Tag: PM

  • ನಾವು ಅಡುಗೆ ಮಾಡುತ್ತಿದ್ದೇವೆ, ಅವರು ಬಡಿಸೋಕೆ ಬರುತ್ತಿದ್ದಾರೆ: ಸಿದ್ದರಾಮಯ್ಯ

    ನಾವು ಅಡುಗೆ ಮಾಡುತ್ತಿದ್ದೇವೆ, ಅವರು ಬಡಿಸೋಕೆ ಬರುತ್ತಿದ್ದಾರೆ: ಸಿದ್ದರಾಮಯ್ಯ

    ಕಲಬುರಗಿ: ನಾವು ಅಡುಗೆ ಮಾಡುತ್ತಿದ್ದೇವೆ, ಅವರು ಬಡಿಸೋಕೆ ಬರುತ್ತಿದ್ದಾರೆ. ಬಿಜೆಪಿಯಲ್ಲಿ ಯಾರು ನಾಯಕತ್ವ ಇಲ್ಲ. ಅದಕ್ಕೆ ಮೋದಿ ಅವರನ್ನು ಕರೆತರುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

    ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಪ್ರವಾಸ ವಿಚಾರ ಸಂಬಂಧ ಮಾತನಾಡಿ, ನಾವು ಮಾಡಿದ ಕೆಲಸಕ್ಕೆ ಅವರು ಚಾಲನೆ ನೀಡುತ್ತಾರೆ. ನಮ್ಮ ಯುಪಿಎ ಸರ್ಕಾರದ ಅವಧಿಯಲ್ಲಿ ಮಾಡಿದ ಕೆಲಸಗಳಿಗೆ ಅವರು ಚಾಲನೆ ನೀಡುತ್ತಿದ್ದಾರೆ. ಈ ಹಿಂದೆಯೂ ಲಂಬಾಣಿ ಜನಾಂಗದವರಿಗೆ ಹಕ್ಕು ಪತ್ರ ನೀಡಿದ್ರು. ಕಂದಾಯ ಗ್ರಾಮ ಘೋಷಣೆ ಮಾಡಿದ್ದು ನಮ್ಮ ಸರ್ಕಾರದ ಅವಧಿಯಲ್ಲಿ. ಈಗ ಪ್ರಧಾನಿ ಮೋದಿ ಹಕ್ಕು ಪತ್ರ ಕೊಟ್ಟರು ಎಂದು ವಾಗ್ದಾಳಿ ನಡೆಸಿದರು.

    ಕಾಗೋಡು ತಿಮ್ಮಪ್ಪ (Kagodu Thimmappa) ಅವರು ಕಾನೂನು ಮಂತ್ರಿ ಇದ್ದಾಗ ಕಂದಾಯ ಗ್ರಾಮ ಮಾಡಿದ್ದು. ನಾವು ಕಾನೂನು ತಂದವರು ಹಕ್ಕು ಪತ್ರ ಹಂಚಲು ಮೋದಿ ಅವರನ್ನು ಕರೆತರುತ್ತಿದ್ದಾರೆ. ನಾವು ಅಡುಗೆ ಮಾಡುತ್ತಿದ್ದೇವೆ ಅವರೂ ಬಡಿಸೋಕೆ ಬರುತ್ತಿದ್ದಾರೆ. ಬಿಜೆಪಿಯಲ್ಲಿ ಯಾರೂ ನಾಯಕತ್ವ ಇಲ್ಲ. ಅದಕ್ಕೆ ಮೋದಿ ಅವರನ್ನು ಕರೆತರುತ್ತಿದ್ದಾರೆ ಎಂದರು.

    ಏನು ಕೆಲಸ ಮಾಡಿಲ್ಲವಲ್ಲ ರಾಜ್ಯ ಬಿಜೆಪಿ (BJP) ಗೆ ಮೋದಿಯೆ ಬಂಡವಾಳ. ಯಾಕಂದ್ರೆ ಜನ ವಿರೋಧಿ ಸರ್ಕಾರ 40% ಸರ್ಕಾರ ಇದು. ಮೋದಿ ಬಂದ್ರೆ ವೋಟ್ ಬರುತ್ತವೆ ಅಂತಾ ಬಿಜೆಪಿ ಅಂದುಕೊಂಡಿದೆ. ಆದರೆ ಬಿಜೆಪಿಯನ್ನ ಸೋಲಿಸಬೇಕು ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು ಅಂತಾ ಜನ ಈಗಾಗ್ಲೆ ತೀರ್ಮಾನ ಮಾಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಭವಾನಿ ರೇವಣ್ಣ ಸ್ಪರ್ಧೆ ಮಾಡೋದನ್ನು ಪಕ್ಷದ ವರಿಷ್ಠರು ತೀರ್ಮಾನ ಮಾಡ್ತಾರೆ: ನಿಖಿಲ್

    ಇದೇ ವೇಳೆ ಎಚ್‍ಡಿಕೆ ಹೇಳಿಕೆ ವಿಚಾರದ ಕುರಿತು ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಹೇಳಿದ ಎಲ್ಲವನ್ನು ನಾನು ಒಪ್ಪುವುದಿಲ್ಲ. ಆರ್‍ಎಸ್‍ಎಸ್ ಅವರು ತೀರ್ಮಾನ ಮಾಡಿರಬಹುದು. ಆದ್ರೆ ಅವರು ಬಹುಮತ ಬಂದ್ರೆ ತಾನೇ ನಿರ್ಧಾರ ಮಾಡೋದು. ಬಿಜೆಪಿಯವರು ಯಾವಾಗ ಬಹುಮತ ಬಂದಿದೆ. 2023 ರಲ್ಲಿ ಬಿಜೆಪಿ 50 ರಿಂದ 60 ಸೀಟು ಬರುತ್ತವೆ ಅಷ್ಟೇ ಎಂದು ಹೇಳಿದರು.

    ಸಿದ್ದರಾಮಯ್ಯ ಅವರ ಕೊನೆ ಚುನಾವಣೆ ಅಂತಾ ಅರ್.ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅಶೋಕ್‍ಗಿಂತ ಮೊದಲು ನಾನು ರಾಜಕೀಯಕ್ಕೆ ಬಂದಿದ್ದೇನೆ. ನನಗೆ ಕೊನೆ ಚುನಾವಣೆ ಅಂತಾ ಹೇಳೊದಕ್ಕೆ ಅಶೋಕ್‍ಗೆ ಯಾವ ನೈತಿಕತೆ ಇದೆ..?. ನಾನು 45 ವರ್ಷಗಳಿಂದ ರಾಜಕೀಯದಲ್ಲಿ ಇರೋದು. ಪಾಪ ಯಡಿಯೂರಪ್ಪನಿಗೆ ಬಿಜೆಪಿಯವರು ಅನ್ಯಾಯ ಮಾಡಿರೋದು. ಯಡಿಯೂರಪ್ಪ (BS Yediyurappa) ಮನೆಗೆ ಕಳುಹಿಸಿ ಬೊಮ್ಮಾಯಿಯನ್ನ ತಂದರು. ಯಡಿಯೂರಪ್ಪ ಮಗನಿಗೆ ಮಂತ್ರಿ ಸ್ಥಾನ ಕೊಡಬೇಕಾಗುತ್ತದೆ ಅಂತಾ ಮಂತ್ರಿಮಂಡಲ ವಿಸ್ತರಣೆ ಮಾಡಲ್ಲ. ಮುಖ್ಯಮಂತ್ರಿಯ ಎಲ್ಲಾ ಇಲಾಖೆಗಳನ್ನ ಇವನೇ ವಿಜಯೇಂದ್ರ ನೋಡಿಕೊಳ್ಳೋದು ಎಂದು ಟೀಕಿಸಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ- ನಮೋ ಸ್ವಾಗತಕ್ಕೆ ಭರ್ಜರಿ ಸಿದ್ದತೆ

    ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ- ನಮೋ ಸ್ವಾಗತಕ್ಕೆ ಭರ್ಜರಿ ಸಿದ್ದತೆ

    ಹುಬ್ಬಳ್ಳಿ: ಇಂದಿನಿಂದ ನಾಲ್ಕು ದಿನಗಳ ಕಾಲ ಹುಬ್ಬಳ್ಳಿ ಧಾರವಾಡ ಜಿಲ್ಲೆಯಲ್ಲಿ 26 ನೇ ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮ ನಡೆಯಲಿದೆ. ಮೋದಿಯವರ ಸ್ವಾಗತಕ್ಕೆ ಹುಬ್ಬಳ್ಳಿ ಮಧುವಣಗಿತ್ತಿ ಕಂಗೊಳಿಸುತ್ತಿದೆ.

    ಮತ್ತೊಮ್ಮೆ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಮಿಸುತ್ತಿದ್ದಾರೆ. ಚುನಾವಣೆ ಹೊಸ್ತಿಲಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಬಿಜೆಪಿ ನಾಯಕರು ರಾಜ್ಯಾದ್ಯಂತ ಸಂಚರಿಸುತ್ತಿದ್ದಾರೆ. ಅಮಿತ್ ಶಾ (Amitshah), ನಡ್ಡಾ, ಗಡ್ಕರಿ ಬಳಿಕ ಈಗ ಪ್ರಧಾನಿ ಮೋದಿ ಕರ್ನಾಟಕಕ್ಕೆ ಬರ್ತಿದ್ದಾರೆ.

    ಸ್ವಾಮಿ ವಿವೇಕಾನಂದರ ಜಯಂತಿ (Swami Vivekananda Jayanti) ನಿಮಿತ್ತ ಧಾರವಾಡದಲ್ಲಿ 26 ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮ ಉದ್ಘಾಟನೆಗೆಂದು ಆಗಮಿಸಿಸೋ ನಮೋ ಸ್ವಾಗತಕ್ಕೆ ಧಾರವಾಡ (Dharwad) ಜಿಲ್ಲೆ ಸಕಲ ರೀತಿಯಲ್ಲಿ ಸಜ್ಜಾಗಿದೆ. ಇಂದಿನಿಂದ 4 ದಿನಗಳ ಕಾಲ ನಡೆಯುವ ರಾಷ್ಟ್ರೀಯ ಯುವ ಜನೋತ್ಸವಕ್ಕೆ ಇಂದು ಸಂಜೆ 4 ಗಂಟೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದಾರೆ. ಕಾರ್ಯಕ್ರಮಕ್ಕಾಗಿ ರೈಲ್ವೆ ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, 30 ಸಾವಿರ ಜನಕ್ಕೆ ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ.

    ಮೋದಿ ಕಾರ್ಯಕ್ರಮಕ್ಕೂ ಮುನ್ನ ದೇಶದ ಯುವ ಸಾಂಸ್ಕೃತಿಕ ಗತವೈಭವ ಅನಾವರಣಗೊಳಲಿದ್ದು, ವಿವಿಧ ರಾಜ್ಯದ ಜಾನಪದ ಕಲೆ, ಯೋಗಾ, ಮಲ್ಲಗಂಭ ಪ್ರದರ್ಶನ ನಡೆಯಲಿದೆ. 28 ರಾಜ್ಯದ 6 ಕೇಂದ್ರಾಡಳಿತ ಪ್ರದೇಶಗಳ ವಾಕ್‍ಥಾನ್ ನಡೆಯಲಿದೆ. ಬಳಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೋದಿ ಕಾರ್ಯಕ್ರಮದಲ್ಲಿ ರಾಜ್ಯಪಾಲ ಗೆಹ್ಲೋಟ್, ಸಿಎಂ ಬೊಮ್ಮಾಯಿ, ಕೇಂದ್ರ ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್, ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ್ ಜೋಶಿ, ಸೇರಿ ಹಲವರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್: ಡಿಕೆಶಿ ಘೋಷಣೆ

    ಮಧ್ಯಾಹ್ನ 3.40ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣ (Hubballi Airport) ಕ್ಕೆ ಬರುವ ಪ್ರಧಾನಿ ಮೋದಿಗೆ ಸಿಎಂ ಬೊಮ್ಮಾಯಿ (Basavaraj Bommai) ಸ್ವಾಗತ ನೀಡಲಿದ್ದಾರೆ. 3.45 ರಿಂದ 4 ಗಂಟೆ ವರೆಗೂ 15 ನಿಮಿಷ ರೋಡ್ ಶೋ ಮಾಡಲಿದ್ದಾರೆ. ಮಾರ್ಗ ಮಧ್ಯೆ ಐದು ಕಡೆ ಮೋದಿ ವಾಹನ ನಿಲ್ಲಿಸೋ ಸಾಧ್ಯತೆ ಇದ್ದು, ವಾಹನ ನಿಲ್ಲಿಸಿ ಜನರತ್ತ ಮೋದಿ ಕೈಬೀಸಲಿದ್ದಾರೆ. ಏರಪೋರ್ಟ್‍ನಿಂದ ಗೋಕುಲ್ ರೋಡ್, ಅಕ್ಷಯಪಾರ್ಕ್, ಹೊಸೂರು ಸರ್ಕಲ್, ದೇಶಪಾಂಡೆ ನಗರ,ಕೋರ್ಟ್ ಸರ್ಕಲ್ ಮೂಲಕ ರೇಲ್ವೆ ಮೈದಾನಕ್ಕೆ ಆಗಮಿಸಲಿದ್ದಾರೆ. 4 ಗಂಟೆಗೆ ವೇದಿಕೆ ಕಾರ್ಯಕ್ರಮ ಆರಂಭವಾಗಲಿದ್ದು, ಮೋದಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ 5.15 ಕಾರ್ಯಕ್ರಮ ಮುಕ್ತಾಯವಾಗಲಿದೆ.

    ಮೋದಿಗೆ ನೀಡಲು ಸಿದ್ಧವಾಗಿದೆ ಉಡುಗೊರೆ: ಹುಬ್ಬಳ್ಳಿಗೆ ಬರುತ್ತಿರುವ ಪ್ರಧಾನಿ ಮೋದಿಗಾಗಿ ಬಿದರಿ ಕಲೆಯಲ್ಲಿ ಅರಳಿದ ಸ್ವಾಮಿ ವಿವೇಕಾನಂದರ ಮನಮೋಹಕ ಮೂರ್ತಿಯನ್ನು ಸ್ಮರಣಿಯಾಗಿ ನೀಡಿ ಗೌರವಿಸಲಾಗುತ್ತಿದೆ. ಧಾರವಾಡ ಜಿಲ್ಲೆಯ ಗರಗ ಹಾಗೂ ಬೆಂಗೇರಿಯಲ್ಲಿ ತಯಾರಿಸಲಾದ ತಿರಂಗವನ್ನು ಸಹ ಉಡುಗೊರೆಯಾಗಿ ನೀಡಿ ಗೌರವಿಸಲಾಗುತ್ತಿದೆ. ಹಾವೇರಿಯ ಏಲಕ್ಕಿ ಹಾರವನ್ನು ಸಿದ್ಧಪಡಿಸಲಾಗಿದೆ.

    ಮೋದಿ ಆಗಮನದಿಂದಾಗಿ ನಗರದ ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಮೋದಿ ಸಾಗುವ ಹಾದಿಯಲ್ಲಿ ಸಾರ್ವಜನಿಕ ಸಂಚಾರ ನಿಷೇಧಿಸಿಸಲಾಗಿದೆ. ಮಧ್ಯಾಹ್ನ 1 ಗಂಟೆಯಿಂದ ಸಂಜೆ 7 ಗಂಟೆಯವರಿಗೆ ನಿರ್ಬಂಧವಿದೆ. ಬೆಳಗ್ಗೆಯಿಂದಲೇ ಹೊರಗಿನಿಂದ ನಗರಕ್ಕೆ ಬರುವ ವಾಹನಗಳಿಗೆ ಆಯಾಯಾ ರಸ್ತೆಗಳ ಪಕ್ಕದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. 5.35ಕ್ಕೆ ದೆಹಲಿಯತ್ತ ಪ್ರಧಾನಿ ಮೋದಿ ಪ್ರಯಾಣಿಸಲಿದ್ದಾರೆ.

    ಒಟ್ಟಾರೆ ಪ್ರಧಾನಿ ಮೋದಿ ಸ್ವಾಗತಕ್ಕೆ ಪೇಡಾ ನಗರಿ ಸಕಲ ರೀತಿಯಲ್ಲಿ ಸಜ್ಜಾಗಿದ್ದು, ರೈಲ್ವೆ ಮೈದಾನದಲ್ಲಿ ಯುವಶಕ್ತಿ ಅನಾವರಣಗೊಳಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಇಂದೇ ಮೋದಿ ತಾಯಿ ಹೀರಾಬೆನ್ ಅಂತ್ಯಕ್ರಿಯೆ

    ಇಂದೇ ಮೋದಿ ತಾಯಿ ಹೀರಾಬೆನ್ ಅಂತ್ಯಕ್ರಿಯೆ

    ನವದೆಹಲಿ: ಇಂದೇ ಪ್ರಧಾನಿ ನರೇಂದ್ರ ಮೋದಿ (Narendra Modi) ತಾಯಿ ಹೀರಾಬೆನ್ ಮೋದಿ (Heeraben Modi) ಅವರ ಅಂತ್ಯಕ್ರಿಯೆ ನಡೆಯಲಿದೆ.

    ಸದ್ಯ ಗಾಂಧಿನಗರದ ಪಂಕಜ್ ಮೋದಿ (Pankaj Modi) ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಇತ್ತ ಪ್ರಧಾನಿಯವರು ಕೂಡ ಅಹಮದಾಬಾದ್‍ಗೆ ಭೇಟಿ ನೀಡಿದ್ದು, ಯೂಎನ್ ಮೆಹ್ತಾ (UN Mehta Hospital) ಆಸ್ಪತ್ರೆಗೆ ತೆರಳಿ ತಾಯಿಯ ಅಂತಿಮ ದರ್ಶನ ಪಡೆದಿದ್ದಾರೆ.

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹೀರಾಬೆನ್ ಅವರನ್ನು ಬುಧವಾರವಷ್ಟೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 3.39ರ ಸುಮಾರಿಗೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಹೀರಾಬೆನ್ ವಿಧಿವಶ- ತಾಯಿ ಮಾತುಗಳನ್ನು ಸ್ಮರಿಸಿಕೊಂಡು ಮೋದಿ ಭಾವುಕ ಟ್ವೀಟ್

    ಶತಾಯುಷಿ ಹೀರಾಬೆನ್ ಅವರು ಐವರು ಪುತ್ರರು ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸದ್ಯ ಹೀರಾಬೆನ್ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿಯುತ್ತಿದೆ. ಗಣ್ಯರು ಸಂತಾಪಗಳನ್ನು ಸೂಚಿಸುತ್ತಿದ್ದಾರೆ. ಅಲ್ಲದೇ ಪ್ರಧಾನಿಯವರಿಗೆ ಧೈರ್ಯ ತುಂಬುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಎಷ್ಟು ದಿನ ಪ್ರಧಾನಿ ಹುದ್ದೆಯಲ್ಲಿರ್ತಾರೆ? – ಸುನಾಕ್ ಬಗ್ಗೆ ಬ್ರಿಟನ್‌ ಪತ್ರಿಕೆಗಳ ಅಸಮಾಧಾನ

    ಎಷ್ಟು ದಿನ ಪ್ರಧಾನಿ ಹುದ್ದೆಯಲ್ಲಿರ್ತಾರೆ? – ಸುನಾಕ್ ಬಗ್ಗೆ ಬ್ರಿಟನ್‌ ಪತ್ರಿಕೆಗಳ ಅಸಮಾಧಾನ

    ಲಂಡನ್: ಬ್ರಿಟನ್‍ನಲ್ಲೀಗ (Britain) ಅಮರ್ ಅಕ್ಬರ್ ಆಂಥೋಣಿ ಆಳ್ವಿಕೆ. ರಾಜನ ಹುದ್ದೆಯಲ್ಲಿ ಕ್ರಿಶ್ಚಿಯನ್ ಧರ್ಮದ ಮೂರನೇ ಚಾರ್ಲ್ಸ್ (Charles III) ಇದ್ರೆ ಪ್ರಧಾನಿ ಗಾದಿಯನ್ನು ಹಿಂದೂ ಧರ್ಮದ ರಿಷಿ ಸುನಾಕ್ (Rishi Sunak) ಅಲಂಕರಿಸಿದ್ದಾರೆ.

    ಲಂಡನ್ ಮೇಯರ್ ಸ್ಥಾನದಲ್ಲಿ ಪಾಕ್ ಮೂಲದ ಸಾದೀಕ್ ಖಾನ್ ಇದ್ದಾರೆ. ಹೀಗಾಗಿ ಬ್ರಿಟನ್ ಕೋಮು ಸೌಹಾರ್ದತೆಯ ಪ್ರತೀಕ ಎಂಬ ಮಾತು ಕೇಳಿಬರುತ್ತಿವೆ. ಆದ್ರೆ, ಇದೇ ಹೊತ್ತಲ್ಲಿ, ಬ್ರಿಟಿಷರಲ್ಲಿ ಹಿಂದೂ ಫೋಬಿಯಾ ಕೂಡ ಕಾಣುತ್ತಿರೋದು ಗೊತ್ತಾಗುತ್ತಿದೆ. ಇಂಗ್ಲೆಂಡ್‍ನ ಕೆಲ ಪತ್ರಿಕೆಗಳು ರಿಷಿ ಸುನಾಕ್‍ರನ್ನು ಪ್ರಧಾನಿ ಎಂದು ಒಪ್ಪಲು ಸಿದ್ಧವಿದ್ದಂತೆ ಕಾಣುತ್ತಿಲ್ಲ. ಸುನಾಕ್ ಯಾರಿಂದ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಎಷ್ಟು ದಿನ ಪ್ರಧಾನಿ ಹುದ್ದೆಯಲ್ಲಿರ್ತಾರೆ ಸುನಾಕ್ ಎಂದು ಕೆಲ ಪತ್ರಿಕೆಗಳು ಮುಖಪುಟದಲ್ಲಿ ಬ್ಯಾನರ್ ಹೆಡ್‍ಲೈನ್ ಮಾಡಿ ಅಸಮಾಧಾನ ಹೊರಹಾಕಿವೆ. ಇದನ್ನೂ ಓದಿ: ಬ್ರಿಟನ್ ಪ್ರಧಾನಿಯಾದ ಗಂಟೆಗಳೊಳಗೆ ಸುನಾಕ್ ಹೊಸ ಕ್ಯಾಬಿನೆಟ್‌ಗೆ ಸಿದ್ಧತೆ

    ರೇಡಿಯೋ ಶೋಗಳಲ್ಲಿ ಕೂಡ ಇಂಥದ್ದೇ ಪ್ರಶ್ನೆ ಎತ್ತಲಾಗುತ್ತಿದೆ. ನಾನು ಭಾರತಕ್ಕೋ ಸೌದಿಗೋ ಪ್ರಧಾನಿ ಆಗ್ತೀನಾ. ನೀವೆ ಹೇಳಿ. ಅಂತಹ ಅವಕಾಶವೇ ಇಲ್ಲ. ಬ್ರಿಟನ್‍ನಲ್ಲಿ ಶೇಕಡಾ 85ರಷ್ಟು ಶ್ವೇತ ವರ್ಣಿಯರಿದ್ದಾರೆ. ಜನರ ತಮ್ಮಲ್ಲೊಬ್ಬರನ್ನು ಪ್ರಧಾನಿಯಾಗಿ ಕಾಣಲು ಇಚ್ಚಿಸುತ್ತಾರೆಯೇ ಹೊರತು ಬಿಳಿಯೇತರರನ್ನಲ್ಲ ಎಂದು ರೇಡಿಯೋ ಜಾಕಿಯೊಬ್ಬ ವಾಗ್ದಾಳಿ ನಡೆಸಿದ್ದಾನೆ. ಇದನ್ನೂ ಓದಿ: ಕರ್ನಾಟಕದ ಅಳಿಯ ರಿಷಿ ಸುನಾಕ್‌ ಬ್ರಿಟನ್‌ ರಾಜ 3ನೇ ಚಾರ್ಲ್ಸ್‌ಗಿಂತಲೂ ಶ್ರೀಮಂತ

    Live Tv
    [brid partner=56869869 player=32851 video=960834 autoplay=true]

  • ನೀವು ಬಿಕಿನಿ ಬೇಕಾದರೆ ಹಾಕಿಕೊಳ್ಳಿ, ನಮ್ಮ ಮುಸ್ಲಿಂ ಹೆಣ್ಣು ಮಕ್ಕಳು ಹಿಜಬ್ ಧರಿಸುತ್ತಾರೆ: ಓವೈಸಿ

    ನೀವು ಬಿಕಿನಿ ಬೇಕಾದರೆ ಹಾಕಿಕೊಳ್ಳಿ, ನಮ್ಮ ಮುಸ್ಲಿಂ ಹೆಣ್ಣು ಮಕ್ಕಳು ಹಿಜಬ್ ಧರಿಸುತ್ತಾರೆ: ಓವೈಸಿ

    ನವದೆಹಲಿ: ನೀವು ಬಿಕಿನಿ (Bikini) ಬೇಕಾದರೆ ಹಾಕಿಕೊಳ್ಳಿ, ಆದರೆ ನಮ್ಮ ಮುಸ್ಲಿಂ (Muslim) ಹೆಣ್ಣುಮಕ್ಕಳು ಹಿಜಬ್ (Hijab) ಧರಿಸುತ್ತಾರೆ. ಬಿಜೆಪಿ (BJP) ಹಿಜಬ್ ಧರಿಸುವುದನ್ನು ತಡೆಯಲು ಪ್ರಯತ್ನಿಸುತ್ತಿದೆ. ಭವಿಷ್ಯದಲ್ಲಿ ಹಿಜಬ್ ಧರಿಸಿದ ಮುಸ್ಲಿಂ ಮಹಿಳೆ ದೇಶದ ಪ್ರಧಾನಿ (Prime Minister) ಆಗಬಹುದು ಎಂದು ಹೈದರಾಬಾದ್ ಸಂಸದ ಹಾಗೂ ಎಐಎಂಐಎಂ (AIMIM) ಮುಖ್ಯಸ್ಥ ಅಸಾದುದ್ದೀನ್ ಓವೈಸಿ (Asaduddin Owaisi) ಭವಿಷ್ಯ ನುಡಿದಿದ್ದಾರೆ.

    ಹಿಜಬ್ ಕುರಿತಾಗಿ ಸುಪ್ರೀಂಕೋರ್ಟ್ (Supreme Court) ನೀಡಿರುವ ತೀರ್ಪಿನ ಕುರಿತಾಗಿ ಮಾತನಾಡಿದ ಅವರು, ಹಿಜಬ್ ಪ್ರಕರಣ ಕುರಿತು ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ಭಿನ್ನ ತೀರ್ಪು ನೀಡಿದೆ. ಮುಸ್ಲಿಂ ಹೆಣ್ಣುಮಕ್ಕಳು ಧರಿಸುವ ಹಿಜಬ್ ತೆಗೆಯಲು ಬಿಜೆಪಿ ಯತ್ನಿಸುತ್ತಿದೆ. ಮುಸ್ಲಿಂ ಹೆಣ್ಣು ಮಕ್ಕಳು ಹಿಜಬ್ ಧರಿಸಲು ಆಸಕ್ತಿ ವಹಿಸಿದ್ದಾರೆ. ಹಿಜಬ್ ಧರಿಸುವಂತೆ ಯಾರೂ ಅವರನ್ನು ಬಲವಂತಪಡಿಸಿಲ್ಲ. ಅವರ ಸ್ವಇಚ್ಚೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಹಿಜಬ್‌ ಆಯ್ಕೆಯ ವಿಷಯ: ನ್ಯಾ.ಹೇಮಂತ್ ಗುಪ್ತಾ, ನ್ಯಾ. ಧುಲಿಯಾ ಆದೇಶದಲ್ಲಿ ಏನಿದೆ?

    ದೇಶದ ಅಭಿವೃದ್ಧಿಯಲ್ಲಿ ಮುಸ್ಲಿಂ ಹೆಣ್ಣುಮಕ್ಕಳ ಕೊಡುಗೆಯೂ ಅಪಾರವಾಗಿದೆ. ಹೈದರಾಬಾದ್‍ನಲ್ಲಿ ಹಲವು ಮಹಿಳೆಯರು ಡ್ರೈವರ್‌ಗಳಾಗಿ ವಾಹನ ಚಲಾಯಿಸುತ್ತಿದ್ದಾರೆ. ಅವರಿಗೆ ಯಾರೂ ಹಿಜಬ್ ಧರಿಸುವಂತೆ ಒತ್ತಾಯಿಸುತ್ತಿಲ್ಲ. ಅವರು ತಮ್ಮ ಇಚ್ಚೆಯ ಪ್ರಕಾರ ಧರಿಸುತ್ತಿದ್ದಾರೆ. ಹಿಂದೂ, ಸಿಖ್, ಕ್ರಿಶ್ಚಿಯನ್ ಮಕ್ಕಳು ತಮ್ಮ ಧರ್ಮದ ಉಡುಪು ಧರಿಸಿ ಶಾಲೆಗೆ ತೆರಳಲು ಅನುಮತಿ ಇದೆ. ಆದರೆ ಮುಸ್ಲಿಂ ಹೆಣ್ಣುಮಕ್ಕಳು ಧರಿಸುವ ಹಿಜಬ್‍ಗೆ ಅವಕಾಶ ಕೊಡುತ್ತಿಲ್ಲ. ಈ ತಾರತಮ್ಯ ಯಾಕೆ? ಒಂದು ದಿನ ಹಿಜಬ್ ಧರಿಸಿದ ಮುಸ್ಲಿಂ ಮಹಿಳೆ ಭಾರತದ ಪ್ರಧಾನಿಯಾಗುತ್ತಾರೆ. ಇದು ನನ್ನ ಕನಸು ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ರೂಪದ ಆಕೃತಿ ಪತ್ತೆ – ವೈಜ್ಞಾನಿಕ ಪರೀಕ್ಷೆ ಸಾಧ್ಯವಿಲ್ಲ ಎಂದು ಕೋರ್ಟ್‌

    ವಿಶ್ವಾದ್ಯಂತ ಸುದ್ದಿಯಾಗಿದ್ದ ಕರ್ನಾಟಕದ ಹಿಜಬ್‌ ನಿಷೇಧ (Karnataka Hijab Ban) ಪ್ರಕರಣ ಇನ್ನಷ್ಟು ದಿನಗಳ ಕಾಲ ನಡೆಯಲಿದೆ. ನಿನ್ನೆ ಸುಪ್ರೀಂಕೋರ್ಟ್‌ನಿಂದ (Supreme Court) ಭಿನ್ನ ತೀರ್ಪು ಪ್ರಕಟವಾಗಿದ್ದು, ಪ್ರಕರಣದ ವಿಚಾರಣೆ ಮುಖ್ಯ ನ್ಯಾಯಾಧೀಶರು ಇರುವ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಭಾರತದ ರಿಷಿಗೆ ಸೋಲು – ಬ್ರಿಟನ್ ಪ್ರಧಾನಿ ಗದ್ದುಗೆ ಏರಿದ ಲಿಜ್ ಟ್ರಸ್

    ಭಾರತದ ರಿಷಿಗೆ ಸೋಲು – ಬ್ರಿಟನ್ ಪ್ರಧಾನಿ ಗದ್ದುಗೆ ಏರಿದ ಲಿಜ್ ಟ್ರಸ್

    ಲಂಡನ್: ಬ್ರಿಟನ್‍ನ ನೂತನ ಪ್ರಧಾನಿಯಾಗಿ ಲಿಜ್ ಟ್ರಸ್ ಆಯ್ಕೆಯಾಗಿದ್ದಾರೆ.

    ಬೋರಿಸ್ ಜಾನ್ಸನ್ ಬ್ರಿಟನ್ ಪ್ರಧಾನಿ ಸ್ಥಾನದಿಂದ ಕೆಳಗಿಳಿದ ಬಳಿಕ ಮುಂದಿನ ಪ್ರಧಾನಿ ಯಾರಾಗುತ್ತಾರೆ ಎಂಬ ಪ್ರಶ್ನೆ ಮನೆಮಾಡಿತ್ತು. ಬಳಿಕ ಭಾರತ ಮೂಲದ ರಿಷಿ ಸುನಾಕ್ ರಕ್ಷಣಾ ಕಾರ್ಯದರ್ಶಿ ಬೆನ್ ವ್ಯಾಲೇಸ್, ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್, ಮಾಜಿ ಆರೋಗ್ಯ ಕಾರ್ಯದರ್ಶಿ ಸಾಜಿದ್ ಜಾವಿದ್ ಪ್ರಧಾನಿ ಹುದ್ದೆಗೆ ಸ್ಫರ್ಧಿಸಿದ್ದರು. ಇವರಲ್ಲಿ ರಿಷಿ ಸುನಕ್ ಮತ್ತು ಲಿಜ್ ಟ್ರಸ್ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದರು. ಇದನ್ನೂ ಓದಿ: ಮುರುಘಾ ಶ್ರೀಗಳಿಗೆ ಚಿಕಿತ್ಸೆ ನೀಡಿದ್ದ ವೈದ್ಯಾಧಿಕಾರಿ ವಿರುದ್ಧ ಲೋಕಾಯುಕ್ತಕ್ಕೆ ದೂರು

    ಅಂತಿಮ ಸುತ್ತಿನಲ್ಲಿ ರಿಷಿ ಸುನಾಕ್ ಮತ್ತು ಲಿಜ್ ಟ್ರಸ್ ನಡುವೆ ಬಾರಿ ಪೈಪೋಟಿ ಇತ್ತು. ಅಂತಿಮವಾಗಿ ಲಿಜ್ ಟ್ರಸ್ 81,326 ಮತಗಳನ್ನು ಪಡೆದು ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಬ್ರಿಟನ್‍ನ ಮೂರನೇ ಮಹಿಳಾ ಪ್ರಧಾನಿಯಾಗಿ ಲೀಜ್ ಟ್ರಸ್ ಆಯ್ಕೆಯಾಗಿದ್ದಾರೆ. ರಿಷಿ ಸುನಕ್ 60,399 ಮತಗಳನ್ನು ಪಡೆದು ಪರಾಭವಗೊಂಡರು. ಇದನ್ನೂ ಓದಿ: ನಮಗೆ ದ್ರೋಹ ಬಗೆದ ಉದ್ಧವ್ ಠಾಕ್ರೆಗೆ ಪಾಠ ಕಲಿಸಬೇಕು: ಅಮಿತ್ ಶಾ ಗುಡುಗು

    ಪರಾಭವಗೊಂಡ ರಿಷಿ ಸುನಕ್ ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್ ನಾರಾಯಣ ಮೂರ್ತಿಯವರ ಪುತ್ರಿ ಅಕ್ಷತಾ ಮೂರ್ತಿಯ ಪತಿಯಾಗಿದ್ದು, ಬ್ರಿಟನ್‍ನಲ್ಲಿ ಅತ್ಯಂತ ಪ್ರಭಾವಿ ವ್ಯಕ್ತಿಯಾಗಿದ್ದರು. ಇವರನ್ನು ಬೋರಿಸ್ ಜಾನ್ಸನ್ 2020ರಲ್ಲಿ ಮೊದಲ ಬಾರಿಗೆ ಪೂರ್ಣ ಕ್ಯಾಬೆನೆಟ್ ಸ್ಥಾನವನ್ನು ನೀಡಿದ್ದರು. ಹಣಕಾಸು ಸಚಿವರಾಗಿ ಬೋರಿಸ್ ಜಾನ್ಸನ್ ಸರ್ಕಾರದಲ್ಲಿ ರಿಷಿ ಸುನಾಕ್ ಕಾರ್ಯನಿರ್ವಹಿಸಿದ್ದರು.

    ಆ ಬಳಿಕ ಬೋರಿಸ್ ಜಾನ್ಸನ್ ವಿರುದ್ಧ ಭಿನ್ನಾಭಿಪ್ರಾಯದಿಂದ ಸಾಜಿದ್ ಜಾವೇಜ್ ರಾಜೀನಾಮೆ ನೀಡಿದ ಬೆನ್ನಲ್ಲೇ ರಿಷಿ ಸುನಕ್ ಕೂಡ ಹಣಕಾಸು ಖಾತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ ಪ್ರಧಾನಿ ಹುದ್ದೆಗೆ ಸ್ಫರ್ಧಿಸಿ ಅಂತಿಮ ಸುತ್ತಿಗೆ ಆಯ್ಕೆಗೊಂಡಿದ್ದರು. ಇದನ್ನೂ ಓದಿ: ಶಾಸಕ ಜಮೀರ್ ಕಚೇರಿಯಲ್ಲಿ ಅದ್ಧೂರಿ ಗಣೇಶೋತ್ಸವ..!

    ಪ್ರಧಾನಿ ಬೋರಿಸ್ ಜಾನ್ಸನ್ ಜುಲೈ 7 ರಂದು ಕನ್ಸರ್ವೇಟಿವ್ ಪಕ್ಷದ ನಾಯಕತ್ವವನ್ನು ತ್ಯಜಿಸುವುದಾಗಿ ಘೋಷಿಸಿ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಇದೀಗ ನೂತನ ಪ್ರಧಾನಿಯಾಗಿ ಲಿಜ್ ಟ್ರಸ್ ಆಯ್ಕೆಗೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮುರುಘಾಶ್ರೀ ಪೋಕ್ಸೊ ಪ್ರಕರಣದಲ್ಲಿ ಸರ್ಕಾರ ಎಂಟ್ರಿ ಕೊಡಲ್ಲ: ಆರ್.ಅಶೋಕ್

    ಮುರುಘಾಶ್ರೀ ಪೋಕ್ಸೊ ಪ್ರಕರಣದಲ್ಲಿ ಸರ್ಕಾರ ಎಂಟ್ರಿ ಕೊಡಲ್ಲ: ಆರ್.ಅಶೋಕ್

    ಬೆಂಗಳೂರು: ಮುರುಘಾ ಶರಣರ ಪೋಕ್ಸೊ ಪ್ರಕರಣದಲ್ಲಿ ಸರ್ಕಾರ ಎಂಟ್ರಿ ಕೊಡುವುದಿಲ್ಲ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

    ಮುರುಘಾ ಶ್ರೀಗಳ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಠಗಳ ಬಗ್ಗೆ ಗೌರವ ಇರುತ್ತೆ. ಮಠಗಳಲ್ಲಿ ಈ ರೀತಿ ಆಗಬಾರದು. ಕಾನೂನು ಪ್ರಕಾರ ಪೊಲೀಸರು ಕೆಲಸ ಮಾಡುತ್ತಾರೆ. ಕಾನೂನಿನಿಂದ ಏನು ಕ್ರಮ ಕೈಗೊಳ್ಳಬೇಕು ಕೈಗೊಳ್ಳಲಾಗುತ್ತೆ. ಇದರಲ್ಲಿ ಸರ್ಕಾರ ಎಂಟ್ರಿ ಕೊಡುವುದಿಲ್ಲ ಎಂದು ಹೇಳಿದ್ದಾರೆ.

    ಕಾನೂನು ತನ್ನದೇ ಆದ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿದೆ. ಈ ನೆಲದ ಕಾನೂನು ಏನಿದೆಯೋ ಅದನ್ನ ಸರ್ಕಾರ ಪಾಲನೆ ಮಾಡಲಿದೆ. ಪೊಲೀಸರು ಕಾನೂನಿನ ಅಡಿಯಲ್ಲಿ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮಠದಲ್ಲೇ ಮುರುಘಾಶ್ರೀ ಬಂಧನ

    ಇದೇ ವೇಳೆ ಪ್ರಧಾನಿ ಭೇಟಿ ಕುರಿತು ಪ್ರತಿಕ್ರಿಯಿಸಿದ ಸಚಿವರು, ಪ್ರಧಾನಿ ಮೋದಿ ಮಂಗಳೂರಿಗೆ ಬರುತ್ತಾರೆ. ಸರ್ಕಾರಿ ಕಾರ್ಯಕ್ರಮ ಉದ್ಘಾಟನೆ ಮಾಡುತ್ತಾರೆ. ನಾನೂ, ಸಿಎಂ, ಯಡಿಯೂರಪ್ಪ ಅವರು ಸ್ಪೆಷಲ್ ಫ್ಲೈಟ್ ನಲ್ಲಿ ಹೋಗುತ್ತಿದ್ದೇವೆ. ಕರ್ನಾಟಕದಲ್ಲಿ ಹೊಸ ಹೊಸ ಯೋಜನೆಗಳು ಬರುತ್ತಿವೆ. ಪ್ರಧಾನ ಮಂತ್ರಿಗಳು ಬರ್ತಿರೋದು ಖುಷಿ ವಿಚಾರ. ಅವರ ಜೊತೆ ಕರ್ನಾಟಕ ರಾಜಕೀಯ ಬೆಳವಣಿಗೆ, ಮುಂದಿನ ಪ್ಲಾನ್ ಗಳ ಬಗ್ಗೆ ಚರ್ಚೆ ಮಾಡುತ್ತೇವೆ. ಯು.ಪಿ ಸಿಎಂ ಯೋಗಿ ಆದಿತ್ಯನಾಥ್ ಕೂಡ ಬಂದಿದ್ದಾರೆ. ಎಲೆಕ್ಷನ್ ಟೈಮ್ ನಲ್ಲಿ ಅವರು ಬಂದಿರೋದು ಪಕ್ಷಕ್ಕೆ ಪ್ಲಸ್ ಪಾಯಿಂಟ್ ಎಂದರು.

    MODI_ YOGI

    ಸಿದ್ದರಾಮಯ್ಯರಿಂದ ವ್ಯಂಗ್ಯವಾಗಿ ಟ್ವೀಟ್ ಮಾಡಿ ಮೋದಿಗೆ ಸ್ವಾಗತ ವಿಚಾರ ಸಂಬಂಧ ಮಾತನಾಡಿ, ಈಗಾಗಲೇ ಕಾಂಗ್ರೆಸ್ ನಲ್ಲಿ ಸೋಲಿನ ಭೀತಿ ಶುರುವಾಗಿದೆ. ದೊಡ್ಡ ದೊಡ್ಡ ನಾಯಕರು ಪಕ್ಷದಿಂದ ಪಲಾಯನ ಮಾಡುತ್ತಿದ್ದಾರೆ. ಈಗಾಗಲೇ ಗುಲಾಬ್ ನಬಿ ಅಜಾದ್ ಬಿಟ್ಟೋಗಿದ್ದಾರೆ. ರಾಮನಗರ, ಕೋಲಾರದಲ್ಲಿ ಈಗಾಗಲೇ ಸೋಲಿನ ಭೀತಿ ಅವರಿಗೆ ಗೊತ್ತಾಗುತ್ತಿದೆ. ಅವರಿಗೆ ಇನ್ಮೇಲೆ ತಾವೂ ಗೆಲ್ಲೋದೇ ಇಲ್ಲಾ ಅನ್ನೋದು ಗೊತ್ತಾಗಿದೆ. ಇನ್ಮೇಲೆ ಅವರು ಕಾಂಗ್ರೆಸ್ ಬಿಟ್ಟೋಗೋರನ್ನ ಹಿಡಿದಿಟ್ಟುಕೊಳ್ಳಬೇಕು ಎಂದು ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ಸೆಪ್ಟೆಂಬರ್ 2ರಂದು ಪ್ರಧಾನಿ ಮೋದಿ ಮಂಗಳೂರಿಗೆ ಭೇಟಿ

    ಸೆಪ್ಟೆಂಬರ್ 2ರಂದು ಪ್ರಧಾನಿ ಮೋದಿ ಮಂಗಳೂರಿಗೆ ಭೇಟಿ

    ಬೆಂಗಳೂರು/ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ.

    ನವ ಮಂಗಳೂರು ಬಂದರು ಪ್ರಾಧಿಕಾರದ ಕಾರ್ಯಕ್ರಮಕ್ಕೆ ಮೋದಿಗೆ ಆಹ್ವಾನ ನೀಡಲಾಗಿದೆ. ಎನ್‍ಎಂಪಿಎದ ಹಲವು ಯೋಜನೆಗಳ ಉದ್ಘಾಟನೆಗಾಗಿ ಆಹ್ವಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಬರುವುದಾಗಿ ಪ್ರಧಾನಿಯವರು ಒಪ್ಪಿಕೊಂಡಿದ್ದಾರೆ.

    ಮಂಗಳೂರು ಭೇಟಿ ಕುರಿತು ಪ್ರಧಾನಿ ಕಚೇರಿಯಿಂದ ಅಧಿಕೃತವಾಗಿದ್ದು, ಮಂಗಳೂರು ಪ್ರವಾಸ ಕಾರ್ಯಕ್ರಮ ಪಟ್ಟಿ ಅಂತಿಮಗೊಳಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ಮನೀಶ್ ಸಿಸೋಡಿಯಾ ಭಾರತ ರತ್ನಕ್ಕೆ ಅರ್ಹರು: ಅರವಿಂದ್ ಕೇಜ್ರಿವಾಲ್

    Live Tv
    [brid partner=56869869 player=32851 video=960834 autoplay=true]

  • ಕೇಂದ್ರ, ರಾಜ್ಯ ಸರ್ಕಾರ ಯಾವುದೇ ಆಡಳಿತವಾಗಲಿ ಕಾಲಕ್ಕೆ ತಕ್ಕಂತೆ ಕೆಲಸ ಮಾಡಬೇಕು: ಮೋದಿ

    ಕೇಂದ್ರ, ರಾಜ್ಯ ಸರ್ಕಾರ ಯಾವುದೇ ಆಡಳಿತವಾಗಲಿ ಕಾಲಕ್ಕೆ ತಕ್ಕಂತೆ ಕೆಲಸ ಮಾಡಬೇಕು: ಮೋದಿ

    ನವದೆಹಲಿ: ದೇಶದ ಎಲ್ಲ ಭಾಗದಲ್ಲೂ ಒಂದಲ್ಲ ಒಂದು ರೂಪದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ. ವಿಶ್ವದ ಮೂಲೆ ಮೂಲೆಯಲ್ಲಿರುವ ಭಾರತೀಯರು ಧ್ವಜಾರೋಹಣ ಮಾಡುತ್ತಿದ್ದಾರೆ. ಅನಿವಾಸಿ ಭಾರತೀಯರಿಗೂ ನಾನು ಶುಭಾಶಯ ಕೋರುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಸ್ವಾತಂತ್ರ್ಯ ದಿನದ ಶುಭಾಶಯಗಳನ್ನು ತಿಳಿಸಿದ್ದಾರೆ.

    ಇಂದು ಬೆಳಗ್ಗೆ ರಾಜಘಾಟ್ ಗೆ ಆಗಮಿಸಿ ಮಹಾತ್ಮ ಗಾಂಧಿ ಸಮಾಧಿಗೆ ನಮನ ಸಲ್ಲಿಸಿದ ಬಳಿಕ ಕೆಂಪುಕೋಟೆಗೆ ತೆರಳಿ ಮಾತನಾಡಿದ ಅವರು, ಕೇಂದ್ರ, ರಾಜ್ಯ ಸರ್ಕಾರ, ಯಾವುದೇ ಆಡಳಿತವಾಗಲಿ ಕಾಲಕ್ಕೆ ತಕ್ಕಂತೆ ಕೆಲಸ ಮಾಡಬೇಕು. ದೇಶದ ಅಭಿವೃದ್ಧಿಗೆ ತಕ್ಕಂತೆ ಕೆಲಸ ಮಾಡಬೇಕು. ದೇಶದ ಜನರನ್ನು ಕಾಯಿಸಲು ಸಾಧ್ಯವಿಲ್ಲ ಎಂದರು.

    ಗುಲಾಮಿತನದ ವಿರುದ್ಧ ಸಾಕಷ್ಟು ಜನರು ಹೋರಾಟ ಮಾಡುತ್ತಿದ್ದಾರೆ. ಜೈಲು ಶಿಕ್ಷೆ ಅನುಭವಿಸಿದ್ದಾರೆ, ಯುದ್ಧ ಮಾಡಿದ್ದಾರೆ, ಪ್ರಾಣ ತ್ಯಾಗ ಮಾಡಿದ್ದಾರೆ. ಅಂತಹ ಮಹನೀಯರ ನೆನಪು ಮಾಡಿಕೊಳ್ಳುವುದು ನಮ್ಮ ಕರ್ತವ್ಯ. ಜೊತೆಗೆ ಅವರ ಕನಸುಗಳನ್ನು ಈಡೇರಿಸಬೇಕಿದೆ. ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ಹಲವಾರು ಮಹಿಳೆಯರು ದೇಶ ಮಹಿಳೆಯ ಶಕ್ತಿ ಏನು ಎನ್ನುವುದು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದರು.

    ಅಂಬೇಡ್ಕರ್, ನೆಹರೂ, ಸರ್ದಾರ್ ಪಟೇಲ್ ಸೇರಿ ಹಲವಾರು ನಾಯಕರು ಸ್ವಾತಂತ್ರ್ಯ ಭಾರತವನ್ನು ಕಟ್ಟಿದ್ದಾರೆ. ನಾವು ಅವರಿಗೂ ನಮನಗಳನ್ನು ಸಲ್ಲಿಸಬೇಕು. ದೇಶದಲ್ಲಿ ಲಕ್ಷಾಂತರ ಕಾರ್ಯಕ್ರಮಗಳು ನಡೆದಿವೆ. ಅಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮ ನಡೆದಿದೆ. ಏಕ ಉದ್ದೇಶದ ಇಂತಹ ಕಾರ್ಯಕ್ರಮ ನಡೆದಿರುವುದು ಇದೇ ಮೊದಲು. ಈ ಮೂಲಕ ಮಹನೀಯರ ನೆನಪು ಮಾಡಿಕೊಳ್ಳುವ ಪ್ರಯತ್ನ ಆಗಿದೆ. ಅವರಿಗೆ ಗೌರವ ಸಲ್ಲಿಸುವ ಕೆಲಸವೂ ಆಗಿದೆ. ನಿನ್ನೆ ಭಾರತ ಇಬ್ಭಾಗವಾದ ದಿನವನ್ನು ಆಚರಿಸಿದೆ ಎಂದು ತಿಳಿಸಿದರು.

    75 ವರ್ಷದ ಈ ಯಾತ್ರೆ ಹಲವು ಏಳು ಬೀಳು ಕಂಡಿದೆ. ಸುಖ-ದುಃಖಗಳನ್ನು ಕಂಡಿದೆ. ಇವುಗಳ ನಡುವೆ ಭಾರತವನ್ನು ಕಟ್ಟಿದೆ. ಎಲ್ಲೂ ಸೋಲನ್ನು ಒಪ್ಪಿಕೊಂಡಿಲ್ಲ. ಸ್ವಾತಂತ್ರ್ಯಕ್ಕೂ ಮುನ್ನ ಸಾಕಷ್ಟು ಕುತಂತ್ರಗಳನ್ನು ಮಾಡಲಾಯ್ತು. ಬ್ರಿಟಿಷ್‍ರು ಭಾರತ ಬಿಟ್ಟು ಹೋದರೇ ಭಾರತ ಒಡೆದು ಹೋಗುತ್ತದೆ. ನಾಗರಿಕ ಯುದ್ಧವಾಗುತ್ತೆ ಎಂದು ಭಯ ಹುಟ್ಟಿಸಿದರು. ಆದರೆ ಇದು ಹಿಂದೂಸ್ತಾನ್, ಇಲ್ಲಿ ಯಾವುದು ಆಗಲಿಲ್ಲ ಎಂದು ಮೋದಿ ನುಡಿದರು.

    ಸ್ವಾತಂತ್ರ್ಯದ ಬಳಿಕ ಸಾಕಷ್ಟು ಸಂಕಷ್ಟ ಎದುರಿಸಿದೆ. ಕೆಲವೊಮ್ಮೆ ಅನ್ನದ ಸಮಸ್ಯೆ, ಇನ್ನು ಕೆಲವೊಮ್ಮೆ ಯುದ್ಧ ಹೀಗೆ ಹಲವು ಸಂಕಷ್ಟಗಳ ನಡುವೆ ದೇಶ ಎದ್ದು ನಿಂತಿದೆ. ವಿವಿಧತೆಯಲ್ಲಿ ಏಕತೆ ಹೊಂದಿದೆ. ಪ್ರಜಾಪ್ರಭುತ್ವದ ತಾಯಿಯಾಗಿದೆ. ಸ್ವತಂತ್ರ ಸಿಕ್ಕಿದ ನಂತರ ಜನಿಸಿ ಪ್ರಧಾನಿಯಾದ ಮೊದಲ ವ್ಯಕ್ತಿ ನಾನು. ದೇಶದ ಜನರು ನನಗೆ ಆರ್ಶೀವಾದ ಮಾಡಿದರು. ದೇಶದ ನಿರೀಕ್ಷೆಗಳನ್ನು ಅರಿತು ಕೆಲಸ ಮಾಡುವ ಪ್ರಯತ್ನ ಮಾಡುತ್ತಿದ್ದೇನೆ. ಎಲ್ಲ ವರ್ಗದ ಜನರ ಬಗ್ಗೆ ಚಿಂತಿಸುತ್ತಿದ್ದೇನೆ. ಮಹಾತ್ಮಾ ಗಾಂಧಿಅವರ ಚಿಂತನೆಯಂತೆ ಸಮಾಜದ ಕಟ್ಟ ಕಡೆಯ ವ್ಯಕ್ತಿ ಬಗ್ಗೆ ಚಿಂತಿಸಿದ್ದೇನೆ ಎಂದು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ಭವ್ಯ ಭಾರತಕ್ಕೆ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ – ದೇಶವಾಸಿಗಳಿಗೆ ಪ್ರಧಾನಿ ಶುಭಾಶಯ

    ಭವ್ಯ ಭಾರತಕ್ಕೆ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ – ದೇಶವಾಸಿಗಳಿಗೆ ಪ್ರಧಾನಿ ಶುಭಾಶಯ

    ನವದೆಹಲಿ: ಬ್ರಿಟಿಷರ ಕಪಿಮುಷ್ಠಿ, ದಬ್ಬಾಳಿಕೆ, ದೌರ್ಜನ್ಯದಿಂದ ದೇಶ ಮುಕ್ತಿಗೊಂಡು ಇಂದಿಗೆ 75 ವರ್ಷಗಳು. ಈ ಹಿನ್ನೆಲೆಯಲ್ಲಿ, 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅಮೃತ ಮಹೋತ್ಸವವನ್ನು ದೇಶಾದ್ಯಂತ ಐತಿಹಾಸಿಕ, ಸ್ಮರಣಾತ್ಮಕವಾಗಿ ಆಚರಿಸಲಾಗ್ತಿದೆ.

    ಪ್ರತಿ ಭಾರತೀಯನೂ ಹೆಮ್ಮೆಯಿಂದ ಸಂಭ್ರಮಿಸುವಂತಹ, ಸ್ವಾತಂತ್ರ್ಯಕ್ಕಾಗಿ ಪ್ರಾಣ ತ್ಯಾಗ ಮಾಡಿದವರ ಸ್ಮರಿಸುವ ದಿನ. ಪ್ರಧಾನಿ ಮೋದಿ ಅವರ `ಹರ್ ಘರ್ ತಿರಂಗ’ ಅಭಿಯಾನಕ್ಕೆ ವ್ಯಾಪಕ ಸ್ಪಂದನೆ ಸಿಕ್ಕಿದ್ದು ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ತ್ರಿವರ್ಣ ಧ್ವಜ ಹಾರಾಡ್ತಿದೆ.

    ಈಗಾಗಲೇ ಟ್ವಿಟರ್‍ನಲ್ಲಿ ದೇಶವಾಸಿಗಳಿಗೆ ಅಮೃತೋತ್ಸವದ ಶುಭಾಶಯ ಕೋರಿರುವ ಪ್ರಧಾನಿ ಮೋದಿ, ಇದೊಂದು ಅತ್ಯಂತ ವಿಶೇಷವಾದ ಸ್ವಾತಂತ್ರ್ಯೋತ್ಸವ. ಜೈ ಹಿಂದ್ ಅಂತ ಟ್ವೀಟ್ ಮಾಡಿದ್ದಾರೆ. ಇತ್ತ ದೆಹಲಿಯ ಕೆಂಪುಕೋಟೆ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರು ಸತತ 9ನೇ ಬಾರಿಗೆ ಧ್ವಜಾರೋಹಣ ಮಾಡಿದ್ದಾರೆ.

    75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಧ್ವಜಾರೋಹಣ ಬಳಿಕ ಪ್ರಧಾನಿ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದು, ಭಾಷಣದ ಮೇಲೆ ಹಲವು ನಿರೀಕ್ಷೆಗಳನ್ನು ದೇಶವಾಸಿಗಳು ಇಟ್ಟುಕೊಂಡಿದ್ದಾರೆ. ಅಮೃತ ಮಹೋತ್ಸವ ಹೊತ್ತಲ್ಲಿ ವಿಶೇಷ ಘೋಷಣೆ ಮಾಡುವ ಸಾಧ್ಯತೆ ಇದೆ.

    ಇತ್ತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಮೇಲೆ ಉಗ್ರರ ಕರಿಛಾಯೆ ಬಿದ್ದಿದೆ. ಕೆಲದಿನಗಳಿಂದ ಕಾಶ್ಮೀರದಲ್ಲಿ ಉಗ್ರದಾಳಿ, ಪಂಜಾಬ್-ಉತ್ತರ ಪ್ರದೇಶಗಳಲ್ಲಿ ಪಾಕ್ ನಂಟಿನ ಉಗ್ರರ ಬಂಧನದ ಹಿನ್ನೆಲೆಯಲ್ಲಿ ದೆಹಲಿಯ ಕೆಂಪುಕೋಟೆಯಲ್ಲಿ ಭದ್ರತಾ ಪಡೆಗಳು ಅಭೇದ್ಯ ಕೋಟೆ ನಿರ್ಮಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]