Tag: PLI

  • ದೇಶದಲ್ಲಿ ಲ್ಯಾಪ್‌ಟಾಪ್‌ ತಯಾರಿಸಲು 32 ಕಂಪನಿಗಳಿಂದ ಅರ್ಜಿ – 75 ಸಾವಿರ ಉದ್ಯೋಗ ಸೃಷ್ಟಿ

    ದೇಶದಲ್ಲಿ ಲ್ಯಾಪ್‌ಟಾಪ್‌ ತಯಾರಿಸಲು 32 ಕಂಪನಿಗಳಿಂದ ಅರ್ಜಿ – 75 ಸಾವಿರ ಉದ್ಯೋಗ ಸೃಷ್ಟಿ

    ನವದೆಹಲಿ: 32 ಕಂಪನಿಗಳು ಭಾರತದಲ್ಲಿ (India) ಲ್ಯಾಪ್‌ಟಾಪ್‌ (Laptop) ತಯಾರಿಸಲು ಅರ್ಜಿ ಸಲ್ಲಿಸಿವೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಖಾತೆಯ ಸಚಿವ ಅಶ್ವಿನಿ ವೈಷ್ಣವ್‌ (Ashwini Vaishnav) ಹೇಳಿದ್ದಾರೆ.

    ಐಟಿ ಹಾರ್ಡ್‌ವೇರ್‌ಗಾಗಿ ಪ್ರೊಡಕ್ಷನ್-ಲಿಂಕ್ಡ್ ಇನ್ಸೆಂಟಿವ್ (PLI) ಯೋಜನೆ 2.0 ಗಾಗಿ ಸರ್ಕಾರವು 32 ಅರ್ಜಿಗಳನ್ನು ಸ್ವೀಕರಿಸಿದೆ. ಇವುಗಳಲ್ಲಿ 25 ದೇಶೀಯ ಕಂಪನಿಗಳಾಗಿವೆ ಎಂದು ಮಾಹಿತಿ ನೀಡಿದರು. ನವೆಂಬರ್‌ನಿಂದ ಚೀನಿ ಲ್ಯಾಪ್‌ಟಾಪ್ (Chini Laptop) ಆಮದುಗಳ ಮೇಲಿನ ನಿರ್ಬಂಧಗಳನ್ನು ಸರ್ಕಾರ ಘೋಷಿಸಿದ ದಿನಗಳ ನಂತರ ಈ ಪ್ರಕಟಣೆ ಬಂದಿದೆ.

    ಹೆಚ್‌ಪಿ, ಡೆಲ್‌, ಲೆನೊವೊ, ಥಾಂಪ್ಸನ್, ಏಸರ್ ಮತ್ತು ಏಸಸ್‌ನಂತಹ ಕಂಪನಿಗಳು ಈ ಯೋಜನೆಯಡಿ ಲ್ಯಾಪ್‌ಟಾಪ್‌ಗಳನ್ನು ತಯಾರಿಸಲಿವೆ. ಹೆಚ್‌ಪಿ, ವಿವಿಡಿಎನ್‌, ಲೆನೊವೊ ಸರ್ವರ್‌ಗಳನ್ನು ತಯಾರಿಸಲಿವೆ.

     

    ನಾನು ಎಲ್ಲಾ ಕಂಪನಿಯೊಂದಿಗೆ ಮಾತನಾಡಿದ್ದೇನೆ. ಆಪಲ್‌ (Apple) ಕಂಪನಿ ಪಿಎಲ್‌ಐ ವ್ಯಾಪ್ತಿಗೆ ಸೇರಲು ಅರ್ಜಿ ಸಲ್ಲಿಸಿಲ್ಲ. ಈಗಾಗಲೇ ಸಾಧನಗಳನ್ನು ಆಪಲ್‌ ತಯಾರಿಸುತ್ತಿದೆ ಎಂದು ಹೇಳಿದರು.  ಇದನ್ನೂ ಓದಿ: ಮೇಡ್‌ ಇನ್‌ ಚೈನಾಗೆ ಭಾರತ ಶಾಕ್‌!

    ಈ ನಿರ್ಧಾರದಿಂದ 3.35 ಲಕ್ಷ ಕೋಟಿ ರೂ. ಉತ್ಪಾದನೆ ನಿರೀಕ್ಷೆ ಇದ್ದು, ಸುಮಾರು 75 ಸಾವಿರ ನೇರ ಉದ್ಯೋಗ ಸೃಷ್ಟಿಯಾಗಲಿದೆ. ನೋಯ್ಡಾದಲ್ಲಿ ಮುಂದೆ ಡಿಕ್ಸನ್ ಕಾರ್ಖಾನೆಯ 25 ಸಾವಿರ ಮಂದಿಗೆ ಉದ್ಯೋಗ ನೀಡಲಿದೆ ಎಂದು ಅವರು ಹೇಳಿದರು.

    ಡೆಲ್‌ನಂತಹ ಕಂಪನಿಗಳು ಸಹ ಪಿಎಲ್‌ಐ ಯೋಜನೆಗೆ ಬರುತ್ತಿರುವುದರಿಂದ ಲ್ಯಾಪ್‌ಟಾಪ್‌ಗಳ ತಯಾರಿಕೆಯು ಏಪ್ರಿಲ್ 2024 ರ ವೇಳೆಗೆ ಪ್ರಾರಂಭವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

     

    ಭಾರತ ನಿರ್ಬಂಧ ಹೇರಿದ್ದು ಯಾಕೆ?
    ಎಲೆಕ್ಟ್ರಾನಿಕ್ಸ್‌, ಮಷಿನರಿ, ಮೊಬೈಲ್‌ ಫೋನ್‌, ಲ್ಯಾಪ್‌ಟಾಪ್‌ ಬಿಡಿಭಾಗಗಳು, ಸೋಲಾರ್‌ ಸೆಲ್‌ ಮಾಡ್ಯೂಲ್‌ ಭಾರತ ಚೀನಾದಿಂಧ ಹೆಚ್ಚಿನ ಪ್ರಮಾಣದಲ್ಲಿ ಆಮದು ಮಾಡಿಕೊಳ್ಳುತ್ತಿದೆ. ಚೀನಾದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಪೈಕಿ ಈ ವಸ್ತುಗಳ ಪಾಲು 65%. ಅದರಲ್ಲೂ ಭಾರತದ ಕಂಪ್ಯೂಟರ್‌ ಆಮದಿನಲ್ಲಿ ಚೀನಾ ಪಾಲು70%ರಿಂದ 80% ರಷ್ಟಿದೆ.

    ಲ್ಯಾಪ್‌ಟಾಪ್‌, ಟ್ಯಾಬ್ಲೆಟ್‌, ಆಲ್‌ ಇನ್‌ ಒನ್‌ ಕಂಪ್ಯೂಟ​ರ್ಸ್‌, ಸಣ್ಣ ಕಂಪ್ಯೂಟರ್‌ಗಳು, ಸರ್ವರ್‌ಗಳು, ಡಾಟಾ ಸಂಸ್ಕರಣಾ ಮಷಿನ್‌ಗಳು ಆಮದಿಗೆ ನಿರ್ಬಂಧ ಹೇರಿದೆ. ಆದರೆ ಇದು ಸಂಪೂರ್ಣ ನಿಷೇಧವಲ್ಲ. ನಿರ್ಬಂಧ ಮಾತ್ರ ಹೇರಲಾಗಿದೆ. ಈ ಮೇಲೆ ತಿಳಿಸಿದ ಯಾವುದೇ ವಸ್ತುಗಳನ್ನು ವ್ಯಾಪಾರಿಗಳು ಭಾರಿ ಪ್ರಮಾಣದಲ್ಲಿ ಆಮದು ಮಾಡಿಕೊಳ್ಳಬೇಕು ಎಂದರೆ ಕೇಂದ್ರ ಸರ್ಕಾರದ ಅನುಮತಿ ಅಥವಾ ಲೈಸೆನ್ಸ್‌ ಪಡೆಯುವುದನ್ನು ಕಡ್ಡಾಯ ಮಾಡಲಾಗಿದೆ.

    ಸಂಶೋಧನೆ ಮತ್ತು ಅಭಿವೃದ್ಧಿ, ಪರೀಕ್ಷೆ, ಮೌಲ್ಯಮಾಪನ ಸೇರಿ 20 ಎಲೆಕ್ಟ್ರಾನಿಕ್‌ ವಸ್ತುಗಳನ್ನು ಆಮದು ಮಾಡಿಕೊಳ್ಳಲು ಒಂದು ಬಾರಿಯ ಸರ್ಕಾರ ವಿನಾಯ್ತಿ ನೀಡಲಾಗಿದೆ. ಕೇಂದ್ರ ಸರ್ಕಾರ ಹೇರಿದ ನಿರ್ಬಂಧ ಅಕ್ಟೋಬರ್‌ 31ವರೆಗೆ ಜಾರಿಯಾಗುವುದಿಲ್ಲ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರತಾಪ್‌ಸಿಂಹನಿಗೆ ಬಸ್‌ನಿಲ್ದಾಣದ ಗುಂಬಜ್‌ಗಳೂ ಮುಸ್ಲಿಮರ ಮಸೀದಿಯೆಂತೆ ಕಾಣ್ತಿದೆ – ಸೇಠ್ ತಿರುಗೇಟು

    ಪ್ರತಾಪ್‌ಸಿಂಹನಿಗೆ ಬಸ್‌ನಿಲ್ದಾಣದ ಗುಂಬಜ್‌ಗಳೂ ಮುಸ್ಲಿಮರ ಮಸೀದಿಯೆಂತೆ ಕಾಣ್ತಿದೆ – ಸೇಠ್ ತಿರುಗೇಟು

    ಮೈಸೂರು: ಸಂಸದ ಪ್ರತಾಪ್‌ಸಿಂಹ (Prtap Simha) ಅವರಿಗೆ ಬಸ್ ನಿಲ್ದಾಣದ (Bus Stand) ಗುಂಬಜ್‌ಗಳೆಲ್ಲವೂ ಮುಸ್ಲಿಮರ ಮಸೀದಿಯಂತೆ (Muslims Mosque) ಕಾಣ್ತಿವೆ. ಅದಕ್ಕೆ ನಾವೇನು ಮಾಡೋಕಾಗುತ್ತದೆ ಎಂದು ಶಾಸಕ ತನ್ವೀರ್ ಸೇಠ್ (Tanveer Sait) ಪ್ರಶ್ನಿಸಿದ್ದಾರೆ.

    ಮೈಸೂರಿನಲ್ಲಿಂದು (Mysuru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಂಬಜ್ ಮಾದರಿಯ ಬಸ್ ನಿಲ್ದಾಣ ಧ್ವಂಸ ಮಾಡೋದು ಖಚಿತ ಎಂಬ ಪ್ರತಾಪ್‌ಸಿಂಹ ಹೇಳಿಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಿಸುವಂತಿಲ್ಲ: ಪ್ರತಾಪ್ ಸಿಂಹ

    ಯಾರ ಯಾರ ದೃಷ್ಟಿಯಲ್ಲಿ ಏನು ಕಾಣುತ್ತೊ ಅದೇ ಕಾಣೊದು. ಗೋಪುರಗಳು ಮಸೀದಿ ಮಾದರಿಯಲ್ಲಿ ಇದೆ ಎಂದು ಹೇಳುವಂತಹ ಪ್ರತಾಪ್ ಸಿಂಹ ಪ್ರಜ್ಞೆ ಯಾವ ರೀತಿ ಇದೆ ಎಂಬುದನ್ನ ತಿಳಿದುಕೊಳ್ಳಬೇಕು. ಇದು ಸರ್ಕಾರದ ಆಸ್ತಿ, ಏನೆಲ್ಲಾ ಒಡೆಯುತ್ತಾರೆ ಕಾದು ನೋಡಬೇಕು. ಗೋಪುರದ ರೀತಿ ಕಾಣುವುದೆಲ್ಲಾ ಸಾಬ್ರುದು ಅನ್ನೊದಾದ್ರೆ ನಾವೇನ್ ಮಾಡೊದು. ಆ ಶೆಲ್ಟರ್ ಯಾರು ವಿನ್ಯಾಸ ಮಾಡಿದ್ರು? ಎಂಬುದು ನನಗೆ ಗೊತ್ತಿಲ್ಲ. ಗುಂಬಜ್ ಮಾದರಿಯ ಬಸ್ ನಿಲ್ದಾಣ ಹೊಡೆದು ಹಾಕೋದಾದ್ರೆ. ಅದೆಷ್ಟು ಹೊಡೆದು ಹಾಕ್ತಾರೆ ಹಾಕಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೊಡವರಂತೆ ತಮ್ಮ ಸಮುದಾಯದವರ ನರಮೇಧ ಮಾಡಿದ್ರೆ ಸಿದ್ದರಾಮಯ್ಯ ಟಿಪ್ಪು ಜಯಂತಿ ಮಾಡ್ತಿದ್ರಾ? ಪ್ರತಾಪ ಸಿಂಹ

    `ಟಿಪ್ಪು ನಿಜ ಕನಸುಗಳು’ ಪುಸ್ತಕದ ವಿರುದ್ಧ ಕೇಸ್:
    ಟಿಪ್ಪು ನಿಜ ಕನಸುಗಳು ಪುಸ್ತಕ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಬಿಡುಗಡೆಯಾದ ಪುಸ್ತಕ ನನ್ನ ಕೈ ಸೇರಿದೆ. ವಕೀಲ ರಂಗನಾಥ್ ಅವರ ಮೂಲಕ ಮೊಕದ್ದಮೆ ದಾಖಲಿಸ್ತಿವಿ. ಸಾರ್ವಜನಿಕ ಹಿತಾಸಕ್ತಿ ಅರ್ಜಿ (PLI) ಸಹ ಹಾಕ್ತೀವಿ. ಎಲ್ಲಿ? ಯಾವಾಗ? ಎಂಬುದನ್ನ ವಕೀಲರು ನೋಡಿಕೊಳ್ತಾರೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಭಾರತ, ದಕ್ಷಿಣ ಆಫ್ರಿಕಾ T20 ಪಂದ್ಯ ರದ್ದುಗೊಳಿಸುವಂತೆ ಹೈಕೋರ್ಟ್‌ಗೆ ಅರ್ಜಿ

    ಭಾರತ, ದಕ್ಷಿಣ ಆಫ್ರಿಕಾ T20 ಪಂದ್ಯ ರದ್ದುಗೊಳಿಸುವಂತೆ ಹೈಕೋರ್ಟ್‌ಗೆ ಅರ್ಜಿ

    ಭುವನೇಶ್ವರ: ಭಾರತ ಮತ್ತು ದಕ್ಷಿಣ ಆಫ್ರಿಕಾದ ನಡುವಿನ ಟಿ20 ಸರಣಿ ಇದೇ ಜೂನ್ 9 ರಿಂದ ಆರಂಭವಾಗುತ್ತಿದೆ. ಆದರೆ ಜೂನ್ 12ರಂದು ಕಟಕ್‌ನ ಬಾರಮತಿ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2ನೇ ಟಿ20 ಪಂದ್ಯಗಳನ್ನು ರದ್ದುಗೊಳಿಸುವಂತೆ ಒಡಿಶಾ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ(PIL) ಸಲ್ಲಿಸಲಾಗಿದ್ದು, ತುರ್ತು ವಿಚಾರಣೆಗೆ ಕೋರಲಾಗಿದೆ.

    ಮಾನವ ಹಕ್ಕುಗಳ ಹೋರಾಟಗಾರ ಸಂಜಯ್ ಕುಮಾರ್ ನಾಯಕ್ ಈ ಅರ್ಜಿ ಸಲ್ಲಿಸಿದ್ದು, ಒಡಿಶಾ ಕ್ರಿಕೆಟ್ ಅಸೋಸಿಯೇಷನ್, ಬಿಸಿಸಿಐ ಸೇರಿದಂತೆ 15 ಪಕ್ಷಗಳನ್ನು ಪ್ರತಿವಾದಿಗಳಾಗಿದ್ದಾರೆ. ಇದನ್ನೂ ಓದಿ: ಎಂ.ಎಸ್ ಧೋನಿ ಸೇರಿ 8 ಮಂದಿ ವಿರುದ್ಧ FIR

    ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಲು ಸಂಬಂಧಿಸಿದ ಪ್ರಾಧಿಕಾರಕ್ಕೆ ರಚನಾತ್ಮಕ ಸುರಕ್ಷತಾ ಪ್ರಮಾಣಪತ್ರವನ್ನು ನೀಡಿಲ್ಲ, ಅಗ್ನಿ ಸುರಕ್ಷತಾ ಅಳತೆ ಪ್ರಮಾಣ ಪತ್ರವನ್ನೂ ನೀಡಿಲ್ಲ, 45,000 ಪ್ರೇಕ್ಷಕರು ಸೇರುವ ಪ್ರದೇಶದಲ್ಲಿ ನಿಯಮಗಳ ಉಲ್ಲಂಘನೆ ದೊಡ್ಡ ವಿಷಯವಾಗಿದೆ ಎಂದು ಅವರು ಅರ್ಜಿಯಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

    ಕಾನೂನಿನ ಕಡ್ಡಾಯ ಅವಶ್ಯಕತೆಗಳನ್ನು ಅನುಸರಿಸದ ಸಂಸ್ಥೆಯು ಸರ್ಕಾರಿ ಪದಾಧಿಕಾರಿಗಳ ನೆರವಿನೊಂದಿಗೆ ಯಾವುದೇ ಕಾರ್ಯವನ್ನು ಮಾಡಲು ಅನುಮತಿಸಬಾರದು ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ. ಕಾನೂನಿನ ಕಡ್ಡಾಯ ಪಾಲನೆ ಬಗ್ಗೆ ಅಧಿಕಾರಿಗಳು ಜಾಗೃತಿ ವಹಿಸಬೇಕು. ವಿಶೇಷವಾಗಿ ಒಡಿಶಾ ಅಗ್ನಿಶಾಮಕ ತಡೆಗಟ್ಟುವಿಕೆ ಮತ್ತು ಅಗ್ನಿ ಸುರಕ್ಷತಾ ನಿಯಮಗಳು 2017ರ ಅಡಿಯಲ್ಲಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.  ಇದನ್ನೂ ಓದಿ: ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಗಂಗೂಲಿ ರಾಜೀನಾಮೆ ನೀಡಿಲ್ಲ: ಜಯ್ ಶಾ ಸ್ಪಷ್ಟನೆ

    ಪಂದ್ಯಗಳನ್ನು ನಡೆಸಲು ಯಾವುದೇ ವಿರೋಧವಿಲ್ಲ, ಆದರೆ 70 ವರ್ಷಗಳ ಹಳೆಯ ಕ್ರೀಡಾಂಗಣದಲ್ಲಿ ಸುರಕ್ಷತಾ ಕ್ರಮಗಳನ್ನು ಉಲ್ಲಂಘಿಸಿ ಪಂದ್ಯಗಳನ್ನು ಏರ್ಪಡಿಸುವುದು ಅಪಾಯಕಾರಿ. ಹಾಗಾಗಿ ಅಗತ್ಯ ಕ್ರಮ ತೆಗೆದುಕೊಳ್ಳುವರೆಗೂ ಪಂದ್ಯಗಳನ್ನು ರದ್ದು ಮಾಡಬೇಕು ಎಂದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಹಾಕಿ ಏಷ್ಯಾ ಕಪ್ 2022: ಭಾರತಕ್ಕೆ ಕಂಚಿನ ಪದಕ

    ಯಾವ ದಿನ – ಎಲ್ಲಿ ಪಂದ್ಯ?

    • ಮೊದಲ ಪಂದ್ಯ ಜೂನ್ 09 – ದೆಹಲಿ
    • 2ನೇ ಪಂದ್ಯ ಜೂನ್ 12 – ಕಟಕ್
    • 3ನೇ ಪಂದ್ಯ ಜೂನ್ 14 – ವಿಶಾಖಪಟ್ಟಣ
    • 4ನೇ ಪಂದ್ಯ ಜೂನ್ 17 – ರಾಜ್‌ಕೋಟ್
    • 5ನೇ ಪಂದ್ಯ ಜೂನ್ 19 – ಬೆಂಗಳೂರು