Tag: PM Kisan Samman Project

  • ಪಿಎಂ ಕಿಸಾನ್ ಯೋಜನೆ – ಕರ್ನಾಟಕದಿಂದ 1007.18 ಕೋಟಿ ರೂ. ಬಿಡುಗಡೆ

    ಪಿಎಂ ಕಿಸಾನ್ ಯೋಜನೆ – ಕರ್ನಾಟಕದಿಂದ 1007.18 ಕೋಟಿ ರೂ. ಬಿಡುಗಡೆ

    ಬೆಂಗಳೂರು: ಪಿಎಂ ಕಿಸಾನ್ ಕರ್ನಾಟಕ ಯೋಜನೆಯಡಿ ಪಿಎಂ-ಕಿಸಾನ್ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ವಾರ್ಷಿಕ 4 ಸಾವಿರ ರೂ. ನೆರವು ನೀಡುವ ಯೋಜನೆಯಡಿ ಈ ಆರ್ಥಿಕ ವರ್ಷದ ಎರಡನೇ ಕಂತಿನ ನೆರವಿಗಾಗಿ ರಾಜ್ಯ ಸರ್ಕಾರ 1007.18 ಕೋಟಿ ರೂ. ಬಿಡುಗಡೆ ಮಾಡಿದ್ದು, ರೈತರ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ.

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 10ನೇ ಕಂತಿನ ನೆರವು ಬಿಡುಗಡೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇಂದು ರಾಜ್ಯದ 34.26 ಲಕ್ಷ ರೈತರಿಗೆ 685.28 ಕೋಟಿ ರೂ. ನೆರವು ಬಿಡುಗಡೆ ಮಾಡಲಾಗಿದೆ. ಈ ವರ್ಚುವಲ್ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾಗವಹಿಸಿದ್ದರು. ರಾಜ್ಯದಲ್ಲಿ ಒಟ್ಟು 54.52 ಲಕ್ಷ ರೈತರು ಈ ವರೆಗೆ ಕನಿಷ್ಠ ಒಂದು ಕಂತಿನ ನೆರವನ್ನು ಪಡೆದಿದ್ದಾರೆ. ಈ ಯೋಜನೆಯಡಿ ಕೇಂದ್ರ ಸರ್ಕಾರವು ಒಟ್ಟು 8022.69 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿದ್ದು, ರಾಜ್ಯ ಸರ್ಕಾರವು 2850.54 ಕೋಟಿ ಬಿಡುಗಡೆ ಮಾಡಿದೆ. ಇದನ್ನೂ ಓದಿ: ಒಟ್ಟಾಗಿ ಸವಾಲು ಎದುರಿಸೋಣ: ಅಧಿಕಾರಿಗಳಿಗೆ ಬೊಮ್ಮಾಯಿ ಸಲಹೆ

    ಸಾಧ್ಯವಾದಷ್ಟು, ಈ ಯೋಜನೆಯಡಿ ಎಲ್ಲಾ ಪಾವತಿಗಳನ್ನು ಆಧಾರ್ ಆಧಾರಿತ ಡಿಬಿಟಿ ಮುಖಾಂತರ ಮಾಡಬೇಕೆಂದು ಭಾರತ ಸರ್ಕಾರ ಬಯಸುತ್ತದೆ. ಎಲ್ಲಾ ರಾಜ್ಯಗಳ ಪೈಕಿ, ಕರ್ನಾಟಕ ರಾಜ್ಯವು ಅತಿ ಹೆಚ್ಚು ಶೇಕಡಾವಾರು ಆಧಾರ್ ಆಧಾರಿತ ವಹಿವಾಟುಗಳನ್ನು ಅತ್ಯುತ್ತಮವಾಗಿ ನಿರ್ವಹಿಸಿದ ಹಿನ್ನೆಲೆಯಲ್ಲಿ ಈ ವರ್ಷದ ಫೆಬ್ರವರಿಯಲ್ಲಿ ಭಾರತ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ಪ್ರಶಸ್ತಿ ಸಹ ಸಿಕ್ಕಿತ್ತು. ಇದೇ ಸಂದರ್ಭದಲ್ಲಿ ರಾಜ್ಯದ 30 ರೈತ ಉತ್ಪಾದಕ ಸಂಸ್ಥೆಗಳಿಗೆ 1.21 ಕೋಟಿ ರೂ. ನೆರವು ಬಿಡುಗಡೆ ಮಾಡಲಾಯಿತು. ಇದನ್ನೂ ಓದಿ: ಸಚಿವರಲ್ಲಿ ಯಾರು ಪಾಸ್? ಫೇಲ್?: ಎಕ್ಸಾಂ ನಡೆಸಲು ಬರ್ತಾರಂತೆ ಅಮಿತ್ ಶಾ

    ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಕೃಷಿ ಇಲಾಖೆ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

  • PM ಕಿಸಾನ್ ಯೋಜನೆ 10ನೇ ಕಂತಿನಡಿ ಕರ್ನಾಟಕಕ್ಕೆ 685 ಕೋಟಿ ರೂ.ಗೂ ಹೆಚ್ಚಿನ ಹಣ ಬಿಡುಗಡೆ

    PM ಕಿಸಾನ್ ಯೋಜನೆ 10ನೇ ಕಂತಿನಡಿ ಕರ್ನಾಟಕಕ್ಕೆ 685 ಕೋಟಿ ರೂ.ಗೂ ಹೆಚ್ಚಿನ ಹಣ ಬಿಡುಗಡೆ

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ದೇಶದ ರೈತರಿಗೆ 10ನೇ ಕಂತಿನ ಹಣ ಬಿಡುಗಡೆಗೊಂಡಿದ್ದು, 10ನೇ ಕಂತಿನಡಿ ಕರ್ನಾಟಕ ರಾಜ್ಯದ ಒಟ್ಟು 34,264,01 ರೈತರಿಗೆ 685.28 ಕೋಟಿ ರೂ.ಗಳನ್ನು ರೈತರಿಗೆ ತಲಾ 2 ಸಾವಿರ ರೂ.ಗಳಂತೆ ಬಿಡುಗಡೆಯಾಗಿದೆ.

    2018-19 ರಿಂದ ಜ.1, 2022 ರವರೆಗೆ 10ನೇ ಕಂತಿನವರೆಗೆ ರಾಜ್ಯದ ಒಟ್ಟು 54 ಲಕ್ಷದ 52 ಸಾವಿರ ರೈತ ಕುಟುಂಬಗಳಿಗೆ ಒಟ್ಟು 8,707 ಕೋಟಿ, 97ಲಕ್ಷ ರೂ. ಬಿಡುಗಡೆಯಾದಂತಾಗಿದೆ. ಇದನ್ನೂ ಓದಿ: ಮಹಾರಾಷ್ಟ್ರದ 10ಕ್ಕೂ ಹೆಚ್ಚು ಸಚಿವರು, 20ಕ್ಕೂ ಹೆಚ್ಚು ಶಾಸಕರಿಗೆ ಕೊರೊನಾ ದೃಢ

    ಕರ್ನಾಟಕ ರಾಜ್ಯದಲ್ಲಿ ಭಾರತ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಕಳೆದ 2019 ಫೆ.1ರಿಂದ ಅನುಷ್ಠಾನಗೊಳಿಸಿದ್ದು, ಯೋಜನೆಯಡಿ ವಾರ್ಷಿಕ ರೂ 6,000 ರೂ.ಗಳ ಆರ್ಥಿಕ ನೆರವನ್ನು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಮೂಲಕ ನೀಡಲಾಗುತ್ತಿದೆ. ಈ ಅನುದಾನವನ್ನು 2,000 ರೂ.ಗಳಂತೆ ಮೂರು ಕಂತುಗಳಲ್ಲಿ ನಾಲ್ಕು ತಿಂಗಳಿಗೊಮ್ಮೆ ಇದನ್ನು ನೀಡಲಾಗುತ್ತಿದೆ. 2,850 ಕೋಟಿ 54 ಲಕ್ಷ ರೂ.ಗಳಷ್ಟು ಕರ್ನಾಟಕ ಸರ್ಕಾರದಿಂದ ಹೆಚ್ಚುವರಿಯಾಗಿ ರೈತರಿಗೆ ಹಣ ಪಾವತಿಯಾಗಿದೆ. ಇದನ್ನೂ ಓದಿ: ಜ್ವರ, ಕೆಮ್ಮು, ತಲೆನೋವು ಇದ್ದರೂ ಕೋವಿಡ್ ಟೆಸ್ಟ್ ಮಾಡಿಸಿ: ಕೇಂದ್ರ ಸೂಚನೆ

    ಈ ಯೋಜನೆಯಡಿ ಎಲ್ಲಾ ಪಾವತಿಗಳನ್ನು ಆಧಾರ್ ಆಧಾರಿತ ಡಿಬಿಟಿ ಮುಖಾಂತರ ಮಾಡಬೇಕೆಂದು ಸೂಚಿಸಲಾಗಿದ್ದು, ಎಲ್ಲಾ ರಾಜ್ಯಗಳ ಪೈಕಿ, ಕರ್ನಾಟಕ ರಾಜ್ಯವು ಅತಿ ಹೆಚ್ಚು ಶೇಕಡಾವಾರು ಆಧಾರ್ ಆಧಾರಿತ ವಹಿವಾಟುಗಳನ್ನು ಅತ್ಯುತ್ತಮವಾಗಿ ನಿರ್ವಹಿಸಿದ ಹಿನ್ನೆಲೆಯಲ್ಲಿ 2021ರ ವರ್ಷದ ಫೆಬ್ರವರಿಯಲ್ಲಿ ಭಾರತ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ಪ್ರಶಸ್ತಿ ಸಹ ದೊರೆತಿದೆ. ನಿರಂತರ ಮೇಲ್ವಿಚಾರಣೆಯ ಭಾಗವಾಗಿ ಯೋಜನೆಯ ಫಲಾನುಭವಿಗಳಾಗಿರುವ ರೈತ ಕುಟುಂಬಗಳ ಅರ್ಹತೆಯನ್ನು ರಾಜ್ಯದಿಂದ ಸರಿಯಾಗಿ ಪರಿಶೀಲಿಸಲಾಗುತ್ತಿದೆ.