Tag: PM Awas Yojana

  • ಪ್ರಧಾನಿ ಮೋದಿಗೆ 74ರ ಸಂಭ್ರಮ – ಪಿಎಂ ಆವಾಸ್‌ ಯೋಜನೆಯ 26 ಲಕ್ಷ ಮನೆಗಳ ಉದ್ಘಾಟನೆ ಇಂದು

    ಪ್ರಧಾನಿ ಮೋದಿಗೆ 74ರ ಸಂಭ್ರಮ – ಪಿಎಂ ಆವಾಸ್‌ ಯೋಜನೆಯ 26 ಲಕ್ಷ ಮನೆಗಳ ಉದ್ಘಾಟನೆ ಇಂದು

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು (Narendra Modi) 74ರ ಸಂಭ್ರಮದಲ್ಲಿದ್ದಾರೆ. ಜನ್ಮದಿನದ ಅಂಗವಾಗಿ ಮಂಗಳವಾರ ಹಲವಾರು ಕಾರ್ಯಕ್ರಮಗಳಿಗೆ ಮೋದಿ ಚಾಲನೆ ನೀಡಲಿದ್ದಾರೆ.

    ಭುವನೇಶ್ವರದ ಗಡಕಾನಾದಲ್ಲಿ 26 ಲಕ್ಷ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮನೆಗಳನ್ನು ಅನಾವರಣಗೊಳಿಸಲಿದ್ದಾರೆ. ಭುವನೇಶ್ವರಕ್ಕೆ ಆಗಮಿಸಿದ ನಂತರ, ಮೋದಿ ಅವರು ಗಡಕಾನಾ ಕೊಳಚೆ ಪ್ರದೇಶಕ್ಕೆ ತೆರಳಲಿದ್ದಾರೆ. ಅಲ್ಲಿ ಅವರು ವಸತಿ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಸಾರ್ವಜನಿಕ ಕಲ್ಯಾಣಕ್ಕಾಗಿ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಲಿದ್ದಾರೆ. ಇದನ್ನೂ ಓದಿ: ಇಂದು ಮಧ್ಯಾಹ್ನ ದೆಹಲಿಗೆ ನೂತನ ಮುಖ್ಯಮಂತ್ರಿ ಘೋಷಣೆ

    ಇದರ ಬೆನ್ನಲ್ಲೇ ಜನತಾ ಮೈದಾನದಲ್ಲಿ ಪ್ರಧಾನಮಂತ್ರಿ ಸುಭದ್ರಾ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಈ ಯೋಜನೆಯಡಿ ಐದು ವರ್ಷಗಳ ಕಾಲ 1 ಕೋಟಿಗೂ ಅಧಿಕ ಬಡ ಮಹಿಳೆಯರಿಗೆ ಎರಡು ಸಮಾನ ಕಂತುಗಳಲ್ಲಿ ವಾರ್ಷಿಕ 10,000 ರೂ. ನೀಡಲಾಗುವುದು.

    ಈ ಕಲ್ಯಾಣ ಯೋಜನೆಗಳ ಜೊತೆಗೆ, ಮೋದಿ ಹಲವಾರು ಮೂಲಸೌಕರ್ಯ ಯೋಜನೆಗಳನ್ನು ಅನಾವರಣಗೊಳಿಸಲಿದ್ದಾರೆ. 2,871 ಕೋಟಿ ರೂ. ಮೌಲ್ಯದ ರೈಲ್ವೆ ಮತ್ತು 1,000 ಕೋಟಿ ರೂ. ಮೌಲ್ಯದ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಇದು ಪ್ರದೇಶದ ಸಂಪರ್ಕ ಮತ್ತು ಅಭಿವೃದ್ಧಿಯನ್ನು ಮತ್ತಷ್ಟು ಹೆಚ್ಚಿಸಲಿದೆ. ಇದನ್ನೂ ಓದಿ: ಡಿ.ಕೆ.ಶಿವಕುಮಾರ್‌ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಕೇಸ್‌- ಇಂದು ಸುಪ್ರೀಂನಲ್ಲಿ ವಿಚಾರಣೆ

    ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಪ್ರಧಾನಿ ಮೋದಿಗೆ ಭಾರತದಾದ್ಯಂತದ ರಾಜಕೀಯ ನಾಯಕರು ಶುಭಾಶಯ ತಿಳಿಸಿದ್ದಾರೆ. ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಭಾರತದ ಬೆಳವಣಿಗೆಗೆ ಮೋದಿ ಅವರ ದೂರದೃಷ್ಟಿ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

  • ಪಿಎಂ ಆವಾಸ್ ಯೋಜನೆಯಡಿ ಔರಾದ್ ಕ್ಷೇತ್ರಕ್ಕೆ 3,923 ಮನೆಗಳು ಮಂಜೂರು: ಪ್ರಭು ಚವ್ಹಾಣ್

    ಪಿಎಂ ಆವಾಸ್ ಯೋಜನೆಯಡಿ ಔರಾದ್ ಕ್ಷೇತ್ರಕ್ಕೆ 3,923 ಮನೆಗಳು ಮಂಜೂರು: ಪ್ರಭು ಚವ್ಹಾಣ್

    ಬೀದರ್: ಪ್ರಧಾನ ಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) (PM Awas Yojana) ಅಡಿಯಲ್ಲಿ 2024-25ನೇ ಸಾಲಿಗೆ ಕೇಂದ್ರ ಸರ್ಕಾರದಿಂದ ಔರಾದ್(ಬಿ) ಹಾಗೂ ಕಮಲಗರ ತಾಲ್ಲೂಕು ಒಳಗೊಂಡು ಔರಾದ್(ಬಿ) ವಿಧಾನಸಭಾ ಕ್ಷೇತ್ರಕ್ಕೆ 3923 ಮನೆಗಳು ಮಂಜೂರಾಗಿವೆ ಎಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ್ (Prabhu Chauhan) ತಿಳಿಸಿದ್ದಾರೆ.

    ಔರಾದ್(ಬಿ) (Aurad) ಹಾಗೂ ಕಮಲಗರ ತಾಲ್ಲೂಕಿನಲ್ಲಿ ವಸತಿ ರಹಿತ ಬಡವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಇವರಿಗೆ ಮನೆಗಳನ್ನು ಕಟ್ಟಿಸಿಕೊಡುವಂತಾಗಲು ಮನೆಗಳನ್ನು ಮಂಜೂರು ಮಾಡಬೇಕೆಂದು ಈ ಹಿಂದೆ ಹಲವಾರು ಬಾರಿ ಸರ್ಕಾರಕ್ಕೆ ಪ್ರಸ್ತಾವನೆಗಳನ್ನು ಸಲ್ಲಿಸಿದ್ದೆ. ನನ್ನ ಮನವಿಗೆ ಸ್ಪಂದಿಸಿ ಔರಾದ್ ಕ್ಷೇತ್ರಕ್ಕೆ ಹೆಚ್ಚಿನ ಮನೆಗಳನ್ನು ಮಂಜೂರು ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರಿಗೆ ಕ್ಷೇತ್ರದ ಮಹಾಜನತೆಯ ಪರವಾಗಿ ಶಾಸಕ ಪ್ರಭು ಚವ್ಹಾಣ್ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ಇದನ್ನೂ ಓದಿ: ನನ್ನ ಆಡಿಯೋ ಅಲ್ಲ, ಮುಡಾ, ನಾಗಮಂಗಲ ಗಲಭೆ ಕೇಸ್ ಡೈವರ್ಟ್‌ ಮಾಡಲು ಅರೆಸ್ಟ್‌: ಮುನಿರತ್ನ

    ಪಿಎಂ ಆವಾಸ್ (ಗ್ರಾಮೀಣ) ಯೋಜನೆಯಡಿ 2024-25ನೇ ಸಾಲಿಗೆ ರಾಜ್ಯಕ್ಕೆ 2,26,175 ಮನೆಗಳನ್ನು ಮಂಜೂರು ಮಾಡಲಾಗಿದೆ. ಬೀದರ್ ಜಿಲ್ಲೆಗೆ 15,035 ಮನೆಗಳು ಮಂಜೂರಾಗಿದ್ದು, ಈ ಪೈಕಿ ಔರಾದ್(ಬಿ) ತಾಲ್ಲೂಕಿಗೆ 2286 ಹಾಗೂ ಕಮಲನಗರ ತಾಲ್ಲೂಕಿಗೆ 1,637 ಮನೆಗಳು ಸೇರಿ ಔರಾದ್(ಬಿ) ವಿಧಾನಸಭಾ ಕ್ಷೇತ್ರಕ್ಕೆ ಒಟ್ಟು 3,923 ಮನೆಗಳು ಮಂಜೂರಾಗಿವೆ. ಇದನ್ನೂ ಓದಿ: ಮುನಿರತ್ನ ಬೈದಿದ್ದು ಇನ್ನೂ ಸಾಬೀತಾಗಿಲ್ಲ, ಇದು ಸಿಡಿ ಶಿವು ಕೆಲಸ: ರಮೇಶ್ ಜಾರಕಿಹೊಳಿ

    2018ರ ವಸತಿ ರಹಿತರ ಸಮೀಕ್ಷಾ ಪಟ್ಟಿಯಂತೆ ಆದ್ಯತೆಗೆ ಅನುಗುಣವಾಗಿ ಫಲಾನುಭವಿಗಳಿಗೆ ಮನೆಗಳನ್ನು ಹಂಚಿಕೆ ಮಾಡಲಾಗುತ್ತದೆ. ಈ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 1.75 ಲಕ್ಷ ರೂ. ಹಾಗೂ ಇತರೆ ಫಲಾನುಭವಿಗಳಿಗೆ 1.20 ಲಕ್ಷ ರೂ. ಸಹಾಯಧನ ನೀಡಲಾಗುತ್ತದೆ. ಒಟ್ಟು 3 ಕಂತುಗಳಲ್ಲಿ ಹಣ ಬಿಡುಗಡೆಯಾಗುತ್ತದೆ. ಮನೆ ಮಂಜೂರಾದ ನಂತರ ಜಿಪಿಎಸ್ ಕಳುಹಿಸಿದ ಬಳಿಕ ಕೂಡಲೇ ಮೊದಲ ಕಂತಿನ ಹಣ ಬಿಡುಗಡೆಯಾಗುತ್ತದೆ. ಮನೆ ನಿರ್ಮಾಣದ ಹಂತಗಳನ್ನು ಆಧರಿಸಿ ನಂತರದ ಕಂತುಗಳನ್ನು ಬಿಡುಗಡೆ ಮಾಡಲಾಗುತ್ತದೆ. ಇದನ್ನೂ ಓದಿ: ವಂದೇ ಮೆಟ್ರೋ ಈಗ ‘ನಮೋ ಭಾರತ್ ರೈಲು’ – ಚಾಲನೆ ನೀಡಿದ ಮೋದಿ

  • ಪಿಎಂ ಆವಾಸ್ ಯೋಜನೆಯಲ್ಲಿ ರಾಜ್ಯಕ್ಕೆ ಅನುದಾನ ಕಡಿತ – ಬಿಜೆಪಿಗೆ ವೋಟ್ ಹಾಕಿದ ತಪ್ಪಿಗೆ ಈ ಶಿಕ್ಷೆಯೇ?: ದಿನೇಶ್ ಗುಂಡೂರಾವ್

    ಪಿಎಂ ಆವಾಸ್ ಯೋಜನೆಯಲ್ಲಿ ರಾಜ್ಯಕ್ಕೆ ಅನುದಾನ ಕಡಿತ – ಬಿಜೆಪಿಗೆ ವೋಟ್ ಹಾಕಿದ ತಪ್ಪಿಗೆ ಈ ಶಿಕ್ಷೆಯೇ?: ದಿನೇಶ್ ಗುಂಡೂರಾವ್

    ಬೆಂಗಳೂರು: ಪಿಎಂ ಆವಾಸ್ ಯೋಜನೆಯಲ್ಲಿ ನೆರೆಯ ಆಂಧ್ರ, ತಮಿಳುನಾಡು, ಮಹಾರಾಷ್ಟ್ರಗಳಿಗೆ ಅನುದಾನ ಹೆಚ್ಚಳವಾಗಿದೆ. ಆದರೆ ಕರ್ನಾಟಕಕ್ಕೆ ಅರ್ಧದಷ್ಟು ಅನುದಾನ ಕಡಿತವಾಗಿದೆ. ಕೇಂದ್ರದಿಂದ ಕರ್ನಾಟಕಕ್ಕೆ ಯಾಕೆ ಈ ತಾರತಮ್ಯ? ರಾಜ್ಯದ ಜನರು ಬಿಜೆಪಿಗೆ ವೋಟ್‌ ಹಾಕಿದ ತಪ್ಪಿಗೆ ಈ ಶಿಕ್ಷೆಯೇ ಎಂದು ಕೇಂದ್ರ ಸರ್ಕಾರದ ವಿರುದ್ಧ ದಿನೇಶ್ ಗುಂಡೂರಾವ್ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    ಜಿಎಸ್‍ಟಿ ಪರಿಹಾರದಲ್ಲೂ ರಾಜ್ಯಕ್ಕೆ ಅನ್ಯಾಯ. ಜಿಎಸ್‍ಟಿ ಬಾಕಿಯಲ್ಲೂ ಅನ್ಯಾಯ. 5,495 ಕೋಟಿ ರೂ. ವಿಶೇಷ ಅನುದಾನದಲ್ಲೂ ರಾಜ್ಯಕ್ಕೆ ಅನ್ಯಾಯ. ಈಗ ಪಿಎಂ ಆವಾಸ್ ಯೋಜನೆಯ ಅನುದಾನದಲ್ಲೂ ಅನ್ಯಾಯ. ಬಿಜೆಪಿಯ 25 ಸಂಸದರನ್ನು ಆಯ್ಕೆ ಮಾಡಿದ ರಾಜ್ಯದ ಜನರಿಗೆ ಇದೇನಾ ಪ್ರತಿಫಲ? ಬಿಜೆಪಿಯವರೇ ಡಬಲ್ ಇಂಜಿನ್ ಸರ್ಕಾರದ ಸ್ವರ್ಗ ಸೃಷ್ಟಿಯೆಂದರೆ ರಾಜ್ಯಕ್ಕೆ ಅನ್ಯಾಯವೆಸಗುವುದೇ? ಇದನ್ನೂ ಓದಿ: ಸಂಪಾಜೆ ಘಾಟ್‌ ರಸ್ತೆಯಲ್ಲಿ ನಾಳೆಯಿಂದ ಎಲ್ಲ ವಾಹನಗಳ ಸಂಚಾರಕ್ಕೆ ಅನುಮತಿ: ಸಿಸಿ ಪಾಟೀಲ್‌

    ಪಿಎಂ ಆವಾಸ್ ಯೋಜನೆಯಲ್ಲಿ ನೆರೆಯ ಆಂಧ್ರ, ತಮಿಳುನಾಡು, ಮಹಾರಾಷ್ಟ್ರಗಳಿಗೆ ಅನುದಾನ ಹೆಚ್ಚಳವಾಗಿದೆ. ಆದರೆ ಕರ್ನಾಟಕಕ್ಕೆ ಅರ್ಧದಷ್ಟು ಅನುದಾನ ಕಡಿತವಾಗಿದೆ. ಕೇಂದ್ರದಿಂದ ಕರ್ನಾಟಕಕ್ಕೆ ಯಾಕೆ ಈ ತಾರತಮ್ಯ? ರಾಜ್ಯದ ಜನರು ಬಿಜೆಪಿಗೆ ವೋಟ್ ಹಾಕಿದ ತಪ್ಪಿಗೆ ಈ ಶಿಕ್ಷೆಯೇ? ಅಥವಾ ರಾಜ್ಯದ ಜನ ಹೇಗಿದ್ದರೂ ಕೇಳುವುದಿಲ್ಲ ಎಂಬ ಉದಾಸೀನವೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ದಂತಚೋರರ ಬೆನ್ನಿಗೆ ನಿಂತ್ರಾ ಪ್ರಜ್ವಲ್‌ ರೇವಣ್ಣ? – ಸಿಎಂಗೆ ಮನೇಕಾ ಪತ್ರ

    Live Tv
    [brid partner=56869869 player=32851 video=960834 autoplay=true]