ರೆ ಹಿಂದೂಗಳ ಪರಿಸ್ಥಿತಿ ಹೇಗಿರತ್ತೆ ಯೋಚ್ನೆ ಮಾಡಿ: ಹರೀಶ್ ಪೂಂಜಾ ಭಾಷಣ ವೈರಲ್
ಈ ಫ್ಲೈಓವರ್ 23 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವುದಲ್ಲದೇ ಬೆಂಗಳೂರು ಮತ್ತು ರಾಜ್ಯದ ಇತರೆ ಜಿಲ್ಲೆಗಳಿಗೆ ಒಂದು ರೀತಿಯ ಆರ್ಥಿಕ ಚೇತರಿಕೆಯ ಕೊಂಡಿ ಆಗಿದೆ. ಪೀಣ್ಯ ಮೇಲ್ಸೇತುವೆ ಒಟ್ಟು 120 ಪಿಲ್ಲರ್‌ಗಳನ್ನು ಒಳಗೊಂಡಿದೆ. ಇದನ್ನೂ ಓದಿ: ಮ್ಯಾನ್ಮಾರ್‌ನಲ್ಲಿರುವ ಉಗ್ರರ ಶಿಬಿರದ ಮೇಲೆ ಭಾರತದಿಂದ ಬಾಂಬ್ ದಾಳಿ!
ಬೆಂಗಳೂರು: ತಾಂತ್ರಿಕ ದೋಷದಿಂದ ಪೀಣ್ಯ ನಿಲ್ದಾಣದಲ್ಲಿ (Peenya Metro Station) ಮೆಟ್ರೋ ರೈಲು ಕೆಟ್ಟು ನಿಂತಿದ್ದು ಪ್ರಯಾಣಿಕರು ಪರದಾಡುತ್ತಿದ್ದಾರೆ.
ಬೆಳಗ್ಗೆ 10 ಗಂಟೆಯ ವೇಳೆಗೆ ರೈಲು ಕೆಟ್ಟು ನಿಂತಿದ್ದು ಹಸಿರು ಮಾರ್ಗದ ಮೆಟ್ರೋ (Green Line Metro) ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ಸದ್ಯ ಯಶವಂತಪುರ – ಸಿಲ್ಕ್ ಇನ್‌ಸ್ಟಿಟ್ಯೂಟ್ ವರೆಗೆ ಮಾತ್ರ ಮೆಟ್ರೋ ಸಂಚಾರ ನಡೆಸುತ್ತಿದ್ದು ಪೀಣ್ಯ – ನಾಗಸಂದ್ರ ರೈಲು ಸಂಚಾರ ಸ್ಥಗಿತಗೊಂಡಿದೆ. ಮುಂದಿನ 2 ಗಂಟೆಯ ಒಳಗಡೆ ತಾಂತ್ರಿಕ ದೋಷವನ್ನು ಸರಿಪಡಿಸಲಾಗುವುದು ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.