Tag: petrol

  • ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಕಡಿತಗೊಳಿಸಿದ ಗುಜರಾತ್ ಸರ್ಕಾರ

    ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಕಡಿತಗೊಳಿಸಿದ ಗುಜರಾತ್ ಸರ್ಕಾರ

    ನವದೆಹಲಿ: ಗುಜರಾತ್ ಸರ್ಕಾರವು ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ವಿಧಿಸುತ್ತಿದ್ದ ವ್ಯಾಟ್ ಕಡಿತಗೊಳಿದೆ. ಶೇ.4 ವ್ಯಾಟ್ ಕಡಿತಗೊಳಿಸಿದ ಪರಿಣಾಮ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 2.93 ರೂ., ಡೀಸೆಲ್ 2.72 ರೂ. ಇಳಿಕೆಯಾಗಿದೆ.

    ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 2 ರೂ. ಅಬಕಾರಿ ಸುಂಕವನ್ನು ಕಡಿತಗೊಳಿಸಿದ ನಂತರ ವ್ಯಾಟ್ ಇಳಿಸಿದ ಮೊದಲ ರಾಜ್ಯ ಗುಜರಾತ್ ಆಗಿದೆ. ಇಂದು ಮಧ್ಯರಾತ್ರಿಯಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ತಿಳಿಸಿದ್ದಾರೆ.

    ವ್ಯಾಟ್ ಕಡಿತದಿಂದ ಗುಜರಾತ್ ರಾಜ್ಯ ಸರ್ಕಾರಕ್ಕೆ ವಾರ್ಷಿಕ 2,316 ಕೋಟಿ ರೂ ಹೊರೆಯಾಗಲಿದೆ. ಆದರೂ ಜನರ ಹಿತದೃಷ್ಟಿಯಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಎಂದು ಸಿಎಂ ವಿಜಯ್ ರುಪಾನಿ ತಿಳಿಸಿದರು.

    ಕೇಂದ್ರ ಪೆಟ್ರೋಲಿಯಂ ಸಚಿವ ಧಮೇಂದ್ರ ಪ್ರಧಾನ್ ಕೆಲ ದಿನಗಳ ಹಿಂದೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ನಂತರ ರಾಜ್ಯ ಸರ್ಕಾರಗಳು ವ್ಯಾಟ್ ಇಳಿಸಬೇಕೆಂದು ಹೇಳಿದ್ದರು.

    ತೈಲಗಳ ಮೇಲೆ ವಿಧಿಸುವ ತೆರಿಗೆಯಲ್ಲಿ ರಾಜ್ಯ ಸರ್ಕಾರಗಳ ವಿಧಿಸುವ ವ್ಯಾಟ್ ಪ್ರಮಾಣ ಅಧಿಕವಾಗಿದ್ದು, ಕೇಂದ್ರದ ಅಬಕಾರಿ ಸುಂಕದಲ್ಲೂ ಶೇ.42 ರಷ್ಟು ಹಣವನ್ನು ಪಡೆಯುತ್ತಿವೆ. ಇದರಲ್ಲಿ ಸಂಗ್ರಹವಾದ ಹಣವನ್ನು ರಾಜ್ಯಗಳ ಕಲ್ಯಾಣ ಯೋಜನೆಗೆ ಕೇಂದ್ರ ನೀಡುತ್ತದೆ ಎಂದು ಧರ್ಮೇಂದ್ರ ಪ್ರಧಾನ್ ತಿಳಿಸಿದ್ದರು.

    ಪ್ರಧಾನ್ ಅವರ ಮನವಿಗೆ ಪ್ರತಿಕ್ರಿಯಿಸಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೇಂದ್ರಕ್ಕೆ ತೈಲ ಉತ್ಪನ್ನಗಳ ಮೂಲ ಬೆಲೆಯನ್ನು ಕಡಿತಗೊಳಿಸಲು ತಿಳಿಸಿದ್ದರು. ಈ ಕುರಿತ ಉದಾಹರಣೆಯಾಗಿ ನೆರೆಯ ರಾಜ್ಯ ಜಾರ್ಖಂಡ್ ರಾಜ್ಯದಲ್ಲಿ ಬಿಹಾರಕ್ಕಿಂತಲೂ ಕಡಿಮೆ ಬೆಲೆಯಲ್ಲಿ ತೈಲ ಉತ್ಪನ್ನಗಳು ದೊರೆಯುತ್ತಿರುವ ಕುರಿತು ಮಾಹಿತಿ ನೀಡಿದ್ದರು. ಅಲ್ಲದೆ ಕೇರಳ ಸರ್ಕಾರವು ತೈಲಗಳ ಮೇಲಿನ ವ್ಯಾಟ್ ಕಡಿತಗೊಳಿಸಲು ನಿರಾಕರಿಸಿತ್ತು.

    ಬೆಲೆ ಏರಿಕೆಯಿಂದಾಗಿ ಜನ ಸಾಮಾನ್ಯರಿಗೆ ಆಗುತ್ತಿರುವ ಹೊರೆಯನ್ನು ತಪ್ಪಿಸಲು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಸಲಾಗಿದೆ ಎಂದು ಅಬಕಾರಿ ಮತ್ತು ಸೀಮಾ ಸುಂಕ ಮಂಡಳಿ(ಸಿಬಿಇಸಿ)ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿತ್ತು. ಇದಾದ ಬಳಿಕ ಬಿಜೆಪಿ ಸರ್ಕಾರಗಳು ವ್ಯಾಟ್ ಇಳಿಸಲು ಚಿಂತನೆ ನಡೆಸಿದ್ದು, ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ವ್ಯಾಟ್ ಇಳಿಸಲಾಗುವುದು ಎಂದು ಕಳೆದ ಗುರುವಾರ ಹೇಳಿದ್ದರು.

    ಈ ವರ್ಷದ ಅಂತ್ಯದ ವೇಳೆಗೆ ಗುಜರಾತ್ ರಾಜ್ಯದ ವಿಧಾನ ಸಭಾ ಕ್ಷೇತ್ರ ಚುನಾವಣೆಗಳು ನಡೆಯಲಿವೆ ಹೀಗಾಗಿ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ ಎನ್ನುವ ಮಾತುಗಳು ಕೇಳಿಬಂದಿವೆ. ಗುಜರಾತ್ ನಂತರ ಬಿಜೆಪಿ ಆಡಳಿತ ಇರುವ ರಾಜ್ಯಗಳು ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಇಳಿಸಲು ಮುಂದಾಗಲಿದೆ ಎಂದು ಹೇಳಲಾಗುತ್ತಿದೆ.

    https://publictv.in/it-is-central-govts-responsibility-to-reduce-petrol-diesel-rate-cm/

  • ದೇಶಾದ್ಯಂತ ಅಕ್ಟೋಬರ್ 13 ರಂದು ಪೆಟ್ರೋಲ್ ಬಂಕ್ ಬಂದ್

    ದೇಶಾದ್ಯಂತ ಅಕ್ಟೋಬರ್ 13 ರಂದು ಪೆಟ್ರೋಲ್ ಬಂಕ್ ಬಂದ್

    ಬೆಂಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಅನ್ನು ಜಿಎಸ್‍ಟಿ ವ್ಯಾಪ್ತಿಗೆ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಅಕ್ಟೋಬರ್ 13 ರಂದು ದೇಶಾದ್ಯಂತ ಪೆಟ್ರೋಲ್ ಬಂಕ್ ಬಂದ್ ನಡೆಸಲಾಗುವುದು ಎಂದು ಪೆಟ್ರೋಲ್ ಡೀಸೆಲ್ ಡೀಲರ್ಸ್ ಆಸೋಸಿಯೇಷನ್ ತಿಳಿಸಿದೆ.

    ಸರ್ಕಾರವು ನಿತ್ಯ ದರದ ಪರಿಷ್ಕರಣೆಯನ್ನು ಕೈ ಬಿಡಲು ಹಾಗೂ ಅಪೂರ್ಣ ಚಂದ್ರ ಕಮೀಟಿ ವರದಿ ಜಾರಿಗೆ ಒತ್ತಾಯಿಸಿ, ಅಕ್ಟೋಬರ್ 12 ರ ಮಧ್ಯರಾತ್ರಿಯಿಂದ ಅಕ್ಟೋಬರ್ 13 ರ ದಿನವಿಡಿ ಪೆಟ್ರೋಲ್ ಬಂಕ್ ಬಂದ್ ನಡೆಸಲಾಗುತ್ತದೆ.

    ಕೇಂದ್ರ ಸರ್ಕಾರವು ಪೆಟ್ರೋಲ್-ಡೀಸೆಲ್ ಅನ್ನು ಜಿಎಸ್‍ಟಿ ವ್ಯಾಪ್ತಿಗೆ ತೆಗೆದುಕೊಳ್ಳದಿದ್ದರೆ, ನಾವು ಅಕ್ಟೋಬರ್ 27 ರಿಂದ ನಮ್ಮ ಬೇಡಿಕೆ ಈಡೇರುವವರೆಗೂ ಅನಿರ್ಧಿಷ್ಟಾವಾಧಿ ಬಂದ್ ನಡೆಸುವುದಾಗಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಪೆಟ್ರೋಲ್ ಡೀಸೆಲ್ ಡೀಲರ್ಸ್ ಆಸೋಸಿಯೇಷನ್ ರವೀಂದ್ರನಾಥ್ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

  • ನಾವು ಅಬಕಾರಿ ಸುಂಕ ಇಳಿಸಿದ್ದೇವೆ, ನೀವು ವ್ಯಾಟ್ ಇಳಿಸಿ: ಧರ್ಮೇಂದ್ರ ಪ್ರಧಾನ್

    ನಾವು ಅಬಕಾರಿ ಸುಂಕ ಇಳಿಸಿದ್ದೇವೆ, ನೀವು ವ್ಯಾಟ್ ಇಳಿಸಿ: ಧರ್ಮೇಂದ್ರ ಪ್ರಧಾನ್

    ಬೆಂಗಳೂರು: ಮಂಗಳವಾರವಷ್ಟೇ ಪ್ರತಿ ಲೀಟರ್ ಪೆಟ್ರೋಲ್, ಡಿಸೇಲ್ ಮೇಲಿನ ಅಬಕಾರಿ ಸುಂಕವನ್ನು 2 ರೂ. ಕಡಿತಗೊಳಿಸಿದ್ದು ಕೇಂದ್ರ ಸರ್ಕಾರ ಇದೀಗ ರಾಜ್ಯ ಸರ್ಕಾರಗಳಿಗೆ ಮೌಲ್ಯವರ್ಧಿತ ತೆರಿಗೆ ಕಡಿತಗೊಳಿಸುವಂತೆ ಹೇಳಿದೆ.

    ಕಳೆದ 3 ತಿಂಗಳಿಂದ ನಾಗಾಲೋಟದಲ್ಲಿ ಸಾಗುತ್ತಿದ್ದ ತೈಲ ಬೆಲೆ ಇಳಿಕೆಗೆ ಅಬಕಾರಿ ಸುಂಕದಲ್ಲಿ 2 ರೂಪಾಯಿ ಕಡಿತ ಮಾಡಿದ್ದ ಕೇಂದ್ರ ಸರ್ಕಾರ ಈಗ ರಾಜ್ಯಗಳೂ ಶೇ.5ರಷ್ಟು ಕಡಿತಗೊಳಿಸಿ ಅಂತ ಹೇಳಿ ಜಾಣತನ ಮೆರೆದಿದೆ.

    ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ರಾಜ್ಯ ಸರ್ಕಾರಗಳು ವ್ಯಾಟ್ ಮೂಲಕ ಹೇರುತ್ತಿರುವ ತೆರಿಗೆಗಳನ್ನು ಇಳಿಕೆ ಮಾಡುವಂತೆ ಸೂಚಿಸಿದೆ. ಈ ಸಂಬಂಧ ಕೇಂದ್ರ ಪೆಟ್ರೋಲಿಯಂ ಖಾತೆಯ ಸಚಿವ ಧರ್ಮೆಂದ್ರ ಪ್ರಧಾನ್ ಕೂಡ ಪತ್ರ ಬರೆದಿದ್ದಾರೆ. ಅಬಕಾರಿ ಸುಂಕವನ್ನು ನಾವು ಇಳಿಕೆ ಮಾಡಿರೋದ್ರಿಂದ ಪೆಟ್ರೋಲ್ ಬೆಲೆ ಲೀಟರ್‍ಗೆ 2 ರೂಪಾಯಿ 50 ಪೈಸೆ ಹಾಗೂ ಡೀಸೆಲ್ ಬೆಲೆ 2 ರೂಪಾಯಿ 25 ಪೈಸೆ ಇಳಿಕೆಯಾಗಿದೆ. ನೀವು ಕೂಡ ವ್ಯಾಟ್ ರೂಪದಲ್ಲಿ ಹಾಕುತ್ತಿರುವ ತೆರಿಗೆಯನ್ನು ಇಳಿಕೆ ಮಾಡಿದ್ರೆ ಪೆಟ್ರೋಲ್ ಬೆಲೆ ಲೀಟರ್‍ಗೆ 5 ರೂಪಾಯಿ ಇಳಿಕೆಯಾಗಲಿದೆ ಅಂತ ಜಾರಿಕೊಂಡಿದ್ದಾರೆ. ಇಷ್ಟಕ್ಕೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಾಕುತ್ತಿರುವ ತೆರಿಗೆಯನ್ನು ಇಳಿಸಿದ್ರೆ ಅರ್ಧಕರ್ಧ ಬೆಲೆ ಇಳಿಕೆಯಾಗುವುದಂತೂ ಸತ್ಯ.

    ಯಾವ ರಾಜ್ಯದಲ್ಲಿ ವ್ಯಾಟ್ ಎಷ್ಟಿದೆ?
    ಕರ್ನಾಟಕ: ಪೆಟ್ರೋಲ್ – ಶೇ.30, ಡೀಸೆಲ್ – ಶೇ.19
    ಮಹಾರಾಷ್ಟ್ರ: ಪೆಟ್ರೋಲ್ – ಶೇ.47.64, ಡೀಸೆಲ್ – ಶೇ.28.39
    ಆಂಧ್ರ ಪ್ರದೇಶ: ಪೆಟ್ರೋಲ್ – ಶೇ. 38.83, ಡೀಸೆಲ್ – ಶೇ. 30.82
    ಮಧ್ಯಪ್ರದೇಶ: ಪೆಟ್ರೋಲ್ – ಶೇ. 38.79, ಡೀಸೆಲ್ – ಶೇ. 30.22
    ತೆಲಂಗಾಣ: ಪೆಟ್ರೋಲ್ – ಶೇ. 35.20, ಡೀಸೆಲ್ – ಶೇ.27.00
    ಕೇರಳ: ಪೆಟ್ರೋಲ್ – ಶೇ. 34.06

    ಪೆಟ್ರೋಲ್ ಹಾಗೂ ಡೀಸೆಲ್ ಮೂಲಕ ಆದಾಯ ಸಂಗ್ರಹ ಮಾಡುವ ರಾಜ್ಯಗಳ ಪೈಕಿ ಕರ್ನಾಟಕಕ್ಕೆ ದೇಶದಲ್ಲೇ ಐದನೇ ಸ್ಥಾನವಿದೆ. ದೇಶದಲ್ಲೇ ಅತಿ ಹೆಚ್ಚು ತೆರಿಗೆ ವಿಧಿಸೋ ಮಹಾರಾಷ್ಟ್ರ ಸರ್ಕಾರ ಆದಾಯ ಸಂಗ್ರಹದಲ್ಲಿ ಮೊದಲ ಸ್ಥಾನವಿದೆ. ಸೇವಾ ತೆರಿಗೆ, ಪ್ರವೇಶ ತೆರಿಗೆಗಳ ಮೂಲಕ ರಾಜ್ಯಗಳು ಸಂಗ್ರಹ ಮಾಡುವ ಹಣ ಈ ಕೆಳಗಿನಂತಿದೆ.

    ತೆರಿಗೆ ಸಂಗ್ರಹದಲ್ಲಿ ಯಾರು ಮೊದಲು:
    ನಂ.1 ಮಹಾರಾಷ್ಟ್ರ: 23,160 ಕೋಟಿ ರೂ.
    ನಂ.2 ಗುಜರಾತ್: 15,958 ಕೋಟಿ ರೂ.
    ನಂ.3 ಉತ್ತರಪ್ರದೇಶ: 15, 850 ಕೋಟಿ ರೂ.
    ನಂ.4 ತಮಿಳುನಾಡು: 12, 563 ಕೋಟಿ ರೂ.
    ನಂ.5 ಕರ್ನಾಟಕ: 11,103 ಕೋಟಿ ರೂ.

    ಯಾರಿಗೆ ಎಷ್ಟು?
    ಪೆಟ್ರೋಲ್ ಮೇಲೆ ಅಬಕಾರಿ ಸುಂಕ: 21.48 ಪೈಸೆ (ಲೀಟರ್‍ಗೆ)
    ಪೆಟ್ರೋಲ್ ಮೇಲೆ ವ್ಯಾಟ್: ಶೇ.27
    ಡೀಲರ್ಸ್‍ಗಳ ಕಮಿಷನ್: 3.23 (ಲೀಟರ್‍ಗೆ)

    ಡೀಸೆಲ್ ಮೇಲೆ ಅಬಕಾರಿ ಸುಂಕ: 17.33 (ಲೀಟರ್‍ಗೆ)
    ಡೀಸೆಲ್ ಮೇಲಿನ ವ್ಯಾಟ್: ಶೇ.27
    ಡೀಲರ್ಸ್‍ಗಳ ಕಮಿಷನ್: 2.17 (ಲೀಟರ್‍ಗೆ)

  • ಗುಡ್ ನ್ಯೂಸ್, 2 ರೂ. ಇಳಿಕೆಯಾಗುತ್ತೆ ಪೆಟ್ರೋಲ್, ಡೀಸೆಲ್ ದರ

    ಗುಡ್ ನ್ಯೂಸ್, 2 ರೂ. ಇಳಿಕೆಯಾಗುತ್ತೆ ಪೆಟ್ರೋಲ್, ಡೀಸೆಲ್ ದರ

    ನವದೆಹಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 2 ರೂ. ಕಡಿತ ಗೊಳಿಸಿದೆ. ಹೀಗಾಗಿ ಇಂದು ಮಧ್ಯರಾತ್ರಿಯಿಂದಲೇ ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ದರ 2 ರೂ. ಇಳಿಕೆಯಾಗಲಿದೆ.

    ಬೆಲೆ ಏರಿಕೆಯಿಂದಾಗಿ ಜನ ಸಾಮಾನ್ಯರಿಗೆ ಆಗುತ್ತಿರುವ ಹೊರೆಯನ್ನು ತಪ್ಪಿಸಲು ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಅಬಕಾರಿ ಮತ್ತು ಸೀಮಾ ಸುಂಕ ಮಂಡಳಿ(ಸಿಬಿಇಸಿ)ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

    ಅಬಕಾರಿ ಸುಂಕ ಕಡಿತಗೊಳಿಸಿದ್ದರಿಂದ ಈ ವರ್ಷ 26 ಸಾವಿರ ಕೋಟಿ ರೂ. ಹೊರೆ ಸರ್ಕಾರಕ್ಕೆ ಬೀಳಲಿದೆ. ಈ ಹಣಕಾಸು ವರ್ಷದಲ್ಲಿ 13 ಸಾವಿರ ಕೋಟಿ ರೂ. ಹೊರೆ ಬೀಳಲಿದೆ ಎಂದು ಹೇಳಿದೆ.

    ಪೆಟ್ರೋಲ್ ಬೆಲೆಯಲ್ಲಿ ಯಾರಿಗೆ ಎಷ್ಟು ಪಾಲು?
    ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ ಸೆಪ್ಟೆಂಬರ್ 13 ರಂದು 70.38 ರೂ. ಇತ್ತು. ಇದರಲ್ಲಿ 30.70 ರೂ. ಡೀಲರ್ ಶುಲ್ಕ, 21.48 ರೂ. ಅಬಕಾರಿ ಸುಂಕ 3.24 ರೂ. ಡೀಲರ್ ಕಮಿಷನ್, 14.96 ರೂ. ವ್ಯಾಟ್ ತೆರಿಗೆ ಇದೆ.

    ಡೀಸೆಲ್ ಬೆಲೆಯಲ್ಲಿ ಯಾರಿಗೆ ಎಷ್ಟು ಪಾಲು?
    ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಗೆ ಸೆಪ್ಟೆಂಬರ್ 13 ರಂದು 58.72 ರೂ.ಇತ್ತು. ಇದರಲ್ಲಿ 30.54 ರೂ. ಡೀಲರ್ ಶುಲ್ಕ, 17.33 ರೂ. ಅಬಕಾರಿ ಸುಂಕ 2.18 ರೂ. ಡೀಲರ್ ಕಮಿಷನ್, 8.67 ರೂ. ವ್ಯಾಟ್ ತೆರಿಗೆ ಇದೆ.

    ಬೇರೆ ದೇಶಗಳಲ್ಲಿ ಪೆಟ್ರೋಲ್, ಡೀಸೆಲ್, ಎಲ್‍ಪಿಜಿ ದರ ಎಷ್ಟಿದೆ?
    ಪೆಟ್ರೋಲ್: ಭಾರತ(ದೆಹಲಿ) 70.38 ರೂ., ಪಾಕಿಸ್ತಾನ 40.82 ರೂ., ಬಾಂಗ್ಲಾದೇಶ 69.16 ರೂ., ಶ್ರೀಲಂಕಾ 49.80 ರೂ., ನೇಪಾಳ 61.88 ರೂ. ಇದೆ.

    ಡೀಸೆಲ್: ಭಾರತ(ದೆಹಲಿ)58.72 ರೂ., ಪಾಕಿಸ್ತಾನ 47.15 ರೂ., ಬಾಂಗ್ಲಾದೇಶ 52.27 ರೂ., ಶ್ರೀಲಂಕಾ 40.43 ರೂ., ನೇಪಾಳ 46.72 ರೂ. ಇದೆ.

    14.2 ಕೆಜಿ ತೂಕದ ಎಲ್‍ಪಿಜಿ ಸಿಲಿಂಡರ್: ಭಾರತ 487 ರೂ., ಪಾಕಿಸ್ತಾನ 1081.32 ರೂ., ಬಾಂಗ್ಲಾದೇಶ 639.50 ರೂ., ಶ್ರೀಲಂಕಾ 638.68 ರೂ., ನೇಪಾಳ 836.62 ರೂ. ಇದೆ.

    ಪೆಟ್ರೋಲ್ ಜಿಎಸ್‍ಟಿ ಅಡಿ ಬರುತ್ತಾ?
    ಅಡುಗೆ ಅನಿಲ (ಎಲ್‍ಪಿಜಿ), ಸೀಮೆಎಣ್ಣೆ, ನಾಫ್ತಾ ಗಳಿಗೆ ಜಿಎಸ್‍ಟಿ ಅನ್ವಯವಾಗುತ್ತಿದೆ. ಆದರೆ ಡೀಸೆಲ್, ಪೆಟ್ರೋಲ್, ನೈಸರ್ಗಿಕ ಅನಿಲ, ಕಚ್ಚಾ ತೈಲ ಮತ್ತು ವಿಮಾನ ಇಂಧನವನ್ನು ಸದ್ಯಕ್ಕೆ ಜಿಎಸ್‍ಟಿಯಿಂದ ಹೊರಗೆ ಇಡಲಾಗಿದೆ. ರಾಜ್ಯ ಸರ್ಕಾರಗಳು ಮದ್ಯ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ತೆರಿಗೆ ವಿಧಿಸುವ ಅಧಿಕಾರವನ್ನು ಬಿಟ್ಟುಕೊಡಲು ಮುಂದಾಗದ ಹಿನ್ನೆಲೆಯಲ್ಲಿ ಇವುಗಳು ಜಿಎಸ್‍ಟಿ ವ್ಯಾಪ್ತಿಗೆ ಸೇರ್ಪಡೆಯಾಗಿಲ್ಲ.

    ಒಂದು ವೇಳೆ ಪೆಟ್ರೋಲ್ ಜಿಎಸ್‍ಟಿ ಅಡಿ ಬಂದರೆ ಪೆಟ್ರೋಲ್, ಡೀಸೆಲ್ ಬೆಲೆ ಭಾರೀ ಇಳಿಕೆಯಾಗುತ್ತದೆ. ಆದರೆ ಆದಾಯಕ್ಕೆ ಭಾರೀ ಹೊಡೆತ ಬೀಳುವ ಕಾರಣ ಜಿಎಸ್‍ಟಿ ವ್ಯಾಪ್ತಿಗೆ ಸೇರಿಸಲು ರಾಜ್ಯ ಸರ್ಕಾರಗಳು ಒಪ್ಪಿಗೆ ನೀಡಿಲ್ಲ.

    ಬೆಲೆ ಕಡಿಮೆಯಾಗಬಾರದು:
    ಪೆಟ್ರೋಲ್ ಬೆಲೆ ಕಡಿಮೆಯಾಗಬಾರದು ಎನ್ನುವ ವಾದವನ್ನು ಕೆಲವರು ಮಂಡಿಸುತ್ತಿದ್ದಾರೆ. ಒಂದು ವೇಳೆ ಭಾರೀ ಇಳಿಕೆಯಾದರೆ ಭಾರೀ ಸಂಖ್ಯೆಯಲ್ಲಿ ವಾಹನಗಳು ರಸ್ತೆಗೆ ಇಳಿಯಬಹುದು. ಇದರಿಂದ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗುವುದಲ್ಲದೇ ವಾಯು ಮಾಲಿನ್ಯ ಹೆಚ್ಚಾಗುತ್ತದೆ. ಹೀಗಾಗಿ ಬೆಲೆ ಇಳಿಕೆಯಾಗಬಾರದು ಎನ್ನುವ ವಾದವನ್ನು ಕೆಲ ಆರ್ಥಿಕ ತಜ್ಞರು ಮಂಡಿಸುತ್ತಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಇಳಿಸುವ ಬದಲು ಸಾರ್ವಜನಿಕ ಸಾರಿಗೆಯ ಟಿಕೆಟ್ ಬೆಲೆಯನ್ನು ಇಳಿಸುವುದು ಉತ್ತಮ. ಇದರಿಂದಾಗಿ ಜನರು ಹೆಚ್ಚು ಸಾರ್ವಜನಿಕ ಸಾರಿಗೆ ಬಳಸುವಂತಾಗುತ್ತದೆ ಎನ್ನುವ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಾರೆ.

    ತೈಲ ಬೆಲೆ ಏರಿಕೆ ವಿಚಾರದಲ್ಲಿ ವಿರೋಧ ಪಕ್ಷಗಳು ಈಗ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿದ್ದರೆ, ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಜಿಎಸ್‍ಟಿ ವ್ಯಾಪ್ತಿಗೆ ತಂದರೆ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗಲಿದೆ ಎಂದು ಹೇಳಿದ್ದಾರೆ.

  • 70 ರೂ. ಪೆಟ್ರೋಲ್ ನಲ್ಲಿ ಯಾರಿಗೆ ಎಷ್ಟು ಪಾಲು? ಬೇರೆ ರಾಷ್ಟ್ರಗಳಲ್ಲಿ ಎಷ್ಟು ದರವಿದೆ?

    70 ರೂ. ಪೆಟ್ರೋಲ್ ನಲ್ಲಿ ಯಾರಿಗೆ ಎಷ್ಟು ಪಾಲು? ಬೇರೆ ರಾಷ್ಟ್ರಗಳಲ್ಲಿ ಎಷ್ಟು ದರವಿದೆ?

    ನವದೆಹಲಿ: ದೀಪಾವಳಿ ಹಬ್ಬದ ವೇಳೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಖಾತೆಯ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

    ಅಮೆರಿಕದಲ್ಲಿ ಚಂಡಮಾರುತದಿಂದಾಗಿ ತೈಲ ಉತ್ಪಾದನೆ ಕಡಿಮೆಯಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾಗಿತ್ತು. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಸುಧಾರಣೆ ಕಾಣಲಿದ್ದು ದೀಪಾವಳಿ ವೇಳೆಗೆ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗಲಿದೆ ಎಂದು ಅವರು ತಿಳಿಸಿದರು.

    ಜಿಎಸ್‍ಟಿ ವ್ಯಾಪ್ತಿಗೆ ತಂದರೆ ತೈಲ ಕಂಪೆನಿಗಳಿಗೆ ಲಾಭವಾಗಲಿದೆ ಎನ್ನುವ ಆರೋಪವನ್ನು ತಳ್ಳಿ ಹಾಕಿದ ಅವರು ಜಿಎಸ್‍ಟಿ ಅಡಿ ತೈಲಗಳು ಬಂದರೆ ಗ್ರಾಹಕರಿಗೆ ಲಾಭ ಆಗಲಿದೆ ಎಂದರು.

    ಪೆಟ್ರೋಲ್ ಬೆಲೆಯಲ್ಲಿ ಯಾರಿಗೆ ಎಷ್ಟು ಪಾಲು?
    ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ ಸೆಪ್ಟೆಂಬರ್ 13 ರಂದು 70.38 ರೂ. ಇತ್ತು. ಇದರಲ್ಲಿ 30.70 ರೂ. ಡೀಲರ್ ಶುಲ್ಕ, 21.48 ರೂ. ಅಬಕಾರಿ ಸುಂಕ 3.24 ರೂ. ಡೀಲರ್ ಕಮಿಷನ್, 14.96 ರೂ. ವ್ಯಾಟ್ ತೆರಿಗೆ ಇದೆ.

    ಡೀಸೆಲ್ ಬೆಲೆಯಲ್ಲಿ ಯಾರಿಗೆ ಎಷ್ಟು ಪಾಲು?
    ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಗೆ ಸೆಪ್ಟೆಂಬರ್ 13 ರಂದು 58.72 ರೂ.ಇತ್ತು. ಇದರಲ್ಲಿ 30.54 ರೂ. ಡೀಲರ್ ಶುಲ್ಕ, 17.33 ರೂ. ಅಬಕಾರಿ ಸುಂಕ 2.18 ರೂ. ಡೀಲರ್ ಕಮಿಷನ್, 8.67 ರೂ. ವ್ಯಾಟ್ ತೆರಿಗೆ ಇದೆ.

    ಬೇರೆ ದೇಶಗಳಲ್ಲಿ ಪೆಟ್ರೋಲ್, ಡೀಸೆಲ್, ಎಲ್‍ಪಿಜಿ ದರ ಎಷ್ಟಿದೆ?
    ಪೆಟ್ರೋಲ್: ಭಾರತ(ದೆಹಲಿ) 70.38 ರೂ., ಪಾಕಿಸ್ತಾನ 40.82 ರೂ., ಬಾಂಗ್ಲಾದೇಶ 69.16 ರೂ., ಶ್ರೀಲಂಕಾ 49.80 ರೂ., ನೇಪಾಳ 61.88 ರೂ. ಇದೆ.

    ಡೀಸೆಲ್: ಭಾರತ(ದೆಹಲಿ)58.72 ರೂ., ಪಾಕಿಸ್ತಾನ 47.15 ರೂ., ಬಾಂಗ್ಲಾದೇಶ 52.27 ರೂ., ಶ್ರೀಲಂಕಾ 40.43 ರೂ., ನೇಪಾಳ 46.72 ರೂ. ಇದೆ.

    14.2 ಕೆಜಿ ತೂಕದ ಎಲ್‍ಪಿಜಿ ಸಿಲಿಂಡರ್: ಭಾರತ 487 ರೂ., ಪಾಕಿಸ್ತಾನ 1081.32 ರೂ., ಬಾಂಗ್ಲಾದೇಶ 639.50 ರೂ., ಶ್ರೀಲಂಕಾ 638.68 ರೂ., ನೇಪಾಳ 836.62 ರೂ. ಇದೆ.

    ಪೆಟ್ರೋಲ್ ಜಿಎಸ್‍ಟಿ ಅಡಿ ಬರುತ್ತಾ?
    ಅಡುಗೆ ಅನಿಲ (ಎಲ್‍ಪಿಜಿ), ಸೀಮೆಎಣ್ಣೆ, ನಾಫ್ತಾ ಗಳಿಗೆ ಜಿಎಸ್‍ಟಿ ಅನ್ವಯವಾಗುತ್ತಿದೆ. ಆದರೆ ಡೀಸೆಲ್, ಪೆಟ್ರೋಲ್, ನೈಸರ್ಗಿಕ ಅನಿಲ, ಕಚ್ಚಾ ತೈಲ ಮತ್ತು ವಿಮಾನ ಇಂಧನವನ್ನು ಸದ್ಯಕ್ಕೆ ಜಿಎಸ್‍ಟಿಯಿಂದ ಹೊರಗೆ ಇಡಲಾಗಿದೆ. ರಾಜ್ಯ ಸರ್ಕಾರಗಳು ಮದ್ಯ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ತೆರಿಗೆ ವಿಧಿಸುವ ಅಧಿಕಾರವನ್ನು ಬಿಟ್ಟುಕೊಡಲು ಮುಂದಾಗದ ಹಿನ್ನೆಲೆಯಲ್ಲಿ ಇವುಗಳು ಜಿಎಸ್‍ಟಿ ವ್ಯಾಪ್ತಿಗೆ ಸೇರ್ಪಡೆಯಾಗಿಲ್ಲ.

    ಒಂದು ವೇಳೆ ಪೆಟ್ರೋಲ್ ಜಿಎಸ್‍ಟಿ ಅಡಿ ಬಂದರೆ ಪೆಟ್ರೋಲ್, ಡೀಸೆಲ್ ಬೆಲೆ ಭಾರೀ ಇಳಿಕೆಯಾಗುತ್ತದೆ. ಆದರೆ ಆದಾಯಕ್ಕೆ ಭಾರೀ ಹೊಡೆತ ಬೀಳುವ ಕಾರಣ ಜಿಎಸ್‍ಟಿ ವ್ಯಾಪ್ತಿಗೆ ಸೇರಿಸಲು ರಾಜ್ಯ ಸರ್ಕಾರಗಳು ಒಪ್ಪಿಗೆ ನೀಡಿಲ್ಲ.

    ಬೆಲೆ ಕಡಿಮೆಯಾಗಬಾರದು:
    ಪೆಟ್ರೋಲ್ ಬೆಲೆ ಕಡಿಮೆಯಾಗಬಾರದು ಎನ್ನುವ ವಾದವನ್ನು ಕೆಲವರು ಮಂಡಿಸುತ್ತಿದ್ದಾರೆ. ಒಂದು ವೇಳೆ ಭಾರೀ ಇಳಿಕೆಯಾದರೆ ಭಾರೀ ಸಂಖ್ಯೆಯಲ್ಲಿ ವಾಹನಗಳು ರಸ್ತೆಗೆ ಇಳಿಯಬಹುದು. ಇದರಿಂದ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗುವುದಲ್ಲದೇ ವಾಯು ಮಾಲಿನ್ಯ ಹೆಚ್ಚಾಗುತ್ತದೆ. ಹೀಗಾಗಿ ಬೆಲೆ ಇಳಿಕೆಯಾಗಬಾರದು ಎನ್ನುವ ವಾದವನ್ನು ಕೆಲ ಆರ್ಥಿಕ ತಜ್ಞರು ಮಂಡಿಸುತ್ತಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಇಳಿಸುವ ಬದಲು ಸಾರ್ವಜನಿಕ ಸಾರಿಗೆಯ ಟಿಕೆಟ್ ಬೆಲೆಯನ್ನು ಇಳಿಸುವುದು ಉತ್ತಮ. ಇದರಿಂದಾಗಿ ಜನರು ಹೆಚ್ಚು ಸಾರ್ವಜನಿಕ ಸಾರಿಗೆ ಬಳಸುವಂತಾಗುತ್ತದೆ ಎನ್ನುವ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಾರೆ.

    ತೈಲ ಬೆಲೆ ಏರಿಕೆ ವಿಚಾರದಲ್ಲಿ ವಿರೋಧ ಪಕ್ಷಗಳು ಈಗ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿದ್ದರೆ, ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಜಿಎಸ್‍ಟಿ ವ್ಯಾಪ್ತಿಗೆ ತಂದರೆ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗಲಿದೆ ಎಂದು ಹೇಳಿದ್ದಾರೆ.

    ಇದನ್ನೂ ಓದಿ: ಜಿಎಸ್‍ಟಿ ಅಡಿ ಪೆಟ್ರೋಲ್ ಬಂದ್ರೆ ಬೆಂಗ್ಳೂರಿನಲ್ಲಿ ಪ್ರತಿ ಲೀಟರ್‍ಗೆ 40 ರೂ.ಅಷ್ಟೇ!

  • ಜಿಎಸ್‍ಟಿ ಅಡಿ ಪೆಟ್ರೋಲ್ ಬಂದ್ರೆ ಬೆಂಗ್ಳೂರಿನಲ್ಲಿ ಪ್ರತಿ ಲೀಟರ್‍ಗೆ 40 ರೂ.ಅಷ್ಟೇ!

    ಜಿಎಸ್‍ಟಿ ಅಡಿ ಪೆಟ್ರೋಲ್ ಬಂದ್ರೆ ಬೆಂಗ್ಳೂರಿನಲ್ಲಿ ಪ್ರತಿ ಲೀಟರ್‍ಗೆ 40 ರೂ.ಅಷ್ಟೇ!

    ಬೆಂಗಳೂರು: ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಆದರೆ ಪೆಟ್ರೋಲ್, ಡೀಸೆಲ್ ಸರಕು ಮತ್ತು ಸೇವಾ ತೆರಿಗೆ(ಜಿಎಸ್‍ಟಿ) ವ್ಯಾಪ್ತಿಗೆ ತಂದರೆ ಬೆಂಗಳೂರಿನಲ್ಲಿ 40 ರೂ. ಆಗಬಹುದು.

    ಹೌದು. Factly.in ವೆಬ್‍ಸೈಟ್ ಈ ವರದಿ ಪ್ರಕಟಿಸಿದ್ದು ಒಂದು ವೇಳೆ ಪೆಟ್ರೋಲ್‍ಗೆ ಶೇ.18 ರಷ್ಟು ತೆರಿಗೆ ವಿಧಿಸಿದರೆ ಬೆಲೆ 40 ರೂ. ಆಗುತ್ತದೆ ಎಂದು ಹೇಳಿದೆ. ಪ್ರಸ್ತುತ ಭಾರತದಲ್ಲಿ ವಸ್ತುಗಳ ಮೇಲೆ ಶೇ.5, ಶೇ.12, ಶೇ.18, ಶೇ.28 ಜಿಎಸ್‍ಟಿ ತೆರಿಗೆ ವಿಧಿಸಲಾಗುತ್ತದೆ. ಹೀಗಾಗಿ ಈ ಪೆಟ್ರೋಲ್ ಗೆ ಎಷ್ಟು ಜಿಎಸ್‍ಟಿ ಹಾಕಿದ್ರೆ ಎಷ್ಟು ರೂ. ಆಗಬಹುದು ಎನ್ನುವ ವಿವರಣೆಯಲ್ಲಿ ಈ ವೆಬ್‍ಸೈಟ್ ಪ್ರಕಟಿಸಿದೆ.

    ಎಷ್ಟು ತೆರಿಗೆ ಆದ್ರೆ ಎಷ್ಟು ರೂ.?
    ಈಗ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ 71.17 ರೂ. ಇದೆ. ಒಂದು ವೇಳೆ ಜಿಎಸ್‍ಟಿ ವ್ಯಾಪ್ತಿಗೆ ತಂದು ಶೇ.12 ತೆರಿಗೆ ವಿಧಿಸಿದರೆ 38.01 ರೂ., ಶೇ.18 ತೆರಿಗೆ ವಿಧಿಸಿದರೆ 40.05 ರೂ., ಶೇ.28 ತೆರಿಗೆ ವಿಧಿಸಿದರೆ 43.44 ರೂ. ಆಗಬಹುದು. ಒಂದು ವೇಳೆ ಜಿಎಸ್‍ಟಿ ಶೇ. 28 ಮತ್ತು ಹೆಚ್ಚುವರಿಯಾಗಿ ಶೇ.22 ಜಿಎಸ್‍ಟಿ ಸೆಸ್ ವಿಧಿಸಿದರೂ ಬೆಲೆ 50.91 ರೂ. ಆಗಲಿದೆ.

    ಬೆಂಗಳೂರಿನಲ್ಲಿ ಪ್ರತಿ ಲೀಟರ್ ಡೀಸೆಲ್ ಬೆಲೆ 58.82 ರೂ. ಇದೆ. ಜಿಎಸ್‍ಟಿ ಅಡಿಯಲ್ಲಿ ಡೀಸೆಲ್ ಬಂದರೆ ಶೇ.12 ತೆರಿಗೆ ಹಾಕಿದ್ರೆ 36.65 ರೂ. ಆಗುತ್ತದೆ. ಒಂದು ವೇಳೆ ಶೇ.18ರಷ್ಟು ತೆರಿಗೆ ವಿಧಿಸಿದರೆ 38.61 ರೂ. ಆದರೆ ಶೇ.28 ತೆರಿಗೆ ವಿಧಿಸಿದರೆ 41.88 ರೂ. ಆಗುತ್ತದೆ. ಜಿಎಸ್‍ಟಿ ಶೇ.28 ಜೊತೆಗೆ ಹೆಚ್ಚುವರಿ ಸೆಸ್ 22 ಹಾಕಿದ್ರೆ ಡೀಸೆಲ್ ಬೆಲೆ 49.8 ಆಗಬಹುದು.

    ಪೆಟ್ರೋಲ್ ಜಿಎಸ್‍ಟಿಯಲ್ಲಿ ಬರಲ್ಲ:
    ಅಡುಗೆ ಅನಿಲ (ಎಲ್‍ಪಿಜಿ), ಸೀಮೆಎಣ್ಣೆ, ನಾಫ್ತಾ ಗಳಿಗೆ ಜಿಎಸ್‍ಟಿ ಅನ್ವಯವಾಗುತ್ತಿದೆ. ಆದರೆ ಡೀಸೆಲ್, ಪೆಟ್ರೋಲ್, ನೈಸರ್ಗಿಕ ಅನಿಲ, ಕಚ್ಚಾ ತೈಲ ಮತ್ತು ವಿಮಾನ ಇಂಧನವನ್ನು ಸದ್ಯಕ್ಕೆ ಜಿಎಸ್‍ಟಿಯಿಂದ ಹೊರಗೆ ಇಡಲಾಗಿದೆ. ರಾಜ್ಯ ಸರ್ಕಾರಗಳು ಮದ್ಯ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ತೆರಿಗೆ ವಿಧಿಸುವ ಅಧಿಕಾರವನ್ನು ಬಿಟ್ಟುಕೊಡಲು ಮುಂದಾಗದ ಹಿನ್ನೆಲೆಯಲ್ಲಿ ಇವುಗಳು ಜಿಎಸ್‍ಟಿ ವ್ಯಾಪ್ತಿಗೆ ಸೇರ್ಪಡೆಯಾಗಿಲ್ಲ.

    ಜಿಎಸ್‍ಟಿ ವ್ಯಾಪ್ತಿಗೆ ಪೆಟ್ರೋಲ್ ಬರುತ್ತಾ?
    ಕೇಂದ್ರ ಹಣಕಾಸು ಸಚಿವರು, ರಾಜ್ಯಗಳ ಹಣಕಾಸು ಸಚಿವರು ಇರುವ ಜಿಎಸ್‍ಟಿ ಮಂಡಳಿಯಲ್ಲಿ ಒಪ್ಪಿಗೆ ಸಿಕ್ಕಿದರೆ ಪೆಟ್ರೋಲ್ ಬೆಲೆ ಕಡಿಮೆಯಾಗಬಹುದು. ಈಗಾಗಲೇ ಪೆಟ್ರೋಲಿಯಂ ಖಾತೆಯ ಸಚಿವ ಧರ್ಮೇಂದ್ರ ಪ್ರಧಾನ್ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‍ಟಿ ವ್ಯಾಪ್ತಿಗೆ ತಂದರೆ ದೇಶಾದ್ಯಂತ ಏಕರೂಪದ ದರ ವಿಧಿಸಬಹುದು ಎಂದು ಹೇಳಿದ್ದಾರೆ. ಈಗಾಗಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿರುವ ಕಾರಣ ಎಲ್ಲ ರಾಜ್ಯಗಳು ಒಪ್ಪಿಗೆ ನೀಡಿದರೆ ಬೆಲೆ ಕಡಿಮೆಯಾಗಬಹುದು.

    ಬೆಲೆ ಯಾಕೆ ಜಾಸ್ತಿ?
    ಪ್ರವೇಶ ತೆರಿಗೆ, ವ್ಯಾಟ್, ಅಬಕಾರಿ ಸುಂಕ, ಅಕ್ಟ್ರಾಯ್, ಪೆಟ್ರೋಲ್ ಪಂಪ್ ಮಾಲೀಕರ ಕಮಿಷನ್ ಸೇರಿ ಪೆಟ್ರೋಲ್, ಡೀಸೆಲ್ ದರ ನಿಗದಿಯಾಗುತ್ತದೆ. 2014ರಿಂದ ಈವರೆಗೆ ಲೀಟರ್ ಪೆಟ್ರೋಲ್ ಮೇಲೆ 11.77 ರೂ. ಮತ್ತು ಡೀಸೆಲ್ ಮೇಲೆ 13.47 ರೂ. ರಷ್ಟು ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಹೇರಿದೆ. ಇದರಿಂದ 99,000 ಕೋಟಿ ರೂ. ಸಂಗ್ರಹಿಸುವ ಗುರಿಯನ್ನು ಸರ್ಕಾರ ಹೊಂದಿದೆ.

    ಜಿಎಸ್‍ಟಿಯಲ್ಲಿ ಪೆಟ್ರೋಲ್ ಬೆಲೆ

    ಜಿಎಸ್‍ಟಿಯಲ್ಲಿ ಡೀಸೆಲ್ ಬೆಲೆ

  • ಮುಂದೆ ಇಳಿಕೆಯಾಗುತ್ತೆ, ದೇಶದೆಲ್ಲೆಡೆ ಏಕರೂಪದ ತೈಲ ದರ ನಿಗದಿಯಾಗಬೇಕಾದ್ರೆ ಜಿಎಸ್‍ಟಿ ವ್ಯಾಪ್ತಿಗೆ ತರಬೇಕು: ಪ್ರಧಾನ್

    ಮುಂದೆ ಇಳಿಕೆಯಾಗುತ್ತೆ, ದೇಶದೆಲ್ಲೆಡೆ ಏಕರೂಪದ ತೈಲ ದರ ನಿಗದಿಯಾಗಬೇಕಾದ್ರೆ ಜಿಎಸ್‍ಟಿ ವ್ಯಾಪ್ತಿಗೆ ತರಬೇಕು: ಪ್ರಧಾನ್

    ನವದೆಹಲಿ: ಅಮೆರಿಕವನ್ನು ಅಪ್ಪಳಿಸಿದ ಇರ್ಮಾ ಮತ್ತು ಹಾರ್ವೆ ಚಂಡಮಾರುತಗಳಿಂದ ತೈಲ ಬೆಲೆ ಏರಿಕೆಯಾಗಿದೆ ಎಂದು ಪೆಟ್ರೋಲಿಯಂ ಖಾತೆಯ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

    ಚಂಡಮಾರತುಗಳಿಂದಾಗಿ ತೈಲ ಬೆಲೆಯಲ್ಲಿ ಶೇ.20ರಷ್ಟು ಏರಿಕೆಯಾಗಿದ್ದು ಇದು ತಾತ್ಕಾಲಿಕ. ಆದರೆ ಜನರು ಭರಿಸಲಾಗದ ಮಟ್ಟಕ್ಕೆ ಏರಿಕೆ ಆಗಿಲ್ಲ. ಅಷ್ಟೇ ಅಲ್ಲದೇ ತೈಲ ಬೆಲೆಗಳ ನಿತ್ಯದ ಪರಿಷ್ಕರಣೆ ವಿಚಾರದಲ್ಲೂ ಮಧ್ಯ ಪ್ರವೇಶ ಮಾಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

    ಮುಂದಿನ ದಿನಗಳಲ್ಲಿ ತೈಲ ಬೆಲೆ ಕಡಿಮೆಯಾಗಲಿದೆ. ದೇಶದ ಎಲ್ಲ ನಗರಗಳಲ್ಲಿ ತೈಲ ಬೆಲೆ ಏಕರೂಪದಲ್ಲಿ ಇರಬೇಕಿದ್ದರೆ ಅದನ್ನು ಜಿಎಸ್‍ಟಿ ವ್ಯಾಪ್ತಿಗೆ ತರುವುದೇ ಏಕೈಕ ಮಾರ್ಗ ಎಂದು ಅವರು ಹೇಳಿದರು.

    ತೈಲ ಬೆಲೆಯನ್ನು ಇಳಿಸಲು ಅಬಕಾರಿ ಸುಂಕವನ್ನು ಸರ್ಕಾರ ಕಡಿಮೆ ಮಾಡುತ್ತಾ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಬಕಾರಿ ಸುಂಕವನ್ನು ಕಡಿಮೆಗೊಳಿಸುವುದು ಹಣಕಾಸು ಸಚಿವಾಲಯಕ್ಕೆ ಬಿಟ್ಟ ವಿಚಾರ ಎಂದು ತಿಳಿಸಿದರು.

    ಪೆಟ್ರೋಲ್ ಬೆಲೆ ಮಂಗಳವಾರ 2014ರ ನಂತರದ ಗರಿಷ್ಠ ಮಟ್ಟಕ್ಕೇರಿದ್ದು, ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಬೆಂಗಳೂರಿನಲ್ಲಿ 71.50 ರೂ., ಮುಂಬೈಯಲ್ಲಿ 80 ರೂ., ಚೆನ್ನೈ 73 ರೂ. ದೆಹಲಿಯಲ್ಲಿ 70 ರೂ.ಗೆ ಏರಿಕೆಯಾಗಿತ್ತು. ಜುಲೈ ನಂತರ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 7 ರೂ. ಏರಿಕೆಯಾಗಿದೆ.

    2014ರಿಂದ ಈವರೆಗೆ ಲೀಟರ್ ಪೆಟ್ರೋಲ್ ಮೇಲೆ 11.77 ರೂ. ಮತ್ತು ಡೀಸೆಲ್ ಮೇಲೆ 13.47 ರೂ. ರಷ್ಟು ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಹೇರಿದೆ. ಇದರಿಂದ 99,000 ಕೋಟಿ ರೂ. ಸಂಗ್ರಹಿಸುವ ಗುರಿಯನ್ನು ಸರ್ಕಾರ ಹೊಂದಿದೆ.

  • ಬುಧವಾರ ಪೆಟ್ರೋಲ್ ಬಂಕ್ ಮುಷ್ಕರ ಇಲ್ಲ

    ಬುಧವಾರ ಪೆಟ್ರೋಲ್ ಬಂಕ್ ಮುಷ್ಕರ ಇಲ್ಲ

    ಬೆಂಗಳೂರು: ಪ್ರತಿ ದಿನ ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆ ವಿರೋಧಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಲ್ ಇಂಡಿಯಾ ಪೆಟ್ರೋಲ್ ಡೀಲರ್ಸ್ ಅಸೋಸಿಯೇಷನ್(ಎಐಪಿಡಿಎ) ಬುಧವಾರ ಕರೆ ನೀಡಿದ್ದ ಮುಷ್ಕರವನ್ನು ಹಿಂಪಡೆದಿದೆ.

    ಸರ್ಕಾರಿ ಸ್ವಾಮ್ಯದ ಮೂರು ತೈಲ ಕಂಪನಿಗಳು ಹಾಗೂ ಕೇಂದ್ರ ಪೆಟ್ರೋಲಿಯಂ ಸಚಿವರು ಬೇಡಿಕೆಗೆ ಸ್ಪಂದಿಸಿದ್ದಾರೆ. ಜುಲೈ ಅಂತ್ಯದೊಳಗೆ ಈ ಸಮಸ್ಯೆಯನ್ನು ಬಗೆ ಹರಿಸುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ನಾವು ಮುಷ್ಕರವನ್ನು ಹಿಂಪಡೆದಿದ್ದೇವೆ ಎಂದು ಎಐಪಿಡಿಎ ತಿಳಿಸಿದೆ.

    ವರ್ತಕರ ಸಲಹೆ ಪಡೆಯದೇ ಕಂಪೆನಿಗಳು ಪ್ರತಿನಿತ್ಯ ಪರಿಷ್ಕರಣೆ ಮಾಡುತ್ತಿವೆ. ಪ್ರತಿನಿತ್ಯ ದರ ಪರಿಷ್ಕರಣೆಯಾಗುತ್ತಿರುವುದರಿಂದ ನಮಗೆ ನಷ್ಟವಾಗುತ್ತಿದೆ ಎಂದು ಹೇಳಿ ಎಐಪಿಡಿಎ ಜುಲೈ 12ರಂದು ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿತ್ತು.

    ಪ್ರತಿನಿತ್ಯ ದರ ಪರಿಷ್ಕರಣೆಯಾಗುತ್ತಿರುವುದರಿಂದ ನಮಗೆ ನಷ್ಟವಾಗುತ್ತಿದೆ. ವರ್ತಕರ ಸಲಹೆ ಪಡೆಯದೇ ಕಂಪೆನಿಗಳು ಪ್ರತಿನಿತ್ಯ ಪರಿಷ್ಕರಣೆ ಮಾಡುತ್ತಿವೆ. ಜುಲೈ 12ರಂದು ಬೆಳಗ್ಗೆಯಿಂದ ರಾತ್ರಿಯವರೆಗೆ ಪೆಟ್ರೋಲ್, ಡಿಸೇಲ್ ಸಿಗಲ್ಲ. ಅಷ್ಟೇ ಅಲ್ಲದೇ ಆ ದಿನ ತೈಲವನ್ನು ಖರೀದಿಸಲ್ಲ. ದೇಶಾದ್ಯಂತೆ ನಡೆಯುವ ಪ್ರತಿಭಟನೆ ಸಾಥ್ ನೀಡಲು ರಾಜ್ಯಾದ್ಯಂತ ಮೂರುವರೆ ಸಾವಿರ ಪೆಟ್ರೋಲ್ ಬಂಕ್‍ಗಳು ಬಂದ್ ಆಗಲಿದೆ ಎಂದು ಈ ಹಿಂದೆ ವರ್ತಕರ ಸಂಘದ ಉಪಾಧ್ಯಾಕ್ಷ ಅನೀಸ್ ಪಬ್ಲಿಕ್ ಟಿವಿಗೆ ತಿಳಿಸಿದ್ದರು.

    ಇದನ್ನೂ ಓದಿ: ಇನ್ನು ಐದು ವರ್ಷದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 30 ರೂ. ಆಗುತ್ತೆ!

    ಇದನ್ನೂ ಓದಿ: ದಕ್ಷಿಣ ಭಾರತದಲ್ಲಿ ಕರ್ನಾಟಕದಲ್ಲೇ ಡೀಸೆಲ್ ಬೆಲೆ ಅತಿ ಕಡಿಮೆ

  • ಗಮನಿಸಿ, ಜುಲೈ 12ರಂದು ಪೆಟ್ರೋಲ್, ಡೀಸೆಲ್ ಸಿಗಲ್ಲ

    ಗಮನಿಸಿ, ಜುಲೈ 12ರಂದು ಪೆಟ್ರೋಲ್, ಡೀಸೆಲ್ ಸಿಗಲ್ಲ

    ಬೆಂಗಳೂರು: ಪ್ರತಿ ದಿನ ದರ ಪರಿಷ್ಕರಣೆ ವಿರೋಧಿಸಿ ಅಖಿಲ ಭಾರತ ಪೆಟ್ರೋಲ್ ವರ್ತಕರ ಸಂಘ ಜುಲೈ 12ರಂದು ಬಂಕ್ ಗಳನ್ನು ಬಂದ್ ಮಾಡಿ ಪ್ರತಿಭಟಿಸಲು ಮುಂದಾಗಿದೆ.

    ದೇಶಾದ್ಯಂತೆ ನಡೆಯುವ ಪ್ರತಿಭಟನೆ ಸಾಥ್ ನೀಡಲು ರಾಜ್ಯಾದ್ಯಂತ ಮೂರುವರೆ ಸಾವಿರ ಪೆಟ್ರೋಲ್ ಬಂಕ್‍ಗಳು ಬಂದ್ ಆಗಲಿದೆ ಎಂದು ವರ್ತಕರ ಸಂಘದ ಉಪಾಧ್ಯಾಕ್ಷ ಅನೀಸ್ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

    ಈ ಬಂದ್ ಗೆ ರವೀಂದ್ರನಾಥ್ ನೇತೃತ್ವದ ಪೆಟ್ರೋಲ್ ಡೀಲರ್ಸ್ ಆಸೋಸಿಯೇಷನ್ ಬೆಂಬಲ ಕೊಟ್ಟಿಲ್ಲ. ಆದರೆ ಸುಮಾರು ರಾಜ್ಯದ 24 ಜಿಲ್ಲೆಯಲ್ಲಿ ನಮ್ಮ ಸಂಘಟನೆ ಪ್ರಬಲವಾಗಿದೆ. ತೈಲ ಕಂಪನಿ ನಮ್ಮ ಬೇಡಿಕೆ ಈಡೇರಿಸದೆ ಇದ್ದರೆ ಬಂದ್ ನಡೆಸಿಯೇ ನಡೆಸುತ್ತೇವೆ ಎಂದು ಅವರು ಹೇಳಿದರು.

    ಪ್ರತಿನಿತ್ಯ ದರ ಪರಿಷ್ಕರಣೆಯಾಗುತ್ತಿರುವುದರಿಂದ ನಮಗೆ ನಷ್ಟವಾಗುತ್ತಿದೆ. ವರ್ತಕರ ಸಲಹೆ ಪಡೆಯದೇ ಕಂಪೆನಿಗಳು ಪ್ರತಿನಿತ್ಯ ಪರಿಷ್ಕರಣೆ ಮಾಡುತ್ತಿವೆ. ಜುಲೈ 12ರಂದು ಬೆಳಗ್ಗೆಯಿಂದ ರಾತ್ರಿಯವರೆಗೆ ಪೆಟ್ರೋಲ್, ಡಿಸೇಲ್ ಸಿಗಲ್ಲ. ಅಷ್ಟೇ ಅಲ್ಲದೇ ಆ ದಿನ ತೈಲವನ್ನು ಖರೀದಿಸಲ್ಲ ಎಂದು ಅವರು ತಿಳಿಸಿದರು.

    ಇದನ್ನೂ ಓದಿ: ಇನ್ನು ಐದು ವರ್ಷದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 30 ರೂ. ಆಗುತ್ತೆ!

    ಇದನ್ನೂ ಓದಿ: ದಕ್ಷಿಣ ಭಾರತದಲ್ಲಿ ಕರ್ನಾಟಕದಲ್ಲೇ ಡೀಸೆಲ್ ಬೆಲೆ ಅತಿ ಕಡಿಮೆ

  • ದಕ್ಷಿಣ ಭಾರತದಲ್ಲಿ ಕರ್ನಾಟಕದಲ್ಲೇ  ಡೀಸೆಲ್ ಬೆಲೆ ಅತಿ ಕಡಿಮೆ

    ದಕ್ಷಿಣ ಭಾರತದಲ್ಲಿ ಕರ್ನಾಟಕದಲ್ಲೇ ಡೀಸೆಲ್ ಬೆಲೆ ಅತಿ ಕಡಿಮೆ

    ಬೆಂಗಳೂರು: ಕರ್ನಾಟಕ ಜನತೆಗೆ ಗುಡ್ ನ್ಯೂಸ್. ರಾಜ್ಯ ಸರ್ಕಾರ ಪ್ರವೇಶ ತೆರಿಗೆಯನ್ನು ರದ್ದು ಪಡಿಸಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ ಮೂರು ರೂ. ಕಡಿಮೆಯಾಗಿದೆ.

    ಹೌದು. ಜುಲೈ 1ರಂದು ದೇಶದೆಲ್ಲೆಡೆ ಸರಕು ಮತ್ತು ಸೇವಾ ತೆರಿಗೆ(ಜಿಎಸ್‍ಟಿ) ಜಾರಿಯಾಗುತ್ತಿದ್ದಂತೆ ಕರ್ನಾಟಕ ಸರ್ಕಾರ ಶೇ.5ರಷ್ಟಿದ್ದ ಪ್ರವೇಶ ತೆರಿಗೆಯನ್ನು ರದ್ದು ಮಾಡಿದೆ. ಹೀಗಾಗಿ ದಕ್ಷಿಣ ಭಾರತದಲ್ಲಿ  ಡೀಸೆಲ್ ಅತಿ ಕಡಿಮೆ ಬೆಲೆಗೆ ಕರ್ನಾಟಕದಲ್ಲಿ ಲಭ್ಯವಾಗುತ್ತಿದೆ.

    ಜುಲೈ 2ರಂದು checkpetrolprice.com ಪ್ರಕಾರ ಅತಿ ಕಡಿಮೆ ಡೀಸೆಲ್ ಬೆಲೆ ಪ್ರತಿ ಲೀಟರ್‍ಗೆ ಮಂಗಳೂರಿನಲ್ಲಿ 53.71 ರೂ. ಇದ್ದರೆ ಬೆಂಗಳೂರಿನಲ್ಲಿ 54.31 ರೂ. ಇದೆ. ಮಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 63.63 ಪೈಸೆ ಇದ್ದರೆ, ಬೆಂಗಳೂರಿನಲ್ಲಿ 64.21 ರೂ. ಪೈಸೆ ಇದೆ.

    ಮಂಗಳೂರು ತೈಲ ಶುದ್ಧೀಕರಣ ಸ್ಥಾವರ(ಎಂಆರ್‍ಪಿಎಲ್) ಇರುವ ಕಾರಣ ಮಂಗಳೂರಿನಲ್ಲಿ ತೈಲ ಬೆಲೆ ಸಾಧಾರಣವಾಗಿ ಕಡಿಮೆ ಇದ್ದರೆ, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಸಾಗಾಣಿಕಾ ವೆಚ್ಚದಿಂದಾಗಿ ನಗರದಿಂದ ನಗರಕ್ಕೆ ಬೆಲೆ ಬದಲಾಗುತ್ತಿರುತ್ತದೆ.

    ಎಷ್ಟು ಕಡಿಮೆ?
    ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ತಮಿಳುನಾಡಿಗಿಂತ ಕರ್ನಾಟದಲ್ಲಿ ಪ್ರತಿ ಲೀಟರ್ ಡೀಸೆಲ್ ಬೆಲೆ 2.50 ರೂ. ಕಡಿಮೆ ಇದ್ದರೆ, ಮಹಾರಾಷ್ಟ್ರಕ್ಕೆ ಹೋಲಿಸಿದರೆ 3.50 ರೂ. ಕಡಿಮೆ ಇದೆ. ಇನ್ನೂ ಗೋವಾಗೆ ಹೋಲಿಸಿದರೆ 1.50 ರೂ., ಆಂಧ್ರಕ್ಕೆ ಹೋಲಿಸಿದರೆ 6 ರೂ., ತೆಲಂಗಾಣಕ್ಕೆ ಹೋಲಿಸಿದರೆ 4 ರೂ. ಕಡಿಮೆ ಇದೆ.