Tag: PGCET Exam

  • PG/DCET: ಅರ್ಜಿ ಸಲ್ಲಿಸಲು ಮೇ 10 ಕೊನೆ ದಿನ – ಕೆಇಎ

    PG/DCET: ಅರ್ಜಿ ಸಲ್ಲಿಸಲು ಮೇ 10 ಕೊನೆ ದಿನ – ಕೆಇಎ

    ಬೆಂಗಳೂರು: 2025-26ನೇ ಸಾಲಿನ ಸ್ನಾತಕೋತ್ತರ ಕೋರ್ಸುಗಳ (ಎಂಬಿಎ, ಎಂಸಿಎ, ಎಂಟೆಕ್, ಎಂಇ) ಪ್ರವೇಶದ ಪಿಜಿಸಿಇಟಿ (PGCET) ಹಾಗೂ ಲ್ಯಾಟರಲ್ ಎಂಟ್ರಿ ಮೂಲಕ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ನಡೆಸುವ ಡಿಸಿಇಟಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ.

    ಈ ಎರಡೂ ಪರೀಕ್ಷೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 10 ಕೊನೆ ದಿನವಾಗಿದೆ. ಮೇ 12 ರಂದು ಶುಲ್ಕ ಪಾವತಿಗೆ ಕೊನೆಯ ದಿನ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ (H Prasanna) ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ-ರಾಜನಾಥ್ ಸಿಂಗ್ ಮಹತ್ವದ ಚರ್ಚೆ; ಉಗ್ರರ ವಿರುದ್ಧ ಮುಂದಿನ ಕ್ರಮಕ್ಕೆ ಮಾಸ್ಟರ್ ಪ್ಲ್ಯಾನ್

    ಪಿಜಿಸಿಇಟಿಯನ್ನು ಮೇ ಕೊನೆಯ ಅಥವಾ ಜೂನ್ ಮೊದಲ ವಾರದಲ್ಲಿ ನಡೆಸಲಾಗುತ್ತದೆ. ಡಿಸಿಇಟಿಯನ್ನು ಮೇ 31ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ. ಇದನ್ನೂ ಓದಿ: 26 ರಫೇಲ್ ಯುದ್ಧ ವಿಮಾನಗಳ ಖರೀದಿಗೆ ಸಹಿ; ಭಾರತ-ಫ್ರಾನ್ಸ್ ಮಧ್ಯೆ 63,000 ಕೋಟಿ ಮೆಗಾ ಡೀಲ್‌

    ಪಿಜಿ- ಆರ್ಕಿಟೆಕ್ಚರ್ ಕೋರ್ಸ್ ಪ್ರವೇಶಕ್ಕೆ ಕೆಇಎ ಪ್ರವೇಶ ಪರೀಕ್ಷೆ ನಡೆಸುವುದಿಲ್ಲ. ಬದಲಿಗೆ ಆರ್ಕಿಟೆಕ್ಚರ್ ಕೌನ್ಸಿಲ್ ನಡೆಸುವ ರಾಷ್ಟ್ರ ಮಟ್ಟದ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನೇ ಇಲ್ಲಿ ಸೀಟು ಹಂಚಿಕೆಗೆ ಪರಿಗಣಿಸಲಾಗುತ್ತದೆ. ಆದರೆ ಅವರು ಕೂಡ ಈಗ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

  • ಪಿಜಿ ಆಯುಷ್‌ ತಾತ್ಕಾಲಿಕ ಫಲಿತಾಂಶ ಪ್ರಕಟ – ಕೆಇಎ

    ಬೆಂಗಳೂರು: ಪಿಜಿ ಆಯುಷ್‌-2024 (PG Ayush 2024) ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸೋಮವಾರ ಪ್ರಕಟಿಸಿದೆ.

    ಆಕ್ಷೇಪಣೆಗಳನ್ನು ನೋಡಿಕೊಂಡು ಮಂಗಳವಾರ (ನ.12) ಮಧ್ಯಾಹ್ನ 2 ಗಂಟೆಗೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

    ಅಭ್ಯರ್ಥಿಗಳು,ಪೋಷಕರ ಬಳಿ ಚರ್ಚಿಸಿ, ಆಯ್ಕೆಯನ್ನು ದಾಖಲಿಸಬೇಕು. ನಂತರ ಶುಲ್ಕ ಪಾವತಿಸಿ ಕಾಲೇಜಿಗೆ ವರದಿ ಮಾಡಿಕೊಳ್ಳಲು ನ.14ರವರೆಗೆ ಅವಕಾಶ ಇರುತ್ತದೆ ಎಂದು ತಿಳಿಸಿದ್ದಾರೆ.

    ಹೆಚ್ಚಿನ ವಿವರಗಳಿಗೆ ಕೆಇಎ ವೆಬ್‌ಸೈಟ್‌ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದಿದ್ದಾರೆ.