Tag: PGCET 2024

  • ಪಿಜಿಸಿಇಟಿ ಮುಂದಕ್ಕೆ – ಅರ್ಜಿ ಸಲ್ಲಿಸಲು ಜು.7ರವರೆಗೆ ಅವಕಾಶ

    ಪಿಜಿಸಿಇಟಿ ಮುಂದಕ್ಕೆ – ಅರ್ಜಿ ಸಲ್ಲಿಸಲು ಜು.7ರವರೆಗೆ ಅವಕಾಶ

    ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ (2024) ಎಂಬಿಎ, ಎಂಸಿಎ, ಎಂ.ಇ./ಎಂ.ಟೆಕ್./ ಎಂ.ಆರ್ಕಿಟೆಕ್ಚರ್‌ ಕೋರ್ಸುಗಳ ಪ್ರವೇಶಕ್ಕೆ ಅರ್ಹತೆ ನಿರ್ಧರಿಸಲು ಜು.13 ಮತ್ತು 14 ರಂದು ನಡೆಸಲು ನಿಗದಿಪಡಿಸಲಾಗಿದ್ದ ಪಿಜಿಸಿಇಟಿ-2024ರ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ತಿಳಿಸಿದೆ.

    ವಿವಿಧ ವಿಶ್ವವಿದ್ಯಾಲಯಗಳ ಪದವಿ ತರಗತಿಗಳ ಅಂತಿಮ ಸೆಮಿಸ್ಟರ್ ಪರೀಕ್ಷೆಗಳು ಜುಲೈ 5 ಮತ್ತು ಜುಲೈ 10 ರಿಂದ ಪ್ರಾರಂಭವಾಗುತ್ತಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪರೀಕ್ಷೆ ನಡೆಯುವ ಹೊಸ ದಿನಾಂಕವನ್ನು ಮುಂಬರುವ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಮಂಗಳವಾರ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ಸೂರಜ್‌ ಪರ ದೂರು ನೀಡಿದ್ದ ಶಿವಕುಮಾರ್‌ ವಿರುದ್ಧ ಹಣ ದುರುಪಯೋಗ ಆರೋಪ, ಎಫ್‌ಐಆರ್‌ ದಾಖಲು

    ಈ ಮುಂದೂಡಿಕೆ ಹಿನ್ನೆಲೆಯಲ್ಲಿ, ಪಿಜಿಸಿಇಟಿ-2024ಕ್ಕೆ ನೋಂದಣಿ ಮಾಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದಕ್ಕೂ ಕಾಲಾವಕಾಶ ವಿಸ್ತರಣೆ ಮಾಡಿ ಅಂತಿಮ ಅವಕಾಶ ಕಲ್ಪಿಸಲಾಗಿದೆ.

    ಇಲ್ಲಿಯವರೆಗೆ ನೋಂದಣಿ ಮಾಡದೇ ಇರುವ ಆಸಕ್ತ ಅಭ್ಯರ್ಥಿಗಳು ಜುಲೈ 7ರ ಒಳಗೆ ನೋಂದಣಿ ಮಾಡಿ ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಿ ಜುಲೈ 9ರ ಸಂಜೆ 6.00 ರೊಳಗೆ ಶುಲ್ಕ ಪಾವತಿಸಬಹುದು. ನೋಂದಣಿ ಮಾಡಲು ಮತ್ತೊಮ್ಮೆ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಇದನ್ನೂ ಓದಿ: ಎರಡೂವರೆ ವರ್ಷದ ಬಳಿಕ ಸಚಿವರ ಬದಲಾವಣೆ ಆಗಬೇಕು ಎಂಬ ಹೇಳಿಕೆಗೆ ಈಗಲೂ ಬದ್ಧ: ಮುನಿಯಪ್ಪ

    ಪರಿಷ್ಕೃತ ಮಾಹಿತಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನೋಡುತ್ತಿರಬೇಕೆಂದು ಸೂಚಿಸಲಾಗಿದೆ.

  • ಜುಲೈ 13,14ಕ್ಕೆ ಪಿಜಿಸಿಇಟಿ ಪರೀಕ್ಷೆ: ಕೆಇಎ

    ಜುಲೈ 13,14ಕ್ಕೆ ಪಿಜಿಸಿಇಟಿ ಪರೀಕ್ಷೆ: ಕೆಇಎ

    ಬೆಂಗಳೂರು: 2024-25ನೇ ಸಾಲಿನ ಸ್ನಾತಕೋತ್ತರ ಕೋರ್ಸ್‌ಗಳ (ಎಂಬಿಎ, ಎಂಸಿಎ, ಎಂ.ಟೆಕ್, ಎಂ.ಇ, ಎಂ.ಆರ್ಕಿಟೆಕ್ಚರ್) ಪ್ರವೇಶಕ್ಕೆ ಜುಲೈ 13 ಮತ್ತು 14ರಂದು ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ (PGCET-24) ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ತೀರ್ಮಾನಿಸಿದೆ.

    ಎಂ.ಇ/ಎಂ.ಟೆಕ್/ಎಂ.ಆರ್ಕಿಟೆಕ್ಚರ್ ಕೋರ್ಸ್‌ಗಳ ಪ್ರವೇಶ ಪರೀಕ್ಷೆಯನ್ನು ಜುಲೈ 13 ಹಾಗೂ ಎಂಸಿಎ ಮತ್ತು ಎಂಬಿಎ ಕೋರ್ಸ್‌ಗಳ ಪ್ರವೇಶ ಪರೀಕ್ಷೆಯನ್ನು ಜುಲೈ 14ರಂದು ನಡೆಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ ಪ್ರಕರಣ – ಚಾಲಕನೇ ಮಾಸ್ಟರ್ ಮೈಂಡ್

    ಪಿಜಿಸಿಇಟಿ ಪರೀಕ್ಷೆಗೆ ಮೇ 27ರಿಂದ ಜೂನ್ 17ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜೂನ್ 18ರೊಳಗೆ ಶುಲ್ಕ ಪಾವತಿಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಎಲ್ಲೇ ಇದ್ದರೂ ಕೂಡಲೇ ಸ್ವದೇಶಕ್ಕೆ ಬಾ, ನನ್ನ ತಾಳ್ಮೆ ಪರೀಕ್ಷಿಸಬೇಡ – ಪ್ರಜ್ವಲ್‌ಗೆ ಹೆಚ್‌ಡಿಡಿ ಸೂಚನೆ

    ಗೇಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಪಿಜಿಸಿಇಟಿ-24ಕ್ಕೆ ಹಾಜರಾಗುವ ಅಗತ್ಯ ಇಲ್ಲ. ಆದರೆ, ಅಂತಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿ, ಪ್ರವೇಶಕ್ಕೆ ಅರ್ಹರಾಗಬೇಕಾಗುತ್ತದೆ. ಗೇಟ್ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆಯೇ ಸ್ನಾತಕೋತ್ತರ ಕೋರ್ಸ್‌ಗಳಿಗೆ ಪ್ರವೇಶ ನೀಡಲಾಗುತ್ತದೆ ಎಂದು ವಿವರಿಸಿದರು. ಇದನ್ನೂ ಓದಿ: ಸಂಕಷ್ಟ ನಿವಾರಣೆಗಾಗಿ ಗಾಣಗಾಪುರದ ದತ್ತನ ಮೊರೆ ಹೋದ ರೇವಣ್ಣ