Tag: Petrol Diesel Price

  • ರಾಜ್ಯದ ವಾಹನ ಸವಾರರಿಗೆ ಶಾಕ್‌; ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ

    ರಾಜ್ಯದ ವಾಹನ ಸವಾರರಿಗೆ ಶಾಕ್‌; ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ

    ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಪೆಟ್ರೋಲ್ (Petrol) ಹಾಗೂ ಡೀಸೆಲ್‌ (Diesel) ದರ ಏರಿಕೆಗೊಳಿಸಿ ವಾಹನ ಸವಾರರಿಗೆ ಶಾಕ್ ನೀಡಿದೆ.

    ಪೆಟ್ರೋಲ್, ಡಿಸೇಲ್ ಮೇಲಿನ ಟ್ಯಾಕ್ಸ್ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಿಟೇಲ್‌ ಸೇಲ್ಸ್‌ ಟ್ಯಾಕ್ಸ್‌ ದರ ಹೆಚ್ಚಳ ಮಾಡಲಾಗಿದೆ. ಇದನ್ನೂ ಓದಿ: `ಡಿ’ಬಾಸ್ ಬಗ್ಗೆ ಮಾತಾಡಿದ್ರೆ ಜೀವಂತ ಸುಡೋದಾಗಿ ಬೆದರಿಕೆ – ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ವಶಕ್ಕೆ

    ಟ್ಯಾಕ್ಸ್ ಹೆಚ್ಚಳ ಹಿನ್ನೆಲೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳ‌ವಾಗಿದೆ. ಈ ಹಿಂದೆ ಟ್ಯಾಕ್ಸ್ ದರ ಪೆಟ್ರೋಲ್- 25.92% ಇದ್ದದ್ದು, ಈಗ 29.84% ಗೆ ಏರಿಕೆ (3.9% ಹೆಚ್ಚಳ)ಯಾಗಿದೆ. ಅಂತೆಯೇ ಡಿಸೇಲ್ ಈ‌ ಹಿಂದೆ- 14.34% ಇದ್ದದ್ದು, ಈಗ 18.44%ಗೆ ಏರಿಕೆ ಕಂಡಿದೆ (4.1% ರಷ್ಟು ಏರಿಕೆ). ಇದನ್ನೂ ಓದಿ: ದರ್ಶನ್‌ ಗ್ಯಾಂಗ್‌ನಿಂದ ಹತ್ಯೆ ಕೇಸ್;‌ ಸರ್ಕಾರದ ಎಸ್‌ಪಿಪಿಯಾಗಿ ಪ್ರಸನ್ನಕುಮಾರ್‌ ನೇಮಕ

    ಟ್ಯಾಕ್ಸ್ ಹೆಚ್ಚಳ ಹಿನ್ನೆಲೆ ಪೆಟ್ರೋಲ್‌ ದರ 100 ರೂಪಾಯಿ ದಾಟಲಿದೆ. ಈಗ ಪೆಟ್ರೋಲ್‌ ದರ 99.54 ರೂ. ಇದ್ದು, ಮುಂದೆ 102 ರೂಪಾಯಿಗೆ ಏರಿಕೆಯಾಗಲಿದೆ. ಇವತ್ತಿನ ಡೀಸೆಲ್‌ ದರ 85.93 ರೂಪಾಯಿ ಇದೆ. ಅದು 89.43 ರೂ. ಏರಿಕೆಯಾಗಲಿದೆ.

  • ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಆಗುತ್ತಾ? – ಪೆಟ್ರೋಲಿಯಂ ಸಚಿವ ಹೇಳಿದ್ದೇನು?

    ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಆಗುತ್ತಾ? – ಪೆಟ್ರೋಲಿಯಂ ಸಚಿವ ಹೇಳಿದ್ದೇನು?

    ನವದೆಹಲಿ: ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಸ್ಥಿರವಾಗಿದ್ದರೆ ಮತ್ತು ಮುಂದಿನ ತ್ರೈಮಾಸಿಕದಲ್ಲಿ ಈ ಸಂಸ್ಥೆಗಳು ಉತ್ತಮವಾಗಿದ್ದರೆ, ಪೆಟ್ರೋಲ್‌ ಮತ್ತು ಡೀಸೆಲ್‌ (Petrol Diesel Price) ಬೆಲೆ ಇಳಿಕೆ ಮಾಡಬಹುದು ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್‌ ಸಿಂಗ್‌ ಪುರಿ (Hardeep Singh Puri) ಹೇಳಿದ್ದಾರೆ.

    ನರೇಂದ್ರ ಮೋದಿ (Narendra Modi) ನೇತೃತ್ವದ ಸರ್ಕಾರವು 2022ರ ಏಪ್ರಿಲ್‌ನಿಂದ ತೈಲ ಬೆಲೆಯಲ್ಲಿ ಯಾವುದೇ ಏರಿಕೆಯಾಗದಂತೆ ನೋಡಿಕೊಂಡಿದೆ. ಆ ಮೂಲಕ ಗ್ರಾಹಕರಿಗೆ ಯಾವುದೇ ತೊಂದರೆಯಾಗದಂತೆ ಸರ್ಕಾರ ಕ್ರಮಕೈಗೊಂಡಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆಗೆ 273 ಕೋಟಿ ಅನುದಾನ

    ಮೋದಿ ಸರ್ಕಾರದ ಒಂಬತ್ತು ವರ್ಷ ಪೂರೈಸಿರುವ ಕುರಿತು ಬಿಜೆಪಿ ಪ್ರಧಾನ ಕಚೇರಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಫೇಲ್ ಮತ್ತು ಇತರ ವಿಷಯಗಳ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗಳಿಗಾಗಿ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ನಾಯಕರ ಹೇಳಿಕೆಗಳು ಸುಳ್ಳು ಎಂದು ಈಗಾಗಲೇ ಸಾಬೀತಾಗಿದೆ ಎಂದು ಮಾತನಾಡಿದ್ದಾರೆ.

    ಮೋದಿ ಸರ್ಕಾರದ ನೇತೃತ್ವದಲ್ಲಿ ಮೂಲಸೌಕರ್ಯ ವಲಯದಲ್ಲಿ ಬೆಳವಣಿಗೆಯಾಗಿದೆ. ಇತರರನ್ನು ದೂಷಿಸಲು ಕೆಲವರು ಯಾವಾಗಲೂ ಎದುರು ನೋಡುತ್ತಿರುತ್ತಾರೆ ಎಂದು ರಾಹುಲ್‌ ಗಾಂಧಿಗೆ ಪರೋಕ್ಷವಾಗಿ ಟಾಂಗ್‌ ಕೊಟ್ಟಿದ್ದಾರೆ. ಇದನ್ನೂ ಓದಿ: ಸಮಸ್ಯೆ ಬಗೆಹರಿದರೆ ಮಾತ್ರ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸುತ್ತೇನೆ: ಪಟ್ಟು ಬಿಡದ ಸಾಕ್ಷಿ ಮಲಿಕ್

    ಬೆಲೆ ನಿಗದಿ ವಿಷಯವು ಕ್ರಿಯಾತ್ಮಕ ವಿಷಯವಾಗಿದೆ. ಸರ್ಕಾರವು ತನ್ನ ಒಂಬತ್ತು ವರ್ಷಗಳ ಅವಧಿಯಲ್ಲಿ ಜನರಿಗೆ ಸಹಾಯ ಮಾಡಲು ಹಲವಾರು ಕಲ್ಯಾಣ ಕ್ರಮಗಳನ್ನು ಕೈಗೊಂಡಿದೆ. ಬಿಜೆಪಿಯೇತರ ರಾಜ್ಯ ಸರ್ಕಾರಗಳು ವ್ಯಾಟ್ ಅನ್ನು ಕಡಿಮೆ ಮಾಡದೇ ಬಿಜೆಪಿ ಆಡಳಿತವಿರುವ ಸರ್ಕಾರಗಳಿಗಿಂತ ಹೆಚ್ಚಿನ ಬೆಲೆಗೆ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಮಾರಾಟ ಮಾಡುತ್ತಿವೆ. ಆದರೂ ಬೆಲೆ ಏರಿಕೆ ಬಗ್ಗೆ ಮಾತನಾಡುತ್ತವೆ ಎಂದು ವಾಗ್ದಾಳಿ ನಡೆಸಿದ್ದಾರೆ.

  • ಭಾರೀ ಪ್ರಮಾಣದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಸಿದ ಮಹಾರಾಷ್ಟ್ರ

    ಭಾರೀ ಪ್ರಮಾಣದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಸಿದ ಮಹಾರಾಷ್ಟ್ರ

    ಮುಂಬೈ: ಮಹಾರಾಷ್ಟ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು (VAT) ಪ್ರತಿ ಲೀಟರ್‌ಗೆ ಕ್ರಮವಾಗಿ 5 ಮತ್ತು 3 ರೂಪಾಯಿಗಳಷ್ಟು ಕಡಿತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ಏಕನಾಥ್ ಶಿಂಧೆ ಹೇಳಿದ್ದಾರೆ.

    ಅವರಿಂದು ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ನವೆಂಬರ್ 4 ಮತ್ತು ಮೇ 22 ರಂದು ವ್ಯಾಟ್ ಅನ್ನು ಕಡಿಮೆ ಮಾಡಿತು. ರಾಜ್ಯಗಳಲ್ಲೂ ತೆರಿಗೆ ಕಡಿತಗೊಳಿಸುವಂತೆ ಸೂಚನೆ ನೀಡಿತು. ಆದರೆ ಈ ಹಿಂದೆ ಇದ್ದ ಮಹಾ ವಿಕಾಸ್ ಸರ್ಕಾರ ಕೇಂದ್ರದ ಸೂಚನೆಯನ್ನು ಅನುಸರಿಸಲಿಲ್ಲ. ನಮ್ಮ ಸರ್ಕಾರ ಪ್ರಸ್ತುತ ಹಣಕಾಸು ಸ್ಥಿತಿಯನ್ನು ಅಧ್ಯಯನ ಮಾಡಿ ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಅನ್ನು ಇಳಿಸಲು ಮುಂದಾಗಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಮೋದಿ ಹತ್ಯೆಗೆ ಸಂಚು- ನಿವೃತ್ತ ಪೊಲೀಸ್ ಅಧಿಕಾರಿ ಸೇರಿ ಇಬ್ಬರು ಶಂಕಿತ ಭಯೋತ್ಪಾದಕರ ಬಂಧನ

    ಪ್ರತಿ ಲೀಟರ್ ಪೆಟ್ರೋಲ್‌ಗೆ 5 ರೂ. ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲಿನ 3 ರೂ. ವ್ಯಾಟ್ ಅನ್ನು ಕಡಿತಗೊಳಿಸಲು ನಿರ್ಧರಿಸಿದೆ. ಈ ನಿರ್ಧಾರದಿಂದ ರಾಜ್ಯದ ಬೊಕ್ಕಸಕ್ಕೆ 6,000 ಕೋಟಿ ರೂಪಾಯಿ ಹೊರೆ ಬೀಳಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಆಚರಣೆ, ವೈಭವಗಳನ್ನ ಇಷ್ಟಪಡದ ಸಿದ್ದರಾಮಯ್ಯ ಈಗ ಉತ್ಸವ ಆಚರಿಕೊಳ್ಳುತ್ತಿದ್ದಾರೆ: ವಿ.ಸೋಮಣ್ಣ

    ಶಿವಸೇನೆ ಜನರ ಕಲ್ಯಾಣಕ್ಕಾಗಿ ಈ ನಿರ್ಧಾರ ಕೈಗೊಳ್ಳುತ್ತಿದೆ ಎಂದು ಉಪಮುಖ್ಯಮಂತ್ರಿ ದೇವೆಂದ್ರ ಫಡ್ನವೀಸ್ ಹರ್ಷ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]