Tag: pm of india

  • ಪ್ರಧಾನಿ ಮೋದಿ ಅವರಿಗೆ 72ರ ಸಂಭ್ರಮ – ನಮೀಬಿಯಾದಿಂದ ಭಾರತಕ್ಕೆ 8 ಚೀತಾ

    ಪ್ರಧಾನಿ ಮೋದಿ ಅವರಿಗೆ 72ರ ಸಂಭ್ರಮ – ನಮೀಬಿಯಾದಿಂದ ಭಾರತಕ್ಕೆ 8 ಚೀತಾ

    ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿಯವರ (Narendra Modi) 72ನೇ ಹುಟ್ಟುಹಬ್ಬದ (Birthday) ಸಂಭ್ರಮ. ಈ ವಿಶೇಷ ದಿನದಂದು ಅಳಿವಿನಂಚಿನಲ್ಲಿರುವ ವನ್ಯಜೀವಿಗಳನ್ನು ಸಂರಕ್ಷಣೆ ಮಾಡುವ ಯೋಜನೆಯಡಿ ನಮೀಬಿಯಾದಿಂದ (Namibia) 8 ಚೀತಾಗಳನ್ನು ಭಾರತಕ್ಕೆ ತರಲಾಗಿದೆ.

    ಮಧ್ಯಪ್ರದೇಶದ ಕುನ್ಹೋ-ಪಾಲ್‌ಪುರ್ ವನ್ಯಜೀವಿ ಸಂರಕ್ಷಣಾ ಕೇಂದ್ರದಲ್ಲಿ ಈ ಚೀತಾಗಳನ್ನು ಬಿಡಲಾಗುತ್ತದೆ. ಎರಡರಿಂದ ಆರು ವರ್ಷ ವಯಸ್ಸಿನ ಮೂರು ಗಂಡು, ಐದು ಹೆಣ್ಣು ಚೀತಾಗಳನ್ನು ನಮೀಬಿಯಾದಿಂದ ವಿಶೇಷ ವಿಮಾನದಲ್ಲಿ ತರಲಾಗಿದೆ. ನಮೀಬಿಯಾದಿಂದ 8,000 ಕಿಲೋಮೀಟರ್ ಪ್ರಯಾಣ ಮಾಡಿ ಚೀತಾಗಳು ಭಾರತಕ್ಕೆ ಬಂದಿವೆ. ಇದನ್ನೂ ಓದಿ: ವಿಮಾನದಲ್ಲಿ ಭಾರತಕ್ಕೆ ಬರುತ್ತಿದೆ 8 ಚೀತಾ – ವಿಶೇಷತೆ ಏನು? ತಯಾರಿ ಹೇಗೆ?

    ವಿಮಾನ ಪ್ರಯಾಣ ವೇಳೆ ಚೀತಾಗಳಿಗೆ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಲಾಗಿದೆ. ಈ ಜಂಬೋ ಜೆಟ್ ವಿಮಾನ ಹಲವು ವಿಶೇಷತೆಗಳನ್ನು ಒಳಗೊಂಡಿದೆ. ಈಗಾಗಲೇ ಗ್ವಾಲಿಯಾರ್‌ ನಿಲ್ದಾಣಕ್ಕೆ ಬಂದಿರುವ ಚಿರತೆಗಳನ್ನು ಹೆಲಿಕಾಪ್ಟರ್ ಮೂಲಕ ಕುನ್ಹೋ ನ್ಯಾಷನಲ್ ಪಾರ್ಕ್‌ಗೆ ತರಲಾಗುತ್ತದೆ. ಬೆಳಗ್ಗೆ 10:45ಕ್ಕೆ ಪ್ರಧಾನಿ ಮೋದಿ ಖುದ್ದಾಗಿ ಇವುಗಳನ್ನು ಬಿಡುಗಡೆ ಮಾಡಲಿದ್ದಾರೆ. ಈ ಚೀತಾಗಳನ್ನು ವಿಮಾನಕ್ಕೆ ಹತ್ತಿಸುವ ಮುನ್ನ ತಿಂಗಳು ಕ್ವಾರಂಟೈನ್‌ನಲ್ಲಿ ಇರಿಸಲಾಗಿತ್ತು. ಯಾವುದೇ ಸೋಂಕಿಗೆ ತುತ್ತಾಗದಂತೆ, ಸೋಂಕು ಹಬ್ಬದಂತೆ ಚೀತಾಗಳಿಗೆ ಲಸಿಕೆ ನೀಡಲಾಗಿದೆ. ಈ ಚೀತಾಗಳು ಭಾರತದ ವಾತಾವರಣಕ್ಕೆ ಹೊಂದಿಕೊಳ್ಳಲು ಕೆಲ ಸಮಯ ಹಿಡಿಯುವ ಕಾರಣ, ಅವುಗಳಿಗೆ ಮುಕ್ತವಾಗಿ ವಿಹರಿಸಲು ಅವಕಾಶ ನೀಡಲಾಗುತ್ತದೆ.

    ಪ್ರಧಾನಿ ಮೋದಿ ಅವರ ಜನ್ಮದಿನದ ಅಂಗವಾಗಿ ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಸೇರಿದಂತೆ ಅನೇಕ ಗಣ್ಯರು ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಇದನ್ನೂ ಓದಿ: ಭ್ರಷ್ಟಾಚಾರ ಆರೋಪ – ಎಎಪಿ ಶಾಸಕ ಅರೆಸ್ಟ್

    Live Tv
    [brid partner=56869869 player=32851 video=960834 autoplay=true]