Tag: PFI Ban

  • PFI Ban: ಬೆಂಗಳೂರಿಗೆ ಟ್ರಿಬ್ಯೂನಲ್ ಟೀಂ – ಪಿಎಫ್‍ಐ ಪರ-ವಿರೋಧ ದೂರು ನೀಡಲು ಅವಕಾಶ

    PFI Ban: ಬೆಂಗಳೂರಿಗೆ ಟ್ರಿಬ್ಯೂನಲ್ ಟೀಂ – ಪಿಎಫ್‍ಐ ಪರ-ವಿರೋಧ ದೂರು ನೀಡಲು ಅವಕಾಶ

    ಬೆಂಗಳೂರು: 2047ಕ್ಕೆ ಭಾರತವನ್ನು (India) ಮುಸ್ಲಿಂ ದೇಶವನ್ನಾಗಿ ಮಾಡ್ಬೇಕು ಅಂತ ಹಗಲು ಕನಸುಕಂಡಿದ್ದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ  (PFI) ಈಗ ಬ್ಯಾನ್ (Ban) ಆಗಿದೆ. ಆದ್ರೆ, ಕೇಂದ್ರ ಸರ್ಕಾರದ ಈ ಆದೇಶಕ್ಕೆ ನ್ಯಾಯಾಲಯದ ಟ್ರಿಬ್ಯೂನಲ್ (Tribunal) ಇದೆ. ಇದೀಗ ಟ್ರಿಬ್ಯೂನಲ್ ಟೀಂ ಬೆಂಗಳೂರಿಗೆ (Bengaluru) ಆಗಮಿಸಲಿದೆ.

    ಪಿಎಫ್‍ಐ ಒಂದು ಉಗ್ರ ಸಂಘಟನೆ ಇದರಿಂದ ಅಮಾಯಕರು ಜೀವ ಕಳೆದು ಕೊಳ್ಳುತ್ತಿದ್ದಾರೆ. ದೇಶದ ಶಾಂತಿಗೆ ಭಂಗ ಆಗುತ್ತಿದೆ ಅಂತ ಕೇಂದ್ರ ಸರ್ಕಾರ ಪಿಎಫ್‍ಐಗೆ ನಿಷೇಧ ಹೇರಿದೆ. ಆದ್ರೆ, ನಿಷೇಧದ ಬಳಿಕ ಸಂಘಟನೆ ನ್ಯಾಯಾಧೀಕರಣದ ಮೊರೆ ಹೋಗಿ ತಮ್ಮದು ಉಗ್ರ ಸಂಘಟನೆ ಅಲ್ಲ ಅನ್ನೋದಕ್ಕೂ ಅವಕಾಶ ಇದೆ. ಇದಕ್ಕಾಗಿಯೇ ಈಗ ದೇಶಾದ್ಯಂತ ಟ್ರಿಬ್ಯೂನಲ್ ಕೆಲಸ ಮಾಡುತ್ತಿದೆ. ಈಗಾಗಲೇ ಕೇರಳ, ತಮಿಳುನಾಡಿನಲ್ಲಿ ಟ್ರಿಬ್ಯೂನಲ್ ಟೀಂ ಕೆಲಸ ಮುಗಿಸಿ ಕರ್ನಾಟಕಕ್ಕೆ ಬರುತ್ತಿದೆ. ಜ.28ರಿಂದ ಮೂರು ದಿನ ಕರ್ನಾಟಕದಲ್ಲಿ ಕೆಲಸ ಮಾಡಲಿದೆ. ಇದನ್ನೂ ಓದಿ: PFI Ban – ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಧಿಕರಣ ರಚಿಸಿದ ಕೇಂದ್ರ

    ಏನಿದು ಟ್ರಿಬ್ಯೂನಲ್ ಟೀಂ:
    ಟ್ರಿಬ್ಯೂನಲ್‍ನ ಕೆಲಸ ಅಂದರೆ ಆ ರಾಜ್ಯದಲ್ಲಿ ಪಿಎಫ್‍ಐ ಸಂಘಟನೆ ಕುಮ್ಮಕ್ಕಿನಿಂದ ನಡೆದಿರೋ ಕೊಲೆ ಪ್ರಕರಣಗಳ ಬಗ್ಗೆ ಮಾಹಿತಿ ಕಲೆ ಹಾಕೋದು. ಯಾವ ಉದ್ದೇಶಕ್ಕಾಗಿ ಈ ಕೊಲೆ ನಡೆದಿದೆ. ಕೊಲೆ ಮಾಡಿದ ಆರೋಪಿಗಳ ಹಿನ್ನೆಲೆ, ಕೊಲೆಯ ಹಿಂದೆ ಇದ್ದ ಹುನ್ನಾರ ಪ್ಲಾನ್‍ಗಳ ಬಗ್ಗೆ ತಿಳಿದುಕೊಳ್ಳುವುದಾಗಿದೆ. ಇದಕ್ಕಾಗಿಯೇ ಕರ್ನಾಟಕದಲ್ಲಿ ಪಿಎಫ್‍ಐ ಕುಮ್ಮಕ್ಕಿನಿಂದ ನಡೆದ ಹತ್ಯೆ ಬಗ್ಗೆ ತನಿಖೆ ಮಾಡಿದ ತನಿಖಾಧಿಕಾರಿಗಳಿಗೂ ನೋಟಿಸ್ ನೀಡಿದ್ದು ಇವರು ಟ್ರಿಬ್ಯೂನಲ್ ಮುಂದೆ ಹೇಳಿಕೆ ನೀಡಬೇಕಿದೆ.

    ಬೆಂಗಳೂರಿಗೆ ಟ್ರಿಬ್ಯೂನಲ್ ಟೀಂ:
    2016ರಲ್ಲಿ ನಡೆದ ರುದ್ರೇಶ್ ಹತ್ಯೆ ಪ್ರಕರಣ., 2019ರಲ್ಲಿ ಸಂಸದರ ಹತ್ಯೆಗೆ ಸ್ಕೆಚ್, ಕಾರ್ಯಕರ್ತನ ಮೇಲೆ ದಾಳಿ., 2021ರಲ್ಲಿ ನಡೆದ ಡಿಜೆಹಳ್ಳಿ – ಕೆಜೆಹಳ್ಳಿ ಗಲಾಟೆ., 2022ರಲ್ಲಿ ನಡೆದ ಪ್ರವೀಣ್ ನೆಟ್ಟಾರು (Praveen Nettar) ಹತ್ಯೆ ಪ್ರಕರಣಗಳ ಬಗ್ಗೆ ಟ್ರಿಬ್ಯೂನಲ್ ಟೀಂ ಮಾಹಿತಿ ಸಂಗ್ರಹಿಸಲಿದೆ. ಇದನ್ನೂ ಓದಿ: ಸಂಪೂರ್ಣ ನಿಷೇಧವಾಗುತ್ತಾ PFI – ಕೇಂದ್ರ ಸರ್ಕಾರದ ಮುಂದಿನ ಪ್ಲ್ಯಾನ್ ಏನು?

    ಪಿಎಫ್‍ಐ ಬ್ಯಾನ್ ಆದ ಬಳಿಕ ಟ್ರಿಬ್ಯೂನಲ್ ಮುಂದೆ ಹೋಗಿದೆ. ಹೀಗಾಗಿ ಪರ ವಿರೋಧ ಎರಡಕ್ಕೂ ಅವಕಾಶ ಇದೆ. ಹೀಗಾಗಿ ಪಿಎಫ್‍ಐ ಪರವಾಗಿ ಅರ್ಜಿಯನ್ನು ನೀಡುವವರು ಮಾಹಿತಿಯನ್ನು ನೀಡುವವರು, ನ್ಯಾಯಾಧೀಕರಣ ಮುಂದೆ ಹೋಗಿ ಹೇಳಬಹುದಾಗಿದೆ. ಇದು ಸಾರ್ವಜನಿಕರಿಗೂ ಕೂಡ ಮುಕ್ತವಾಗಲಿದ್ದು ಜನವರಿ 28, 29 ಮತ್ತು 30 ರಂದು ಬೆಂಗಳೂರಿನಲ್ಲಿ ಟ್ರಿಬ್ಯೂನಲ್ ಟೀಂ ಇರಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಾವರ್ಕರ್ ಫ್ಲೆಕ್ಸ್ ಹರಿದಿದ್ದಕ್ಕೆ PFI ನಿಷೇಧವಾಯ್ತು: ಕೆ.ಎಸ್.ಈಶ್ವರಪ್ಪ

    ಸಾವರ್ಕರ್ ಫ್ಲೆಕ್ಸ್ ಹರಿದಿದ್ದಕ್ಕೆ PFI ನಿಷೇಧವಾಯ್ತು: ಕೆ.ಎಸ್.ಈಶ್ವರಪ್ಪ

    ಶಿವಮೊಗ್ಗ: ಶಿವಮೊಗ್ಗದಲ್ಲಿ (Shivamogga) ಸಾವರ್ಕರ್ ಅವರ ಫ್ಲೆಕ್ಸ್ ಹರಿದಿದ್ದಕ್ಕೆ ಪಿಎಫ್‍ಐ ನಿಷೇಧ ಮಾಡುವಂತಹ ಸ್ಥಿತಿ ಬಂತು. ಇನ್ನು ಯಾರೂ ಅವರ ಫೋಟೋ ಹರಿಯುವ ಧೈರ್ಯ ಮಾಡುವುದಿಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (K.S. Eshwarappa) ತಿಳಿಸಿದರು.

    ಶಿವಮೊಗ್ಗದಲ್ಲಿ (Shivamogga) ನಡೆದ ಸಾವರ್ಕರ್ (Savarkar) ಸಾಮ್ರಾಜ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಾವರ್ಕರ್ ಅವರು ಅಂದು ಮಾಡಿದ ತ್ಯಾಗ, ಬಲಿದಾನ ಇಂದು ಸಮಾಜವನ್ನು ಜಾಗೃತಗೊಳಿಸಿದೆ. ಅಂದು ಸಾವರ್ಕರ್ ಅವರಿಗೆ ಹಿಂಸೆ ನೀಡಲಾಗಿತ್ತು. ಅವರಿಗಾಗಿ ಮಿಡಿಯುತ್ತಿದ್ದ ಸಾಕಷ್ಟು ಮಂದಿ ಕೈ, ಕೈ ಹಿಚುಕಿಕೊಳ್ಳುತ್ತಾ ಇದ್ದರು. ಇದೀಗ ಜೈಕಾರ ಹಾಕಲಾಗುತ್ತಿದೆ ಎಂದರು.

    ಸ್ವಾತಂತ್ರ್ಯ ಹೋರಾಟಗಾರರ ಕಿಚ್ಚು ಇಂದು ದೇಶದಲ್ಲಿ ಜಾಗೃತಿ ಉಂಟು ಮಾಡಿದೆ. ಕಾಶಿ, ಮಥುರಾ, ಬದ್ರಿಯಂತಹ ಶ್ರದ್ದಾ ಕೇಂದ್ರಗಳ ಮೌಲ್ಯವನ್ನು ನರೇಂದ್ರ ಮೋದಿ (Narendra Modi) ಅವರು ಹೆಚ್ಚು ಮಾಡುತ್ತಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ಯಾರೊಬ್ಬರೂ ದೇಶ ಭಕ್ತರ ತಂಟೆಗೆ ಹೋಗುವುದಿಲ್ಲ. ದೇಶ ದ್ರೋಹಿಗಳನ್ನು ಬಿಡುವುದಿಲ್ಲ ಎಂಬ ಸಂದೇಶ ಸಾರಲಿ ಎಂದು ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ಪಿಎಫ್‍ಐ ಬ್ಯಾನ್ ವಿರೋಧಿಸಿದರೆ ಜನ ಒದೆಯುತ್ತಾರೆ – ಸಿದ್ದರಾಮಯ್ಯ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ

    ಪಿಎಫ್‍ಐ ಬ್ಯಾನ್ ವಿರೋಧಿಸಿದರೆ ಜನ ಒದೆಯುತ್ತಾರೆ – ಸಿದ್ದರಾಮಯ್ಯ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ

    ನವದೆಹಲಿ: ಪಿಎಫ್‍ಐ ಮೇಲೆ ಸಿದ್ದರಾಮಯ್ಯ (Siddaramaiah) ಸೇರಿದಂತೆ ಕಾಂಗ್ರೆಸ್‍ಗೆ ಈಗಲೂ ಒಳಗೊಳಗೆ ಪ್ರೀತಿ ಇದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ( Prahlad Joshi) ವಾಗ್ದಾಳಿ ನಡೆಸಿದ್ದಾರೆ.

    ಪಿಎಫ್‍ಐ ಬ್ಯಾನ್ (PFI Ban) ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಸುರಕ್ಷತೆ ವಿಚಾರದಲ್ಲಿ ಬಿಜೆಪಿ ಯಾವತ್ತು ಮತಬ್ಯಾಂಕ್ ರಾಜಕಾರಣ ಮಾಡಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇದನ್ನೂ ಓದಿ: ರಾಯಚೂರಿನಲ್ಲಿ ತಯಾರಾಗೋ ವಿಶೇಷ ಕೌದಿ – ಸುಧಾಮೂರ್ತಿಯಿಂದ ರಾಷ್ಟ್ರಪತಿಗೆ ಉಡುಗೊರೆ

    ಕೇಂದ್ರ ಬಿಜೆಪಿ ಸರ್ಕಾರ (BJP) ಪಿಎಫ್‍ಐ ಬ್ಯಾನ್ ಮಾಡಿರುವುದನ್ನು ಕಂಡು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಒಳಗೊಳಗೆ ಕುದಿಯುತ್ತಿದೆ. ಪಿಎಫ್‍ಐ ಭಯೋತ್ಪಾದಕ ಚಟುವಟಿಕೆಗಳು, ದೇಶದ್ರೋಹ ಕೃತ್ಯಗಳ ಬಗ್ಗೆ ಜನರಿಗೆ ಮಾಹಿತಿ ಇದೆ. ಇಂಥಹ ಸಂದರ್ಭದಲ್ಲಿ ಪಿಎಫ್‍ಐ ಬ್ಯಾನ್ ಮಾಡಿರುವುದನ್ನು ವಿರೋಧಿಸಿದರೆ ಜನ ಒದೆಯುತ್ತಾರೆ ಅಷ್ಟೇ. ಪಿಎಫ್‍ಐ ಪರ ಮಾತನಾಡಿದರೆ  ಎಲ್ಲಿ ದೇಶದ ಜನರ ಕಂಗೆಣ್ಣಿಗೆ ಗುರಿಯಾಗಬೇಕಾಗುತ್ತದೆ ಎಂಬುದು ಕಾಂಗ್ರೆಸ್‍ಗೆ ಚಿಂತೆಯಾಗಿದೆ ಎಂದು ಹೇಳಿದರು.

    ಪಿಎಫ್‍ಐ ಬ್ಯಾನ್ ಮಾಡಿರುವ ಬಿಜೆಪಿ ಸರ್ಕಾರದ ನಿಲುವನ್ನು ವಿರೋಧಿಸಲು ಕಾಂಗ್ರೆಸ್‍ಗೆ ಸಾಧ್ಯವಾಗುತ್ತಿಲ್ಲ. ಏಕೆಂದರೆ ಪಿಎಫ್‍ಐ ವಿರುದ್ಧ ದೇಶದ್ರೋಹದ ಕೃತ್ಯಗಳ ಸಾಕಷ್ಟು ಸಾಕ್ಷಿಗಳು ನಮ್ಮ ಬಳಿ ಇವೆ. ಹೀಗಾಗಿ ಏನಾದರು ಮಾಡಿ ಮುಸ್ಲಿಂ ಓಲೈಕೆ ಮಾಡಬೇಕು ಎಂಬ ಕಾರಣಕ್ಕೆ ಆರ್‌ಎಸ್‍ಎಸ್ ಬಗ್ಗೆ ಕಾಂಗ್ರೆಸ್ ಮಾತನಾಡುತ್ತಿದೆ. ಇದನ್ನೂ ಓದಿ: ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ: ಅಶೋಕ್‌ ಗೆಹ್ಲೋಟ್‌ ಸ್ಪಷ್ಟನೆ

    ಆರ್‌ಎಸ್‌ಎಸ್ (RSS) ಎಂದರೆ ನಾವೇ. ಈ ದೇಶದ ಪ್ರಧಾನಿ ನರೇಂದ್ರ ಮೋದಿ ಅವರೇ ಆರ್‌ಎಸ್‍ಎಸ್‍ನಿಂದ ಬಂದವರು. ಆರ್‌ಎಸ್‍ಎಸ್ ಅನ್ನು ಯಾವ ಆಧಾರದ ಮೇಲೆ ಹೇಗೆ ಬ್ಯಾನ್ ಮಾಡುತ್ತೀರಾ? ಈ ಹಿಂದೆ ಕಾಂಗ್ರೆಸ್ ಸರ್ಕಾರ ಮೂರು ಬಾರಿ ಆರ್‌ಎಸ್‍ಎಸ್ ಬ್ಯಾನ್ ಮಾಡಿತ್ತು. ಬ್ಯಾನ್ ಮಾಡಿ ಕಾಂಗ್ರೆಸ್ ಏನು ಸಾಧಿಸಿದೆ. ಆರ್‌ಎಸ್‍ಎಸ್ ವಿರುದ್ಧ ಒಂದೇ ಒಂದು ಸಾಕ್ಷಿಯನ್ನು ಪ್ರಸ್ತುತಪಡಿಸಲು ಕಾಂಗ್ರೆಸ್‍ಗೆ ಸಾಧ್ಯವಾಗಿಲ್ಲ ಎಂದು ಕಿಡಿಕಾರಿದರು.

    ಆರ್‌ಎಸ್‍ಎಸ್ ಒಂದು ರಾಷ್ಟ್ರೀಯವಾದಿ ಸಂಘಟನೆ. ದೇಶದ ಪರ ಕೆಲಸ ಮಾಡುತ್ತಿರುವ ಸಂಘಟನೆ. ಆದರೆ ಪಿಎಫ್‍ಐ ಸಂಘಟನೆ ಭಯೋತ್ಪಾದನಾ ಚಟುವಟಿಕೆಗಳನ್ನು ಪ್ರೇರೇಪಿಸುತ್ತಿರುವ ಕುರಿತು ಹಲವು ಸಾಕ್ಷ್ಯಗಳು ದೊರೆತಿವೆ. ದೇಶದಾದ್ಯಂತ ಹಲವು ಹತ್ಯೆಗಳಲ್ಲಿ ಈ ಸಂಘಟನೆ ಕೈವಾಡವಿರುವುದು ಸ್ಪಷ್ಟವಾಗಿದೆ. ಎಲ್ಲ ಸಾಕ್ಷಿಗಳನ್ನು ಕಲೆಹಾಕಿಯೇ ಕೇಂದ್ರ ಬಿಜೆಪಿ ಸರ್ಕಾರ ಪಿಎಫ್‍ಐ ಬ್ಯಾನ್ ಮಾಡಿದೆ. ಇದು ರಾಷ್ಟ್ರೀಯ ಸುರಕ್ಷತೆಯ ವಿಚಾರ. ಇಂಥಹ ಸೂಕ್ಷ್ಮ ವಿಚಾರದಲ್ಲಿ ಬಿಜೆಪಿ ಯಾವತ್ತು ಮತಬ್ಯಾಂಕ್ ರಾಜಕಾರಣ ಮಾಡಿಲ್ಲ. ಎಸ್‍ಡಿಪಿಐ ಒಂದು ಪೊಲಿಟಿಕಲ್ ಪಾರ್ಟಿ. ಚುನಾವಣಾ ಆಯೋಗ ಈ ನಿಟ್ಟಿನಲ್ಲಿ ತನ್ನ ತೀರ್ಮಾನ ತೆಗೆದುಕೊಳ್ಳಲಿದೆ ಎಂದರು.

    Live Tv
    [brid partner=56869869 player=32851 video=960834 autoplay=true]

  • ಬ್ಯಾನ್ ಆದ ಪಿಎಫ್‌ಐ ಹೆಸರಲ್ಲಿ ಚಟುವಟಿಕೆ ನಡೆಸಿದ್ರೆ ಕಾನೂನು ಕ್ರಮ: ಆರಗ ಜ್ಞಾನೇಂದ್ರ

    ಬ್ಯಾನ್ ಆದ ಪಿಎಫ್‌ಐ ಹೆಸರಲ್ಲಿ ಚಟುವಟಿಕೆ ನಡೆಸಿದ್ರೆ ಕಾನೂನು ಕ್ರಮ: ಆರಗ ಜ್ಞಾನೇಂದ್ರ

    ಬೆಂಗಳೂರು: ಪಿಎಫ್‌ಐ (PFI) ಈಗ ಬ್ಯಾನ್ ಆದ ಸಂಘಟನೆ. ಆ ಸಂಘಟನೆ ಹೆಸರಲ್ಲಿ ಗುರುತಿಸಿಕೊಂಡರೆ ಅಂತಹವರ ಮೇಲೆ ಕಾನೂನು ಕ್ರಮ ಗ್ಯಾರಂಟಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಸೂಚಿಸಿದಂತೆ ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ. ಈಗಾಗಲೇ ರಾಜ್ಯಗಳಿಗೆ ಕೇಂದ್ರ ಅಧಿಕಾರ ಕೊಟ್ಟಿದೆ. ರಾಜ್ಯಕ್ಕೆ ಅಧಿಕಾರ ಕೊಟ್ಟಿರುವ ಹಿನ್ನೆಲೆಯಲ್ಲಿ ಮುಂದಿನ ಪ್ರಕ್ರಿಯೆ ನಾವು ಮಾಡುತ್ತೇವೆ. ಮುಂದಿನ ಪ್ರಕ್ರಿಯೆಗಳು ಕಾನೂನು ಪ್ರಕಾರವೇ ಮಾಡುತ್ತೇವೆ ಎಂದು ತಿಳಿಸಿದರು.

    ಪಿಎಫ್‌ಐ ಸೇರಿದಂತೆ 8 ಸಂಘಟನೆಗಳ ಬ್ಯಾನ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ವಹಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಭದ್ರತೆ, ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಯಾವುದೇ ಗಲಾಟೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬ್ಯಾನ್ ಅಯ್ತು ಮುಂದೆ PFI ಆಸ್ತಿ ಮುಟ್ಟುಗೋಲು – ರಾಜ್ಯ ಸರ್ಕಾರದ ತೀರ್ಮಾನ: ಆರಗ ಜ್ಞಾನೇಂದ್ರ

    ಪಿಎಫ್‌ಐ ಈಗ ಬ್ಯಾನ್ ಆದ ಸಂಘಟನೆ. ಈ ಸಂಘಟನೆಯ ಹೆಸರಲ್ಲಿ ಯಾವುದೇ ಚಟುವಟಿಕೆ ಮಾಡುವ ಹಾಗೆ ಇಲ್ಲ. ಪ್ರತಿಭಟನೆ ಮಾಡುವ ಹಾಗೆ ಇಲ್ಲ. ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ ಗ್ಯಾರಂಟಿ. ಈಗಾಗಲೇ ಕೇಂದ್ರ ಸರ್ಕಾರ ಕೊಟ್ಟ ಆದೇಶದಂತೆ ನಾವು ಮುಂದಿನ ಕ್ರಮ ಪಾಲನೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: PFI ಸಂಘಟನೆಗಳ ಆಸ್ತಿ ಬಗ್ಗೆ ಸರ್ವೆ ಕಾರ್ಯ ಆಗ್ತಿದೆ: ಆರಗ ಜ್ಞಾನೇಂದ್ರ

    Live Tv
    [brid partner=56869869 player=32851 video=960834 autoplay=true]

  • ಕೇರಳ, ತಮಿಳುನಾಡಿನಲ್ಲೂ PFI ಬ್ಯಾನ್

    ಕೇರಳ, ತಮಿಳುನಾಡಿನಲ್ಲೂ PFI ಬ್ಯಾನ್

    ತಿರುವನಂತಪುರಂ/ಚೆನ್ನೈ: ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವನ್ನು (PFI) ನಿಷೇಧಿಸಿದ ಒಂದು ದಿನದ ಬಳಿಕ ತಮಿಳುನಾಡು (Tamil Nadu) ಹಾಗೂ ಕೇರಳ (Kerala) ಸರ್ಕಾರಗಳೂ ಪಿಎಫ್‌ಐ ಹಾಗೂ ಅದರ ಅಂಗಸಂಸ್ಥೆಗಳನ್ನು ಕಾನೂನು ಬಾಹಿರ ಎಂದು ಘೋಷಿಸಿ ಆದೇಶ ಹೊರಡಿಸಿವೆ.

    ಜಾಗತಿಕ ಮಟ್ಟದ ಭಯೋತ್ಪಾದನಾ ಸಂಘಟನೆ ಐಸಿಸ್ ಹಾಗೂ ಇತರ ಉಗ್ರಗಾಮಿ ಸಂಘಟನೆಗಳೊಂದಿಗೆ ನಂಟು ಹೋದಿರುವ ಹಾಗೂ ದೇಶದೊಳಗೆ ಕೋಮು ದ್ವೇಷವನ್ನು ಹರಡಲು ಪಿಎಫ್‌ಐ ಹಾಗೂ ಅದರ ಅಂಗಸಂಸ್ಥೆಗಳು ಪ್ರಯತ್ನಿಸಿವೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಆದೇಶದ ಪ್ರತಿಯಲ್ಲಿ ತಿಳಿಸಿದೆ. ಇದನ್ನೂ ಓದಿ: PFI ಬ್ಯಾನ್: ಹಳೇ ಕೇಸ್, ಹೊಸ ಆಟ – ಇದು ಬಿಜೆಪಿ ಗೇಮ್!

    ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ಕೇಂದ್ರ ಸರ್ಕಾರ ಬುಧವಾರ ಪಿಎಫ್‌ಐ ಹಾಗೂ ಅದರ ಅಂಗಸಂಸ್ಥೆಗಳನ್ನು 5 ವರ್ಷಗಳ ವರೆಗೆ ನಿಷೆಧಿಸಿದೆ. ಕಾನೂನು ಬಾಹಿರವೆಂದು ಪಿಎಫ್‌ಐ ಸಂಘಟನೆಯೊಂದಿಗೆ, ರಿಹ್ಯಾಬ್ ಇಂಡಿಯಾ ಫೌಂಡೇಶನ್, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ, ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್, ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್, ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರಿಹ್ಯಾಬ್ ಫೌಂಡೇಶನ್ ಕೇರಳವನ್ನು ನಿಷೇಧಿಸಲಾಗಿದೆ. ಇದನ್ನೂ ಓದಿ: PFI ಸಂಘಟನೆಗಳ ಆಸ್ತಿ ಬಗ್ಗೆ ಸರ್ವೆ ಕಾರ್ಯ ಆಗ್ತಿದೆ: ಆರಗ ಜ್ಞಾನೇಂದ್ರ

    ರಾಷ್ಟ್ರೀಯ ತನಿಖಾ ಸಂಸ್ಥೆ (NIA) ದೇಶಾದ್ಯಂತ 15 ರಾಜ್ಯಗಳಲ್ಲಿ ಪಿಎಫ್‌ಐ ವಿರುದ್ಧ ತನಿಖೆ ನಡೆಸಿತ್ತು. ಮಂಗಳವಾರ 7 ರಾಜ್ಯಗಳಲ್ಲಿ ನಡೆಸಿದ ದಾಳಿಯಲ್ಲಿ 150ಕ್ಕೂ ಹೆಚ್ಚು ಜನರನ್ನು ವಶಪಡಿಸಿಕೊಳ್ಳಲಾಗಿತ್ತು. ನಾಯಕರು ಹಾಗೂ ಪದಾಧಿಕಾರಿಗಳು ಸೇರಿದಂತೆ 100ಕ್ಕೂ ಹೆಚ್ಚು ಪಿಎಫ್‌ಐ ಸದಸ್ಯರನ್ನು ಬಂಧಿಸಿದ ಬಳಿಕ ಅದನ್ನು ನಿಷೇಧಿಸಲಾಯಿತು.

    Live Tv
    [brid partner=56869869 player=32851 video=960834 autoplay=true]

  • ಪಿಎಫ್‌ಐ ಬ್ಯಾನ್ – ರಾಷ್ಟ್ರೀಯ ಸುರಕ್ಷತೆ ನಮ್ಮ ಸರ್ಕಾರದ ಮೊದಲ ಆದ್ಯತೆ: ಪ್ರಹ್ಲಾದ್ ಜೋಶಿ

    ಪಿಎಫ್‌ಐ ಬ್ಯಾನ್ – ರಾಷ್ಟ್ರೀಯ ಸುರಕ್ಷತೆ ನಮ್ಮ ಸರ್ಕಾರದ ಮೊದಲ ಆದ್ಯತೆ: ಪ್ರಹ್ಲಾದ್ ಜೋಶಿ

    ಬೆಂಗಳೂರು: ಪಿಎಫ್‌ಐ ಬ್ಯಾನ್ (PFI Ban) ಮಾಡುವುದರ ಮೂಲಕ ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡವರಿಗೆ ಎಚ್ಚರಿಕೆಯ ಸಂದೇಶ ರವಾನಿಸಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ (Pralhad Joshi) ಜೋಶಿ ಹೇಳಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಆಡಳಿತದಲ್ಲಿ ರಾಷ್ಟ್ರೀಯ ಸುರಕ್ಷತೆಯೇ ಸರ್ವೋಚ್ಛ ಆದ್ಯತೆಯಾಗಿದೆ. ಸಂಘಟನೆಯ ನಿಷೇಧದಿಂದ ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಭೌಮತೆಗೆ ಅಪಾಯಕಾರಿಯಾಗಿದ್ದ ಚಟುವಟಿಕೆಗಳು ಸ್ಥಗಿತಗೊಳ್ಳಲಿವೆ. ನಮ್ಮ ದೇಶ ಸುರಕ್ಷತೆಗೆ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಪ್ರಹ್ಲಾದ್ ಜೋಶಿ ಟ್ವೀಟ್ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಪಿಎಸ್‌ಐ ಅಕ್ರಮ ಚಟುಟಿಕೆಗಳ ಬಗ್ಗೆ ಈ ಹಿಂದೆಯೇ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರವೀಣ್ ನೆಟ್ಟಾರ್ ಅವರ ಹತ್ಯೆ ಪ್ರಕರಣದಲ್ಲಿ ಪಿಎಫ್‌ಐ ಕೈವಾಡ ಇರುವ ಬಗ್ಗೆ ಆರೋಪಿಸಿದ್ದರು. ಈ ಬಗ್ಗೆ ಸಿಎಂ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ, ಪ್ರಕರಣದಲ್ಲಿ ಪಿಎಫ್‌ಐ ಸಂಘಟನೆ ಕೈವಾಡವಿರುವ ಕುರಿತು ತನಿಖೆ ತೀವ್ರಗೊಳಿಸುವಂತೆ ಸೂಚಿಸಿದ್ದರು. ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಗಳು ದೇಶ ವಿರೋಧಿ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಕೇಂದ್ರ ಸರ್ಕಾರಕ್ಕಿರುವ ಮಾಹಿತಿಗಳ ಬಗ್ಗೆ ಸಿಎಂ ಬೊಮ್ಮಾಯಿ ಜೊತೆ ಹಂಚಿಕೊಂಡಿದ್ದರು. ಇದನ್ನೂ ಓದಿ: ಸಾವಿರಾರು ಪಿಎಫ್‌ಐ ಉಗ್ರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಕ್ಷಮಾದಾನ: ಸುನಿಲ್ ಕುಮಾರ್

    ಈ ನಿಟ್ಟಿನಲ್ಲಿ ಪಿಎಫ್‌ಐ ಬ್ಯಾನ್‌ಗೆ ಕೇಂದ್ರ ಗೃಹ ಇಲಾಖೆ ಜೊತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಚರ್ಚೆ ನಡೆಸಿದ್ದರು. ದೇಶ ವಿರೋಧಿ ಕೃತ್ಯದಲ್ಲಿರುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಸಂಘಟನೆಯನ್ನು ಬ್ಯಾನ್ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದರು.

    ಪಿಎಫ್‌ಐ ಮೇಲೆ ಸಂಘಟಿತ ದಾಳಿ ನಡೆಸಿದ್ದ ರಾಷ್ಟ್ರೀಯ ತನಿಖಾದಳ, ಇಡಿ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ನೂರಾರು ಪಿಎಫ್‌ಐ, ಎಸ್‌ಡಿಪಿಐ ಕಾರ್ಯಕರ್ತರನ್ನು ಬಂಧಿಸಿತ್ತು. ಪಿಎಫ್‌ಐ ಸಂಘಟನೆ ಭಯೋತ್ಪಾದಕ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿರುವ ಬಗ್ಗೆ ಹಲವು ಸಾಕ್ಷ್ಯಗಳು ದೊರೆತ ಹಿನ್ನೆಲೆಯಲ್ಲಿ ಪಿಎಫ್‌ಐ ಸಂಘಟನೆಯನ್ನು ಕೇಂದ್ರ ಸರ್ಕಾರ 5 ವರ್ಷಗಳ ಕಾಲ ಬ್ಯಾನ್ ಮಾಡಿದೆ. ಇದನ್ನೂ ಓದಿ: ಯು.ಟಿ ಖಾದರ್ SDPI, PFI ಬ್ಯಾನ್ ಮಾಡುವಂತೆ ನಮ್ಮ ಎದುರು ಕಣ್ಣೀರು ಹಾಕಿದ್ದರು: ಕಟೀಲ್

    Live Tv
    [brid partner=56869869 player=32851 video=960834 autoplay=true]

  • ಸಾವಿರಾರು ಪಿಎಫ್‌ಐ ಉಗ್ರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಕ್ಷಮಾದಾನ: ಸುನಿಲ್ ಕುಮಾರ್

    ಸಾವಿರಾರು ಪಿಎಫ್‌ಐ ಉಗ್ರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಕ್ಷಮಾದಾನ: ಸುನಿಲ್ ಕುಮಾರ್

    ಉಡುಪಿ: ರಾಜ್ಯದಲ್ಲಿ ಪಿಎಫ್‌ಐ ಈ ಮಟ್ಟಿಗೆ ಬೆಳೆಯುವುದಕ್ಕೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವೇ ಕಾರಣ. ಅವರು ಅಧಿಕಾರದಲ್ಲಿ ಇದ್ದಾಗ ಪಿಎಫ್‌ಐ ಸಂಘಟನೆಯ ವಿರುದ್ಧ ದಾಖಲಾಗಿದ್ದ 100ಕ್ಕೂ ಹೆಚ್ಚು ಪ್ರಕರಣ ವಾಪಸ್ ಪಡೆಯಲಾಗಿತ್ತು. 1,400ಕ್ಕೂ ಹೆಚ್ಚು ಪಿಎಫ್‌ಐ ಉಗ್ರರಿಗೆ ಸಿದ್ದರಾಮಯ್ಯ ಕ್ಷಮಾದಾನ ನೀಡಿದ್ದರು. ಇದರ ಫಲವಾಗಿ ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಸರಣಿ ಕೊಲೆಗೆ ಕಾಂಗ್ರೆಸ್ ಕಾರಣವಾಗಿತ್ತು ಎಂದು ಸಂಸ್ಕೃತಿ ಹಾಗೂ ಇಂಧನ ಸಚಿವ ಸುನಿಲ್ ಕುಮಾರ್ ಕಿಡಿಕಾರಿದ್ದಾರೆ.

    ದೇಶದ ಆಂತರಿಕ ಭದ್ರತೆಗೆ ಆತಂಕ ತಂದೊಡ್ಡಿದ್ದ ಪಿಎಫ್‌ಐ ಹಾಗೂ ಅದರ ಸಹವರ್ತಿ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿರುವುದನ್ನು ಸ್ವಾಗತಿಸಿದ ಸುನಿಲ್ ಕುಮಾರ್, ಪಿಎಫ್‌ಐ, ಐಸಿಸ್‌ನಂತಹ ಜಾಗತಿಕ ಉಗ್ರ ಸಂಘಟನೆಗಳ ಜತೆ ಸಂಬಂಧ ಹೊಂದಿತ್ತು. ದೇಶದ ಆಂತರಿಕ ಭದ್ರತೆಗೆ ಧಕ್ಕೆ ತರುವ ಸಂಚು ರೂಪಿಸಿದ್ದು ಮಾತ್ರವಲ್ಲ, ಮುಸ್ಲಿಂ ಯುವಕರ ತಲೆಕೆಡಿಸಿ ಅವರನ್ನು ಐಸಿಸ್ ಸಂಘಟನೆಗೆ ಕಳುಹಿಸುತ್ತಿತ್ತು ಎಂದು ಹೇಳಿದರು.

    ಇತ್ತೀಚೆಗೆ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲೂ ಇದೇ ಸಂಘಟನೆಯ ಪಾತ್ರ ಇರುವುದನ್ನು ಕೇಂದ್ರ ಗೃಹ ಇಲಾಖೆ ಉಲ್ಲೇಖಿಸಿದ್ದು, ಭವಿಷ್ಯದಲ್ಲಿ ಪಿಎಫ್‌ಐ ನಡೆಸಬಹುದಾಗಿದ್ದ ಭಾರೀ ವಿಧ್ವಂಸಕ ಕೃತ್ಯಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಡಿವಾಣ ಹಾಕಿದೆ ಎಂದು ಶ್ಲಾಘಿಸಿದರು.

    ಹುಬ್ಬಳ್ಳಿ ಹಾಗೂ ಮಂಗಳೂರಿನಲ್ಲಿ ಇದೇ ಸಂಘಟನೆಯ ಕಾರ್ಯಕರ್ತರು ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ ನಡೆಸಿದಾಗ ಕಾಂಗ್ರೆಸ್ ನಾಯಕರು ತುಟಿ ಬಿಚ್ಚಿರಲಿಲ್ಲ. ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ತನ್ನದೇ ಶಾಸಕರ ಮನೆಗೆ ಬೆಂಕಿ ಹಚ್ಚಿದಾಗಲೂ ಕಾಂಗ್ರೆಸ್ ಧ್ವನಿ ಎತ್ತಿರಲಿಲ್ಲ. ಇದು ಪಿಎಫ್‌ಐ ಪರ ಕಾಂಗ್ರೆಸ್ ತಾಳಿದ್ದ ಮೃದು ಧೋರಣೆಗೆ ಸಾಕ್ಷಿಯಾಗಿತ್ತಲ್ಲವೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸಣ್ಣ ಮಕ್ಕಳ ಬಾಯಲ್ಲೂ ಅವಹೇಳನಕಾರಿ ಘೋಷಣೆ ಹಾಕಿಸಿತ್ತು – PFI ನಿಷೇಧವನ್ನು ಸ್ವಾಗತಿಸಿದ ಮುಸ್ಲಿಮ್‌ ಲೀಗ್‌

    ಕೇಂದ್ರದಲ್ಲೂ ಬಿಜೆಪಿ ಸರ್ಕಾರ ಇದೆ, ರಾಜ್ಯದಲ್ಲೂ ಬಿಜೆಪಿ ಸರ್ಕಾರ ಇದೆ. ಸಾಮರ್ಥ್ಯ ಇದ್ದರೆ ಪಿಎಫ್‌ಐ ಬ್ಯಾನ್ ಮಾಡಿ ಎಂದು ಸಿದ್ದರಾಮಯ್ಯ ಆಗಾಗ ಮಾಡುತ್ತಿದ್ದ ಉದ್ರೇಕಕಾರಿ ಭಾಷಣಕ್ಕೆ ಈಗ ಉತ್ತರ ನೀಡಲಾಗಿದೆ. ಪ್ರವೀಣ್ ನೆಟ್ಟಾರು ಹತ್ಯೆ ನಡೆದಾಗ ಈ ಸಂಘಟನೆಗಳ ನಿಷೇಧಕ್ಕೆ ನಾನು ಒತ್ತಾಯಿಸಿದ್ದೆ. ಪ್ರವೀಣ್ ಹತ್ಯೆಯಲ್ಲೂ ಪಿಎಫ್‌ಐ ಪಾತ್ರವಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಈ ಹಿಂದೆ ಸಿಮಿ ಸಂಘಟನೆಯನ್ನು ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಬಿಜೆಪಿ ಸರ್ಕಾರ ಬ್ಯಾನ್ ಮಾಡಿತ್ತು. ಅದರ ರೂಪಾಂತರಿ ತಳಿ ಪಿಎಫ್‌ಐ ಅನ್ನು ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರವೇ ನಿಷೇಧಿಸಿದೆ. ದೇಶದ ಆಂತರಿಕ ಹಾಗೂ ಬಾಹ್ಯ ರಕ್ಷಣೆಗೆ ಬಿಜೆಪಿ ಸದಾ ಬದ್ಧವಾಗಿದೆ ಎಂದು ಸುನಿಲ್ ಕುಮಾರ್ ಹೇಳಿದರು. ಇದನ್ನೂ ಓದಿ: ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ: ಬಸವರಾಜ ಬೊಮ್ಮಾಯಿ

    Live Tv
    [brid partner=56869869 player=32851 video=960834 autoplay=true]

  • ಉಗ್ರ ಸಂಘಟನೆಗಳ ಜೊತೆ ಲಿಂಕ್‌ – ಈ ಕ್ಷಣದಿಂದಲೇ PFI, 8 ಅಂಗ ಸಂಸ್ಥೆಗಳು ಬ್ಯಾನ್‌

    ಉಗ್ರ ಸಂಘಟನೆಗಳ ಜೊತೆ ಲಿಂಕ್‌ – ಈ ಕ್ಷಣದಿಂದಲೇ PFI, 8 ಅಂಗ ಸಂಸ್ಥೆಗಳು ಬ್ಯಾನ್‌

    ನವದೆಹಲಿ: ದೇಶಾದ್ಯಂತ ಹಲವು ರಾಜ್ಯಗಳಲ್ಲಿ ದಾಳಿ ನಡೆದ ಬಳಿಕ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ(PFI) ಸಂಘಟನೆಯನ್ನು ಕೇಂದ್ರ ಸರ್ಕಾರ ಈ ಕ್ಷಣದಿಂದಲೇ ನಿಷೇಧ ಮಾಡುವ ಮೂಲಕ ಮಹತ್ವದ ನಿರ್ಧಾರ ಕೈಗೊಂಡಿದೆ.

    ಉಗ್ರ ಸಂಘಟನೆಗಳ ಜೊತೆ ನೇರವಾದ ಸಂಬಂಧ ಹೊಂದಿದ ಹಿನ್ನೆಲೆಯಲ್ಲಿ ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳು ಕಾನೂನುಬಾಹಿರ ಸಂಘ ಎಂದು ಘೋಷಿಸಿ ತಕ್ಷಣದಿಂದ ಜಾರಿಗೆ ಬರುವಂತೆ 5 ವರ್ಷಗಳ ಅವಧಿಗೆ ನಿಷೇಧ ಮಾಡಿ ಗೃಹ ಸಚಿವಾಲಯ(Ministry of Home Affairs) ಆದೇಶ ಪ್ರಕಟಿಸಿದೆ.

    ಕಾನೂನುಬಾಹಿರ ಚಟುವಟಿಕೆಗಳ (ನಿರ್ಬಂಧ) ಕಾಯ್ದೆಯ ಅಡಿ ಪಿಎಫ್‌ಐ ಅಂಗ ಸಂಸ್ಥೆಗಳಾದ ರಿಹಬ್ ಇಂಡಿಯಾ ಫೌಂಡೇಶನ್ (RIF), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (AIIC), ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್ (NCHRO), ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರಿಹ್ಯಾಬ್ ಫೌಂಡೇಶನ್ ಕೇರಳವನ್ನು ನಿಷೇಧಿಸಲಾಗಿದೆ.

    ಸೆಪ್ಟೆಂಬರ್ 22 ಮತ್ತು ಸೆಪ್ಟೆಂಬರ್ 27 ರಂದು ರಾಷ್ಟ್ರೀಯ ತನಿಖಾ ಸಂಸ್ಥೆ (NIA), ಜಾರಿ ನಿರ್ದೇಶನಾಲಯ (ED) ಮತ್ತು ರಾಜ್ಯ ಪೊಲೀಸರು PFI ಮೇಲೆ ದಾಳಿ ನಡೆಸಿತ್ತು. ಮೊದಲ ಸುತ್ತಿನ ದಾಳಿಯಲ್ಲಿ ಪಿಎಫ್‌ಐಗೆ ಸೇರಿದ 106 ಮಂದಿಯನ್ನು ಬಂಧಿಸಲಾಗಿದ್ದರೆ ಎರಡನೇ ಸುತ್ತಿನ ದಾಳಿ 247 ಮಂದಿಯನ್ನು ಬಂಧಿಸಿತ್ತು. ಇದನ್ನೂ ಓದಿ: ಶಾಂತಿ ಭಂಗ, ಅಕ್ರಮಕೂಟ ಆರೋಪದಡಿ 7 ಮಂದಿ PFI ಮುಖಂಡರು ಅರೆಸ್ಟ್ – 14 ದಿನ ನ್ಯಾಯಾಂಗ ಬಂಧನ

     

    ನಿಷೇಧಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಗಳಿಗೆ ಸಾಕಷ್ಟು ಪುರಾವೆಗಳು ಲಭ್ಯವಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

    ವಿದೇಶಗಳಿಂದ ಅಕ್ರಮ ದೇಣಿಗೆ, ಸಾರ್ವಜನಿಕರ ಶಾಂತಿಗೆ ಭಂಗ, ಕಾನೂನು ಬಾಹಿರ ಚಟುವಟಿಕೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ ಪಿಎಫ್‌ಐ ಕಚೇರಿಗಳು ಹಾಗೂ ಮುಖಂಡರ ಮನೆಗಳ ಮೇಲೆ ದಾಳಿ ನಡೆಸಲಾಗಿತ್ತು.

    Live Tv
    [brid partner=56869869 player=32851 video=960834 autoplay=true]