Tag: PM-KISAN

  • ದೀಪಾವಳಿಗೆ ಸಿಹಿ ಸುದ್ದಿ- ರೈತರ ಖಾತೆಗೆ 2 ಸಾವಿರ ಹಣ ಬಿಡುಗಡೆ ಮಾಡಿದ ಪ್ರಧಾನಿ

    ದೀಪಾವಳಿಗೆ ಸಿಹಿ ಸುದ್ದಿ- ರೈತರ ಖಾತೆಗೆ 2 ಸಾವಿರ ಹಣ ಬಿಡುಗಡೆ ಮಾಡಿದ ಪ್ರಧಾನಿ

    ನವದೆಹಲಿ: ದೀಪಾವಳಿಗೂ (Diwali) ಮುನ್ನವೇ ಪ್ರಧಾನಿ ನರೇಂದ್ರ ಮೋದಿ (Narendra Modi) ದೇಶದ ರೈತರಿಗೆ (Farmers) ಸಿಹಿ ಸುದ್ದಿ ಕೊಟ್ಟಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಯಡಿ (PM KISAN) ಪ್ರಧಾನಿ ನರೇಂದ್ರಮೋದಿ ಅವರು ಸೋಮವಾರ ಒಟ್ಟು 16 ಸಾವಿರ ಕೋಟಿ ರೂ.ಗಳನ್ನು ರೈತರ ಖಾತೆಗೆ ವರ್ಗಾಯಿಸುವ 12ನೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ.

    ಇದರಿಂದ ಅರ್ಹ ರೈತರ ಖಾತೆಗೆ ಮೂರು ಕಂತುಗಳಲ್ಲಿ ತಲಾ 2 ಸಾವಿರ ರೂ.ಗಳಂತೆ ವರ್ಷಕ್ಕೆ 6 ಸಾವಿರ ಹಣ ಸಂದಾಯವಾಗಲಿದೆ. ಒಟ್ಟಾರೆಯಾಗಿ ಅರ್ಹ ರೈತ ಕುಟುಂಬಗಳು (Farmers Family) ಈ ಯೋಜನೆಯಿಂದ ಸುಮಾರು 2 ಲಕ್ಷ ಕೋಟಿ ಪ್ರಯೋಜನ ಪಡೆಯಲಿವೆ. ಇದನ್ನೂ ಓದಿ: ಸೋಮವಾರ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 12ನೇ ಕಂತು ಬಿಡುಗಡೆ

    ಏನಿದು ಪಿಎಂ ಕಿಸಾನ್ ಸಮ್ಮಾನ್ ನಿಧಿ?:
    ಪಿಎಂ ಕಿಸಾನ್ ಸಮ್ಮಾನ್ (PM KISASN Samman) ನಿಧಿಯನ್ನು 2019ರ ಫೆಬ್ರವರಿ 24 ರಂದು ಜಾರಿಗೊಳಿಸಲಾಯಿತು. ಈ ಯೋಜನೆ ಮೂಲಕ ರೈತರಿಗೆ ವರ್ಷಕ್ಕೆ 6,000 ರೂ. ಪ್ರೋತ್ಸಾಹ ಧನ ನೀಡಿ ಕೃಷಿ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ. ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂ.ನಂತೆ ವರ್ಷಕ್ಕೆ ಮೂರು ಕಂತಿನಲ್ಲಿ 6 ಸಾವಿರ ರೂ. ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುತ್ತಿದೆ. ಈಗಾಗಲೇ 11 ಕಂತುಗಳಲ್ಲಿ ರೈತರ ಖಾತೆಗೆ ಹಣ ಬಿಡುಗಡೆಗೊಳಿಸಲಾಗಿದೆ. ಕಳೆದ ಮೇ ತಿಂಗಳಿನಲ್ಲಿ ಕೊನೆಯ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿತ್ತು. ಇದನ್ನೂ ಓದಿ: ಬೇರೆಯವರೊಂದಿಗೆ ಲೈಂಗಿಕತೆಗೆ ಒಪ್ಪದ ಪತ್ನಿ ಮೇಲೆ ಪತಿಯಿಂದ ಹಲ್ಲೆ

    ಫಲಾನುಭವಿ ಪರಿಶೀಲಿಸೋದು ಹೇಗೆ?
    * ಮೊದಲು ಪಿಎಂ ಕಿಸಾನ್ https://pmkisan.gov.in/ ವೆಬ್‌ಸೈಟ್ ಪ್ರವೇಶಿಸಬೇಕು.
    * ನಂತರ ಪಾವತಿ ಯಶಸ್ಸು ಎಂದು ತೋರಿಸುವ ಟ್ಯಾಬ್ ಕೆಳಗೆ ನಕ್ಷೆ ನೋಡುತ್ತೀರಿ.
    * ಅದಾದ ಬಳಿಕ ಬಲ ಭಾಗದಲ್ಲಿ ಹಳದಿ ಬಣ್ಣದಲ್ಲಿ ಕಾಣುವ ಡ್ಯಾಶ್‌ಬೋರ್ಡ್ ಅನ್ನು ಕ್ಲಿಕ್ ಮಾಡಬೇಕು.
    * ನಂತರ ಹೊಸ ಪುಟಕ್ಕೆ ತೆರೆದುಕೊಳ್ಳುತ್ತದೆ.
    * ನಂತರ ವಿಲೇಜ್ (ಗ್ರಾಮ) ಡ್ಯಾಶ್‌ಬೋರ್ಡ್‌ಗೆ ತೆರಳಿ ಆ ಪುಟದಲ್ಲಿ ಕೇಳುವ ಮಾಹಿತಿ ಭರ್ತಿ ಮಾಡಬೇಕು.
    * ನಂತರ ರಾಜ್ಯ, ಜಿಲ್ಲೆ ಹಾಗೂ ನಿಮ್ಮೂರಿನ ಗ್ರಾಮ ಪಂಚಾಯಿತಿಯನ್ನು ಆಯ್ಕೆ ಮಾಡಿ, ವೀಕ್ಷಣೆ ಬಟನ್ ಕ್ಲಿಕ್ ಮಾಡಬೇಕು.
    * ಆಮೇಲೆ ನೀವು ಫಲಾನುಭವಿಗಳಾಗಿದ್ದೇರೋ ಇಲ್ಲವೋ ಎಂದು ಪರಿಶೀಲಿಸಬಹದು.

    Live Tv
    [brid partner=56869869 player=32851 video=960834 autoplay=true]

  • ದೇಶದ 10 ಕೋಟಿ ರೈತರಿಗೆ ಪ್ರಧಾನಿ ಮೋದಿ ಭರ್ಜರಿ ಗಿಫ್ಟ್

    ದೇಶದ 10 ಕೋಟಿ ರೈತರಿಗೆ ಪ್ರಧಾನಿ ಮೋದಿ ಭರ್ಜರಿ ಗಿಫ್ಟ್

    ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ (PM-KISAN) ಯೋಜನೆ ಅಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ 10 ಕೋಟಿ ರೈತರಿಗೆ 21 ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ.

    11ನೇ ಹಣಕಾಸು ಆಯೋಗದಲ್ಲಿ ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿಂದು ಅನುದಾನ ಬಿಡುಗಡೆ ಮಾಡಿದ್ದಾರೆ. NDA ನೇತೃತ್ವದ BJP ಸರ್ಕಾರಕ್ಕೆ ಎಂಟು ವರ್ಷ ಪೂರ್ಣವಾಗಿರುವ ಹಿನ್ನಲೆ ಇಂದು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಗರೀಬ್ ಕಲ್ಯಾಣ ಹೆಸರಿನಲ್ಲಿ ಬೃಹತ್ ಕಾರ್ಯಕ್ರಮ ನಡೆಯಿತು. ಇದನ್ನೂ ಓದಿ: ರೈತರು ವಿದ್ಯುತ್ ಬಿಲ್ ಪಾವತಿಸುವ ಅಗತ್ಯವಿಲ್ಲ: ಅಮಿತ್ ಶಾ ಭರವಸೆ

    ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ 9 ಇಲಾಖೆಗಳ ಯೋಜನೆಗಳ ಬಗ್ಗೆ ವಿವಿಧ ರಾಜ್ಯದ ಫಲಾನುಭವಿಗಳೊಂದಿಗೆ ಮೋದಿ ಸಂವಾದ ನಡೆಸಿದರು. ಇದೇ ವೇಳೆ ದೇಶಾದ್ಯಂತ ಸಾರ್ವಜನಿಕ ಪ್ರತಿನಿಧಿಗಳಿಂದ ಸರ್ಕಾರಿ ಕಾರ್ಯಕ್ರಮಗಳ ಬಗ್ಗೆ ಪ್ರತಿಕ್ರಿಯೆ ಪಡೆದರು.

  • 9 ಕೋಟಿ ರೈತರಿಗೆ 18 ಸಾವಿರ ಕೋಟಿ ಕಿಸಾನ್ ಸಮ್ಮಾನ್ ನಿಧಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

    9 ಕೋಟಿ ರೈತರಿಗೆ 18 ಸಾವಿರ ಕೋಟಿ ಕಿಸಾನ್ ಸಮ್ಮಾನ್ ನಿಧಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಮುಂದಿನ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದು, ಒಟ್ಟು 9 ಕೋಟಿ ರೈತರ ಖಾತೆಗೆ 18 ಸಾವಿರ ಕೋಟಿ ರೂ.ಗಳನ್ನು ಜಮೆ ಮಾಡಲಾಗಿದೆ.

    ಬಟನ್ ಒತ್ತುವ ಮೂಲಕ ಪ್ರಧಾನಿ ಮೋದಿ ರೈತರ ಬ್ಯಾಂಕ್ ಖಾತೆಗೆ ಹಣ ಜಮಾವಣೆ ಮಾಡಿದ್ದಾರೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಪ್ರತಿ ರೈತರ ಖಾತೆಗೆ 2 ಸಾವಿರ ರೂ. ಹಾಕಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನವನ್ನು ಉತ್ತಮ ಆಡಳಿತ ದಿನವಾಗಿ ಆಚರಿಸಲಾಗುತ್ತದೆ.

    ಪಿಎಂ-ಕಿಸಾನ್ ಯೋಜನೆಯಡಿ ಸಣ್ಣ ಹಾಗೂ ಮಧ್ಯಮ ರೈತರಿಗೆ ಪ್ರತಿ ವರ್ಷ 6 ಸಾವಿರ ರೂ.ಗಳನ್ನು ನೀಡಲಾಗುತ್ತದೆ. ವರ್ಷಕ್ಕೆ ಮೂರು ಕಂತುಗಳಲ್ಲಿ 2 ಸಾವಿರ ರೂ.ಗಳಂತೆ ಹಣವನ್ನು ವರ್ಗಾಯಿಸಲಾಗುತ್ತದೆ. ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗುತ್ತದೆ.

    ಇದೀಗ ವಿವಿಧ ರೈತ ಸಂಘಟನೆಗಳು ಹೋರಾಟ ನಡೆಸುತ್ತಿರುವಾಗಲೇ ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಂದು ಕಂತಿನ ಹಣವನ್ನು ಜಮೆ ಮಾಡಿದ್ದಾರೆ. ಮೂರು ಕಾನೂನುಗಳನ್ನು ರೈತರ ಹಿತವನ್ನು ಕಾಪಡಲು ತರಲಾಗಿದೆ. ಆದರೆ ಕೆಲವರು ಸುಳ್ಳು ಹಾಗೂ ತಪ್ಪು ಮಾಹಿತಿಯನ್ನು ರೈತರಲ್ಲಿ ತುಂಬುತ್ತಿದ್ದಾರೆ. ಖಾಸಗಿ ಕಂಪನಿಗಳು ರೈತರ ಭೂಮಿಯನ್ನು ಕಸಿಯುತ್ತವೆ ಎಂದು ಹೇಳಲಾಗುತ್ತಿದೆ. ಖಾಸಗಿ ಕಂಪನಿಗಳು ಯಾವುದೇ ರೀತಿಯ ಲ್ಯಾಂಡ್ ಕಸಿಯುವುದಿಲ್ಲ. ಬಡ ರೈತರ ಹಿತಕ್ಕಾಗಿ ಕಾನೂನುಗಳನ್ನು ಜಾರಿಗೆ ತರಲಾಗಿದೆ ಎಂದು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ.

  • ಮೋದಿ ಅಪ್ಪಟ ಸುಳ್ಳುಗಾರ, ಇಂತಹ ವ್ಯಕ್ತಿ ಎಲ್ಲಿಯೂ ಸಿಗಲ್ಲ: ಎಚ್‍ಡಿಕೆ

    ಮೋದಿ ಅಪ್ಪಟ ಸುಳ್ಳುಗಾರ, ಇಂತಹ ವ್ಯಕ್ತಿ ಎಲ್ಲಿಯೂ ಸಿಗಲ್ಲ: ಎಚ್‍ಡಿಕೆ

    – ನಾನು, ಜಿ.ಪರಮೇಶ್ವರ್ ಹಕ್ಕ-ಬುಕ್ಕರು ಇದ್ದಂತೆ

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅಪ್ಪಟ ಸುಳ್ಳುಗಾರ. ಇಂತಹ ವ್ಯಕ್ತಿ ದೇಶದಲ್ಲಿ ಎಲ್ಲಿಯೂ ಸಿಗುವುದಿಲ್ಲ. ನೀವು ನಿಮ್ಮ ಸಮಸ್ಯೆಗಳನ್ನು ಹಿಡಿದುಕೊಂಡು ನಮ್ಮ ಮನೆಗೆ ಬರಬಹುದು. ಆದ್ರೆ ಪ್ರಧಾನಿ ಮನೆಗೆ ಹೋಗಲು ಸಾಧ್ಯವಿಲ್ಲ ಎಂದು ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

    ಬೆಂಗಳೂರು ಉತ್ತರ ಕ್ಷೇತ್ರದ ಕುದುರೆಗೆರೆ ಗ್ರಾಮದಲ್ಲಿ ಮುಖ್ಯಮಂತ್ರಿಗಳ ಒಂದು ಲಕ್ಷ ಬಹುಮಹಡಿ ಕಟ್ಟಡ ನಿರ್ಮಾಣ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಬಳಿಕ ಮಾತನಾಡಿದ ಅವರು, ಕೇಂದ್ರ ಸರ್ಕಾರವು ನರೇಗಾ ಹಣ ಬಿಡುಗಡೆ ಮಾಡಿಲ್ಲ. ಪ್ರಧಾನಿ ಮೋದಿ ಅವರು ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ. ಅವರ ಬಣ್ಣದ ಮಾತನ್ನು ನಂಬಬೇಡಿ. ನಿಮ್ಮ ಜೊತೆ ನಾವು ಇರುತ್ತೇವೆ. ನೀವು ಯಾವಾಗ ಬೇಕಾದರೂ ನಮ್ಮ ಮನೆ ಬಾಗಿಲಿಗೆ ಬನ್ನಿ. ಆದ್ರೆ ನಿಮಗೆ ಪ್ರಧಾನಿ ಮೋದಿ ಮನೆಗೆ ಹೋಗುವುದಕ್ಕೆ ಆಗುವುದಿಲ್ಲ ಎಂದು ಹೇಳಿದ್ರು.

    ನಾನು ಹಾಗೂ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಹಕ್ಕ-ಬುಕ್ಕರು ಇದ್ದಂತೆ. ವಿಜಯನಗರ ಸಾಮ್ರಾಜ್ಯದ ಅಭಿವೃದ್ಧಿಗೆ ಹಕ್ಕ-ಬುಕ್ಕರು ಹೇಗೆ ಕೆಲಸ ಮಾಡಿದ್ದಾರೋ, ಅವರಂತೆ ರಾಜ್ಯದ ಅಭಿವೃದ್ಧಿಗೆ ನಾನು ಪರಮೇಶ್ವರ್ ಕೆಲಸ ಮಾಡುತ್ತೇವೆ ಎಂದು ಹೇಳಿದರು.

    ಸುಲಭ ದರದ ಮನೆಗಳು ಬಡವರಿಗೆ ನೀಡುವ ನಿಟ್ಟಿನಲ್ಲಿ ಈ ಹಿಂದಿನ ಕಾಂಗ್ರೆಸ್ ಸರ್ಕಾರವು 1 ಲಕ್ಷ ಮನೆ ಕಟ್ಟುವ ಯೋಜನೆ ಘೋಷಣೆ ಮಾಡಿತ್ತು. ಆ ಯೋಜನೆಗೆ ಇಂದು ಶಂಕುಸ್ಥಾಪನೆ ಮಾಡಿದ್ದೇವೆ. ಈ ಫಲಾನುಭವಿಗಳ ಮನೆಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ನಿರ್ಮಾಣವಾಗುತ್ತವೆ ಎಂದು ತಿಳಿಸಿದರು.

    ಗುಣಾತ್ಮಕ ಮನೆ 6-8 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತದೆ. ಈ ಯೋಜನೆಯಿಂದ ಕಡು ಬಡವರಿಗೆ ಹೆಚ್ಚು ಅನುಕೂಲವಾಗಲಿದೆ. ಹಿಂದಿನ ಸರ್ಕಾರದಲ್ಲಿ ಜಿ+3 ಯೋಜನೆ ಇತ್ತು. ಆದರೆ ಈಗ ಎಸ್+14 ಅಂತಸ್ತಿನ ಮನೆ ನಿರ್ಮಾಣ ಮಾಡುತ್ತಿದ್ದೇವೆ. ಖಾಸಗಿಯವರಿಗಿಂತ ಉತ್ತಮ ಮನೆ ನಿರ್ಮಾಣ ಮಾಡಿಕೊಡುತ್ತೇವೆ. ಈ ಯೋಜನೆಯ ಬಗ್ಗೆ ಯಾರೂ ಅನುಮಾನಪಡುವುದು ಬೇಡ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ಕೊಡುತ್ತಿದ್ದೇವೆ. ಕನಿಷ್ಠ 2 ಲಕ್ಷ ಮನೆಗಳ ನಿರ್ಮಾಣದ ಗುರಿಯನ್ನು ಸರ್ಕಾರ ಹೊಂದಿದ್ದು, ಪ್ರಾರಂಭದಲ್ಲಿ 50 ಸಾವಿರ ಮನೆ ನಿರ್ಮಾಣ ಮಾಡುತ್ತೇವೆ. ನಂತರ ಹಂತ ಹಂತವಾಗಿ ಮನೆ ನಿರ್ಮಿಸಲಾಗುತ್ತದೆ ಎಂದು ಹೇಳಿದರು.

    ಬೆಂಗಳೂರು ನಗರ ಅಭಿವೃದ್ಧಿಗೆ ಮೈತ್ರಿ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ 1 ಲಕ್ಷ ಕೋಟಿ ರೂ. ಹಣವನ್ನು ಸದುಪಯೋಗ ಮಾಡಿಕೊಳ್ಳುತ್ತೇವೆ ಎಂದ ಅವರು, ಪ್ರಧಾನಿ ನರೇಂದ್ರ ಮೋದಿ ರೈತರ ಸಾಲಮನ್ನಾ ಬಗ್ಗೆ ಲಘುವಾಗಿ ಮಾತನಾಡುತ್ತಾರೆ. ರಾಜ್ಯ ಸರ್ಕಾರವು ಈಗಾಗಲೇ 11 ಸಾವಿರ ಕೋಟಿ ರೂ. ಸಾಲಮನ್ನಾ ಮಾಡುವ ಹಣ ಬಿಡುಗಡೆ ಮಾಡಿದ್ದು, 14 ಲಕ್ಷ ರೈತರಿಗೆ ಅನುಕೂಲವಾಗಿದೆ. ಈ ವರ್ಷದ ಅಂತ್ಯದಲ್ಲಿ ಎಲ್ಲ ರೈತರ ಸಾಲಮನ್ನಾ ಮಾಡುತ್ತೇವೆ ಎಂದರು.

    ರೈತರ ಬ್ಯಾಂಕ್ ಖಾತೆಗೆ ಹಣ ಹಾಕುವುದು ಮೋಸದ ಕಾರ್ಯಕ್ರಮವಾಗಿದೆ. ರೈತರ ಬೆನ್ನಿಗೆ ಚೂರಿ ಹಾಕುವ ಕೆಲಸವನ್ನು ನರೇಂದ್ರ ಮೋದಿ ಮಾಡುತ್ತಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯದ 2 ಲಕ್ಷ ರೈತರ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ನೀಡಿದ್ದೇವೆ. ಅವರಲ್ಲಿ 14 ಜನರನ್ನು ಮಾತ್ರ ಗುರುತಿಸಿ, ಇಬ್ಬರ ಬ್ಯಾಂಕ್ ಖಾತೆಗೆ ಕೇವಲ 900 ರೂಪಾಯಿ ಹಾಕಿದ್ದಾರೆ ಎಂದು ಆರೋಪಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv