Tag: PM

  • ಮೋದಿ ಸುನಾಮಿ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ತೇಜಸ್ವಿ ಸೂರ್ಯ

    ಮೋದಿ ಸುನಾಮಿ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ತೇಜಸ್ವಿ ಸೂರ್ಯ

    ಕಲಬುರಗಿ: ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಸುನಾಮಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸಂಸದ ತೇಜಸ್ವಿ ಸೂರ್ಯ (Tejasvi Surya) ಹೇಳಿದ್ದಾರೆ.

    ಕಲಬುರಗಿ ವಿಮಾನ ನಿಲ್ದಾಣದಲ್ಲಿ (Kalaburagi Airport) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ದೇಶದಲ್ಲಿ ಮೋದಿ ಅವರ ಸುನಾಮಿ ಇದೆ. ದೇಶದ ಜನ ಮೋದಿ ಅವರ ಅಧಿಕಾರದಲ್ಲಿ ಹೊಸ ಕನಸು ಕಾಣುತ್ತಿದ್ದಾರೆ. ಈ ಬಾರಿ ರಾಜ್ಯದಲ್ಲಿ 25 ಸ್ಥಾನ ಬಿಜೆಪಿ ಗೆಲ್ಲುತ್ತದೆ. ಮೋದಿ ಸುನಾಮಿ ತಡೆಯಲು ಯಾರಿಂದಲೂ ಆಗಲ್ಲ. ಯಾವ ಗೋಡೆ ಡ್ಯಾಂ ಸಹ ಈ ಸುನಾಮಿಯನ್ನು ತಡೆಯಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಸಂಸತ್ತಿನಲ್ಲಿ ಒಂದು ಸೀಟ್ ಕಡಿಮೆ ಆದರೂ ರಾಜಸ್ಥಾನ ಆಗುವ ಬಗ್ಗೆ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಂಸದರು, ಅದು ಅವರ ವೈಯಕ್ತಿಕ ಹೇಳಿಕೆಯಾಗಿದೆ. ನಮ್ಮ ಅಧ್ಯಕ್ಷರು 28 ಸ್ಥಾನ ಬರುವುದಾಗಿ ಹೇಳಿದ್ದಾರೆ ಎಂದರು. ಇದನ್ನೂ ಓದಿ: BSY ವಿರುದ್ಧ ಆರೋಪದ ನಡುವೆಯೇ ವಿಜಯಪುರಕ್ಕೆ ವಿಜಯೇಂದ್ರ ಭೇಟಿ- ಜಿಲ್ಲಾ ಬಿಜೆಪಿಯಲ್ಲಿ ಸಂಚಲನ

    ಇದೇ ವೇಳೆ 9 ಮಂದಿ ಕಾಂಗ್ರೆಸ್ ಸಚಿವರು ಲೋಕಸಭಾ ಚುನಾವಣೆ (Loksabha Election) ನಿಲ್ಲಲು ಹಿಂದೇಟು ಹಾಕುತ್ತಾರೆ ಎಂಬ ವಿಚಾರದ ಕುರಿತು ಮಾತನಾಡಿದ ಸೂರ್ಯ, ಸದ್ಯ ಮೋದಿ ಸುನಾಮಿಯಲ್ಲಿ ಯಾವ ಸಚಿವರು ಗೆಲ್ಲುವುದಿಲ್ಲ. ಹಗಲು ಕಂಡ ಬಾವಿಯಲ್ಲಿ ಯಾರಾದ್ರು ರಾತ್ರಿ ಬಿಳ್ತಾರಾ..?, ಈ ಬಾರಿ ಲೋಕಸಭಾ ಚುನಾವಣೆ ಸಹ ಕಾಂಗ್ರೆಸ್ ನವರಿಗೆ ಹಗಲು ಕಂಡ ಬಾವಿಯಂತಾಗಿದೆ. ಹೀಗಾಗಿ ಕಾಂಗ್ರೆಸ್ ಸಚಿವರು ಲೋಕಸಭೆಗೆ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಹೇಳಿದರು.

     

  • ಮಿತ್ರ ಮೋದಿಯವರನ್ನು ರಷ್ಯಾದಲ್ಲಿ ನೋಡಲು ಹರ್ಷಿಸುತ್ತೇವೆ: ಪುಟಿನ್ ಆಹ್ವಾನ

    ಮಿತ್ರ ಮೋದಿಯವರನ್ನು ರಷ್ಯಾದಲ್ಲಿ ನೋಡಲು ಹರ್ಷಿಸುತ್ತೇವೆ: ಪುಟಿನ್ ಆಹ್ವಾನ

    ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿಯವರನ್ನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಆಹ್ವಾನಿಸಿದ್ದಾರೆ.

    ವಿದೇಶಾಂಗ ಸಚಿವ ಎಸ್.ಜೈಶಂಕರ್ (S. Jaishankar) ಅವರು ಸದ್ಯ ರಷ್ಯಾ ಪ್ರವಾಸದಲ್ಲಿದ್ದಾರೆ. ಪುಟಿನ್ ಅವರು ತಮ್ಮ ಅಧಿಕೃತ ನಿವಾಸದಲ್ಲಿ ಜೈಶಂಕರ್ ಅವರ ಜೊತೆ ಮಾತನಾಡುತ್ತಾ, ನಮ್ಮ ಆತ್ಮೀಯ ಮಿತ್ರರಾಗಿರುವ ನರೇಂದ್ರ ಮೋದಿಯವರನ್ನು ರಷ್ಯಾದಲ್ಲಿ ನೋಡಲು ನಾವು ಸಂತೋಷ ಪಡುತ್ತೇವೆ ಎಂದು ಹೇಳಿದ್ದಾರೆ.

    ನಮಗೆ ಪ್ರಧಾನಿ ಮೋದಿಯವರ (Narendra Modi) ನಿಲುವು ತಿಳಿದಿದೆ. ಅಲ್ಲದೆ ಈ ಬಗ್ಗೆ ಹಲವು ಬಾರಿ ಮಾತುಕತೆ ನಡೆಸಿದ್ದೇವೆ. ನಾನು ಅವರಿಗೆ ಉಕ್ರೇನ್‍ನ ಸ್ಥಿತಿಗತಿಯ ಬಗ್ಗೆ ವಿವರಿಸಿದ್ದೇನೆ. ಸಂಘರ್ಷವಿಲ್ಲದೆ ಶಾಂತಿಯ ಮೂಲಕ ಈ ಸಮಸ್ಯೆಯನ್ನು ಪರಿಹರಿಸಲು ಅವರ ಪ್ರಯತ್ನದ ಬಗ್ಗೆ ನನಗೆ ತಿಳಿದಿದೆ ಎಂದು ಪುಟಿನ್ ಹೇಳಿದರು. ಇದನ್ನೂ ಓದಿ: ಶಸ್ತ್ರಚಿಕಿತ್ಸೆ ವೇಳೆ ವೃದ್ಧೆಯ ತಲೆಗೆ 3 ಬಾರಿ ಪಂಚ್‌ ಕೊಟ್ಟ ವೈದ್ಯ- ಮುಂದೇನಾಯ್ತು?

    ಮೋದಿಯವರಿಗೆ ನನ್ನ ಶುಭಾಶಯಗಳನ್ನು ತಿಳಿಸಿ. ರಷ್ಯಾದಲ್ಲಿ ಭೇಟಿಯಾಗಲು ನಾವು ಕಾಯುತ್ತಿದ್ದೇವೆ ಎಂದು ದಯವಿಟ್ಟು ಅವರಿಗೆ ತಿಳಿಸಿ. ಹಾಗೆಯೇ ಭಾರತದಲ್ಲಿರುವ ನಮ್ಮ ಸ್ನೇಹಿತರಿಗೆ ನಾವು ಯಶಸ್ಸನ್ನು ಬಯಸುತ್ತೇವೆ ಎಂದು ಪುಟಿನ್ ಅವರು ಜೈಶಂಕರ್ ಗೆ ಹೇಳಿದರು.

    ಮಾತುಕತೆಯ ನಂತರ ಸಚಿವ ಲಾವ್ರೊವ್ ಅವರೊಂದಿಗೆ ಜಂಟಿ ಮಾಧ್ಯಮದಲ್ಲಿ ಕಾಣಿಸಿಕೊಂಡ ಜೈಶಂಕರ್, ಮುಂದಿನ ವರ್ಷ ವಾರ್ಷಿಕ ಶೃಂಗಸಭೆಗಾಗಿ ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಪುಟಿನ್ ಭೇಟಿಯಾಗುತ್ತಾರೆ ಎಂಬ ವಿಶ್ವಾಸವಿದೆ ಎಂದರು.

  • ನಟ ವಿಜಯ್‍ಕಾಂತ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

    ನಟ ವಿಜಯ್‍ಕಾಂತ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

    ನವದೆಹಲಿ: ತಮಿಳು ನಟ, ಡಿಎಂಡಿಕೆ ನಾಯಕ ವಿಜಯ್‍ಕಾಂತ್ (Vijayakanth) ನಿಧನಕ್ಕೆ ಇಡೀ ತಮಿಳು ಚಿತ್ರರಂಗ ಕಂಬನಿ ಮಿಡಿಯುತ್ತಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಕೂಡ ನಟನ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

    ಈ ಸಂಬಂಧ ಎಕ್ಸ್ ಮಾಡಿರುವ ಪ್ರಧಾನಿ, ವಿಜಯ್‍ಕಾಂತ್ ಅವರ ನಿಧನ ಅತೀವ ದುಃಖ ತಂದಿದೆ. ತಮಿಳು ಚಲನಚಿತ್ರ ಪ್ರಪಂಚದ ದಂತಕಥೆಯಾಗಿರುವ ಅವರು ತಮ್ಮ ನಟನೆಯಿಂದಲೇ ಎಲ್ಲರ ಮನಗೆದ್ದಿದ್ದರು. ರಾಜಕೀಯ ನಾಯಕರಾಗಿ ಅವರು ಸಾರ್ವಜನಿಕ ಸೇವೆಗೆ ಬದ್ಧರಾಗಿದ್ದರು. ಇಂದು ಅವರ ನಿಧನ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರು ಆತ್ಮೀಯ ಸ್ನೇಹಿತರಾಗಿದ್ದರು. ನನ್ನೊಂದಿಗಿನ ಅವರ ಒಡನಾಟವನ್ನು ನಾನು ನೆನಪಲ್ಲಿಟ್ಟುಕೊಂಡಿದ್ದೇನೆ. ಈ ಸಂದರ್ಭದಲ್ಲಿ ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ನಟ ವಿಜಯಕಾಂತ್ ನಿಧನ: ಅನಾರೋಗ್ಯದ ಜೊತೆ ಕೊರೋನಾ ಪಾಸಿಟಿವ್

    ವಿಜಯಕಾಂತ್ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದವರು. ಖಾಸಗಿ ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಇತ್ತೀಚೆಗಷ್ಟೇ ಅವರಿಗೆ ಕೋವಿಡ್ ಪಾಸಿಟಿವ್ ಕೂಡ ಆಗಿದ್ದು, ನಂತರ ತಕ್ಷಣವೇ ಅವರನ್ನು ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

  • ಮೋದಿ ವಿರುದ್ಧ ದಲಿತಾಸ್ತ್ರ ಹೂಡಲು ಮುಂದಾಯ್ತಾ I.N.D.I.A- ಖರ್ಗೆ ಪ್ರಧಾನಿ ಅಭ್ಯರ್ಥಿ?

    ಮೋದಿ ವಿರುದ್ಧ ದಲಿತಾಸ್ತ್ರ ಹೂಡಲು ಮುಂದಾಯ್ತಾ I.N.D.I.A- ಖರ್ಗೆ ಪ್ರಧಾನಿ ಅಭ್ಯರ್ಥಿ?

    – ನಿತೀಶ್ ಅಭ್ಯರ್ಥಿ ಆಗಿಸುವಂತೆ ಪೋಸ್ಟರ್

    ನವದೆಹಲಿ: ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ ವಿಪಕ್ಷಗಳ ಕೂಟ ಲೋಕಸಭಾ ಚುನಾವಣೆ ದೃಷ್ಟಿಯಿಂದ ತಂತ್ರ ಬದಲಿಸಲು ಮುಂದಾದಂತೆ ಕಾಣ್ತಿದೆ. ಉತ್ತರ ಭಾರತದಲ್ಲಿ ರಾಹುಲ್ ಗಾಂಧಿ ಚಾರ್ಮ್ ವರ್ಕೌಟ್ ಆಗದ ಕಾರಣ ಪ್ರಧಾನಿ ಮೋದಿ (Narendra Modi) ವಿರುದ್ಧ ಐಎನ್‍ಡಿಐಎ (I.N.D.I.A) ಕೂಟ ದಲಿತಾಸ್ತ್ರ ಪ್ರಯೋಗಿಸುವ ಮುನ್ಸೂಚನೆ ನೀಡಿದೆ.

    ಇಂದು ದೆಹಲಿಯಲ್ಲಿ ನಡೆದ ಐಎನ್‍ಡಿಐಎ ಕೂಟದ ಸಭೆಯಲ್ಲಿ ಪ್ರಧಾನಿ ಅಭ್ಯರ್ಥಿ ವಿಚಾರ ಚರ್ಚೆಗೆ ಬಂದಿದೆ. ಈ ಸಂದರ್ಭದಲ್ಲಿ ಮಾತನಾಡಿದ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ (Mamta Banerjee) ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಪ್ರಧಾನಿ ಅಭ್ಯರ್ಥಿಯನ್ನಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾಡೋದು ಬೆಟರ್ ಎಂಬ ಪ್ರಸ್ತಾಪವನ್ನು ಇಟ್ಟಿದ್ದಾರೆ. ಇದಕ್ಕೆ ಕೆಲವರು ಸಹಮತ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಖರ್ಗೆಯವರು ಮಾತ್ರ ಲೋಕಸಭಾ ಚುನಾವಣೆ ಬಳಿಕ ಪ್ರಧಾನಿ ಅಭ್ಯರ್ಥಿ ಆಯ್ಕೆ ವಿಚಾರ ನೋಡೋಣ. ಈಗ ಒಗ್ಗಟ್ಟಿನಿಂದ ಹೋರಾಡೋಣ ಎಂದು ಕರೆ ನೀಡಿದ್ರು ಎನ್ನಲಾಗಿದೆ.

    ಮಲ್ಲಿಕಾರ್ಜುನ ಖರ್ಗೆ ಆಯ್ಕೆಯನ್ನು ಎಲ್ಲರೂ ಒಪ್ಪುತ್ತಾರೆ ಅನ್ನೋ ಬಗ್ಗೆ ಇನ್ನೂ ಸ್ಪಷ್ಟ ಚಿತ್ರಣ ಸಿಕ್ಕಿಲ್ಲ. ಕಾರಣ ಇಂದಿನ ಐಎನ್‍ಡಿಐಎ ಸಭೆಗೆ ಮುನ್ನವೇ, ಬಿಹಾರದ ಪಾಟ್ನಾ ಸೇರಿ ಹಲವೆಡೆ, ನಿತೀಶ್‍ರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಲಾಗಿದೆ. ನಿತೀಶ್‍ರನ್ನು ಅಭ್ಯರ್ಥಿಯಾಗಿ ಮಾಡಿದ್ರೆ ಮಾತ್ರ ಐಎನ್‍ಡಿಐಎ ಕೂಟ ಗೆಲ್ಲುತ್ತೆ ಎಂದು ಬರೆದ ಪೋಸ್ಟರ್ ಗಳನ್ನು ಅಂಟಿಸಿದ್ದಾರೆ.

    ಇಂದಿನ ಸಭೆಯಲ್ಲಿ ಸೀಟ್ ಶೇರಿಂಗ್ ಬಗ್ಗೆಯೂ ಚರ್ಚೆ ನಡೆದಿದೆ. ಕೊನೆಗೆ ಈ ಬಗ್ಗೆ ಚರ್ಚಿಸಲು ಡಿಸೆಂಬರ್ 31ರಂದು ಮತ್ತೊಮ್ಮೆ ಸಭೆ ಸೇರಲು ನಿರ್ಧರಿಸಿದೆ. ಜನವರಿ 2ನೇ ವಾರದಲ್ಲಿ ಈ ಬಗ್ಗೆ ಅಂತಿಮ ನಿರ್ಣಯ ತೆಗೆದುಕೊಳ್ಳಲು ಪ್ಲಾನ್ ಮಾಡಿದೆ. ದೇಶದ ವಿವಿಧೆಡೆ ಇನ್ನೂ ಏಳೆಂಟು ಬಾರಿ ಸಭೆ ನಡೆಸಲು ತೀರ್ಮಾನಿಸಿದೆ. ಇಂದಿನ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಲಾಲೂ, ನಿತೀಶ್, ಶರದ್‍ಪವಾರ್, ಮಮತಾ ಬ್ಯಾನರ್ಜಿ, ಎಂಕೆ ಸ್ಟಾಲಿನ್, ಅಖಿಲೇಶ್ ಯಾದವ್, ಮೆಹಾಬೂಬಾ ಮುಫ್ತಿ, ಸೀತಾರಂ ಯೆಚೂರಿ ಸೇರಿ 28 ಪಕ್ಷಗಳ 40ಕ್ಕೂ ಹೆಚ್ಚು ಮುಖಂಡರು ಭಾಗವಹಿಸಿದರು.

  • ವಾರಣಾಸಿ ರೋಡ್‍ ಶೋ ವೇಳೆ ಅಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಪ್ರಧಾನಿ ಮೋದಿ!

    ವಾರಣಾಸಿ ರೋಡ್‍ ಶೋ ವೇಳೆ ಅಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಪ್ರಧಾನಿ ಮೋದಿ!

    ಲಕ್ನೋ: ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಇಂದು ವಾರಣಾಸಿಯಲ್ಲಿ ನಡೆಯುತ್ತಿದ್ದ ತಮ್ಮ ರೋಡ್ ಶೋ ವೇಳೆ ಅಂಬುಲೆನ್ಸ್ ಗೆ (Ambulance) ದಾರಿ ಮಾಡಿಕೊಡಲು ತಮ್ಮ ಬೆಂಗಾವಲು (Convoy) ವಾಹನವನ್ನು ನಿಲ್ಲಿಸಿದ್ದಾರೆ. ಈ ಮೂಲಕ ಪ್ರಧಾನಿಯವರು ಮಾನವೀಯತೆ ಮೆರೆದಿದ್ದಾರೆ. ಸದ್ಯ ಮೋದಿ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

    ಕಳೆದ ವರ್ಷ ಸೆಪ್ಟೆಂಬರ್ 30 ರಂದು ಪ್ರಧಾನ ಮಂತ್ರಿಯ ಬೆಂಗಾವಲು ಪಡೆ ಅಂಬುಲೆನ್ಸ್ ಗೆ ದಾರಿ ಮಾಡಿ ಕೊಡಲು ಗುಜರಾತ್‍ನ (Gujrat) ಮುಖ್ಯ ರಸ್ತೆಯಲ್ಲಿ ನಿಂತಿತು. ಅಂದು ಪ್ರಧಾನಿ ಮೋದಿ ಮತ್ತು ಅಧಿಕಾರಿಗಳು ಅಹಮದಾಬಾದ್‍ನಿಂದ ಗಾಂಧಿನಗರಕ್ಕೆ ತೆರಳುತ್ತಿದ್ದರು. ಇದೇ ರೀತಿ 2022ರ ನವೆಂಬರ್ 9 ರಂದು ಮೋದಿಯವರು ಹಿಮಾಚಲ ಪ್ರದೇಶದ ಕಾಂಗ್ರಾದಲ್ಲಿ ರೋಡ್ ಶೋ ಬಳಿಕ ಮೈದಾನದಿಂದ ಹಿಂದಿರುಗಿದ ನಂತರ ಅಂಬುಲೆನ್ಸ್ ಗೆ ದಾರಿ ಮಾಡಿಕೊಡಲು ತಮ್ಮ ಬೆಂಗಾವಲು ಪಡೆಯನ್ನು ನಿಲ್ಲಿಸಿದ್ದರು.

    ಈ ವರ್ಷ ವಾರಣಾಸಿಗೆ ತಮ್ಮ 2 ದಿನಗಳ ಭೇಟಿಯಲ್ಲಿ ಪ್ರಧಾನಿ ಮೋದಿ ಅವರು ವಾರಣಾಸಿ ಮತ್ತು ಪೂರ್ವಾಂಚಲ್‍ಗೆ 19,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ 37 ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಇದು ರಸ್ತೆಗಳು ಮತ್ತು ಸೇತುವೆಗಳು, ಆರೋಗ್ಯ ಮತ್ತು ಶಿಕ್ಷಣ, ಪೊಲೀಸ್ ಕಲ್ಯಾಣ, ಸ್ಮಾರ್ಟ್ ಸಿಟಿ ಮತ್ತು ನಗರಾಭಿವೃದ್ಧಿ ಯೋಜನೆಗಳು, ರೈಲ್ವೆ ಮತ್ತು ವಿಮಾನ ನಿಲ್ದಾಣಗಳ ಯೋಜನೆಗಳನ್ನು ಒಳಗೊಂಡಿದೆ.

    ವಾರಣಾಸಿಗೆ ಭೇಟಿ ನೀಡಿದ ಮೊದಲ ದಿನ, ಪ್ರಧಾನಿ ಮೋದಿ ಅವರು ನಮೋ ಘಾಟ್‍ನಲ್ಲಿ ಸಂಜೆ ಕಾಶಿ ತಮಿಳು ಸಂಗಮಂನ ಎರಡನೇ ಆವೃತ್ತಿಯನ್ನು ಪ್ರಾರಂಭಿಸಲಿದ್ದಾರೆ. ಸಮಾರಂಭದಲ್ಲಿ ಅವರು ಕನ್ಯಾಕುಮಾರಿ ಮತ್ತು ವಾರಣಾಸಿ ನಡುವೆ ಸಂಚರಿಸಲಿರುವ ಕಾಶಿ ತಮಿಳು ಸಂಗಮಂ ಎಕ್ಸ್ ಪ್ರೆಸ್‍ಗೆ ಚಾಲನೆ ನೀಡಲಿದ್ದಾರೆ. ಡಿಸೆಂಬರ್ 17-31 ರವರೆಗೆ ನಡೆಯಲಿರುವ ಕಾಶಿ ತಮಿಳು ಸಂಗಮಂ ತಮಿಳುನಾಡು ಮತ್ತು ಪುದುಚೇರಿಯ 1,400 ಗಣ್ಯರ ಭಾಗವಹಿಸುವಿಕೆಗೆ ಸಾಕ್ಷಿಯಾಗಲಿದೆ. ವಾರಣಾಸಿ, ಪ್ರಯಾಗ್ರಾಜ್ ಮತ್ತು ಅಯೋಧ್ಯೆಗೆ ಭೇಟಿ ನೀಡಲು ನಿರ್ಧರಿಸಲಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.

    ತಮಿಳುನಾಡು ಮತ್ತು ಕಾಶಿ ಎರಡರಿಂದಲೂ ಕಲೆ, ಸಂಗೀತ, ಕೈಮಗ್ಗ, ಕರಕುಶಲ ವಸ್ತುಗಳು, ಪಾಕಪದ್ಧತಿ ಮತ್ತು ಇತರ ವಿಶಿಷ್ಟ ಉತ್ಪನ್ನಗಳ ಶ್ರೀಮಂತ ವಸ್ತ್ರವನ್ನು ಪ್ರದರ್ಶಿಸುವ ಪ್ರದರ್ಶನವು ಕಾರ್ಯಸೂಚಿಯಲ್ಲಿದೆ. ಸೋಮವಾರ, ಪ್ರಧಾನಿ ಮೋದಿ ಅವರು ಸೇವಾಪುರಿ ಡೆವಲಪ್‍ಮೆಂಟ್ ಬ್ಲಾಕ್‍ನ ಬಾರ್ಕಿ ಗ್ರಾಮ ಸಭೆಯಲ್ಲಿ ವಿಕ್ಷಿತ್ ಭಾರತ್ ಸಂಕಲ್ಪ್ ಯಾತ್ರಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

  • ವೈಯಕ್ತಿಕ ದುಃಖದ ನಡುವೆಯೂ ಗೆಲುವಿಗೆ ಶ್ರಮಿಸಿದ್ರು- ನಡ್ಡಾ ಕೊಂಡಾಡಿದ ಪ್ರಧಾನಿ

    ವೈಯಕ್ತಿಕ ದುಃಖದ ನಡುವೆಯೂ ಗೆಲುವಿಗೆ ಶ್ರಮಿಸಿದ್ರು- ನಡ್ಡಾ ಕೊಂಡಾಡಿದ ಪ್ರಧಾನಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (JP Nadda) ಅವರನ್ನು ಹಾಡಿಹೊಗಳಿದ್ದಾರೆ.

    ರಾಷ್ಟ್ರ ರಾಜಧಾನಿಯ ಬಿಜೆಪಿ ಪ್ರಧಾನ ಕಛೇರಿಯಲ್ಲಿ ನಡೆದ ವಿಜಯೋತ್ಸವದಲ್ಲಿ ಪಕ್ಷದ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ನಡ್ಡಾ ಅವರ ಸಂಘಟನಾ ಕೌಶಲ್ಯ ಮತ್ತು ತೆರೆಮರೆಯಲ್ಲಿ ಅವರು ಮಾಡಿದ ದಣಿವರಿಯದ ಕೆಲಸವನ್ನು ಕೊಂಡಾಡಿದರು. ಇದು ಪಕ್ಷದ ಅಂತಿಮ ಚುನಾವಣಾ ಯಶಸ್ಸಿಗೆ ಕಾರವಾಯಿತು ಎಂದರು.

    ನಡ್ಡಾ ಕುಟುಂಬದಲ್ಲಿ ಒಬ್ಬರು ಸಾವನ್ನಪ್ಪಿದ್ದರು. ಈ ದುಃಖದ ನಡುವೆಯೂ ಪಕ್ಷಕ್ಕೆ ದುಡಿದು ಇಂದು ಪಕ್ಷವನ್ನು ಗೆಲ್ಲಿಸಿಕೊಟ್ಟಿದ್ದಾರೆ. ಮಧ್ಯಪ್ರದೇಶ, ಛತ್ತೀಸ್‍ಗಢ ಹಾಗೂ ರಾಜಸ್ಥಾನದ ಅಭೂತಪೂರ್ವ ಗೆಲುವಿಗೆ ಜೆ.ಪಿ ನಡ್ಡಾ ಕಾರಣರಾಗಿದ್ದಾರೆ. ಪಕ್ಷದ ಅದ್ಭುತ ಗೆಲುವಿಗೆ ನಡ್ಡಾ ಅವರ ಸಮರ್ಥ ಉಸ್ತುವಾರಿ ಮತ್ತು ಚುನಾವಣಾ ಚಾಣಾಕ್ಷತೆ ಮತ್ತು ತಂತ್ರಗಳು ಕಾರಣವೆಂದು ಹೇಳಿದರು. ಈ ವೇಳೆ ಕಾರ್ಯಕರ್ತರು ‘ಭಾರತ್ ಮಾತಾ ಕೀ ಜೈ’ ಎಂದು ಘೊಷಣೆಗಳನ್ನು ಕೂಗಿದರು. ಇದನ್ನೂ ಓದಿ: ಗ್ಯಾರಂಟಿ ವಿಫಲವಾಗಿಲ್ಲ, ನಮ್ಮ ತಪ್ಪುಗಳನ್ನು ಸರಿಪಡಿಸಿಕೊಳ್ಳುತ್ತೇವೆ – ಅಧಿವೇಶನಕ್ಕೂ ಮುನ್ನ ಸಿಎಂ ರಿಯಾಕ್ಷನ್‌

    ಚುನಾವಣೆಗೆ ಮುನ್ನ ಅವರ ಕುಟುಂಬದಲ್ಲಿ ಒಬ್ಬರು ಮೃತಪಟ್ಟಿದ್ದರು. ಈ ದುಃಖದ ನಡುವೆಯೇ ನಡ್ಡಾ ಅವರು ಪಕ್ಷಕ್ಕಾಗಿ ದುಡಿದರು. ಪಕ್ಷವನ್ನು ಸಂಪೂರ್ಣ ಬದ್ಧತೆ ಮತ್ತು ಶ್ರದ್ಧೆಯಿಂದ ಮುನ್ನಡೆಸಿದರು ಎಂದರು. ಇತ್ತ ವಿಜಯೋತ್ಸವದಲ್ಲಿ ತಮ್ಮ ಬೆಂಬಲಿಗರನು ಉದ್ದೇಶಿಸಿ ಮಾತನಾಡಿದ ನಡ್ಡಾ ಅವರು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವನ್ನು ಶ್ಲಾಘಿಸಿದರು.

    ಮೂರು ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಗೆದ್ದ ಬಳಿಕ ನಡ್ಡಾ ಅವರು ತಮ್ಮ ಕುಟುಂಬಸ್ಥರ ಜೊತೆ ದೆಹಲಿಯಲ್ಲಿರುವ ಆಂಜನೇಯನ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದರು.

  • New Parliament Building ಉದ್ಘಾಟನೆ – ಈ ಭವನ ಹಿರಿಮೆ, ವಿಶ್ವಾಸದ ಸಂಕೇತ: ಮೋದಿ

    New Parliament Building ಉದ್ಘಾಟನೆ – ಈ ಭವನ ಹಿರಿಮೆ, ವಿಶ್ವಾಸದ ಸಂಕೇತ: ಮೋದಿ

    ನವದೆಹಲಿ: ನೂತನ ಸಂಸತ್ ಭವನ (New Parliament) ಹಿರಿಮೆ ಹಾಗೂ ವಿಶ್ವಾಸದ ಸಂಕೇತವಾಗಿದೆ. ಈ ಐತಿಹಾಸಿಕ ಭವನ ಸಶಕ್ತ ಭಾರತದ ಸಂಕೇತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಬಣ್ಣಿಸಿದ್ದಾರೆ.

    ನೂತನ ಸಂಸತ್ ಭವನ ಉದ್ಘಾಟನೆಗೊಂಡ ಬಳಿಕ ಟ್ವೀಟ್ (Tweet) ಮಾಡಿದ ಪ್ರಧಾನಿ ಮೋದಿ, ದೇಶವನ್ನು ಹೊಸ ಅಭಿವೃದ್ಧಿ ಉತ್ತುಂಗಕ್ಕೆ ಉತ್ತೇಜಿಸಲಿದೆ. ಜನರ ಅಭಿನಂದನೆಗಳಿಗೆ ನಾನು ಆಭಾರಿಯಾಗಿದ್ದೇನೆ. ಈ ಪ್ರೀತಿಯೇ ನಮ್ಮ ಸಾಧನೆಗಳಿಗೆ ಪ್ರೇರಕ ಶಕ್ತಿ. ಜೊತೆಗೆ ಮತ್ತಷ್ಟು ಸಾಧಿಸಲು ನಮಗೆ ಶಕ್ತಿ ತುಂಬಲಿದೆ ಎಂದರು.

    ನಮ್ಮ ಹೃದಯಗಳು ಮತ್ತು ಮನಸ್ಸುಗಳು ಹೆಮ್ಮೆ, ಆತ್ಮವಿಶ್ವಾಸ ಮತ್ತು ಭರವಸೆಯಿಂದ ತುಂಬಿವೆ. ಈ ಅಪ್ರತಿಮ ಕಟ್ಟಡವು ಸಬಲೀಕರಣದ ತೊಟ್ಟಿಲು ಆಗಿರಲಿ, ಕನಸುಗಳನ್ನು ಸೃಷ್ಟಿಸಿ ಮತ್ತು ಅವುಗಳನ್ನು ಈಡೇರಿಸುವಂತಾಗಲಿ. ಇದು ನಮ್ಮ ಮಹಾನ್ ರಾಷ್ಟ್ರವನ್ನು ಅಭಿವೃದ್ಧಿಯ ಉತ್ತುಂಗಕ್ಕೆ ಏರಿಸಲಿ ಎಂದು ಆಶಿಸಿದ್ದಾರೆ.  ಇದನ್ನೂ ಓದಿ: ನೂತನ ಸಂಸತ್ ಉದ್ಘಾಟನೆಗೂ ಮುನ್ನ ಕಾರ್ಮಿಕರನ್ನು ಸನ್ಮಾನಿಸಿದ ಮೋದಿ

    ಬೆಳಗ್ಗೆ ನಡೆದ ಪೂಜಾ ವಿಧಿ-ವಿಧಾನಗಳಲ್ಲಿ ಭಾಗವಹಿಸಿದ ಬಳಿಕ ಪ್ರಧಾನಿಯವರು ಬಳಿಕ ಐತಿಹಾಸಿಕ ಸೆಂಗೋಲ್ ಅನ್ನು ಪ್ರಧಾನಿ ಮೋದಿ ಅವರು ಲೋಕಸಭಾ ಸ್ಪೀಕರ್ ಸ್ಥಾನದ ಸಮೀಪದಲ್ಲಿ ಪ್ರತಿಷ್ಠಾಪಿಸಿ, ದೀಪ ಬೆಳಗಿದರು. ಮಂತ್ರ-ವಾದ್ಯ ಘೋಷ, ಮಂಗಳವಾದ್ಯಗಳಿಂದ ರಾಜದಂಡವನ್ನು ಪ್ರತಿಷ್ಠಾಪಿಸಲಾಯಿತು. ಈ ವೇಳೆ ಪ್ರಧಾನಿಯವರಿಗೆ ಲೋಕಸಬಾ ಸ್ಪೀಕರ್ ಓಂ ಬಿರ್ಲಾ ಸಾಥ್ ನೀಡಿದರು.

     

  • ಮೊಹಮ್ಮದ್ ನಲಪಾಡ್ ವಿರುದ್ಧ ದೂರು ದಾಖಲು

    ಮೊಹಮ್ಮದ್ ನಲಪಾಡ್ ವಿರುದ್ಧ ದೂರು ದಾಖಲು

    ಚಿಕ್ಕಮಗಳೂರು: ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ (Youth Congress President Mohammad Nalapad) ವಿರುದ್ಧ ದೂರು ದಾಖಲಾಗಿದೆ.

    ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿರುವ ಕುರಿತು ಬಿಜೆಪಿ (BJP) ಮುಖಂಡ ಪ್ರದೀಪ್ ನಾಯಕ್ ದೂರು ದಾಖಲಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣ ಪೊಲೀಸ್ ಠಾಣೆಗೆ ಹಾಗೂ ಕಡೂರಿನ ಜೆ.ಎಮ್.ಎಫ್.ಸಿ ಕೋರ್ಟಿಗೂ ಪ್ರದೀಪ್ ದೂರು ನೀಡಿದ್ದಾರೆ.

    ಇತ್ತೀಚೆಗೆ ಮೋದಿ (Narendra Modi) ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರಿಂದ ರಾಹುಲ್ ಗಾಂಧಿ (Rahul Gandhi) ಬೆಂಬಲಿಸಿ ಪ್ರತಿಭಟನೆ ವೇಳೆಯ ಭಾಷಣದಲ್ಲಿ ಮೋದಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರು. ಇದನ್ನೂ ಓದಿ: ನಿಮ್ಮ 60 ರೂ. ಸೀರೆ ಉಟ್ಟುಕೊಳ್ಳುವಷ್ಟು ನಿರ್ಗತಿಕರಲ್ಲ – ಶಾಮನೂರು ನೀಡಿದ ಸೀರೆಗಳಿಗೆ ಬೆಂಕಿಯಿಟ್ಟ ಮಹಿಳೆಯರು

    ಕಳೆದ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿಯಾಗಿ ರಾಹುಲ್ ಗಾಂಧಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಇತ್ತ ಮೊಹಮ್ಮದ್ ನಲಪಾಡ್ ಕೂಡ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ್ದು, ಬಿಜೆಪಿಗರ ಕೆಂಗಣ್ಣೀಗೆ ಗುರಿಯಾಗಿದೆ.

  • ಮಾರ್ಚ್ 17ರಂದು ಮೋದಿ ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಲಿದ್ದಾರೆ: ಸುಧಾಕರ್

    ಮಾರ್ಚ್ 17ರಂದು ಮೋದಿ ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಲಿದ್ದಾರೆ: ಸುಧಾಕರ್

    ಚಿಕ್ಕಬಳ್ಳಾಪುರ: ಮಾ.17ಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕ್ಷೇತ್ರಕ್ಕೆ ಆಗಮಿಸಲಿದ್ದಾರೆ. ಆಯುಷ್ಮಾನ್ ಭಾರತ್ (Ayushman Bharat) ಯೋಜನೆಯಡಿ 1.5 ಕೋಟಿ ಕಾರ್ಡುಗಳ ವಿತರಣೆ ಮಾಡುವ ರಾಜ್ಯ ಮಟ್ಟದ ಕಾರ್ಯಕ್ರಮ ನಡೆಯಲಿದ್ದು, ಇದರ ಜೊತೆಗೆ ವೈದ್ಯಕೀಯ ಕಾಲೇಜು ಉದ್ಘಾಟನೆ ಮತ್ತು 22 ಸಾವಿರ ಕುಟುಂಬಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದು ಸಚಿವ ಕೆ. ಸುಧಾಕರ್ ( K Sudhakar) ಹೇಳಿದರು.

    ಮಂಚೇನಹಳ್ಳಿ ತಾಲೂಕಿನ ಹಳೇಹಳ್ಳಿಯಲ್ಲಿ ಸೋಮವಾರ ಆಯೋಜಿಸಿದ್ದ ಗ್ರಾಮಸಭೆಯಲ್ಲಿ ಮಾತನಾಡಿದ ಅವರು, ನೂತನ ತಾಲೂಕು ಮಂಚೇನಹಳ್ಳಿ ಒಂದರಲ್ಲಿಯೇ 5 ಸಾವಿರ ನಿವೇಶನ ನೀಡುತ್ತಿದ್ದು, ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 22 ಸಾವಿರ ನಿವೇಶನಗಳನ್ನು ಬಡವರಿಗೆ ವಿತರಿಸಲು ಮಾ.17 ರಂದು ಪ್ರಧಾನಿ ನರೇಂದ್ರಮೋದಿ ಅವರು ಆಗಮಿಸಲಿದ್ದಾರೆ ಎಂದರು. ಇದನ್ನೂ ಓದಿ: ಯಡಿಯೂರಪ್ಪರ ಭಾಷಣ, ಜೀವನ ಮುಂದಿನ ಪೀಳಿಗೆಗೆ ಪ್ರೇರಣೆ: ಮೋದಿ

    ಮೋದಿ ಅವರ ಹಸ್ತದಿಂದಲೇ ನಿವೇಶನಗಳ ಹಕ್ಕುಪತ್ರ ವಿತರಣೆ ಮಾಡಲಾಗುವುದು. ನಿವೇಶನದ ಜೊತೆಗೆ ಮನೆಗಳ ನಿರ್ಮಾಣದ ಆದೇಶಪತ್ರಗಳನ್ನೂ ನೀಡಲಾಗುವುದು. ಹಳೇಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ 3 ಎಕರೆ ಭೂಮಿ ಗುರುತಿಸಲಾಗಿದ್ದು, ಇದರಲ್ಲಿ 107 ನಿವೇಶನ ನಿರ್ಮಾಣವಾಗಲಿದೆ. ಅದರ ಜೊತೆಗೆ ಮತ್ತೊಂದು ಪ್ರದೇಶದಲ್ಲಿ 3 ಎಕರೆ ಜಾಗ ಗುರುತಿಸಿದ್ದು, ಇದರಲ್ಲಿ 120 ನಿವೇಶನ ಆಗಲಿದೆ. ಜೊತೆಗೆ ಉಪ್ಪರಹಳ್ಳಿಯಲ್ಲಿ 9.20 ಎಕರೆ ಭೂಮಿ ಸೇರಿ ಒಟ್ಟು707 ನಿವೇಶನಗಳನ್ನು ಹಳೇಹಳ್ಳಿ ಗ್ರಾ.ಪಂ. ಒಂದರಲ್ಲಿಯೇ ವಿತರಿಸಲಾಗುವುದು. ಈ ಗ್ರಾ.ಪಂ. ವ್ಯಾಪ್ತಿಯಲ್ಲಿ ಒಟ್ಟು ನಿವೇಶನ ರಹಿತರ ಸಂಖ್ಯೆ 194 ಮಾತ್ರ ಇದ್ದು, ಇನ್ನೂ ನಿವೇಶನಗಳು ಉಳಿಯುವುದರಿಂದ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ನಿವೇಶನ ರಹಿತ ಬಡವರನ್ನು ಗುರುತಿಸಿ, ಅವರಿಂದ ಅರ್ಜಿ ಪಡೆದು, ನಿವೇಶನ ನೀಡಲು ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

    ಮೂರು ವರ್ಷಗಳ ಸತತ ಪರಿಶ್ರಮದಿಂದ ಬಡವರಿಗೆ ನಿವೇಶನ ನೀಡಲು ಸಾಧ್ಯವಾಗಿದೆ, ಮುಂದಿನ ದಿನಗಳಲ್ಲಿ ಹಳೇಹಳ್ಳಿ ಗ್ರಾಪಂಗೆ ವಿಶೇಷ ಒತ್ತು ನೀಡಲಾಗುವುದು. ಜೊತೆಗೆ ಬಸವ ವಸತಿ ಯೋಜನೆಯಡಿ ಸಾಮಾನ್ಯರಿಗೆ 125 ಮನೆಗಳನ್ನು ಇದೇ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿತರಸಲಾಗುತ್ತಿದೆ. 125 ಕುಟುಂಬಗಳಿಗೆ ಮನೆ ಮತ್ತು 707 ಕುಟುಂಬಗಳಿಗೆ ನಿವೇಶನ ನೀಡುವ ಮೂಲಕ ಎಲ್ಲ ಬಡವರಿಗೂ ಸೂರು ಕಲ್ಪಿಸುವ ಕನಸು ನನಸಾಗಲಿದೆ ಎಂದು ಹೇಳಿದರು.

  • ರಾಜಭವನದಲ್ಲಿ ಶ್ರೀಗಂಧದ ಸಸಿ ನೆಟ್ಟ ಪ್ರಧಾನಿ ಮೋದಿ

    ರಾಜಭವನದಲ್ಲಿ ಶ್ರೀಗಂಧದ ಸಸಿ ನೆಟ್ಟ ಪ್ರಧಾನಿ ಮೋದಿ

    ಬೆಂಗಳೂರು: ಏರೋ ಇಂಡಿಯಾ ಶೋ (Aero India Show) ಉದ್ಘಾಟಿಸಲು ಸಿಲಿಕಾನ್ ಸಿಟಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಯವರು ರಾಜಭವನದಲ್ಲಿ ಮಹತ್ವದ ಕಾರ್ಯವೊಂದನ್ನು ನೆರವೇರಿಸಿದ್ದಾರೆ.

    ಹೌದು. ಭಾನುವಾರ ಬೆಂಗಳೂರಿಗೆ ಬಂದಿರುವ ಪ್ರಧಾನಿ ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಿದ್ದರು. ಸೋಮವಾರ ಬೆಳಗ್ಗೆ ರಾಜಭವನದ ಮುಂಭಾಗದ ಹುಲ್ಲುಹಾಸಿನಲ್ಲಿ ಶ್ರೀಗಂಧದ ಸಸಿಯನ್ನು ನೆಟ್ಟರು. ಇದನ್ನೂ ಓದಿ: ಬೆಂಗಳೂರಿನ ಬಾನಂಗಳ ಶಕ್ತಿ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ: ಮೋದಿ

    ಈ ಸಂದರ್ಭಧಲ್ಲಿ ರಾಜಭವನದಲ್ಲಿನ ಸಸ್ಯಗಳು, ಜಾತಿಗಳು, ಗುಣಲಕ್ಷಣಗಳು ಮತ್ತು ಬಳಕೆಯ ಕುರಿತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ (Thawar Chand Gehlot) ಅವರು ಪ್ರಧಾನ ಮಂತ್ರಿಯವರಿಗೆ ವಿವರಿಸಿದರು.

    ಭಾನುವಾರ ರಾತ್ರಿ ಪ್ರಧಾನಿಯವರು ಸಿನಿಮಾ ರಂಗದವರು, ಕ್ರಿಕೆಟ್ ದಿಗ್ಗಜರು ಹಾಗೂ ಇತರ ಗಣ್ಯ ವ್ಯಕ್ತಿಗಳನ್ನು ಭೇಟಿಯಾಗಿದ್ದರು. ಅಲ್ಲದೆ ಜೊತೆಗೆ ಔತಣಕೂಟವನ್ನು ಹಮ್ಮಿಕೊಂಡಿದ್ದರು. ಇಂದು ಏರ್ ಇಂಡಿಯಾ ಉದ್ಘಾಟಿಸಿ ಬಳಿಕ ಯಲಹಂಕ ವಾಯುನೆಲೆಯಿಂದಲೇ ತ್ರಿಪುರಾ ಚುನಾವಣಾ ಪ್ರಚಾರಕ್ಕಾಗಿ ಅಗರ್ತಲಾಗೆ ಪ್ರಧಾನಿ ಮೋದಿ ಪಯಣ ಬೆಳೆಸಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k