Tag: plastic bottle

  • ಡ್ಯಾಂನಲ್ಲಿ ಪ್ಲಾಸ್ಟಿಕ್ ಬಾಟಲ್ ತರುವ ಚಾಲೆಂಜ್- ನೀರು ಪಾಲದ ಇಬ್ಬರು ವಿದ್ಯಾರ್ಥಿಗಳು

    ಡ್ಯಾಂನಲ್ಲಿ ಪ್ಲಾಸ್ಟಿಕ್ ಬಾಟಲ್ ತರುವ ಚಾಲೆಂಜ್- ನೀರು ಪಾಲದ ಇಬ್ಬರು ವಿದ್ಯಾರ್ಥಿಗಳು

    ಚಿಕ್ಕಬಳ್ಳಾಪುರ: ಡ್ಯಾಂ ನಲ್ಲಿ ಈಜಲು ತೆರಳಿದ ಇಬ್ಬರು ವಿದ್ಯಾರ್ಥಿಗಳು ನೀರುಪಾಲಾಗಿದ್ದು ಮತ್ತಿಬ್ಬರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಬಳಿಯ ದಂಡಿಗಾನಹಳ್ಳಿ ಡ್ಯಾಂನಲ್ಲಿ ನಡೆದಿದೆ.

    23 ವರ್ಷದ ಅಭಿಲಾಷ್ ಹಾಗೂ ಸತೀಶ್ ಶಿವಕುಮಾರ್ ಮೃತರು. ಬೆಂಗಳೂರಿನ ಕೆ. ನಾರಾಯಣಪುರ ಬಳಿಯ ಕ್ರಿಸ್ತು ಜಯಂತಿ ಕಾಲೇಜಿನ ವಿದ್ಯಾರ್ಥಿಗಳಾದ ಇವರು ಕಾರಿನಲ್ಲಿ ಓರ್ವ ಯುವತಿ ಸೇರಿ ನಾಲ್ವರು ಯುವಕರು ದಂಡಿಗಾನಹಳ್ಳಿ ಡ್ಯಾಂಗೆ ಆಗಮಿಸಿದ್ದರು. ಘಟನೆಯಲ್ಲಿ ಕೆವಿನ್ ಮೆಂಡೋಸ್ ಹಾಗೂ ಬುವಾಜ್ ಇಬ್ಬರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

    ಇನ್ನೂ ಡ್ಯಾಂನ ಕೊನೆಯಲ್ಲಿ ಈಜಾಡುತ್ತಿದ್ದ ರಕ್ಷಿತಾ ಘಟನೆಯಿಂದ ಬೆಚ್ಚಿಬಿದ್ದು ನೀರಿನಿಂದ ಹೊರಬಂದಿದ್ದಾಳೆ. ನೀರಿನಲ್ಲಿ ಈಜಾಡುತ್ತಾ ಆಡವಾಡುತ್ತಿದ್ದ ನಾಲ್ವರು ಯುವಕರು ಡ್ಯಾಂನಲ್ಲಿ ಎಲ್ಲಿಂದಲೋ ತೇಲಿ ಬಂದ ಪ್ಲಾಸ್ಟಿಕ್ ಬಾಟಲಿಯನ್ನು ನಾನು ತರುತ್ತೇನೆ ಎಂದು ಚಾಲೆಂಜ್ ಹಾಕಿಕೊಂಡಿದ್ದಾರೆ. ಈ ವೇಳೆ ಡ್ಯಾಂ ಆಳ ಅರಿಯದ ಯುವಕರು ಪ್ಲಾಸ್ಟಿಕ್ ಬಾಟಲಿ ತರುವ ಭರದಲ್ಲಿ ಮೊದಲು ಸತೀಶ್ ಶಿವಕುಮಾರ್ ನೀರಿನಲ್ಲಿ ಮುಳುಗಿದ್ರೇ ಅವನನ್ನ ಹುಡುಕಿಕೊಂಡು ಹೋದ ಅಭಿಲಾಷ್ ಸಹ ನೀರಿನಲ್ಲಿ ಮುಳುಗಿದ್ದಾನೆ.

    ಅಷ್ಟರಲ್ಲೇ ಸ್ಥಳದಲ್ಲಿದ್ದ ಸ್ಥಳೀಯರು ಉಳಿದ ಇಬ್ಬರು ಯುವಕರನ್ನು ದಡಕ್ಕೆ ಕರೆತಂದಿದ್ದಾರೆ. ಸದ್ಯ ಇಬ್ಬರು ಯುವಕರು ನೀರುಪಾಲಾಗಿದ್ದು ಉಳಿದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಮಂಚೇನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮತ್ತೊಂದೆಡೆ ಆಗ್ನಿಶಾಮಕ ದಳ ಸಿಬ್ಬಂದಿ ಸಹ ಸ್ಥಳಕ್ಕೆ ಭೇಟಿ ನೀಡಿದ್ದು ನೀರಿನಲ್ಲಿ ಮುಳುಗಡೆ ಆಗಿರುವ ಇಬ್ಬರು ಯುವಕರ ಮೃತದೇಹಗಳಿಗಾಗಿ ಶೋಧಕಾರ್ಯ ಮುಂದುವರಿಸಿದ್ದಾರೆ. ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಪ್ಲಾಸ್ಟಿಕ್ ನಿಷೇಧಕ್ಕೆ ಸರ್ಕಾರದ ಮತ್ತೊಂದು ಮಹತ್ವದ ಹೆಜ್ಜೆ

    ಪ್ಲಾಸ್ಟಿಕ್ ನಿಷೇಧಕ್ಕೆ ಸರ್ಕಾರದ ಮತ್ತೊಂದು ಮಹತ್ವದ ಹೆಜ್ಜೆ

    ಬೆಂಗಳೂರು: ಪ್ಲಾಸ್ಟಿಕ್ ಬ್ಯಾಗ್, ಲೋಟ ಬ್ಯಾನ್ ಆಗಿದೆ. ಈ ಎಲ್ಲ ಬೆಳವಣಿಗೆ ನಡುವೆ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ಸರ್ಕಾರದ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ವಾಟರ್ ಬಳಕೆ ಮಾಡುವಂತಿಲ್ಲ ಎಂಬ ಕಟ್ಟುನಿಟ್ಟಿನ ಆದೇಶವನ್ನ ಹೊರಡಿಸಿದೆ.

    ಏನದು ಆದೇಶ?:
    1. ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು, ಸರ್ಕಾರದಿಂದ ಅನುದಾನ ಪಡೆಯುವಂತಹ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ-ಸಮಾರಂಭ, ಕಾರ್ಯಾಗಾರ ಸೇರಿದಂತೆ ಇತರೆ ಕಾರ್ಯಕ್ರಮಗಳಲ್ಲಿ 20 ಲೀಟರ್ ಅಥವಾ ಅದಕ್ಕೂ ಹೆಚ್ಚಿನ ಸಾಮಥ್ರ್ಯದ ಕ್ಯಾನ್‍ಗಳಲ್ಲಿ ಶುದ್ಧೀಕರಿಸಿದ ಕುಡಿಯುವ ನೀರಿನ ವಿತರಣಾ ವ್ಯವಸ್ಥೆ ಏರ್ಪಡಿಸತಕ್ಕದ್ದು.

    2. ಸರ್ಕಾರದ ಅಂಗೀಕರಿಸಲ್ಪಟ್ಟ ಸಂಸ್ಥೆಗಳಿಂದ ಖರೀದಿಸಿದ ಆರ್‍ಓ ಮತ್ತು ನೀರು ಶುದ್ಧೀಕರಣ ಘಟಕಗಳನ್ನು ಅನುಸ್ಥಾಪಿಸಿ, ಗಾಜಿನ ಲೋಟ ಅಥವಾ ಸ್ಟೀಲ್ ಲೋಟ ಅಥವಾ ಪೇಪರ್ ಲೋಟ ಅಥವಾ ಇತರೆ ಪ್ಲಾಸ್ಟಿಕ್ ಅಲ್ಲದ ಲೋಟಗಳಲ್ಲಿ ನೀರು ಕುಡಿಯುವ ವ್ಯವಸ್ಥೆ ಮಾಡುವುದು.

    3. ಎಲ್ಲ ಸರ್ಕಾರಿ ಹಾಗು ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಸೇರಿದಂತೆ ಸರ್ಕಾರದಿಂದ ಅನುದಾನ ಪಡೆಯುವಂತಹ ಸಂಸ್ಥೆಗಳ ಕಚೇರಿಗಳಲ್ಲಿ ಸಾರ್ವಜನಿಕರಿಗಾಗಿ ಶುದ್ಧ ಕುಡಿಯುವ ನೀರಿಗಾಗಿ ಕೇಂದ್ರ ಸರ್ಕಾರದ ಜಾಲತಾಣ https://gem.gov.in/ ರಲ್ಲಿ ಅನುಮೋದಿಸಲ್ಪಟ್ಟಿರುವ ಸಂಸ್ಥೆಗಳಿಂದ ಖರೀದಿಸಿದ ಅಥವಾ ಯಾವುದಾದರೂ ಉತ್ತಮ ಆರ್‍ಓ ಶುದ್ಧ ನೀರಿನ ಘಟಕಗಳನ್ನು ವ್ಯವಸ್ಥಾನಗೊಳಿಸುವುದು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪ್ಲಾಸ್ಟಿಕ್ ಡಬ್ಬದೊಳಗೆ ತಲೆ ಸಿಲುಕಿಕೊಂಡು ಪಜೀತಿಗೆ ಸಿಲುಕಿದ್ದ ಶ್ವಾನದ ರಕ್ಷಣೆ

    ಪ್ಲಾಸ್ಟಿಕ್ ಡಬ್ಬದೊಳಗೆ ತಲೆ ಸಿಲುಕಿಕೊಂಡು ಪಜೀತಿಗೆ ಸಿಲುಕಿದ್ದ ಶ್ವಾನದ ರಕ್ಷಣೆ

    ಬೆಂಗಳೂರು: ಪಾಸ್ಟಿಕ್ ಡಬ್ಬದೊಳಗೆ ಶ್ವಾನದ ತಲೆ ಸಿಲುಕಿ ಒದ್ದಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ಬೆಂಗಳೂರಿನ ರಾಮಮೂರ್ತಿನಗರದ ಆಶೀರ್ವಾದ್ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಪ್ಲಾಸ್ಟಿಕ್ ಡಬ್ಬದೊಳಗೆ ತಲೆ ಸಿಲುಕಿಕೊಂಡ ಪರಿಣಾಮ ಬೀದಿ ಶ್ವಾನವೊಂದು ಎರಡು ದಿನದಿಂದ ತಿನ್ನೋಕಾಗದ ಪರಿಸ್ಥಿತಿಯಲ್ಲಿ ನರಳಾಡುತ್ತಿತ್ತು.

    ಬೀದಿ ನಾಯಿ ನರಳಾಟ ಕಂಡ ಆಶೀರ್ವಾದ್ ಲೇಔಟ್ ನಿವಾಸಿಗಳು ಕೂಡಲೇ ಬಿಬಿಎಂಪಿಗೆ ದೂರು ನೀಡಿದ್ದಾರೆ. ಹೀಗಾಗಿ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಬಿಬಿಎಂಪಿ ವನ್ಯಜೀವಿ ಸಂರಕ್ಷಕ ಸುಭಾಷ್ ಅವರು ಬೀದಿ ನಾಯಿಯನ್ನು ರಕ್ಷಿಸಿದ್ದಾರೆ. ಪ್ಲಾಸ್ಟಿಕ್ ಡಬ್ಬವನ್ನು ಕಟ್ಟರ್ ಬಳಸಿ ಕತ್ತರಿಸಿ ಶ್ವಾನವನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.

    ಆದ್ರೆ ಶ್ವಾನದ ತಲೆ ಹೇಗೆ ಪ್ಲಾಸ್ಟಿಕ್ ಡಬ್ಬದೊಳಗೆ ಸಿಲುಕಿತ್ತು ಎಂಬುದರ ಬಗ್ಗೆ ಮಾಹಿತಿಯಿಲ್ಲ.

    https://www.youtube.com/watch?v=XfWFKLIRLBo&feature=youtu.be

  • 10 ವರ್ಷಗಳಿಂದ ನದಿಯಲ್ಲಿನ ಪ್ಲಾಸ್ಟಿಕ್ ಬಾಟಲಿಗಳನ್ನ ಹೊರತೆಗೆಯುತ್ತಿದೆ ಈ ನಾಯಿ!

    10 ವರ್ಷಗಳಿಂದ ನದಿಯಲ್ಲಿನ ಪ್ಲಾಸ್ಟಿಕ್ ಬಾಟಲಿಗಳನ್ನ ಹೊರತೆಗೆಯುತ್ತಿದೆ ಈ ನಾಯಿ!

    ಬೀಜಿಂಗ್: ಪರಿಸರ ಸಂರಕ್ಷಣೆಗಾಗಿ, ಸ್ವಚ್ಛತೆಗಾಗಿ ದುಡಿಯುವ ಅನೇಕ ಪರಿಸರಪ್ರೇಮಿಗಳ ಬಗ್ಗೆ ಕೇಳಿರ್ತೀರ. ಹಾಗೇ ಇಲ್ಲೊಬ್ಬ ಪರಿಸರಪ್ರೇಮಿ ಬಗ್ಗೆ ನೀವು ಕೇಳಲೇಬೇಕು. ಅದು ಬೇರೆ ಯಾರೂ ಅಲ್ಲ, ಕಳೆದ 10 ವರ್ಷಗಳಿಂದ ನದಿಯೊಂದರ ತ್ಯಾಜ್ಯವನ್ನು ಸ್ವಚ್ಛ ಮಾಡ್ತಿರೋ ಈ ಗೋಲ್ಡನ್ ರಿಟ್ರೀವರ್ ನಾಯಿ.

    ಚೀನಾದ ಜಿಯಾಂಗ್ಸು ಪ್ರಾಂತ್ಯದ ಸುಝೌನಲ್ಲಿರುವ ನದಿಯಲ್ಲಿ ಪ್ಲಾಸ್ಟಿಕ್ ಬಾಟಲಿಗಳನ್ನ ಹೆಕ್ಕಿ ತಂದು ಸ್ವಚ್ಛತೆ ಕಾಪಾಡುತ್ತಿದೆ ಈ ನಾಯಿ. ಈ ಬಗ್ಗೆ ಇಲ್ಲಿನ ಪತ್ರಿಕೆಯೊಂದು ವರದಿ ಮಾಡಿದ್ದು, ಈ ನಾಯಿ ಕಳೆದ 10 ವರ್ಷಗಳಲ್ಲಿ ನದಿಯಿಂದ ಸುಮಾರು 2 ಸಾವಿರಕ್ಕೂ ಹೆಚ್ಚು ಪ್ಲಾಸ್ಟಿಕ್ ಬಾಟಲಿಗಳನ್ನ ಹೊರತೆಗೆದಿದೆ ಎಂದು ಹೇಳಿದೆ. ಕೆಲವೊಮ್ಮೆ ದಿನಕ್ಕೆ 20 ರಿಂದ 30 ಬಾಟಲಿಗಳನ್ನ ಹೊರತೆಗೆದಿದೆ. ಇದಕ್ಕಾಗಿ ಈ ನಾಯಿಗೆ ಇದರ ಮಾಲೀಕ ತರಬೇತಿ ನೀಡಿದ್ದಾರೆ.

    ತನ್ನ ನಿಸ್ವಾರ್ಥ ಸೇವೆಯಿಂದ ಈ ನಾಯಿ ಸ್ಥಳೀಯರಿಗೆ ಸೆಲೆಬ್ರಿಟಿಯಾಗಿದೆ. ಟ್ವಿಟ್ಟರ್‍ನಲ್ಲಿ ಅನೇಕ ಮಂದಿ ಈ ನಾಯಿಯ ಸೇವೆಯನ್ನ ಶ್ಲಾಘಿಸಿದ್ದಾರೆ.