Tag: Photographer

  • ಮದುವೆ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಮಾಡಿ ಮಾರಣಾಂತಿಕ ಹಲ್ಲೆ – 8 ಮಂದಿ ಬಂಧನ

    ಮದುವೆ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಮಾಡಿ ಮಾರಣಾಂತಿಕ ಹಲ್ಲೆ – 8 ಮಂದಿ ಬಂಧನ

    ಬೆಳಗಾವಿ: ಮದುವೆ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಬೆಳಗಾವಿಯ ಕೆಪಿಟಿಸಿಎಲ್ ಕಲ್ಯಾಣ ಮಂಟಪದಲ್ಲಿ ಘಟನೆ ನಡೆದಿದ್ದು, ಕಲ್ಯಾಣ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಮಾಡಿಕೊಂಡು ಹೋಗುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಫೋಟೋಗ್ರಾಫರ್ ಉಮೇಶ್ ಹೊಸೂರು ಅಪಹರಣವಾಗಿ ಹಲ್ಲೆಗೊಳಗಾಗಿ ವ್ಯಕ್ತಿ. ಇವರು ಬೈಲಹೊಂಗಲ ಪಟ್ಟಣದಲ್ಲಿ ನೆಲೆಸಿದ್ದಾರೆ. ನಾಲ್ಕು ದಿನಗಳ ಹಿಂದೆ ಮದುವೆ ಆರ್ಡರ್ ಅಂತಾ ಬೆಳಗಾವಿ ನಗರಕ್ಕೆ ಬಂದಿದ್ದರು. ಈ ವೇಳೆ ಆತನನ್ನ ಹಿಂಬಾಲಿಸಿಕೊಂಡು ನಾಲ್ವರು ಬಂದಿದ್ದರು. ಕಲ್ಯಾಣ ಮಂಟಪಕ್ಕೆ ಬಂದು ಹೊರಗೆ ಕರೆದುಕೊಂಡು ಹೋಗಿ ಅಲ್ಲಿಂದ ಕಾರಿನಲ್ಲಿ ಕಿಡ್ನ್ಯಾಪ್ ಮಾಡಿದ್ದಾರೆ.

    ಬೈಲಹೊಂಗಲ ತಾಲೂಕಿನ ಚಿವಟಗುಂಡಿ ಕ್ರಾಸ್ ಬಳಿ ಕಾರು ನಿಲ್ಲಿಸಿ ಹಲ್ಲೆ ನಡೆಸಿದ್ದಾರೆ. ರಾಡ್‌ನಿಂದ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿ ಬಿಟ್ಟು ಹೋಗಿದ್ದಾರೆ. ಉಮೇಶ್ ಆರೋಪಿಗಳ ಮನೆಯ ಹೆಣ್ಣುಮಕ್ಕಳಿಗೆ ಕಾಡಿಸುತ್ತಿರುವುದಾಗಿ ಸುಳ್ಳು ಹೇಳಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಎಂಟು ಜನರ ವಿರುದ್ಧ ಮಾಳಮಾರುತಿ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

    ಕೇಸ್ ದಾಖಲಾಗ್ತಿದ್ದಂತೆ ಇಬ್ಬರು ಮಹಿಳೆಯರು ಸೇರಿ ಎಂಟು ಜನರನ್ನು ಬಂಧಿಸಲಾಗಿದೆ. ಫೋಟೊಗ್ರಾಫರ್ ಉಮೇಶ್, ಬೈಲಹೊಂಗಲ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಫೋಟೋಗ್ರಫಿ ವೃತ್ತಿ ವೈಷಮ್ಯದಿಂದ ಹಲ್ಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಆರೋಪಿಗಳಾದ ವಿಕ್ಕಿ, ಪ್ರವೀಣ್ ಉಮರಾಣಿ, ಬಸವರಾಜ ನರಟ್ಟಿ ಸೇರಿ ಎಂಟು ಜನರ ಬಂಧಿಸಲಾಗಿದೆ.

  • ಸಂಸದ ರಾಘವೇಂದ್ರರ ಫೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ದರ್ಮರಣ

    ಸಂಸದ ರಾಘವೇಂದ್ರರ ಫೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ದರ್ಮರಣ

    ರಾಮನಗರ: ಸಂಸದ ಬಿ. ವೈ ರಾಘವೇಂದ್ರ (B.Y Raghavendra)ಅವರ ಫೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದ್ದು, ಸಂಸದರು ಸಂತಾಪ ಸೂಚಿಸಿದ್ದಾರೆ.

    ಈ ಸಂಬಂಧ ಟ್ವೀಟ್ ಮಾಡಿರುವ ಸಂಸದರು, ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರೀಯರಾಗಿ ಪಾಲ್ಗೊಳ್ಳುತ್ತಿದ್ದ ಸ್ನೇಹಜೀವಿ ಹಾಗೂ ನನ್ನ ಫೋಟೋಗ್ರಾಫರ್ ಆಗಿದ್ದ ಪ್ರಸನ್ನ ಭಟ್ (Prasanna Bhat) ಅವರ ಅಕಾಲಿಕ ನಿಧನದ ಸುದ್ದಿಯಿಂದ ದುಃಖಿತನಾಗಿದ್ದೇನೆ. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ ಹಾಗೂ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.

    ಇವರು ಶಿವಮೊಗ್ಗ (Shivamogga) ಜಿಲ್ಲೆ ಹೊಸನಗರ ನಿವಾಸಿಯಾಗಿರುವ ಪ್ರಸನ್ನ ಭಟ್ (25) ಕನಕಪುರ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಸಂಜೆ ಈಜಲು ಹೋಗಿದ್ದ ಸಂದರ್ಭದಲ್ಲಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಪ್ರಸನ್ನ ಭಟ್ ಆರು ಜನರ ತಂಡ ಕನಕಪುರದ ಸ್ನೇಹಿತನ ಮನೆಗೆ ಬಂದಿದ್ದರು. ಅಂತೆಯೇ ಸಂಜೆ ಈಜಾಡಲು ಎಂದು ಮಾವತ್ತೂರು ಕೆರೆ ತೆರಳಿದ್ದರು. ಈಜಾಡುವ (Swimming) ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಪತ್ನಿಯೊಂದಿಗೆ ಜಗಳ – ಕೋಪದ ಭರದಲ್ಲಿ ತನ್ನ ನವಜಾತ ಶಿಶುವನ್ನು ನೆಲಕ್ಕೆ ಎಸೆದ

    ಕೂಡಲೇ ವಿಷಯ ತಿಳಿದು ಕನಕಪುರ ಗಾಮಾಂತರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ದಯಾನಂದ ಸಾಗರ್ ಆಸ್ಪತ್ರೆಗೆ ರವಾನಿಸಲಗಿತ್ತು. ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಬಾವ್ಲಾ ರ‍್ಯಾಲಿ ವೇಳೆ ಮೋದಿಗೆ ಭದ್ರತಾ ಲೋಪ – ನಿಯಮ ಉಲ್ಲಂಘಿಸಿ ಡ್ರೋನ್ ಹಾರಿಸಿದ ಮೂವರು ವಶಕ್ಕೆ

    ಬಾವ್ಲಾ ರ‍್ಯಾಲಿ ವೇಳೆ ಮೋದಿಗೆ ಭದ್ರತಾ ಲೋಪ – ನಿಯಮ ಉಲ್ಲಂಘಿಸಿ ಡ್ರೋನ್ ಹಾರಿಸಿದ ಮೂವರು ವಶಕ್ಕೆ

    ಗಾಂಧೀನಗರ: ಗುಜರಾತ್ ಚುನಾವಣೆ (Gujarat Assembly Election) ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಬ್ಯುಸಿ ಇದ್ದಾರೆ. ಈ ಹೊತ್ತಲ್ಲೇ ಅವರ ಭದ್ರತೆ ವಿಚಾರದಲ್ಲಿ ಲೋಪ ಉಂಟಾಗಿದೆ.

    ಅಹಮದಾಬಾದ್ ಜಿಲ್ಲೆಯ ಬಾವ್ಲಾದಲ್ಲಿ ಇಂದು ಸಂಜೆ ನಡೆದ ರ‍್ಯಾಲಿಯಲ್ಲಿ ಮೋದಿ ಭಾಷಣದ ವೇಳೆಯೇ, ನಿಷೇಧಿತ ಪ್ರದೇಶದಲ್ಲಿ ಹಾರಿದ ಡ್ರೋನ್ (Drone) ಕ್ಯಾಮೆರಾ ಕೆಲ ಕಾಲ ಆತಂಕಕ್ಕೆ ಕಾರಣವಾಗಿತ್ತು. ಕೂಡಲೇ ಎಚ್ಚೆತ್ತ ಎನ್‍ಎಸ್‍ಜಿ, ಡ್ರೋನ್ ಕ್ಯಾಮೆರಾವನ್ನು ಹೊಡೆದುರುಳಿಸಿದೆ. ಇದನ್ನೂ ಓದಿ: ಮಿಂಚಿನ ವೇಗದಲ್ಲಿ ಅರುಣ್ ಗೋಯೆಲ್‍ರನ್ನು ಏಕೆ ನೇಮಕ ಮಾಡಿದ್ರಿ? – ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆಗಳ ಸುರಿಮಳೆ

    ಈ ಸಂಬಂಧ ಮೂವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ಆರೋಪಿಗಳನ್ನು ನಿಖಿಲ್ ಪಾರ್ಮರ್, ರಾಕೇಶ್ ಭಾರ್ವಾದ್, ರಾಕೇಶ್ ಕುಮಾರ್ ಪ್ರಜಾಪತಿ ಎಂದು ಗುರುತಿಸಲಾಗಿದೆ. ಮೂವರು ಅಹಮದಾಬಾದ್‍ನ ಓಧವ್ ನಿವಾಸಿಗಳಾಗಿದ್ದಾರೆ. ಐಪಿಸಿ ಸೆಕ್ಷನ್ 188ರ ಅನ್ವಯ ಪೊಲೀಸರು ಎಫ್‍ಐಆರ್ ದಾಖಲಿಸಲು ಮುಂದಾಗಿದ್ದಾರೆ. ಈ ಸಂಬಂಧ ಹಲವು ಸಂಸ್ಥೆಗಳು ಏಕಕಾಲದಲ್ಲಿ ಸಮಗ್ರ ತನಿಖೆ ನಡೆಸಿವೆ. ಇದನ್ನೂ ಓದಿ: 225 ಮೀ. ಆಳದ ಕಲ್ಲಿದ್ದಲು ಗಣಿ ಝಾಂಜ್ರಾ ಒಳಗೆ ಪ್ರವೇಶಿಸಿ ಪರಿಶೀಲಿಸಿದ ಮೊದಲ ಸಚಿವ ಪ್ರಹ್ಲಾದ್ ಜೋಶಿ

    ಪ್ರಧಾನಿ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ಪ್ರದೇಶ ಡ್ರೋನ್ ನಿಷೇಧಿತ ಪ್ರದೇಶವಾಗಿತ್ತು. ಆದರೂ ನಿಷೇಧಿತ ಪ್ರದೇಶದಲ್ಲೇ ಡ್ರೋನ್ ಹಾರಾಟ ನಡೆಸಿ ಮೂವರು 2 ಕಿ.ಮೀ ವರೆಗೆ ವೀಡಿಯೋ ಚಿತ್ರೀಕರಣ ನಡೆಸಿದ್ದಾರೆ. ಬಳಿಕ ಕೂಡಲೇ ಪೊಲೀಸರು ಡ್ರೋನ್ ಹಾರಿಸದಂತೆ ತಿಳಿಸಿದ್ದಾರೆ. ಬಳಿಕ ಕೆಳಗಿಳಿಸಿ ಪರಿಶೀಲಿಸಿದಾಗ ಯಾವುದೇ ನಿಷೇಧಿತ ವಸ್ತು ಪತ್ತೆಯಾಗಿಲ್ಲ. ಹೆಚ್ಚಿನ ತನಿಖೆ ಮುಂದುವರಿದಿದೆ.

    Live Tv
    [brid partner=56869869 player=32851 video=960834 autoplay=true]

  • ಸ್ಟುಡಿಯೋ ಕ್ಲೀನ್ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಫೋಟೋಗ್ರಾಫರ್‌ಗಳಿಬ್ಬರ ದುರ್ಮರಣ

    ಸ್ಟುಡಿಯೋ ಕ್ಲೀನ್ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಫೋಟೋಗ್ರಾಫರ್‌ಗಳಿಬ್ಬರ ದುರ್ಮರಣ

    ಮಂಡ್ಯ: ದೀಪಾವಳಿ (Deepavali)  ಹಬ್ಬದ ಹಿನ್ನೆಲೆ ಸ್ಟುಡಿಯೋ (Studio) ಕ್ಲೀನ್ ಮಾಡುತ್ತಿದ್ದ ವೇಳೆ ವಿದ್ಯುತ್ ಶಾರ್ಟ್‍ಸರ್ಕ್ಯೂಟ್‌ನಿಂದ ಇಬ್ಬರು ಫೋಟೋಗ್ರಾಫರ್‌ಗಳು (Photographer) ಮೃತಪಟ್ಟಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಮದ್ದೂರು ತಾಲೂಕಿನ ಬೆಸಗರಹಳ್ಳಿಯಲ್ಲಿ ಜರುಗಿದೆ.

    ಬೆಸಗರಹಳ್ಳಿಯ ಲಕ್ಷ್ಮೀ ಸ್ಟುಡಿಯೋದಲ್ಲಿ ಬೆಳಗ್ಗೆ ವಿವೇಕ್ ಮತ್ತು ಮಧುಸೂದನ್ ಎಂಬ ಫೋಟೋಗ್ರಾಫರ್ ದೀಪಾವಳಿ ಹಬ್ಬದ ಹಿನ್ನೆಲೆ ಕ್ಲೀನ್ ಮಾಡಲು ಮುಂದಾಗಿದ್ದಾರೆ. ಈ ವೇಳೆ ಸ್ಟುಡಿಯೋದಲ್ಲಿದ್ದ ವೈಯರ್‌ನಲ್ಲಿ ಶಾರ್ಟ್‍ಸರ್ಕ್ಯೂಟ್‌ ಆಗಿ ಇಬ್ಬರು ಫೋಟೋಗ್ರಾಫರ್ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಪುನೀತ ಪರ್ವಕ್ಕೆ ಜಗ್ಗೇಶ್ ಗೈರು: ವಿಪರೀತ ದುಃಖವಾಯಿತು

    ಇಬ್ಬರು ಫೋಟೋಗ್ರಾಫರ್‌ಗಳ ದುರ್ಮರಣಕ್ಕೆ ಮಂಡ್ಯ ಜಿಲ್ಲೆಯ ಫೋಟೋಗ್ರಾಫರ್‌ಗಳು ಸಂತಾಪ ಸೂಚಿಸಿದ್ದಾರೆ. ಇತ್ತ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬೆಸಗರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ಜರುಗಿದೆ. ಇದನ್ನೂ ಓದಿ: ಜಗಳ ಬಿಡಿಸಲು ಹೋದ ವ್ಯಕ್ತಿಯೇ ಕುಸಿದು ಬಿದ್ದು ಸಾವು

    Live Tv
    [brid partner=56869869 player=32851 video=960834 autoplay=true]

  • ಫೋಟೋಗ್ರಾಫರ್ ಇಲ್ಲ ಅಂತ ಮದುವೆ ಕ್ಯಾನ್ಸಲ್ ಮಾಡಿದ ವಧು

    ಫೋಟೋಗ್ರಾಫರ್ ಇಲ್ಲ ಅಂತ ಮದುವೆ ಕ್ಯಾನ್ಸಲ್ ಮಾಡಿದ ವಧು

    ಲಕ್ನೋ: ಮದುವೆ ವೇಳೆ ಫೋಟೋಗ್ರಾಫರ್ ಇಲ್ಲ ಎಂಬ ಕಾರಣಕ್ಕೆ ಉತ್ತರ ಪ್ರದೇಶದ ವಧು ಒಬ್ಬಳು ವರನನ್ನು ಮದುವೆಯಾಗಲು ನಿರಾಕರಿಸಿದ್ದಾಳೆ.

    ಸಾಮಾನ್ಯವಾಗಿ ಪ್ರತಿಯೊಬ್ಬರಿಗೂ ತಮ್ಮ ಮದುವೆ ವೇಳೆ ಸುಂದರವಾದ ಫೋಟೋಗಳನ್ನು ಹಿಡಿಸಿಕೊಳ್ಳಬೇಕು ಎಂಬ ಆಸೆ ಇರುತ್ತದೆ. ತಮ್ಮ ಆಪ್ತರು, ನೆಂಟರಿಷ್ಟರ ಜೊತೆ ಫೋಟೋಗಳನ್ನು ಕ್ಲಿಕ್ಕಿಸಿಕೊಂಡು ಆ ದಿನವನ್ನು ತಮ್ಮ ಜೀವನ ಪೂರ್ತಿ ಸಿಹಿ ನೆನಪುಗಳಾಗಿ ಉಳಿಸಿಕೊಳ್ಳಲು ಬಯಸುತ್ತಾರೆ. ಆದರೆ ಮದುವೆ ವೇಳೆ ಛಾಯಾಗ್ರಾಹಕನನ್ನು ಕರೆದುಕೊಂಡು ಹೋಗಲು ಮರೆತಿದ್ದರಿಂದ ವರನನ್ನು ಮದುವೆಯಾಗಲು ವಧು ನಿರಾಕರಿಸಿದ್ದಾಳೆ. ಇದನ್ನೂ ಓದಿ: ವಿಚಿತ್ರ ಮದುವೆ: ಹಾವನ್ನೆ ಹಾರ ಮಾಡಿಕೊಂಡ ವಧು-ವರ

    MARRIAGE

    ಕಾನ್ಪುರ ದೇಹತ್‍ನ ಮಂಗಲ್‍ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ವಾಸಿಸುವ ರೈತರೊಬ್ಬರು ತಮ್ಮ ಮಗಳ ವಿವಾಹವನ್ನು ಭೋಗ್ನಿಪುರದಲ್ಲಿ ವಾಸಿಸುವ ವ್ಯಕ್ತಿ ಒಬ್ಬರೊಂದಿಗೆ ನಿಗದಿಪಡಿಸಿದ್ದರು. ಮದುವೆಗಾಗಿ ಎಲ್ಲಾ ಸಕಲ ಸಿದ್ಧತೆ ನಡೆಸಿ ವೇದಿಕೆಯನ್ನು ಸುಂದರವಾಗಿ ಅಲಂಕರಿಸಲಾಗಿತ್ತು. ಆದರೆ ಈ ಸುಂದರದ ಕ್ಷಣವನ್ನು ಸೆರೆಹಿಡಿಯಲು ಛಾಯಾಗ್ರಹಕನೇ ಇಲ್ಲವೆಂದು ತಿಳಿದ ವಧು ಮದುವೆಯನ್ನು ನಿರಾಕರಿಸಿ ವೇದಿಕೆಯಿಂದ ಮನೆಗೆ ಹಿಂದಿರುಗಿದ್ದಾಳೆ.

    ಈ ವೇಳೆ ಹಲವಾರು ಮಂದಿ ವಧುವಿನ ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೆ ಇಂದು ನಮ್ಮ ಮದುವೆಯ ಬಗ್ಗೆಯೇ ಕಾಳಜಿ ವಹಿಸದ ವ್ಯಕ್ತಿ ಮುಂದೆ ನನ್ನನ್ನು ಹೇಗೆ ನೋಡಿಕೊಳ್ಳುತ್ತಾನೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ನಾವು ಬೇರೆ ಭಾಷೆಯನ್ನು ಇಂಪ್ರೆಸ್ ಮಾಡೋದು ಬೇಕಿಲ್ಲ: ಸುದೀಪ್ 

    ನಂತರ ವಧು ಹಾಗೂ ವರ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಪರಸ್ಪರ ಒಪ್ಪಿಗೆ ಮೇರೆಗೆ ವಿನಿಮಯ ಮಾಡಿಕೊಂಡ ನಗದು ಹಾಗೂ ಬೆಲೆಬಾಳುವ ವಸ್ತುವನ್ನು ಹಿಂದಿರುಗಿಸಲು ಎರಡೂ ಕಡೆಯವರು ಒಪ್ಪಿಕೊಂಡಿದ್ದಾರೆ ಎಂದು ಮಂಗಲ್‍ಪುರ ಪೊಲೀಸ್ ಠಾಣೆಯ ಸಬ್‍ಇನ್ಸ್‍ಪೆಕ್ಟರ್ ಡೋರಿ ಲಾಲ್ ತಿಳಿಸಿದ್ದಾರೆ.

  • ಹಿರಿಯ ಛಾಯಾಗ್ರಾಹಕ ಡಿ.ಸಿ.ನಾಗೇಶ್ ಇನ್ನಿಲ್ಲ

    ಹಿರಿಯ ಛಾಯಾಗ್ರಾಹಕ ಡಿ.ಸಿ.ನಾಗೇಶ್ ಇನ್ನಿಲ್ಲ

    ಬೆಂಗಳೂರು: ಕನ್ನಡ ಸಿನಿಮಾ ಪತ್ರಿಕೋದ್ಯಮದ ಹಿರಿಯ ಛಾಯಾಗ್ರಾಹಕ ಡಿಸಿ ನಾಗೇಶ್ (66) ನಿಧನರಾಗಿದ್ದಾರೆ.

    ಹಲವು ದಿನಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಡಿ.ಸಿ. ನಾಗೇಶ್ ಅವರು ಇಂದು ಬೆಳಗ್ಗೆ 5.30ಕ್ಕೆ ವಿಧಿವಶರಾಗಿದ್ದಾರೆ. ಸುಮಾರು 40ಕ್ಕಿಂತಲೂ ಹೆಚ್ಚು ವರ್ಷಗಳಿಂದ ಡಿ.ಸಿ.ನಾಗೇಶ್ ಅವರು ಸಿನಿಮಾ/ಸಾಂಸ್ಕೃತಿಕ ವಿಭಾಗದ ಫೋಟೋಗ್ರಾಫರ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಇದನ್ನೂ ಓದಿ: ದೀಪಿಕಾ ಪಡುಕೋಣೆಯನ್ನು ಸಮರ್ಥಿಸಲು ಬಂದಿಲ್ಲ: ಕಂಗನಾ ರಣಾವತ್

    ಸಿನಿಮಾ ಪತ್ರಿಕಾ ಲೋಕದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಡಿ.ಸಿ.ನಾಗೇಶ್ ಅವರ ನಿಧನಕ್ಕೆ ಇದೀಗ ಸಂಸದೆ ಸುಮಲತಾ ಸೇರಿದಂತೆ ಚಿತ್ರರಂಗದ ಕಲಾವಿದರು ಸೇರಿದಂತೆ ನಾಡಿದ ಪತ್ರಕರ್ತರು ಸಹ ಕಂಬನಿ ಮಿಡಿದಿದ್ದಾರೆ. ಇದನ್ನೂ ಓದಿ: ನಮ್ಮಲ್ಲೇ ಒಳ್ಳೊಳ್ಳೆಯ ನಟಿಯರಿದ್ದಾರೆ, ಕನ್ನಡ ಪ್ರತಿಭೆಗಳಿಗೆ ಅವಕಾಶ ಕೊಡಿ: ಶಿವಣ್ಣ

    ಇಂದು ಸಂಜೆ 4 ಗಂಟೆ ಸುಮಾರಿಗೆ ವಿಲ್ಸನ್ ಗಾರ್ಡನ್ ಕ್ರಿಮಿಟೋರಿಯಂನಲ್ಲಿ ಡಿ.ಸಿ.ನಾಗೇಶ್ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಇದೀಗ ನಾಗೇಶ್ ಅವರ ಅಂತಿಮ ದರ್ಶನ ಪಡೆಯಲು ಸಿನಿಮಾ ಗಣ್ಯರ ದಂಡೇ ಹರಿದು ಬರುತ್ತಿದೆ.

  • ಖ್ಯಾತ ಫೋಟೋಗ್ರಾಫರ್ ತೆಗೆದಿರುವ ಸೂರ್ಯನ ಒಂದು ಫೋಟೋಗೆ 3766ರೂ.!

    ಖ್ಯಾತ ಫೋಟೋಗ್ರಾಫರ್ ತೆಗೆದಿರುವ ಸೂರ್ಯನ ಒಂದು ಫೋಟೋಗೆ 3766ರೂ.!

    ವಾಷಿಂಗ್ಟನ್: ಫೋಟೋಗ್ರಾಫರ್ ಒಬ್ಬರು ಕ್ಲಿಕ್ಕಿಸಿರುವ ಸೂರ್ಯನ ಒಂದು ಫೋಟೋಗೆ 3766ರೂಪಾಯಿ ಬೆಲೆ ಬಾಳುವ ಮೂಲಕವಾಗಿ ಈ ಫೋಟೋ ಸುದ್ದಿಯಾಗಿದ್ದಾರೆ.

    ಖ್ಯಾತ ಫೋಟೋಗ್ರಾಫರ್ ಆಂಡ್ರ್ಯೂ ಮೆಕಾರ್ಥಿ ತೆಗೆದಿರುವ ಸೂರ್ಯನ ಫೋಟೋವೊಂದು  ಇನ್‍ಸ್ಟಾಗ್ರಮ್‍ನಲ್ಲಿ ಹವಾ ಎಬ್ಬಸಿದೆ.

    ಅತ್ಯಾಧುನಿಕ ಟೆಲಿಸ್ಕೋಪ್ ಬಳಸಿ ಸೂರ್ಯನ ಮೇಲ್ಮೈಯನ್ನು ಅತ್ಯಾಕರ್ಷಕವಾಗಿ ಸೆರೆ ಹಿಡಿಯಲಾಗಿದೆ. ಈ ಫೋಟೋ ಬೆಲೆ ಬರೋಬ್ಬರಿ 3766 ರೂಪಾಯಿ ಆಗಿದೆ. ನವೆಂಬರ್ 29ರ ಮಧ್ಯಾಹ್ನ 2ಗಂಟೆಗೆ ಸೂರ್ಯನು ಹೇಗೆ ಗೋಚರಿಸಿದ್ದ ಎಂಬುದು ಈ ಫೋಟೋದಲ್ಲಿ ಸ್ಪಷ್ಟವಾಗಿ ಕಾಣುತ್ತದೆ ಎಂದು ಆಂಡ್ರ್ಯೂ ಹೇಳಿದ್ದಾರೆ. ಇದನ್ನೂ ಓದಿ: ಕೊರೊನಾ ಆತಂಕ- ಯಾದಗಿರಿಯಲ್ಲಿ ಸಿದ್ಧವಾಯ್ತಿ ಹೈಟೆಕ್ ಐಸಿಯು ವಾರ್ಡ್

     

    View this post on Instagram

     

    A post shared by Andrew McCarthy (@cosmic_background)

    ಈ ಫೋಟೋ 300 ಮೆಗಾಪಿಕ್ಸಲ್‌ಗಳಿಂದ ಕೂಡಿದ್ದು, ಫೈರ್ ಅಂಡ್ ಫ್ಯೂಷನ್ ಎಂದು ಹೆಸರಿಟ್ಟಿದ್ದಾರೆ. ನವೀಕೃತ ಟೆಲಿಸ್ಕೋಪ್ ಬಳಸಿ 1.5 ಲಕ್ಷ ಚಿತ್ರಗಳನ್ನು ಸೆರೆಹಿಡಿದಿದ್ದು, ಅವುಗಳನ್ನು ನಂತರ ಜೋಡಿಸಿ ಮನಮೋಹಕ ಚಿತ್ರವನ್ನು ಬಿಡುಗಡೆ ಮಾಡಿದ್ದಾರೆ. ಈ ಫೋಟೋ ಬೆಕೆಂದರೆ 3,766 ರೂಪಾಯಿ ಪಾವತಿಸಿ ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ. ಇದನ್ನೂ ಓದಿ: ಕೆಂಪು ಟೋಪಿ ಧರಿಸಿದವರು ಉತ್ತರಪ್ರದೇಶಕ್ಕೆ ಅಪಾಯಕಾರಿ: ಮೋದಿ

  • ಮದುವೆ ಊಟಕ್ಕೆ ಕರೆದಿಲ್ಲವೆಂದು ಫೋಟೋಗಳನ್ನೇ ಡಿಲೀಟ್ ಮಾಡಿದ ಫೋಟೋಗ್ರಾಫರ್!

    ಮದುವೆ ಊಟಕ್ಕೆ ಕರೆದಿಲ್ಲವೆಂದು ಫೋಟೋಗಳನ್ನೇ ಡಿಲೀಟ್ ಮಾಡಿದ ಫೋಟೋಗ್ರಾಫರ್!

    ನವದೆಹಲಿ: ಮದುವೆಗೆ ಬರುವ ಅತಿಥಿಗಳಿಗೆ ಊಟ ಮಾಡಿಕೊಂಡು ಹೋಗಿ ಎಂದು ಹೇಳುತ್ತಾರೆ. ಆದರೆ ಮದುವೆಗೆ ಬರುವ ಫೋಟೋಗ್ರಾಫರ್ ಅಥವಾ ಇನ್ನಿತರ ಕೆಲಸಗಾರರನ್ನು ಕಡೆಗಣಿಸಲಾಗುತ್ತದೆ. ಊಟ, ತಿಂಡಿ ವೇಳೆಯಾದರೂ ಫೋಟೋ ತೆಗೆದುಕೊಳ್ಳುವಲ್ಲಿ ಬಿಜಿಯಾಗಿರುವ ಮದುಮಕ್ಕಳು, ಕುಟುಂಬಸ್ಥರು ಅವರಿಗೆ ಊಟ ಮಾಡಿದ್ರಾ ಎಂದು ಕೇಳುವುದು ಕಡಿಮೆ. ಇದಕ್ಕೆ ಊದಾಹರಣೆ ಎನ್ನುವಂತಹ ಒಂದು ಘಟನೆ ದೆಹಲಿಯಲ್ಲಿ ನಡೆದಿದೆ.

    ಊಟ, ತಿಂಡಿ, ನೀರನ್ನೂ ಕೊಡದೆ ದಿನಪೂರ್ತಿ ದುಡಿಸಿಕೊಂಡ ಕಾರಣ ಫೋಟೋಗ್ರಾಫರ್ ಒಬ್ಬ ಸಿಟ್ಟಿನಿಂದ ಸಂಜೆ ಮದುವೆ ಸಮಾರಂಭ ಸಂಪೂರ್ಣ ಫೋಟೋಗಳನ್ನು ವಧು, ವರನ ಎದುರಿಗೆ ಡಿಲೀಟ್ ಮಾಡಿ ಮದುವೆ ಮನೆಯಿಂದ ಹೊರನಡೆದಿದ್ದಾನೆ. ಇದನ್ನೂ ಓದಿ:  ನವಜೋತ್ ಸಿಂಗ್ ಸಿಧುನಂತೆ ಕನ್ಹಯ್ಯ ಕುಮಾರ್ ಕಾಂಗ್ರೆಸ್ಸನ್ನು ನಾಶ ಮಾಡುತ್ತಾರೆ: ಆರ್​​ಜೆಡಿ

    ಹಣವನ್ನು ಊಳಿಸುವುದಕ್ಕಾಗಿ ಮುಮಗ ತನ್ನ ಸ್ನೇಹಿತನಿಗೆ ಫೋಟೋಗ್ರಾಫರ್ ಆಗಿ ಬರಲು ಹೇಳಿದ್ದಾನೆ. ನಾಯಿಯ ಫೋಟೋ ತೆಗೆದು ಸಾಮಾಜಿ ಜಾಲತಾಣದಲ್ಲಿ ಅವುಗಳನ್ನು ಶೇರ್ ಮಾಡುವುದರಲ್ಲಿ ಪಳಗಿರುವ ಸ್ನೇಹಿತ ತಾನು ಮದುವೆ ಫೋಟೋಗ್ರಾಫಿಗೆ ಬರುವುದಿಲ್ಲ ಎಂದರೂ ಕೇಳದೇ ಮದುಮಗ ಒತ್ತಾಯ ಮಾಡಿದ್ದಾನೆ. ಕೊನೆಗೆ ಇಂತಿಷ್ಟು ದುಡ್ಡು ಎಂದು ಮಾತುಕತೆ ನಡೆಸಿ ಸ್ನೇಹಿತ ಒಪ್ಪಿಕೊಂಡಿದ್ದಾನೆ.

    ಬೆಳಗಿನ ಜಾವದಿಂದ ಸಂಜೆಯವರೆಗೂ ಮದುವೆ ಕಾರ್ಯಕ್ರಮ ನಡೆದಿದೆ. ಆದರೆ ಒಂದೇ ಒಂದು ಸಲವು ಯಾರೂ ಫೋಟೋಗ್ರಾಫರ್‍ನನ್ನು ಮಾತನಾಡಿಸಿಲ್ಲ. ಊಟ, ತಿಂಡಿಗೂ ಕೇಳಿಲ್ಲ. ಈತ ಅಲ್ಲಿರುವವರ ಬಳಿ ಬಾಯಿಬಿಟ್ಟು ಹೇಳಿದರು ಇದೊಂದು ಫೋಟೋ ಎನ್ನುತ್ತಲೇ ಕಾಲ ಕಳೇದಿದ್ದಾರೆ. ಇದರಿಂದ ಸಿಟ್ಟಿಗೆದ್ದ ಫೋಟೋಗ್ರಾಫರ್ ಮದುವೆ ಕಾರ್ಯಕ್ರಮ ಮುಗಿಯುವವರೆಗೆ ಕಾದು ನಂತರ ಸಂಪೂರ್ಣ ಫೋಟೋ ಡಿಲೀಟ್ ಮಾಡಿ ಸೇಡು ತೀರಿಸಿಕೊಂಡಿದ್ದಾನೆ.
    ಸಂಜೆಯವರೆಗೂ ಊಟ, ತಿಂಡಿ ನೀಡಿಲ್ಲ. ಸಿಕ್ಕಾಪಟ್ಟೆ ಶಕೆ ಇದೆ. ಯಾರು ಒಂದು ಲೋಟ ನೀರನ್ನು ಕೊಟ್ಟಿಲ್ಲ. ಆದ್ದರಿಂದ ಹೀಗೆ ಮಾಡಿದೆ ಎಂದು ತನಗಾಗಿರುವ ಅನುಭವವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾನೆ. ಇದಕ್ಕೆ ನೂರಾರು ಕಾಮೆಂಟ್‍ಗಳು ಬಂದಿದೆ.
  • ಒಲಿಂಪಿಕ್ಸ್ ಕ್ರೀಡಾಪಟುಗಳು ಗೆದ್ದ ಪದಕವನ್ನು ಕಚ್ಚಲು ಇದು ಅಸಲಿ ಕಾರಣ!

    ಒಲಿಂಪಿಕ್ಸ್ ಕ್ರೀಡಾಪಟುಗಳು ಗೆದ್ದ ಪದಕವನ್ನು ಕಚ್ಚಲು ಇದು ಅಸಲಿ ಕಾರಣ!

    ಟೋಕಿಯೋ: ಒಲಿಂಪಿಕ್ಸ್ ಅಥವಾ ಬೇರೆ ಯಾವುದೇ ಕ್ರೀಡಾಕೂಟದಲ್ಲೂ ಕೂಡ ಆಥ್ಲೀಟ್ಸ್ ಗಳು ತಾವು ಪದಕ ಗೆದ್ದರೆ ಅದನ್ನು ಕಚ್ಚುವ ಫೋಟೋ ನಾವು ನೋಡಿರುತ್ತೇವೆ. ಹಾಗಾದರೆ ಈ ರೀತಿ ಪದಕ ಕಚ್ಚಲು ಕಾರಣವೇನು? ಈ ಕುರಿತು ಅಸಲಿ ಕಾರಣ ಕೇಳಿದರೆ ನೀವು ಕೂಡ ಒಂದು ಕ್ಷಣ ನಗುತ್ತೀರಿ.

    ಹೌದು, ಪ್ರತಿಷ್ಠಿತ ಕ್ರೀಡಾಕೂಟದಲ್ಲಿ ಆಥ್ಲೀಟ್ಸ್ ಗಳು ಕಷ್ಟ ಪಟ್ಟು ತಮ್ಮ ದೇಶಕ್ಕಾಗಿ, ರಾಜ್ಯಕ್ಕಾಗಿ, ಚಿನ್ನ, ಬೆಳ್ಳಿ ಅಥವಾ ಕಂಚಿನ ಪದಕ ಗೆದ್ದರೆ ಆ ಪದಕವನ್ನು ಕಚ್ಚಿಕೊಂಡು ನಿಂತಿರುವ ಫೋಟೋವನ್ನು ಸಾಕಷ್ಟು ಬಾರಿ ನಾವೆಲ್ಲರೂ ನೋಡಿದ್ದೇವೆ. ಪದಕ ಕಚ್ಚುವುದು ಇತಿಹಾಸದಿಂದಲೂ ನಡೆದುಕೊಂಡು ಬರುತ್ತಿದೆ. ಈ ಹಿಂದೆ ಚಿನ್ನದ ವ್ಯಾಪಾರಿಗಳು ಅಸಲಿ ಚಿನ್ನವನ್ನು ತಿಳಿಯಲು ಕಚ್ಚುತ್ತಿದ್ದರಂತೆ. ಅಸಲಿ ಚಿನ್ನ ಮೃದು ಲೋಹವಾಗಿರುವುದರಿಂದ ಕಚ್ಚಿದ ಭಾಗದಲ್ಲಿ ಹಲ್ಲಿನ ಗುರುತು ಕಾಣಿಸಿಕೊಳ್ಳುತ್ತಿತ್ತು. ಈ ಮೂಲಕ ಅಸಲಿ ಮತ್ತು ನಕಲಿ ಚಿನ್ನವನ್ನು ಪತ್ತೆ ಹಚ್ಚುತ್ತಿದ್ದರಂತೆ. ಇದನ್ನೂ ಓದಿ: ನನ್ನ ದೇಶಕ್ಕಾಗಿ ಬೆಳ್ಳಿ ಪದಕ ಗೆದ್ದಿದ್ದು ಅತೀವ ಆನಂದ ನೀಡಿದೆ: ಮೀರಾಬಾಯಿ ಚಾನು

    ಆದರೆ ಕ್ರೀಡಾಪಟುಗಳು ಕೂಡ ಈ ರೀತಿ ಚಿನ್ನವನ್ನು ಪರೀಕ್ಷಿಸುತ್ತಿದ್ದಾರ ಎಂಬ ಅನುಮಾನ ಮೂಡಿದರೆ ಅದು ತಪ್ಪು. ಒಲಿಂಪಿಕ್ಸ್‍ನಲ್ಲಿ ನೀಡುವ ಪದಕ ಪೂರ್ತಿ ಚಿನ್ನದಾಗಿರುವುದಿಲ್ಲ ಅಲ್ಪ ಪ್ರಮಾಣದ ಚಿನ್ನದ ಲೇಪಣ ಇರುತ್ತದೆ. ಇದು ಕ್ರೀಡಾಪಟುಗಳಿಗು ತಿಳಿದಿದೆ. ಆದರೂ ಕೂಡ ಆಥ್ಲೀಟ್ಸ್‍ಗಳು ಮಾತ್ರ ಆತನ ಕಣ್ಣಿಗೆ ಸುಂದರವಾಗಿ ಕಾಣಲು ಪದಕವನ್ನು ಕಚ್ಚುತ್ತಾರೆ ಎಂಬುದು ಬಯಲಾಗಿದೆ.

    ಹಾಗಾದರೆ ಆತ ಯಾರು ಗೊತ್ತ ಆತ ಬೇರೆಯಾರು ಅಲ್ಲ ಫೋಟೋಗ್ರಾಫರ್. ಹೌದು ಪದಕ ಗೆದ್ದ ಕ್ರೀಡಾಪಟುಗಳು ಪದಕ ಗೆದ್ದ ಖುಷಿಯನ್ನು ಬೇರೆ ಬೇರೆ ರೀತಿಯಾಗಿ ಕ್ಯಾಮೆರಾ ಕಣ್ಣಿನಲ್ಲಿ ಸೆರೆ ಹಿಡಿಯಲು ಈ ಹಿಂದೆ ಫೋಟೋಗ್ರಾಫರ್ ಒಬ್ಬರು ಪದಕವನ್ನು ಕಚ್ಚಿ ಫೋಸ್ ನೀಡುವಂತೆ ಕ್ರೀಡಾಪಟುವಿಗೆ ಸೂಚಿಸಿದ್ದರಂತೆ. ಅದು ಮುಂದುವರಿದಿದ್ದು, ಇದೀಗ ಕೂಡ ಪದಕ ಗೆದ್ದವರು ಈ ರೀತಿ ಪದಕ ಕಚ್ಚಿಕೊಂಡು ಫೋಟೋ ತೆಗೆಸಿಕೊಳ್ಳುತ್ತಿದ್ದಾರೆ.

  • ಸಾಧನೆಯ ಹಾದಿಯಲ್ಲಿ ಛಾಯಾಗ್ರಾಹಕ ಸುರೇಶ್ ಬಾಬು..!

    ಸಾಧನೆಯ ಹಾದಿಯಲ್ಲಿ ಛಾಯಾಗ್ರಾಹಕ ಸುರೇಶ್ ಬಾಬು..!

    ಸುರೇಶ್ ಬಾಬು (ಅರುಣ್ ಸುರೇಶ್), ಚಂದನವನದಲ್ಲಿ ಹೆಸರು ಮಾಡುತ್ತಿರುವ ಪ್ರತಿಭಾವಂತ ಛಾಯಾಗ್ರಾಹಕ. ಜಸ್ಟ್ ಲವ್ ಸಿನಿಮಾ ಮೂಲಕ ಸ್ವತಂತ್ರ ಛಾಯಾಗ್ರಾಹಕನಾಗಿ ಗುರುತಿಸಿಕೊಂಡ ಸುರೇಶ್ ಬಾಬು ಕೈ ತುಂಬಾ ಈಗ ಅವಕಾಶಗಳ ಸಾಲು. ತಂತ್ರಜ್ಞನಾಗಿ ಚಿತ್ರರಂಗದಲ್ಲಿ ತಮ್ಮದೇ ಛಾಪನ್ನು ಮೂಡಿಸಬೇಕು ಎಂಬ ನಿಟ್ಟಿನಲ್ಲಿ ಹೊಸತನದ ಹಾದಿಯಲ್ಲಿ ಸಾಗುತ್ತಿರುವ ಸುರೇಶ್ ಬಾಬು ಆರಂಭಿಕ ದಿನಗಳು ಶುರುವಾಗಿದ್ದೇ ಒಂದು ರೋಚಕ ಕಥೆ.

    ಹೌದು, ಸುರೇಶ್ ಬಾಬು ಆರಂಭಿಕ ಜೀವನ ಶುರುವಾಗಿದ್ದು ಹತ್ತೊಂಬತ್ತು ವರ್ಷಗಳ ಹಿಂದೆ ಚಿತ್ರರಂಗದಲ್ಲಿ ಜನರೇಟರ್ ಕ್ಲೀನರ್ ಆಗಿ. ಅಂದು ಊಟ, ಸಂಬಳ ಸಿಕ್ಕಿದ್ರೆ ಸಾಕು ಎಂಬ ಪರಿಸ್ಥಿತಿಯಲ್ಲಿದ್ದ ಸುರೇಶ್ ಬಾಬು ಇಂದು ಛಾಯಾಗ್ರಾಹಕನಾಗಿ ಹೆಸರು ಮಾಡುವುದರ ಜೊತೆಗೆ ಒಂದಿಷ್ಟು ಪ್ರತಿಭೆಗಳಿಗೆ ಕೆಲಸ ನೀಡುವಷ್ಟರ ಮಟ್ಟಿಗೆ ಬೆಳೆದಿದ್ದಾರೆ. ಇದೆಲ್ಲದರ ಹಿಂದೆ ಇದ್ದಿದ್ದು ಅವರ ಪರಿಶ್ರಮ ಹಾಗೂ ಛಲ. ಜನರೇಟರ್ ಕ್ಲೀನಿಂಗ್ ಕೆಲಸ ಮಾಡುತ್ತಲೇ ಕ್ಯಾಮೆರಾ ಸೆಳೆತಕ್ಕೆ ಒಳಗಾಗಿ ಕ್ಯಾಮೆರಾ ನಿರ್ವಹಣೆಯ ಒಳ ಹೊರಗನ್ನು ಕಲಿತುಕೊಂಡ ಸುರೇಶ್ ಬಾಬು ನಂತರ ಸಿನಿಮಾ, ಧಾರಾವಾಹಿಗಳಲ್ಲಿ ಲೈಟ್ ಬಾಯ್ ಆಗಿ, ಕ್ಯಾಮೆರಾ ಅಸಿಸ್ಟೆಂಟ್ ಆಗಿ ದುಡಿದಿದ್ದಾರೆ.

    ಕ್ಯಾಮೆರಾ ನಿರ್ವಹಣೆ ಕುರಿತಂತೆ ಕೆಲವೊಂದನ್ನು ನೋಡಿ, ಕೆಲವೊಂದನ್ನು ಬೇರೆಯವರಿಂದ ಕೇಳಿ ಕಲಿಯುತ್ತಾ ಇಂದು ಸಿನಿಮಾ ಛಾಯಾಗ್ರಾಹಕನಾಗಿ ಬೆಳೆದಿದ್ದಾರೆ. ಜೆಕೆ ಅಭಿನಯದ ‘ಜಸ್ಟ್ ಲವ್’ ಸಿನಿಮಾ ಮೂಲಕ ಛಾಯಾಗ್ರಾಹಕನಾಗಿ ಚಿತ್ರರಂಗದಲ್ಲಿ ಮೊದಲ ಹೆಜ್ಜೆ ಇಟ್ಟ ಸುರೇಶ್ ಬಾಬು, ಚಂದ್ರಿಕಾ, ವಜ್ರ, ದೇವರಂತ ಮನುಷ್ಯ, ಗಿರ್ ಗಿಟ್ಲೆ ಸಿನಿಮಾಗಳಿಗೆ ಕ್ಯಾಮೆರಾ ನಿರ್ದೇಶಕನಾಗಿ ಕೆಲಸ ಮಾಡಿದ್ದಾರೆ. ಸದ್ಯ ವಾವ್ ಹಾಗೂ ನಕ್ಷೆ ಸಿನಿಮಾಗಳನ್ನು ಸೆರೆಹಿಡಿಯುವುದರಲ್ಲಿ ಬ್ಯುಸಿಯಾಗಿದ್ದಾರೆ. ಇವುಗಳ ಜೊತೆ ಹಲವು ಸಿನಿಮಾಗಳ ಆಫರ್ ಗಳೂ ಸುರೇಶ್ ಬಾಬು ಅವರನ್ನರಸಿ ಬರುತ್ತಿವೆ.

    19 ವರ್ಷಗಳ ಪಯಣದಲ್ಲಿ ಸಾಕಷ್ಟು ಏಳು ಬೀಳುಗಳನ್ನು ಕಂಡಿರುವ ಸುರೇಶ್ ಬಾಬು ಇಂದು ತಮ್ಮದೇ ಆದ ಸಿನಿಮಾ ಕ್ಯಾಮೆರಾ, ಯೂನಿಟ್‍ಗಳನ್ನು ಹೊಂದಿದ್ದಾರೆ. ಅಷ್ಟೇ ಅಲ್ಲ `ಬಾನವಿ ಕ್ಯಾಪ್ಚರ್’ ಎಂಬ ಸಂಸ್ಥೆಯನ್ನು ತೆರೆದಿದ್ದಾರೆ. ಸಿನಿಮಾ ನಿರ್ಮಾಣದಲ್ಲಿ ಅಪಾರ ಆಸಕ್ತಿ ಇಟ್ಟುಕೊಂಡಿರುವ ಸುರೇಶ್ ಬಾಬು ಪ್ರೊಡಕ್ಷನ್ ಹೌಸ್ ತೆರೆಯುವ ಯೋಜನೆಯಲ್ಲಿದ್ದಾರೆ. ಈ ನಿಟ್ಟಿನಲ್ಲಿ ಒಂದು ಹೆಜ್ಜೆ ಇಟ್ಟಿರುವ ಇವರು ಪಬ್ಲಿಕ್ ಟಾಯ್ಲೆಟ್ ಎಂಬ ಕಿರುಚಿತ್ರ ನಿರ್ಮಾಣವನ್ನೂ ಮಾಡಿದ್ದಾರೆ. ಹೀಗೆ ಸ್ವಂತ ಪರಿಶ್ರಮ, ಛಲ, ಸ್ನೇಹಿತರು, ಕುಟುಂಬಸ್ಥರ ಸಹಕಾರದಿಂದ ಸಾಧನೆಯ ಹಾದಿಯಲ್ಲಿ ಗೆಲುವಿನ ಒಂದೊಂದೇ ಮೆಟ್ಟಿಲುಗಳನ್ನು ಏರುತ್ತಿದ್ದಾರೆ ಛಾಯಾಗ್ರಾಹಕ ಸುರೇಶ್ ಬಾಬು.