Tag: Plastic water bottle

  • ಮಡಿಕೇರಿಯಲ್ಲಿ 2 ಲೀಟರ್‌ಗಿಂತ ಕಡಿಮೆ ಪ್ರಮಾಣದ ಪ್ಲಾಸ್ಟಿಕ್‌ ಬಾಟಲ್‌ ಬಳಕೆ ನಿಷೇಧ

    ಮಡಿಕೇರಿಯಲ್ಲಿ 2 ಲೀಟರ್‌ಗಿಂತ ಕಡಿಮೆ ಪ್ರಮಾಣದ ಪ್ಲಾಸ್ಟಿಕ್‌ ಬಾಟಲ್‌ ಬಳಕೆ ನಿಷೇಧ

    ಮಡಿಕೇರಿ: ಮಂಜಿನ ನಗರಿಯ ಪ್ರವಾಸಿ ತಾಣಗಳಲ್ಲಿ‌ ಸ್ವಚ್ಛತೆ ಕಾಪಾಡುವ‌ ಹಾಗೂ ಪ್ಲಾಸ್ಟಿಕ್‌ ತ್ಯಾಜ್ಯಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ 2 ಲೀಟರ್‌ಗಿಂತಲೂ ಕಡಿಮೆ ಪ್ರಮಾಣದ ತಾತ್ಕಾಲಿಕ (ಮರುಬಳಕೆ ಮಾಡದ) ಪ್ಲಾಸ್ಟಿಕ್‌ ಬಾಟಲಿಗಳ (Plastic Bottle) ಬಳಿಕೆಯನ್ನು ಸಂಪೂರ್ಣ ನಿಷೇಧಿಸಿ ನಗರಸಭೆ ಆದೇಶ ಹೊರಡಿಸಿದೆ.

    ಹೌದು. ಮಡಿಕೇರಿ (Madikeri) ಪ್ರವಾಸಿಗರ ಪಾಲಿನ ಹಾಟ್‌ಸ್ಪಾಟ್‌ ಆಗಿದೆ. ವಾರಾಂತ್ಯದಲ್ಲಿ ಪ್ರವಾಸಿ ತಾಣಗಳಿಗೆ ದಾಂಗುಡಿ ಇಡುವವರ ಸಂಖ್ಯೆ ತುಸು ಹೆಚ್ಚೇ ಇರುತ್ತದೆ. ಬರುವವರು ನೀರು ಕುಡಿದ ಬಳಿಕ ತಾವು ತರುವ ಪ್ಲಾಸ್ಟಿಕ್‌ ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆದು ಹೋಗುತ್ತಿದ್ದಾರೆ. ಇದರಿಂದ ಪ್ರತಿನಿತ್ಯ ನಗರದಲ್ಲಿ ಸಾವಿರಕ್ಕೂ ಅಧಿಕ ಕೆಜಿಯಷ್ಟು ಪ್ಲಾಸ್ಟಿಕ್‌ ಸಂಗ್ರಹವಾಗುತ್ತಿದೆ. ಇದರಿಂದ ನಗರದ ಸ್ವಚ್ಛತೆಯೂ ಹಾಳಾಗುತ್ತಿದೆ. ಅಲ್ಲದೇ ಪ್ಲಾಸ್ಟಿಕ್‌ ತ್ಯಾಜ್ಯದಿಂದ ಪರಿಸರಕ್ಕೂ ಮಾರಕವಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಲು ನಿರ್ಧರಿಸಿರುವ ಮಡಿಕೇರಿ ನಗರಸಭೆ 2 ಲೀ.ಗಿಂತಲೂ ಕಡಿಮೆ ಪ್ರಮಾಣದ ತಾತ್ಕಾಲಿಕ ಪ್ಲಾಸ್ಟಿಕ್‌ ಬಾಟಲಿಗಳನ್ನು ಸಂಪೂರ್ಣ ನಿಷೇಧಿಸಿದೆ.

    ಈಗಾಗಲೇ ನಗರದ ವರ್ತಕರಿಗೆ ಪ್ರಕಟಣೆ ಮೂಲಕ ನೋಟಿಸ್‌ ಕೊಡಲಾಗಿದೆ. ಜೊತೆಗೆ ಪ್ರತಿ ಅಂಗಡಿ ಮುಂಗಟ್ಟುಗಳಿಗೆ ಭಿತ್ತಿಪತ್ರ ಅಂಟಿಸಿ, ಪ್ಲಾಸ್ಟಿಕ್‌ ಬಾಟಲಿಗಳಿಂದ ಪರಿಸರಕ್ಕೆ ಆಗುತ್ತಿರುವ ಹಾನಿಯ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಈಗಾಗಲೇ ಖರೀದಿ ಮಾಡಿರುವ ಬಾಟಲಿಗಳ ಮಾರಾಟಕ್ಕೆ ಅವಕಾಶವಿದ್ದು, ಹೊಸದಾಗಿ ತರಿಸದಂತೆ ನಗರಸಭೆ ಸೂಚನೆ ಕೊಟ್ಟಿದೆ. ಇದನ್ನೂ ಓದಿ: ಕಾಂಗ್ರೆಸ್‌ನಿಂದ 50 ಕೋಟಿಗೂ ಅಧಿಕ ಮೌಲ್ಯದ ವಿವಾದಿತ ಜಾಗ ಕಬ್ಜಾ: ಬಿಜೆಪಿ ಆರೋಪ

    ಅಲ್ಲದೇ ನಗರಕ್ಕೆ ಬರುವ ಪ್ರವಾಸಿಗರು ಪ್ಲಾಸ್ಟಿಕ್ ಬಾಟಲಿ ತರದಂತೆ ಅಲ್ಲಲ್ಲಿ ಸೂಚನಾ ಫಲಕ ಅಳವಡಿಸಲಾಗಿದೆ. ಮುಂದಿನ ಎರಡು ತಿಂಗಳವರೆಗೆ ಅರಿವು ಮೂಡಿಸಿ ಬಳಿಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಗರಸಭೆಯ ಅಧಿಕಾರಿಗಳು ತಿಳಿಸಿದ್ದಾರೆ.

    ಮಡಿಕೇರಿ‌ ನಗರಸಭೆಯ ನಿರ್ಧಾರವನ್ನು ಸಾರ್ವಜನಿಕರು ಸ್ವಾಗತಿಸಿದ್ದಾರೆ. ಕೊಡಗು ಜಿಲ್ಲೆ ಪ್ರವಾಸಿಗರಿಂದ ಕಸದ ತೊಟ್ಟಿಯಾಗುವುದು ಬೇಡ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಾಲಗಾರರ ಕಿರುಕುಳಕ್ಕೆ ಎದೆಗುಂದಿ ತಪ್ಪು ನಿರ್ಧಾರಕ್ಕೆ ಮುಂದಾಗಬೇಡಿ: ಉ.ಕನ್ನಡ ಎಸ್‌ಪಿ ಸಲಹೆ

  • ಕೇಜ್ರಿವಾಲ್ ಮೇಲೆ ಬಾಟಲಿ ಎಸೆದ ಕಿಡಿಗೇಡಿಗಳು

    ಕೇಜ್ರಿವಾಲ್ ಮೇಲೆ ಬಾಟಲಿ ಎಸೆದ ಕಿಡಿಗೇಡಿಗಳು

    ಗಾಂಧಿನಗರ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಮೇಲೆ ಪ್ಲಾಸ್ಟಿಕ್ ಬಾಟಲಿ (Plastic water bottle) ಎಸೆದ ಘಟನೆ ಗುಜರಾತ್‌ನ (Gujarat) ರಾಜ್‌ಕೋಟ್‌ನ ಗರ್ಬಾದಲ್ಲಿ ನಡೆದಿದೆ.

    ಶನಿವಾರ ರಾತ್ರಿ ಖೋಡಲ್ಧಾಮ್ ದೇವಸ್ಥಾನದಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿಯಾದ ಕೇಜ್ರಿವಾಲ್ ಅವರು ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದದಲ್ಲಿ ನಿರತರಾಗಿದ್ದರು. ಆ ಸಂದರ್ಭದಲ್ಲಿ ಕೇಜ್ರಿವಾಲ್ ಮೇಲೆ ಯಾರೋ ಬಾಟಲಿಯನ್ನು ಎಸೆದಿದ್ದಾರೆ. ಆದರೆ ಅವರಿಗೆ ಆ ಬಾಟಲಿ ತಾಗಲಿಲ್ಲ. ಈ ಘಟನೆ ವೀಡಿಯೋವೊಂದರಲ್ಲಿ ಬಹಿರಂಗವಾಗಿದೆ. ಇದನ್ನೂ ಓದಿ: ಶಿಕ್ಷಕರ ಮಧ್ಯೆ ಮಾರಾಮಾರಿ – ಕಿವಿಯೊಳಗಿನ ಪರದೆ ಹರಿಯುವಂತೆ ಸಹ ಶಿಕ್ಷಕನಿಗೆ ಮುಖ್ಯ ಶಿಕ್ಷಕನಿಂದ ಹಲ್ಲೆ

    Arvind Kejriwal

    ಕೇಜ್ರಿವಾಲ್ ಅವರು ಪಂಜಾಬ್‌ನ ಮುಖ್ಯಮಂತ್ರಿ ಭಗವಂತ್ ಮಾನ್ ಅವರೊಂದಿಗೆ 2 ದಿನಗಳ ಕಾಲ ಗುಜರಾತ್ ಪ್ರವಾಸದಲ್ಲಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಯಾವುದೇ ಕಾರ್ಯಕರ್ತರೂ ಈವರೆಗೆ ದೂರು ದಾಖಲಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಗಾಂಧಿ ಜಯಂತಿ- ದ್ರೌಪದಿ ಮುರ್ಮು, ಸೋನಿಯಾ ಗಾಂಧಿ ಸೇರಿ ಗಣ್ಯರಿಂದ ನಮನ

    Live Tv
    [brid partner=56869869 player=32851 video=960834 autoplay=true]