Tag: Pharma Company

  • Andhra | ಫಾರ್ಮಾ ಕಂಪನಿಯಲ್ಲಿ ರಿಯಾಕ್ಟರ್‌ ಸ್ಫೋಟ – 14 ಮಂದಿ ಕಾರ್ಮಿಕರು ಸಾವು, 20 ಮಂದಿಗೆ ಗಾಯ

    Andhra | ಫಾರ್ಮಾ ಕಂಪನಿಯಲ್ಲಿ ರಿಯಾಕ್ಟರ್‌ ಸ್ಫೋಟ – 14 ಮಂದಿ ಕಾರ್ಮಿಕರು ಸಾವು, 20 ಮಂದಿಗೆ ಗಾಯ

    ಅಮರಾವತಿ: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ರಿಯಾಕ್ಟರ್‌ ಸ್ಫೋಟ (Reactor Explosion) ಸಂಭವಿಸಿ 14 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, ಸುಮಾರು 20 ಕಾರ್ಮಿಕರು ಗಾಯಗೊಂಡಿರುವ ಘಟನೆ ಆಂಧ್ರ ಪ್ರದೇಶದ (Andhra Pradesh) ಅನಕಪಲ್ಲಿಯಲ್ಲಿ ನಡೆದಿದೆ ಎಂದು ಜಿಲ್ಲಾಧಿಕಾರಿ ವಿಜಯ ಕೃಷ್ಣನ್ ತಿಳಿಸಿದ್ದಾರೆ.

    ಅಚ್ಯುತಪುರಂ ವಿಶೇಷ ಆರ್ಥಿಕ ವಲಯದಲ್ಲಿರುವ ಎಸ್ಸೆಂಟಿಯಾ ಫಾರ್ಮಾ ಕಂಪನಿಯಲ್ಲಿ (Escientia Company) ಸ್ಫೋಟ ಸಂಭವಿಸಿದೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಎನ್‌ಟಿಆರ್‌ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ದಾಖಲಾತಿ ತಿದ್ದುವ ಪರಿಸ್ಥಿತಿ ನಮಗೆ ಬಂದಿಲ್ಲ, ಸಿಎಂ ಪತ್ನಿ ಅವರ ಪತ್ರ ತಿದ್ದುಪಡಿ ಆಗಿಲ್ಲ: ಬೈರತಿ ಸುರೇಶ್‌

    ಕಾರ್ಮಿಕರು ಮಧ್ಯಾಹ್ನ ಊಟ ಮಾಡುತ್ತಿದ್ದ ವೇಳೆ ಸ್ಫೋಟ ಸಂಭವಿಸಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಕಾರ್ಖಾನೆಯಲ್ಲಿ ನಡೆದ ಸ್ಫೋಟದಿಂದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ದಟ್ಟ ಹೊಗೆ ಆವರಿಸಿದೆ. ಘಟನೆ ಕುರಿತ ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಘಟನೆ ನಡೆದ ಕೆಲವೇ ನಿಮಿಷಗಳಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಮತ್ತು ರಕ್ಷಣಾ ಕ್ರಮಗಳನ್ನು ಕೈಗೊಂಡಿದ್ದಾರೆ.

    ಇನ್ನೂ ಅವಘಡ ಸಂಭವಿಸಿದ ವೇಳೆ ಕರ್ಖಾನೆ ಘಟಕದಲ್ಲೇ ಸಿಲುಕಿದ್ದ 13 ಮಂದಿಯನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಎಸ್ಸೆಂಟಿಯಾ ಫಾರ್ಮಾ ಕಂಪನಿಯಲ್ಲಿ ಸುಮಾರು 1,000ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಅಚ್ಯುತಪುರಂ ವಿಶೇಷ ಆರ್ಥಿಕ ವಲಯದಲ್ಲಿರುವ ಅತಿದೊಡ್ಡ ಫಾರ್ಮಾ ಕಂಪನಿಗಳಲ್ಲಿ ಇದು ಸಹ ಒಂದಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: Exclusive | ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್‌ನಲ್ಲಿ ನಟ ದರ್ಶನ್ ಆರೋಪಿ ನಂ.1

    ಇನ್ನೂ ಘಟನೆ ಬಳಿಕ ಕಾರ್ಖಾನೆ ಮುಂದೆ ಜಮಾಯಿಸಿದ ಕಾರ್ಮಿಕರು ಮೃತ ಸಂತ್ರಸ್ತರ ಕುಟುಂಬಗಳಿಗೆ ಹಾಗೂ ಗಾಯಗೊಂಡವರಿಗೆ ಪರಿಹಾರ ನೀಡಬೇಕು ಹಾಗೂ ರಿಯಾಕ್ಟರ್‌ ಸ್ಫೋಟಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ. ಇದನ್ನೂ ಓದಿ: ಕೆಸೆಟ್-2024 ಅರ್ಜಿ ಸಲ್ಲಿಸಲು ಆ.28ರ ವರೆಗೆ ವಿಸ್ತರಣೆ – ಕೆಇಎ

  • ಫಾರ್ಮಾ ಕಂಪನಿಯಲ್ಲಿ ಸ್ಫೋಟ – ಇಬ್ಬರು ಸಾವು

    ಫಾರ್ಮಾ ಕಂಪನಿಯಲ್ಲಿ ಸ್ಫೋಟ – ಇಬ್ಬರು ಸಾವು

    ಗಾಂಧಿನಗರ: ಗಾಮ್ ಜಿಐಡಿಸಿಯಲ್ಲಿನ ಔಷಧೀಯ ಉತ್ಪಾದನಾ ಘಟಕದಲ್ಲಿ ಸ್ಫೋಟಗೊಂಡು ಇಬ್ಬರು ಮೃತಪಟ್ಟ ಘಟನೆ ಗುಜರಾತ್‍ನ (Gujarat) ವಲ್ಸಾದ್‍ನಲ್ಲಿ ನಡೆದಿದೆ.

    ವೆನ್ ಪೆಟ್ರೋಕೆಮ್ ಅಂಡ್ ಫಾರ್ಮಾ (ಇಂಡಿಯಾ) ಪ್ರೈವೇಟ್ ಲಿಮಿಟೆಡ್‍ನಲ್ಲಿ ಈ ಘಟನೆ ನಡೆದಿದೆ. ಘಟನೆಯ ವೇಳೆ ಸ್ಫೋಟದೊಂದಿಗೆ (Blast) ಬೆಂಕಿಯು ಕಾಣಿಸಿಕೊಂಡಿದೆ. ಈ ವೇಳೆ ಕಟ್ಟಡದ ಒಂದು ಭಾಗವು ಕುಸಿದಿದೆ. ಪರಿಣಾಮ ಇಬ್ಬರು ಗಾಯಗೊಂಡಿದ್ದು, ಮತ್ತಿಬ್ಬರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಹಳೆಯ ದ್ವೇಷಕ್ಕೆ ಕತ್ತಿಯಿಂದ ಕಡಿದು ಯುವಕನ ಭೀಕರ ಹತ್ಯೆ

    ಫಾರ್ಮಾ ಕಂಪನಿಯ (Pharma Company) ಸುತ್ತಲೂ ರಾಸಾಯನಿಕ ಘಟಕಗಳಿದ್ದರಿಂದ ಕೆಲ ಕಾಲ ಭೀತಿಯನ್ನು ಸೃಷ್ಟಿಸಿತು. ಅಗ್ನಿಶಾಮಕ ತಂಡಗಳು ಸ್ಥಳಕ್ಕೆ ತೆರಳಿ ಬೆಂಕಿಯನ್ನು ನಿಯಂತ್ರಿಸಲು ಕಾರ್ಯಾಚರಣೆ ಆರಂಭಿಸಿದವು. ಅಗ್ನಿಶಾಮಕ ಮತ್ತು ರಕ್ಷಣಾ ಅಧಿಕಾರಿಗಳು ಬೆಂಕಿಯನ್ನು ಅಕ್ಕಪಕ್ಕದ ಘಟಕಗಳಿಗೆ ಹರಡದಂತೆ ನಿಯಂತ್ರಿಸಿದರು. ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಯಿತು. ಇದನ್ನೂ ಓದಿ: ಮುಳ್ಳುಹಂದಿ ಬೇಟೆಯಾಡಲು ಗುಹೆಗೆ ನುಗ್ಗಿದ್ದ ಇಬ್ಬರು ಉಸಿರುಗಟ್ಟಿ ಸಾವು

  • ವಿಷಕಾರಿ ರಾಸಾಯನಿಕ ಸೋರಿಕೆ ಸಿಬ್ಬಂದಿ ಸಾವು – ಮೂವರು ಅಸ್ವಸ್ಥ

    ವಿಷಕಾರಿ ರಾಸಾಯನಿಕ ಸೋರಿಕೆ ಸಿಬ್ಬಂದಿ ಸಾವು – ಮೂವರು ಅಸ್ವಸ್ಥ

    ರಾಯಚೂರು: ನಗರದ ಹೊರವಲಯದ ವಡ್ಲೂರ್ ಕ್ರಾಸ್ ಬಳಿಯ ಫಾರ್ಮಾ ಕಂಪನಿಯೊಂದರಲ್ಲಿ ವಿಷಕಾರಿ ರಾಸಾಯನಿಕ ಸೋರಿಕೆಯಿಂದ ಓರ್ವ ಸಿಬ್ಬಂದಿ ಸಾವನ್ನಪ್ಪಿದ್ದಾನೆ. ರಾಯಚೂರು ಲ್ಯಾಬರೋಟಿಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ದುರ್ಘಟನೆ ನಡೆದಿದೆ. ಲಕ್ಷ್ಮಣ್ (28) ಕಂಪನಿಯ ಕೆಮಿಸ್ಟ್ ಸಾವನ್ನಪ್ಪಿದ್ದಾರೆ.

    ಘಟನೆಯಲ್ಲಿ ಒಟ್ಟು ನಾಲ್ಕು ಜನ ಅಸ್ವಸ್ಥರಾಗಿ ಒರ್ವ ಸಾವನ್ನಪ್ಪಿದ್ದಾರೆ. ಇನ್ನೊರ್ವನ ಸ್ಥಿತಿ ಗಂಭೀರವಾಗಿದೆ. ಇನ್ನೂ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮರಣೋತ್ತರ ಪರೀಕ್ಷೆಗೆ ಮೃತ ದೇಹವನ್ನ ರಿಮ್ಸ್ ಆಸ್ಪತ್ರೆಯಲ್ಲಿ ಇಡಲಾಗಿದೆ. ಆಸ್ಪತ್ರೆ ಆವರಣದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಐದು ತಿಂಗಳ ಹಿಂದೆ ಲಕ್ಷ್ಮಣ್ ಮದುವೆಯಾಗಿದ್ದರು.

    ಸಿಪಿಪಿ (ಕ್ಲೋರಿನೇಟೆಡ್ ಪಾಲಿಪ್ರೋಪೈಲೇನ್) ರಾಸಾಯನಿಕ ಮಾನವನ ಶ್ವಾಸಕೋಶಕ್ಕೆ ದುಷ್ಪರಿಣಾಮ ಬೀರುತ್ತದೆ. ಕೆಮಿಕಲ್ ಲಕ್ಷ್ಮಣ್ ದೇಹ ಸೇರಿದ್ದರಿಂದ ಉಸಿರಾಟ ತೊಂದರೆಯಾಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನುಳಿದ ಮೂವರು ಪ್ರಜ್ಞೆ ತಪ್ಪಿ ಬಿದ್ದಿದ್ದರು. ಕೂಡಲೇ ರಾಯಚೂರು ರಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ರಾಯಚೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.