Tag: pejavara vishwa tirtha swamiji

  • ಜನರು ನಿಮ್ಮ ಮೇಲೆ ಇಟ್ಟಿರುವ ಗೌರವವನ್ನು ಉಳಿಸಿಕೊಳ್ಳಿ: ಸರ್ಕಾರಕ್ಕೆ ಪೇಜಾವರ ಶ್ರೀ ಎಚ್ಚರಿಕೆ

    ಜನರು ನಿಮ್ಮ ಮೇಲೆ ಇಟ್ಟಿರುವ ಗೌರವವನ್ನು ಉಳಿಸಿಕೊಳ್ಳಿ: ಸರ್ಕಾರಕ್ಕೆ ಪೇಜಾವರ ಶ್ರೀ ಎಚ್ಚರಿಕೆ

    ಉಡುಪಿ: ಜನರು ನಿಮ್ಮ ಮೇಲೆ ಇಟ್ಟಿರುವ ಗೌರವವನ್ನು ಉಳಿಸಿಕೊಳ್ಳಿ ಎಂದು ಹೇಳುವ ಮೂಲಕ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಂತಹ ಪ್ರವೀಣ್‍ನನ್ನು ಕೊಲೆ ಮಾಡಿರುವುದು ಖಂಡನೀಯವಾಗಿದೆ. ಇದನ್ನು ಉಗ್ರವಾದ ಮಾತುಗಳಿಂದ ನಾವು ಖಂಡಿಸುತ್ತೇವೆ. ಈ ನೋವನ್ನು ಭರಿಸುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ ಎಂದು ಕೃಷ್ಣನಲ್ಲಿ ಪ್ರಾರ್ಥಿಸುತ್ತೇವೆ ಎಂದರು.

    ಇತ್ತೀಚೆಗೆ ಈ ತರಹದ ಕೊಲೆಗಳು ಹೆಚ್ಚಾಗಿ ರಾಜ್ಯದಲ್ಲಿ ನಡೆಯುತ್ತಿವೆ. ಇದರಿಂದಾಗಿ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ಜನರು ಧಂಗೆ ಏಳುವ ಮೊದಲೇ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಜೊತೆಗೆ ಸರ್ಕಾರದ ಮೇಲೆ ಜನ ವಿಶ್ವಾಸ ಕಳೆದುಕೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಬೇಕು. ಸರ್ಕಾರವು ಘಟನೆಗೆ ಸಂಬಂಧಿಸಿದಂತೆ ತೀವ್ರವಾಗಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಪತಿಯ ಕಾರ್ಯ ಮುಗಿಯುವುದರೊಳಗೆ ಆರೋಪಿಗಳಿಗೆ ಶಿಕ್ಷೆ ಆಗ್ಬೇಕು: ಪ್ರವೀಣ್ ಪತ್ನಿ ನೂತನಾ

    ಇತ್ತೀಚಿನ ದಿನಗಳಲ್ಲಿ ಸಾಲು ಸಾಲು ಹಿಂದೂ ಯುವಕರ ಕೊಲೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯುವಕರ ಸಹನೆ ಕಟ್ಟೆ ಒಡೆಯುವುದು ಸಹಜವಾಗಿದ್ದು, ಕಾರ್ಯಕರ್ತರು ತಮ್ಮ ಸಂಯಮ ಕಳೆದುಕೊಳ್ಳಬಾರದು. ಕಾನೂನನ್ನು ಕೈಗೆತ್ತಿಕೊಳ್ಳದೇ ಒಗ್ಗಟ್ಟಿನಿಂದ ಕಾನೂನಿನ ರೀತಿಯಲ್ಲಿ ಹೋರಾಟ ಮಾಡಬೇಕು. ನಿಮ್ಮೆಲ್ಲರ ನೋವಿನ ಜೊತೆಯಲ್ಲಿ ನಾವು ಇದ್ದೇವೆ. ಸಂವಿಧಾನದ ಮೇಲಿರುವ ಗೌರವವನ್ನು ನಾವು ಉಳಿಸಿಕೊಳ್ಳೋಣ ಎಂದು ಮನವಿ ಮಾಡಿದರು. ಇದನ್ನೂ ಓದಿ: ಪ್ರವೀಣ್ ಹತ್ಯೆ ಪ್ರಕರಣ – ತನಿಖೆಗೆ 6 ತಂಡ ರಚನೆ, 15 ಜನ ವಶಕ್ಕೆ: ಎಡಿಜಿಪಿ

    Live Tv
    [brid partner=56869869 player=32851 video=960834 autoplay=true]

  • ಮುಂಬೈನಲ್ಲಿ ಮಠದ ಶಿಷ್ಯರೊಂದಿಗೆ ಯೋಗ ಮಾಡಿದ ಪೇಜಾವರ ಶ್ರೀ

    ಮುಂಬೈನಲ್ಲಿ ಮಠದ ಶಿಷ್ಯರೊಂದಿಗೆ ಯೋಗ ಮಾಡಿದ ಪೇಜಾವರ ಶ್ರೀ

    ಉಡುಪಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿಶ್ವದ ಎಲ್ಲೆಡೆ ಸಾಮೂಹಿಕವಾಗಿ ಯೋಗಾಸನ ಮಾಡುವ ಮೂಲಕ ಆಚರಿಸಲಾಗುತ್ತಿದೆ. ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮುಂಬೈ ಪ್ರವಾಸದಲ್ಲಿದ್ದು, ಮಠದಲ್ಲೇ ಯೋಗಾಭ್ಯಾಸ ಮಾಡಿದರು.

    ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮುಂಬೈ ಪ್ರವಾಸ ಕೈಗೊಂಡಿದ್ದು, ಹಲವಾರು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಮಠದ ಶಿಷ್ಯರ ಜೊತೆ ಬೆಳಗ್ಗೆ ಯೋಗಾಭ್ಯಾಸವನ್ನು ಮಾಡಿದರು. ಪ್ರತಿದಿನ ಪೇಜಾವರ ಶ್ರೀಗಳು ಯೋಗಾಭ್ಯಾಸವನ್ನು ಮಾಡಿ ದೇಹವನ್ನು ಸದೃಢವಾಗಿ ಇಟ್ಟುಕೊಂಡಿದ್ದಾರೆ.

    ಈ ಬಗ್ಗೆ ಮಾತನಾಡಿದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು, ಯೋಗ ಪ್ರಾಚೀನ ಕಾಲದ ಋಷಿ ಮುನಿಗಳಿಂದ ಮಾನವ ಜನಾಂಗಕ್ಕೆ ಸಿಕ್ಕಿರುವ ಹಲವಾರು ಕೊಡುಗೆಗಳಲ್ಲೊಂದು. ಪ್ರಕೃತಿಯ ನಡುವೆ ಸಂಪರ್ಕದಲ್ಲಿದ್ದ ಋಷಿಮುನಿಗಳಿಗೆ ಯೋಗದ ಅಗತ್ಯ ಇರಲಿಲ್ಲ. ಇಂದು ಮಾನವಕುಲ ಪ್ರಕೃತಿಯಿಂದ ದೂರವಾಗಿರುವ ಹೊತ್ತಿನಲ್ಲಿ ಮಾನಸಿಕ ಮತ್ತು ಶಾರೀರಿಕ ಆರೋಗ್ಯಕ್ಕೆ ಯೋಗ ಅತ್ಯಗತ್ಯ. ಅಂತಹ ಯೋಗವನ್ನು ನಾವು ನಮ್ಮ ಜೀವನದಲ್ಲಿ ನಿತ್ಯ ರೂಪಿಸಿಕೊಳ್ಳೋಣ ಎಂದು ಹೇಳಿದರು. ಇದನ್ನೂ ಓದಿ: ಎಲ್ಲ ಮದರಸಾಗಳಲ್ಲಿ ಯೋಗ ದಿನ ಆಚರಿಸಬೇಕು: ಯುಪಿ ಸರ್ಕಾರ ಆದೇಶ

    ನಮ್ಮ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೈಸೂರು ನಗರಕ್ಕೆ ಬಂದು ಯೋಗಾಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ. ನಮ್ಮ ನಾಡಿಗೆ ಪ್ರಧಾನಿಗಳು ಬಂದದ್ದು, ಬಹಳ ಸಂತೋಷದ ಸಂಗತಿ. ಅವರ ಆಗಮನದಿಂದ ಯೋಗದ ಮಹತ್ವ ಹೆಚ್ಚಾಗಿದೆ. ಅವರನ್ನು ಮಠದ ಪರವಾಗಿ ಅಭಿನಂದಿಸುತ್ತೇನೆ. ಜನರಲ್ಲಿ ಯೋಗಾಭ್ಯಾಸದ ಬಗ್ಗೆ ಜಾಗೃತಿ ಹೆಚ್ಚಾಗಿದೆ. ಎಳೆಯ ಮಕ್ಕಳಲ್ಲೇ ಯೋಗದ ಮಹತ್ವದ ಬಗ್ಗೆ ನಾವು ಅರಿವು ಮೂಡಿಸಬೇಕು. ಆ ಮೂಲಕ ಮಾನವ ಜನಾಂಗ ಉತ್ತಮ ಆರೋಗ್ಯ ವೃದ್ಧಿಸಿಕೊಳ್ಳಬೇಕು ಎಂದರು. ಇದನ್ನೂ ಓದಿ: ಐಟಿಬಿಪಿ ಯೋಧರಿಂದ ಹಿಮಾಲಯದ 17 ಸಾವಿರ ಅಡಿ ಎತ್ತರದಲ್ಲಿ ಯೋಗ

    Live Tv