Tag: Pet

  • ಸಾಕು ಪ್ರಾಣಿಗಳಿಗಾಗಿ ಬ್ಲಡ್‌ ಬ್ಯಾಂಕ್‌ ನೆಟ್‌ವರ್ಕ್ – ಏನಿದು ಕೇಂದ್ರದ ಹೊಸ ಯೋಜನೆ?

    ಸಾಕು ಪ್ರಾಣಿಗಳಿಗಾಗಿ ಬ್ಲಡ್‌ ಬ್ಯಾಂಕ್‌ ನೆಟ್‌ವರ್ಕ್ – ಏನಿದು ಕೇಂದ್ರದ ಹೊಸ ಯೋಜನೆ?

    ಭಾರತದಲ್ಲಿ ಜನ ಸಾಕು ಪ್ರಾಣಿಗಳನ್ನು ತಮ್ಮ ಕುಟುಂಬದ ಸದಸ್ಯರಂತೇ ಭಾವಿಸಿ ಸಾಕುತ್ತಾರೆ. ಮನುಷ್ಯರಂತೆ ಹೆಸರಿಟ್ಟು, ಮಗನೇ ಅಂತ ಕರೆಯೋದನ್ನ ನಾವೆಲ್ಲ ನೋಡಿದ್ದೇವೆ ಅಲ್ವಾ..?! ಅಷ್ಟೊಂದು ಮುದ್ದಾಗಿ ಸಾಕು ಪ್ರಾಣಿಗಳನ್ನು ನಮ್ಮ ಜನ ನೋಡಿಕೊಳ್ಳುತ್ತಾರೆ. ಇಷ್ಟೊಂದು ಮುದ್ದಾಗಿ ನೋಡಿಕೊಳ್ಳುವ ಪ್ರಾಣಿಗಳ ಆರೋಗ್ಯ ಸಹ ಮುಖ್ಯ ಅಲ್ವಾ..? ಇದೇ ಕಾರಣಕ್ಕೆ ಕೇಂದ್ರ ಸರ್ಕಾರ (Central Government) ಸಾಕುಪ್ರಾಣಿಗಳಿಗಾಗಿ ಬ್ಲಡ್‌ ಬ್ಯಾಂಕ್‌ (Pet Blood Banks), ರಕ್ತದ ಲಭ್ಯತೆಯ ಬಗ್ಗೆ ಸುಲಭವಾಗಿ ಮಾಹಿತಿ ಸಿಗುವಂತೆ ಮಾಡಲು ಚಿಂತನೆ ನಡೆಸುತ್ತಿದೆ. 

    ಅಂದ ಹಾಗೆ ಭಾರತದಲ್ಲಿ (India) ಇತ್ತೀಚೆಗೆ ಜನ ಅತೀ ಹೆಚ್ಚು ಸಾಕುಪ್ರಾಣಿಗಳನ್ನು ಸಾಕುತ್ತಿದ್ದಾರೆ. ಸುಮಾರು 53.6 ಕೋಟಿ ಜಾನುವಾರುಗಳು ಭಾರತದಲ್ಲಿವೆ! ಅವುಗಳಿಗೆ ಅಗತ್ಯ ಚಿಕಿತ್ಸೆಗಾಗಿ, ವ್ಯವಸ್ಥಿತವಾದ ಪ್ರಮಾಣೀಕೃತ ರಕ್ತನಿಧಿಗಳು ಇಲ್ಲ. ಇದೇ ಕಾರಣಕ್ಕೆ ಕೇಂದ್ರ ಸರ್ಕಾರ ಸಾಕು ಪ್ರಾಣಿಗಳಿಗಾಗಿ ಸುಲಭವಾಗಿ ಹಾಗೂ ಪ್ರಮಾಣಿಕೃತವಾದ ರಕ್ತನಿಧಿಗಳನ್ನು ಸ್ಥಾಪಿಸಿ, ಅದರ ಮಾಹಿತಿಗಳು, ರಕ್ತದ ಲಭ್ಯತೆ ಜನರಿಗೆ ಸುಲಭವಾಗಿ ಸಿಗುವಂತೆ ಮಾಡಲು ಮುಂದಾಗಿದೆ. ಇದಕ್ಕಾಗಿ ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯ (Department of Animal Husbandry & Dairying under the Ministry of Fisheries) ಸಾರ್ವಜನಿಕರ ಅಭಿಪ್ರಾಯವನ್ನೂ ಸಹ ಕೇಳಿದೆ. ಅಲ್ಲದೇ ರಕ್ತದಾನಕ್ಕೆ ಪ್ರಾಣಿಗಳಿಗೆ ಇರಬೇಕಾದ ಅರ್ಹತೆ ಹಾಗೂ ಮಾನದಂಡವನ್ನು ಮಾರ್ಗಸೂಚಿಯಲ್ಲಿ ಸರ್ಕಾರ ಪ್ರಕಟಿಸಿದೆ. 

    ಸಾಕುಪ್ರಾಣಿಗಳಿಗೆ ರಕ್ತ ನಿಧಿಯ ಅಗತ್ಯವೇನು?

    2019 ರಲ್ಲಿ ನಡೆಸಿದ 20ನೇ ಜಾನುವಾರು ಜನಗಣತಿಯ ಪ್ರಕಾರ ಭಾರತದಲ್ಲಿ 53.6 ಕೋಟಿ ಜಾನುವಾರುಗಳಿವೆ. ಈಗ ಅದು ಮತ್ತಷ್ಟು ಜಾಸ್ತಿಯಾಗಿರುವ ಸಾಧ್ಯತೆ ಇದೆ. ಸಾಕು ಪ್ರಾಣಿಗಳಲ್ಲಿ ದನಗಳು, ಎಮ್ಮೆಗಳು, ಮೇಕೆಗಳು ಮತ್ತು ಕುರಿಗಳು, ಹಾಗೆಯೇ ಕುದುರೆಗಳು, ಕತ್ತೆಗಳು, ಒಂಟೆಗಳು ಮತ್ತು ಹಂದಿಗಳಂತಹ ಪ್ರಾಣಿಗಳು ಸೇರಿವೆ. 

    ಜಾನುವಾರುಗಳು ದೇಶದ ಕೃಷಿ ಆರ್ಥಿಕತೆ ಮತ್ತು ಗ್ರಾಮೀಣ ಜನರ ಉದ್ಯೋಗದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಪಶುಸಂಗೋಪನೆ ಮತ್ತು ಹೈನುಗಾರಿಕೆ ವಲಯವು ಕೃಷಿ ವಲಯದ ಸುಮಾರು 30% ಆದಾಯ ನೀಡುತ್ತದೆ. ಇದೇ ಕಾರಣಕ್ಕೆ ಸಾಕು ಪ್ರಾಣಿಗಳ ಆರೋಗ್ಯ ಸಹ ಮುಖ್ಯವಾಗಿದೆ. ಅವುಗಳಿಗೆ ಉಂಟಾಗುವ ರಕ್ತ ಹೀನತೆ, ಗಾಯ, ರಕ್ತ ಹೆಪ್ಪುಗಟ್ಟುವಿಕೆ, ಸಾಂಕ್ರಾಮಿಕ ರೋಗ, ಅಸ್ವಸ್ಥತೆಯ ಸಂದರ್ಭದಲ್ಲಿ ಚಿಕಿತ್ಸೆಗಾಗಿ ರಕ್ತದ ಅಗತ್ಯ ಇರುತ್ತದೆ.  

    ಯಾವ ಸಾಕು ಪ್ರಾಣಿಗಳಲ್ಲಿ ಎಷ್ಟು ರಕ್ತ ಇರುತ್ತೆ? 

    ಪ್ರಾಣಿಗಳಲ್ಲಿ ರಕ್ತದ ಪ್ರಮಾಣ ದೇಹದ ತೂಕದ 7% ರಿಂದ 9% ವರೆಗೆ ಇರುತ್ತದೆ. ರಕ್ತದ ಪ್ರಮಾಣವು ಈ ಮಟ್ಟಕ್ಕಿಂತ ಕಡಿಮೆಯಾದಾಗ ರಕ್ತ ನೀಡುವ ಅಗತ್ಯ ಇರುತ್ತದೆ. 

    ದನಗಳು ದೇಹದ ತೂಕದ ಪ್ರತಿ ಕೆಜಿಗೆ 55 ml ರಕ್ತವನ್ನು ಹೊಂದಿರುತ್ತವೆ. ಸರಾಸರಿ 300 ಕೆಜಿ ತೂಕದ ದನ 16.5 ಲೀಟರ್ ರಕ್ತವನ್ನು ಹೊಂದಿರುತ್ತದೆ. ನಾಯಿಗಳು 86 ml/kg, ಕುದುರೆಗಳು 76 m;/kg, ಮೇಕೆಗಳು, ಕುರಿಗಳು,  ಹಂದಿಗಳು  66 ml/kg ಮತ್ತು, ಹಂದಿಗಳು  65  ml /kg ಮತ್ತು ಬೆಕ್ಕುಗಳು 55ml / kg, ರಕ್ತದ ಪ್ರಮಾಣವನ್ನು ಹೊಂದಿರುತ್ತವೆ. 

    ಪ್ರಾಣಿಗಳಲ್ಲೂ ರಕ್ತದ ಗುಂಪುಗಳಿವೆ 

    ಮಾನವರಂತೆ, ಪ್ರಾಣಿಗಳಲ್ಲಿ ಹೆಚ್ಚಿನ ಸಂಖ್ಯೆಯ ರಕ್ತ ಗುಂಪುಗಳಿವೆ, ದನಗಳಲ್ಲಿ 11, ನಾಯಿಗಳಲ್ಲಿ 9, ಕುದುರೆಗಳಲ್ಲಿ 8 ಮತ್ತು ಬೆಕ್ಕುಗಳಲ್ಲಿ 4 ರಕ್ತ ಗುಂಪುಗಳಿವೆ.

    ಪ್ರಾಣಿಗಳ ರಕ್ತ ದಾನಕ್ಕಿರೋ ಮಾನದಂಡಗಳೇನು?

    ರಕ್ತ ದಾನ ಮಾಡುವ ಪ್ರಾಣಿಗಳು ನಿಗದಿಪಡಿಸಿದ ಮಾನದಂಡಗಳನ್ನು ಪೂರೈಸಬೇಕು. ಅವುಗಳಲ್ಲಿ ಅನಾರೋಗ್ಯದ ಸಮಸ್ಯೆಗಳಿರಬಾರದು. ಉಣ್ಣೆ, ಇನ್ನಿತರೆ ಕೀಟಗಳ ಸಮಸ್ಯೆಯಿಂದ ಅವು ಮುಕ್ತವಾಗಿರಬೇಕು.

    ವಯಸ್ಸು & ತೂಕ

    ನಾಯಿಗಳು 1 ರಿಂದ 8 ವರ್ಷ ವಯಸ್ಸಿನದ್ದಾಗಿರಬೇಕು, ಕನಿಷ್ಠ 25 ಕೆಜಿ ತೂಕ ಹೊಂದಿರಬೇಕು. ಬೆಕ್ಕುಗಳು 1 ರಿಂದ 5 ವರ್ಷ ವಯಸ್ಸಿನವಗಿರಬೇಕು, ಕನಿಷ್ಠ 4 ಕೆಜಿ ತೂಕ ಹೊಂದಿರಬೇಕು. ಅವುಗಳಿಗೆ ಬೊಜ್ಜು ಇರಬಾರದು.  

    ವ್ಯಾಕ್ಸಿನೇಷನ್

    ದಾನಿ ಪ್ರಾಣಿಗೆ ವಿಶೇಷವಾಗಿ ರೇಬೀಸ್‌ ನಿರೋಧಕ ಲಸಿಕೆ ಹಾಕಿಸಬೇಕು. ನಿಯಮಿತವಾಗಿ ಜಂತುಹುಳು ನಿವಾರಣ ಔಷಧಿ ನೀಡಿರಬೇಕು. ಹೆಣ್ಣು ದಾನಿ ಪ್ರಾಣಿಗಳು ಗರ್ಭ ಧರಿಸಿರಬಾರದು. ಮರಿಗಳಿಗೆ ಹಾಲುಣಿಸುವ ಪ್ರಾಣಿಗಳಾಗಿರಬಾರದು. 

    ಎಷ್ಟು ದಿನಕ್ಕೊಮ್ಮೆ ದಾನ ಮಾಡ್ಬಹುದು? 

    ನಾಯಿಗಳು ಪ್ರತಿ 4-6 ವಾರಗಳಿಗೊಮ್ಮೆ, ಬೆಕ್ಕುಗಳು ಪ್ರತಿ 8-12 ವಾರಗಳಿಗೊಮ್ಮೆ ರಕ್ತ ದಾನಕ್ಕೆ ಅರ್ಹವಾಗಿವೆ.  

    ಪಶುವೈದ್ಯಕೀಯ ರಕ್ತನಿಧಿಗಳು ಎಲ್ಲಿವೆ?

    ಪಶುವೈದ್ಯಕೀಯ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳು, ಉಲ್ಲೇಖಿತ ಆಸ್ಪತ್ರೆಗಳು ಮತ್ತು ಪಾಲಿಕ್ಲಿನಿಕ್‌ಗಳು, ದೊಡ್ಡ ಪಶುವೈದ್ಯಕೀಯ ರೋಗನಿರ್ಣಯ ಕೇಂದ್ರಗಳು ಮತ್ತು ಸರ್ಕಾರದಿಂದ ನಿರ್ವಹಿಸಲ್ಪಡುವ ಬಹು-ವಿಶೇಷ ಪ್ರಾಣಿ ಆಸ್ಪತ್ರೆಗಳಲ್ಲಿ ಪಶುವೈದ್ಯಕೀಯ ರಕ್ತನಿಧಿಗಳನ್ನು ನಿರ್ಮಾಣ ಮಾಡಲಾಗುತ್ತದೆ. ಪಶುವೈದ್ಯಕೀಯ ರಕ್ತನಿಧಿಗಳು 24/7 ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಲಾಗುತ್ತದೆ. 

    ಡಿಜಿಟಲ್ ತಂತ್ರಜ್ಞಾನ ಬಳಕೆ

    * ಡಿಜಿಟಲ್ ತಂತ್ರಜ್ಞಾನ ಬಳಸಿಕೊಂಡು ಸಂಯೋಜಿತ ದಾನಿಗಳ ನೋಂದಣಿ ಮಾಡಲಾಗುತ್ತದೆ. ಇದು ಪ್ರಾಣಿಗಳ ಜಾತಿಗಳು, ತಳಿ, ಸ್ಥಳ ಮತ್ತು ರಕ್ತದ ವಿಧದ ಮಾಹಿತಿಯನ್ನು ಒಳಗೊಂಡಿರುತ್ತದೆ. 

    * ರಕ್ತನಿಧಿಯಲ್ಲಿ ಘಟಕಗಳ ನಕ್ಷೆ, ನೈಜ-ಸಮಯದ ದಾಸ್ತಾನು, ನಿರ್ವಹಣಾ ವ್ಯವಸ್ಥೆಯ ಮಾಹಿತಿ ಸಾರ್ವಜನಿಕರಿಗೆ ಲಭ್ಯವಾಗುವಂತೆ ನೋಡಿಕೊಳ್ಳಲಾಗುತ್ತದೆ. 

    * ತುರ್ತು ಸಂದರ್ಭಗಳಲ್ಲಿ ಪಶುವೈದ್ಯಕೀಯ ಚಿಕಿತ್ಸಾಲಯಗಳು, ಆಸ್ಪತ್ರೆಗಳು ಮತ್ತು ದಾನಿಗಳನ್ನು ಸಂಪರ್ಕಿಸಲು ಸಹಾಯವಾಣಿ ಮತ್ತು ಆನ್‌ಲೈನ್ ಪೋರ್ಟಲ್ ವ್ಯವಸ್ಥೆ ಮಾಡಲಾಗುತ್ತದೆ.

    * ಭವಿಷ್ಯದಲ್ಲಿ ದಾನ ಮಾಡುವ – ಸ್ವೀಕರಿಸುವವರ ಮೊಬೈಲ್ ಅಪ್ಲಿಕೇಶನ್‌ ಅಭಿವೃದ್ಧಿ ಪಡಿಸುವ ಗುರಿ ಇದೆ. 

    ಜಾನುವಾರುಗಳಿಂದ ಮಾಡಿದ ರಕ್ತದಾನಕ್ಕೆ ಹಣ ಪಡೆಯಬಹುದೇ?

    ಸಾಕುಪ್ರಾಣಿಗಳ ಮಾಲೀಕರು ಅಥವಾ ಜಾನುವಾರು ಮಾಲೀಕರಿಗೆ ಪ್ರಾಣಿಗಳ ರಕ್ತದಾನಕ್ಕಾಗಿ ಹಣ ನೀಡಲಾಗುವುದಿಲ್ಲ. ಸಾಕುಪ್ರಾಣಿ ಮಾಲೀಕರು ಅಥವಾ ಜಾನುವಾರು ಸಾಕಣೆದಾರರಿಗೆ ಯಾವುದೇ ಹಣಕಾಸಿನ ಪ್ರೋತ್ಸಾಹವನ್ನು ನೀಡಬಾರದು ಎಂದು ಸರ್ಕಾರ ಮಾರ್ಗಸೂಚಿಯಲ್ಲಿ ತಿಳಿಸಿದೆ. ಪ್ರತಿ ದಾನಕ್ಕೂ ಮಾಲೀಕರ ಒಪ್ಪಿಗೆ ಕಡ್ಡಾಯವಾಗಿರುತ್ತದೆ.

  • ಒಂದಕ್ಕಿಂತ ಹೆಚ್ಚು ನಾಯಿ ಸಾಕುವಂತಿಲ್ಲ – ಗಾಜಿಯಾಬಾದ್‌ನಲ್ಲಿ ಮೂರು ತಳಿಯ ನಾಯಿಗಳು ಬ್ಯಾನ್

    ಒಂದಕ್ಕಿಂತ ಹೆಚ್ಚು ನಾಯಿ ಸಾಕುವಂತಿಲ್ಲ – ಗಾಜಿಯಾಬಾದ್‌ನಲ್ಲಿ ಮೂರು ತಳಿಯ ನಾಯಿಗಳು ಬ್ಯಾನ್

    ಲಕ್ನೋ: ಸಾಕು ನಾಯಿಗಳೇ (Pet Dog) ಜನರ ಮೇಲೆ ದಾಳಿ ನಡೆಸುವಂತಹ ಪ್ರಕರಣಗಳು ಹೆಚ್ಚುತ್ತಿದ್ದಂತೆ ಇದೀಗ ಉತ್ತರ ಪ್ರದೇಶದ ಗಾಜಿಯಾಬಾದ್ (Ghaziabad) ಆಡಳಿತ ತನ್ನ ನಿವಾಸಿಗಳಿಗೆ ಮನೆಗಳಲ್ಲಿ ಒಂದಕ್ಕಿಂತ ಹೆಚ್ಚು ನಾಯಿಗಳನ್ನು ಸಾಕುವಂತಿಲ್ಲ ಎಂದಿದೆ. ಮಾತ್ರವಲ್ಲದೇ ಆಕ್ರಮಣಕಾರಿ ಸ್ವಭಾವವುಳ್ಳ ಪಿಟ್‌ಬುಲ್ (Pitbull), ರಾಟ್‌ವೀಲರ್ (Rottweiler) ಹಾಗೂ ಡೋಗೊ ಅರ್ಜೆಂಟಿನೋ (Dogo Argentino) ತಳಿಗಳನ್ನು ಸಾಕುಪ್ರಾಣಿಗಳಾಗಿ ಇಟ್ಟುಕೊಳ್ಳುವುದನ್ನು ನಿಷೇಧಿಸಿದೆ.

    ಸಾಕುಪ್ರಾಣಿ ಮಾಲೀಕರಿಗೆ ನವೆಂಬರ್ 1 ರಿಂದ ತಮ್ಮ ನಾಯಿಗಳಿಗೆ ಪರವಾನಗಿಯನ್ನು ನೀಡಲು ಪ್ರಾರಂಭಿಸಲಿದೆ. ಮಾಲೀಕರು 2 ತಿಂಗಳುಗಳೊಳಗೆ ತಮ್ಮ ನಾಯಿಗಳನ್ನು ನೋಂದಾಯಿಸಿಕೊಳ್ಳಬೇಕು ಎಂದು ಗಾಜಿಯಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ತನ್ನ ಮಾರ್ಗಸೂಚಿಯಲ್ಲಿ ತಿಳಿಸಿದೆ.

    ಬಹುಮಹಡಿ ಕಟ್ಟಡದ ನಿವಾಸಿಗಳು ತಮ್ಮ ಸಾಕು ಪ್ರಾಣಿಗಳನ್ನು ಹೊರಗೆ ಕರೆಗೊಯ್ಯುವ ಸಂದರ್ಭ ಲಿಫ್ಟ್‌ಗಳನ್ನು ಬಳಸಬೇಕಾಗುತ್ತದೆ. ಮಾತ್ರವಲ್ಲದೇ ತಮ್ಮ ಸಾಕು ನಾಯಿಗಳನ್ನು ಸಾರ್ವಜನಿಕ ಪ್ರದೇಶಗಳಿಗೆ ಕರೆದೊಯ್ಯುವಾಗ ಅವುಗಳಿಗೆ ಮೌತ್ ಗಾರ್ಡ್ ಅನ್ನು ಕಡ್ಡಾಯವಾಗಿ ಹಾಕಬೇಕು ಎಂದು ಆದೇಶಿಸಿದೆ. ಇದನ್ನೂ ಓದಿ: ಈ ಕ್ಷಣಕ್ಕೆ ನಾನು ಬಹಳ ದಿನದಿಂದ ಕಾಯುತ್ತಿದ್ದೆ: ಸೋನಿಯಾ ಗಾಂಧಿ

    ಪಿಟ್‌ಬುಲ್, ರಾಟ್‌ವೀಲರ್ ಮತ್ತು ಡೊಗೊ ಅರ್ಜೆಂಟಿನೊ ತಳಿಗಳು ಉಗ್ರವಾದ ಸ್ವಭಾವ ಹೊಂದಿರುವುದಾಗಿದ್ದು, ಈ ನಾಯಿಗಳನ್ನು ಸಾಕಲು ಯಾವುದೇ ಅನುಮತಿ ಹಾಗೂ ಪರವಾನಗಿ ನೀಡಲಾಗುವುದಿಲ್ಲ. ಯಾರಾದರೂ ಈ ತಳಿಯ ನಾಯಿಗಳನ್ನು ಹೊಂದಿದ್ದರೆ ಅಥವಾ ಖರೀದಿಸಿದರೆ ಮುಂದೊದಗಬಹುದಾದ ಅಪಾಯಕ್ಕೆ ಅವರೇ ಜವಾಬ್ದಾರರಾಗಿರುತ್ತಾರೆ. ಈ ಎಲ್ಲಾ 3 ತಳಿಯ ನಾಯಿಗಳನ್ನು ಗಾಜಿಯಾಬಾದ್‌ನಲ್ಲಿ ನಿಷೇಧಿಸಲಾಗಿದೆ ಎಂದು ಬಿಜೆಪಿ ನಾಯಕ ಮತ್ತು ಜಿಎಂಸಿ ಕೌನ್ಸಿಲರ್ ಸಂಜಯ್ ಸಿಂಗ್ ತಿಳಿಸಿದರು.

    ಕೆಲ ದಿನಗಳಿಂದ ಗಾಜಿಯಾಬಾದ್‌ನ ವಸತಿ ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ನಾಯಿ ಕಚ್ಚುವಿಕೆಯ ಹಲವಾರು ಘಟನೆಗಳು ವರದಿಯಾಗಿದೆ. ಈ ಹಿನ್ನೆಲೆ ನಗರದ ಮುನ್ಸಿಪಲ್ ಕಾರ್ಪೊರೇಷನ್ ಸಾಕು ಪ್ರಾಣಿ ಮಾಲೀಕರಿಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಇದನ್ನೂ ಓದಿ: ಮಳಲಿಯಲ್ಲಿರುವುದು ಮಂದಿರವೋ? ಮಸೀದಿಯೋ – ಇಂದು ತೀರ್ಪು ಪ್ರಕಟ ಸಾಧ್ಯತೆ

    Live Tv
    [brid partner=56869869 player=32851 video=960834 autoplay=true]

  • ಪ್ರಾಣಿಗಳಿಗೂ ಹರಡುತ್ತಾ ಮಂಕಿಪಾಕ್ಸ್? – ಮೊದಲ ಬಾರಿ ನಾಯಿಯಲ್ಲಿ ಸೋಂಕು ಪತ್ತೆ

    ಪ್ರಾಣಿಗಳಿಗೂ ಹರಡುತ್ತಾ ಮಂಕಿಪಾಕ್ಸ್? – ಮೊದಲ ಬಾರಿ ನಾಯಿಯಲ್ಲಿ ಸೋಂಕು ಪತ್ತೆ

    ಪ್ಯಾರಿಸ್: ಕೋವಿಡ್ ಬಳಿಕ ಇದೀಗ ಮಂಕಿಪಾಕ್ಸ್ ಸೋಂಕಿನ ಬಗ್ಗೆ ಜಾಗತಿಕವಾಗಿ ಭೀತಿ ಹೆಚ್ಚಿರುವ ಬೆನ್ನಲ್ಲೇ ನಾಯಿಯೊಂದರಲ್ಲೂ ಸೋಂಕು ದೃಢಪಟ್ಟಿರುವ ಘಟನೆ ಫ್ರಾನ್ಸ್‌ನಲ್ಲಿ ನಡೆದಿದೆ.

    ಇದೇ ಮೊದಲ ಬಾರಿಗೆ ನಾಯಿಗೂ ಮಂಕಿಪಾಕ್ಸ್ ಸೋಂಕು ತಗುಲಿರುವುದನ್ನು ಫ್ರೆಂಚ್ ಸಂಶೋಧಕರು ದೃಢಪಡಿಸಿದ್ದಾರೆ. ಮಾನವರಿಂದಲೇ ನಾಯಿಗೂ ಸೋಂಕು ಹರಡಿರುವುದಾಗಿ ಸಂಶೋಧಕರು ಅಭಿಪ್ರಾಯ ಪಟ್ಟಿದ್ದಾರೆ.

    ವರದಿಗಳ ಪ್ರಕಾರ, ಸೋಂಕಿತ ನಾಯಿಯ ಮಾಲೀಕ ಸಲಿಂಗಕಾಮಿಯಾಗಿದ್ದು, ಅವರಲ್ಲಿ 12 ದಿನಗಳ ಹಿಂದೆ ಮಂಕಿಪಾಕ್ಸ್ ಲಕ್ಷಣ ಕಂಡುಬಂದಿತ್ತು. ಮಾಲೀಕರೊಂದಿಗೇ ಯಾವಾಗಲೂ ಇರುತ್ತಿದ್ದ ನಾಯಿಯಲ್ಲೂ ಬಳಿಕ ರೋಗದ ಲಕ್ಷಣಗಳು ಕಂಡುಬಂದಿದೆ. ಇದನ್ನೂ ಓದಿ: ಸ್ವಾತಂತ್ರ್ಯ ದಿನಕ್ಕೂ ಮೊದಲೇ ದಾಳಿಯ ಆತಂಕ – 2,000 ಬುಲೆಟ್, ಡ್ರೋನ್‌ಗಳು ಪತ್ತೆ

    ನಾಯಿಯ ಮೈಯಲ್ಲೂ ಕೀವು ಇರುವ ಗುಳ್ಳೆಗಳು ಕಂಡುಬಂದಿದ್ದು, ಹೀಗಾಗಿ ನಾಯಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಮಂಕಿಪಾಕ್ಸ್ ಸೋಂಕು ಅದಕ್ಕೂ ತಗುಲಿರುವುದು ತಿಳಿದುಬಂದಿದೆ. ಈ ಮೂಲಕ ಮಾನವರಿಂದ ನಾಯಿಗೂ ಮಂಕಿಪಾಕ್ಸ್ ಹರಡುತ್ತದೆ ಎಂಬುದು ದೃಢವಾಗಿದೆ.

    ವಿಶ್ವದಾದ್ಯಂತ ಮಂಕಿಪಾಕ್ಸ್ ಭೀತಿಯನ್ನು ಉಂಟುಮಾಡುತ್ತಿದ್ದರೂ ಇಲ್ಲಿಯವರೆಗೆ ನಾಯಿ, ಬೆಕ್ಕುಗಳಂತಹ ಸಾಕು ಪ್ರಾಣಿಗಳಲ್ಲಿ ಎಂದಿಗೂ ರೋಗ ಪತ್ತೆಯಾಗಿರಲಿಲ್ಲ. ಆದರೆ ಇದೀಗ ನಾಯಿಯಲ್ಲಿ ಸೋಂಕು ದೃಢವಾಗಿರುವುದರಿಂದ ಇನ್ನು ಮುಂದೆ ಸೋಂಕಿತ ವ್ಯಕ್ತಿಗಳು ತಮ್ಮ ಸಾಕು ಪ್ರಾಣಿಗಳನ್ನು ದೂರ ಇಡುವುದು ಅಗತ್ಯ ಎಂದು ಸಂಶೋಧಕರು ತಿಳಿಸಿದ್ದಾರೆ. ಇದನ್ನೂ ಓದಿ: ಮಕ್ಕಳ ಕೈಯಿಂದ ರಕ್ಷಾ ಬಂಧನ ತೆಗಿಸಿ ವಿವಾದಕ್ಕೀಡಾದ ಶಿಕ್ಷಕಿ

    Live Tv
    [brid partner=56869869 player=32851 video=960834 autoplay=true]

  • ಸಾಕುನಾಯಿ ವಿಚಾರದಲ್ಲಿ ಜಗಳ – ದೊಣ್ಣೆ, ಕಬ್ಬಿಣದ ರಾಡ್‍ನಿಂದ ಕುಟುಂಬದ ಮೂವರ ಮೇಲೆ ಗಂಭೀರ ಹಲ್ಲೆ

    ಸಾಕುನಾಯಿ ವಿಚಾರದಲ್ಲಿ ಜಗಳ – ದೊಣ್ಣೆ, ಕಬ್ಬಿಣದ ರಾಡ್‍ನಿಂದ ಕುಟುಂಬದ ಮೂವರ ಮೇಲೆ ಗಂಭೀರ ಹಲ್ಲೆ

    ನವದೆಹಲಿ: ಸಾಕುನಾಯಿಯನ್ನು ಹೊಂದಿದ್ದ ಕುಟುಂಬದವರ ವಿರುದ್ಧ ರೋಚಿಗೆದ್ದ ನೆರೆಮನೆಯವರು ದೊಣ್ಣೆ, ಕಬ್ಬಿಣದ ರಾಡ್‍ನಿಂದ ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

    ರಸ್ತೆಯಲ್ಲಿ ಸಾಕುನಾಯಿ ತಿರುಗಾಡುವ ವಿಚಾರವಾಗಿ ಎರಡು ಕುಟುಂಬಗಳ ನಡುವೆ ದಾಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜಗಳ ನಡೆದಿತ್ತು. ಈ ವೇಳೆ ಸಾಕುನಾಯಿ ಹೊಂದಿದ್ದ ವಿನೋದ್ ಕುಮಾರ್, ಅವರ ಪತ್ನಿ ಮತ್ತು ಮಗಳ ಮೇಲೆ ನೆರೆಮನೆಯ ಜಿತೇಂದರ್ ಪಾಂಡೆ ಮತ್ತು ಅವರ ಕುಟುಂಬದವರು ಹಲ್ಲೆ ಮಾಡಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ(ದ್ವಾರಕಾ) ಎಂ.ಹರ್ಷವರ್ಧನ್ ತಿಳಿಸಿದ್ದಾರೆ. ಇದನ್ನೂ ಓದಿ: ನಾನು ಉದಯಪುರ ಘಟನೆಯನ್ನು ಖಂಡಿಸುತ್ತೇನೆ, ಆರೋಪಿಗಳ ವಿರುದ್ಧ ಕಠಿಣ ಕ್ರಮತೆಗೆದುಕೊಳ್ಳಿ: ಓವೈಸಿ 

    ನಡೆದಿದ್ದೇನು?
    ಜಿತೇಂದರ್ ಪಾಂಡೆ ಚೆನ್ನಾಗಿ ಕುಡಿದು ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ. ಈ ವೇಳೆ ವಿನೋದ್ ಕುಮಾರ್ ತನ್ನ ನಾಯಿಯೊಂದಿಗೆ ವಾಕಿಂಗ್‌ಗೆ ಹೋಗುತ್ತಿದ್ದರು. ಆಗ ಪಾಂಡೆಯನ್ನು ವಿನೋದ್ ಅವರ ನಾಯಿ ಕಚ್ಚಿದೆ ಎಂದು ನಾಯಿಯನ್ನು ಹೊಡೆಯಲು ಪ್ರಯತ್ನಿಸಿದ್ದಾನೆ. ನಂತರ, ಪಾಂಡೆ ತನ್ನ ಮನೆಯಿಂದ ಕೆಲವು ವ್ಯಕ್ತಿಗಳನ್ನು ಕರೆದಿದ್ದು, ಸಂತ್ರಸ್ತರ ಮೇಲೆ ಹಲ್ಲೆ ನಡೆಸಿದ್ದಾನೆ.

    ದೂರು ದಾಖಲು
    ಈ ಹಿನ್ನೆಲೆ ವಿನೋದ್ ಕುಮಾರ್ ಪೊಲೀಸರಿಗೆ ಜಿತೇಂದರ್ ಪಾಂಡೆ ಮತ್ತು ಆತನ ಸಂಬಂಧಿಕರ ವಿರುದ್ಧ ದೂರು ಕೊಟ್ಟಿದ್ದು, ಕಠಿಣ ಕಾನೂನು ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ. ಈ ದೂರಿನ ಪ್ರಕಾರ, ಹಲ್ಲೆ ವೇಳೆ ಆರೋಪಿಗಳು ಸಂತ್ರಸ್ತರ ಮೇಲೆ ಬಿದಿರಿನ ದೊಣ್ಣೆ ಮತ್ತು ಕಬ್ಬಿಣದ ರಾಡ್‍ಗಳನ್ನು ಬಳಸಿ ಹಲ್ಲೆ ಮಾಡಿರುವುದಾಗಿ ಉಲ್ಲೇಖಿಸಲಾಗಿದೆ. ಈ ಹಿನ್ನೆಲೆ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ:  ಕೇರಳ ಶೈಲಿಯಲ್ಲಿ ಮಾಡಿ ‘ಫಿಶ್ ಫ್ರೈ’

    crime

    ಇಬ್ಬರು ಅರೆಸ್ಟ್
    ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಂಡೆಯ ಸಂಬಂಧಿಕರಾದ ನವೀನ್ ಮತ್ತು ಸನೋಜ್ ಕುಮಾರ್ ಇಬ್ಬರನ್ನು ಬಂಧಿಸಲಾಗಿದೆ. ಇತರ ಆರೋಪಿಗಳು ನಾಪತ್ತೆಯಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Live Tv

  • ಪ್ರಾಣಿಗಳನ್ನು ಮನೆಯಲ್ಲಿ ಸಾಕಲು 250, 500 ರೂ. ಪಾವತಿಸಬೇಕು!

    ಪ್ರಾಣಿಗಳನ್ನು ಮನೆಯಲ್ಲಿ ಸಾಕಲು 250, 500 ರೂ. ಪಾವತಿಸಬೇಕು!

    ಚಂಡೀಘಡ: ಪಂಜಾಬ್ ನಲ್ಲಿನ್ನು ಸಾಕು ಪ್ರಾಣಿಗಳನ್ನು ಮನೆಯಲ್ಲಿಟ್ಟುಕೊಳ್ಳೋದಿಕ್ಕೂ ತೆರಿಗೆ ಪಾವತಿಸಬೇಕು. ಹೌದು, ಇನ್ನು ಮುಂದೆ ಸಾಕು ಪ್ರಾಣಿಗಳನ್ನು ಮನೆಯಲ್ಲಿಟ್ಟಿರುವ ಮಾಲೀಕರು ವರ್ಷಕ್ಕೆ 250 ಹಾಗೂ 500 ರೂ. ತೆರಿಗೆ ಪಾವತಿಸಬೇಕು.

    ಸ್ಥಳೀಯಾಡಳಿತ ಸಂಸ್ಥೆಗಳ ಸಚಿವ ಹಾಗೂ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಈ ಬಗ್ಗೆ ನೋಟಿಸ್ ಹೊರಡಿಸಿದ್ದಾರೆ.

    ನಾಯಿ, ಬೆಕ್ಕು, ಹಂದಿ, ಕುರಿ, ಜಿಂಕೆ ಇತ್ಯಾದಿ ಸಾಕು ಪ್ರಾಣಿಗಳನ್ನು ಸಾಕುವವರು ಒಂದು ವರ್ಷಕ್ಕೆ 250 ರೂಪಾಯಿ ತೆರಿಗೆಯನ್ನು ಪಾವತಿಸಬೇಕು. ಎಮ್ಮೆ, ಗೂಳಿ, ಹಸು, ಒಂಟೆ, ಆನೆಯಂತಹ ಸಾಕು ಪ್ರಾಣಿಗಳಿಗೆ ಪ್ರತಿಯೊಂದು ಪ್ರಾಣಿಗೂ ಒಂದು ವರ್ಷಕ್ಕೆ 500 ರೂಪಾಯಿಗಳನ್ನು ಪಾವತಿಸುವಂತೆ ನೋಟಿಸ್ ನಲ್ಲಿ ಸೂಚಿಸಲಾಗಿದೆ.

    ಎಲ್ಲಾ ಸಾಕು ಪ್ರಾಣಿಗಳಿಗೂ ಗುರುತು ಅಥವಾ ಸಂಖ್ಯೆಯನ್ನು ನೀಡಿ, ಮೈಕ್ರೋಚಿಪ್ ಗಳನ್ನು ಅಳವಡಿಸಲಾಗುವುದು ಎಂದು ನೋಟಿಸ್ ನಲ್ಲಿ ಹೇಳಲಾಗಿದೆ.

    ಇದರ ಜೊತೆಗೆ ಪ್ರಾಣಿಗಳನ್ನು ಸಾಕಬೇಕಾದರೆ ಕಡ್ಡಾಯವಾಗಿ ಅಧಿಕಾರಿಗಳಿಂದ ಲೈಸೆನ್ಸ್ ಪಡೆಯಬೇಕು. ನಂತರ ಪ್ರತಿ ವರ್ಷವು ಲೈಸೆನ್ಸ್ ನವೀಕರಿಸಬೇಕು ಎಂದು ನೋಟಿಸ್ ನಲ್ಲಿ ಹೇಳಲಾಗಿದೆ.