Tag: Petrol price hike

  • ನಿಮ್ಮ ಪಕ್ಷದ ಆಡಳಿತ ಇರುವ ರಾಜ್ಯಗಳಲ್ಲಿ ತೈಲ ದರ ಎಷ್ಟಿದೆ? – ಬಿಜೆಪಿಗರಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ

    ನಿಮ್ಮ ಪಕ್ಷದ ಆಡಳಿತ ಇರುವ ರಾಜ್ಯಗಳಲ್ಲಿ ತೈಲ ದರ ಎಷ್ಟಿದೆ? – ಬಿಜೆಪಿಗರಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ

    ಬೆಂಗಳೂರು: ಪೆಟ್ರೋಲ್ ಡೀಸೆಲ್ ದರ ಹೆಚ್ಚಳ (Petrol price hike) ಮಾಡಲಾಗಿದೆ ಎಂದು ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ. ಹಾಗಾದರೆ ಅವರ ಪಕ್ಷ ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ದರ ಎಷ್ಟಿದೆ? ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಬಿಜೆಪಿಗರಿಗೆ (BJP) ತಿರುಗೇಟು ನೀಡಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೈಲ ಬೆಲೆ ಖಂಡಿಸಿ ಬಿಜೆಪಿ ಪ್ರತಿಭಟನೆ ಮಾಡಲಿ. ಅವರಿಗೆ ಪ್ರತಿಭಟಿಸುವ ಹಕ್ಕಿದೆ. ಜನರ ಸವಾಲುಗಳಿಗೆ ಉತ್ತರ ಕೊಡುವವರು ಯಾರು? ಪೆಟ್ರೋಲ್ ದರವನ್ನು 97ರೂ. ವರೆಗೆ ತಂದವರು ಯಾರು? ಸೆಸ್‍ಗಳ ಅನುಕೂಲ ಮಾಡಿಕೊಟ್ಟಿದ್ದಾರೆ. ರಷ್ಯಾದಿಂದ ಕಡಿಮೆ ಬೆಲೆಗೆ ತೆಗೆದುಕೊಂಡು ಅದನ್ನು ಜನ ಸಾಮಾನ್ಯರಿಗೆ ಕೊಟ್ಟಿದ್ದೀರಾ? ನಾವು ಕೇವಲ 3ರೂ. ಏರಿಕೆ ಮಾಡಿದ್ದೇವೆ ಅಷ್ಟೇ ಎಂದು ಅವರು ಸರ್ಕಾರದ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

    ಮಹಾರಾಷ್ಟ್ರ, ಆಂದ್ರದಲ್ಲಿ ಎಷ್ಟಿದೆ? ಬಿಜೆಪಿ ಇರುವ ರಾಜ್ಯಗಳಲ್ಲಿ ತೈಲ ಬೆಲೆ ಎಷ್ಟಾಗಿದೆ? ಇವರು ಬೆಲೆ ಏರಿಕೆ ಮಾಡಿದಾಗ ದೇಶ ಕಟ್ಟುವ ಅವಶ್ಯಕತೆ ಇದೆ ಅಂತಾರೆ. ನಾವು ಮಾಡಿದ್ರೆ ದೇಶ ಹಾಳಾಗುತ್ತಾ? ಅಂಕಿ ಅಂಶಗಳನ್ನು ನಾಳೆ (ಜೂ.18) ಜನರ ಮುಂದೆ ಇಡುತ್ತೇವೆ. ಆಗ ಎಲ್ಲಾ ವಿಚಾರ ತಿಳಿಯಲಿದೆ ಎಂದು ಅವರು ಕಿಡಿಕಾರಿದ್ದಾರೆ.

    ಗ್ಯಾರೆಂಟಿ ಹಣ ಬಳಕೆ ಎಂದು ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ. ಆ ದುಡ್ಡನ್ನು ಸಿಎಂ, ಡಿಸಿಎಂ ಮನೆಗೆ ತೆಗೆದುಕೊಂಡು ಹೋಗ್ತಾರಾ? ಹಾಗೆ ಮಾಡೋಕೆ ಆಗುತ್ತಾ? ಅಡುಗೆ ಮನೆ ನಡೆಸಲು ಕಷ್ಟ ಆಗುತ್ತದೆ ಎಂದು ನಾವು ಗ್ಯಾರೆಂಟಿ ಯೋಜನೆಗಳನ್ನು ಕೊಡುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

    2023-24ರಲ್ಲಿ ಎಲ್ಲಾ ತೈಲ ಕಂಪನಿಗಳ ಆದಾಯ 82 ಕೋಟಿ ರೂ. ಇದೆ. ಅದರ ಹಣವನ್ನ ಕೇಂದ್ರದಿಂದ ಜನರಿಗೆ ಕೊಟ್ಟಿದ್ದಾರಾ? ಕಡಿಮೆ ಬೆಲೆಗೆ ಖರೀದಿ ಮಾಡಿ, ರಷ್ಯಾದಿಂದ 3.2 ಬಿಲಿಯನ್ ಲಾಭ ಮಾಡಿದ್ದೀರಿ. ಅದನ್ನು ಸಾಮಾನ್ಯರಿಗೆ ಕೊಟ್ಟಿದ್ದೀರಾ? ಬಿಜೆಪಿ ಆಡಳಿತ ಇರುವ ರಾಜ್ಯದಲ್ಲಿ 110ರೂ. ಗಡಿ ದಾಟಿದೆ. ಇದರ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಈಗ ಬಹಳ ವರ್ಷ ಆದ್ಮೇಲೆ ನಾವು ಬೆಲೆ ಏರಿಕೆ ಮಾಡಿದ್ದೇವೆ ಎಂದು ಅವರು ಹೇಳಿದ್ದಾರೆ.

  • ರಾಜ್ಯದ ಅಭಿವೃದ್ಧಿಗಾಗಿ ತೈಲ ದರ ಹೆಚ್ಚಳ: ಪರಮೇಶ್ವರ್

    ರಾಜ್ಯದ ಅಭಿವೃದ್ಧಿಗಾಗಿ ತೈಲ ದರ ಹೆಚ್ಚಳ: ಪರಮೇಶ್ವರ್

    ಬೆಂಗಳೂರು: ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಹಣ ಬೇಕು ಎಂಬ ಕಾರಣಕ್ಕೆ ತೈಲ ದರ ಹೆಚ್ಚಳ (Petrol price hike) ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ (G.Parameshwar) ಹೇಳಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ (BJP) ಎಷ್ಟು ಬಾರಿ ತೈಲ ಬೆಲೆ ಏರಿಕೆ ಮಾಡಿತ್ತು ಎಂದು ಅವರು ಯೋಚನೆ ಮಾಡಬೇಕು. ಬಿಜೆಪಿ 14 ಬಾರಿ ಬೆಲೆ ಏರಿಕೆ ಮಾಡಿತ್ತು. ಪಕ್ಕದ ರಾಜ್ಯಗಳಿಗೆ ಹೊಲಿಕೆ ಮಾಡಿದ್ರೆ, ಈಗಲೂ ಕರ್ನಾಟಕದಲ್ಲಿ ಬೆಲೆ ಕಡಿಮೆಯೇ ಇದೆ. ಬೇರೆ ರಾಜ್ಯದಲ್ಲಿ ಬೆಲೆ ಇನ್ನೂ ಹೆಚ್ಚಿದೆ. ಗ್ಯಾರಂಟಿಯಿಂದಾಗಿ ಬೆಲೆ ಏರಿಕೆ ಮಾಡಿಲ್ಲ. ಸಮಯಕ್ಕೆ ತಕ್ಕನಾಗಿ ಬೆಲೆ ಏರಿಕೆ ಮಾಡಬೇಕಿದೆ ಎಂದಿದ್ದಾರೆ. ಇದನ್ನೂ ಓದಿ: ದರ್ಶನ್ ಕೇಸ್‍ನಲ್ಲಿ ಯಾವುದೇ ಮೃದು ಧೋರಣೆ ಇಲ್ಲ: ಪರಮೇಶ್ವರ್

    ನಮ್ಮ ರಾಜ್ಯದಲ್ಲಿ ಸಂಪನ್ಮೂಲಗಳ ಕ್ರೂಢೀಕರಣ ಆಗಬೇಕಿದೆ. ಅದಕ್ಕಾಗಿ ಬೆಲೆ ಏರಿಕೆ ಮಾಡಲಾಗಿದೆ. ಗ್ಯಾರಂಟಿಗೊಸ್ಕರ ಬೆಲೆ ಏರಿಕೆ ಮಾಡಿದ್ದಾರೆ ಎಂದು ಹೇಳುವುದು ಸರಿಯಲ್ಲ. ನಾವು ಇಷ್ಟ ಬಂದ ಹಾಗೆ ತೈಲ ಬೆಲೆ ಏರಿಸಿಲ್ಲ. ಅಭಿವೃದ್ಧಿ ಮಾಡಲು ಹೆಚ್ಚು ಹಣ ಬೇಕು. ಅದಕ್ಕಾಗಿ ಮಾತ್ರ ಬೆಲೆ ಏರಿಕೆ ಮಾಡಿದ್ದೇವೆ ಎಂದಿದ್ದಾರೆ.

    ಇವತ್ತು ನಾನು ಒಂದು ಮಾತು ಹೇಳಿದ್ರೆ, ಶಾಶ್ವತವಾಗಿ ಅದೇ ಮಾತು ಉಳಿದು ಹೋಗುತ್ತಾ? ಸಮಯಕ್ಕೆ ತಕ್ಕನಾಗಿ ಮಾತುಗಳು ಬದಲಾಗುತ್ತವೆ. ನಾವು ಸಹ ಆಡಳಿತ ಮಾಡಬೇಕಲ್ವಾ? ಎಂದು ಅವರು ವಿಪಕ್ಷಗಳಿಗೆ ತಿರುಗೇಟು ಕೊಟ್ಟಿದ್ದಾರೆ. ಇದನ್ನೂ ಓದಿ: ರಾಜಧಾನಿಗೆ ಅಮರಾವತಿಯನ್ನೇ ಚಂದ್ರಬಾಬು ನಾಯ್ಡು ಆಯ್ದುಕೊಂಡಿದ್ದು ಏಕೆ..?

  • ತೈಲ ಬೆಲೆ ಹೆಚ್ಚಾಗಿದ್ದಕ್ಕೆ ಪ್ರತಿಪಕ್ಷಗಳು ಕೇಂದ್ರದ ವಿರುದ್ಧ ಪ್ರತಿಭಟನೆ ಮಾಡ್ಬೇಕು: ಸಿಎಂ

    ತೈಲ ಬೆಲೆ ಹೆಚ್ಚಾಗಿದ್ದಕ್ಕೆ ಪ್ರತಿಪಕ್ಷಗಳು ಕೇಂದ್ರದ ವಿರುದ್ಧ ಪ್ರತಿಭಟನೆ ಮಾಡ್ಬೇಕು: ಸಿಎಂ

    ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಳ (Petrol price hike) ಮಾಡಿದ್ದಕ್ಕೆ ಬಿಜೆಪಿ (BJP) ಹಾಗೂ ಜೆಡಿಎಸ್‍ನವರು (JDS) ನಮ್ಮ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಅವರು ಪ್ರತಿಭಟನೆ ಮಾಡಬೇಕಾಗಿರುವುದು ಕೇಂದ್ರ ಸರ್ಕಾರದ ವಿರುದ್ಧ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಪ್ರತಿಪಕ್ಷಗಳಿಗೆ ತಿರುಗೇಟು ಕೊಟ್ಟಿದ್ದಾರೆ.

    ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನರೇಂದ್ರ ಮೋದಿಯವರು ಗುಜರಾತ್ ಸಿಎಂ ಆಗಿದ್ದಾಗ ಬೆಲೆ ಏರಿಕೆ ಬಗ್ಗೆ ಕೇಂದ್ರದ ಮೇಲೆ ಹೇಳಿಕೆ ಕೊಟ್ಟಿದ್ದರು. ನಾನು ಪ್ರಧಾನಿ ಆದ್ಮೇಲೆ ಪೆಟ್ರೋಲ್, ಡಿಸೇಲ್ ಬೆಲೆ ಇಳಿಸ್ತೀವಿ ಎಂದಿದ್ದರು. ಅದಕ್ಕೆ ವಿರುದ್ಧವಾಗಿ ಈಗ ಕೆಲಸ ಮಾಡುತ್ತಿದ್ದಾರೆ. ನರೇಂದ್ರ ಮೋದಿ ಪ್ರಧಾನಿ ಆದಾಗ ಪೆಟ್ರೋಲ್ ಬೆಲೆ 72.26 ರೂ. ಇತ್ತು, ಜೂನ್ 2024ರಲ್ಲಿ 104 ರೂ.ಪಾಯಿ ಆಗಿತ್ತು, ಡೀಸೆಲ್ ಬೆಲೆ 57 ರೂ. ಇತ್ತು, ಈಗ 98 ರೂ.ಆಗಿದೆ. ಈಗ ಹೇಳಿ, ಬೆಲೆ ಹೆಚ್ಚು ಮಾಡಿದ್ದು ಯಾರು ಎಂದು ಅವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ದುರಹಂಕಾರ ಬಿಟ್ಟು ಜನಪರ ಆಡಳಿತ ನೀಡಿ- ಸಿಎಂ ವಿರುದ್ಧ ಸುನೀಲ್ ಕುಮಾರ್ ವಾಗ್ದಾಳಿ

    ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಕಚ್ಚಾ ತೈಲ ಬೆಲೆ 113 ಡಾಲರ್ ಇತ್ತು, ಈಗ 82.35 ಡಾಲರ್ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆ ಆದರೆ ದೇಶದಲ್ಲೂ ಬೆಲೆ ಇಳಿಸಬೇಕು ಅಲ್ವಾ? ಈಗ ಬಿಜೆಪಿಯವರು ಯಾರ ವಿರುದ್ಧ ಪ್ರತಿಭಟಿಸಬೇಕು? ಕೇಂದ್ರ ಸರ್ಕಾರದ ಮೇಲೆ ಅಲ್ವಾ ಎಂದು ಅವರು ಪ್ರಶ್ನಿಸಿದ್ದಾರೆ.

    ಕೇಂದ್ರ ಸರ್ಕಾರ ಜಿಎಸ್‍ಟಿ ತಂದಮೇಲೆ ಹೆಚ್ಚಿನ ತೆರಿಗೆ ವಿಧಿಸುವ ಅಧಿಕಾರ ಇಲ್ಲ. ಪೆಟ್ರೋಲ್ ಹಾಗೂ ಡಿಸೇಲ್ ಮೇಲಿನ ಸೆಸ್ ವಿಧಿಸುವ ಅಧಿಕಾರ, ಅಬಕಾರಿ ಸುಂಕ, ಸ್ಟ್ಯಾಂಪ್ ಡ್ಯೂಟಿ ವಿಧಿಸುವ ಅಧಿಕಾರ ಮಾತ್ರ ರಾಜ್ಯ ಸರ್ಕಾರಕ್ಕೆ ಇದೆ. ಉಳಿದೆಲ್ಲ ತೆರಿಗೆಯನ್ನು ಅವರೇ ವಿಧಿಸ್ತಾರೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

    ಕರ್ನಾಟಕ ಸರ್ಕಾರ ಪಾಪರ್ ಆಗಿದೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ (R.Ashok) ಹೇಳಿಕೆ ವಿಚಾರವಾಗಿ, ಪಾಪರ್ ಎಂದು ಘೋಷಿಸಿದ್ದು ಯಾರು? ಪಾಪರ್ ಅಂದ್ರೆ ಅರ್ಥ ಗೊತ್ತಾ ಅಶೋಕನಿಗೆ? ನಾವು ಯಾರಿಗಾದರೂ ವೇತನ ಕೊಡೋದು ನಿಲ್ಲಿಸಿದ್ದೇವಾ? ಎಂದು ಅವರು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

    ಇನ್ನೂ ಕೇಂದ್ರದ ವಿಶೇಷ ಅನುದಾನದ ವಿಚಾರವಾಗಿ, 5,495 ಕೋಟಿ ರೂ. ತೆರಿಗೆ ಪಾಲು ಕಡಿಮೆಯಾಗಿದೆ. ವಿಶೇಷ ಅನುದಾನ ಘೋಷಣೆ ಮಾಡಿ ರಾಜ್ಯಕ್ಕೆ ಹಣ ಕೊಡಲಿಲ್ಲ. ನಿರ್ಮಲಾ ಸೀತಾರಾಮನ್ ಈ ಬಗ್ಗೆ ಏನು ಕ್ರಮ ತೆಗೆದುಕೊಂಡಿಲ್ಲ. ಭದ್ರಾ ಮೇಲ್ದಂಡೆ, ಬೆಂಗಳೂರು ಪೆರಿಫಿರಲ್ ರಿಂಗ್ ರೋಡ್‍ಗಳ ಯೋಜನೆಗೆ ವಿಶೇಷ ಅನುದಾನ ನೀಡಿಲ್ಲ. ಇವರು ಯಾರ ಬಗ್ಗೆ ಪ್ರತಿಭಟನೆ ಮಾಡಬೇಕು ಎಂದು ಅವರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಸ್ಪೀಕರ್‌ ಹುದ್ದೆ ಬಿಜೆಪಿಗೆ, ಡೆಪ್ಯೂಟಿ ಸ್ಪೀಕರ್‌ ಹುದ್ದೆ ಎನ್‌ಡಿಎ ಮಿತ್ರ ಪಕ್ಷಕ್ಕೆ?

  • ದಕ್ಷಿಣದ ರಾಜ್ಯಗಳ ಪೈಕಿ ಕರ್ನಾಟಕದಲ್ಲೇ ದರ ಕಡಿಮೆ – ತೈಲ ದರ ಏರಿಕೆಗೆ ಸಿಎಂ ಸಮರ್ಥನೆ!

    ದಕ್ಷಿಣದ ರಾಜ್ಯಗಳ ಪೈಕಿ ಕರ್ನಾಟಕದಲ್ಲೇ ದರ ಕಡಿಮೆ – ತೈಲ ದರ ಏರಿಕೆಗೆ ಸಿಎಂ ಸಮರ್ಥನೆ!

    – ಪೆಟ್ರೋಲ್ ಮೇಲೆ ಕೇಂದ್ರದ ತೆರಿಗೆ ಕಡಿಮೆ ಮಾಡ್ಬೇಕು: ಸಿದ್ದರಾಮಯ್ಯ ಆಗ್ರಹ

    ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಗೆ (Petrol, Diesel Price Hike) ಜನಸಾಮಾನ್ಯರಿಂದ ತೀವ್ರ ಆಕ್ರೋಶ ಕಂಡುಬರುತ್ತಿದೆ. ಇತ್ತ ಪೆಟ್ರೋಲ್, ಡಿಸೇಲ್ ಮೇಲಿನ ವ್ಯಾಟ್ ಹೆಚ್ಚಳವನ್ನ ಸಿಎಂ ಸಿದ್ದರಾಮಯ್ಯ (Siddaramaiah) ಸಮರ್ಥಿಸಿಕೊಂಡಿದ್ದಾರೆ.

    ಸಿಎಂ ಪ್ರಕಟಣೆಯಲ್ಲಿ ಏನಿದೆ?
    ವ್ಯಾಟ್ ಹೆಚ್ಚಳದ ನಂತರವೂ ಬಹುತೇಕ ದಕ್ಷಿಣ ಭಾರತದ (South India) ರಾಜ್ಯಗಳಲ್ಲಿ ಕರ್ನಾಟಕದಲ್ಲೇ ಪೆಟ್ರೋಲ್, ಡೀಸೆಲ್‌ ಬೆಲೆ ಕಡಿಮೆ ಇರೋದು. ಆರ್ಥಿಕವಾಗಿ ಬಲಿಷ್ಠವಾಗಿರುವ ಮಹಾರಾಷ್ಟ್ರದಲ್ಲಿ ಇಂಧನಗಳ ಮೇಲಿನ ಮಾರಾಟ ಸುಂಕ ಪೆಟ್ರೋಲ್‌ಗೆ 25% ಇದ್ದು, ಹೆಚ್ಚುವರಿಯಾಗಿ 5.12 ರೂ. ತೆರಿಗೆ ಸಹ ಇದೆ. ಇನ್ನು ಮಹಾರಾಷ್ಟ್ರದಲ್ಲಿ ಡಿಸೇಲ್ ಮೇಲೆ 21% ತೆರಿಗೆ ಇದೆ. ಕರ್ನಾಟಕದಲ್ಲಿ ಪರಿಷ್ಕೃತಗೊಂಡ ನಂತರವೂ ಈ ಸುಂಕದ ಪ್ರಮಾಣ ಮಹಾರಾಷ್ಟ್ರಕ್ಕಿಂತ ಕಡಿಮೆ ಇದೆ. ಇದರ ಹೊರತಾಗಿ ಡಿಸೇಲ್ ದರ ಕರ್ನಾಟಕದಲ್ಲಿ, ಗುಜರಾತ್ ಮತ್ತು ಮಧ್ಯಪ್ರದೇಶಗಳಿಗಿಂತಲೂ ಕಡಿಮೆ ಇದೆ. ನಮ್ಮ ರಾಜ್ಯದಲ್ಲಿ ಇಂಧನಗಳ ದರ ಜನತೆಗೆ ಕೈಗೆಟುಕುವ ದರಗಳಲ್ಲಿ ಸಿಗುತ್ತಿದೆ.

    ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಡಬಲ್ ಇಂಜಿನ್ ಸರ್ಕಾರವು ಕರ್ನಾಟಕದ ಆದಾಯ ಬೇರೆ ರಾಜ್ಯಗಳತ್ತ ಹರಿದುಹೋಗಲು ಕಾರಣವಾಗಿತ್ತು. ಆಗ ಕೇಂದ್ರ ಸರ್ಕಾರ ನಿರಂತರವಾಗಿ ಇಂಧನಗಳ ಮೇಲೆ ತೆರಿಗೆ ಹೆಚ್ಚಳ ಮಾಡ್ತಿದ್ರೆ, ರಾಜ್ಯ ಸರ್ಕಾರವು ರಾಜ್ಯದಲ್ಲಿ ಇಂಧನಗಳ ಮೇಲಿನ ತನ್ನ ಮಾರಾಟ ಸುಂಕ ಕಡಿಮೆ ಮಾಡ್ತಿತ್ತು. ಈ ಕಾರಣದಿಂದ ರಾಜ್ಯದ ಆದಾಯ ಕಡಿಮೆ ಆಯ್ತು. ಆದೇ ಹೊತ್ತಿನಲ್ಲಿ ರಾಜ್ಯದಿಂದ ಕೇಂದ್ರಕ್ಕೆ ಹೆಚ್ಚಿನ ಆದಾಯ ಹೋಗುತ್ತಿತ್ತು. ಪರೋಕ್ಷವಾಗಿ ರಾಜ್ಯದ ಆದಾಯಕ್ಕೆ ಹಿಂದಿನ ಬಿಜೆಪಿ ಸರ್ಕಾರವೇ ಕೊಕ್ಕೆ ಹಾಕಿತ್ತು.

    ಇನ್ನು 2021-22 ರಲ್ಲಿ ಪೆಟ್ರೋಲ್ ಮೇಲಿನ ಅಬಕಾರಿ ತೆರಿಗೆಯನ್ನ ಪೆಟ್ರೋಲ್ 13 ರೂಪಾಯಿ ಮತ್ತು ಡಿಸೇಲ್ 16 ರೂ. ಕಡಿಮೆ ಮಾಡಿತ್ತು.‌ ಸದ್ಯ ಪೆಟ್ರೋಲ್ ಮೇಲಿನ ಕೇಂದ್ರದ ತೆರಿಗೆ 19.9 ರೂಪಾಯಿ ಹಾಗೂ ಡಿಸೇಲ್ ಮೇಲೆ 18.8 ರೂ. ಇದೆ. ಇದನ್ನ ಕೇಂದ್ರ ಸರ್ಕಾರ ಜನರ ಒಳಿತಿಗೊಸ್ಕರ ಕಡಿಮೆ ಮಾಡಬೇಕು. ರಾಜ್ಯದ ವ್ಯಾಟ್ ಹೆಚ್ಚಳ ದಿಂದ ಜನರ ಸೇವೆಗಳು ಅಭಿವೃದ್ಧಿ ಕೆಲಸಗಳು ಹೆಚ್ಚು ಹಣ ನೀಡಲಿದ್ದೇವೆ. ನಾವು ಸಮತೋಲಿತ ಮತ್ತು ಜವಾಬ್ದಾರಿಯುತ ಆಡಳಿತ ನೀಡಲು ಬದ್ಧರಾಗಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.

  • ಕಾಂಗ್ರೆಸ್ ಸರ್ಕಾರದಿಂದ ಬೆಲೆ ಏರಿಕೆ ಗ್ಯಾರಂಟಿ: ಅಶ್ವಥ್ ನಾರಾಯಣ್ ವಾಗ್ದಾಳಿ

    ಕಾಂಗ್ರೆಸ್ ಸರ್ಕಾರದಿಂದ ಬೆಲೆ ಏರಿಕೆ ಗ್ಯಾರಂಟಿ: ಅಶ್ವಥ್ ನಾರಾಯಣ್ ವಾಗ್ದಾಳಿ

    – ಬಿಜೆಪಿಯೇತರ ಆಡಳಿತ ಇರುವ ರಾಜ್ಯಗಳಲ್ಲೇ ಪೆಟ್ರೋಲ್‌ ದರ ಹೆಚ್ಚು ಎಂದ ಮಾಜಿ ಡಿಸಿಎಂ

    ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದ ಬಳಿಕ ನಿಷ್ಠೆಯಿಂದ ಬೆಲೆ ಏರಿಕೆ, ತೆರಿಗೆ ಹೆಚ್ಚಳವನ್ನು (Petrol Price Hike) ಜನರಿಗೆ ಕೊಡುಗೆಯಾಗಿ ನೀಡಿದೆ ಎಂದು ಮಾಜಿ ಡಿಸಿಎಂ ಡಾ.ಸಿ.ಎನ್ ಅಶ್ವಥ್ ನಾರಾಯಣ್ (Dr.C.N Ashwath Narayan) ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಮಲ್ಲೇಶ್ವರದ ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ವೇಳೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಇದರ ವಿರುದ್ಧ ಸೋಮವಾರ ಬಿಜೆಪಿ ವತಿಯಿಂದ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಿದ್ದೇವೆ. ಬೆಂಗಳೂರಿನ ಫ್ರೀಡಂ ಪಾರ್ಕ್, ಎಲ್ಲಾ ಜಿಲ್ಲಾ ಕೇಂದ್ರಗಳು, ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

    ಕಾಂಗ್ರೆಸ್ ಸರ್ಕಾರ ಆಸ್ತಿ ತೆರಿಗೆ ಹೆಚ್ಚಳ, ಕುಡಿಯುವ ನೀರಿನ ದರ ಏರಿಕೆ, ವಿದ್ಯುತ್ ದರ ಏರಿಕೆ ಮಾಡಿದೆ. ವಾಹನಗಳ ತೆರಿಗೆ, ಆಸ್ತಿ ತೆರಿಗೆಯನ್ನೂ ಹೆಚ್ಚಿಸಿದೆ. ಸಾಲ ಪಡೆಯಲು ಬ್ಯಾಂಕ್‍ಗೆ ಹೋದರೆ ನೋಂದಣಿ ಶುಲ್ಕವನ್ನೂ ಹೆಚ್ಚಿಸಲಾಗಿದೆ. ಹಣದುಬ್ಬರ, ಬೆಲೆ ಏರಿಕೆ ವಿರುದ್ಧ ಹೋರಾಟ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ಸಿನವರು, ಚುನಾವಣೆ ವೇಳೆ ಬೆಲೆ ಇಳಿಸುವ ಭರವಸೆ ಕೊಟ್ಟಿದ್ದರು. ಇದೀಗ ರಾಜ್ಯದ ಜನತೆಗೆ ಕಾಂಗ್ರೆಸ್ಸಿನವರು ಬೆಲೆ ಏರಿಕೆಯ ಗ್ಯಾರಂಟಿ ಕೊಟ್ಟಿದ್ದಾರೆ. ಏರಿಸಿದ ದರವನ್ನು ಸಂಪೂರ್ಣವಾಗಿ ಹಿಂದಕ್ಕೆ ಪಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸೋಲಿನಿಂದಾಗಿ ಜನರ ಮೇಲೆ ಸರ್ಕಾರ ಸೇಡು; ಇಂಧನ ದರ ಇಳಿಸುವವರೆಗೂ ಬಿಜೆಪಿ ಹೋರಾಟ- ಆರ್.ಅಶೋಕ್

    ಪೆಟ್ರೋಲ್ ಬೆಲೆ 3ರೂ. ಮತ್ತು ಡೀಸೆಲ್ ಬೆಲೆ 3.50ರೂ ಏರಿಸಿದ್ದಾರೆ. ಕರ್ನಾಟಕ ಸೇಲ್ಸ್ ಟ್ಯಾಕ್ಸ್‌ನ್ನು 26% ರಿಂದ 30%ಗೆ ಏರಿಸಿದ್ದಾರೆ. ಡೀಸೆಲ್ ತೆರಿಗೆಯನ್ನು 14% ರಿಂದ 18%ಗೆ ಏರಿಸಿದ್ದಾರೆ. ಹಿಂದೆ 1ರೂ. ಹೆಚ್ಚಳ ಮಾಡಿದ್ದಾಗ ಹಣಕಾಸು ಸಚಿವ, ಆರ್ಥಿಕ ತಜ್ಞರಾಗಿ ಸಿದ್ದರಾಮಯ್ಯನವರು ಎಲ್ಲಾ ವಸ್ತುಗಳ ಬೆಲೆ ಏರಿಕೆ ಆಗಲಿದೆ ಎಂದು ಪ್ರಬಲವಾಗಿ ವಿರೋಧಿಸಿದ್ದರು. ನಾಚಿಕೆ ಆಗಲ್ವ ಎಂಬ ಭಾಷೆಯನ್ನೂ ಬಳಸಿದ್ದರು. ಇವತ್ತು ವಿದ್ಯುತ್ ದರವನ್ನು 100% ನಿಂದ 150%ರಷ್ಟು ಏರಿಸಿದ್ದಾರೆ. ಯಾವ ರೀತಿ ಇವರು ಸಮಜಾಯಿಷಿ ಕೊಡುತ್ತಾರೆ ಎಂದು ಅವರು ಪ್ರಶ್ನಿಸಿದ್ದಾರೆ.

    ಸ್ವಾತಂತ್ರ್ಯ ಬಂದ ಬಳಿಕ ಎಂದೂ ಕಾಣದ ಕೆಟ್ಟ ಆಡಳಿತ ಇದಾಗಿದೆ. ಕೆಟ್ಟ ನಿರ್ಧಾರ, ದರ ಏರಿಕೆಗಳನ್ನು ಏಕಾಏಕಿ ಮಾಡುತ್ತಿದ್ದಾರೆ. ಯಾವುದೇ ಸಮಾಲೋಚನೆ, ಮಾತುಕತೆ ಇಲ್ಲದೆ, ಸ್ಪಷ್ಟತೆ ಇಲ್ಲದೆ ಅಧಿಕಾರದ ದುರ್ಬಳಕೆ ಆಗುತ್ತಿದೆ. ಪೆಟ್ರೋಲ್‌ ದರ, ಬಿಜೆಪಿ ಆಡಳಿತ ನಡೆಸುವ ಹರಿಯಾಣ ರಾಜ್ಯದಲ್ಲಿ 95.54 ರೂ. ಉತ್ತರ ಪ್ರದೇಶದಲ್ಲಿ 94.55 ರೂ. ಗುಜರಾತ್‍ನಲ್ಲಿ 94.50 ರೂ. ಅಸ್ಸಾಂನಲ್ಲಿ 97 ರೂ. ದರ ಇದೆ. ಆದರೆ ಕಾಂಗ್ರೆಸ್ ಆಡಳಿತ ಮಾಡುವ ರಾಜ್ಯಗಳಲ್ಲಿ 103 ರೂ. 107 ರೂ. ತೆಲಂಗಾಣದಲ್ಲಿ 109.50 ರೂ. ಬಿಜೆಪಿಯೇತರ ಆಡಳಿತ ಇರುವ ಕೇರಳದಲ್ಲಿ 105.68 ರೂ. ದರ ಇದೆ ಎಂದು ಅವರು ಹೇಳಿದ್ದಾರೆ.

    ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಪರ ವಾತಾವರಣ ಇಲ್ಲ. ನೆಗೆಟಿವ್ ರೇಟಿಂಗ್ ಇದೆ. ಇಲ್ಲಿ ಭೂಮಿ ಸಿಗಲ್ಲ, ನೀರು ಕೊಡುವುದಿಲ್ಲ, ಕರೆಂಟ್ ದರ ಹೆಚ್ಚು, ಇಂಥ ಹತ್ತಾರು ಸಮಸ್ಯೆಗಳಿವೆ. ಆರ್ಥಿಕ ವ್ಯವಸ್ಥೆ ಹೆಚ್ಚಿಸಿ ಆದಾಯ ಹೆಚ್ಚಿಸಬೇಕಿತ್ತು. ಇರುವವರನ್ನು ಪೂರ್ತಿ ಕತ್ತು ಕುಯ್ದು, ಬದುಕಲು ಸಾಧ್ಯವಿಲ್ಲದ ರೀತಿಯಲ್ಲಿ ಕಾಂಗ್ರೆಸ್ ಆಡಳಿತ ಮಾಡುತ್ತಿದೆ. ಬಿಲ್ಡರ್‍ಗಳು, ಕೈಗಾರಿಕೆದಾರರು ರಾಜ್ಯವನ್ನು ತೊರೆಯುವಂತಾಗಿದೆ. ಹಣದುಬ್ಬರ ಒಂದೆಡೆ, ಇನ್ನೊಂದೆಡೆ ಲೂಟಿ, ಭ್ರಷ್ಟಾಚಾರ ಈ ಸರ್ಕಾರದಿಂದ ನಡೆದಿದೆ. ಎಲ್ಲರನ್ನೂ ಲೂಟಿ ಮಾಡುವ ಕಾರ್ಯ ನಡೆದಿದೆ. ರೈತರು ಆತ್ಮಹತ್ಯೆ ಮಾಡಿಕೊಂಡರೆ ಪರಿಹಾರ ಮೊತ್ತಕ್ಕಾಗಿ ಆತ್ಮಹತ್ಯೆ ಎನ್ನುವಷ್ಟು ಆಡಳಿತ ಹದಗೆಟ್ಟಿದೆ ಎಂದು ಅವರು ಸಕಾರದ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ದರ್ಶನ್‍ಗೆ ಮತ್ತಷ್ಟು ಸಂಕಷ್ಟ- ಸ್ವಾಮಿ ಹತ್ಯೆ ದಿನ ಧರಿಸಿದ್ದ ಬಟ್ಟೆ, ಶೂ ಸೀಜ್

  • ನಿಮ್ಮ ಭಾಗ್ಯ ಕೊಡದಿದ್ರೂ ಪರವಾಗಿಲ್ಲ, ಬೆಲೆ ಏರಿಕೆ ದೌರ್ಭಾಗ್ಯ ಮಾತ್ರ ಬೇಡ: ವಿಜಯೇಂದ್ರ

    ನಿಮ್ಮ ಭಾಗ್ಯ ಕೊಡದಿದ್ರೂ ಪರವಾಗಿಲ್ಲ, ಬೆಲೆ ಏರಿಕೆ ದೌರ್ಭಾಗ್ಯ ಮಾತ್ರ ಬೇಡ: ವಿಜಯೇಂದ್ರ

    ಬೆಂಗಳೂರು: ಕಾಂಗ್ರೆಸ್ (Congress) ಸರ್ಕಾರ ಯಾವ ಭಾಗ್ಯವನ್ನು ಕೊಡದಿದ್ದರೂ ಪರವಾಗಿಲ್ಲ, ಬೆಲೆ ಏರಿಕೆಯ ದೌರ್ಭಾಗ್ಯವನ್ನು ಮಾತ್ರ ನಮ್ಮ ಮೇಲೆ ಹೇರಬೇಡಿ ಎಂದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ  (B.Y Vijayendra) ರಾಜ್ಯ ಸರ್ಕಾರಕ್ಕೆ ಕುಟುಕಿದ್ದಾರೆ.

    ರಾಜ್ಯ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ (Petrol Price Hike) ಏರಿಕೆ ಮಾಡಿರುವ ವಿಚಾರವಾಗಿ ಅವರು ಖಂಡಿಸಿ ಎಕ್ಸ್‍ನಲ್ಲಿ ಸರಣಿ ಪೋಸ್ಟ್ ಹಾಕಿದ್ದಾರೆ. ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಅವರು, ಅಧಿಕಾರಕ್ಕೇರುವ ಒಂದೇ ಕಾರಣಕ್ಕಾಗಿ ಪಂಚ ಭಾಗ್ಯದ ಮೋಡಿ ಮಾಡಿದ್ದೀರಿ. ಈ ಮೂಲಕ ನೀವು ರಾಜ್ಯದ ಮತದಾರರನ್ನು ದಿಕ್ಕು ತಪ್ಪಿಸಿದ್ದು ನಾಡಿನ ದೌರ್ಭಾಗ್ಯವಲ್ಲದೇ ಬೇರೇನೂ ಅಲ್ಲ. ರಾಜ್ಯದ ಜನತೆ ನಿಮ್ಮ ಬಳಿ ಯಾವ ಭಾಗ್ಯವನ್ನು ಬೇಡಿರಲಿಲ್ಲ ಎಂದು ಅವರು ಕಿಡಿಕಾರಿದ್ದಾರೆ.

    ದಿನ ಬಳಕೆ ಹಾಗೂ ಅಗತ್ಯ ವಸ್ತುಗಳ ಬೆಲೆಗಳನ್ನು ಸರಣಿ ರೂಪದಲ್ಲಿ ಏರಿಸುತ್ತಲೇ ಇದ್ದೀರಿ. ಇದೀಗ ಪೆಟ್ರೋಲ್ 3ರೂ. ಹಾಗೂ ಡೀಸೆಲ್ ಮೇಲೆ 3.50 ರೂ. ದರ ಏರಿಸಿ ಜನಸಾಮಾನ್ಯರ ಕೈ ಸುಟ್ಟಿದ್ದೀರಿ. ಈ ಬೆಲೆ ಏರಿಕೆಯ ಪ್ರತಿಕೂಲ ಪರಿಣಾಮ ಸಹಜವಾಗಿಯೇ ಸರಕು ಸಾಗಾಣಿಕೆ, ಹಾಗೂ ಸಾರಿಗೆ ದರಗಳೂ ವಿಪರೀತ ಹೆಚ್ಚಳವಾಗಲಿದೆ. ಇದರಿಂದ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆಯೂ ಏರಲಿದೆ ಎಂದು ಅವರು ಎಚ್ಚರಿಸಿದ್ದಾರೆ.

    ಬರಿದಾಗಿರುವ ನಿಮ್ಮ ಖಜಾನೆ ತುಂಬಿಸಲು ಜನಸಾಮಾನ್ಯರು ಹಾಗೂ ಕಡು ಬಡವರ ಜೇಬು ಖಾಲಿ ಮಾಡಲು ಹೊರಟಿದ್ದೀರಿ. ನಿಮ್ಮ ಜನ ವಿರೋಧಿ ನೀತಿ ನಿರ್ಧಾರಗಳನ್ನು ಬಿಜೆಪಿ ಪ್ರಬಲವಾಗಿ ಖಂಡಿಸಿ ಪ್ರತಿಭಟಿಸುತ್ತದೆ. ಈ ಕೂಡಲೇ ಪೆಟ್ರೋಲ್ ಡೀಸೆಲ್ ದರ ಏರಿಕೆ ನಿರ್ಧಾರವನ್ನು ಸರ್ಕಾರ ಹಿಂತೆಗೆದುಕೊಳ್ಳದಿದ್ದರೆ ಜನಾಕ್ರೋಶವನ್ನು ಪ್ರತಿನಿಧಿಸಿ ಬಿಜೆಪಿ ಬೀದಿಗಿಳಿದು ಹೋರಾಡಲಿದೆ ಎಂದು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಬಿಜೆಪಿಗೆ ಮತ ಹಾಕಿದ್ದಕ್ಕೆ‌ ಕಾಂಗ್ರೆಸ್‌ ಸರ್ಕಾರ ಸೇಡು ತೀರಿಸಿಕೊಳ್ತಿದೆ – ಅಶೋಕ್‌

    ತುಘಲಕ್ ಸರ್ಕಾರದ ನಿರ್ಧಾರ: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯಿಸಿರುವ ಕಾರ್ಕಳದ ಶಾಸಕ ಸುನೀಲ್ ಕುಮಾರ್ ಇದು ತುಘಲಕ್ ಸರ್ಕಾರದ ನಿರ್ಧಾರ ಎಂದು ಕಿಡಿಕಾರಿದ್ದಾರೆ.

    ಸಾರ್ವತ್ರಿಕ ಚುನಾವಣೆ ಮುಗಿದು 10 ದಿನ ಕಳೆದಿಲ್ಲ. ಚುನಾವಣೆಗೂ ಮುನ್ನ ಎಲ್ಲಾ ಯೋಜನೆಗಳನ್ನು ರದ್ದು ಮಾಡಿ, ಗ್ಯಾರಂಟಿ ಯೋಜನೆ ಜಪ ಮಾಡುತ್ತಿತ್ತು. ಫಲಿತಾಂಶ ಬಂದ ಬಳಿಕ ಏಕಾಏಕಿ ತೆರಿಗೆ ಹೆಚ್ಚಳ ಮಾಡಿದ್ದಾರೆ. ರಾಜ್ಯ ಸರ್ಕಾರದ ಆಡಳಿತ ವೈಖರಿಗೆ ಇದು ಸಾಕ್ಷಿಯಾಗಿದೆ. ಸರ್ಕಾರದ ಈ ನಡೆಯ ವಿರುದ್ಧ ಬಿಜೆಪಿಯಿಂದ ಭಾನುವಾರದಿಂದಲೇ ಹೋರಾಟ ಆರಂಭ ಮಾಡುತ್ತೇವೆ. ತಕ್ಷಣ ಸರ್ಕಾರ ಬೆಲೆ ಏರಿಕೆಯನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

    ಇನ್ನೂ ಹಾಲಿಗೆ ಸಬ್ಸಿಡಿ ಇಲ್ಲ, ಕಂದಾಯ ಇಲಾಖೆ ಕಾಗದ ಪತ್ರಗಳ ದರ ಹೆಚ್ಚಳವಾಗಿದೆ. ಎಂಜಿನಿಯರಿಂಗ್, ಮೆಡಿಕಲ್ ಕಾಲೇಜಿನ ಶುಲ್ಕ ಹೆಚ್ಚಳವಾಗಿದೆ. ಈಗ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆ ಮಾಡಿ ಖಜಾನೆ ತುಂಬಿಸುವ ಕಾರ್ಯ ಆರಂಭ ಮಾಡಿದ್ದಾರೆ. ರಾಜ್ಯದಲ್ಲಿ 13,000 ಕೋಟಿ ರೂ. ತೆರಿಗೆ ಸಂಗ್ರಹದಲ್ಲಿ ಕಡಿಮೆಯಾಗಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ದುರ್ಗಾದೇವಿಗೆ ಭಂಡಾರದ ನೈವೇದ್ಯ – ಮುಧೋಳ ಲೋಕಾಪುರದಲ್ಲಿ 7 ವರ್ಷಕ್ಕೊಮ್ಮೆ ನಡೆಯುತ್ತದೆ ವಿಶಿಷ್ಟ ಜಾತ್ರೆ

  • ಬೆಲೆ ಏರಿಕೆ ವಿರುದ್ಧ ಆಮ್ ಆದ್ಮಿ ಪಕ್ಷದಿಂದ ಬೃಹತ್ ಪ್ರತಿಭಟನೆ

    ಬೆಲೆ ಏರಿಕೆ ವಿರುದ್ಧ ಆಮ್ ಆದ್ಮಿ ಪಕ್ಷದಿಂದ ಬೃಹತ್ ಪ್ರತಿಭಟನೆ

    ಬೆಂಗಳೂರು: ಬೆಲೆ ಏರಿಕೆ ವಿರೋಧಿಸಿ ಮಹದೇವಪುರ ಕ್ಷೇತ್ರದಲ್ಲಿ ಆಮ್ ಆದ್ಮಿ ಪಾರ್ಟಿಯ ನೂರಾರು ಕಾರ್ಯಕರ್ತರು ಆಟೋ ರ್ಯಾಲಿ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಕ್ಷೇತ್ರದ ಅಧ್ಯಕ್ಷ ಅಶೋಕ್ ಮೃತ್ಯುಂಜಯ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ಶೇ.60ಕ್ಕೂ ಹೆಚ್ಚು ಪೆಟ್ರೋಲ್, ಡೀಸೆಲ್ ಹಾಗೂ ತೈಲ ಬೆಲೆಗಳ ಮೇಲೆ ಅಬಕಾರಿ ಸುಂಕ, ವ್ಯಾಟ್ ಸುಂಕ ಹಾಗೂ ಇನ್ನಿತರ ಸೆಸ್‍ಗಳನ್ನು ವಿಧಿಸುವುದರ ಮೂಲಕ ದೇಶದ ಎಲ್ಲಾ ಪ್ರಜೆಗಳ ಜೇಬಿಗೆ ಕನ್ನ ಹಾಕುವ ಕೆಲಸಗಳನ್ನು ಮಾಡುತ್ತಿರುವುದು ಖಂಡನೀಯ ಎಂದರು. ಇದನ್ನೂ ಓದಿ:ಆನೇಕಲ್ ರೇವ್ ಪಾರ್ಟಿ ಪ್ರಕರಣ- 35 ಜನರ ಬಂಧನ

    ಕೇಂದ್ರ ಸರ್ಕಾರವು ಅಂತರರಾಷ್ಟ್ರೀಯ ಮಾರುಕಟ್ಟೆ ವಿನಿಮಯ ದರ, ಅವಾಸ್ತವಿಕ ವಿಚಾರಗಳನ್ನು ಹೇಳುವುದರ ಮೂಲಕ ರಾಜ್ಯ ಹಾಗೂ ದೇಶದ ಪ್ರಜೆಗಳ ದಿಕ್ಕನ್ನು ತಪ್ಪಿಸಿ ಬೆಲೆ ಏರಿಸಿದೆ. ಜನತೆಯ ಹಣವನ್ನು ಕೊಳ್ಳೆ ಹೊಡೆಯುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ:ಮತ್ತೆ ಒಂದಾಗಲಿರುವ ರಾಜಕುಮಾರ ಜೋಡಿ – ಸೆಟ್ಟೇರಲಿದೆ ಪುನೀತ್, ಸಂತೋಷ್ ಕಾಂಬಿನೇಷನ್‍ನ ಹೊಸ ಸಿನಿಮಾ

    ಇತ್ತೀಚೆಗೆ ವಿಧಾನ ಸಭೆಯಲ್ಲೂ ಬೆಲೆ ಏರಿಕೆಗಳ ಬಗ್ಗೆ ಚರ್ಚೆ ನಡೆದರೂ, ಕರ್ನಾಟಕ ರಾಜ್ಯ ಬಿಜೆಪಿ ಸರ್ಕಾರ ಇದುವರೆಗೂ ಯಾವುದೇ ತೆರಿಗೆಯನ್ನು ಇಳಿಸಿಲ್ಲ. ಈ ಕೂಡಲೇ ರಾಜ್ಯ ಸರ್ಕಾರ ಬೆಲೆ ಏರಿಕೆಯನ್ನು ಇಳಿಸದಿದ್ದರೆ ಆಮ್ ಆದ್ಮಿ ಪಾರ್ಟಿ ಕರ್ನಾಟಕ ರಾಜ್ಯದಾ ಪ್ರತಿಭಟನೆಯನ್ನು ಹಮ್ಮಿಕೊಳ್ಳುತ್ತದೆ ಎಂದು ಎಚ್ಚರಿಸಿದರು.

     

  • ದುಬಾರಿಯಾದ ಪೆಟ್ರೋಲ್ – ಕಳ್ಳತನಕ್ಕಿಳಿದ ಯುವಕರು

    ದುಬಾರಿಯಾದ ಪೆಟ್ರೋಲ್ – ಕಳ್ಳತನಕ್ಕಿಳಿದ ಯುವಕರು

    ಚಿಕ್ಕಬಳ್ಳಾಪುರ: ಪೆಟ್ರೋಲ್ ಬೆಲೆ 100ರ ಗಡಿ ದಾಟಿದ್ದೇ ತಡ ಚಿಕ್ಕಬಳ್ಳಾಪುರ ನಗರದಲ್ಲಿ ಪೆಟ್ರೋಲ್ ಕಳ್ಳತನ ಮಾಡುವ ಹೊಸದೊಂದು ಗ್ಯಾಂಗ್ ಹುಟ್ಟಿಕೊಂಡಿದೆ. ಪೆಟ್ರೋಲ್ ದರ ಲೀಟರ್ ಗೆ 100 ರೂಪಾಯಿ ದಾಟಿದ್ದು, ಚಿಕ್ಕಬಳ್ಳಾಪುರ ನಗರದ ಮುನಿಸಿಪಾಲ್ ಬಡಾವಣೆಯಲ್ಲಿ ಮೂವರು ಯುವಕರು ಪೆಟ್ರೋಲ್ ಕಳ್ಳತನ ಮಾಡಿದ್ದಾರೆ.

    ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪಲ್ಸರ್ ಬೈಕ್ ನಲ್ಲಿ ಮಧ್ಯರಾತ್ರಿ ಮುನಿಸಿಪಾಲ್ ಬಡಾವಣೆಗೆ ಎಂಟ್ರಿ ಕೊಟ್ಟಿರೋ ಮೂವರು ಯುವಕರು, ಮನೆಗಳ ಮುಂದೆ ರಸ್ತೆ ಬದಿ ನಿಲ್ಲಿಸಿರೋ ಬೈಕ್ ಗಳಲ್ಲಿ 1-2 ಲೀಟರ್ ವಾಟರ್ ಬಾಟಲಿಗೆ ತುಂಬಿಸಿಕೊಂಡಿದ್ದಾರೆ. ತದನಂತರ 20 ಲೀಟರ್ ಕ್ಯಾನ್ ಗೆ ತುಂಬಿಸಿಕೊಂಡು ಪರಾರಿಯಾಗಿದ್ದಾರೆ.

    ಒಂದಲ್ಲ ಎರಡಲ್ಲ ಹತ್ತಾರು ಬೈಕ್ ಗಳಲ್ಲಿ ಪೆಟ್ರೋಲ್ ಕಳ್ಳತನ ಮಾಡಿದ್ದಾರೆ. ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಇಂದಿನಿಂದ ಹೊಸ ದುಬಾರಿ ಜೀವನ – ಎಲ್‍ಪಿಜಿ ಸಿಲಿಂಡರ್, ಹಾಲು, ಬ್ಯಾಂಕಿಂಗ್ ಚಾರ್ಜ್ ಹೆಚ್ಚಳ

    ಯಾದಗಿರಿಯಲ್ಲೂ ಪೆಟ್ರೋಲ್ ಕಳ್ಳತನ:
    ಪೆಟ್ರೋಲ್ ಮತ್ತು ಡೀಸೆಲ್ ದರ ದಿನೇ ದಿನೇ ಹೆಚ್ಚಾಗುತ್ತಿರುವ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ಕಳ್ಳತನ ಮಾಡುವ ಗ್ಯಾಂಗ್ ನಗರದಲ್ಲಿ ಫುಲ್ ಆಕ್ಟಿವ್ ಆಗಿದೆ. ಒಂದೇ ರಾತ್ರಿಯಲ್ಲಿ ಎರಡು ಬಂಕ್ ನಲ್ಲಿನ ಬರೊಬ್ಬರಿ 5 ಸಾವಿರ ಲೀಟರ್ ಡೀಸೆಲ್ ಗೆ ಕನ್ನ ಹಾಕಿದೆ.  ಇದನ್ನೂ ಓದಿ: ಪುಲ್ವಾಮಾದಲ್ಲಿ ವಿಜಯಪುರದ ಯೋಧ ಹುತಾತ್ಮ

    ಒಂದೇ ರಾತ್ರಿಯಲ್ಲಿ ಎರಡು ಬಂಕ್ ನಲ್ಲಿನ ಬರೊಬ್ಬರಿ 5 ಸಾವಿರ ಲೀಟರ್ ಡೀಸೆಲ್ ಗೆ ಕನ್ನ ಹಾಕಿದ್ದು, 5 ಲಕ್ಷ ರೂ.ಗೂ ಅಧಿಕ ಮೌಲ್ಯದ ಡಿಸೇಲ್ ಕದ್ದಿದ್ದಾರೆ. ರಾತ್ರಿ ಹೊತ್ತು ಫುಲ್ ಆಕ್ಟಿವ್ ಆಗುವ ಈ ಗ್ಯಾಂಗ್ ನಗರದ ಹೈದರಾಬಾದ್ ರಸ್ತೆಯಲ್ಲಿರುವ ಎಸ್ಸಾರ್ ಮತ್ತು ಗುರು ಪೆಟ್ರೋಲ್ ಬಂಕ್ ಗಳಲ್ಲಿ, ಮಧ್ಯ ರಾತ್ರಿ 12 ಗಂಟೆ ಸುಮಾರಿಗೆ ಈ ಕಳ್ಳತನ ಮಾಡಿದೆ. ಅಂಡರ್ ಗ್ರೌಂಡ್ ನಲ್ಲಿರುವ ಡೀಸೆಲ್ ಟ್ಯಾಂಕ್ ಕವರ್ ಓಪನ್ ಮಾಡಿ, ಅದಕ್ಕೆ ಪೈಪ್ ಹಾಕಿ, ಬಳಿಕ ಸುಮಾರು 30 ಮೀಟರ್ ದೂರದಲ್ಲಿ ಮೋಟರ್ ಹಚ್ಚಿ ಡೀಸೆಲ್ ಕಳ್ಳತನ ಮಾಡಿದೆ. ಇದನ್ನೂ ಓದಿ: ಅನ್‍ಲಾಕ್ ಸ್ಟೇಜ್ -3ಕ್ಕೆ ಕ್ಷಣಗಣನೆ – ಇಂದು ಸಂಜೆ ಸಿಎಂ ಬಿಎಸ್‍ವೈ ಮಹತ್ವದ ಸಭೆ

  • ಮುಂದಿನ ಚುನಾವಣೆಯಲ್ಲೂ ‘ಮೋದಿ, ಮೋದಿ’ ಎಂದರೆ ಬಡವರ ಬದುಕು ಬೂದಿಯಾಗೋದು ಖಚಿತ: ಸಿದ್ದರಾಮಯ್ಯ

    ಮುಂದಿನ ಚುನಾವಣೆಯಲ್ಲೂ ‘ಮೋದಿ, ಮೋದಿ’ ಎಂದರೆ ಬಡವರ ಬದುಕು ಬೂದಿಯಾಗೋದು ಖಚಿತ: ಸಿದ್ದರಾಮಯ್ಯ

    ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರಾಗಲೀ, ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರಾಗಲೀ ಸಂಕಷ್ಟ ಕಾಲದಲ್ಲಿ ಬಡವರ ನೆರವಿಗೆ ನಿಲ್ಲುತ್ತಿಲ್ಲ. ಮುಂದಿನ ಚುನಾವಣೆಯಲ್ಲಿಯೂ ‘ಮೋದಿ ಮೋದಿ’ ಎಂದೇನಾದರೂ ಹೇಳಿದರೆ ಬಡವರ ಬದುಕು ಬೂದಿಯಾಗುವುದು ಖಚಿತ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

    ಬೆಂಗಳೂರಿನ ಜಯನಗರ ವಿಧಾನಸಭೆ ಕ್ಷೇತ್ರದ ಶಾಲಿನಿ ಆಟದ ಮೈದಾನದಲ್ಲಿ ಇಂದು ಶಾಸಕಿ ಸೌಮ್ಯ ರೆಡ್ಡಿಯವರು ಆಯೋಜಿಸಿದ್ದ ಕೊರೊನಾ ವಾರಿಯರ್ಸ್, ಪೌರ ಕಾರ್ಮಿಕರಿಗೆ ಆಹಾರ ಪದಾರ್ಥಗಳ ಕಿಟ್ ವಿತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದೇಶದ ಜನತೆ ಕೇಂದ್ರದಲ್ಲಿ ಬಿಜೆಪಿಗೆ ಎರಡನೇ ಬಾರಿಗೆ ಅಧಿಕಾರ ನೀಡಿದರು. ಆದರೆ, ಪ್ರಧಾನಿ ನರೇಂದ್ರ ಮೋದಿಯವರಾಗಲಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರಾಗಲಿ ಸಂಕಷ್ಟದ ಕಾಲದಲ್ಲಿ ಬಡವರ ನೆರವಿಗೆ ನಿಲ್ಲಲಿಲ್ಲ ಎಂದು ಟೀಕಿಸಿದರು.

    ಬಿಪಿಎಲ್ ಕುಟುಂಬದಲ್ಲಿ ಕೋವಿಡ್‍ನಿಂದ ಮೃತಪಟ್ಟ ಎಲ್ಲರಿಗೂ ತಲಾ ಒಂದು ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ. ಆದರೆ, ಐದು ಲಕ್ಷ ರೂಪಾಯಿಗಳ ಆರ್ಥಿಕ ನೆರವು ನೀಡುವಂತೆ ಆಗ್ರಹಿಸಿದರು.

    ಕೊರೊನಾ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಬಿಪಿಎಲ್ ಕುಟುಂಬದವರಿಗೆ 10 ಕೆ.ಜಿ. ಅಕ್ಕಿ, 10 ಸಾವಿರ ರೂಪಾಯಿ ಕೊಡಿ ಎಂದರೆ ಕೇಳಲಿಲ್ಲ. ಸರ್ಕಾರ ಬಡವರಿಗೆ ಸ್ಪಂದಿಸಬೇಕು. ರಾಜ್ಯ ಸರ್ಕಾರದ ಬಜೆಟ್ 2.42 ಲಕ್ಷ ಕೋಟಿ. ಅದರಲ್ಲಿ 15-20 ಸಾವಿರ ಕೋಟಿಯನ್ನ ಬಡವರಿಗೆ ನೀಡಿದ್ದರೆ ಏನೂ ನಷ್ಟವಾಗುತ್ತಿರಲಿಲ್ಲ ಎಂದರು.

    ಪ್ಯಾಕೇಜ್ ನಲ್ಲಿ ಕೆಲವರಿಗೆ ಪುಡಿಗಾಸು ಘೋಷಣೆ ಮಾಡಿದ್ದಾರೆ. ಅದು ಯಾರಿಗೆ ಸಿಗುವುದೋ ಯಾರಿಗೆ ಸಿಗುವುದಿಲ್ಲವೋ ಗೊತ್ತಿಲ್ಲ. ಈ ಹಿಂದೆ ಘೋಷಿಸಿದ ಪ್ಯಾಕೇಜ್‍ನಿಂದಲೂ ಯಾರಿಗೂ ಅನುಕೂಲ ಆಗಲಿಲ್ಲ. ಕೊರೊನಾದಿಂದ ಮೃತರಾದರೆ ಕುಟುಂಬದಲ್ಲಿ ಒಬ್ಬರಿಗೆ ಒಂದು ಲಕ್ಷ ರೂ. ಪರಿಹಾರ ನೀಡುವುದಾಗಿ ಹೇಳಿದ್ದಾರೆ. ಆಸ್ಪತ್ರೆಯಲ್ಲಿ ಒಬ್ಬರಿಗೆ ಮಾತ್ರ ಹಣ ಪಡೆಯುವುರೇ ಎಂದು ಪ್ರಶ್ನಿಸಿದರು.

    ರಾಜ್ಯದಲ್ಲಿ ಕೋವಿಡ್ ನಿಂದ 32 ಸಾವಿರ ಜನ ಸತ್ತಿದ್ದಾರೆ. ಅದರಲ್ಲಿ ಬಿಪಿಎಲ್ ಕಾರ್ಡ್ ನವರು 25 ಸಾವಿರ ಮಂದಿ ಇರಬಹುದು, ಎಲ್ಲರಿಗೂ ಪರಿಹಾರ ನೀಡಲು ಒಂದೂವರೆ ಸಾವಿರ ಕೋಟಿ ವೆಚ್ಚವಾಗಬಹುದು. ಅಷ್ಟು ಮಂದಿಗೂ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

    ಕೊರೊನಾ ಒಂದನೇ ಅಲೆಯಿಂದ ಎರಡನೇ ಅಲೆಯ ನಡುವೆ ಸಾಕಷ್ಟು ಸಮಯ ಇತ್ತು. ಆ ವೇಳೆ ಲಸಿಕೆ ತಯಾರಿಸಿ ಎಲ್ಲರಿಗೂ ಕೊಡಬಹುದಿತ್ತು, ಕೇಂದ್ರ ಸರ್ಕಾರ ಆ ಕೆಲಸ ಮಾಡಲಿಲ್ಲ. ಲಸಿಕೆಯನ್ನು ಇಲ್ಲಿಯೇ ತಯಾರಿಸಲಿ ಅಥವಾ ಬೇರೆ ಕಡೆಯಿಂದ ತರಿಸಿಕೊಳ್ಳಲಿ. ಆದರೆ, ಎಲ್ಲರಿಗೂ ಲಸಿಕೆ ಸಿಗುವಂತಾಗಲಿ. ಸೆಪ್ಟೆಂಬರ್-ಅಕ್ಟೋಬರ್‍ನಲ್ಲಿ ಮೂರನೇ ಅಲೆ ಬರುವ ನಿರೀಕ್ಷೆ ಇದೆ. ಅಷ್ಟರಲ್ಲಿ ಎಲ್ಲರಿಗೂ ಉಚಿತವಾಗಿ ಲಸಿಕೆ ಕೊಡಬೇಕು. ಜನರ ಪ್ರಾಣ ಉಳಿಸುವುದು ಮುಖ್ಯ ಲಸಿಕೆ ಹಾಕಿಸಿಕೊಂಡ ಶೇ.80ರಷ್ಟು ಜನರಿಗೆ ಕೊರೊನಾ ಬರುವುದಿಲ್ಲ. ಹೀಗಾಗಿ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

    ಮನೆಯ ಗಂಟು ಹೋಗುತ್ತಾ?: ಕೇಂದ್ರ ಸರ್ಕಾರ ಶೇ.75ರಷ್ಟು ಉಚಿತವಾಗಿ, ಶೇ.25ರಷ್ಟು ಲಸಿಕೆಗಳನ್ನು ಖಾಸಗಿಯಾಗಿ ಮಾರಾಟಕ್ಕಿಟ್ಟಿದೆ. ಅದನ್ನು ಕೈ ಬಿಟ್ಟು ಎಲ್ಲರಿಗೂ ಉಚಿತ ಲಸಿಕೆ ಕೊಡಬೇಕು ಎಂದರು. ನಮ್ಮ ಪಕ್ಷದ ಸರ್ಕಾರ ಇದ್ದಿದ್ದರೆ ಬಡವರಿಗೆ 10 ಕೆ.ಜಿ.ಅಕ್ಕಿ ಮತ್ತು 10 ಸಾವಿರ ರೂಪಾಯಿಯನ್ನು ಕೊಡುತ್ತಿದ್ದೆವು. ಬಡವರಿಗೆ ನೆರವು ನೀಡಿದರೆ ಇವರ ಮನೆಯ ಗಂಟು ಹೋಗುತ್ತದೆಯೇ ಎಂದು ಸರ್ಕಾರವನ್ನು ಪ್ರಶ್ನಿಸಿದರು.

    ಇಂದಿರಾಗಾಂಧಿ ಅವರ ಫೋಟೋ ಇದೆ ಎಂಬ ಕಾರಣಕ್ಕೆ ಇಂದಿರಾ ಕ್ಯಾಂಟಿನ್ ನಿಲ್ಲಿಸಿದರು. ಇತ್ತೀಚೆಗೆ ಅದನ್ನು ಪುನಃ ಆರಂಭಿಸಿದರೂ ಬಾಕಿ ಬಿಲ್ ಪಾವತಿಸಿಲ್ಲ ಎಂದು ಆರೋಪಿಸಿದರು. ದೇಶದಲ್ಲಿ ಕಾಂಗ್ರೆಸ್ ಪಕ್ಷ ಮಾತ್ರ ಬಡವರ ಪರವಾಗಿ ನಿಲ್ಲಲಿದೆ. ಸಂವಿಧಾನ ಹೇಳುವಂತೆ ಸರ್ವರಿಗೂ ಸಮಪಾಲು, ಸಮಬಾಳು ಸಿದ್ಧಾಂತವನ್ನು ಸರ್ಕಾರಗಳು ಪಾಲಿಸಬೇಕು. ಪ್ರಧಾನಿ ನರೇಂದ್ರ ಮೋದಿ ಅಚ್ಛೇ ದಿನ್ ಆಯೇಗಾ ಎನ್ನುತ್ತಿದ್ದರು. ಯುವಕರು ಮೋದಿ ಮೋದಿ ಎನ್ನುತ್ತಿದ್ದರು. ಪೆಟ್ರೋಲ್, ಡೀಸೆಲ್ 100 ರೂಪಾಯಿ ದಾಟಿದೆ. ನಾವು ಪ್ರತಿಭಟನೆ ಮಾಡಿದ ಮೇಲೂ ದರ ಹೆಚ್ಚಳವಾಗುತ್ತಿದೆ. ಮೂಲ ಬೆಲೆಗಿಂತಲೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಧಿಸುತ್ತಿರುವ ತೆರಿಗೆಯೇ ಹೆಚ್ಚಾಗಿದೆ. ಪ್ರಧಾನಿಯವರು ತಿಗಣೆ ರೀತಿಯಲ್ಲಿ ಜನರ ರಕ್ತ ಹೀರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಪೆಟ್ರೋಲ್, ಡೀಸೆಲ್ ಮೇಲೆ ಜಿಎಸ್‍ಟಿ ಹಾಕಿ ಎಂದು ಕಾಂಗ್ರೆಸ್ ಹೇಳಿಲ್ಲ, ತೆರಿಗೆ ಕಡಿಮೆ ಮಾಡಿ ಎಂದು ಒತ್ತಾಯಿಸಿದ್ದೇವೆ. ಇಂಧನದ ಬೆಲೆ ಕಡಿಮೆಯಾದರೆ ಸಾಗಣೆ ದರ ಕಡಿಮೆಯಾಗಿ ಅಗತ್ಯ ವಸ್ತುಗಳ ಬೆಲೆ ಕೂಡ ಇಳಿಯಲಿದೆ ಎಂದು ಅಭಿಪ್ರಾಯಪಟ್ಟರು.

    ಸರ್ಕಾರದ ನೆರವು ನಂಬಿ ಕೂತಿದ್ದರೆ ಬಡವರು ಇನ್ನೂ ಸಂಕಷ್ಟಕ್ಕೆ ಒಳಗಾಗುತ್ತಿದ್ದರು. ನಮ್ಮ ಪಕ್ಷದ ಶಾಸಕರು, ಕಳೆದ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು, ಸಂಸದರು, ಮುಖಂಡರು ಸಂಕಷ್ಟದ ಸಮಯದಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಜನರ ನೆರವಿಗೆ ನಿಂತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.