Tag: PIL

  • ಮತಗಳವು ಆರೋಪ – ಸುಪ್ರೀಂ ಕೋರ್ಟ್‌ಗೆ ಪಿಐಎಲ್ ಸಲ್ಲಿಕೆ

    ಮತಗಳವು ಆರೋಪ – ಸುಪ್ರೀಂ ಕೋರ್ಟ್‌ಗೆ ಪಿಐಎಲ್ ಸಲ್ಲಿಕೆ

    ನವದೆಹಲಿ: ಬೆಂಗಳೂರು ಕೇಂದ್ರ ಸೇರಿದಂತೆ ದೇಶದ ವಿವಿಧ ಲೋಕಸಭಾ ಕ್ಷೇತ್ರಗಳಲ್ಲಿ ‘ಮತಗಳ್ಳತನ’ (Vote Theft) ನಡೆದಿದೆ ಎಂಬ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆರೋಪದ ಕುರಿತು ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ (Supreme Court) ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಕೆಯಾಗಿದೆ.

    ಮತದಾರರ ಪಟ್ಟಿಯ ತಯಾರಿಕೆ, ನಿರ್ವಹಣೆ ಮತ್ತು ಪ್ರಕಟಣೆಯಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು ಚೌಕಟ್ಟಿಗೆ ನಿರ್ದೇಶನಗಳನ್ನು ನೀಡುವಂತೆ ಮತ್ತು ನಕಲಿ ಅಥವಾ ಕಾಲ್ಪನಿಕ ನಮೂದುಗಳನ್ನು ಪತ್ತೆಹಚ್ಚುವ ಮತ್ತು ತಡೆಗಟ್ಟುವ ಕಾರ್ಯವಿಧಾನಗಳನ್ನು ಒಳಗೊಂಡಂತೆ ಭಾರತೀಯ ಚುನಾವಣಾ ಆಯೋಗಕ್ಕೆ ಮಾರ್ಗಸೂಚಿಗಳನ್ನು ಹೊರಡಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ. ಇದನ್ನೂ ಓದಿ: ನನ್ನ ಪತಿ ಸುಳ್ಳು ಹೇಳ್ತಿದ್ದಾನೆ, ಇಟ್ಟುಕೊಂಡವಳ ಜೊತೆ ಸಂಸಾರ ಮಾಡಲು ನನ್ನನ್ನು ಓಡಿಸಿದ್ದ: ಅನಾಮಿಕನ ಮೊದಲ ಪತ್ನಿ

    ಅಲ್ಲದೇ ಅರ್ಥಪೂರ್ಣ ಪರಿಶೀಲನೆ, ಲೆಕ್ಕಪರಿಶೋಧನೆ ಮತ್ತು ಸಾರ್ವಜನಿಕ ಪರಿಶೀಲನೆಗೆ ಅನುವು ಮಾಡಿಕೊಡಲು ಮತದಾರರ ಪಟ್ಟಿಯನ್ನು ಸುಲಭವಾಗಿ ಪ್ರವೇಶಿಸಬಹುದಾದ, ಮೆಶಿನ್ ರೀಡೇಬಲ್ ಮತ್ತು ಆಪ್ಟಿಕಲ್ ಕ್ಯಾರೆಕ್ಟರ್ ರಿಕಗ್ನಿಷನ್ ಕಂಪ್ಲೆಂಟ್ ಸ್ವರೂಪಗಳಲ್ಲಿ ಪ್ರಕಟಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶನಗಳನ್ನು ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಇದನ್ನೂ ಓದಿ: ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಡಿಆರ್‌ಐ ಅಧಿಕಾರಿಗಳಿಂದ ರಾಮಚಂದ್ರ ರಾವ್ ವಿಚಾರಣೆ

    ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಭಾರೀ ಮತಗಳ್ಳತನ ನಡೆದಿದೆ ಎಂದು ಆರೋಪಿಸಿ ಆಗಸ್ಟ್ 7ರಂದು ರಾಹುಲ್ ಗಾಂಧಿ ನಡೆಸಿದ ಪತ್ರಿಕಾಗೋಷ್ಠಿಯನ್ನು ಆಧರಿಸಿ ವಕೀಲ ರೋಹಿತ್ ಪಾಂಡೆ ಪಿಐಎಲ್ ಸಲ್ಲಿಸಿದ್ದಾರೆ.‌ ಇದನ್ನೂ ಓದಿ: ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ – ಮಹೇಶ್ ಶೆಟ್ಟಿ ತಿಮರೋಡಿ ಅರೆಸ್ಟ್‌

  • ನಮ್ಮ ಪಡೆಗಳ ಆತ್ಮಸ್ಥೈರ್ಯ ಕುಗ್ಗಿಸ್ತೀರಾ? – ಪಹಲ್ಗಾಮ್‌ ಅರ್ಜಿದಾರರ ವಿರುದ್ಧ ಸುಪ್ರೀಂ ಕೆಂಡಾಮಂಡಲ

    ನಮ್ಮ ಪಡೆಗಳ ಆತ್ಮಸ್ಥೈರ್ಯ ಕುಗ್ಗಿಸ್ತೀರಾ? – ಪಹಲ್ಗಾಮ್‌ ಅರ್ಜಿದಾರರ ವಿರುದ್ಧ ಸುಪ್ರೀಂ ಕೆಂಡಾಮಂಡಲ

    ನವದೆಹಲಿ: ಪಹಲ್ಗಾಮ್ ಘಟನೆಯ (Pahalgam Terror Attack) ಬಗ್ಗೆ ನ್ಯಾಯಾಂಗ ತನಿಖೆಗೆ ( Judicial Probe) ಕೋರಿ ಸಲ್ಲಿಸಲಾದ ಅರ್ಜಿಯನ್ನು ಗುರುವಾರ ಸುಪ್ರೀಂ ಕೋರ್ಟ್ (Supreme Court) ವಜಾಗೊಳಿಸಿದೆ.

    ವಿಚಾರಣೆ ಸಂದರ್ಭದಲ್ಲಿ ಕೋರ್ಟ್‌, ನೀವು ನಮ್ಮ ಪಡೆಗಳ ಆತ್ಮಸ್ಥೈರ್ಯ ಕುಗ್ಗಿಸಲು ಬಯಸುತ್ತೀರಾ ಎಂದು ಪ್ರಶ್ನಿಸುವ ಮೂಲಕ ಅರ್ಜಿದಾರರಿಗೆ ಚಾಟಿ ಬೀಸಿದೆ.

    ಅರ್ಜಿದಾರರಾದ ಫತೇಶ್ ಕುಮಾರ್ ಶಾಹು, ಮೊಹಮ್ಮದ್ ಜುನೈದ್ ಮತ್ತು ವಿಕ್ಕಿ ಕುಮಾರ್ ಅವರು ನ್ಯಾಯಾಂಗ ತನಿಖೆ ಕೋರಿ ಸಲ್ಲಿಸಿದ್ದ ಸಾರ್ವಜನಿಕಾ ಹಿತಾಸಕ್ತಿ ಅರ್ಜಿ (PIL) ವಿಚಾರಣೆ ಇಂದು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ನ್ಯಾ ಎನ್.ಕೆ. ಸಿಂಗ್ ಅವರಿಂದ ಪೀಠದಲ್ಲಿ ನಡೆಯಿತು. ಇದನ್ನೂ ಓದಿ: ಸೋನಾಮಾರ್ಗ್‌ ಸುರಂಗ ದಾಳಿಯಲ್ಲಿ 7 ಜನರನ್ನು ಬಲಿಪಡೆದಿದ್ದ ಉಗ್ರರ ಟೀಮ್‌ನಿಂದಲೇ ಪಹಲ್ಗಾಮ್‌ ದಾಳಿ

     

    ಈ ವೇಳೆ, ಪ್ರತಿಯೊಬ್ಬ ಭಾರತೀಯರು ಭಯೋತ್ಪಾದನೆಯ ವಿರುದ್ಧ ಹೋರಾಡಲು ಕೈಜೋಡಿಸಿರುವ ನಿರ್ಣಾಯಕ ಸಮಯ ಇದು. ನಮ್ಮ ಪಡೆಗಳನ್ನು ಸ್ಥೈರ್ಯ ಕುಗ್ಗಿಸಬೇಡಿ. ಸಮಸ್ಯೆಯ ಸೂಕ್ಷ್ಮತೆಯನ್ನು ನೋಡಿ ಅರ್ಜಿ ಸಲ್ಲಿಸಿ ಎಂದು ಹೇಳಿ ತರಾಟೆಗೆ ತೆಗೆದುಕೊಂಡಿತು. ಇದನ್ನೂ ಓದಿ: ಐಎಸ್ಐ ಮುಖ್ಯಸ್ಥನನ್ನು ನೂತನ ರಾಷ್ಟ್ರೀಯ ಭದ್ರತಾ ಸಲಹೆಗಾರನಾಗಿ ನೇಮಿಸಿದ ಪಾಕ್‌

    ಇಂತಹ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸುವ ಮೊದಲು ಜವಾಬ್ದಾರರಾಗಿರಿ. ನಿಮಗೂ ದೇಶದ ಬಗ್ಗೆ ಕರ್ತವ್ಯವಿದೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಭಯೋತ್ಪಾದನಾ ನಿಗ್ರಹ ವಿಷಯಗಳಲ್ಲಿ ಯಾವಾಗದಿಂದ ತಜ್ಞರಾಗಿದ್ದಾರೆ ಎಂದು ನ್ಯಾ.ಸೂರ್ಯ ಕಾಂತ್‌ ಖಾರವಾಗಿ ಪ್ರಶ್ನಿಸಿದರು.

    ಈ ವೇಳೆ ಪಹಲ್ಗಾಮ್‌ ದಾಳಿಯ ಬಳಿಕ ಕಾಶ್ಮೀರದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಯುತ್ತಿದೆ ಎಂದು ಅರ್ಜಿದಾರರ ಪರ ವಕೀಲರು ಹೇಳಿದಾಗ ನ್ಯಾಯಾಧೀಶರು ಈ ವಿಚಾರವನ್ನು ಅರ್ಜಿಯಲ್ಲಿ ಎಲ್ಲಿ ಉಲ್ಲೇಖ ಮಾಡಿದ್ದೀರಿ ಎಂದು ಪ್ರಶ್ನಿಸಿದರು. ಈ ವಿಚಾರ ಬೇಕಾದರೆ ಹೈಕೋರ್ಟ್‌ಗೆ ಹೋಗಿ ಅರ್ಜಿ ಸಲ್ಲಿಸಿ ಎಂದು ಸೂಚಿಸಿದರು.

  • ಹನಿಟ್ರ್ಯಾಪ್‌ ಪ್ರಕರಣ ತನಿಖೆಗೆ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಹನಿಟ್ರ್ಯಾಪ್‌ ಪ್ರಕರಣ ತನಿಖೆಗೆ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿದ ಸುಪ್ರೀಂ

    – ಕರ್ನಾಟಕಕ್ಕೂ ನಿಮಗೂ ಏನು ಸಂಬಂಧ? – ಅರ್ಜಿದಾರರಿಗೆ ತೀವ್ರ ತರಾಟೆ

    ನವದೆಹಲಿ/ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವರ ಮೇಲೆ ನಡೆದಿದೆ ಎನ್ನಲಾದ ಹನಿಟ್ರ್ಯಾಪ್‌ ಪ್ರಕರಣದ (Honeytrap Case) ಕುರಿತು ತನಿಖೆಗೆ ಆಗ್ರಹಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನ ಸುಪ್ರೀಂ ಕೋರ್ಟ್‌ (Supreme Court) ಇಂದು ವಜಾಗೊಳಿಸಿದೆ.

    ಸುಪ್ರೀಂ ಕೋರ್ಟ್‌ನ ನ್ಯಾ. ವಿಕ್ರಮ್‌ನಾಥ್ ನೇತೃತ್ವದ ತ್ರಿಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿತು. ಅಲ್ಲದೇ ವಿಚಾರಣೆ ವೇಳೆ ಅರ್ಜಿದಾರ ಬಿನಯ್ ಕುಮಾರ್ ಸಿಂಗ್ ತರಾಟೆಗೆ ತೆಗೆದುಕೊಂಡಿತು. ಇದನ್ನೂ ಓದಿ: ತಾಯಿ ಚಾಮುಂಡೇಶ್ವರಿಗೆ ಡೈಲಾಗ್‌ನಲ್ಲಿ ಅಪಮಾನ ಆರೋಪ- ರಕ್ಷಕ್ ವಿರುದ್ಧ ಸಿಡಿದೆದ್ದ ಹಿಂದೂ ಸಂಘಟನೆ

    ನೀವು ಜಾರ್ಖಂಡ್ ಮೂಲದವರು, ಕರ್ನಾಟಕಕ್ಕೂ ನಿಮಗೂ ಏನು ಸಂಬಂಧ? ಪೊಲಿಟಿಕಲ್ ನಾನ್‌ಸೆನ್ಸ್‌ಗಳನ್ನು ವಿಚಾರಣೆ ನಡೆಸಲು ನಾವು ಇಲ್ಲಿ ಕೂತಿಲ್ಲ. ನ್ಯಾಯಾಧೀಶರು ಯಾಕೆ ಹನಿಟ್ರ‍್ಯಾಪ್‌ಗೆ ಒಳಗಾಗುತ್ತಾರೆ? ಅದನ್ನು ನ್ಯಾಯಾಧೀಶರು ನೋಡಿಕೊಳ್ತಾರೆ. ಇಂತಹ ಅರ್ಜಿ ವಿಚಾರಣೆ ನಡೆಸಿಕೊಂಡು ಕೂರಲು ನಮಗೆ ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್‌ಗೆ ಮಾಡಲು ಸಾಕಷ್ಟು ಕೆಲಸ ಇದೆ ಎಂದು ಬಿನಯ್ ಕುಮಾರ್‌ರನ್ನ ತರಾಟೆಗೆ ತೆಗೆದುಕೊಂಡಿದೆ. ಇದನ್ನೂ ಓದಿ: Exclusive | ರನ್ಯಾ ಗೋಲ್ಡ್ ಸ್ಮಗ್ಲಿಂಗ್‌ ಕೇಸ್‌ – ಮೊದಲು ಚಿನ್ನ ಸಾಗಿಸಿದ್ದು ದಕ್ಷಿಣಾ ಆಫ್ರಿಕಾದಿಂದ ದುಬೈಗೆ!

    ಅರ್ಜಿದಾರರ ಮನವಿ ಏನು?
    ಕರ್ನಾಟಕದಲ್ಲಿ ಹಿರಿಯ ಸಚಿವರು, ಶಾಸಕರು, ರಾಜಕೀಯ ಮುಖಂಡರು ಮತ್ತು ನ್ಯಾಯಮೂರ್ತಿಗಳು ಸೇರಿದಂತೆ 48 ಜನರನ್ನು ಗುರಿಯಾಗಿಟ್ಟುಕೊಂಡು ಹನಿಟ್ರ‍್ಯಾಪ್ ಪ್ರಕರಣ ನಡೆದಿದೆ. ಈ ಬಗ್ಗೆ ಸಚಿವರೇ ವಿಧಾನಸಭೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಹೀಗಾಗೀ ಈ ಬಗ್ಗೆ ಸಿಬಿಐ ಅಥಾವ ಹೈಕೋರ್ಟ್ ನ್ಯಾಯಧೀಶರ ನೇತೃತ್ವದಲ್ಲಿ ಎಸ್‌ಐಟಿ ತನಿಖೆಗೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಸುಪ್ರೀಂಗೆ ಮನವಿ ಮಾಡಿದ್ದರು. ಇದನ್ನೂ ಓದಿ: ಬಿಜೆಪಿಯಲ್ಲೇ ಹನಿಟ್ರ್ಯಾಪ್‌ಗಳು ನಡೆದಿವೆ – ಯತೀಂದ್ರ ಸಿದ್ದರಾಮಯ್ಯ ಬಾಂಬ್‌

  • ಕುಂಭಮೇಳದಲ್ಲಿ ಕಾಲ್ತುಳಿತ – ತಪ್ಪಿತಸ್ಥರ ವಿರುದ್ಧ ಕ್ರಮ ಕೋರಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

    ಕುಂಭಮೇಳದಲ್ಲಿ ಕಾಲ್ತುಳಿತ – ತಪ್ಪಿತಸ್ಥರ ವಿರುದ್ಧ ಕ್ರಮ ಕೋರಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

    ನವದೆಹಲಿ: ಮಹಾ ಕುಂಭಮೇಳದಲ್ಲಿ ಕಾಲ್ತುಳಿತ (Kumbh Mela Stampede) ಸಂಭವಿಸಿ 30 ಜನರು ಸಾವನ್ನಪ್ಪಿ 90ಕ್ಕೂ ಅಧಿಕ ಮಂದಿ ಗಾಯಗೊಂಡಿರುವುದು ದುರದೃಷ್ಟಕರ ಎಂದಿರುವ ಸುಪ್ರೀಂ ಕೋರ್ಟ್ (Supreme Court), ಉತ್ತರ ಪ್ರದೇಶ ಸರ್ಕಾರದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ. ಈ ಬಗ್ಗೆ ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವಂತೆ ಸಲಹೆ ನೀಡಿದೆ.

    ಘಟನೆಗೆ ಕಾರಣವಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಹಾಗೂ ಮುಂದೆ ಇಂತಹ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ವಕೀಲ ವಿಶಾಲ್ ತಿವಾರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಮುಖ್ಯ ನ್ಯಾ. ಸಂಜೀವ್ ಖನ್ನಾ ನೇತೃತ್ವದ ಪೀಠ ವಿಚಾರಣೆ ನಡೆಸಿತು.

    ವಿಚಾರಣೆ ವೇಳೆ ಇದು ದುರದೃಷ್ಟಕರ ಘಟನೆ ಮತ್ತು ಕಳವಳಕಾರಿ ವಿಷಯವಾಗಿದೆ ಎಂದ ಪೀಠ, ಈ ಬಗ್ಗೆ ಹೈಕೋರ್ಟ್‌ ಅನ್ನು ಸಂಪರ್ಕಿಸಿ ಎಂದು ಸಲಹೆ ನೀಡಿತು. ಅಲ್ಲದೇ, ಈಗಾಗಲೇ ನ್ಯಾಯಾಂಗ ಆಯೋಗವನ್ನು ರಚಿಸಲಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ತಿವಾರಿ ಅವರಿಗೆ ತಿಳಿಸಿದರು.

    ಉತ್ತರ ಪ್ರದೇಶ ಸರ್ಕಾರ ಪ್ರತಿನಿಧಿಸಿದ ಹಿರಿಯ ವಕೀಲ ಮುಕುಲ್ ರೋಹ್ಟಗಿ, ಕಾಲ್ತುಳಿತ ಘಟನೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಯುತ್ತಿದೆ ಎಂದು ಪೀಠಕ್ಕೆ ತಿಳಿಸಿದರು. ಹೈಕೋರ್ಟ್‌ನಲ್ಲಿ ಸಲ್ಲಿಸಲಾದ ಇದೇ ರೀತಿಯ ಮನವಿಯ ಬಗ್ಗೆ ಮಾಹಿತಿ ನೀಡಿದರು.

    ನಿವೃತ್ತ ನ್ಯಾಯಾಧೀಶ ಹರ್ಷ್ ಕುಮಾರ್ ನೇತೃತ್ವದ ಮೂವರು ಸದಸ್ಯರ ಸಮಿತಿಯು ಘಟನೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸುತ್ತಿದೆ. ಮಾಜಿ ಪೊಲೀಸ್ ಮುಖ್ಯಸ್ಥ ವಿಕೆ ಗುಪ್ತಾ ಮತ್ತು ನಿವೃತ್ತ ನಾಗರಿಕ ಸೇವಕ ಡಿಕೆ ಸಿಂಗ್ ಕೂಡ ಸಮಿತಿಯ ಭಾಗವಾಗಲಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಪ್ರತ್ಯೇಕ ಪೊಲೀಸ್ ತನಿಖೆಗೆ ಆದೇಶಿಸಿದ್ದಾರೆ.

    ಜ.29 ರಂದು ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿದ್ದರು. 60 ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ವಕೀಲ ವಿಶಾಲ್ ತಿವಾರಿ ಅವರು PIL ಸಲ್ಲಿಸಿದ್ದರು.

  • ಸಿಎಂ ಸ್ಥಾನದಿಂದ ಕೇಜ್ರಿವಾಲ್ ಕೆಳಗಿಳಿಸುವಂತೆ ಕೋರಿ ಸಲ್ಲಿಸಿದ್ದ ಪಿಐಎಲ್ ವಜಾ

    ಸಿಎಂ ಸ್ಥಾನದಿಂದ ಕೇಜ್ರಿವಾಲ್ ಕೆಳಗಿಳಿಸುವಂತೆ ಕೋರಿ ಸಲ್ಲಿಸಿದ್ದ ಪಿಐಎಲ್ ವಜಾ

    ನವದೆಹಲಿ : ಆಮ್ ಆದ್ಮಿ ಪಕ್ಷದ (AAP) ನಾಯಕ ಅರವಿಂದ್ ಕೇಜ್ರಿವಾಲ್ (Aravind Kejriwal) ಅವರನ್ನು ದೆಹಲಿ ಮುಖ್ಯಮಂತ್ರಿ ಹುದ್ದೆಯಿಂದ ವಜಾಗೊಳಿಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಪರಿಗಣಿಸಲು ದೆಹಲಿ ಹೈಕೋರ್ಟ್ (Delhi High Court) ಗುರುವಾರ ನಿರಾಕರಿಸಿದೆ.

    ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ (Delhi Liquor Scam) ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಬಂಧಿಸುವಂತೆ ಉಲ್ಲೇಖಿಸಿ ಹಿಂದೂ ಸೇನಾ ಎಂಬ ಸಂಘಟನೆಯ ಅಧ್ಯಕ್ಷರಾಗಿರುವ ವಿಷ್ಣು ಗುಪ್ತಾ ಅವರು ಸಲ್ಲಿಸಿದ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾ. ಮನಮೋಹನ್ ನೇತೃತ್ವದ ವಿಭಾಗೀಯ ಪೀಠವು ಸಿಎಂ ಆಗಿ ಮುಂದುವರಿಯಬೇಕೇ ಅಥವಾ ಬೇಡವೇ ಎಂಬುದು ಕೇಜ್ರಿವಾಲ್ ಅವರ ವೈಯಕ್ತಿಕ ಕರೆ ಎಂದು ಹೇಳಿದೆ. ಇದನ್ನೂ ಓದಿ: ಪುಲ್ವಾಮ ದಾಳಿ ಮಾಡಿಸಿದ್ದು ಬಿಜೆಪಿ, ಸರ್ಜಿಕಲ್ ಸ್ಟ್ರೈಕ್ ನಾಟಕ: ಎಸ್.ಆರ್ ಶ್ರೀನಿವಾಸ್

     

    court order law

    ಕೆಲವೊಮ್ಮೆ ವೈಯಕ್ತಿಕ ಹಿತಾಸಕ್ತಿಯು ರಾಷ್ಟ್ರೀಯ ಹಿತಾಸಕ್ತಿಗೆ ಅಧೀನವಾಗಿರಬೇಕು ಎಂದು ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿ ಕೋರ್ಟ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅಥವಾ ಮುಂದುವರಿಯುವುದು ಅದು ಅವರ ವೈಯಕ್ತಿಕ ನಿರ್ಧಾರ. ಈ ವಿಷಯವನ್ನು ನಿರ್ಧರಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

    ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅಥವಾ ಭಾರತದ ರಾಷ್ಟ್ರಪತಿಗಳು ಈ ವಿಷಯದ ಬಗ್ಗೆ ಕರೆಯನ್ನು ತೆಗೆದುಕೊಳ್ಳುಬಹುದು. ಸರ್ಕಾರ ಕಾರ್ಯನಿರ್ವಹಿಸುತ್ತಿಲ್ಲ ಎಂದು ನಾವು ಹೇಗೆ ಘೋಷಿಸಲು ಸಾಧ್ಯ? ಅದನ್ನು ನಿರ್ಧರಿಸಲು ಎಲ್‌ಜಿ ಸಂಪೂರ್ಣ ಸಮರ್ಥರಾಗಿದ್ದಾರೆ. ಅವರಿಗೆ ನಮ್ಮ ಮಾರ್ಗದರ್ಶನ ಅಗತ್ಯವಿಲ್ಲ. ಅವರಿಗೆ ಸಲಹೆ ನೀಡಲು ನಾವು ಯಾರೂ ಅಲ್ಲ. ಅವರು ಕಾನೂನಿನ ಪ್ರಕಾರ ಏನು ಮಾಡಬೇಕೋ ಅದನ್ನು ಮಾಡುತ್ತಾರೆ ಎಂದು ನ್ಯಾಯಾಲಯ ವಿಚಾರಣೆ ಸಮಯದಲ್ಲಿ ಹೇಳಿದೆ. ಇದನ್ನೂ ಓದಿ: ನಾಮಪತ್ರ ಸಲ್ಲಿಸಿದ ಡಾ.ಮಂಜುನಾಥ್ – ಡಿಕೆಸು ನೋಡಿ ಮೋದಿ ಘೋಷಣೆ ಕೂಗಿದ ಕಾರ್ಯಕರ್ತರು

    ಸಮಸ್ಯೆಯನ್ನು ನಿರ್ಧರಿಸಲು ರಾಷ್ಟ್ರಪತಿ ಅಥವಾ ಎಲ್‌ಜಿ ಸಮರ್ಥರಿದ್ದಾರೆ, ಅವರನ್ನು ಸಂಪರ್ಕಿಸಲು ಅರ್ಜಿದಾರರಿಗೆ ಸ್ವಾತಂತ್ರ್ಯವಿದೆ ಎಂದು ಕೋರ್ಟ್ ಹೇಳಿತು. ಕೋರ್ಟ್ ಸಲಹೆ ಮೇರೆಗೆ ಅರ್ಜಿದಾರರು ಅರ್ಜಿಯನ್ನು ಹಿಂಪಡೆದರು. ಕೇಜ್ರಿವಾಲ್ ಅವರನ್ನು ದೆಹಲಿ ಮುಖ್ಯಮಂತ್ರಿ ಸ್ಥಾನದಿಂದ ತೆಗೆದುಹಾಕಲು ಇದು ಎರಡನೇ ಪಿಐಎಲ್ ಆಗಿದ್ದು, ಇದನ್ನು ಹೈಕೋರ್ಟ್ ವಜಾಗೊಳಿಸಿದೆ.

  • ಧಾರ್ಮಿಕ ಮತಾಂತರಗಳನ್ನು ತಡೆಯಲು ಕೇಂದ್ರಕ್ಕೆ ನಿರ್ದೇಶನ ನೀಡಿ – ಪಿಐಎಲ್‌ ವಜಾ

    ಧಾರ್ಮಿಕ ಮತಾಂತರಗಳನ್ನು ತಡೆಯಲು ಕೇಂದ್ರಕ್ಕೆ ನಿರ್ದೇಶನ ನೀಡಿ – ಪಿಐಎಲ್‌ ವಜಾ

    ನವದೆಹಲಿ: ದೇಶದಲ್ಲಿ ನಡೆಯುವ ಮೋಸದ ಧಾರ್ಮಿಕ ಮತಾಂತರಗಳನ್ನು (Religious Conversions) ತಡೆಯಲು ಕ್ರಮಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ (Supreme Court) ನಿರಾಕರಿಸಿದೆ.

    ಕರ್ನಾಟಕ (Karnataka) ಮೂಲದ ಜೆರೋಮ್ ಆಂಟೊ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (D Y Chandrachud) ನೇತೃತ್ವದ ತ್ರಿ ಸದಸ್ಯ ಪೀಠ, ನ್ಯಾಯಾಲಯವು ಈ ವಿಷಯಕ್ಕೆ ಯಾಕೆ ಪ್ರವೇಶಿಸಬೇಕು? ನ್ಯಾಯಾಲಯವು ಸರ್ಕಾರಕ್ಕೆ ನಿರ್ದೇಶನ ಹೇಗೆ ನೀಡಬಹುದು? ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಒಂದು ಸಾಧನವಾಗಿ ಮಾರ್ಪಟ್ಟಿದೆ. ಪ್ರತಿಯೊಬ್ಬರೂ ಈ ರೀತಿಯ ಅರ್ಜಿಗಳೊಂದಿಗೆ ಬರುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿತು.  ಇದನ್ನೂ ಓದಿ: ತಮಿಳುನಾಡು ಕಾವೇರಿ ನೀರಿನ ಸಮರ್ಪಕ ಬಳಕೆ ಮಾಡುತ್ತಿಲ್ಲ – ಸುಪ್ರೀಂನಲ್ಲಿ ಕರ್ನಾಟಕ ಆಕ್ಷೇಪ

    ಅರ್ಜಿದಾರರ ಪರ ವಕೀಲರು, ಅರ್ಜಿದಾರರು ಈ ರೀತಿಯ ಕುಂದುಕೊರತೆಯೊಂದಿಗೆ ಎಲ್ಲಿಗೆ ಹೋಗಬೇಕು? ಹಿಂದೂಗಳು (Hindu) ಮತ್ತು ಅಪ್ರಾಪ್ತರನ್ನು ಗುರಿಯಾಗಿಸಿಕೊಂಡು ಅವರನ್ನು ಮೋಸದಿಂದ ಮತಾಂತರ ಮಾಡಲಾಗುತ್ತಿದೆ ಎಂದು ವಾದಿಸಿದರು.

    ಇದಕ್ಕೆ ಪ್ರತಿಕ್ರಿಯಿಸಿದ ಪೀಠ ಯಾರಾದರೂ ಸಂತ್ರಸ್ತರಿದ್ದರೇ ನಾವು ಅರ್ಜಿ ವಿಚಾರಣೆ ಮಾಡಬಹುದು ಎಂದು ಹೇಳಿ ಅರ್ಜಿಯನ್ನು ವಜಾ‌ ಮಾಡಿತು.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಂಸತ್‌ ಕಟ್ಟಡವನ್ನು ರಾಷ್ಟ್ರಪತಿ ಉದ್ಘಾಟಿಸಲಿ: ಸುಪ್ರೀಂನಲ್ಲಿ ಪಿಐಎಲ್‌ ಸಲ್ಲಿಕೆ

    ಸಂಸತ್‌ ಕಟ್ಟಡವನ್ನು ರಾಷ್ಟ್ರಪತಿ ಉದ್ಘಾಟಿಸಲಿ: ಸುಪ್ರೀಂನಲ್ಲಿ ಪಿಐಎಲ್‌ ಸಲ್ಲಿಕೆ

    ನವದೆಹಲಿ: ನೂತನ ಸಂಸತ್‌ ಕಟ್ಟಡವನ್ನು (New Parliament Building) ರಾಷ್ಟ್ರಪತಿಗಳಿಂದ (President) ಉದ್ಘಾಟಿಸಲು ನಿರ್ದೇಶನ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಕೆಯಾಗಿದೆ.

    ಕಾಂಗ್ರೆಸ್‌, ಟಿಎಂಸಿ, ಆಪ್‌, ಜೆಡಿಯು ಸೇರಿದಂತೆ 20 ವಿರೋಧ ಪಕ್ಷಗಳು ಬಹಿಷ್ಕಾರ ಹಾಕಿದ ಬೆನ್ನಲ್ಲೇ ಸುಪ್ರೀಂನಲ್ಲಿ (Supreme Court) ಅರ್ಜಿ ಸಲ್ಲಿಕೆಯಾಗಿದೆ.

    ರಾಷ್ಟ್ರಪತಿ ಅವರಿಂದ ಉದ್ಘಾಟನೆ ಮಾಡದೇ ಪ್ರಧಾನಿ ಮೋದಿ (PM Narendra Modi) ಉದ್ಘಾಟಿಸುತ್ತಿರುವುದು ಸಂವಿಧಾನಕ್ಕೆ ಮಾಡುತ್ತಿರುವ ಅವಮಾನ ಎಂದು ವಕೀಲ ಸಿಆರ್ ಜಯ ಸುಕಿನ್ ತಮ್ಮ ಅರ್ಜಿಯಲ್ಲಿ  ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: New Parliament Building – ಕರ್ನಾಟಕ ವಿಧಾನಸೌಧದ ಉದಾಹರಣೆ ನೀಡಿ ಕಾಂಗ್ರೆಸ್‌ಗೆ ಸಂಬಿತ್‌ ಪಾತ್ರ ತಿರುಗೇಟು

    ಯಾವುದೇ ಸದನವನ್ನು ಕರೆಯುವ ಮತ್ತು ಮುಂದೂಡುವ ಅಧಿಕಾರ ರಾಷ್ಟ್ರಪತಿಗಳಿಗೆ ಇದೆ. ಸಂಸತ್ತು ಅಥವಾ ಲೋಕಸಭೆಯನ್ನು ವಿಸರ್ಜಿಸುವ ಅಧಿಕಾರ ರಾಷ್ಟ್ರಪತಿಗಳಿಗೆ ಇರುವುದರಿಂದ ಅವರಿಂದಲೇ ಲೋಕಾರ್ಪಣೆ ಮಾಡಬೇಕೆಂದು ಮನವಿ ಮಾಡಲಾಗಿದೆ.

    ರಾಷ್ಟ್ರಪತಿ ಸಂಸತ್ತಿನ ಅವಿಭಾಜ್ಯ ಅಂಗ. ಶಿಲಾನ್ಯಾಸ ಸಮಾರಂಭದಿಂದ ರಾಷ್ಟ್ರಪತಿಯನ್ನು ದೂರವಿಟ್ಟಿದ್ದು ಏಕೆ? ಈಗ ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರಪತಿಯವರನ್ನು ಆಹ್ವಾನಿಸುತ್ತಿಲ್ಲ. ಸರಕಾರದ ಈ ನಿರ್ಧಾರ ಸರಿಯಲ್ಲ ಎಂದು ದೂರಲಾಗಿದೆ. ಲೋಕಸಭಾ ಸಚಿವಾಲಯ, ಗೃಹ ಸಚಿವಾಲಯ, ಕಾನೂ ಸಚಿವಲಯಗಳನ್ನು ಅರ್ಜಿದಾರರು ಈ ಪ್ರಕರಣದಲ್ಲಿ ಪಾರ್ಟಿ ಮಾಡಿದ್ದಾರೆ.

    ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರು ಮೇ 28 ರಂದು ಹೊಸ ಸಂಸತ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.

  • ಈ ಶೋಗೆ ಮಾತ್ರ ಅರ್ಜಿ ಸಲ್ಲಿಸಿದ್ದು ಯಾಕೆ? – ಮೋದಿ ರೋಡ್ ಶೋಗೆ ಹೈಕೋರ್ಟ್ ಗ್ರೀನ್ ಸಿಗ್ನಲ್: ವಾದ, ಪ್ರತಿವಾದ ಹೇಗಿತ್ತು?

    ಈ ಶೋಗೆ ಮಾತ್ರ ಅರ್ಜಿ ಸಲ್ಲಿಸಿದ್ದು ಯಾಕೆ? – ಮೋದಿ ರೋಡ್ ಶೋಗೆ ಹೈಕೋರ್ಟ್ ಗ್ರೀನ್ ಸಿಗ್ನಲ್: ವಾದ, ಪ್ರತಿವಾದ ಹೇಗಿತ್ತು?

    ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ( Karnataka Assembly Election) ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ (Bengaluru) ಶನಿವಾರ ಮತ್ತು ಭಾನುವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ 36 ಕಿ.ಮೀ ರೋಡ್ ಶೋ ತಡೆ ನೀಡಲು ಹೈಕೋರ್ಟ್ (Karnataka High Court) ಶುಕ್ರವಾರ ನಿರಾಕರಿಸಿದೆ.

    ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಹಾಗೂ ವಿಜಯಕುಮಾರ್ ಎ. ಪಾಟೀಲ್ ಅವರ ಪೀಠವು ವಿಚಾರಣೆ ನಡೆಸಿ ರೋಡ್ ಶೋಗೆ ತಡೆಗೆ ಸಲ್ಲಿಸಿದ್ದ ಅರ್ಜಿಯನ್ನು ಇತ್ಯರ್ಥ ಮಾಡಿದರು. ಇದನ್ನೂ ಓದಿ: ಇವಿಎಂ ಖರೀದಿಯಲ್ಲಿ ಅಕ್ರಮ ಆರೋಪ – ಚುನಾವಣಾ ಆಯೋಗದ ವಿರುದ್ಧದ ಪಿಐಎಲ್ ವಜಾಗೊಳಿಸಿದ ಸುಪ್ರೀಂ

    ವಿಚಾರಣೆಯ ಸಂದರ್ಭದಲ್ಲಿ, ಭಾರತದಲ್ಲಿ ಚುನಾವಣೆಗಳನ್ನು ಹಬ್ಬದ ಆಚರಣೆಗಳೆಂದು ಪರಿಗಣಿಸಲಾಗಿದೆ. ಅಲ್ಲದೇ 1952 ರ ಮೊದಲ ಸಾರ್ವತ್ರಿಕ ಚುನಾವಣೆಯಿಂದಲೇ ರ‍್ಯಾಲಿ ನಡೆಸಲಾಗಿದೆ. ಇದಲ್ಲದೆ, ಕೇರಳ ಮತ್ತು ಕಲ್ಕತ್ತಾ ಹೈಕೋರ್ಟ್‍ಗಳು ಚುನಾವಣಾ ರ‍್ಯಾಲಿಗೆ ಅವಕಾಶ ನೀಡಿರುವುದನ್ನು ನಾವಿಲ್ಲಿ ಗಮನಿಸಬಹುದು ಎಂದು ನ್ಯಾಯಾಲಯ ಅಭಿಪ್ರಾಯ ವ್ಯಕ್ತಪಡಿಸಿತು.

    ನ್ಯಾಯಾಲಯದ ಪ್ರಶ್ನೆ:
    ಏಪ್ರಿಲ್‍ನಿಂದ ರೋಡ್ ಶೋಗಳು ನಡೆಯುತ್ತಿವೆ. ಆದರೆ ಈ ರೋಡ್ ಶೋಗೆ ಮಾತ್ರ ಯಾಕೆ ಪಿಎಎಲ್ (PIL) ಹಾಕಿದ್ದೀರಿ? ನಾಳೆ ರೋಡ್ ಶೋ ಇರುವಾಗ ಇಂದು ಅರ್ಜಿ ಸಲ್ಲಿಸಿದ್ದು ಯಾಕೆ? ಚುನಾವಣಾ ಆಯೋಗ ರೋಡ್ ಶೋ ಬಗ್ಗೆ ಏನಾದ್ರೂ ಮಾರ್ಗಸೂಚಿ ನೀಡಿದೆಯೇ ಎಂದು ಅರ್ಜಿದಾರರನ್ನು ಪ್ರಶ್ನಿಸಿತು.

    ನೀಟ್ ಪರೀಕ್ಷೆಗೆ ಯಾವುದೇ ತೊಂದರೆಯಾಗದಂತೆ ಕಾರ್ಯ ನಿರ್ವಹಿಸಬೇಕು. ರ‍್ಯಾಲಿಯಿಂದ ಜನರಿಗೆ ಸಮಸ್ಯೆಯಾಗದಂತೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದು ಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ. ಯಾವುದೇ ಅಹಿತಕರ ಘಟನೆ ನಡೆದಲ್ಲಿ ಸಂಘಟಕರು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದ್ದರೂ ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ನ್ಯಾಯಾಲಯ ಎಚ್ಚರಿಕೆ ನೀಡಿದೆ.

    ಪೊಲೀಸ್ ಕಮಿಷನರ್ ಹೇಳಿದ್ದೇನು?
    ರ್ಯಾಲಿ ಇದ್ದಾಗ ಸಾರ್ವಜನಿಕರಿಗೆ ಹಿಂದಿನ ದಿನವೇ ಮಾಹಿತಿ ನೀಡುತ್ತಿದ್ದೇವೆ. ಮಾಹಿತಿ ನೀಡಲು ಸಾಮಾಜಿಕ ಜಾಲತಾಣ ಬಳಕೆ ಮಾಡುತ್ತಿದ್ದೇವೆ. ಅಹಿತಕರ ಘಟನೆ ನಡೆಯದಂತೆ ಕ್ರಮಕೈಗೊಂಡಿದ್ದೇವೆ. ವಿದ್ಯಾರ್ಥಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿದ್ದೇವೆ. ಅಂಬುಲೆನ್ಸ್ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಪೊಲೀಸ್ ಕಮೀಷನರ್ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.

    ಅರ್ಜಿದಾರರ ವಾದ ಏನಿತ್ತು?
    ಬೆಂಗಳೂರಿನಲ್ಲಿ ರೋಡ್ ಶೋ ನಡೆಸುವ ರಾಜಕೀಯ ಮುಖಂಡರು ಸಮಯವನ್ನು 5 ಗಂಟೆಗಳವರೆಗೆ ವಿಸ್ತರಿಸುತ್ತಿದ್ದಾರೆ. ಇದರಿಂದಾಗಿ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆಯಾಗುತ್ತಿದೆ. ಮೋದಿಯವರ ರೋಡ್ ಶೋಗೆ ಬೆಂಗಳೂರಿನ ಪ್ರಮುಖ ವಾಣಿಜ್ಯ ರಸ್ತೆಗಳಲ್ಲಿ 10 ಲಕ್ಷ ಪಕ್ಷದ ಬೆಂಬಲಿಗರು ಸೇರಲಿದ್ದು ಸಾರ್ವಜನಿಕರ ಓಡಾಟಕ್ಕೆ ಅಡಚಣೆಯಾಗಲಿದೆ. ವ್ಯಾಪಾರಿಗಳಿಗೆ ತೊಂದರೆಯಾಗಲಿದೆ. ಅಂಬುಲೆನ್ಸ್ ಸಂಚಾರಕ್ಕೆ ತೊಂದೆಯಾಗಲಿದೆ. ಮೇ 13 ರಂದು ಗೆದ್ದರೆ ಮತ ಎಣಿಕೆಯ ನಂತರವೂ ರೋಡ್ ಶೋಗಳಿಗೆ ರಾಜಕೀಯ ಪಕ್ಷಗಳು ಯೋಚಿಸಿವೆ. ಹೀಗಿದ್ದರೂ, ರೋಡ್ ಶೋಗಳ ದುಷ್ಪರಿಣಾಮಗಳನ್ನು ತಡೆಯಲು ಬೆಂಗಳೂರು ಪೊಲೀಸರು ಯಾವುದೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಅರ್ಜಿದಾರರಾದ ವಕೀಲ ಅಮೃತೇಶ್ ವಾದಿಸಿದ್ದರು.

    ರಾಜ್ಯ ಸರ್ಕಾರದ ವಾದ ಏನಿತ್ತು?
    ರಾಜ್ಯದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅವರು, ಚುನಾವಣಾ ಪ್ರಚಾರದ ಉದ್ದೇಶಕ್ಕಾಗಿ ಚುನಾವಣಾ ರ‍್ಯಾಲಿಗಳನ್ನು ಬಹಳ ಹಿಂದಿನಿಂದಲೂ ನಡೆಸಲಾಗುತ್ತಿದೆ. ಇದುವರೆಗೆ ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ. ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ, ಇಲ್ಲಿಯ ವರೆಗೂ 2,517 ರ್ಯಾಲಿಗಳನ್ನು ಯಾವುದೇ ಅಹಿತಕರ ಘಟನೆ ವರದಿಯಾಗದಂತೆ ನಡೆದಿವೆ. ಈ ಪೈಕಿ 371 ಬೆಂಗಳೂರಿನಲ್ಲಿ ನಡೆದಿವೆ ಎಂದು ವಾದಿಸಿದರು.

    ಚುನಾವಣಾ ಪ್ರಕ್ರಿಯೆಯಲ್ಲಿ ರ‍್ಯಾಲಿಗಳನ್ನು ನಡೆಸುವ ಹಕ್ಕು ಭಾರತೀಯ ಸಂವಿಧಾನದ 19 ನೇ ವಿಧಿಯ ಅಡಿಯಲ್ಲಿ ಖಾತ್ರಿಪಡಿಸಲಾದ ಭಾಷಣ, ಸಭೆ ಮತ್ತು ಚಳುವಳಿಯ ಹಕ್ಕುಗಳನ್ನು ಹೊಂದಿದೆ ಎಂದು ಅವರು ಕೋರ್ಟ್ ಗಮನಕ್ಕೆ ತಂದರು. ಇದನ್ನೂ ಓದಿ: ಕಾಂಗ್ರೆಸ್‍ದು 85 ಪರ್ಸೆಂಟ್ ಕಮಿಷನ್ ಸರ್ಕಾರ ಆಗಿತ್ತು: ನರೇಂದ್ರ ಮೋದಿ

  • ಇವಿಎಂ ಖರೀದಿಯಲ್ಲಿ ಅಕ್ರಮ ಆರೋಪ – ಚುನಾವಣಾ ಆಯೋಗದ ವಿರುದ್ಧದ ಪಿಐಎಲ್ ವಜಾಗೊಳಿಸಿದ ಸುಪ್ರೀಂ

    ಇವಿಎಂ ಖರೀದಿಯಲ್ಲಿ ಅಕ್ರಮ ಆರೋಪ – ಚುನಾವಣಾ ಆಯೋಗದ ವಿರುದ್ಧದ ಪಿಐಎಲ್ ವಜಾಗೊಳಿಸಿದ ಸುಪ್ರೀಂ

    ನವದೆಹಲಿ: ಇವಿಎಂಗಳ (EVM) ಖರೀದಿಯಲ್ಲಿ ಭಾರತ ಚುನಾವಣಾ ಆಯೋಗ (ECI) ಅಕ್ರಮ ನಡೆಸಿದೆ ಎಂದು ಆರೋಪಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (Public Interest Litigation) ಸುಪ್ರೀಂ ಕೋರ್ಟ್ (Supreme Court) ವಜಾಗೊಳಿಸಿದೆ.

    ಚುನಾವಣಾ ವೆಚ್ಚ ಹೆಚ್ಚಾದರೆ ಅದು ಪ್ರಜಾಪ್ರಭುತ್ವಕ್ಕೆ ತೆರಬೇಕಾದ ಬೆಲೆಯಾಗಿದೆ. ಅದ್ದರಿಂದ ಇವಿಎಂ ಖರೀದಿಯಲ್ಲಿ ಹೇಗೆ ಹಣ ಖರ್ಚು ಮಾಡಿದ್ದೀರಿ ಎಂದು ಕೇಳಲು ಸಾದ್ಯವಿಲ್ಲ. ಅಲ್ಲದೆ ಇವಿಎಂಗಳನ್ನು ಖರೀದಿಸುವ ವಿಷಯವು ಮೂಲಭೂತ ಹಕ್ಕುಗಳ ಜಾರಿಗಾಗಿ ಸುಪ್ರೀಂ ಕೋರ್ಟ್‍ಗೆ ತೆರಳುವ ಆರ್ಟಿಕಲ್ 32  (Article 32)ರ ವ್ಯಾಪ್ತಿಯೊಳಗೆ ಬರುವುದಿಲ್ಲ ಎಂದು ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ (CJI) ಡಿವೈ ಚಂದ್ರಚೂಡ್ (Chief Justice of India DY Chandrachud) ನೇತೃತ್ವದ ಪೀಠ ಹೇಳಿದೆ. ಇದನ್ನೂ ಓದಿ: ಕುಡಿದ ಪೊಲೀಸರಿಂದ ಹಲ್ಲೆ ಆರೋಪ – ದೇಶದ ಅತ್ಯುನ್ನತ ಪ್ರಶಸ್ತಿ ಹಿಂದಿರುಗಿಸಲು ಮುಂದಾದ ಕುಸ್ತಿಪಟುಗಳು

    ಈ ವೇಳೆ ಅರ್ಜಿದಾರರ ಪರ ವಕೀಲ, ಭಾರತ ಚುನಾವಣಾ ಆಯೋಗ ಇವಿಎಂಗಳನ್ನು ಖರೀದಿಸಿದೆ ಎಂದು ತೋರಿಸಿದೆ. ಆದರೆ ವಾಸ್ತವವಾಗಿ ಖರೀದಿಸಿಲ್ಲ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನಕ್ಕೆ ಗುಪ್ತ ಮಾಹಿತಿ ರವಾನೆ – ರಕ್ಷಣಾ ಸಂಸ್ಥೆಯ ವಿಜ್ಞಾನಿ ಅರೆಸ್ಟ್

  • ಜಾಮಿಯ ವಿವಾದ- ನಾಳೆ ಹೈಕೋರ್ಟ್‍ನಲ್ಲಿ PIL  ಸಲ್ಲಿಕೆ

    ಜಾಮಿಯ ವಿವಾದ- ನಾಳೆ ಹೈಕೋರ್ಟ್‍ನಲ್ಲಿ PIL ಸಲ್ಲಿಕೆ

    ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದ ಜಾಮಿಯ ಮಸೀದಿ (Jamia Masjid Srirangapatna) ವಿವಾದ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಜಾಮಿಯ ಮಸೀದಿಯೋ ಅಥವಾ ಮಂದಿರವೋ ಎಂಬ ವಿಚಾರ ಇದೀಗ ತಾರ್ಕಿಕ ಅಂತ್ಯ ಕಾಣಲು ನ್ಯಾಯಾಲಯದ ಮೆಟ್ಟಿಲು ಏರಿದೆ.

    ಜಾಮಿಯ ಮಸೀದಿಯ ವಿವಾದ ನಾಳೆ ಬೆಂಗಳೂರಿನ ಹೈಕೋರ್ಟ್ (HighCourt) ನಲ್ಲಿ ಭಜರಂಗ ಸೇನೆ ಪಿಐಎಲ್ (PIL) ಸಲ್ಲಿಕೆ ಮಾಡಲಿದೆ. ಭಜರಂಗ (Bhajrangdal) ಸೇನೆಯಿಂದ ದಾವೆ ಹೂಡಿದ್ದು, ನಾಳೆ ಹೈಕೋರ್ಟ್‍ನಲ್ಲಿ ಜಾಮಿಯ ವಿವಾದ ಅಡ್ಮಿಶನ್ ಆಗಲಿರುವ ಆಗಲಿದೆ. ಐದು ಮಂದಿ ವಕೀಲರ ತಂಡದಿಂದ ಕಾನೂನು ಹೋರಾಟ ನಡೆಯಲಿದ್ದು, ವಕೀಲ ರವಿಶಂಕರ್ ಹೆಚ್.ಎಸ್ ನೇತೃತ್ವದ ಐದು ಮಂದಿಯ ತಂಡ ಹೋರಾಟ ನಡೆಸಲಿದೆ. ಇದನ್ನೂ ಓದಿ: ಮದುವೆಯಾಗಲು ಹುಡುಗಿಗಾಗಿ ಕ್ಯೂ ನಿಂತ ಮಂಡ್ಯ ಯುವ ರೈತರು

    ಒಂದು ಕಡೆ ನಾಳೆ ಕೋರ್ಟ್‍ಲ್ಲಿ ಪಿಐಎಲ್ ಸಲ್ಲಿಕೆಯಾಗಲಿದ್ದು, ಶನಿವಾರ ಭಜರಂಗ ಸೇನೆಯ ಕಾರ್ಯಕರ್ತರು ಹಾಗೂ ಹನುಮ ಭಕ್ತರಿಂದ ಹರಕೆಯ ಪಾದಯಾತ್ರೆ ನಡೆಸಲಿದ್ದಾರೆ. ನ್ಯಾಯಾಲಯದ ಪಿಟಿಶನ್ ಹಿಡಿದುಕೊಂಡು ಮಂಡ್ಯದಿಂದ ಶ್ರೀರಂಗಪಟ್ಟಣದ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನ (Aanjaneyaswamy Temple) ದ ವರೆಗೆ ಪಾದಯಾತ್ರೆ ನಡೆಯಲಿದೆ.

    ಪಿಟಿಶನ್‍ನನ್ನು ಆಂಜನೇಯಸ್ವಾಮಿ ಪಾದದಲ್ಲಿ ಇಟ್ಟು ವಿಶೇಷ ಪೂಜೆ ಸಲ್ಲಿಸಿ, ವಾಪಸ್ ನೀನು ಮೂಲ ಸ್ಥಳಕ್ಕೆ ಹೋಗಬೇಕು. ಈ ಕಾನೂನು ಹೋರಾಟದಲ್ಲಿ ಗೆಲುವು ಆಗಬೇಕೆಂದು ಆಂಜನೇಯಸ್ವಾಮಿಯ ಬಳಿ ಹರಕೆ ಕಟ್ಟಿಕೊಳ್ಳಲಿರುವ ಹನುಮ ಭಕ್ತರು ಪ್ರಾರ್ಥನೆ ಸಲ್ಲಿಸಲಿದ್ದಾರೆಂದು ಭಜರಂಗ ಸೇನೆಯ ರಾಜ್ಯಾಧ್ಯಕ್ಷ ಮಂಜುನಾಥ್ ಮಂಡ್ಯರವರು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]