Tag: Phone Call

  • ಸಿಎಎ ಬಗ್ಗೆ ಮಾತನಾಡಿದ್ರೆ ಹುಷಾರ್: ಸಚಿವ ಈಶ್ವರಪ್ಪಗೆ ಜೀವ ಬೆದರಿಕೆ ಕರೆ

    ಸಿಎಎ ಬಗ್ಗೆ ಮಾತನಾಡಿದ್ರೆ ಹುಷಾರ್: ಸಚಿವ ಈಶ್ವರಪ್ಪಗೆ ಜೀವ ಬೆದರಿಕೆ ಕರೆ

    ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ವ್ಯಕ್ತಿಯೊಬ್ಬ ಫೋನ್ ಮಾಡಿ ತಮಿಳು ಭಾಷೆಯಲ್ಲಿ ಮಾತನಾಡಿ ಜೀವ ಬೆದರಿಕೆ ಹಾಕಿದ್ದಾನೆ.

    ಸಂವಿಧಾನದ ವಿಧಿ 370, ಪೌರತ್ವ ತಿದ್ದುಪಡೆ ಕಾಯ್ದೆ ಬಗ್ಗೆ ಮತ್ತು ಮುಸ್ಲಿಮರ ವಿರುದ್ಧ ಮಾತನಾಡಿದರೆ ಸರಿ ಇರುವುದಿಲ್ಲ ಎಂದು ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆ ಹಾಕಿದ್ದಾನೆ. ಕರೆ ಬಂದಿರುವ ಬಗ್ಗೆ ಕೆ.ಎಸ್ ಈಶ್ವರಪ್ಪ ಅವರು ಶಿವಮೊಗ್ಗ ಎಸ್‍ಪಿಗೆ ಮಾಹಿತಿ ನೀಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.

    ಸಚಿವರಿಗೆ ಶುಕ್ರವಾರ ಮಧ್ಯಾಹ್ನ ವ್ಯಕ್ತಿಯೊಬ್ಬ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಪರಿಶೀಲನೆ ನಡೆಸಿ, ತನಿಖೆ ಆರಂಭಿಸುತ್ತೇವೆ ಎಂದು ಶಿವಮೊಗ್ಗ ಎಸ್‍ಪಿ ಕೆ.ಎಂ.ಶಾಂತರಾಜು ಅವರು ಸಚಿವರಿಗೆ ಭರವಸೆ ನೀಡಿದ್ದಾರೆ. ಈ ಸಂಬಂಧ ಕೆ.ಎಸ್.ಈಶ್ವರಪ್ಪ ಅವರು ಎಸ್‍ಪಿ ಅವರಿಗೆ ಶನಿವಾರ ಅಥವಾ ಭಾನುವಾರ ಲಿಖಿತ ದೂರು ನೀಡುವ ಸಾಧ್ಯತೆ ಇದೆ ಎಂದು ಸಚಿವರ ಆಪ್ತರೊಬ್ಬರು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

    ಈ ಹಿಂದೆಯೂ ದುಬೈ ಮೂಲದ ವ್ಯಕ್ತಿಯಿಂದ ಕೆ.ಎಸ್.ಈಶ್ವರಪ್ಪ ಅವರಿಗೆ ಜೀವ ಬೆದರಿಕೆ ಕರೆ ಬಂದಿತ್ತು. ಆ ಸಂದರ್ಭದಲ್ಲೂ ಸಚಿವರು ಎಸ್‍ಪಿ ಅವರಿಗೆ ದೂರು ನೀಡಿದ್ದರು.

  • ಸೋನಿಯಾ-ಪವಾರ್ ನಡುವಿನ ಒಂದು ಕಾಲ್‍ನಿಂದ ಶಿವಸೇನೆಗೆ ತಪ್ಪಿತು ಅಧಿಕಾರದ ಪಟ್ಟ

    ಸೋನಿಯಾ-ಪವಾರ್ ನಡುವಿನ ಒಂದು ಕಾಲ್‍ನಿಂದ ಶಿವಸೇನೆಗೆ ತಪ್ಪಿತು ಅಧಿಕಾರದ ಪಟ್ಟ

    ಮುಂಬೈ: ಸರ್ಕಾರ ರಚನೆಗೆ ಭಾರೀ ಉತ್ಸುಕವಾಗಿದ್ದ ಶಿವಸೇನೆಗೆ ಕೇವಲ ಒಂದು ಕಾಲ್‍ನಿಂದ ಭಾರೀ ಹಿನ್ನಡೆಯಾಗಿದೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಎನ್‍ಸಿಪಿ ಮುಖ್ಯಸ್ಥ ಶರತ್ ಪವಾರ್ ಅವರ ಮಧ್ಯೆ ನಡೆದ ಫೋನ್ ಸಂಭಾಷಣೆಯಿಂದಾಗಿ ಶಿವಸೇನೆಯ ಪ್ಲ್ಯಾನ್ ಬುಡಮೇಲಾಗಿದೆ.

    ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಉಳಿವಿಗಾಗಿ ಹಾಗೂ ಸೈದ್ಧಾಂತಿಕ ಹಿನ್ನೆಲೆಯಲ್ಲಿ ಶಿವಸೇನೆಗೆ ಬೆಂಬಲ ನೀಡದಿರಲು ನಿರ್ಧರಿಸಿದ್ದರು. ಆದರೆ ಸರ್ಕಾರ ರಚನೆಗೆ ರಾಜ್ಯಪಾಲರು ಮಂಗಳವಾರ ಸಂಜೆಯವರೆಗೆ ಅಂತಿಮ ಗಡುವು ನೀಡಿದ್ದರು. ಹೀಗಾಗಿ ಸೋನಿಯಾ ಗಾಂಧಿ ಮೃದುಧೋರಣೆ ತಾಳಿ, ಬೆಂಬಲ ನೀಡಲು ಮುಂದಾಗಿದ್ದರು. ಇತ್ತ ಶರದ್ ಪವಾರ್ ಅವರು ಸಂಜೆ ಸೋನಿಯಾ ಗಾಂಧಿಗೆ ಫೋನ್ ಮಾಡಿದ ಪರಿಣಾಮ ಶಿವಸೇನೆಯ ಸರ್ಕಾರ ರಚಿಸುವ ಕನಸು ತಲೆ ಕೆಳಗಾಯಿತು ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಶಿವಸೇನೆಗೆ ಸಂಕಷ್ಟ: 50-50 ಸರ್ಕಾರಕ್ಕೆ ಎನ್‍ಸಿಪಿ ಪಟ್ಟು, ಕಾಂಗ್ರೆಸ್‍ನಿಂದ ಭಾರೀ ಬೇಡಿಕೆ

    ಮಹಾರಾಷ್ಟ್ರ ಕಾಂಗ್ರೆಸ್ ನಾಯಕರಾದ ಸುಶೀಲ್ ಕುಮಾರ್ ಶಿಂಧೆ, ಅಶೋಕ್ ಚವಾನ್, ಪೃಥ್ವಿರಾಜ್ ಚವಾನ್ ಮತ್ತು ಬಾಲಾಸಾಹೇಬ್ ಥೋರತ್ ಅವರು ಶಿವಸೇನೆಗೆ ಬೆಂಬಲ ನೀಡಿ, ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಯೋಚಿಸಿದ್ದರು. ಈ ನಿಟ್ಟಿನಲ್ಲಿ ಎನ್‍ಸಿಪಿ ಜೊತೆಗೆ ಸೇರಿ ಶಿವಸೇನೆಗೆ ಬೆಂಬಲ ನೀಡಲು ಮುಂದಾಗಿದ್ದರು. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ – 3 ಕಾರಣಗಳಿಂದಾಗಿ ರಾಜ್ಯಪಾಲರಿಂದ ಶಿಫಾರಸು

    ಸಂಜೆ ಆಗಿದ್ದೇನು?:
    ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಇದೇ ಮೊದಲ ಬಾರಿಗೆ ಮಂಗಳವಾರ ಸಂಜೆ 5 ಗಂಟೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕರೆ ಮಾಡಿ, ಸರ್ಕಾರ ರಚನೆಗೆ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಆದರೆ ಸೋನಿಯಾ ಗಾಂಧಿ ಪಕ್ಷದ ಮುಖಂಡರ ಜೊತೆಗೆ ಸಮಾಲೋಚನೆ ನಡೆಸಿ, ತಿಳಿಸುತ್ತೇನೆ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.  ಇದನ್ನೂ ಓದಿ: ರಾಷ್ಟ್ರಪತಿ ಆಡಳಿತಕ್ಕೆ ವಿರೋಧ – ಮೈತ್ರಿ ಬಗ್ಗೆ ತುಟಿ ಬಿಚ್ಚದ ಎನ್‍ಸಿಪಿ, ಕಾಂಗ್ರೆಸ್

    ಉದ್ಧವ್ ಠಾಕ್ರೆ ಅವರ ಬೆನ್ನಲ್ಲೇ ಸಂಜೆ 6 ಗಂಟೆಗೆ ಕರೆ ಮಾಡಿದ ಶರತ್ ಪವಾರ್ ಅವರು ಶಿವಸೇನೆಗೆ ಬೆಂಬಲ ನೀಡಲು ಹಿಂದೇಟು ಹಾಕಿದ್ದಾರೆ. ನಾವು ಈಗ ಬೆಂಬಲ ನೀಡುವುದು ಸರಿಯಲ್ಲ. ಅಧಿಕಾರ ಹಂಚಿಕೆಯ ಹಲವು ಅಂಶಗಳ ಬಗ್ಗೆ ಇನ್ನೂ ಮಾತುಕತೆ ನಡೆಸಬೇಕಿದೆ. ಹೀಗಾಗಿ ಶಿವಸೇನೆಗೆ ಬೆಂಬಲ ಪತ್ರವನ್ನು ನೀಡಿಲ್ಲ ಎಂದು ಸೋನಿಯಾ ಗಾಂಧಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

    ಬಹುಮುಖ್ಯವಾಗಿ ನಮ್ಮ ಪಕ್ಷಕ್ಕೆ ಶಿವಸೇನೆಗಿಂತ ಎರಡು ಸ್ಥಾನ ಕಡಿಮೆ ಇದೆ. ಹಾಗಾದರೆ ಮುಖ್ಯಮಂತ್ರಿ ಹುದ್ದೆಯನ್ನು ಶಿವಸೇನೆಗೆ ಬಿಟ್ಟುಕೊಡಬೇಕೆ ಎಂದು ಪವಾರ್, ಸೋನಿಯಾ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ. ಶರದ್ ಪವಾರ್ ಅವರ ಮಾತಿನಿಂದ ಕಾಂಗ್ರೆಸ್ ನಾಯಕಿ ಆಶ್ಚರ್ಯಚಕಿತರಾಗಿದ್ದಾರೆ. ಈ ಎಲ್ಲ ಬೆಳವಣಿಗೆಯಿಂದಾಗಿ ಶಿವಸೇನೆಗೆ ಬೆಂಬಲ ನೀಡಲು ಎನ್‍ಸಿಪಿ ಹಿಂದೇಟು ಹಾಕಿದೆ ಎಂದು ವರದಿಯಾಗಿದೆ.

    ಕಾಂಗ್ರೆಸ್ ವಿರುದ್ಧ ಅಸಮಾಧಾನ ಹೊರ ಹಾಕಿದ ಎನ್‍ಸಿಪಿ ಮುಖಂಡ ಅಜಿತ್ ಪವಾರ್, ಸೋಮವಾರ ಬೆಳಗ್ಗೆ 10ರಿಂದ ಸಂಜೆ 7:30ಕ್ಕೆ ಶರದ್ ಪವಾರ್, ಪ್ರಫುಲ್ ಪಟೇಲ್ ಸೇರಿದಂತೆ ನಮ್ಮ ನಾಯಕರು ಬೆಂಬಲ ಪತ್ರಕ್ಕಾಗಿ ಕಾಯುತ್ತಿದ್ದರು. ಶಿವಸೇನೆ ಮಂಗಳವಾರ ಸಂಜೆ 7ರೊಳಗೆ ಪತ್ರವನ್ನು ಸಲ್ಲಿಸಬೇಕಾಗಿತ್ತು. ಆದರೆ ಕಾಂಗ್ರೆಸ್ ತನ್ನ ಬೆಂಬಲ ಪತ್ರವನ್ನು ಕಳುಹಿಸಲಿಲ್ಲ. ನಾವು ಮಾತ್ರ ಬೆಂಬಲ ಪತ್ರ ಹೇಗೆ ನೀಡಬೇಕು ಎಂದು ಪ್ರಶ್ನಿಸಿದ್ದಾರೆ.

  • ಕಮಲ ಬಿಟ್ಟು ಕೈ ಸೇರಲಿದ್ದಾರಾ ಕತ್ತಿ? – ಸಿದ್ದರಾಮಯ್ಯ ಜೊತೆ ಚರ್ಚೆ

    ಕಮಲ ಬಿಟ್ಟು ಕೈ ಸೇರಲಿದ್ದಾರಾ ಕತ್ತಿ? – ಸಿದ್ದರಾಮಯ್ಯ ಜೊತೆ ಚರ್ಚೆ

    ಬೆಂಗಳೂರು: ಸಚಿವ ಸ್ಥಾನ ಕೈತಪ್ಪಿದ್ದ ಬೆನ್ನಲ್ಲೇ ಬಿಜೆಪಿ ಶಾಸಕ ಉಮೇಶ್ ಕತ್ತಿ ಅವರು ಬುಧವಾರ ರಾತ್ರಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೊತೆ ಕರೆ ಮಾಡಿ ಮಾತನಾಡಿದ್ದಾರೆ. ಕತ್ತಿಯವರ ಈ ನಡೆ ಸದ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

    ಸಚಿವ ಸಂಪುಟ ರಚನೆಯಾದ ಬೆನ್ನಲ್ಲೆ ಬಿಜೆಪಿ ವಲಯದಲ್ಲಿ ಸಚಿವ ಸ್ಥಾನ ಸಿಗದ ನಾಯಕರು ಬಂಡಾಯ ಎದ್ದಿದ್ದಾರೆ. ಉಮೇಶ್ ಕತ್ತಿ, ಬಾಲಚಂದ್ರ ಜಾರಕಿಹೊಳಿ, ತಿಪ್ಪಾರೆಡ್ಡಿ ಸೇರಿ ಇತರೇ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ನಡುವೆ ಉಮೇಶ್ ಕತ್ತಿ ಅವರು ಸಿದ್ದರಾಮಯ್ಯ ಅವರ ಜೊತೆ ಫೋನಿನಲ್ಲಿ ಮಾತನಾಡಿರುವುದು ಸಾಕಷ್ಟು ಪ್ರಶ್ನೆ ಹುಟ್ಟು ಹಾಕಿದೆ.

    ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದ ಉಮೇಶ್ ಕತ್ತಿ ಅವರು ಬಿಜೆಪಿ ನಾಯಕರ ಮೇಲೆ ಒತ್ತಡ ತರಲು ಸಿದ್ದರಾಮಯ್ಯ ಜೊತೆಗೆ ಮಾತನಾಡಿದರಾ? ಅವರನ್ನು ಭೇಟಿ ಮಾಡಲು ಹೋಗುತ್ತಾರಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಮೂಲಗಳ ಪ್ರಕಾರ ಕರೆಯಲ್ಲಿ ಉಮೇಶ್ ಕತ್ತಿಯವರು ಸಿದ್ದರಾಮಯ್ಯ ಅವರನ್ನು ಭೇಟಿಯಾಗುವ ಬಗ್ಗೆ ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರು ಬಾದಾಮಿಯಿಂದ ಮರಳಿದ ಬಳಿಕ ಅವರನ್ನು ಕಚೇರಿಯಲ್ಲಿ ಭೇಟಿ ಆಗುತ್ತಾರೆ ಎನ್ನಲಾಗಿತ್ತು.

    ಆದರೆ ಈ ಬಗ್ಗೆ ಉಮೇಶ್ ಕತ್ತಿ ಪಬ್ಲಿಕ್ ಟಿವಿ ಜೊತೆ ಕರೆಯಲ್ಲಿ ಮಾತನಾಡಿ, ನಾನು ಸಿದ್ದರಾಮಯ್ಯ ಫೋನಿನಲ್ಲಿ ಮಾತನಾಡಿದ್ದು ನಿಜ, ಸಚಿವ ಸ್ಥಾನದ ಬಗ್ಗೆ ತಿಳಿದು ಅವರು ಕರೆ ಮಾಡಿದ್ದರು. ನಾನು, ಸಿದ್ದರಾಮಯ್ಯ, ಬಸವರಾಜ ಹೊರಟ್ಟಿ ಎಲ್ಲಾ ಬಹಳ ವರ್ಷದಿಂದ ಸ್ನೇಹಿತರು, ಆದ್ದರಿಂದ ಮಾತನಾಡಿದ್ದೇವೆ ಅಷ್ಟೇ. ನಾನು ಬಿಜೆಪಿ ಬಿಟ್ಟು ಹೋಗಲ್ಲ ಎಂದು ಹೇಳಿದ್ದಾರೆ.

    ನಿನ್ನೆ ಸಿದ್ದರಾಮಯ್ಯ ಅವರು ಬಾದಾಮಿಯಿಂದ ಕರೆ ಮಾಡಿದ್ದರು. ನಾನು ಯಾರ ವೈರಿನೂ ಅಲ್ಲ, ಮಿತ್ರನೂ ಅಲ್ಲ. ನಾನು ಬಿಜೆಪಿಯವನು, ಬಿಜೆಪಿಯಲ್ಲೇ ಇರುತ್ತೇನೆ. ಸಿದ್ದರಾಮಯ್ಯ ಅವರು ಕಾಂಗ್ರೆಸ್ಸಿನಲ್ಲೇ ಇರಲಿ. 20 ವರ್ಷಗಳಿಂದ ನಾವಿಬ್ಬರು ಸ್ನೇಹಿತರು. ಜನತಾ ದಳದಲ್ಲಿ ಇದ್ದಾಗ ಇಬ್ಬರೂ ಸೇರಿ ಕೆಲಸ ಮಾಡಿದ್ದೇವೆ. ಸ್ನೇಹಿತರಾಗಿದ್ದರಿಂದ ನಿನ್ನೆ ಸಿದ್ದರಾಮಯ್ಯ ಅವರು ನನಗೆ ಫೋನ್ ಮಾಡಿದ್ದರು. ಸಚಿವ ಸ್ಥಾನದ ಬಗ್ಗೆ ಕೇಳಿದರು, ಆಗ ನನಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂದೆ ಅಷ್ಟೇ. ಬಿಡುವಿದ್ದರೆ ಇಬ್ಬರು ಭೇಟಿಯಾಗುತ್ತೇವೆ. ಹಾಗಂತಾ ನಾನು ಬಿಜೆಪಿ ಬಿಟ್ಟು ಹೋಗಲ್ಲ. ಇಲ್ಲೇ ಇರುತ್ತೇನೆ. ಮಾಧ್ಯಮಗಳಲ್ಲಿ ಬೇಕಾದ ಹಾಗೆ ಸುದ್ದಿ ಬರುತ್ತಿದೆ ನಾನು ನೋಡುತ್ತಿದ್ದೇನೆ. ಆದರೆ ನಾನು ಬಿಜೆಪಿ ಬಿಡಲ್ಲ. ಈಗ ಕೇವಲ 17 ಮಂದಿಗೆ ಮಾತ್ರ ಸಚಿವ ಸ್ಥಾನ ಸಿಕ್ಕಿದೆ. ಉಳಿದ ಸ್ಥಾನಗಳೂ ಇನ್ನೂ ನಿರ್ಧಾರವಾಗಿಲ್ಲ, ನೋಡೋಣ ಎಂದು ಸ್ಪಷ್ಟಪಡಿಸಿದರು.

  • ಗೆಳೆಯ ಫೋನ್ ಕಾಲ್ ರಿಸೀವ್ ಮಾಡದ್ದಕ್ಕೆ ನೇಣಿಗೆ ಶರಣಾದ ವಿದ್ಯಾರ್ಥಿನಿ!

    ಗೆಳೆಯ ಫೋನ್ ಕಾಲ್ ರಿಸೀವ್ ಮಾಡದ್ದಕ್ಕೆ ನೇಣಿಗೆ ಶರಣಾದ ವಿದ್ಯಾರ್ಥಿನಿ!

    ನೋಯ್ಡಾ: ಕಾನೂನು ಪದವಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಗೆಳೆಯ ತನ್ನ ಫೋನ್ ಕರೆಗೆ ಸ್ಪಂದಿಸಿಲ್ಲ ಎಂದು ವಸತಿ ನಿಲಯದಲ್ಲಿ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ.

    ಹರಿದ್ವಾರದ ಕಂಖಾಲ್ ಮೂಲದ ಸ್ವಾತಿ ಸಾಹ್ನಿ(21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಸ್ವಾತಿ ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಕಾನೂನು ಪದವಿ ಓದುತ್ತಿದ್ದಳು. ನೋಯ್ಡಾದ ವಸತಿ ನಿಲಯವೊಂದರಲ್ಲಿ ಗೆಳತಿ ಜೊತೆ ವಾಸವಿದ್ದ ಈಕೆ ಭಾನುವಾರ ರಾತ್ರಿ ಕೊಠಡಿಯಲ್ಲಿ ಯಾರು ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ಹೊರಗೆ ತೆರೆಳಿದ್ದ ಸ್ವಾತಿಯ ಗೆಳತಿ ವಾಪಾಸ್ಸಾದಾಗ ಈ ಘಟನೆ ಬೆಳಕಿಗೆ ಬಂದಿದೆ. ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಸತಿ ನಿಲಯದಲ್ಲಿದ್ದ ಇತರೇ ವಿದ್ಯಾರ್ಥಿನಿಯರನ್ನು ವಿಚಾರಣೆ ಮಾಡಿದ್ದಾರೆ. ಆಗ ಸ್ವಾತಿ ರಾತ್ರಿ ವೇಳೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವಕನ ಜೊತೆ ಜಗಳವಾಡುತ್ತಿದ್ದಳು. ಬಳಿಕ ಆತ ಫೋನ್ ಕರೆಗೆ ಸ್ಪಂದಿಸುತ್ತಿಲ್ಲ ಎಂದು ಅಳುತ್ತಿದ್ದಳು ಎಂದು ತಿಳಿಸಿದ್ದಾರೆ.

    ನಂತರ ಪೊಲೀಸರು ವಿದ್ಯಾರ್ಥಿನಿಯ ಮೊಬೈಲ್ ಪರಿಶೀಲಿಸಿದ್ದಾರೆ. ಆಗ ವಿದ್ಯಾರ್ಥಿನಿ ಹಲವು ಬಾರಿ ಯುವಕನಿಗೆ ಕರೆ ಮಾಡಿರುವ ಮಾಹಿತಿ ದೊರಕಿದೆ. ಈ ಕುರಿತು ವಿದ್ಯಾರ್ಥಿನಿಯ ಕುಟುಂಬಸ್ಥರು ಯಾವುದೇ ದೂರು ನೀಡದಿದ್ದರೂ ಸ್ವಯಂ ಪ್ರೇರಿತ ದೂರನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಮರಣೋತ್ತರ ಪರೀಕ್ಷೆ ಮುಗಿದ ಮೇಲೆ ವಿದ್ಯಾರ್ಥಿನಿಯ ಮೃತದೇಹವನ್ನು ಆಕೆಯ ಕುಟುಂಬಕ್ಕೆ ಒಪ್ಪಿಸಲಾಗುತ್ತದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • 1.5 ಕೋಟಿ ರೂ. ಡೀಲಿಂಗ್ – ಶೃತಿ ಹರಿಹರನ್ ಸ್ಪಷ್ಟನೆ

    1.5 ಕೋಟಿ ರೂ. ಡೀಲಿಂಗ್ – ಶೃತಿ ಹರಿಹರನ್ ಸ್ಪಷ್ಟನೆ

    ಬೆಂಗಳೂರು: ನನ್ನ ಆಪ್ತರು ಯಾರು, ಯಾರಿಗೂ ಕರೆ ಮಾಡಿಲ್ಲ. ನನ್ನ ಆತ್ಮೀಯ ಗೆಳೆಯ ರಾಮ್ ಕರೆ ಮಾಡಿ, ದುಡ್ಡಿಗೆ ಡಿಮ್ಯಾಂಡ್ ಮಾಡಿಲ್ಲ ಎಂದು ನಟಿ ಶೃತಿ ಹರಿಹರನ್ ಸ್ಪಷ್ಟನೆ ನೀಡಿದ್ದಾರೆ.

    ಅರ್ಜುನ್ ಸರ್ಜಾ ಮ್ಯಾನೇಜರ್ ಶಿವಾರ್ಜುನ್ ಅವರಿಗೆ ಅನಾಮಿಕರೊಬ್ಬ ಕರೆ ಮಾಡಿರುವ ವಿಚಾರವಾಗಿ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ಶೃತಿ ಹರಿಹರನ್, ಇದು ಸುಳ್ಳು ಆರೋಪ. ನಮ್ಮ ಅಪ್ಪ, ಅಮ್ಮ, ಅಜ್ಜಿ, ತಾತ ಹಾಗೂ ಸಂಬಂಧಿಕರನ್ನು ನಾನು ಕರೆದುಕೊಂಡು ಬಂದಿಲ್ಲ. ನಾನು ಏಕಾಂಗಿಯಾಗಿ ಹೋರಾಟ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಕುಟುಂಬದವರ ಅಥವಾ ಸ್ನೇಹಿತರ ಸಹಾಯ ಪಡೆಯುವುದಿಲ್ಲ. ಅಷ್ಟೇ ಅಲ್ಲದೆ ನನ್ನ ಆಪ್ತ ರಾಮ್ ಈ ವಿಚಾರದಲ್ಲಿ ತಲೆ ಹಾಕಿಲ್ಲ ಎಂದು ತಿಳಿಸಿದ್ದಾರೆ. ಇದನ್ನು ಓದಿ: ಶೃತಿ ಪರ ಬ್ಯಾಟ್ ಬೀಸಿ ಈಗ ಉಲ್ಟಾ ಹೊಡೆದ ನಟ ಪ್ರಕಾಶ್ ರೈ

    ಆಗಿದ್ದೇನು?:
    ಮೀ ಟೂ ಆರೋಪ ಮಾಡಿದ ಮರುದಿನವೇ ಅನಾಮಿಕರೊಬ್ಬರು ನಟ ಅರ್ಜುನ್ ಸರ್ಜಾ ಮ್ಯಾನೇಜರ್ ಶಿವಾರ್ಜುನ್ ಅವರಿಗೆ ಕರೆ ಮಾಡಿದ್ದಾನೆ. ನಾನು ಶೃತಿ ಹರಿಹರನ್ ಆಪ್ತ ಎಂದು ಹೇಳಿಕೊಂಡ ವ್ಯಕ್ತಿ, ಆರೋಪವನ್ನು ಮುಚ್ಚಿಹಾಕಲು ಹಾಗೂ ಸಂಧಾನ ಮಾಡಿಕೊಳ್ಳಲು ನಮಗೆ 1.5 ಕೋಟಿ ರೂ. ನೀಡಬೇಕು ಅಂತಾ ಬೇಡಿಕೆ ಇಟ್ಟಿದ್ದಾನೆ ಎಂದು ಶಿವಾರ್ಜುನ್ ತಿಳಿಸಿದ್ದರು. ಇದನ್ನು ಓದಿ: ಚೇತನ್ ಫೈರ್ ಸಂಸ್ಥೆಯಿಂದ ಪ್ರಿಯಾಂಕ ಉಪೇಂದ್ರ ಎಕ್ಸಿಟ್!

    ಕರೆ ಮಾಡಿದ ವ್ಯಕ್ತಿ ಯಾವುದೇ ಪರಿಚಯ ಹೇಳಿಕೊಳ್ಳದೇ ಮಾತಿಗೆ ಇಳಿದಿದ್ದಾನೆ. ತಮ್ಮ ಬೇಡಿಕೆ ತಿಳಿಸುತ್ತಿದ್ದಂತೆ ಫೋನ್ ಕಟ್ ಮಾಡಿದ್ದ. ಇಬ್ಬರ ಆರೋಪ ಪ್ರತ್ಯಾರೋಪದ ಲಾಭ ಪಡೆಯಲು ಮೂರನೇ ವ್ಯಕ್ತಿ ಈ ರೀತಿ ಕರೆ ಮಾಡಿರಬಹುದಾ ಎನ್ನುವ ಶಂಕೆ ವ್ಯಕ್ತವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅರ್ಜುನ್ ಸರ್ಜಾ- ಶೃತಿ ಹರಿಹರನ್ ಸಂಧಾನಕ್ಕೆ 1.5 ಕೋಟಿ ರೂ. ಬೇಡಿಕೆ!

    ಅರ್ಜುನ್ ಸರ್ಜಾ- ಶೃತಿ ಹರಿಹರನ್ ಸಂಧಾನಕ್ಕೆ 1.5 ಕೋಟಿ ರೂ. ಬೇಡಿಕೆ!

    – ಬೇಳೆ ಬೇಯಿಸಿಕೊಳ್ಳಲು ಮುಂದಾದ ಮೂರನೇ ವ್ಯಕ್ತಿ
    – ಅರ್ಜುನ್ ಸರ್ಜಾ ಮ್ಯಾನೇಜರ್ ಗೆ ಕರೆ ಮಾಡಿ ಬೇಡಿಕೆ

    ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಭಾರೀ ಚರ್ಚೆಗೆ ಕಾರವಾಗಿದ್ದ ಶೃತಿ ಹರಿಹರನ್ ಮೀಟೂ ಆರೋಪ ಹೊಸ ತಿರುವುದು ಪಡೆದುಕೊಂಡಿದೆ. ಸಂಧಾನ ನೆಪದಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಕರೆ ಮಾಡಿ 1.5 ಕೋಟಿ ರೂ. ಬೇಡಿಕೆ ಇಟ್ಟಿದ್ದಾನೆ.

    ಮೀ ಟೂ ಆರೋಪ ಮಾಡಿದ ಮರುದಿನವೇ ಅನಾಮಿಕರೊಬ್ಬರು ನಟ ಅರ್ಜುನ್ ಸರ್ಜಾ ಮ್ಯಾನೇಜರ್ ಶಿವಾರ್ಜುನ್ ಅವರಿಗೆ ಕರೆ ಮಾಡಿದ್ದಾನೆ. ನಾನು ಶೃತಿ ಹರಿಹರನ್ ಆಪ್ತ ಎಂದು ಹೇಳಿಕೊಂಡ ವ್ಯಕ್ತಿ, ಆರೋಪವನ್ನು ಮುಚ್ಚಿಹಾಕಲು ಹಾಗೂ ಸಂಧಾನ ಮಾಡಿಕೊಳ್ಳಲು ನಮಗೆ 1.5 ಕೋಟಿ ರೂ. ನೀಡಬೇಕು ಅಂತಾ ಬೇಡಿಕೆ ಇಟ್ಟಿದ್ದಾನೆ ಎಂದು ಶಿವಾರ್ಜುನ್ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

    ಕರೆ ಮಾಡಿದ ವ್ಯಕ್ತಿ ಯಾವುದೇ ಪರಿಚಯ ಹೇಳಿಕೊಳ್ಳದೆ, ಮಾತಿಗೆ ಇಳಿದಿದ್ದಾನೆ. ತಮ್ಮ ಬೇಡಿಕೆ ತಿಳಿಸುತ್ತಿದ್ದಂತೆ ಫೋನ್ ಕಟ್ ಮಾಡಿದ್ದಾನೆ. ಇಬ್ಬರ ಆರೋಪ ಪ್ರತ್ಯಾರೋಪದ ಲಾಭ ಪಡೆಯಲು ಮೂರನೇ ವ್ಯಕ್ತಿ ಈ ರೀತಿ ಕರೆ ಮಾಡಿರಬಹುದಾ ಎನ್ನುವ ಶಂಕೆ ವ್ಯಕ್ತವಾಗಿದೆ. ಇದನ್ನು ಓದಿ: ಶೃತಿ ಪರ ಬ್ಯಾಟ್ ಬೀಸಿ ಈಗ ಉಲ್ಟಾ ಹೊಡೆದ ನಟ ಪ್ರಕಾಶ್ ರೈ

    ಏನಿದು ಪ್ರಕರಣ?:
    ಮ್ಯಾಗಜಿನ್‍ವೊಂದರ ಸಂದರ್ಶನದ ವೇಳೆ ನಟ ಅರ್ಜುನ್ ವಿರುದ್ಧ ಆರೋಪ ಮಾಡಿದ ಶೃತಿ ಹರಿಹರನ್, ವಿಸ್ಮಯ ಚಿತ್ರೀಕರಣದ ವೇಳೆ ತನ್ನ ಮೇಲಾದ ಲೈಂಗಿಕ ಕಿರುಕುಳವಾದ ಅನುಭವವನ್ನು ಹೇಳಿಕೊಂಡಿದ್ದರು. ಕಳೆದ ವರ್ಷ `ವಿಸ್ಮಯ’ ಚಿತ್ರದಲ್ಲಿ ನಾನು ಅರ್ಜುನ್ ಸರ್ಜಾ ಅವರ ಹೆಂಡತಿಯಾಗಿ ನಟಿಸುತ್ತಿದ್ದೆ, ಅದರ ಪ್ರ್ಯಾಕ್ಟೀಸ್ ಮಾಡುತ್ತಿದ್ದೆವು. ಆಗ ಸರ್ಜಾ “ಇನ್ನೊಂಚೂರು ಹೀಗೆ ಪ್ರಾಕ್ಟೀಸ್ ಮಾಡಬಹುದಲ್ವಾ?” ಅಂತ ಹೇಳಿ ಅವರು ನನ್ನನ್ನು ಜೋರಾಗಿ ತಬ್ಬಿಕೊಂಡರು. ಅವರ ಆ ಅಪ್ಪುಗೆಯಿಂದ ಒಮ್ಮೆಲೆ ನಾನು ತಬ್ಬಿಬ್ಬಾಗಿದ್ದು, ಆ ವರ್ತನೆ ತುಂಬಾನೇ ಅಸಹ್ಯವಾಗಿತ್ತು. ಇದರಿಂದ ನನಗೆ ಇರಿಸು ಮುರುಸು ಉಂಟಾಗಿದ್ದು, ಕೂಡಲೇ ನಿರ್ದೇಶಕರ ಬಳಿ ತೆರಳಿ “ಇನ್ನು ಮುಂದೆ ನಾನು ರಿಹರ್ಸಲ್ ಗೆ ಬರಲ್ಲ, ಬರೀ ಶೂಟಿಂಗ್ ಗಷ್ಟೇ ಕರೆಯಿರಿ” ಅಂತ ಹೇಳಿ ಬಂದುಬಿಟ್ಟೆ. ಆ ಬಳಿಕ ನಾನು ಬರೀ ಶೂಟಿಂಗ್ ಗೆ ಮಾತ್ರ ಹೋಗಿ ಬರುತ್ತಿದ್ದೆ ಅಂತ ಶೃತಿ ಹೇಳಿದ್ದರು. ಇದನ್ನು ಓದಿ: ಚೇತನ್ ಫೈರ್ ಸಂಸ್ಥೆಯಿಂದ ಪ್ರಿಯಾಂಕ ಉಪೇಂದ್ರ ಎಕ್ಸಿಟ್!

    ನಟಿ ಶೃತಿ ಹರಿಹರನ್ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದ್ದು, ಸಾಂಡಲ್‍ವುಡ್ ಹಿರಿಯ ಕಲಾವಿದರು ಅರ್ಜುನ್ ಸರ್ಜಾ ಅವರ ಬೆಂಬಲಕ್ಕೆ ನಿಂತಿದ್ದಾರೆ. ಇತ್ತ ನಟ ಚೇತನ್ ಶೃತಿ ಹರಿಹರನ್ ಬೆಂಬಲಕ್ಕೆ ನಿಂತು ಕನ್ನಡ ಚಿತ್ರರಂಗದ ವಾಣಿಜ್ಯ ಮಂಡಳಿ ಕೆಂಗಣ್ಣಿಗೆ ಗುರಿಯಾಗಿದ್ದರು. ಅಷ್ಟೇ ಅಲ್ಲದೆ ಚೇತನ್ ವಿರುದ್ಧ ಧ್ರುವಾ ಸರ್ಜಾ ಕೂಡ ಕಿಡಿಕಾರಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಒಂದು ಫೋನ್ ಕಾಲ್‍ಗೆ ಸಿದ್ದರಾಮಯ್ಯ ಕೂಲ್? – ಇಲ್ಲಿದೆ ಇನ್‍ಸೈಡ್ ಸ್ಟೋರಿ

    ಒಂದು ಫೋನ್ ಕಾಲ್‍ಗೆ ಸಿದ್ದರಾಮಯ್ಯ ಕೂಲ್? – ಇಲ್ಲಿದೆ ಇನ್‍ಸೈಡ್ ಸ್ಟೋರಿ

    ಬೆಂಗಳೂರು: ಸಮ್ಮಿಶ್ರ ಸರ್ಕಾರದ ವಿರುದ್ಧ ರೆಬೆಲ್ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ತಾಳ್ಮೆಯಿಂದ ಇರುವಂತೆ ಮಾಡಲು ಹೈಕಮಾಂಡ್ ಹಿರಿಯ ನಾಯಕ, ಸೋನಿಯಾ ಗಾಂಧಿ ಆಪ್ತ ಕಾರ್ಯದರ್ಶಿ ಅಹಮದ್ ಪಟೇಲ್ ಅವರಿಂದ ಕರೆ ಮಾಡಿಸಿ ಸಮಾಧಾನ ಪಡಿಸುವ ಯತ್ನ ನಡೆಸಿದೆ.

    ಈ ಹಿಂದೆ ಕಾಂಗ್ರೆಸ್ ಹೈಕಮಾಂಡ್ ಸೋನಿಯಾ ಅವರಿಗೆ ಸಿದ್ದರಾಮಯ್ಯ ಅವರ ನೇರ ನುಡಿಯ ಬಗ್ಗೆ ಪರಿಚಯಿಸಿದ್ದ ಅಹಮದ್ ಪಾಟೇಲ್ ಅವರೇ ಸಿದ್ದರಾಮಯ್ಯ ಅವರನ್ನ ತಾಳ್ಮೆ ವಹಿಸುವಂತೆ ಮನವಿ ಮಾಡಿದ್ದಾರೆ. ಬುಧವಾರ ರಾತ್ರಿ ಸಿದ್ದರಾಮಯ್ಯ ಅವರಿಗೆ ಕರೆ ಮಾಡಿದ್ದ ಅಹಮದ್ ಪಾಟೇಲ್ ಅವರು 7 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿದೆ.

    ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದ ಅಹಮದ್ ಪಟೇಲ್ ಅವರು, ಮೈತ್ರಿ ಸರ್ಕಾರ ವಿರುದ್ಧ ಸಿಟ್ಟಾಗಿರುವ ಕುರಿತು ಪ್ರಶ್ನೆ ಮಾಡಿದ್ದಾರೆ. ಪಟೇಲ್ ಅವರ ಮಾತಿಗೆ ನೇರವಾಗಿ ಉತ್ತರಿಸಿರುವ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನನಗೆ ಎಲ್ಲವನ್ನು ಕೊಟ್ಟಿದೆ. ಅದನ್ನು ನಾನು ಮರೆಯಲ್ಲ, ನನಗೆ ಇಷ್ಟ ಇಲ್ಲದಿದ್ದರೂ ಹೈಕಮಾಂಡ್‍ಗೆ ಗೌರವ ಕೊಟ್ಟು ಮೈತ್ರಿ ಸರ್ಕಾರಕ್ಕೆ ಒಪ್ಪಿದ್ದು. ದೇವೇಗೌಡರು ತಮ್ಮ ಅಧಿಕಾರಕ್ಕಾಗಿ ನಮ್ಮನ್ನು ಮುಗಿಸಿಬಿಡುತ್ತಾರೆ. ಕಾಂಗ್ರೆಸ್ ನ ದುಸ್ಥಿತಿ ಲಾಭ ಪಡೆದುಕೊಂಡು ದೇವೇಗೌಡರು ಈ ರೀತಿ ನಡೆಸುತ್ತಿದ್ದಾರೆ. ಇದರಿಂದ ನನಗಷ್ಟೇ ಅಲ್ಲ, ಪಕ್ಷದ ಹಲವು ನಾಯಕರು, ಶಾಸಕರಿಗೆ ತೊಂದರೆಯಾಗುತ್ತಿದೆ. ಇದರ ಅಪಾಯವನ್ನೇ ಅರಿತು ನಾನು ಹೆಜ್ಜೆ ಇಡುತ್ತಿದ್ದೇನೆ ಅಷ್ಟೇ ಎಂದು ತನ್ನ ನೋವನ್ನು ತೋಡಿಕೊಂಡಿದ್ದಾರೆ. ಇದನ್ನು ಓದಿ: ಸಿದ್ದರಾಮಯ್ಯ ವಿರುದ್ಧ ದೂರು ನೀಡಿ ಕಾಂಗ್ರೆಸ್ಸಿಗೆ 3 ಷರತ್ತು ವಿಧಿಸಿದ ದೇವೇಗೌಡರು!

    ಕಾಂಗ್ರೆಸ್ ನಾಯಕರಿಂದಲೂ ದೂರು: ಪಕ್ಷದ ಹಲವು ನಾಯಕರು ಕೂಡ ನಿಮ್ಮ ವಿರುದ್ಧ ದೂರು ನೀಡುತ್ತಿದ್ದಾರೆ ಎಂಬ ಪಟೇಲರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಅವರು, ಆ ರೀತಿ ಯಾವುದು ಇಲ್ಲ. ದೇವೇಗೌಡರ ಜೊತೆಗೆ ಪರಮೇಶ್ವರ್ ಕೂಡ ಸೇರಿಕೊಂಡು ನಮ್ಮನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇದರಿಂದ ಸರ್ಕಾರಕ್ಕೆ ಏನು ಅಪಾಯ ಆಗಲ್ಲ, ಆದರೆ ಕೆಲ ವಿಚಾರಗಳಲ್ಲಿ ಕಂಟ್ರೋಲ್ ನಲ್ಲಿ ಇಡಬೇಕು ಎಂದಿದ್ದಾರೆ. ಇದನ್ನು ಓದಿ: ಸಿದ್ದರಾಮಯ್ಯ ಹೇಳಿಕೆಯಿಂದ ಸರ್ಕಾರದ ಮೇಲೆ ಪರಿಣಾಮವಿಲ್ಲ – ಮಾಜಿ ಸಿಎಂಗೆ ಡಿಕೆಶಿ ನೇರ ಟಾಂಗ್

    ಸದ್ಯ ಸಿದ್ದರಾಮಯ್ಯ ಅವರ ಮಾತನ್ನು ಹೈಕಮಾಂಡ್ ಗಮನಕ್ಕೆ ತರುವ ಕುರಿತು ಅಶ್ವಾಸನೆ ನೀಡಿರುವ ಅಹಮದ್ ಪಟೇಲ್ ಮುಂದಿನ ದಿನಗಳಲ್ಲಿ ಸಮಾಧಾನದಿಂದ ಮುಂದುವರೆಯಿರಿ ಎಂದು ಹೇಳಿದ್ದಾರೆ. ಕೇಂದ್ರ ನಾಯಕರ ಮಧ್ಯ ಪ್ರವೇಶದ ಬಳಿಕ ಸಿದ್ದರಾಮಯ್ಯ ಅವರ ಅಸಮಾಧಾನ ಕೊನೆಗೊಳ್ಳುತ್ತಾ ಎಂಬುವುದನ್ನು ಕಾದು ನೋಡಬೇಕಿದೆ. ಇದನ್ನು ಓದಿ: ಸಮ್ಮಿಶ್ರ ಸರ್ಕಾರದ ಮೇಲೆ ಅಹಿಂದ ಅಸ್ತ್ರ – ಆಪ್ತರೊಂದಿಗೆ ಸಿದ್ದರಾಮಯ್ಯ ಸಭೆ

  • ಒಂದು ಕಾಲ್, ಒಂದು ಡೋಸ್, ಒಂದು ಒಪ್ಪಂದ- ಚೆಕ್ ಕೊಟ್ಟು ಗೆದ್ದ ಎಚ್‍ಡಿಡಿ

    ಒಂದು ಕಾಲ್, ಒಂದು ಡೋಸ್, ಒಂದು ಒಪ್ಪಂದ- ಚೆಕ್ ಕೊಟ್ಟು ಗೆದ್ದ ಎಚ್‍ಡಿಡಿ

    ಬೆಂಗಳೂರು: ಮೈತ್ರಿ ಸರ್ಕಾರದ ಚದುರಂಗದಾಟದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಚೆಕ್‍ಮೇಟ್ ಕೊಟ್ಟು ಜೆಡಿಎಸ್‍ಗೆ ಖಾತೆ ಸಿಗುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

    ಹೌದು. ದೇವೇಗೌಡರ ಚಾಣಾಕ್ಷ ನಡೆಯಿಂದಾಗಿ ಸಮ್ಮಿಶ್ರ ಸರ್ಕಾರದಲ್ಲಿ ಇಂಧನ ಖಾತೆ ಜೆಡಿಎಸ್ ಪಾಲಾಗಿದೆ. ಖಾತೆ ಹಂಚಿಕೆ ವಿಚಾರದಲ್ಲಿ ಎರಡೂ ಪಕ್ಷಗಳ ನಡುವೆ ಕೆಲವು ದಿನಗಳಿಂದ ಹಗ್ಗ ಜಗ್ಗಾಟ ನಡೆದು ಶುಕ್ರವಾರ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರ ಸಮ್ಮುಖದಲ್ಲಿ ಇತ್ಯರ್ಥವಾಗಿದೆ. ಹಣಕಾಸು ಮತ್ತು ಇಂಧನ ಖಾತೆ ಬಯಸಿದ್ದ ಜೆಡಿಎಸ್ ಗೆ ಎರಡೂ ಖಾತೆಗಳು ಸಿಕ್ಕಿದೆ.

    ಕುಮಾರಸ್ವಾಮಿಯವರು ಬಹುಮತ ಸಾಬೀತು ಪರೀಕ್ಷೆಯಲ್ಲಿ ಗೆದ್ದ ಬಳಿಕ ಸಂಪುಟ ಶೀಘ್ರವೇ ರಚನೆಯಾಗಬೇಕಿತ್ತು. ಆದರೆ ಎರಡು ಪಕ್ಷಗಳ ನಾಯಕರು ನಮಗೆ ಪ್ರಭಾವಿ ಖಾತೆಗಳು ಬೇಕು ಎಂದು ಪಟ್ಟು ಹಿಡಿದ ಕಾರಣ ಸಂಪುಟ ರಚನೆ ಅಡ್ಡಿಯಾಗಿತ್ತು. ನಾಯಕರ ಜೊತೆಗಿನ ಸಂಧಾನ ಪ್ರಯತ್ನ ವಿಫಲವಾದ ಕಾರಣ ದೇವೇಗೌಡರು ವಿದೇಶದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕರೆ ಮಾಡಿದ್ದಾರೆ. 6 ನಿಮಿಷದ ಮಾತುಕತೆಯಲ್ಲಿ 6 ಸೂತ್ರ, ಹಲವಾರು ಒಪ್ಪಂದ ಮಾಡಿ ನಾಯಕರಿಗೆ ಚೆಕ್ ಕೊಟ್ಟಿದ್ದಾರೆ.

    ನಿಮಗೆ ಖಾತೆಗಳು ಮುಖ್ಯವೋ ಅಥವಾ ಲೋಕಸಭೆ ಚುನಾವಣೆ ಮುಖ್ಯವೋ ಎಂದು ಪ್ರಶ್ನಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಚುನಾವಣಾ ಪೂರ್ವ ಮೈತ್ರಿ ವಿಚಾರ ಪ್ರಸ್ತಾಪಿಸಿದ ಗೌಡರು 2019ಕ್ಕೆ ನಮ್ಮ ರಾಜ್ಯದಿಂದಲೇ ಸಂದೇಶ ಕಳಿಸೋಣ. ಕರ್ನಾಟಕದಲ್ಲಿ ಬಿಜೆಪಿಯನ್ನು 10 ಸ್ಥಾನಕ್ಕೆ ಇಳಿಸೋಣ ಎಂದು ಹೇಳಿದ್ದಾರೆ.

    ದೇವೇಗೌಡರ ಈ ಮಾತಿಗೆ ರಾಹುಲ್ ಒಪ್ಪಿಗೆ ನೀಡಿದ್ದಾರೆ. ಅಷ್ಟೇ ಅಲ್ಲದೇ  ಕಾಂಗ್ರೆಸ್ ಗೆ ಇಂಧನ ಖಾತೆ ಬೇಡ. ನಿಮಗೆ ನೀಡುತ್ತೇವೆ. ಇದಕ್ಕೆ ನಮ್ಮ ಒಪ್ಪಿಗೆ ಇದೆ ಎಂದು ತಿಳಿಸಿದ್ದಾರೆ. ರಾಹುಲ್ ಗಾಂಧಿ ದೇವೇಗೌಡರಿಗೆ  ಒಪ್ಪಿಗೆ ನೀಡಿದ ಕೂಡಲೇ ಸರ್ಕಾರದ ಸಂಪುಟ ರಚನೆ ಕಾರ್ಯಕ್ಕೆ ಆಗಿದ್ದ ಅಡ್ಡಿಗಳು ಎಲ್ಲ ನಿವಾರಣೆ ಆಯ್ತು ಎಂದು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ. ಇದನ್ನೂ ಓದಿ: ಎಚ್‍ಡಿಡಿ ಮುಂದೆ 18 ಪುಟಗಳ ಒಪ್ಪಂದಕ್ಕೆ ಸಹಿ- ಮೈತ್ರಿ ಸುಗಮಕ್ಕೆ 6 ಸೂತ್ರ

    ಈ ಮೂಲಕ ರಾಜ್ಯ ಕಾಂಗ್ರೆಸ್ ನಾಯಕರ ಮಾತುಕತೆಗೂ ಅವಕಾಶ ಕೊಡದ ದೇವೇಗೌಡರು ಮಗ ರೇವಣ್ಣನಿಗಾಗಿ ಇಂಧನ ಖಾತೆ ಪಡೆಯುವಲ್ಲಿ ಸಫಲರಾಗಿದ್ದಾರೆ ಎನ್ನುವ ಮಾತು ಈಗ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.

  • ಸಿಸಿಬಿ ಕಚೇರಿಯಿಂದ್ಲೇ ಸುನಿಲ್ ಹೆಗ್ಗರವಳ್ಳಿಗೆ ಬೆಳಗೆರೆ ಕರೆ- ಬೇಲ್‍ಗೆ ಅಡ್ಡಿಯಾಗುತ್ತಾ ಫೋನ್‍ಕಾಲ್?

    ಸಿಸಿಬಿ ಕಚೇರಿಯಿಂದ್ಲೇ ಸುನಿಲ್ ಹೆಗ್ಗರವಳ್ಳಿಗೆ ಬೆಳಗೆರೆ ಕರೆ- ಬೇಲ್‍ಗೆ ಅಡ್ಡಿಯಾಗುತ್ತಾ ಫೋನ್‍ಕಾಲ್?

    ಬೆಂಗಳೂರು: ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪವನ್ನು ಎದುರಿಸುತ್ತಿರುವ ಪತ್ರಕರ್ತ ರವಿ ಬೆಳಗೆರೆ, ಸಿಸಿಬಿ ವಶದಲ್ಲಿದ್ದುಕೊಂಡೇ ಸುನಿಲ್ ಹೆಗ್ಗರವಳ್ಳಿಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ.

    ಭಾನುವಾರ ರಾತ್ರಿ ಸುಮಾರು 9.40ರ ವೇಳೆಗೆ ಮಧು ಎಂಬಾತ ಸುನಿಲ್ ಹೆಗ್ಗರವಳ್ಳಿಗೆ ಕರೆ ಮಾಡಿದ್ದಾರೆ. ಸುನಿಲ್ ರಿಸೀವ್ ಮಾಡಿದಾಗ ಕರೆ ಮಾಡಿದ್ದ ಮಧು ಎಂಬಾತ ರವಿ ಬೆಳೆಗೆರೆಯವರಿಗೆ ಫೋನ್ ಕೊಟ್ಟಿದ್ದಾನೆ. ಈ ವೇಳೆ ಸುನಿಲ್ ಜೊತೆ ಮಾತನಾಡಿದ ರವಿ ಬೆಳಗೆರೆ, ಯಶೋಮತಿ ಜೊತೆ ಸಂಬಂಧ ಇದೆ ಅಂತಾ ಮಾಧ್ಯಮಗಳ ಮುಂದೆ ಹೇಳಿದ್ದೀಯಾ? ಅಂತಾ ಕೇಳಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ಸುನಿಲ್ , ನನಗೆ ಯಶೋಮತಿ ಜೊತೆ ಸಂಬಂಧವಿಲ್ಲ. ಹೀಗಿದ್ದಾಗ ನಾನ್ ಯಾಕೆ ಹಾಗೆ ಹೇಳಲಿ? ಅಂತಾ ಪ್ರಶ್ನಿಸಿದ್ದಾರೆ.

    ಇನ್ನು ಇದೇ ವಿಚಾರವಾಗಿ ಪ್ರತಿಕ್ರಿಯಿಸಿದ ಬೆಳಗೆರೆ ಪುತ್ರಿ ಚೇತನಾ ಬೆಳಗೆರೆ, ಸಿಸಿಬಿ ಕಚೇರಿಯಿಂದ ನಮ್ಮ ತಂದೆ ಕರೆ ಮಾಡಲು ಸಾಧ್ಯವಿಲ್ಲ. ಈ ಬಗ್ಗೆ ಸುನಿಲ್ ಹೆಗ್ಗರವಳ್ಳಿಯವರೂ ದೂರು ನೀಡಲಿ. ನಾವೂ ದೂರು ನೀಡುತ್ತೇವೆ. ನಮ್ಮ ತಂದೆಗೆ ಬೇಲ್ ಸಿಗದಂತೆ ಮಾಡಲು ಮತ್ತೊಂದು ಷಡ್ಯಂತ್ರ ರಚಿಸಿದ್ದಾರೆ ಎಂದಿದ್ದಾರೆ.

    ನನಗೆ ಏನೇ ಆದರೂ ರವಿ ಬೆಳಗೆರೆ ಅವರೇ ಕಾರಣ ಅಂತ ಸುನಿಲ್ ಹೆಗ್ಗರವಳ್ಳಿ ಹೇಳಿದ್ದಾರೆ. ಸಿಸಿಬಿ ಕಚೇರಿಯಿಂದ ಕರೆ ಮಾಡುವ ಮೂಲಕ ತಾನು ಏನ್ ಬೇಕಾದ್ರೂ ಮಾಡ್ತೀನಿ ಅನ್ನೋ ಮೆಸೇಜ್ ಕೊಟ್ಟಿದ್ದಾರೆ. ಯಶೋಮತಿ ನನ್ನ ಗೆಳತಿಯಷ್ಟೇ. ಎಲ್ಲರೂ ರವಿ ಬೆಳಗೆರೆಯಂತೆ ಇರಲು ಆಗುತ್ತಾ? ಅವರಿಗಾದರೂ ಹತ್ತಾರು ಮಂದಿ ಗರ್ಲ್ ಫ್ರೆಂಡ್ಸ್ ಇದ್ದಾರೆ ಅಂತಾ ಸುನಿಲ್ ಹೇಳಿದ್ದಾರೆ.