Tag: periods

  • ಪಿರಿಯಡ್ಸ್ ಆಗಿದ್ದಕ್ಕೆ 8ನೇ ತರಗತಿ ವಿದ್ಯಾರ್ಥಿನಿಗೆ ಕ್ಲಾಸ್ ರೂಂ ಹೊರಗೆ ಪರೀಕ್ಷೆ

    ಪಿರಿಯಡ್ಸ್ ಆಗಿದ್ದಕ್ಕೆ 8ನೇ ತರಗತಿ ವಿದ್ಯಾರ್ಥಿನಿಗೆ ಕ್ಲಾಸ್ ರೂಂ ಹೊರಗೆ ಪರೀಕ್ಷೆ

    ಚೆನ್ನೈ: ಪಿರಿಯಡ್ಸ್ ಆಗಿದ್ದಕ್ಕೆ 8ನೇ ತರಗತಿಯ ದಲಿತ ವಿದ್ಯಾರ್ಥಿನಿಯನ್ನು ಕ್ಲಾಸ್ ರೂಂ ಹೊರಗೆ ಪರೀಕ್ಷೆಗೆ ಕೂರಿಸಿರುವ ಅಮಾನವೀಯ ಘಟನೆ ತಮಿಳುನಾಡಿನ ʼ(Tamlinadu) ಕೊಯಮತ್ತೂರು (Coimbatore) ಜಿಲ್ಲೆಯ ಕಿನಾಥುಕಡವು ಬಳಿಯ ಖಾಸಗಿ ಶಾಲೆಯಲ್ಲಿ ನಡೆದಿದೆ.

    ಕಿನಾಥುಕಡವು ತಾಲೂಕಿನ ಸೆಂಗುಟ್ಟೈಪಾಳ್ಯಂ ಗ್ರಾಮದಲ್ಲಿರುವ ಸ್ವಾಮಿ ಚಿದ್ಭವಂದ ಮೆಟ್ರಿಕ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿನಿ 8ನೇ ತರಗತಿ ಓದುತ್ತಿದ್ದಳು. ಏ.5 ರಂದು ವಿದ್ಯಾರ್ಥಿನಿಗೆ ಪಿರಿಯಡ್ಸ್ ಆಗಿತ್ತು. ಹೀಗಾಗಿ ಪಿರಿಯಡ್ಸ್ ನಂತರ, ಶಾಲಾ ಆಡಳಿತ ಮಂಡಳಿಯು ಏ.7 ರಂದು ವಿಜ್ಞಾನ ಪರೀಕ್ಷೆ ಮತ್ತು ಏ.9 ರಂದು ಬುಧವಾರ ಸಮಾಜ ವಿಜ್ಞಾನ ಪರೀಕ್ಷೆ ಬರೆಯಲು ಅವಕಾಶ ನೀಡಿತ್ತು.ಇದನ್ನೂ ಓದಿ: 64 ವಯಸ್ಸಿನ ಉಗ್ರ ರಾಣಾ ಫೋಟೊ ರಿಲೀಸ್‌

    ಏ.7 ರಂದು ವಿಜ್ಞಾನ ಪರೀಕ್ಷೆಯಲ್ಲಿ ತರಗತಿಯ ಹೊರಗೆ ಕೂರಿಸಿರುವುದಾಗಿ ವಿದ್ಯಾರ್ಥಿನಿ ತನ್ನ ತಾಯಿಗೆ ತಿಳಿಸಿದ್ದಳು. ಮುಂದಿನ ಪರೀಕ್ಷೆಗೆ ವಿದ್ಯಾರ್ಥಿನಿಯ ತಾಯಿ ಶಾಲೆಗೆ ತೆರಳಿದ್ದು, ತರಗತಿಯ ಹೊರಗೆ ಕೂರಿಸಿರುವುದನ್ನು ಗಮನಿಸಿದರು. ಬಳಿಕ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ವಿಡಿಯೋ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಶಾಲಾ ಆಡಳಿತ ಮಂಡಳಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

    ಈ ಕುರಿತು ಕೊಯಮತ್ತೂರು ಜಿಲ್ಲಾಧಿಕಾರಿ ಪವನಕುಮಾರ್.ಜಿ.ಗಿರಿಯಪ್ಪನವರ್ ಮಾತನಾಡಿ, ಕೊಯಮತ್ತೂರು ಗ್ರಾಮೀಣ ಪೊಲೀಸರು ಈ ವಿಷಯದ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಘಟನೆ ಕುರಿತು ವಿವರವಾದ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.ಇದನ್ನೂ ಓದಿ: ಸ್ಟಾರ್ಕ್‌ಗೆ ಒಂದೇ ಓವರ್‌ನಲ್ಲಿ 30 ರನ್‌ ಚಚ್ಚಿದ ಸಾಲ್ಟ್‌ – ಹುಚ್ಚೆದ್ದು ಕುಣಿದ RCB ಫ್ಯಾನ್ಸ್‌

  • ಋತುಚಕ್ರದ ವೇಳೆ ಮಹಿಳೆಯರಿಗೆ ರಜೆ ನೀಡೋದು ಸರ್ಕಾರದ ನೀತಿಯ ವಿಷಯ- ವಿಚಾರಣೆ ನಡೆಸಲು ಸುಪ್ರೀಂ ನಕಾರ

    ಋತುಚಕ್ರದ ವೇಳೆ ಮಹಿಳೆಯರಿಗೆ ರಜೆ ನೀಡೋದು ಸರ್ಕಾರದ ನೀತಿಯ ವಿಷಯ- ವಿಚಾರಣೆ ನಡೆಸಲು ಸುಪ್ರೀಂ ನಕಾರ

    ನವದೆಹಲಿ: ಋತುಚಕ್ರದ ವೇಳೆ ಮಹಿಳೆಯರಿಗೆ ರಜೆ (Menstrual Leave) ನೀಡುವುದು ಸರ್ಕಾರದ ನೀತಿಯ ವಿಷಯವಾಗಿದೆ. ಈ ವಿಷಯದ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿಯನ್ನು ಸಂಪರ್ಕಿಸುವಂತೆ ಸುಪ್ರೀಂಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ತ್ರಿ ಸದಸ್ಯ ಪೀಠ ಹೇಳಿದೆ.

    ಮಹಿಳೆಯರಿಗೆ ಋತುಚಕ್ರದ ವೇಳೆ ರಜೆ ನೀಡಲು ನಿರ್ದೇಶನ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಪೀಠ, ಸರ್ಕಾರಕ್ಕೆ ನಿರ್ದೇಶನಗಳನ್ನು ನೀಡಲು ನಿರಾಕರಿಸಿತು. ಕಾರ್ಯದರ್ಶಿಯು ಈ ವಿಷಯವನ್ನು ನೀತಿ ರೂಪಿಸುವ ಮಟ್ಟದಲ್ಲಿ ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳುವಂತೆ ನಾವು ವಿನಂತಿಸುತ್ತೇವೆ ಮತ್ತು ಮಾದರಿ ನೀತಿಯನ್ನು ರೂಪಿಸಬಹುದೇ ಎಂದು ನೋಡುತ್ತೇವೆ. ಮುಟ್ಟಿನ ರಜೆಗೆ ಸಂಬಂಧಿಸಿದಂತೆ ಸರ್ಕಾರ ಸ್ವತಂತ್ರ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಡೆಯುವುದಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.

    ಮಹಿಳಾ ವಿದ್ಯಾರ್ಥಿಗಳು ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಮುಟ್ಟಿನ ನೋವಿನ ರಜೆಯನ್ನು ಕೋರಿ ಸಲ್ಲಿಸಲಾದ ಮನವಿಯನ್ನು ನ್ಯಾಯಾಲಯವು ಕಳೆದ ವರ್ಷ ವಿಲೇವಾರಿ ಮಾಡಿತ್ತು. ಸಿಜೆಐ ಚಂದ್ರಚೂಡ್ ನೇತೃತ್ವದ ಪೀಠವು ಪ್ರಕರಣದಲ್ಲಿ ನೀತಿಯ ಆಯಾಮ ಇರುವುದರಿಂದ ಅರ್ಜಿದಾರರು ಕೇಂದ್ರ ಸರ್ಕಾರದ ಮುಂದೆ ಪ್ರಾತಿನಿಧ್ಯವನ್ನು ಸಲ್ಲಿಸಬಹುದು ಎಂದು ತರ್ಕಿಸಿತ್ತು. ಇದನ್ನೂ ಓದಿ: ರಷ್ಯಾಗೆ ತೆರಳಿದ ಪ್ರಧಾನಿ ಮೋದಿ

    ಇಂದಿನ ವಿಚಾರಣೆ ವೇಳೆ ನಮ್ಮ ಮನವಿಗೆ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಅರ್ಜಿದಾರ ತ್ರಿಪಾಠಿ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಆದಾಗ್ಯೂ ಬೇಡಿಕೆಯು ನೀತಿ ವಿಷಯವನ್ನು ಒಳಗೊಂಡಿರುವ ಕಾರಣ ನ್ಯಾಯಾಲಯದಿಂದ ವ್ಯವಹರಿಸಲಾಗುವುದಿಲ್ಲ ಎಂದು ಸಿಜೆಐ ಚಂದ್ರಚೂಡ್ ಪುನರುಚ್ಚರಿಸಿದರು. ಋತುಚಕ್ರದ ರಜೆಯನ್ನು ಕಡ್ಡಾಯಗೊಳಿಸುವುದರಿಂದ ಉದ್ಯೋಗದಾತರು ಮಹಿಳೆಯರಿಗೆ ಉದ್ಯೋಗ ನೀಡದಿರಲು ಕಾರಣವಾಗಬಹುದು ಎಂಬ ಅಭಿಪ್ರಾಯವೂ ಇದೆ ಎಂದು ಅಭಿಪ್ರಾಯಪಟ್ಟರು.

    ಮಹಿಳೆಯನ್ನು ರಕ್ಷಿಸಲು ನಾವು ಏನು ಮಾಡಲು ಪ್ರಯತ್ನಿಸುತ್ತೇವೆಯೋ ಅದು ಅವರ ಅನನುಕೂಲತೆಯನ್ನು ಉಂಟುಮಾಡಬೇಕು, ಇದು ವಾಸ್ತವವಾಗಿ ಸರ್ಕಾರದ ನೀತಿಯ ಅಂಶವಾಗಿದೆ ನ್ಯಾಯಾಲಯಗಳು ಪರಿಶೀಲಿಸಲು ಸಾಧ್ಯವಿಲ್ಲ ಹೀಗಾಗೀ ಸರ್ಕಾರವನ್ನೇ ಸಂರ್ಪಕಿಸಿ ಎಂದು ಸಿಜೆಐ ಹೇಳಿದರು, ಅರ್ಜಿಯನ್ನು ಇತ್ಯರ್ಥಪಡಿಸಿದರು‌.

  • ತಂಗಿಯ ಫಸ್ಟ್ ಪೀರಿಯೆಡ್ ರಕ್ತ ನೋಡಿ ಶಂಕಿಸಿ ಕೊಲೆಗೈದ ಅಣ್ಣ!

    ತಂಗಿಯ ಫಸ್ಟ್ ಪೀರಿಯೆಡ್ ರಕ್ತ ನೋಡಿ ಶಂಕಿಸಿ ಕೊಲೆಗೈದ ಅಣ್ಣ!

    ಮುಂಬೈ: ತಂಗಿಯ ಫಸ್ಟ್ ಪೀರಿಯಡ್‍ (Periods) ನ ರಕ್ತದ ಕಲೆ ನೋಡಿದ ಸಹೋದರ ಅನುಮಾನಗೊಂಡು ಆಕೆಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾರಾಷ್ಟ್ರ (Maharastra) ದ ಥಾಣೆಯಲ್ಲಿ ನಡೆದಿದೆ.

    ನಗರದಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡಿಕೊಂಡಿದ್ದ ಉಲ್ಲಾಸ್‍ನಗರ ಪ್ರದೇಶದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    12 ವರ್ಷದ ಹುಡುಗಿಗೆ ಕೆಲವು ದಿನಗಳ ಹಿಂದೆ ಋತುಸ್ರಾವ ಆರಂಭವಾಗಿದೆ. ಆದರೆ ಇದು ಅವಳ ಗಮನಕ್ಕೆ ಬಂದಿರಲಿಲ್ಲ. ಅಲ್ಲದೆ ಅವಳ ಬಟ್ಟೆಯಲ್ಲಿ ರಕ್ತದ ಕಲೆಗಳು ಕಾಣುತ್ತಿದ್ದವು. ಇದನ್ನು ಗಮನಿಸಿದ ಸಹೋದರ ಆಕೆಯನ್ನು ಪ್ರಶ್ನಿಸಿದ್ದಾನೆ. ಯಾರ ಜೊತೆಗೋ ಸಂಭೋಗ ನಡೆಸಿದ್ದಾಳೆ ಎಂದು ಆರೋಪಿಸಿದ್ದಾನೆ.

    ಬಾಲಕಿ ತನ್ನ ಅಣ್ಣ ಹಾಗೂ ಅತ್ತಿಗೆ ಜೊತೆ ವಾಸವಾಗಿದ್ದಳು. ಹೀಗಾಗಿ ತನಗೆ ಏನಾಗುತ್ತಿದೆ ಎಂಬುದನ್ನು ಅವರ ಜೊತೆ ಹೇಳಿಕೊಳ್ಳಲು ಹಿಂಜರಿದಿದ್ದಾಳೆ. ಅಲ್ಲದೆ ಋತುಸ್ರಾವದ ಬಗ್ಗೆ ಅವಳಿಗೆ ಯಾವುದೇ ಜ್ಞಾನ ಕೂಡ ಇರಲಿಲ್ಲ. ಇತ್ತ ಸಹೋದರಿ ಬಟ್ಟೆಯಲ್ಲಿ ರಕ್ತದ ಕಲೆಗಳನ್ನು ಕಂಡು ಅನುಮಾನದಿಂದ ಸಿಟ್ಟುಗೊಂಡ ಅಣ್ಣ, ಆಕೆಯ ಬಾಯಿ, ನಾಲಿಗೆ ಹಾಗೂ ದೇಹದ ಇತರೆ ಭಾಗಗಳನ್ನು ಸುಟ್ಟಿದ್ದಾನೆ. ನಂತರ ಆಕೆಯನ್ನು ಆಸ್ಪತ್ರೆಗೆ ಕರೆದುಕೊಮಡು ಹೋಗಲಾಯಿತು. ಆದರೆ ಅದಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ಪೊಲೀಸರು ವಿವರಿಸಿದ್ದಾರೆ.

    ಘಟನೆ ಸಂಬಂಧ ಸಹೋದರನ ವಿರುದ್ಧ ಉಲ್ಲಾಸ್‍ನಗರ ಪೊಲೀಸ್ ಠಾಣೆ (Ulhasnagar police station) ಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಫ್ಲ್ಯಾಟ್‌ನ 10ನೇ ಮಹಡಿಯಿಂದ ಬಿದ್ದು ನೀಟ್ ವಿದ್ಯಾರ್ಥಿ ಸಾವು

  • ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆ ನೀಡಿ ಕೇರಳ ಸರ್ಕಾರ ಆದೇಶ

    ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆ ನೀಡಿ ಕೇರಳ ಸರ್ಕಾರ ಆದೇಶ

    ತಿರುವನಂತಪುರಂ: ಸರ್ಕಾರದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ಋತುಚಕ್ರ (Periods Leave) ದ ರಜೆ ನೀಡಿ ಕೇರಳ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ದೇಶದಲ್ಲಿ ಮೊದಲ ಬಾರಿಗೆ ಇಂತದೊಂದು ಮಹತ್ವದ ನಿರ್ಧಾರವನ್ನು ಸಿಎಂ ಪಿಣರಾಯಿ ವಿಜಯನ್ (Pinarayi Vijayan) ತೆಗೆದುಕೊಂಡಿದ್ದಾರೆ.

    ರಾಜ್ಯ ಉನ್ನತ ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ, ವಿದ್ಯಾರ್ಥಿಗಳಿಗಿರುವ 75% ಹಾಜರಾತಿಯನ್ನು ವಿದ್ಯಾರ್ಥಿನಿಯರಿಗಾಗಿ 73% ಇಳಿಕೆ ಮಾಡಿದೆ. ಇದಲ್ಲದೆ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ವಿದ್ಯಾರ್ಥಿನಿಯರು 60 ದಿನಗಳ ಗರ್ಭಧಾರಣೆಯ ರಜೆಯನ್ನು ಪಡೆಯಬಹುದು ಎಂದು ಆದೇಶದಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ:ರಮೇಶ್ ಜಾರಕಿಹೊಳಿ ಬೆಂಬಲಿಗರು ಮಾಡುತ್ತಿರೋ ಸಮಾವೇಶಕ್ಕೆ ಹೋಗಲ್ಲ: ಸಂಜಯ್ ಪಾಟೀಲ್

    ಸರ್ಕಾರದ ಆದೇಶದ ಬೆನ್ನಲ್ಲೆ ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ (ಕುಸಾಟ್) ನಿಯಮ ಜಾರಿ ಮಾಡಿದೆ. ಈ ಬಗ್ಗೆ ಉನ್ನತ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯದ ರಾಜ್ಯ ಸಚಿವ ಆರ್ ಬಿಂದು (R Bindu) ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ರಾಜ್ಯಾದ್ಯಂತ ಇರುವ ವಿಶ್ವವಿದ್ಯಾನಿಲಯಗಳಲ್ಲಿ ಇದೇ ರೀತಿಯ ನೀತಿಯನ್ನು ಜಾರಿಗೆ ತರಲು ರಾಜ್ಯವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಡ್ರಗ್ಸ್ ದಂಧೆ – ಕೆಎಂಸಿ ಆಸ್ಪತ್ರೆಯ ವೈದ್ಯರು ವಜಾ, ವಿದ್ಯಾರ್ಥಿಗಳು ಅಮಾನತು

    ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ ಬಗ್ಗೆ ಟ್ವೀಟ್ ಮಾಡಿ, ಮುಟ್ಟಿನ ರಜೆ ನಿರ್ಧಾರದ ಮೂಲಕ ಮತ್ತೊಮ್ಮೆ ಕೇರಳವು ರಾಷ್ಟ್ರಕ್ಕೆ ಮಾದರಿಯಾಗಿದೆ ಮತ್ತು ಪ್ರಸ್ತುತ ನಿರ್ಧಾರವು ಲಿಂಗ ನ್ಯಾಯಯುತ ಸಮಾಜವನ್ನು ಸಾಕಾರಗೊಳಿಸುವ ಎಡ ಪ್ರಜಾಸತ್ತಾತ್ಮಕ ರಂಗ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸುತ್ತದೆ ಎಂದು ಹೇಳಿದ್ದರು.

    ಕಾಕತಾಳೀಯ ಎನ್ನುವಂತೆ ಕಳೆದ ವಾರವಷ್ಟೇ ಸುಪ್ರೀಂಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಲಾಗಿದ್ದು, ಭಾರತದಾದ್ಯಂತ ಮಹಿಳಾ ವಿದ್ಯಾರ್ಥಿಗಳು ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಮುಟ್ಟಿನ ನೋವು ರಜೆ ಅಥವಾ ಅವಧಿ ರಜೆಯನ್ನು ಪರಿಚಯಿಸಲು ಕರೆ ನೀಡಲಾಯಿತು. ಕೆಲವು ಸಂಸ್ಥೆಗಳು ಮತ್ತು ರಾಜ್ಯ ಸರ್ಕಾರಗಳನ್ನು ಹೊರತುಪಡಿಸಿ, ಸಮಾಜ, ಶಾಸಕಾಂಗ ಮತ್ತು ಇತರ ಮಧ್ಯಸ್ಥಗಾರರಿಂದ ಮುಟ್ಟಿನ ಅವಧಿಗಳನ್ನು ತಿಳಿದೋ ಅಥವಾ ತಿಳಿಯದೆಯೋ ನಿರ್ಲಕ್ಷಿಸಲಾಗಿದೆ ಎಂದು ಅರ್ಜಿಯಲ್ಲಿ ಪ್ರತಿಪಾದಿಸಲಾಗಿತ್ತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಋತುಮತಿ, ಹೆರಿಗೆಯಾದ್ರೆ 5 ತಿಂಗ್ಳು ಊರಿಂದ್ಲೇ ಹೊರಗಿರ್ಬೇಕು- ಕೊಪ್ಪಳದ ಸಜ್ಜಿಹೊಲದಲ್ಲಿ ಹೆಣ್ಮಕ್ಕಳ ನರಕಯಾತನೆ

    ಋತುಮತಿ, ಹೆರಿಗೆಯಾದ್ರೆ 5 ತಿಂಗ್ಳು ಊರಿಂದ್ಲೇ ಹೊರಗಿರ್ಬೇಕು- ಕೊಪ್ಪಳದ ಸಜ್ಜಿಹೊಲದಲ್ಲಿ ಹೆಣ್ಮಕ್ಕಳ ನರಕಯಾತನೆ

    ಕೊಪ್ಪಳ: ಹೈದ್ರಾಬಾದ್ ಕರ್ನಾಟಕದ ಅತ್ಯಂತ ಹಿಂದುಳಿದ ಜಿಲ್ಲೆ ಕೊಪ್ಪಳದಲ್ಲಿ ಇನ್ನೂ ಅಸ್ಪೃಶ್ಯತೆ ಎಂಬ ಪಿಡುಗು ಜೀವಂತವಾಗಿದೆ. ಅಸ್ಪೃಶ್ಯತೆ ಜೊತೆಗೆ ಕೊಪ್ಪಳ ನಗರದಲ್ಲಿ ಮತ್ತೊಂದು ಸಾಮಾಜಿಕ ಪಿಡುಗು ಬಯಲಿಗೆ ಬಂದಿದೆ. ಜಿಲ್ಲಾಡಳಿತದಿಂದ ಕೂಗಳತೆ ದೂರದಲ್ಲಿರೋ ಪ್ರದೇಶದಲ್ಲಿ ಅನಿಷ್ಠ ಪದ್ಧತಿಯೊಂದು ಜಾರಿಯಲ್ಲಿದ್ದು, ಯಾವೊಬ್ಬ ಅಧಿಕಾರಿಯೂ ಇದರ ಬಗ್ಗೆ ಗಮನ ಕೊಟ್ಟಿಲ್ಲ.

    ಪ್ರಪಂಚಕ್ಕೆ ಪ್ರಪಂಚವೇ ಬದಲಾವಣೆಯ ಗಾಳಿಯಲ್ಲಿ ತೇಲುತ್ತಿದೆ. ಆದರೆ ನಮಗೆ ಮಾತ್ರ ಇನ್ನೂ ದಶಕಗಳ ಹಿಂದಿನ ಪದ್ಧತಿಯಲ್ಲಿ ಕೊರಗುವಂತಿದೆ. ಹೌದು. ಕೊಪ್ಪಳ ನಗರದಿಂದ ಸುಮಾರು 3-4 ಕಿಲೋ ಮೀಟರ್ ದೂರದಲ್ಲಿರುವ ಸಜ್ಜಿಹೊಲ ಗ್ರಾಮದಲ್ಲಿ ಹೆಣ್ಮಕ್ಕಳು ತಿಂಗಳ ಋತುಮತಿಯಾದ್ರೆ ಅಥವಾ ಮಗುವಿಗೆ ಜನ್ಮ ನೀಡಿದ್ರೆ 5 ತಿಂಗಳ ಕಾಲ ಬಾಣಂತಿಯನ್ನು ಮುಟ್ಟಿಸಿಕೊಳ್ಳದೆ ಊರ ಹೊರಗಡೆ ಇಡ್ತಾರೆ ಎಂದು ಸ್ಥಳೀಯರಾದ ಗೌರಮ್ಮ ಹೇಳಿದ್ದಾರೆ.

    ಈ ಸಜ್ಜಿಹೊಲ ಗ್ರಾಮದಲ್ಲಿ ಸುಮಾರು 30 ಅಡವಿ ಬೆಂಚರ ಕುಟುಂಬ ವಾಸ ಮಾಡುತ್ತಿದೆ. ಆಸ್ಪತ್ರೆ ಮತ್ತು ಹೊರಜಗತ್ತಿನ ಪರಿಚಯವೇ ಇಲ್ಲದೆ ಹೆಣ್ಮಕ್ಕಳು ಗರ್ಭಿಣಿಯಾದರೆ ತಾವೇ ಹೆರಿಗೆಯನ್ನು ಮಾಡಿಕೊಳ್ಳಬೇಕಾದ ದುಸ್ಥಿತಿ. 5 ತಿಂಗಳು ಮಗುವಿನ ನಿತ್ಯಕರ್ಮ, ಲಾಲನೆಯನ್ನು ನೋಡಿಕೊಳ್ಳಬೇಕು. ಇವರಿಗೆ ಯಾರಾದರೂ ನೆರವಾದರೆ ಅಂತಹವರ ತಲೆಕೂದಲನ್ನು ತೆಗೆಯುವ ಪದ್ಧತಿಯೂ ರೂಢಿಯಲ್ಲಿಟ್ಟುಕೊಂಡಿದ್ದಾರೆ. ಮೂಲ ಸೌಕರ್ಯ ಇಲ್ಲದ ಸಣ್ಣ ಪುಟ್ಟ ಗುಡಿಸಲಿನಲ್ಲಿ ದಿನದೂಡುವಂತಹ ಸ್ಥಿತಿ ಇಲ್ಲಿನ ಹೆಣ್ಮಕ್ಕಳದ್ದಾಗಿದೆ ಎಂಂದು ನಗರಸಭೆ ಸದಸ್ಯ ರಮೇಶ್ ಹೇಳುತ್ತಾರೆ.

    ಒಟ್ಟಾರೆ ಓರ್ವ ಪುರುಷನ ಸರ್ವಸಮನಾಗಿ ನಿಂತಿರುವ ಮಹಿಳೆಗೆ ವಿಶ್ವವೇ ಗೌರವ ನೀಡುತ್ತಿದೆ. ಆದ್ರೆ ಈ ಗ್ರಾಮದಲ್ಲಿ ಮಾತ್ರ ಮಹಿಳೆ ತಾನು ಹೆಣ್ಣಾಗಿ ಹುಟ್ಟಿದ್ದೇ ತಪ್ಪು ಎಂದು ಕೊರಗುತ್ತಿದ್ದಾರೆ. ತಮಗೆ ಹೆಣ್ತನ ಕೊಟ್ಟ ದೇವರಿಗೆ ಶಪಿಸುತ್ತಿದ್ದಾರೆ. ಜನಪ್ರತಿನಿಧಿಗಳಾದರೂ ಈ ಜನಾಂಗಕ್ಕೆ ಹೊರಜಗತ್ತು ತೋರಿಸಿ ಅನಿಷ್ಠ ಪದ್ಧತಿ ತೊಲಗಿಸಿ ಬದಲಾವಣೆಯನ್ನು ತರಬೇಕಿದೆ.


    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv