Tag: Pickup Vehicle

  • ಮಹಿಳಾ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ – 15ಕ್ಕೂ ಹೆಚ್ಚು ಮಂದಿಗೆ ಗಾಯ

    ಮಹಿಳಾ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ – 15ಕ್ಕೂ ಹೆಚ್ಚು ಮಂದಿಗೆ ಗಾಯ

    ಹಾಸನ: ಕಾಫಿ ತೋಟದ ಕೆಲಸಕ್ಕೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಪಿಕ್‌ಅಪ್ ವಾಹನ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು ಗಾಯಗೊಂಡಿರುವ ಘಟನೆ ಹಾಸನ (Hassan) ಜಿಲ್ಲೆ, ಸಕಲೇಶಪುರ ತಾಲೂಕಿನ, ಹೆಬ್ಬಸಾಲೆ ಗ್ರಾಮದ ಬಳಿ ನಡೆದಿದೆ.

    ಸಕಲೇಶಪುರ ಪಟ್ಟಣದ ಸಮೀಪವಿರುವ ಕುಡಗರಗಳ್ಳಿ, ಆಚಂಗಿ, ಗ್ರಾಮದಿಂದ ಮಹಿಳಾ ಕಾರ್ಮಿಕರನ್ನು ಹಾರ್ಲೆ ಕಾಫಿ ತೋಟದ ಕೆಲಸಕ್ಕೆ ಪಿಕ್‌ಅಪ್ ವಾಹನದಲ್ಲಿ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಹೆಬ್ಬಸಾಲೆ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ವಾಹನ ಪಲ್ಟಿಯಾಗಿದೆ. ಇದನ್ನೂ ಓದಿ: ಅಪಘಾತದಲ್ಲಿ ಗಾಯಗೊಂಡಿದ್ದ ಪುತ್ರನ ಅಂಗಾಂಗ ದಾನ ಮಾಡಿದ ಪೋಷಕರು

    ಪಿಕ್‌ಅಪ್ ವಾಹನದಲ್ಲಿ 20ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರಿದ್ದು, ಐವರು ಮಹಿಳಾ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸಕಲೇಶಪುರ ಹಾಗೂ ಹಾಸನ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಗೇ ಡೇಟಿಂಗ್ ಆ್ಯಪ್‌ನಲ್ಲಿ ಯುವಕರಿಗೆ ವಂಚನೆ- 6 ಮಂದಿ ಅರೆಸ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪೊಲೀಸರ ಭರ್ಜರಿ ಕಾರ್ಯಾಚರಣೆ – ದಾಖಲೆ ಇಲ್ಲದ 9 ಕೆಜಿ ಚಿನ್ನ ಜಪ್ತಿ

    ಪೊಲೀಸರ ಭರ್ಜರಿ ಕಾರ್ಯಾಚರಣೆ – ದಾಖಲೆ ಇಲ್ಲದ 9 ಕೆಜಿ ಚಿನ್ನ ಜಪ್ತಿ

    ಚಿಕ್ಕಮಗಳೂರು: ದಾಖಲೆ ಇಲ್ಲದೆ ಪಿಕಪ್‌ನಲ್ಲಿ ಸಾಗಿಸುತ್ತಿದ್ದ 2. 30 ಕೋಟಿ ರೂ. ಮೌಲ್ಯದ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ಚಿಕ್ಕಮಗಳೂರಿನ (Chikkamagaluru) ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಚುನಾವಣೆ (Election) ನಿಮಿತ್ತ ಜಿಲ್ಲಾದ್ಯಂತ ಗಡಿಗಳಲ್ಲಿ ಚೆಕ್ ಪೋಸ್ಟ್‌ಗಳನ್ನು (Checkpost) ನಿರ್ಮಿಸಲಾಗಿದೆ. ಅದೇ ರೀತಿ ತರೀಕೆರೆ (Tarikere) ಪಟ್ಟಣದ ಪೊಲೀಸ್ ಚೆಕ್ ಪೋಸ್ಟ್ ಬಳಿ ತಪಾಸಣೆ ನಡೆಸಿದಾಗ ಇಬ್ಬರು ವ್ಯಕ್ತಿಗಳು ಪಿಕಪ್‌ನಲ್ಲಿ ನಾಲ್ಕು ಬಾಕ್ಸ್ ಚಿನ್ನ ಅಕ್ರಮ ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ. ಪಿಕಪ್ ವಾಹನದಲ್ಲಿ ಚಿನ್ನದ ಸರಗಳು  ಹಾಗೂ ಚಿನ್ನದ ಬಿಸ್ಕತ್‌ಗಳು ಪತ್ತೆಯಾಗಿದೆ. ಇದನ್ನೂ ಓದಿ: ಶ್ರವಣಬೆಳಗೊಳ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ  

    ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿ ಪಿಕಪ್ ವಾಹನ ಸವಾರ ಸೇರಿದಂತೆ ಇಬ್ಬರನ್ನು ವಶಕ್ಕೆ ಪಡೆದು ಮಾಹಿತಿ ಸಂಗ್ರಹಿಸಿದ್ದಾರೆ. ಅಲ್ಲದೇ 2 ಕೋಟಿ 30 ಲಕ್ಷ ರೂ. ಬೆಲೆ ಬಾಳುವ 9 ಕೆ.ಜಿ. 300 ಗ್ರಾಂ ಚಿನ್ನವನ್ನೂ ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಬೆಡ್‌ರೂಂನಲ್ಲಿ ಮಲಗಿದ್ದ 6 ಅಡಿ ಬುಸ್ ಬುಸ್ ನಾಗ – ಎದ್ನೋ ಬಿದ್ನೋ ಅಂತಾ ಓಡಿದ ಮಹಿಳೆ!

  • ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ – 11 ಜನ ಸ್ಥಳದಲ್ಲೇ ಸಾವು

    ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ – 11 ಜನ ಸ್ಥಳದಲ್ಲೇ ಸಾವು

    ರಾಯ್ಪುರ: ಪಿಕಪ್ ವಾಹನಕ್ಕೆ (Pickup Vehicle) ಟ್ರಕ್ (Truck) ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಕ್ಕಳು ಸೇರಿದಂತೆ 11 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ಛತ್ತೀಸ್‌ಗಢದ (Chhattisgarh) ಬುಲೋದಬಜಾರ್-ಭಟಪರಾ ರಸ್ತೆಯಲ್ಲಿ ನಡೆದಿದೆ.

    ರಾಜಧಾನಿ ರಾಯ್ಪುರದಿಂದ ಸುಮಾರು 70 ಕಿ.ಮೀ ದೂರಲ್ಲಿರುವ ಬಲೋದಬಜಾರ್-ಭಟಪರಾ ರಸ್ತೆಯಲ್ಲಿ ಗುರುವಾರ ತಡರಾತ್ರಿ ಭೀಕರ ಅಪಘಾತ (Accident) ಸಂಭವಿಸಿದೆ. ಘಟನೆಯಲ್ಲಿ 11 ಜನರು ಸ್ಥಳದಲ್ಲೇ ಸಾವನ್ನಪ್ಪಿದರೆ, 12 ಜನರು ಗಾಯಗೊಂಡಿದ್ದಾರೆ.

    ಸಂತ್ರಸ್ತರು ಸಿಮ್ಗಾ ಪ್ರದೇಶದ ಖಿಲೋರಾ ಗ್ರಾಮದವರಾಗಿದ್ದು, ಅರ್ಜುನಿ ಪ್ರದೇಶದಲ್ಲಿ ಕುಟುಂಬದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದರು. ಈ ವೇಳೆ ಪಿಕಪ್ ವಾಹನ ಹಾಗೂ ಟ್ರಕ್ ಮುಖಾಮುಖಿ ಡಿಕ್ಕಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಬಾಬಾಬುಡನ್‌ ಗಿರಿ ಉರುಸ್‍ನಲ್ಲಿ ನಾವು ಪಾಲ್ಗೊಳ್ಳಲ್ಲ – ವ್ಯವಸ್ಥಾಪನಾ ಸಮಿತಿ ವಿರುದ್ಧ ಮುಸ್ಲಿಮರ ಕಿಡಿ

    ಸಾವನ್ನಪ್ಪಿದವರ ಪೈಕಿ ನಾಲ್ವರು ಮಕ್ಕಳು ಸೇರಿದ್ದಾರೆ. 12 ಮಂದಿ ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅವರಿಬ್ಬರನ್ನು ರಾಯ್ಪುರದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಇತರ 10 ಗಾಯಾಳುಗಳನ್ನು ಬುಲೋದಬಜಾರ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

    ಅಪಘಾತದ ಬಳಿಕ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಆತನನ್ನು ಪತ್ತೆ ಹಚ್ಚಲು ಪ್ರಯತ್ನಿಸಲಾಗುತ್ತಿದೆ. ಭೀಕರ ಅಪಘಾತದ ಬಗ್ಗೆ ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ಎಲ್ಲಾ ನೆರವು ಹಾಗೂ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಿಂದ ಹಣದ ಹೊಳೆ- ಶ್ರೀನಿವಾಸ್ ವಿರುದ್ಧ ವ್ಯಾಪಕ ಆಕ್ರೋಶ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪಿಕಪ್ ವಾಹನಕ್ಕೆ ವಿದ್ಯುತ್ ಸ್ಪರ್ಶ – 10 ಮಂದಿ ಸಾವು, 16 ಮಂದಿಗೆ ಗಾಯ

    ಪಿಕಪ್ ವಾಹನಕ್ಕೆ ವಿದ್ಯುತ್ ಸ್ಪರ್ಶ – 10 ಮಂದಿ ಸಾವು, 16 ಮಂದಿಗೆ ಗಾಯ

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯಲ್ಲಿ ಜಲ್ಪೇಶ್‍ಗೆ ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ ಪಿಕಪ್ ವಾಹನಕ್ಕೆ ವಿದ್ಯುತ್ ಪ್ರವಹಿಸಿ 10 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 16 ಮಂದಿ ಗಾಯಗೊಂಡಿದ್ದಾರೆ ಎಂದು ಎಂದು ಭಾನುವಾರ ತಡರಾತ್ರಿ ಪೊಲೀಸರು ತಿಳಿಸಿದ್ದಾರೆ.

    ಘಟನೆಯಲ್ಲಿ ಗಾಯಗೊಂಡಿರುವ 16 ಮಂದಿಯನ್ನು ಚಿಕಿತ್ಸೆಗಾಗಿ ಜಲ್‍ಪೈಗುರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಹನದಲ್ಲಿದ್ದ ಡಿಜೆ ಸಿಸ್ಟಂನ ಜನರೇಟರ್‌ನ ವೈರಿಂಗ್‍ನಿಂದ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ನಾಡದೇವಿ ಚಾಮುಂಡೇಶ್ವರಿ ಹಬ್ಬಕ್ಕೆ ದಿನಗಣನೆ – ಮೈಸೂರು ದಸರಾಕ್ಕೆ ಬಹಿಷ್ಕಾರ ಹಾಕಿದ ಮಾವುತ ಕಾವಾಡಿಗಳು

    ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಮೆಖ್ಲಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಧಾರ್ಲಾ ಸೇತುವೆಯ ಬಳಿ ಈ ಘಟನೆ ನಡೆದಿದೆ. ಜಲ್ಪೇಶ್‍ಗೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಪಿಕ್‍ಅಪ್ ವ್ಯಾನ್‍ಗೆ ವಿದ್ಯುತ್ ಪ್ರವಹಿಸಿದೆ. ವಾಹನದ ಹಿಂಭಾಗದಲ್ಲಿ ಅಳವಡಿಸಲಾಗಿದ್ದ ಡಿಜೆ ಸಿಸ್ಟಂನ ಜನರೇಟರ್‌ನ ವೈರಿಂಗ್‍ನಿಂದ ಈ ಘಟನೆ ಸಂಭವಿಸಿದೆ ಎಂದು ಮತಭಂಗ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ವರ್ಮಾ ಹೇಳಿದ್ದಾರೆ.

    ಗಾಯಾಳುಗಳನ್ನು ತಕ್ಷಣವೇ ಚಂದ್ರಬಂಧಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತು. ಪ್ರಾಥಮಿಕ ಚಿಕಿತ್ಸೆ ಕೊಟ್ಟ ಸ್ಥಾನಿಕ ವೈದ್ಯಾಧಿಕಾರಿಯು ಅವರನ್ನು ಜಲ್‍ಪೈಗುರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸುವಂತೆ ಶಿಫಾರಸು ಮಾಡಿದರು. ಅದರಂತೆ ಆಸ್ಪತ್ರೆಗೆ ಕರೆತರುವ ಮಾರ್ಗದಲ್ಲಿಯೇ 10 ಮಂದಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ನಾಲ್ಕು ದಿನ ಗಾಳಿ, ಮಳೆಗೆ ಬೆಟ್ಟದ ಪೊದೆಯಲ್ಲಿ ಸಿಲುಕಿದ ವೃದ್ಧೆ ರಕ್ಷಣೆ

    ಇದೀಗ ಘಟನೆಗೆ ಕಾರಣವಾದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ ಚಾಲಕ ಪರಾರಿಯಾಗಿದ್ದಾನೆ. ಎಲ್ಲಾ ಪ್ರಯಾಣಿಕರು ಸಿತಾಲ್ಕುಚಿ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದವರಾಗಿದ್ದು, ಘಟನೆ ಕುರಿತಂತೆ ಅವರ ಕುಟುಂಬಗಳಿಗೆ ಮಾಹಿತಿ ನೀಡಲಾಗಿದೆ ಎಂದು ಅವರು ತಿಳಿಸಲಾಗಿದೆ. ಘಟನೆ ಕುರಿತಂತೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ತೆಳಿಸಿದ್ದಾರೆ.

    Live Tv

    [brid partner=56869869 player=32851 video=960834 autoplay=true]

  • ಸ್ಟಂಟ್ ಮಾಡಲು ಹೋಗಿ 50 ವರ್ಷದ ವ್ಯಕ್ತಿ ಸಾವು

    ಸ್ಟಂಟ್ ಮಾಡಲು ಹೋಗಿ 50 ವರ್ಷದ ವ್ಯಕ್ತಿ ಸಾವು

    ಲಕ್ನೋ: ಆರ್ಕೆಸ್ಟ್ರಾ ಡ್ಯಾನ್ಸರ್‌ಗಳೊಂದಿಗೆ ನೃತ್ಯದ ಜೊತೆಗೆ ಸ್ಟಂಟ್‌ ಮಾಡುತ್ತಿರುವಾಗ ವ್ಯಕ್ತಿಯೊಬ್ಬ ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ನಡೆದಿದೆ.

    ರಾಮ್ ನಿವಾಸ್ ಗಿರಿ (50) ಮೃತ ವ್ಯಕ್ತಿ. ರಾಮ್ ನಿವಾಸ್ ಆರ್ಕೆಸ್ಟ್ರಾ ಡ್ಯಾನ್ಸರ್ ಜೊತೆಗೆ ಡ್ಯಾನ್ಸ್ ಮಾಡುತ್ತ ಪಿಕಪ್ ವಾಹನದ ಕಬ್ಬಿಣದ ರಾಡ್‍ನಲ್ಲಿ ಸ್ಟಂಟ್ ಮಾಡಲು ಹೋಗಿದ್ದಾನೆ. ಅಷ್ಟೇ ಅಲ್ಲದೇ ಅನೇಕ ಸಾಹಸಗಳನ್ನು ಪ್ರದರ್ಶಿಸಿಲು ಪ್ರಯತ್ನಿಸಿದ್ದಾನೆ. ಇದನ್ನೂ ಓದಿ: ಏನಿದು ಅನ್ಯಾಯ? ಏನು ಕ್ರೈಂ ಮಾಡಿದ್ದಾರೆ? ಅದು ರಾಷ್ಟ್ರದ ಆಸ್ತಿ, ಸ್ವಂತದ್ದಲ್ಲ: ಡಿಕೆಶಿ ಕೆಂಡಾಮಂಡಲ

    crime

    ಆ ಸಮಯದಲ್ಲಿ ರಾಮ್ ನಿವಾಸ್‍ಗೆ ಕಬ್ಬಿಣದ ರಾಡ್‍ನಿಂದ ಹಿಡಿತ ತಪ್ಪಿದೆ. ಇದರಿಂದ ನೆಲಕ್ಕೆ ಬಿದ್ದು, ಗಂಭೀರ ಗಾಯಗಳಾಗಿವೆ. ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸಲಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಗಿರಿ ಅವರ ಕಿರಿಯ ಸಹೋದರ ಘಟನೆ ಬಗ್ಗೆ ಮಾತನಾಡಿ, ಪಿಕಪ್ ವಾಹನದಿಂದ ಬಿದ್ದು ಸಾವನ್ನಪ್ಪಿದ್ದನ್ನು ದೃಢಿಕರಿಸಿದ್ದಾರೆ. ಇದನ್ನೂ ಓದಿ: ನ್ಯಾಷನಲ್‌ ಹೆರಾಲ್ಡ್‌ ಸೋನಿಯಾ, ರಾಹುಲ್‌ ಗಾಂಧಿ ವೈಯಕ್ತಿಕ ಆಸ್ತಿಯಲ್ಲ: ಮಲ್ಲಿಕಾರ್ಜುನ ಖರ್ಗೆ

  • ಪಿಕಪ್ ವಾಹನ, ಬೈಕ್ ಮುಖಾಮುಖಿ – ಶಾಲೆಯಿಂದ ಬರುತ್ತಿದ್ದ ತಂದೆ, ಮಗಳು ದಾರುಣ ಸಾವು

    ಪಿಕಪ್ ವಾಹನ, ಬೈಕ್ ಮುಖಾಮುಖಿ – ಶಾಲೆಯಿಂದ ಬರುತ್ತಿದ್ದ ತಂದೆ, ಮಗಳು ದಾರುಣ ಸಾವು

    ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ವರನಹೊಂಡ ಬಳಿ ಬೈಕ್ ಹಾಗೂ ಪಿಕಪ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ತಂದೆ ಮಗಳು ದಾರುಣವಾಗಿ ಸಾವಿಗೀಡಾಗಿರುವ ಘಟನೆ ನಡೆದಿದೆ.

    ಮೃತರನ್ನು ಸಾಹಿತ್ಯ ಹಾಗೂ ರಾಘವೇಂದ್ರ ಎಂದು ಗುರುತಿಸಲಾಗಿದೆ. ರಾಮಕೃಷ್ಣ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ಸಾಹಿತ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಬೈಕ್ ಸವಾರ ತಂದೆ ರಾಘವೇಂದ್ರಗೆ ಚಿಕಿತ್ಸೆಗೆಂದು ಶಿವಮೊಗ್ಗ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಸಾವಿಗೀಡಾಗಿದ್ದಾರೆ.

    ಶಾಲೆಯಿಂದ ಮಗಳನ್ನು ಕರೆದುಕೊಂಡು ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಈ ವೇಳೆ ಆಕ್ರೋಶಗೊಂಡ ಮೃತರ ಸಂಬಂಧಿಕರು ಗಂಭೀರ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡದೆ ಶಿವಮೊಗ್ಗಕ್ಕೆ ಕಳುಹಿಸಲಾಗಿದೆ ಎಂದು ಆರೋಪಿಸಿದ್ದಾರೆ. ಅಲ್ಲದೇ ವೈದ್ಯ ಅನಿಲ್ ಕುಮಾರ್ ವಿರುದ್ಧ ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮುತ್ತಿಗೆ ಹಾಕಿ ಬಾಗಿಲು ಮುಚ್ಚಿ ಪ್ರತಿಭಟಿಸಿದರು. ಆಸ್ಪತ್ರೆಗೆ ಉತ್ತಮ ಡಾಕ್ಟರ್ ಇಲ್ಲದೆ ಈ ಸಾವು ಸಂಭವಿಸಿದೆ ಎಂದು ಜನಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿದರು.

    ಈ ಸಂಬಂಧ ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕದಂಕಕ್ಕೆ ಬಿತ್ತು ಪಿಕಪ್ ವಾಹನ – 8 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

    ಕದಂಕಕ್ಕೆ ಬಿತ್ತು ಪಿಕಪ್ ವಾಹನ – 8 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

    ಚಿಕ್ಕಮಗಳೂರು: ಕಂದಕಕ್ಕೆ ಪಿಕಪ್ ವಾಹನ ಬಿದ್ದು ಎಂಟು ಮಂದಿಗೆ ಗಾಯಗಳಾಗಿ, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಚಿಕ್ಕಮಗಳೂರು ಮೂಡಿಗೆರೆಯ ಮಲಯ ಮಾರುತ ತಿರುವಿನಲ್ಲಿ ನಡೆದಿದೆ.

    ಭಾನುವಾರ ರಾತ್ರಿ ಸುಮಾರು 8.30ಕ್ಕೆ ಪಿಕಪ್ ವಾಹನ ಕಂದಕ್ಕೆ ಬಿದ್ದಿದೆ. ಬೆಳ್ತಂಗಡಿ ಮೂಲದ ಬಿಳ್ಳದಾಳ ಗ್ರಾಮದ ಪಿಕಪ್ ವಾಹನ ಎಂದು ಹೇಳಲಾಗುತ್ತಿದೆ. ಹಾಸನದ ಪುರದಮ್ಮ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಹೋಗುವಾಗ ಈ ಅಪಘಾತ ಸಂಭವಿಸಿದೆ.

    ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಸಣ್ಣಪುಟ್ಟ ಗಾಯಾಳುಗಳಿಗೆ ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಪಿಕಪ್ ವಾಹನದ ಸ್ಟೇರಿಂಗ್ ಕಟ್ಟಾಗಿ ವಾಹನ ಕಂದಕ್ಕೆ ಉರುಳಿದ್ದು, ಸದ್ಯ ಭಾರೀ ದುರಂತ ತಪ್ಪಿದೆ.

    ಈ ಬಗ್ಗೆ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv