Tag: phantam

  • ಚಾಮುಂಡಿ ತಾಯಿಯ ದರ್ಶನ ಪಡೆದ ಅಭಿನಯ ಚಕ್ರವರ್ತಿ

    ಚಾಮುಂಡಿ ತಾಯಿಯ ದರ್ಶನ ಪಡೆದ ಅಭಿನಯ ಚಕ್ರವರ್ತಿ

    – ಅಭಿಮಾನಿಗೆ ಕಿಚ್ಚ ಕಿವಿಮಾತು

    ಮೈಸೂರು: ಸ್ಯಾಂಡಲ್‍ವುಡ್ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ.

    ಫ್ಯಾಂಟಮ್ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಸುದೀಪ್ ಅವರು ಇಂದು ನಿರ್ದೇಶಕ ಅನೂಪ್ ಭಂಡಾರಿ ಜೊತೆ ಆಗಮಿಸಿ ನಾಡದೇವಿಯ ದರ್ಶನ ಪಡೆದರು.

    ತಮ್ಮ ನೆಚ್ಚಿನ ನಟ ಬರುತ್ತಿದ್ದಂತೆಯೇ ಅಭಿಮಾನಿಗಳು ಸುದೀಪ್ ಜೊತೆ ಫೋಟೋ ತೆಗೆದುಕೊಳ್ಳಲು ಮುಗಿಬಿದ್ದರು. ಅಭಿಮಾನಿಗಳ ನೂಕುನುಗ್ಗಲು ಗಮನಿಸಿದ ನಟ, ಓರ್ವನಿಗೆ ಸಂಯಮದಿಂದ ವರ್ತಿಸುವಂತೆ ಕಿವಿಮಾತು ಹೇಳಿದರು.

    ದೇವಸ್ಥಾನದಲ್ಲಿ ನಿಶ್ಯಬ್ದ ಕಾಪಾಡುವಂತೆ ಬಾಯಿ ಮೇಲೆ ಬೆರಳು ಇಟ್ಟು ಸುದೀಪ್ ತಮ್ಮ ಅಭಿಮಾನಿಗಳಿಗೆ ಸನ್ನೆ ಮಾಡಿದರು. ಇದೇ ವೇಳೆ ಮಾಸ್ಕ್ ಧರಿಸದೇ ಫೋಟೋ ತೆಗೆಸಿಕೊಳ್ಳಲು ಬಂದ ಅಭಿಮಾನಿಗೆ ಮತ್ತೊಬ್ಬ ಅಭಿಮಾನಿ ಕ್ಲಾಸ್ ತೆಗೆದುಕೊಂಡ ಪ್ರಸಂಗವೂ ನಡೆಯಿತು.

    ಕೊರೊನಾದಿಂದ ಸ್ಥಗಿತವಾಗಿದ್ದ ಸುದೀಪ್ ಅಭಿನಯದ ಫ್ಯಾಂಟಮ್ ಚಿತ್ರದ ಸೂಟಿಂಗ್ ಅನ್ ಲಾಕ್ ಬಳಿಕ ಆರಂಭಗೊಂಡಿತ್ತು. ಕೊರೊನಾ ಆತಂಕದ ನಡುವೆಯೂ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿದ ಚಿತ್ರತಂಡ ಶೂಟಿಂಗ್ ಮುಗಿಸಿದೆ. ಸುದಫ್ ಮತ್ತು ನಟಿ ಅಪರ್ಣಾ ಬಲ್ಲಾಳ್ ಹುಟ್ಟುಹಬ್ಬದಂದು ಚಿತ್ರದಲ್ಲಿನ ಇಬ್ಬರ ಲುಕ್ ರಿವೀಲ್ ಮಾಡಲಾಗಿತ್ತು. ಹಾಗೆಯೇ ದಟ್ಟ ಕಾಡಿನ ನಡುವೆ ಸುದೀಪ್ ದೋಣಿಯಲ್ಲಿ ಹೊರಟ ಧಗಧಗಿಸುವ ನೋಟ ಸ್ಯಾಂಡಲ್‍ವುಡ್ ಅಂಗಳದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು.