Tag: photoshoot

  • ಮತ್ತೊಂದು ಫೋಟೋಶೂಟ್ ನಲ್ಲಿ ಮಿರಿ ಮಿರಿ ಮಿಂಚಿದ ಸಾನ್ಯಾ

    ಬಿಗ್ ಬಾಸ್ ಮಾಜಿ ಸ್ಪರ್ಧಿ, ನಟಿ ಸಾನ್ಯಾ ಅಯ್ಯರ್ (Sanya Iyer) ಮತ್ತೊಂದು ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಬ್ಲ್ಯಾಕ್ ಬಾಡಿ ಸೂಟ್ ನಲ್ಲಿ ಅವರು ಮಿರಿ ಮಿಂಚಿದ್ದಾರೆ. ಬ್ಲ್ಯಾಕ್ ಕಾಸ್ಟ್ಯೂಮ್ ತುಂಬಾ ಹೊಳೆಯುವ ಹರಳುಗಳಿದ್ದು, ವಿಶೇಷ ವಿನ್ಯಾಸದಲ್ಲಿ ಅದನ್ನು ಸಿದ್ದಗೊಳಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಫೋಟೋಶೂಟ್ ಗೆ ಅವರು ಒಳಗಾಗಿದ್ದಾರೆ.

    ಇತ್ತೀಚೆಗಷ್ಟೇ ಬಾಲಿವುಡ್ (Bollywood) ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ (Daboo Ratnani) ಅವರಿಂದ ಫೋಟೋಶೂಟ್ (Photo Shoot) ಮಾಡಿಸಿಕೊಂಡಿದ್ದರು. ಆ ಫೋಟೋಗಳನ್ನು ಒಂದೊಂದೇ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ಹಿಂದೆ ಬಿಳಿ ಬಣ್ಣದ ಕಾಸ್ಟ್ಯೂಮ್ ನಲ್ಲಿ ಥೇಟ್ ರಾಣಿಯಂತೆ ಕಂಡಿದ್ದರು.

    ಕೆಲವು ಘಟನೆಗಳ ನಂತರ ಸಾನ್ಯಾ ತಮ್ಮ ಬದುಕನ್ನು ನಾಜೂಕಾಗಿ ಕಟ್ಟಿಕೊಳ್ಳುತ್ತಿದ್ದಾರೆ. ಅಲ್ಲದೇ ಗ್ಲಾಮರ್ ಬಗ್ಗೆಯೂ ಅವರು ಕಾಳಜಿ ತಗೆದುಕೊಳ್ಳುತ್ತಿದ್ದಾರೆ. ಈ ಕುರಿತು ಅವರು ಮಾತನಾಡಿ, ‘ಕಂಬಳದಲ್ಲಿ ನಾನು ಕುಡಿದುಕೊಂಡು ಬಂದಿದ್ದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದರು. ಅದು ಸುಳ್ಳು. ನಾನು ಜೀರೋ ಶುಗರ್ ಡಯೆಟ್ ಮಾಡುತ್ತಿದ್ದೇನೆ. ಮುಂಬೈನಲ್ಲಿ ಶೂಟಿಂಗ್ ಇರುವ ಕಾರಣಕ್ಕಾಗಿ ಇದೆಲ್ಲವನ್ನೂ ಮಾಡುತ್ತಿದ್ದೇನೆ. ಅಂಥದ್ದರಲ್ಲಿ ಮದ್ಯಪಾನ ಹೇಗೆ ಮಾಡಲಿ? ಜೊತೆಗೆ ನಾನು ರುದ್ರಾಕ್ಷಿಯನ್ನು ಧರಿಸಿದ್ದೇನೆ. ಇದನ್ನು ಧರಿಸಿದಾಗ ಮದ್ಯಪಾನ, ಧೂಮಪಾನ ಮಾಡಲ್ಲ. ಸುಮ್ಮನೆ ನನ್ನ ಮೇಲೆ ಆಪಾದನೆ ಹೊರಿಸಲಾಗುತ್ತಿದೆ’ ಎಂದಿದ್ದರು.

    ಈಗಾಗಲೇ ಜೀವನಲ್ಲಿ ಒಂದು ಲವ್ ಫೆಲ್ಯೂವರ್ ಕಂಡಿರುವ ಪುಟ್ಟಗೌರಿ ಖ್ಯಾತಿಯ ಸಾನ್ಯಾ ಅಯ್ಯರ್ ಮತ್ತು ರೂಪೇಶ್ ಶೆಟ್ಟಿ (Rupesh Shetty) ನಡುವೆ ಏನೋ ನಡೀತಾ ಇದೆ ಎನ್ನುವುದು ಬಿಗ್ ಬಾಸ್ ಮನೆಯಲ್ಲಿದ್ದವರ ಗುಮಾನಿಯಾಗಿತ್ತು. ಅದಕ್ಕೆ ಪುಷ್ಠಿ ಎನ್ನುವಂತೆ ಈ ಜೋಡಿ ಸದಾ ಜೊತೆಯಾಗಿಯೇ ಕ್ಯಾಮೆರಾ ಮುಂದೆ ಕಾಣಿಸಿಕೊಳ್ಳುತ್ತಿತ್ತು. ಅದಕ್ಕೂ ಅವರು ಸ್ಪಷ್ಟನೆ ನೀಡಿದ್ದಾರೆ.

    ರೂಪೇಶ್ ಮತ್ತು ತಮ್ಮ ನಡುವೆ ಅಂಥದ್ದೂ ಏನೂ ಇಲ್ಲ, ನಾವು ಜಸ್ಟ್ ಫ್ರೆಂಡ್ಸ್ ಎಂದು ಹೇಳುವ ಮೂಲಕ ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ. ಏನೇ ಪ್ರಯತ್ನಿಸಿದರೂ, ಅವರುಗಳ ನಡೆ ಮಾತ್ರ ಹಲವು ಅನುಮಾನಗಳನ್ನು ಬಿತ್ತಿದೆ. ಬಿಗ್ ಬಾಸ್ ಮನೆಯಿಂದ ಆಚೆ ಬಂದ ಮೇಲೂ ಸಾನ್ಯಾ ಮತ್ತು ರೂಪೇಶ್ ಹಲವಾರು ಬಾರಿ ಭೇಟಿ ಮಾಡಿದ್ದಾರೆ. ಹಾಗಾಗಿ ಇಬ್ಬರೂ ಪ್ರೀತಿಸುತ್ತಿದ್ದಾರೆ ಎನ್ನುವ ವಿಚಾರ ಹಾಗೆಯೇ ಜನರ ಮನಸ್ಸಿನಲ್ಲಿ ಉಳಿದಿದೆ.

     

    ತಮ್ಮ ತಾಯಿಯನ್ನು ಅಭಿಮಾನದಿಂದ ಕಾಣುವ ಸಾನ್ಯಾ. ಅವರ ತಾಯಿಯ ಬಗ್ಗೆ ಯಾರೇ ಕೆಟ್ಟ ಕಾಮೆಂಟ್ ಮಾಡಿದರೂ ಸಹಿಸುವುದಿಲ್ಲ. ಇತ್ತೀಚಿಗೆ ದೀಪಾ ಅಯ್ಯರ್ ಅವರ (Deepa Iyer) ಹುಟ್ಟುಹಬ್ಬವಿತ್ತು. ಹಾಗಾಗಿ ಸಾನ್ಯ ಅಮ್ಮನಿಗೆ ಸರ್ಪ್ರೈಸ್ ಉಡುಗೊರೆ ನೀಡಿದ್ದರು. ದೊಡ್ಡ ಹೊಟೇಲಿಗೆ ಕರೆದೊಯ್ದು ಕೇಕ್ ಆರ್ಡರ್ ಮಾಡಿ ಅಮ್ಮನಿಂದ ಕಟ್ ಮಾಡಿಸಿದ್ದರು. ಈ ಖುಷಿಯ ಸನ್ನಿವೇಶವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವೀಡಿಯೋ ಶೇರ್ ಆಗ್ತಿದಂತೆ ದೀಪಾ ಅವರ ಡ್ರೆಸ್‌ಗೆ ನೆಗೆಟಿವ್ ಕಾಮೆಂಟ್‌ ಹರಿದು ಬಂದಿತ್ತು.

  • ಹೊಸ ಫೋಟೋ ಶೂಟ್ ನಲ್ಲಿ ಸಂಗೀತಾ ಭಟ್ ಸಖತ್ ಹಾಟ್ ಹಾಟ್

    ಹೊಸ ಫೋಟೋ ಶೂಟ್ ನಲ್ಲಿ ಸಂಗೀತಾ ಭಟ್ ಸಖತ್ ಹಾಟ್ ಹಾಟ್

    ರಡನೇ ಸಲ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ನಾಯಕಿಯಾಗಿ ಕಾಣಿಸಿಕೊಂಡು, ವೈಯಕ್ತಿಕ ಕಾರಣದಿಂದಾಗಿ ಹಲವು ವರ್ಷಗಳ ಕಾಲ ಚಿತ್ರೋದ್ಯಮದಿಂದ ದೂರ ಉಳಿದಿದ್ದವರು ಸಂಗೀತಾ ಭಟ್. ಮೀಟೂ ನಂತರ ಅವರು ಸಿನಿಮಾಗಳಲ್ಲಿ ನಟಿಸಲು ಆಸಕ್ತಿ ತೋರಿಸಲಿಲ್ಲ.

    ಈಗ ಮತ್ತೆ ಬಣ್ಣ ಲೋಕದಲ್ಲಿ ಬ್ಯುಸಿಯಾಗಿದ್ದಾರೆ. ಹಲವಾರು ಫೋಟೋಶೂಟ್ ಗಳ ಮೂಲಕ ಅವರು ಗಮನ ಸೆಳೆಯುತ್ತಿದ್ದಾರೆ. ಹಾಕಿದ ಬಹುತೇಕ ಫೋಟೋಗಳು ನೋಡುಗರ ಗಮನ ಸೆಳೆಯುತ್ತಿವೆ.

    `ಎರಡನೇ ಸಲ’, `ಅನುಕ್ತ’ ಸಿನಿಮಾಗಳ ಮೂಲಕ ಗಮನ ಸೆಳೆದ ನಟಿ ಸಂಗೀತಾ ಭಟ್ ಈಗ ಪವರ್‌ಫುಲ್ ಪಾತ್ರದ ಮೂಲಕ ಮಿಂಚಲು ರೆಡಿಯಾಗಿದ್ದಾರೆ. ರೂಪಾಂತರ ಚಿತ್ರದಲ್ಲಿ ನಟ ಕಿಶೋರ್ ಜತೆ ಪ್ರಮುಖ ಪಾತ್ರದಲ್ಲಿ ಸಂಗೀತಾ ನಟಿಸಿದ್ದಾರೆ.

    ಜೊತೆಗೆ ದ್ವಿತ ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಭಾರ್ಗವಿ ತಿರುಮಲೇಶ್ ಹಾಗೂ ರಂಗನಾಥ್ ಬಿ ನಿರ್ಮಿಸುತ್ತಿರುವ ‘ಆಪರೇಶನ್ ಡಿ’ (Operation D) ಚಿತ್ರಕ್ಕೆ ಸಂಗೀತ ಭಟ್ (Sangeeta Bhatt) ಹಾಗೂ ಅವರ ಪತಿ ಸುದರ್ಶನ್ ರಂಗಪ್ರಸಾದ್ (Sudarshan Rangaprasad) ಧ್ವನಿ ನೀಡಿದ್ದಾರೆ.

    ವಿಭಿನ್ನ ರೀತಿಯಲ್ಲಿ Mythology Concept ಇಟ್ಟುಕೊಂಡು Teaser ಸಿದ್ಧವಾಗುತ್ತಿದ್ದು, ಸದ್ಯದಲ್ಲೇ ಬಿಡುಗಡೆಯಾಗಲಿದೆ.  ಕನ್ನಡದ ಹಲವಾರು ಸಿನಿಮಾಗಳಲ್ಲಿ ನಟನಾಗಿದ್ದ ತಿರುಮಲೇಶ್ ವಿ ಈ ಚಿತ್ರದ ಮೂಲಕ ನಿರ್ದೇಶಕರಾಗಿದ್ದಾರೆ.

    ಕನ್ನಡದ ಹಲವಾರು ಸಿನಿಮಾಗಳ ಮೂಲಕ ತಮ್ಮದೇ ಆದ ಅಭಿಮಾನಿ ಬಳಗ ಹೊಂದಿರುವ ನಟಿ ಸಂಗೀತಾ ಭಟ್ (Sangeeta Bhatt) ಈ ಹಿಂದೆ ಇಂಡೋನೇಷ್ಯಾದ (Indonesia) ಬಾಲಿಗೆ ಪ್ರಯಾಣ ಬೆಳೆಸಿದ್ದರು. ಬಾಲಿಯಲ್ಲಿ (Bali) ಅವರು ಬೇಸಿಗೆಯನ್ನು ಎಂಜಾಯ್ ಮಾಡಿದ್ದರು.

    ಇದೇ ಮೊದಲ ಬಾರಿ ಎನ್ನುವಂತೆ ಸಂಗೀತಾ ಬಿಕಿನಿಯಲ್ಲಿ (Bikini) ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದರು. ಈ ಬಾರಿಯೂ ಸಖತ್ ಫೋಟೋ ಶೂಟ್ ಮಾಡಿಸಿದ್ದಾರೆ.

     

    ಹೊಸ ಫೋಟೋ ಶೂಟ್ ನಲ್ಲಿ ಕೈಯಲ್ಲಿ ಬಿಡಿ ಹಿಡಿದುಕೊಂಡು ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದ್ದಾರೆ. ಇದು ಕೇವಲ ಫೋಟೊಶೂಟ್ಟಾ ಅಥವಾ ಯಾವುದಾದರೂ ಸಿನಿಮಾಗಾಗಿ ಮಾಡಿಸಿದ್ದಾ ಎನ್ನುವ ಕುತೂಹಲ ಮೂಡಿಸಿದ್ದಾರೆ.

  • ಚಳಿ ಚಳಿ ಬಿಸಿ ಬಿಸಿಯಲ್ಲಿ ಯಾಶಿಕಾ..

    ಚಳಿ ಚಳಿ ಬಿಸಿ ಬಿಸಿಯಲ್ಲಿ ಯಾಶಿಕಾ..

    ಕಾಲಿವುಡ್ ನಟಿ ಯಾಶಿಕಾ ಆನಂದ್ ಹಾಟ್ ಫೋಟೋ ಶೂಟ್
    ಸೌಂದರ್ಯದಿಂದಲೇ ಪಡ್ಡೆಗಳ ಮೈ ಬಿಸಿ ಹೆಚ್ಚಿಸಿದ ನಟಿ
    ಯಾಶಿಕಾ ನಟಿಯಾಗಿದ್ದರೂ, ಬಿಗ್ ಬಾಸ್ ಮೂಲಕ ಜನಪ್ರಿಯತೆ
    ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಈ ನಟಿ ಬದುಕುಳಿದಿದ್ದೇ ಪವಾಡ
    ಸದ್ಯ ಆರು ಚಿತ್ರಗಳಿಗೆ ಸಹಿ ಮಾಡಿ, ಅಚ್ಚರಿ ಮೂಡಿಸಿದ ಚೆಲುವೆ
    ವಿಜಯ ದೇವರಕೊಂಡ ಜೊತೆ ತೆರೆ ಹಂಚಿಕೊಂಡಿದ್ದಾರೆ ಯಾಶಿಕಾ
    ಮಾದಕ ನೋಟದಲ್ಲಿ ಯಶಿಕಾ
    ಪಡ್ಡೆಹುಡುಗರ ನಿದ್ದೆಗೆಡಿಸಿದ ಯಶಿಕಾ ಫೋಟೋಶೂಟ್‌

     

  • ಲಕ್ಷ ದ್ವೀಪದ ಬಗ್ಗೆ ಬಾಲಿವುಡ್ ನಟಿ ಪೂನಂ ಪಾಂಡೆ ಭಿನ್ನ ಹೇಳಿಕೆ

    ಲಕ್ಷ ದ್ವೀಪದ ಬಗ್ಗೆ ಬಾಲಿವುಡ್ ನಟಿ ಪೂನಂ ಪಾಂಡೆ ಭಿನ್ನ ಹೇಳಿಕೆ

    ಪ್ರಧಾನಿ ನರೇಂದ್ರ ಮೋದಿ ಲಕ್ಷ ದ್ವೀಪಕ್ಕೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಅದು ವಿವಾದವಾಗಿ ಮಾರ್ಪಟ್ಟಿತು. ಮಾಲ್ಡೀವ್ಸ್ ಸಚಿವರು ಮೋದಿಯ ಲಕ್ಷ ದ್ವೀಪದ ಭೇಟಿಯನ್ನು ವಿವಾದವಾಗಿ ರೂಪಾಂತರಿಸಿದರು. ಅದಕ್ಕ ತಕ್ಕ ಪಾಠವನ್ನು ಅವರು ಕಲಿತಾಗಿದೆ. ಇದೆಲ್ಲ ಆದ ಬೆನ್ನಲ್ಲೇ ಅನೇಕರು ಮಾಲ್ಡೀವ್ಸ್ ಪ್ರವಾಸವನ್ನು ರದ್ದುಗೊಳಿಸಿ, ಮೋದಿ ಬೆಂಬಲಕ್ಕೆ ನಿಂತಿದ್ದಾರೆ. ಅದರಲ್ಲಿ ಬಾಲಿವುಡ್ ನಟಿ ಪೂನಂ ಪಾಂಡೆ (Poonam Pandey) ಕೂಡ ಒಬ್ಬರು.

    ಮೋದಿ ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿದ ಕೆಲವು ದಿನಗಳ ಬಳಿಕ ಮಾಲ್ಡೀವ್ಸ್‌ (Maldives) ಸಚಿವರು, ಭಾರತವು ಮಾಲ್ಡೀವ್ಸ್‌ ದೇಶವನ್ನು ಗುರಿಯಾಗಿಸಿಕೊಂಡಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಸಚಿವ ಅಬ್ದುಲ್ಲಾ ಮಹಜೂಮ್ ಮಜೀದ್, ಭಾರತವು ಮಾಲ್ಡೀವ್ಸ್‌ ಅನ್ನು ಟಾರ್ಗೆಟ್ ಮಾಡುತ್ತಿದೆ. ಮಾಲ್ಡೀವ್ಸ್‌ನ ಬೀಚ್ ಪ್ರವಾಸೋದ್ಯಮದ (Maldives Beach Tourism) ಜೊತೆಗೆ ಸ್ಪರ್ಧಿಸಲು ಭಾರತಕ್ಕೆ ಸಾಕಷ್ಟು ಸವಾಲುಗಳಿವೆ. ಭಾರತದ ಬೀಚ್‌ಗಳು ಕೊಳಕಾಗಿವೆ ಎಂಬುದಾಗಿ ವ್ಯಂಗ್ಯವಾಡಿದ್ದರು. ಆದ್ರೆ ಸಚಿವರು ಮಾಡಿರುವ ಅವಹೇಳನಾಕಾರಿ ಟ್ವೀಟ್‌ಗೆ ಮಾಲ್ಡೀವ್ಸ್‌ನ ಮಾಜಿ ಅಧ್ಯಕ್ಷರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅಂಡಮಾನ್ ಮತ್ತು ಉಡುಪಿ ಬೀಚ್ ಗಳ ಫೋಟೋ ಹಾಕಿ, ಮಾಲ್ಡೀವ್ಸ್  ವಿರುದ್ಧ ಹರಿಹಾಯ್ದಿದ್ದರು. ಅದಕ್ಕೆ ಅಮಿತಾಭ್ ಬಚ್ಚನ್ ಸೇರಿದಂತೆ ಹಲವರು ಮೆಚ್ಚುಗೆಯನ್ನು ವ್ಯಕ್ತ ಪಡಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಪೂನಂ ಪಾಂಡೆ ಕೂಡ ಪೋಸ್ಟ್ ಮಾಡಿದ್ದಾರೆ.

    ಈವರೆಗೂ ಪೂನಂ ಪಾಂಡೆ ಮಾಲ್ಡೀವ್ಸ್ ನಲ್ಲಿ ತಮ್ಮ ಫೋಟೋ ಶೂಟ್ ಮಾಡಿಸಿಕೊಳ್ಳುತ್ತಿದ್ದರಂತೆ. ಈಗಲೂ ಫೋಟೋ ಶೂಟ್ ಗಾಗಿ ಬುಕ್ ಕೂಡ ಮಾಡಿದ್ದರು. ಎಲ್ಲವನ್ನೂ ಪೂನಂ ಕ್ಯಾನ್ಸಲ್ ಮಾಡಿದ್ದಾರೆ. ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇನ್ಮುಂದೆ ಅವರು ಲಕ್ಷ ದ್ವೀಪದಲ್ಲಿ ಫೋಟೋ ಶೂಟ್ ಮಾಡಿಸಿಕೊಳ್ಳುವುದಾಗಿ ಹೇಳಿದ್ದಾರೆ.

  • ದೀಪಾವಳಿ ಹಬ್ಬಕ್ಕೆ ಪುತ್ರಿ ಜೊತೆ ಮಾಲಾಶ್ರೀ ಫೋಟೋ ಶೂಟ್

    ದೀಪಾವಳಿ ಹಬ್ಬಕ್ಕೆ ಪುತ್ರಿ ಜೊತೆ ಮಾಲಾಶ್ರೀ ಫೋಟೋ ಶೂಟ್

    ನಾಡಿನೆಲ್ಲೆಡೆ ದೀಪಾವಳಿ (Deepavali) ಸಂಭ್ರಮ. ಬೆಳಕಿನ ಹಬ್ಬದ ಸಂಭ್ರಮ ಹಿರಿಯ ನಟಿ ಮಾಲಾಶ್ರೀ (Malashree) ಅವರ ಮನೆಯಲ್ಲಿ ಈ ಬಾರಿ ಕೊಂಚ ಹೆಚ್ಚ ಎನ್ನಬಹುದು. ಹಬ್ಬದ ಸಂಭ್ರಮವನ್ನು ಸಂಭ್ರಮಿಸಲು ಮಾಲಾಶ್ರೀ ಅವರು ಮಗಳು ಆರಾಧನಾ ಜೊತೆ ಹೊಸ ಲುಕ್ ನಲ್ಲಿ ಮಿಂಚಿದ್ದಾರೆ. ಅಮ್ಮ – ಮಗಳು ನೂತನ ರೀತಿಯಲ್ಲಿ ಫೋಟೊ ಶೂಟ್ (Photoshoot) ಮಾಡಿಸಿಕೊಂಡಿದ್ದಾರೆ.

    ದೀಪಾವಳಿ ಹಬ್ಬದ ಸಂದರ್ಭದಲ್ಲಿ ಈ ಫೋಟೊ ಶೂಟ್ ಮಾಡಿಸಿಕೊಂಡಿದ್ದೇವೆ. ನಾಡಿನ ಸಮಸ್ತ ಜನತೆಗೆ ದೀಪಾವಳಿ ಶುಭಾಶಯ ತಿಳಿಸುತ್ತೇನೆ. ಬಹಳ ವರ್ಷಗಳ ನಂತರ ನಾನು ಫೋಟೊ ಶೂಟ್ ಮಾಡಿಸಿಕೊಂಡಿದ್ದೀನಿ. ಮಗಳ ಜೊತೆಗೆ ಫೋಟೊ ಶೂಟ್ ಮಾಡಿಸಿಕೊಂಡಿರುವುದು ಹೆಚ್ಚು ಖುಷಿಯಾಗಿದೆ. ಈ ವರ್ಷ ನನ್ನ ಮಗಳು “ಕಾಟೇರ” ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದಾಳೆ. ನನಗೆ ತಾವು ನೀಡಿರುವ ಪ್ರೋತ್ಸಾಹ ನನ್ನ ಮಗಳಿಗೂ ನೀಡಿ ಎನ್ನುತ್ತಾರೆ ನಟಿ ಮಾಲಾಶ್ರೀ.

    ಆರಾಧಾನ ಹಾಡಿ ಹೊಗಳಿದ ಡಿ ಬಾಸ್

    ದರ್ಶನ್ (Darshan) ನಟನೆಯ ‘ಕಾಟೇರ’ (Katera) ಸಿನಿಮಾದಲ್ಲಿ ಆರಾಧನಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಮುಗಿಸಿದೆ. ಇದೇ ಖುಷಿಯಲ್ಲಿ ಸಿನಿಮಾ ಬಗ್ಗೆ ಚಿತ್ರತಂಡ ಸುದ್ದಿಗೋಷ್ಠಿ ನಡೆಸಿ ಅಪ್‌ಡೇಟ್ ಹಂಚಿಕೊಂಡಿತ್ತು. ಈ ವೇಳೆ ಮಾಲಾಶ್ರೀ ಪುತ್ರಿ, ಸಿನಿಮಾದ ನಾಯಕಿ ಆರಾಧನಾ(Aradhana Ram) ಬಗ್ಗೆ ದರ್ಶನ್ ಹಾಡಿ ಹೊಗಳಿದ್ದಾರೆ.

    ದೊಡ್ಡ ಪ್ರೋಡಕ್ಷನ್ ಅನ್ನೋದಕ್ಕಿಂತ, ನನಗೆ ಸಿನಿಮಾ ದೊಡ್ಡದು. ಇಡೀ ಸಿನಿಮಾ ಎಲ್ಲರನ್ನೂ ಕರೆದುಕೊಂಡು ಹೋಗುತ್ತದೆ. ಇವತ್ತು ಕ್ಲೈಮ್ಯಾಕ್ಸ್ ಶೂಟ್ ನಡೆದಿದೆ. ಇನ್ನೂ 3 ಸಾಂಗ್ ಶೂಟ್ ಬಾಕಿಯಿದೆ. ಸಿನಿಮಾ ಶೂಟಿಂಗ್‌ಗೆ ಇಂದು 100ನೇ ದಿನ, ಆದರೆ ನನ್ನ ಡೇಟ್ಸ್ 85 ದಿನ ಅಷ್ಟೇ. ನನಗೆ ಇಂದು 71ನೇ ದಿನದ ಶೂಟಿಂಗ್‌ ದಿನ ಎಂದು ಚಿತ್ರದ ನಟ ದರ್ಶನ್ ಮಾಹಿತಿ ನೀಡಿದ್ದರು.‌ ಅಷ್ಟೂ ದಿನವೂ ಆರಾಧನಾ ವೃತ್ತಿ ನಿರತ ನಟಿಯಂತೆ ಕಂಡರು ಎಂದಿದ್ದರು.

     

    ರಕ್ಷಿತಾ (Rakshitha) ಅವರ ಸಾಲಿಗೆ ಆರಾಧನಾ ನಿಲ್ಲುತ್ತಾರೆ. ಅವರು ಒನ್ ಟೇಕ್ ಆರ್ಟಿಸ್ಟ್ ಎಂದು ಸಹನಟಿ ಬಗ್ಗೆ ದರ್ಶನ್ ಮೆಚ್ಚುಗೆ ಸೂಚಿಸಿದ್ದರು. ಮಾಲಾಶ್ರೀ ಅವರ ಬಗ್ಗೆ ನಾವು ಮಾತನಾಡೋಕೆ ಆಗುತ್ತಾ? ಅವರ ಮುಂದೆ ಯಾರೇ ನಿಂತರೂ ಬಡಿದು ಬಾಯಿಗೆ ಹಾಕಿ ಕೊಳ್ಳುತ್ತಾ ಇದ್ರು ಎಂದು ಆರಾಧನಾ ಅವರನ್ನು ಹಾಡಿ ಹೊಗಳಿದ್ದರು.

  • ಸಾನ್ಯ ಅಯ್ಯರ್ ಈಗ ಇನ್ನೂ ಸಖತ್ ಹಾಟ್

    ಸಾನ್ಯ ಅಯ್ಯರ್ ಈಗ ಇನ್ನೂ ಸಖತ್ ಹಾಟ್

    ಪುಟ್ಟಗೌರಿ ಖ್ಯಾತಿಯ ಸಾನ್ಯ ಅಯ್ಯರ್, ಸೋಷಿಯಲ್ ಮೀಡಿಯಾ ಮೂಲಕ ತಮ್ಮ ಅಭಿಮಾನಿಗಳನ್ನು ಸಖತ್  ಎಂಗೇಜ್ ಆಗಿಟ್ಟಿರುತ್ತಾರೆ. ಹೊಸ ಹೊಸ ಫೋಟೋಗಳನ್ನು ಶೇರ್ ಮಾಡುವ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಸಾನ್ಯ ಇದೀಗ ಮತ್ತೊಂದು ಫೋಟೋ ಶೂಟ್ ಮಾಡಿಸಿಕೊಂಡಿದ್ದು, ಅವುಗಳನ್ನು ಇನ್ಸ್ಟಾದಲ್ಲಿ ಶೇರ್ ಮಾಡಿದ್ದಾರೆ. ಅಭಿಮಾನಿಗಳು ಆ ಫೋಟೋಗೆ ಭಾರೀ ಮೆಚ್ಚಿದ್ದಾರೆ.

    ಇಂದ್ರಜಿತ್ ಲಂಕೇಶ್ ನಿರ್ದೇಶನದ ‘ಗೌರಿ’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಂತೆಯೇ ಕಿರುತೆರೆಯ ಪುಟ್ಟಗೌರಿ ಸಾಕಷ್ಟು ಬದಲಾವಣೆ ಕಾಣುತ್ತಿದ್ದಾರೆ. ಸಖತ್ ಹಾಟ್ ಹಾಟ್ ಆಗಿ ಫೋಟೋಶೂಟ್ ಮಾಡಿಸಿಕೊಂಡಿದ್ದ ಸಾನ್ಯ ಅಯ್ಯರ್ (Sanya Iyer), ಇದೀಗ ಮತ್ತೊಂದು ಫೋಟೋ ಶೂಟ್ (Photoshoot) ನಲ್ಲಿ ಭಾಗಿಯಾಗಿದ್ದು,  ಆ ಫೋಟೋಗಳನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಬ್ಲೌಸ್ ಇಲ್ಲದೇ ಕೇವಲ ಸೀರೆ ಉಟ್ಟುಕೊಂಡು ಫೋಟೋ ಶೂಟ್ ಮಾಡಿಸಿಕೊಂಡಿರುವ ಸಾನ್ಯಾ ಅಯ್ಯರ್. ಆ ಫೋಟೋದಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಬ್ಯಾಕ್ ಲೆಸ್ ಪೋಸ್ ಕೂಡ ನೀಡಿದ್ದಾರೆ. ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿವೆ. ಕೆಲವರು ಪಾಸಿಟಿವ್ ಕಾಮೆಂಟ್ ಮಾಡಿದರೆ, ಇನ್ನೂ ಕೆಲವರು ನೆಗೆಟಿವ್ ಕಾಮೆಂಟ್ ಕೂಡ ಮಾಡಿದ್ದಾರೆ.

    ಈ ಹಿಂದೆಯೂ ಸಾನ್ಯ ಬಿಕಿನಿ ಫೋಟೋಶೂಟ್‌ನಲ್ಲಿ ಬೋಲ್ಡ್ ಆಗಿ ಕಾಣಿಸಿಕೊಳ್ಳುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದರು. ಈಗ ಹೊಸ ಲುಕ್‌ನಲ್ಲಿ ಸ್ಟೈಲೀಶ್ ಗೆಟಪ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ನಟಿ ಪೋಸ್ ನೀಡಿದ್ದಾರೆ. ಬ್ಲೌಸ್ ಇಲ್ಲದೇ ಸೀರೆ ತೊಟ್ಟಿದ್ದಾರೆ.

    ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ(Bigg Boss Kannada) ಸಾನ್ಯ ಅಯ್ಯರ್ ಸ್ಪಧಿಯಾಗಿ ಭಾಗವಹಿಸಿದ್ದರು. ರೂಪೇಶ್ ಶೆಟ್ಟಿ ಜೊತೆಗಿನ ಸಾನ್ಯ ಸ್ನೇಹ ಹೈಲೆಟ್ ಆಗಿತ್ತು. ಈ ಸೀಸನ್‌ನಲ್ಲಿ ರೂಪೇಶ್ ಶೆಟ್ಟಿ (Roopesh Shetty) ವಿನ್ನರ್  ಆಗಿದ್ದರು.

     

    ಇದೀಗ ಸಾನ್ಯ ಹೊಸ ಸಿನಿಮಾವನ್ನು ಒಪ್ಪಿಕೊಂಡು ಶೂಟಿಂಗ್ ನಲ್ಲಿ ನಿರತರಾಗಿದ್ದಾರೆ. ಎರಡು ಹಂತದ ಶೂಟಿಂಗ್ ಕೂಡ ಮುಗಿದಿದ್ದು, ಈ ಸಿನಿಮಾವನ್ನು ಇಂದ್ರಜಿತ್ ಲಂಕೇಶ್ ನಿರ್ದೇಶನ ಮಾಡುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೈಯಲ್ಲಿ ಖಡ್ಗ ಹಿಡಿದು ರಾಣಿಯಂತೆ ಕಂಗೊಳಿಸಿ ಅಚ್ಚರಿ ಮೂಡಿಸಿದ IPS ರೂಪಾ

    ಕೈಯಲ್ಲಿ ಖಡ್ಗ ಹಿಡಿದು ರಾಣಿಯಂತೆ ಕಂಗೊಳಿಸಿ ಅಚ್ಚರಿ ಮೂಡಿಸಿದ IPS ರೂಪಾ

    ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ (IPS Officer Roopa) ಅವರು ಎಲ್ಲರಿಗೂ ಚಿರಪರಿಚಿತ. ಖಡಕ್ ಪೊಲೀಸ್ ಅಧಿಕಾರಿಯಾಗಿರುವ ರೂಪಾ ಅವರು ಒಂದು ಫೋಟೋಶೂಟ್ ಮೂಲಕ ಇದೀಗ ಭಾರೀ ಸುದ್ದಿಯಾಗಿದ್ದಾರೆ.

    ಹೌದು. ನಾಡಿನೆಲ್ಲೆಡೆ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ. ಅಂತೆಯೇ ಹಬ್ಬದ ಪ್ರಯುಕ್ತ ಕೆಲವರು ಫೋಟೋಶೂಟ್ (D Roopa Photoshoot) ಮಾಡಿಸಿಕೊಳ್ಳುತ್ತಿದ್ದಾರೆ. ಅಂತೆಯೇ ಇಂದು ಖಡಕ್ ಅಧಿಕಾರಿ ಕೂಡ ಲಾಠಿ ಹಿಡಿಯುವ ಕೈಯಲ್ಲಿ ಖಡ್ಗ ಹಿಡಿದು ವಿಭಿನ್ನವಾಗಿ ಫೋಟೋಶೂಟ್ ಮಾಡಿಸಿಕೊಂಡಿದ್ದು, ಇದೀಗ ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

    ಪೊಲೀಸ್ ಯೂನಿಫಾರ್ಮ್‍ನಲ್ಲಿ ಇರುತ್ತಿದ್ದ ರೂಪಾ ಅವರು ಇದೀಗ ಕೈಯಲ್ಲಿ ಖಡ್ಗ ಹಿಡಿದು, ಕೆಂಪು ಸೀರೆ, ಹಸಿರು ಬಣ್ಣ ಬ್ಲೌಸ್, ಮೈತುಂಬಾ ಆಭರಣ ತೊಟ್ಟು ಸಿಂಹಾಸನದಲ್ಲಿ ಥೇಟ್ ರಾಣಿಯಂತೆ ಕಂಗೊಳಿಸುತ್ತಿದ್ದಾರೆ. ಹೆಣ್ಣು ನಾಲ್ಕು ಗೋಡೆಯೊಳಗೆ ಬಂಧಿಯಲ್ಲ, ಆಕೆಯೊಳಗೊಂದು ಶಕ್ತಿ ಇದೆ. ಸಮಾಜದಲ್ಲಿ ಸವಾಲುಗಳನ್ನು ಎದುರಿಸಿ ನಿಲ್ಲುವುದರ ಜೊತೆಗೆ ಯಾವುದೇ ಕ್ಷೇತ್ರದಲ್ಲೂ ತನ್ನನ್ನು ತಾನು ತೊಡಗಿಸಿಕೊಂಡು ಸಮಾಜಕ್ಕೆ ಮಾದರಿಯಾಗುತ್ತಾಳೆ ಎಂಬುದಕ್ಕೆ ಡಿ ರೂಪಾ ಉತ್ತಮ ನಿದರ್ಶನ ಎಂದು ಫೋಟೋ ಅಪ್ಲೋಡ್ ಮಾಡಿರುವ ಭಾರ್ಗವಿ ಕೆ. ಆರ್ ಎಂಬವರು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ದಸರಾ ಹಬ್ಬದ ಸಂಭ್ರಮದಲ್ಲಿ ಯಶ್- ರಾಧಿಕಾ ದಂಪತಿ

    ರೂಪ ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುತ್ತಿದ್ದಂತೆಯೇ ಹಲವಾರು ಕಾಮೆಂಟ್‍ಗಳು ಬರತೊಡಗಿದವು. ಕೆಲವರು ಹ್ಯಾಟ್ಸಾಫ್ ತುಂಬಾ ಚೆನ್ನಾಗಿ ಕಾಣಿಸುತ್ತಿದ್ದೀರಿ ಅಂದ್ರೆ ಇನ್ನೂ ಕೆಲವರು ಕಿತ್ತೂರು ರಾಣಿ ಚೆನ್ನಮ್ಮ, ಅಬ್ಬಕ್ಕ ಹಾಗೂ ಜೈ ದುರ್ಗಿ ಅಂತೆಲ್ಲ ಕಾಮೆಂಟ್ ಮಾಡಿದ್ದಾರೆ. ಈ ಫೋಟೋ ಕೇವಲ ಫ್ಯಾಷನ್ ಮಾತ್ರ ಅಲ್ಲ, ಬದಲಾಗಿ ಮಹಿಳಾ ಶಕ್ತಿ ಹಾಗೂ ಸಬಲೀಕರಣದ ಪ್ರತೀಕ ಎಂದು ಫೋಟೋಗೆ ಶೀರ್ಷಿಕೆ ನೀಡಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಾನ್ಯ ಅಯ್ಯರ್ ಮತ್ತಷ್ಟು ಬೋಲ್ಡ್: ಬದಲಾದ ಪುಟ್ಟಗೌರಿ

    ಸಾನ್ಯ ಅಯ್ಯರ್ ಮತ್ತಷ್ಟು ಬೋಲ್ಡ್: ಬದಲಾದ ಪುಟ್ಟಗೌರಿ

    ಇಂದ್ರಜಿತ್ ಲಂಕೇಶ್ ನಿರ್ದೇಶನದ ‘ಗೌರಿ’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಂತೆಯೇ ಕಿರುತೆರೆಯ ಪುಟ್ಟಗೌರಿ ಸಾಕಷ್ಟು ಬದಲಾವಣೆ ಕಾಣುತ್ತಿದ್ದಾರೆ. ಸಖತ್ ಹಾಟ್ ಹಾಟ್ ಆಗಿ ಫೋಟೋಶೂಟ್ ಮಾಡಿಸಿಕೊಂಡಿದ್ದ ಸಾನ್ಯಾ ಅಯ್ಯರ್ (Sanya Iyer), ಇದೀಗ ಮತ್ತೊಂದು ಫೋಟೋ ಶೂಟ್ (Photoshoot) ನಲ್ಲಿ ಭಾಗಿಯಾಗಿದ್ದು,  ಆ ಫೋಟೋಗಳನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಬ್ಲೌಸ್ ಇಲ್ಲದೇ ಕೇವಲ ಸೀರೆ ಉಟ್ಟುಕೊಂಡು ಫೋಟೋ ಶೂಟ್ ಮಾಡಿಸಿಕೊಂಡಿರುವ ಸಾನ್ಯಾ ಅಯ್ಯರ್. ಆ ಫೋಟೋದಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಬ್ಯಾಕ್ ಲೆಸ್ ಪೋಸ್ ಕೂಡ ನೀಡಿದ್ದಾರೆ. ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿವೆ. ಕೆಲವರು ಪಾಸಿಟಿವ್ ಕಾಮೆಂಟ್ ಮಾಡಿದರೆ, ಇನ್ನೂ ಕೆಲವರು ನೆಗೆಟಿವ್ ಕಾಮೆಂಟ್ ಕೂಡ ಮಾಡಿದ್ದಾರೆ.

    ಈ ಹಿಂದೆಯೂ ಸಾನ್ಯಾ ಬಿಕಿನಿ ಫೋಟೋಶೂಟ್‌ನಲ್ಲಿ ಬೋಲ್ಡ್ ಆಗಿ ಕಾಣಿಸಿಕೊಳ್ಳುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದರು. ಈಗ ಹೊಸ ಲುಕ್‌ನಲ್ಲಿ ಸ್ಟೈಲೀಶ್ ಗೆಟಪ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ನಟಿ ಪೋಸ್ ನೀಡಿದ್ದಾರೆ. ಬ್ಲೌಸ್ ಇಲ್ಲದೇ ಸೀರೆ ತೊಟ್ಟಿದ್ದಾರೆ.  ಇದನ್ನೂ ಓದಿ:‘ಫ್ಲರ್ಟ್’ ಮಾಡಲು ರೆಡಿಯಾದ ನಟ ಚಂದನ್

    ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ(Bigg Boss Kannada) ಸಾನ್ಯ ಅಯ್ಯರ್ ಸ್ಪಧಿಯಾಗಿ ಭಾಗವಹಿಸಿದ್ದರು. ರೂಪೇಶ್ ಶೆಟ್ಟಿ ಜೊತೆಗಿನ ಸಾನ್ಯ ಸ್ನೇಹ ಹೈಲೆಟ್ ಆಗಿತ್ತು. ಈ ಸೀಸನ್‌ನಲ್ಲಿ ರೂಪೇಶ್ ಶೆಟ್ಟಿ (Roopesh Shetty) ವಿನ್ನರ್  ಆಗಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಫ್ಲೋರಲ್ ಡ್ರೆಸ್ ನಲ್ಲಿ ನಭಾ ನಟೇಶ್ ಸಖತ್ ಹಾಟ್ ಹಾಟ್

    ಫ್ಲೋರಲ್ ಡ್ರೆಸ್ ನಲ್ಲಿ ನಭಾ ನಟೇಶ್ ಸಖತ್ ಹಾಟ್ ಹಾಟ್

    ‘ವಜ್ರಕಾಯ’ (Vajrakaya) ಸಿನಿಮಾ ಮೂಲಕ ನಭಾ ನಟೇಶ್ ಬಣ್ಣದ ಬದುಕಿಗೆ ಎಂಟ್ರಿ ಕೊಟ್ಟರು. ಬಳಿಕ ಟಾಲಿವುಡ್‌ನತ್ತ ನಭಾ ಮುಖ ಮಾಡಿದ್ದರು. ಆಕ್ಸಿಡೆಂಟ್ ಬಳಿಕ ವಜ್ರಕಾಯ ಸುಂದರಿಗೆ ಅವಕಾಶ ಕಮ್ಮಿಯಾಗಿದೆ. ಸದ್ಯ ನಯಾ ಫೋಟೋಶೂಟ್‌ನಿಂದ ನಭಾ ಮಿಂಚ್ತಿದ್ದಾರೆ.

    ಫ್ಲೋರಲ್ ಡ್ರೆಸ್ ನಲ್ಲಿ ಕ್ಯೂಟ್ ಆಗಿ ಕಾಣುತ್ತಿರುವ ನಭಾ, ಫುಲ್ ಸ್ಲೀವ್ ಕಟೌಟ್ ಡ್ರೆಸ್ ನಲ್ಲಿ ಮಿರಿಮಿರಿ ಮಿಂಚುತ್ತಿದ್ದಾರೆ. ಕಾಸ್ಟ್ಯೂಮ್ ವಿನ್ಯಾಸವೇ ಹೊಸದಾಗಿದೆ. ಹಾಗಾಗಿ ನೋಡುಗರ ಗಮನ ಸೆಳೆಯುತ್ತಿದೆ.  ಇದನ್ನೂ ಓದಿ:‘ಸಂಜೆ ಮೇಲೆ ಸುಮ್ನೆ ಹಂಗೆ’ ಅಂತಿದ್ದಾರೆ ನೀನಾಸಂ ಸತೀಶ್: ಮ್ಯಾಟ್ನಿ ಹಾಡು ವೈರಲ್

    ಇಂಡಸ್ಟ್ರಿಯಲ್ಲಿ ಶ್ರೀಲೀಲಾ (Sreeleela), ರಶ್ಮಿಕಾ ಮಂದಣ್ಣ(Rashmika Mandanna), ಮೃಣಾಲ್ ಜಮಾನ ನಡೆಯುತ್ತಿದೆ. ಇದರ ಮಧ್ಯೆ ‘ಇಸ್ಮಾರ್ಟ್ ಶಂಕರ್’ (Ismart Shankar) ಬ್ಯೂಟಿ ನಭಾ ಕಡೆ ನಿರ್ಮಾಪಕರು ಕ್ಯಾರೇ ಅನ್ನುತ್ತಿಲ್ಲ. ಕನ್ನಡದ ವಜ್ರಕಾಯ ಚಿತ್ರ ಶಿವಣ್ಣಗೆ ನಾಯಕಿಯಾಗಿ ಅದ್ದೂರಿಯಾಗಿ ನಭಾ ನಟೇಶ್ (Nabha Natesh) ಎಂಟ್ರಿ ಕೊಟ್ಟರು. ಬಳಿಕ ರಾಮ್ ಪೋತಿನೇನಿ, ರವಿತೇಜಾಗೆ ನಾಯಕಿಯಾಗಿ ನಭಾ ಮಿಂಚಿದ್ದರು.

    ಶಿವರಾಜ್‌ಕುಮಾರ್‌ಗೆ (Shivarajkumar) ನಾಯಕಿಯಾಗುವ ಮೂಲಕ ಸ್ಯಾಂಡಲ್‌ವುಡ್‌ಗೆ (Sandalwood) ಪರಿಚಿತರಾದ ನಟಿ ನಭಾ ಅವರು ಮೊದಲ ಚಿತ್ರದಲ್ಲೇ ತನ್ನ ಅಭಿನಯದ ಮೂಲಕ ಸೈ ಎನಿಸಿಕೊಂಡರು. ಕನ್ನಡದ ಒಂದೆರೆಡು ಚಿತ್ರಗಳಲ್ಲಿ ನಟಿಸಿದ ಈ ಶೃಂಗೇರಿ ಬೆಡಗಿ, ಟಾಲಿವುಡ್‌ನತ್ತ ಮುಖ ಮಾಡಿದ್ರು.

    ‘ಇಸ್ಮಾರ್ಟ್ ಶಂಕರ್’ ಚಿತ್ರದಲ್ಲಿ ರಾಮ್ ಪೋತಿನೇನಿಗೆ ನಭಾ ಜೋಡಿಯಾಗಿ ನಟಿಸಿ ಗಮನ ಸೆಳೆದಿದ್ದರು. ಇದಾದ ಬಳಿಕ ‘ಡಿಸ್ಕೋ ರಾಜಾ’ ಸಿನಿಮಾದಲ್ಲಿ ರವಿ ತೇಜಾ(Ravi Teja) ಜೊತೆ ನಟಿಸಿದ್ದರು. ಭಿನ್ನ ಪಾತ್ರಗಳ ಮೂಲಕ ಗಮನ ಸೆಳೆದಿರೋ ನಟಿ ನಭಾ ಅವರು ಹೊಸ ಬಗೆಯ ಪಾತ್ರದ ಹುಡುಕಾಟದಲ್ಲಿದ್ದಾರೆ.

    ಕಳೆದ ವರ್ಷ ತಮಗೆ ಆದ ಆಕ್ಸಿಡೆಂಟ್‌ನಿಂದ ಈಗ ಚೇತರಿಕೊಂಡಿದ್ದೇನೆ ಎಂದು ನಟಿ ನಭಾ ಸೋಷಿಯಲ್ ಮೀಡಿಯಾದಲ್ಲಿ ತಿಳಿಸಿದ್ದರು. ಈ ಮೂಲಕ ಮತ್ತೆ ಸಿನಿಮಾ ಮಾಡೋದಾಗಿ ಹೇಳಿದ್ದರು. ಸಾಲು ಸಾಲು ಫೋಟೋಶೂಟ್‌ನಿಂದ ನಭಾ ಹಾಟ್ ಪೋಸ್ ಕೊಡ್ತಿದ್ದಾರೆ. ಆದರೆ ಅವರಿಗೆ ಯಾವುದೇ ಸಿನಿಮಾ ಚಾನ್ಸ್ ಸಿಗುತ್ತಿಲ್ಲ.

    ಸದ್ಯ ಬಿಳಿ ಬಣ್ಣದ ಉಡುಗೆಯಲ್ಲಿ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಹಾಟ್ ಲುಕ್‌ನಿಂದ ಪಡ್ಡೆಹುಡುಗರ ದಿಲ್ ಕದ್ದಿದ್ದಾರೆ. ಇನ್ನಾದರೂ ನಭಾಗೆ ಸಿನಿಮಾ ಚಾನ್ಸ್ ಸಿಗುತ್ತಾ? ಶ್ರೀಲೀಲಾ, ರಶ್ಮಿಕಾ, ಮೃಣಾಲ್‌ಗೆ ನಭಾ ಸಿನಿಮಾ ಚಾನ್ಸ್ ಗಿಟ್ಟಿಸಿಕೊಂಡು ಠಕ್ಕರ್ ಕೊಡ್ತಾರಾ ಎಂಬುದೇ ಸದ್ಯದ ಪ್ರಶ್ನೆಯಾಗಿದೆ.

     

    2021ರಲ್ಲಿ ಕಡೆಯದಾಗಿ ನಿತಿನ್ ನಾಯಕಿಯಾಗಿ ‘ಮೇಸ್ಟೋ’ ಸಿನಿಮಾದಲ್ಲಿ ನಟಿಸಿದ್ದರು. ನಿತಿನ್, ತಮನ್ನಾ ಜೊತೆ ನಭಾ ನಟೇಶ್ ಕೂಡ ಸಾಥ್ ನೀಡಿದ್ದರು. 2 ವರ್ಷಗಳಿಂದ ನಭಾ ಯಾವುದೇ ಸಿನಿಮಾದಲ್ಲಿ ನಟಿಸಿಲ್ಲ. ಹೀಗಿರುವಾಗ ಮತ್ತೆ ಕನ್ನಡ ಸಿನಿಮಾಗೆ ಕಮ್‌ ಬ್ಯಾಕ್‌ ಆಗ್ತಾರಾ ಕಾಯಬೇಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಟೆಂಪಲ್ ರನ್ ಮುಗಿಸಿ ಫೋಟೋಶೂಟ್ ನಲ್ಲಿ ಭಾಗಿಯಾದ ಸಾರಾ ಅಲಿ ಖಾನ್

    ಟೆಂಪಲ್ ರನ್ ಮುಗಿಸಿ ಫೋಟೋಶೂಟ್ ನಲ್ಲಿ ಭಾಗಿಯಾದ ಸಾರಾ ಅಲಿ ಖಾನ್

    ಬಾಲಿವುಡ್ (Bollywood) ನಟ ಸೈಫ್ ಅಲಿಖಾನ್ ಪುತ್ರಿ ಸಾರಾ ಅಲಿಖಾನ್ ಕಳೆದ ಹಲವು ತಿಂಗಳಿಂದ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದರು. ಕಾಶಿ ಸೇರಿದಂತೆ ಸಾಕಷ್ಟು ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ ಸಾರಾ. ಇದಕ್ಕೆ ಅನೇಕರು ವಿರೋಧ ವ್ಯಕ್ತಪಡಿಸಿದ್ದರು. ಅನ್ಯಧರ್ಮಿಯರಾಗಿ ಹಿಂದೂ ದೇವಾಲಯಕ್ಕೆ ಹೋಗುವ ಕುರಿತು ದೊಡ್ಡ ಮಟ್ಟದಲ್ಲೇ ಚರ್ಚೆಯಾಗಿತ್ತು.

    ಏನೇ ಟ್ರೋಲ್ ಮಾಡಿದರು ಸಾರಾ ಹೆದರಲಿಲ್ಲ. ಮತ್ತೆ ಮತ್ತೆ ಹಿಂದೂ ದೇವಸ್ಥಾನಗಳಿಗೆ ಭೇಟಿ ನೀಡುತ್ತಲೇ ಬಂದರು. ಇದೀಗ ಸಾರಾ ಟೆಂಪಲ್ ರನ್ ಮುಗಿಸಿಕೊಂಡು ಹೊಸ ಫೋಟೋಶೂಟ್ (Photoshoot) ನಲ್ಲಿ ಭಾಗಿಯಾಗಿದ್ದಾರೆ. ಇದೆಲ್ಲವನ್ನೂ ಅವರು ಮಾಡುತ್ತಿರುವುದು ಕೇವಲ ಮನಶಾಂತಿಗೆ ಎಂದು ಹೇಳಲಾಗುತ್ತಿದೆ. ಲವ್ ಬ್ರೇಕ್ ಅಪ್ ಆಗಿರುವ ಕಾರಣಕ್ಕಾಗಿ ಶಾಂತಿ ಹುಡುಕಿಕೊಂಡು ಸಾರಾ ಅಲಿಯುತ್ತಿದ್ದಾರೆ ಎಂದು ಟ್ರೋಲ್ ಮಾಡಲಾಗುತ್ತಿದೆ.

    ಸಾರಾ ಅಲಿ ಖಾನ್ (Sara Ali Khan) ಹಾಗೂ ಕ್ರಿಕೆಟಿಗ ಶುಭ್ ಮನ್ (Shubh Man Gill) ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವುದು ಹಳೆಯ ಸುದ್ದಿ. ಈ ಸುದ್ದಿಗೆ ಪುಷ್ಠಿ ಕೊಡುವಂತೆ ಇಬ್ಬರೂ ಸಾಕಷ್ಟು ಬಾರಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ತಾಜಾ ಸಾಮಾಚಾರ ಎಂದರೆ, ಇಬ್ಬರ ನಡುವಿನ ಲವ್ ಬ್ರೇಕ್ ಅಪ್ ಆಗಿದೆ ಎನ್ನುವುದು. ಇಬ್ಬರೂ ಡೇಟ್ (Dating) ಮಾಡುತ್ತಿದ್ದಾರಾ, ಇಲ್ಲವಾ ಎನ್ನುವ ಅನುಮಾನದ ನಡುವೆಯೇ ಇಬ್ಬರೂ ದೂರವಾಗಿದ್ದು ಮಾತ್ರ ನಿಜ.

    ಶುಭ್ ಮನ್ ಗಿಲ್ ಮತ್ತು ಸಾರಾ ಅಲಿಖಾನ್ ಸಾಮಾಜಿಕ ಜಾಲತಾಣಗಳಲ್ಲಿ ಒಬ್ಬರನ್ನೊಬ್ಬರು ಫಾಲೋ ಮಾಡುತ್ತಿದ್ದರು. ಹಲವು ವಿಚಾರಗಳನ್ನೂ ಹಂಚಿಕೊಳ್ಳುತ್ತಿದ್ದರು. ಆದರೆ, ಹಲವು ದಿನಗಳ ಹಿಂದೆ ಇಬ್ಬರೂ ಫಾಲೋ ಮಾಡುವುದನ್ನು ನಿಲ್ಲಿಸಿದ್ದಾರೆ. ಇಬ್ಬರೂ ಒಬ್ಬರಿಗೊಬ್ಬರು ಅನ್ ಫ್ರೆಂಡ್ ಮಾಡಿಕೊಂಡಿದ್ದಾರೆ. ಹಾಗಾಗಿ ಪ್ರೀತಿಯ ಪಾರಿವಾಳ ಹಾರಿ ಹೋಗಿದೆ ಎಂದು ಹೇಳಲಾಗುತ್ತಿದೆ.

    ಬಿಟೌನ್‌ನ ಸಾಲು ಸಾಲು ಸಿನಿಮಾಗಳ ಮೂಲಕ ಮೋಡಿ ಮಾಡಿದ್ದ ಸೈಫ್ ಅಲಿ ಖಾನ್ ಪುತ್ರಿ ಸಾರಾ ಸಿನಿಮಾಗಿಂತ ಡೇಟಿಂಗ್ ವಿಷ್ಯವಾಗಿ ಸುದ್ದಿಯಲ್ಲಿದ್ದರು.  ಮುಂಬೈ ಮತ್ತು ದೆಹಲಿಯಲ್ಲಿ ಶುಭ್ ಮನ್ ಗಿಲ್ ಮತ್ತು ಸಾರಾ ಪದೇ ಪದೇ ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಇಬ್ಬರ ಲವ್ವಿ ಡವ್ವಿ ವಿಚಾರವನ್ನು ಬಹಿರಂಗಗೊಳಿಸಿದ್ದರು.

    ಇತ್ತೀಚೆಗೆ ಮುಂಬೈನ ಬಾಸ್ಟಿಯನ್ ರೆಸ್ಟೋರೆಂಟ್‌ನಲ್ಲಿ ಇಬ್ಬರೂ ಒಟ್ಟಿಗೆ ಡಿನ್ನರ್ ಮಾಡಿದ್ದರು. ನಂತರ ದೆಹಲಿಯಲ್ಲಿ ಈ ಜೋಡಿ ಕಾಣಿಸಿಕೊಂಡಿತ್ತು. ಕ್ಯಾಶುಯಲ್ ಉಡುಗೆಯಲ್ಲಿ ದೆಹಲಿ ಹೋಟೆಲ್‌ನಿಂದ ಇಬ್ಬರು ನಿರ್ಗಮಿಸಿದ್ದರು. ಬಳಿಕ ವಿಮಾನದಲ್ಲಿ ಅಭಿಮಾನಿಗಳಿಗೆ ಸೆಲ್ಫಿ ಕೊಡುತ್ತಿರುವ ವೀಡಿಯೋವೊಂದು ಸಖತ್ ವೈರಲ್ ಆಗಿತ್ತು.

     

    ಸದ್ಯ ಬಿಟೌನ್‌ನಲ್ಲಿ ಸಾರಾ ಮತ್ತು ಶುಭಮನ್ ಗಿಲ್ ಲವ್ವಿ ಡವ್ವಿ ಬ್ರೇಕ್ ಅಪ್ (Breakup) ವಿಚಾರವೇ ಸಖತ್ ಸೌಂಡ್ ಮಾಡುತ್ತಿದೆ. ಅಷ್ಟಕ್ಕೂ ಈ ಸುದ್ದಿ  ಅದೆಷ್ಟರ ಮಟ್ಟಿಗೆ ನಿಜ ಎಂಬುದನ್ನ ಅಧಿಕೃತವಾಗಿ ಹೇಳುವವರೆಗೂ ಕಾದುನೋಡಬೇಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]