Tag: Ph.D

  • ಪಿಎಚ್‌ಡಿ ಪ್ರವೇಶ ಪರೀಕ್ಷೆಯಲ್ಲಿ ಪಾಸಾದ ಪವಿತ್ರಾ ಲೋಕೇಶ್

    ಪಿಎಚ್‌ಡಿ ಪ್ರವೇಶ ಪರೀಕ್ಷೆಯಲ್ಲಿ ಪಾಸಾದ ಪವಿತ್ರಾ ಲೋಕೇಶ್

    ನ್ನಡದ ಖ್ಯಾತ ನಟಿ ಪವಿತ್ರಾ ಲೋಕೇಶ್ (Pavitra Lokesh) ಇತ್ತೀಚೆಗಷ್ಟೇ ಪಿಎಚ್‌ಡಿ (Ph.D)ಮಾಡುವ ಇಂಗಿತವನ್ನು ವ್ಯಕ್ತ ಪಡಿಸಿದ್ದರು. ಕೊನೆಗೂ ಅದನ್ನು ಈಡೇರಿಸಿಕೊಳ್ಳಲು ಮುಂದಾಗಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ಪ್ರವೇಶ ಪರೀಕ್ಷೆಯನ್ನು ಅವರು ಬರೆದದ್ದು ಅದರಲ್ಲಿ ಪಾಸ್ ಕೂಡ ಆಗಿದ್ದಾರೆ.

    ಹಂಪಿಯ (Hampi) ಕನ್ನಡ ವಿಶ್ವವಿದ್ಯಾಲಯದ ಪಿಎಚ್‌ಡಿ ಸಾಮಾನ್ಯ ಪ್ರವೇಶ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಬಹುಭಾಷಾ ನಟಿ ಪವಿತ್ರಾ ಲೋಕೇಶ್ ಸೇರಿದಂತೆ 259 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಕನ್ನಡ ವಿವಿಯಲ್ಲಿ 981 ಜನರು ಸಾಮಾನ್ಯ ಪ್ರವೇಶ ಪರೀಕ್ಷೆ ಎದುರಿಸಿದ್ದರು. ಆ ಪೈಕಿ ಒಟ್ಟು 259 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ವಿವಿ ಪ್ರಕಟಿಸಿದೆ. ಇದನ್ನೂ ಓದಿ:ಮದುವೆಯಾದ ಒಂದೇ ವರ್ಷಕ್ಕೆ ಪತಿಯನ್ನು ಕಳೆದುಕೊಂಡ ನಟಿ ಶ್ರುತಿ

    ಕನ್ನಡ ವಿವಿ (Kannada University) ಕುಲಸಚಿವ ಡಾ.ಸುಬ್ಬಣ್ಣ ರೈ ಈ ಕುರಿತು ಮಾಹಿತಿ ನೀಡಿದ್ದು, ಪವಿತ್ರಾ ಲೋಕೇಶ್ ಭಾಷಾ ನಿಕಾಯದಡಿ ಪ್ರವೇಶ ಪರೀಕ್ಷೆ ಬರೆದಿದ್ದರು. ಬೆಳಗಾವಿ(Belgaum) ವಿಸ್ತರಣಾ ಕೇಂದ್ರದಲ್ಲಿ ಸಂಶೋಧನೆ ಕೈಗೊಳ್ಳಲು ಪರೀಕ್ಷೆ ಬರೆದಿದ್ದರು ಪವಿತ್ರ ಲೋಕೇಶ್. ಕಳೆದ ಮೇ 30ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆದಿತ್ತು.

     

    ಕನ್ನಡ ವಿವಿ ವ್ಯಾಪ್ತಿಯ ಅಧ್ಯಯನ ವಿಭಾಗ, ಮಾನ್ಯತ ಕೇಂದ್ರ, ಹಾಗೂ ವಿಸ್ತರಣಾ ಕೇಂದ್ರಗಳಲ್ಲಿ ಲಭ್ಯವಿರುವ ಸ್ಥಾನ ಮತ್ತು ಮಾರ್ಗದರ್ಶಕರ ಸಂಖ್ಯೆಗೆ ಅನುಗುಣವಾಗಿ ಸೀಟು ಹಂಚಿಕೆ ಮಾಡಲಾಗಿದೆ ಎಂದು ಕುಲಸಚಿವರು ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಾಸ್ಟೆಲ್ ವಾಶ್‍ರೂಮಿನಲ್ಲಿ ಪಿಎಚ್‍ಡಿ ವಿದ್ಯಾರ್ಥಿನಿಯ ಶವ ಪತ್ತೆ

    ಹಾಸ್ಟೆಲ್ ವಾಶ್‍ರೂಮಿನಲ್ಲಿ ಪಿಎಚ್‍ಡಿ ವಿದ್ಯಾರ್ಥಿನಿಯ ಶವ ಪತ್ತೆ

    ಹೈದರಾಬಾದ್: 29 ವರ್ಷದ ಪಿಎಚ್‍ಡಿ ವಿದ್ಯಾರ್ಥಿನಿ ಹೈದರಾಬಾದ್ ವಿಶ್ವವಿದ್ಯಾಲಯದ ಹಾಸ್ಟೆಲಿನ ವಾಶ್ ರೂಮಿನಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.

    ಖರಗ್‍ಪುರದ ದೀಪಿಕಾ ಮಹಾಪಾತ್ರ(29) ಮೃತ ವಿದ್ಯಾರ್ಥಿನಿ. ಈಕೆ ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಹಿಂದಿಯಲ್ಲಿ ಪಿಎಚ್‍ಡಿ ಸಂಶೋಧನೆ ಮಾಡುತ್ತಿದ್ದಳು. ಸೋಮವಾರ ದೀಪಿಕಾ ಸುಮಾರು ಬೆಳಿಗ್ಗೆ 8 ಗಂಟೆಗೆ ಹಾಸ್ಟೆಲಿನ ವಾಶ್ ರೂಮಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಷ್ಟರಲ್ಲೇ ಆಕೆ ಮೃತಪಟ್ಟಿದ್ದಳು ಎಂದು ವೈದ್ಯರು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

    ದೀಪಿಕಾಳನ್ನು ನೋಡಿದ ಸ್ನೇಹಿತರು ತಕ್ಷಣ ವಿಶ್ವವಿದ್ಯಾಲಯದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ನಂತರ ಅವರು ಬೆಳಗ್ಗೆ 8:30ಕ್ಕೆ ಗಚಿಬೌಲಿಯ ಸಿಟಿಜನ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋದರು. ಆದರೆ ದೀಪಿಕಾ ಅದಾಗಲೇ ಮೃತಪಟ್ಟಿದ್ದಳು. ವಿದ್ಯಾರ್ಥಿಯ ದೇಹದಲ್ಲಿ ಯಾವುದೇ ಗಾಯಗಳು ಕಂಡುಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

    ಮೃತ ವಿದ್ಯಾರ್ಥಿನಿಯ ವೈದ್ಯಕೀಯ ದಾಖಲಾತಿಯಲ್ಲಿ ಆಕೆ ನರ ಸಂಬಂಧಿತ ಕಾಯಿಲೆ ಮತ್ತು ಮೂರ್ಛೆರೋಗದಿಂದ ಬಳಲುತ್ತಿದ್ದಳು ಎಂದು ವರದಿಯಾಗಿದೆ. ಜೊತೆಗೆ ಅದಕ್ಕೆ ನಿರಂತರ ಔಷಧಿ ತೆಗೆದುಕೊಳ್ಳುತ್ತಿದ್ದಳು ಎಂದು ತಿಳಿದು ಬಂದಿದೆ. ಸದ್ಯಕ್ಕೆ ಈ ಕುರಿತು ಗಚಿಬೌಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಸಾವಿನ ಬಗ್ಗೆ ಇದುವರೆಗೂ ಯಾವುದೇ ಅನುಮಾನ ವ್ಯಕ್ತವಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

    ವಿಶ್ವವಿದ್ಯಾನಿಲಯದ ಅಧಿಕಾರಿಗಳು ವಿದ್ಯಾರ್ಥಿನಿ ಮೂರ್ಛೆರೋಗದಿಂದ ಬಿದ್ದು ಮೃತಪಟ್ಟಿರಬಹುದು ಎಂದು ಶಂಕಿಸಿದ್ದಾರೆ. ಸದ್ಯಕ್ಕೆ ವಿದ್ಯಾರ್ಥಿಯನ್ನು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಹೀಗಾಗಿ ಪೊಲೀಸರು ವರದಿಗಾಗಿ ಕಾಯುತ್ತಿದ್ದಾರೆ.

    ಕಳೆದ ವರ್ಷ ನವೆಂಬರ್‌ನಲ್ಲಿ ಇದೇ ವಿಶ್ವವಿದ್ಯಾಲಯದಲ್ಲಿ ಒಡಿಶಾದ ಮತ್ತೊಬ್ಬ ಪಿಎಚ್‍ಡಿ ವಿದ್ಯಾರ್ಥಿನಿ ಡೆಂಗ್ಯೂ ಕಾಯಿಲೆಯಿಂದ ಮೃತಪಟ್ಟಿದ್ದಳು. ಒಡಿಶಾದ ಕಲಹಂಡಿ ಮೂಲದ ರಶ್ಮಿ ರಂಜನ್ ಸುನಾ ಜ್ವರ ಮತ್ತು ವಾಂತಿ ಎಂದು ವಿಶ್ವವಿದ್ಯಾಲಯ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದಳು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹಿಮಗಿರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿಯು ವಿದ್ಯಾರ್ಥಿನಿಯ ಆರೋಗ್ಯ ಸುಧಾರಿಸದ ಹಿನ್ನೆಲೆಯಲ್ಲಿ ಸಿಟಿಜನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೇ ಅನೇಕ ಅಂಗಾಂಗ ವೈಫಲ್ಯದಿಂದಾಗಿ ಸುನಾ ಮೃತಪಟ್ಟಿದ್ದಳು.

    ವಿಶ್ವವಿದ್ಯಾನಿಯದ ಆರೋಗ್ಯ ಕೇಂದ್ರದಲ್ಲಿ ವೈದ್ಯಕೀಯ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ವಿದ್ಯಾರ್ಥಿಗಳು ಪ್ರತಿಭಟಿಸಿದ್ದರು. ಇಬ್ಬರು ವಿದ್ಯಾರ್ಥಿನಿಯರು ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದ್ದರು. ಮನೆಗೆ ಇವರೇ ಆಧಾರವಾಗಿದ್ದರು. ಆದರೆ ವೈದ್ಯಕೀಯ ನಿರ್ಲಕ್ಷ್ಯದಿಂದ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ. ಹೀಗಾಗಿ ವಿದ್ಯಾರ್ಥಿನಿಯರ ಕುಟುಂಬಕ್ಕೆ 25 ಲಕ್ಷ ರೂ.ಗಳ ಪರಿಹಾರವನ್ನು ಕೊಡಬೇಕು ಎಂದು ಪ್ರತಿಭಟಿಸಿದ್ದರು. ಕೊನೆಗೆ ವಿಶ್ವವಿದ್ಯಾಲಯವು ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಧನ ನೀಡಿತ್ತು.

  • ಸಿಎಂ ಕುಮಾರಸ್ವಾಮಿ ಈಗ ಪಿಹೆಚ್‍ಡಿ ಮಾಡಿದ್ದಾರೆ: ಪುಟ್ಟರಾಜು

    ಸಿಎಂ ಕುಮಾರಸ್ವಾಮಿ ಈಗ ಪಿಹೆಚ್‍ಡಿ ಮಾಡಿದ್ದಾರೆ: ಪುಟ್ಟರಾಜು

    ಮಂಡ್ಯ: ಸರ್ಕಾರ ಉಳಿಸಿಕೊಳ್ಳುವ ವಿಚಾರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಪಿಹೆಚ್‍ಡಿ ಮಾಡಿದ್ದಾರೆ ಎಂದು ಹೇಳುವ ವೇಳೆ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಬಗ್ಗೆ ಸಚಿವ ಸಿಎಸ್ ಪುಟ್ಟರಾಜು ಅಧಿಕೃತವಾಗಿ ಗುಟ್ಟು ಬಿಟ್ಟುಕೊಟ್ಟಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ 10- 12 ವರ್ಷಗಳಲ್ಲಿನ 20 ತಿಂಗಳು ಅಧಿಕಾರದ ಅನುಭವದಿಂದಾಗಿ ಸಮ್ಮಿಶ್ರ ಸರ್ಕಾರ ನಡೆಸಿಕೊಂಡು ಜನರಿಗೆ ಒಳ್ಳೆಯದು ಮಾಡುವ ವಿಚಾರ ಅವರಿಗೆ ಕರಗತವಾಗಿದೆ. ಸರ್ಕಾರ ಉರುಳಿ ಬಿಳುತ್ತೆ ಎಂದು ಮನಸ್ಸಿಗೆ ಬೇಜಾರು ಮಾಡಿಕೊಳ್ಳೋದು ಬೇಡ. ನಮ್ಮ ಸರ್ಕಾರ 5 ವರ್ಷ ಪೂರೈಸಲಿದೆ. ಇದಕ್ಕೆ ಮಾಧ್ಯಮದವರ ಸಹಕಾರ ಇರಲಿ ಎಂದು ಹೇಳಿದರು.

    ಈ ವೇಳೆ ಮಾತನಾಡುತ್ತಾ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಖಚಿತವಾಗುವ ಸಾಧ್ಯತೆ ಇದೆ ಎಂದು ಇದರ ಬಗ್ಗೆ ಅಧಿಕೃತವಾಗಿ ಹೇಳಿದರು. ಮುಂದಿನ ಲೋಕಸಭೆಗೂ ಮೈತ್ರಿಯಾಗಿ ಹೆಚ್ಚಿನ ಸ್ಥಾನಗಳನ್ನ ಗೆಲ್ಲುವುದಕ್ಕಾಗಿಯೇ ಮೈತ್ರಿ ಸರ್ಕಾರ ರಚಿಸಲಾಗಿದೆ. ಈ ವಿಚಾರ ಕುರಿತು ಪಕ್ಷದ ವರಿಷ್ಠರು ಅಂತಿಮವಾಗಿ ನಿರ್ಧರಿಸುತ್ತಾರೆ ಎಂದರು.

    ರಮ್ಯಾ ವೋಟ್ ಮಾಡಲು ಮಂಡ್ಯಕ್ಕೆ ಬಾರದ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರು ಬಂದಾಗ ರಮ್ಯಾ ಹೀರೊಯಿನ್ ಎಂದು ತೋರಿಸಿ, ನಮ್ಮನ್ನ ಝೀರೋ ಮಾಡುತ್ತೀರಿ. ಅವರು ಆಟೋದಲ್ಲಿ ಹೋದರೂ ದೊಡ್ಡದಾಗಿ ತೋರಿಸುವವರು ನೀವೇ. ನಮ್ಮನ್ನ ಮೂರುಕಾಸಿಗೂ ಲೆಕ್ಕ ಇಟ್ಟುಕೊಳ್ಳುವುದಿಲ್ಲ. ಈಗ ಅವರನ್ನ ದೊಡ್ಡ ಹೀರೋಯಿನ್ ಮಾಡಿ ಅವರ ಬಗ್ಗೆ ನಮ್ಮನ್ನ ಕೇಳಿದರೆ ಹೇಗೆ ಎಂದು ಪ್ರಶ್ನಿಸಿ ಮಾಧ್ಯಮದ ವಿರುದ್ಧ ಸಚಿವ ಪುಟ್ಟರಾಜು ವ್ಯಂಗ್ಯವಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಲಿಕೆಗೆ ವಯಸ್ಸಿನ ಹಂಗಿಲ್ಲ – 91ರ ಇಳಿ ವಯಸ್ಸಿನಲ್ಲಿ ಬರೆದ್ರು ಪಿಎಚ್‍ಡಿ ಎಂಟ್ರೆನ್ಸ್ ಎಕ್ಸಾಂ

    ಕಲಿಕೆಗೆ ವಯಸ್ಸಿನ ಹಂಗಿಲ್ಲ – 91ರ ಇಳಿ ವಯಸ್ಸಿನಲ್ಲಿ ಬರೆದ್ರು ಪಿಎಚ್‍ಡಿ ಎಂಟ್ರೆನ್ಸ್ ಎಕ್ಸಾಂ

    ಕೊಪ್ಪಳ: ಕಲಿಕೆಗೆ ವಯಸ್ಸಿನ ಹಂಗಿಲ್ಲ. ಹೀಗಾಗಿಯೇ ಅಕ್ಷರದ ಮೇಲಿನ ಪ್ರೀತಿಯುಳ್ಳವರು ನಿರಂತರವಾಗಿ ವಿದ್ಯಾರ್ಥಿಗಳಾಗಿರುತ್ತಾರೆ ಎಂಬುದಕ್ಕೆ ಇಲ್ಲೊಬ್ಬರು ವಯೋವೃದ್ಧ ನಿವೃತ್ತ ಶಿಕ್ಷಕರು ಉದಾಹರಣೆಯಾಗುತ್ತಾರೆ.

    91 ರ ಇಳಿ ವಯಸ್ಸಿನಲ್ಲೂ ಅವರು ಪಿಎಚ್‍ಡಿ ಪದವಿಗೆ ಪ್ರವೇಶಕ್ಕೆ ಅರ್ಹತಾ ಪರೀಕ್ಷೆ ಬರೆದು ಬಂದು ಯುವಸಮೂಹ ನಾಚುವಂತೆ ಮಾಡಿದ್ದಾರೆ. ಕೊಪ್ಪಳ ತಾಲೂಕಿನ ಬಿಸರಹಳ್ಳಿ ಗ್ರಾಮದ ನಿವೃತ್ತ ಶಿಕ್ಷಕ ಶರಣಬಸವರಾಜ ಬಿಸರಹಳ್ಳಿ ಅವರು ತಮ್ಮ 91 ನೇ ವಯಸ್ಸಿನಲ್ಲಿಯೂ ಹಂಪಿ ವಿಶ್ವವಿದ್ಯಾಲಯದಲ್ಲಿ ಪಿಎಚ್‍ಡಿ ಪದವಿಗಾಗಿ ಅರ್ಜಿ ಸಲ್ಲಿಸಿದ್ದರು.

    ಇದಕ್ಕೂ ಮುನ್ನ ಧಾರವಾಡದ ಕೆಯುಡಿಯಲ್ಲಿ ಎಂಎ ಪದವಿ ಪಡೆದು ಪಿಎಚ್‍ಡಿಗೆ ಅರ್ಜಿ ಸಲ್ಲಿಸಿದ್ದರು. ಪಿಎಚ್‍ಡಿ ಪದವಿ ಪ್ರವೇಶಕ್ಕೆ ಬೇಕಾದ ಶೇಕಡಾ 55 ರಷ್ಟು ಅಂಕ ಬಂದಿರಲಿಲ್ಲ. ಮತ್ತೆ ಕಳೆದ ವರ್ಷ ಹಂಪಿ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಶೇಕಡಾ 60 ರಷ್ಟು ಅಂಕ ಗಳಿಸಿ ಈ ಬಾರಿ ಪಿಎಚ್‍ಡಿ ಪದವಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಿದ್ದರು.

    ಹಂಪಿ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ವಚನ ಸಾಹಿತ್ಯಕ್ಕೆ ಪಿಎಚ್‍ಡಿ ಎಂಟ್ರೆನ್ಸ್ ಎಕ್ಸಾಂ ಬರೆದಿದ್ದಾರೆ. ಪರೀಕ್ಷೆಯ ಫಲಿತಾಂಶ ಬಂದರೆ ಮುಂದೆ ಪಿಎಚ್‍ಡಿ ಮಾಡಲು ಶರಣಬಸವರಾಜ ಬಿಸರಹಳ್ಳಿ ಅವರು ಮುಂದಾಗಿದ್ದಾರೆ. ಬಿಸರಹಳ್ಳಿ ಅವರು 1991-92 ನೇ ಸಾಲಿನಲ್ಲಿ ಶಿಕ್ಷಕ ವೃತ್ತಿಯಿಂದ ನಿವೃತ್ತವಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv