Tag: PM

  • ಶಿಂಜೋ ಅಬೆ ಹತ್ಯೆಗೆ ಕಾರಣ ತಿಳಿಸಿದ ಯಮಗಾಮಿ – ತಾನೇ ತಯಾರಿಸಿದ್ದ ಗನ್ ಬಳಕೆ

    ಶಿಂಜೋ ಅಬೆ ಹತ್ಯೆಗೆ ಕಾರಣ ತಿಳಿಸಿದ ಯಮಗಾಮಿ – ತಾನೇ ತಯಾರಿಸಿದ್ದ ಗನ್ ಬಳಕೆ

    ಟೋಕಿಯೋ: ಗುಂಡೇಟು ತಿಂದು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿ ಮೃತಪಟ್ಟ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ (62) ಹಂತಕ ಟೆಟ್ಸುಯಾ ಯಮಗಾಮಿ ಪೊಲೀಸರ ಮುಂದೆ ಹತ್ಯೆಗೆ ಕಾರಣ ತಿಳಿಸಿದ್ದಾನೆ.

    ನಿನ್ನೆ ಜಪಾನ್ ಸಂಸತ್‍ನ ಮೇಲ್ಮನೆಗೆ ಚುನಾವಣೆ ನಡೆಯುತ್ತಿದ್ದ ಪ್ರಚಾರದ ವೇಳೆ ಶಿಂಜೋ ಅಬೆ ಹಿಂದೆ 10 ಅಡಿ ದೂರದಲ್ಲಿ ನಿಂತಿದ್ದ ಟೆಟ್ಸುಯಾ ಯಮಗಾಮಿ 2 ಬಾರಿ ಗುಂಡು ಹಾರಿಸಿ ಹತ್ಯೆ ಮಾಡಿದ್ದ. ಹಂತಕನನ್ನು ಕೂಡಲೇ ಪೊಲೀಸರು ಬಂಧಿಸಿದ್ದರು. ಬಳಿಕ ತನಿಖೆಯಲ್ಲಿ ಆರೋಪಿ ನಾರಾ ಸಿಟಿಯ ನಿವಾಸಿಯಾಗಿದ್ದು ನೌಕಾಸೇನೆಯ ಮಾಜಿ ಅಧಿಕಾರಿಯಾಗಿದ್ದ. ಜಪಾನೀಸ್ ನೌಕಾಪಡೆಯಾಗಿರುವ ಜಪಾನೀಸ್ ಮಾರಿಟೈಮ್ ಸೆಲ್ಫ್ ಡಿಫೆನ್ಸ್ ಫೋರ್ಸ್ (JMSDF)ನಲ್ಲಿ 2005ರ ವರೆಗೆ ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ ಬಳಿಕ ಯಮಗಾಮಿ ಕೆಲಸವಿಲ್ಲದೆ ಜೀವನ ಸಾಗಿಸುತ್ತಿದ್ದ. ಘಟನೆಗೆ ಮನೆಯಲ್ಲಿ ತಯಾರಿಸಿದ ದೇಸಿ ಗನ್ ಬಳಕೆ ಮಾಡಿ ಎರಡು ಸುತ್ತು ಗುಂಡು ಹಾರಿಸಿ ಶಿಂಜೋ ಅಬೆಯನ್ನು ಹತ್ಯೆ ಮಾಡಿದ್ದ. ಇದನ್ನೂ ಓದಿ: ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡೇಟು – ಆಸ್ಪತ್ರೆಯಲ್ಲಿ ನಿಧನ

     

    ಹತ್ಯೆಯ ಬಳಿಕ ಯಮಗಾಮಿಯನ್ನು ನಾರಾದ ನಿಶಿ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಿದಾಗ ಹತ್ಯೆಗೆ ಕಾರಣ ತಿಳಿಸಿದ್ದಾನೆ. ಯಮಗಾಮಿ ಸೇನೆಯಲ್ಲಿ ಸೇವೆಸಲ್ಲಿಸಿದ ಬಳಿಕ ನಿರುದ್ಯೋಗಿಯಾಗಿದ್ದ. ಹಾಗಾಗಿ ನಿರುದ್ಯೋಗದಿಂದ ಬೇಸತ್ತು ಮತ್ತು ಶಿಂಜೋ ಅಬೆಯ ರಾಜಕೀಯ ನಡೆಯಿಂದ ಅಸಮಾಧಾನಗೊಂಡು ಹತ್ಯೆಗೆ ಮುಂದಾಗಿದ್ದ. ಹತ್ಯೆಗಾಗಿ ತಾನೇ ತಯಾರಿಸಿದ್ದ ಗನ್ ಬಳಕೆ ಮಾಡಿದ್ದ ಎಂದು ವಿಚಾರಣೆ ವೇಳೆ ತಿಳಿಸಿದ್ದಾನೆ ಎಂದು ಸ್ಥಳೀಯ ಮಾಧ್ಯಮಗಳು ವರದಿಮಾಡಿವೆ. ಇದನ್ನೂ ಓದಿ: ಅಮರನಾಥ ಮೇಘಸ್ಫೋಟ: ಸಾವಿನ ಸಂಖ್ಯೆ 15ಕ್ಕೆ ಏರಿಕೆ, 40 ಮಂದಿ ನಾಪತ್ತೆ – ಯಾತ್ರೆಯಲ್ಲಿ ಸಿಲುಕಿದವರಿಗೆ ಕರ್ನಾಟಕ ಸರ್ಕಾರದಿಂದ ಸಹಾಯವಾಣಿ

    https://twitter.com/Gretche55113699/status/1545314377812922369

    ಪರವಾನಗಿ ಇಲ್ಲದೆ ಶಸ್ತ್ರಾಸ್ತ್ರ ಹೊಂದುವಂತಿಲ್ಲ:
    ಜಪಾನ್‍ನಲ್ಲಿ ಶಸ್ತ್ರಾಸ್ತ್ರ ಕಾನೂನುಗಳು ಅತ್ಯಂತ ಕಠಿಣವಾಗಿದ್ದು, ಯಾವುದೇ ವ್ಯಕ್ತಿ ಪರವಾನಗಿ ಇಲ್ಲದೆ ಶಸ್ತ್ರಾಸ್ತ್ರ ಹೊಂದುವಂತಿಲ್ಲ. ಪರವಾನಗಿ ಕೂಡ ಜಪಾನ್‍ನಲ್ಲಿ ಅಷ್ಟು ಸುಲಭವಾಗಿ ಸಿಗುವುದಿಲ್ಲ. ಹಾಗಾಗಿ ಯಮಗಾಮಿ ತಾನೇ ಗನ್ ತಯಾರಿಸಿರುವುದಾಗಿ ಒಪ್ಪಿಕೊಂಡಿದ್ದಾನೆ. ಅಚ್ಚರಿ ಎಂದರೆ ಅಬೆ ಹತ್ಯೆಯ ಬಳಿಕ ಯಮಗಾಮಿ ಓಡಿ ಹೋಗಲೂ ಕೂಡ ಯತ್ನಿಸಿಲ್ಲ. ಕೂಡಲೇ ಆತನನ್ನು ಭದ್ರತಾ ಸಿಬ್ಬಂದಿ ಬಂಧಿಸಿದ್ದರು. ಜಪಾನ್ ಇತಿಹಾಸದಲ್ಲೇ ಸುಮಾರು ನೂರು ವರ್ಷಗಳಲ್ಲಿ ಜಪಾನ್‍ನ ಹಾಲಿ ಅಥವಾ ಮಾಜಿ ಪ್ರಧಾನಿಯೊಬ್ಬರನ್ನು ಹತ್ಯೆ ಮಾಡಿರುವುದು ಇದೇ ಮೊದಲು ಎನ್ನಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಪ್ರಧಾನಿಗೆ ವರದಿ ಕೊಟ್ಟ ಬಳಿಕ ಕ್ವಾಲಿಟಿ ಚೆಕ್‍ಗಿಳಿದ ಬಿಬಿಎಂಪಿ

    ಪ್ರಧಾನಿಗೆ ವರದಿ ಕೊಟ್ಟ ಬಳಿಕ ಕ್ವಾಲಿಟಿ ಚೆಕ್‍ಗಿಳಿದ ಬಿಬಿಎಂಪಿ

    ಬೆಂಗಳೂರು: ಪ್ರಧಾನಿ ಮೋದಿಗಾಗಿ ರೆಡಿ ಮಾಡಿದ್ದ ರಸ್ತೆ ಕಿತ್ತೋಗಿ ಪ್ರಧಾನಿ ವರದಿ ಕೇಳಿದಾಗ ಬಿಬಿಎಂಪಿ ಕಳಪೆ ರಸ್ತೆಯ ಬಗ್ಗೆ ಒಪ್ಪಿಕೊಳ್ಳದೇ ಪೈಪ್ ಲೈನ್ ಸೋರಿಕೆ ಅಂತಾ ಜಲಮಂಡಳಿ ಮೇಲೆ ಗೂಬೆ ಕೂರಿಸಿ ವರದಿ ಕೊಟ್ಟಿದ್ದಾಯ್ತ. ಆದರೆ ವರದಿ ಕೊಟ್ಟ ಮೇಲೆ ಸೈಲೆಂಟ್ ಆಗಿ ಈಗ ರೋಡ್ ಕ್ವಾಲಿಟಿ ಚೆಕ್ಕಿಂಗ್‍ಗೆ ಬಿಬಿಎಂಪಿ ಇಳಿದಿದ್ದು, ಪಬ್ಲಿಕ್ ಟಿವಿ ಕ್ಯಾಮರಾದಲ್ಲಿ ರೆಡ್ ಹ್ಯಾಂಡ್ ಆಗಿ ಸೆರೆಯಾಗಿದೆ.

    ಬಿಬಿಎಂಪಿಯು ರಸ್ತೆ ರಿಪೋರ್ಟ್ ವಿಚಾರದಲ್ಲಿ ಎಷ್ಟೆಲ್ಲ ಕಳ್ಳಾಟವಾಡಿತ್ತು ಅನ್ನೋದು ಬಹಿರಂಗವಾಗಿ ಗೊತ್ತಾಗಿದೆ. ಪ್ರಧಾನಿ ಕಚೇರಿಗೆ ಸುಳ್ಳು ರಿಪೋರ್ಟ್ ಅಂತಾ ಪಬ್ಲಿಕ್ ಟಿವಿಯಲ್ಲೂ ಸುದ್ದಿ ಪ್ರಸಾರವಾಗಿತ್ತು. ಈಗ ಸೈಲೆಂಟ್ ಆಗಿ ಜ್ಞಾನಭಾರತಿ ಸ್ಕೂಲ್ ಆಫ್ ಎಕಾನಾಮಿಕ್ಸ್ ಬಳಿ ರಸ್ತೆ ಕುಸಿತವಾದ ಭಾಗದಲ್ಲಿ ರಸ್ತೆಯ ಗುಣಮಟ್ಟದ ಸ್ಯಾಂಪಲ್‍ನ್ನು ಲ್ಯಾಬ್‍ಗೆ ರವಾನಿಸಿದೆ. ಜಲಮಂಡಳಿ ಪೈಪ್ ಲೈನ್ ನೀರು ಸೋರಿಕೆ ಅಂತಾ ಪುಂಖಾನುಪುಂಖವಾಗಿ ಕಥೆ ಹೊಡೆದ ಬಿಬಿಎಂಪಿ ಕಮೀಷನರ್ ಈಗ ಟಿವಿಸಿಸಿ ಸದಸ್ಯರ ಮೂಲಕ ಜ್ಞಾನಭಾರತಿ ಹಾಗೂ ವಿವಿ ಅವರಣದ ಒಟ್ಟು ಐದೂವರೆ ಕಿಲೋ ಮೀಟರ್ ರಸ್ತೆಯ ಸ್ಯಾಂಪಲ್ ಸಂಗ್ರಹಿಸಿ, ಲ್ಯಾಬ್‍ಗೆ ಕಳಿಸಿದೆ. ಇನ್ನು ನಾಲ್ಕೈದು ದಿನದಲ್ಲಿ ವರದಿಯೂ ಬರಲಿದೆ. ಇದನ್ನೂ ಓದಿ: ಇದು ಮೋದಿ ಓಡಾಡಿದ ರಸ್ತೆಯೇ ಅಲ್ಲ – BBMP ಹೈಡ್ರಾಮಾ

    ಬೆಟಮಿನ್ ಹಾಗೂ ಥಿಕ್‍ನೆಸ್ ಬಗ್ಗೆ ಟೆಸ್ಟ್ ಮಾಡ್ತಾ ಇದ್ದೀವಿ. ಮುಖ್ಯ ಎಂಜಿನಿಯರ್ ಸೂಚನೆಯ ಮೇರೆಗೆ ಜ್ಞಾನಭಾರತಿ ರಸ್ತೆಯ ರೋಡ್‍ನ ಸ್ಯಾಂಪಲ್ ಚೆಕ್ ಮಾಡ್ತಾ ಇದ್ದೀವಿ ಅಂತಾ ಸ್ವತಃ ಸಿಬ್ಬಂದಿ ಬಾಯ್ಬಿಟ್ಟಿದ್ದಾರೆ. ಪ್ರಧಾನಿಗೆ ರಿಪೋರ್ಟ್ ಕೊಟ್ಟ ಮೇಲ್ಯಾಕೆ ಈ ಕ್ವಾಲಿಟಿ ಚೆಕ್ಕಿಂಗ್ ಮುಂಚೆಯೇ ಮಾಡಬೇಕಾಗಿತ್ತಲ್ಲ ಎನ್ನುವ ಪ್ರಶ್ನೆಗೆ ಅದೆಲ್ಲ ನಮ್ಗೆ ಗೊತ್ತಿಲ್ಲ ಅಂತಾ ಎಸ್ಕೇಪ್ ಆದರು.

    Live Tv

  • ಜೂನ್ 20 ರಂದು ಪ್ರಧಾನಿ ಕಾರ್ಯಕ್ರಮ- ಆಯ್ದ ಮಾರ್ಗಗಳ ಕಾಲೇಜುಗಳಿಗೆ ರಜೆ

    ಜೂನ್ 20 ರಂದು ಪ್ರಧಾನಿ ಕಾರ್ಯಕ್ರಮ- ಆಯ್ದ ಮಾರ್ಗಗಳ ಕಾಲೇಜುಗಳಿಗೆ ರಜೆ

    ಬೆಂಗಳೂರು: ಸೋಮವಾರ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಹೀಗಾಗಿ ಆಯ್ದ ಮಾರ್ಗಗಳ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

    ಹೌದು. ನರೇಂದ್ರ ಮೋದಿ ಅವರು ಜೂನ್ 20 ರಂದು ನಗರಕ್ಕೆ ಆಗಮಿಸುತ್ತಿದ್ದಾರೆ. ಅನೇಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ಅವರು ಸಂಚರಿಸಲಿರುವ ಮಾರ್ಗದಲ್ಲಿ ಬರುವ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅಂದು ಬಿಗಿಭದ್ರತೆಯ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

    ಶನಿವಾರ ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. ಇದರಂತೆ ಪ್ರಧಾನಿ ಹಾದು ಹೋಗಲಿರುವ ಐಐಎಸ್ಸಿ, ಗೊರಗುಂಟೆ ಪಾಳ್ಯ, ಸಿಎಂಟಿಐ, ವರ್ತುಲ ರಸ್ತೆ, ಡಾ.ರಾಜಕುಮಾರ್ ಸ್ಮಾರಕ ಮೇಲ್ಸೇತುವೆ, ಲಗ್ಗೆರೆ ಸೇತುವೆ, ನಾಯಂಡಹಳ್ಳಿ, ಮೈಸೂರು ರಸ್ತೆ ಆರ್.ವಿ.ಕಾಲೇಜು, ನಾಗರಬಾವಿ, ಸುಮನಹಳ್ಳಿ ಮೇಲ್ಸೇತುವೆ, ಎಂಇಐ ಜಂಕ್ಷನ್, ಗೋವರ್ಧನ್ ಚಿತ್ರಮಂದಿರ, ಯಶವಂತಪುರ ಮತ್ತು ಜಕ್ಕೂರು ವಿಮಾನ ನಿಲ್ದಾಣ ಮಾರ್ಗಗಳ ಸುತ್ತಮುತ್ತಲಿನ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಈ ರಜೆ ಅನ್ವಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

    Live Tv

  • ಇಮ್ರಾನ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ – ಸರ್ಕಾರ ಪತನಕ್ಕೆ ಕ್ಷಣಗಣನೆ

    ಇಮ್ರಾನ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ – ಸರ್ಕಾರ ಪತನಕ್ಕೆ ಕ್ಷಣಗಣನೆ

    ಇಸ್ಲಾಮಾಬಾದ್: ಪಾಕಿಸ್ಥಾನದಲ್ಲಿ ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ಪತನಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ಪಾಕ್ ಸಂಸತ್‍ನಲ್ಲಿ ಅವಿಶ್ವಾಸ ನಿರ್ಣಯ ಮಂಡನೆಯಾಗಿದೆ. ಒಂದು ವಾರದ ಒಳಗೆ ಪ್ರಧಾನಿ ಸ್ಥಾನಕ್ಕೆ ಇಮ್ರಾನ್ ಖಾನ್ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ.

    ಅವಿಶ್ವಾಸ ನಿರ್ಣಯಕ್ಕೆ 161 ಸದಸ್ಯರು ಬೆಂಬಲ ಸೂಚಿಸಿದ್ದಾರೆ. ಇಮ್ರಾನ್ ಖಾನ್ ವಿರುದ್ಧ ಎರಡೂ ಡಜನ್‍ಗೂ ಹೆಚ್ಚು ಸಂಸದರ ಬಂಡಾಯ ಎದ್ದಿದ್ದಾರೆ. ಇದೀಗ ಇಮ್ರಾನ್ ಖಾನ್ ನೇತೃತ್ವದ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಸಮ್ಮಿಶ್ರ ಸರ್ಕಾರ ಬಹುಮತ ಕಳೆದುಕೊಂಡಿದೆ. ಇದನ್ನೂ ಓದಿ: ಮೆಕ್ಸಿಕೋದಲ್ಲಿ ಗುಂಡಿನ ದಾಳಿ – 19 ಜನರ ಸಾವು

    342 ಸ್ಥಾನಗಳ ಪೈಕಿ ಬಹುಮತಕ್ಕೆ 172 ಸ್ಥಾನಗಳು ಅವಶ್ಯಕತೆ ಇತ್ತು. ಸದ್ಯ ಇಮ್ರಾನ್ ಖಾನ್ ಪರ 155 ಸಂಸದರಿದ್ದಾರೆ. ಕಲಾಪವನ್ನು ಮಾರ್ಚ್ 31ರ ವರೆಗೆ ಮುಂದೂಡಲಾಗಿದ್ದು, ಏಪ್ರಿಲ್ 3 ಅಥವಾ 4ರಂದು ಅವಿಶ್ವಾಸ ನಿರ್ಣಯದ ಮೇಲೆ ಮತದಾನ ನಡೆಯುವ ಸಾಧ್ಯತೆ ಇದೆ.

    ಸದ್ಯ ವಿಪಕ್ಷ ನಾಯಕರಾಗಿರುವ ಪಾಕಿಸ್ತಾನ ಮುಸ್ಲಿಂ ಲೀಗ್ ನವಾಜ್ (ಪಿಎಂಎಲ್-ಎನ್) ಪಕ್ಷದ ಷಹಬಾಜ್ ಷರೀಫ್ ಪಾಕಿಸ್ತಾನದ ಮುಂದಿನ ಪ್ರಧಾನಿ ಆಗಬಹುದು ಎಂದು ಹೇಳಲಾಗುತ್ತಿದೆ. ಸದ್ಯ ಮಿತ್ರಪಕ್ಷಗಳ ವಿಶ್ವಾಸ ಕಳೆದುಕೊಂಡಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸರ್ಕಾರದ ಭಾಗವಾಗಿದ್ದ ಪಿಎಂಎಲ್ ಕ್ಯೂ ಪಕ್ಷದ ಸದಸ್ಯರು ಸಂಸತ್ ಕಲಾಪದಲ್ಲಿ ವಿಪಕ್ಷಗಳ ಜೊತೆ ಕಾಣಿಸಿಕೊಂಡು ಇಮ್ರಾನ್ ಖಾನ್‍ಗೆ ಶಾಕ್ ನೀಡಿದ್ದಾರೆ. ಇದನ್ನೂ ಓದಿ: ವುಹಾನ್‌ ನಂತರ ಚೀನಾದಲ್ಲಿ ಅತಿದೊಡ್ಡ ಲಾಕ್‌ಡೌನ್: 2.6 ಕೋಟಿ ಜನ ಮನೆಯಲ್ಲೇ ಲಾಕ್

    ಕಾರಣ ಏನು?
    ಇಮ್ರಾನ್‍ಖಾನ್ ನೇತೃತ್ವದ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಸರ್ಕಾರವು ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಿದೆ. ಪಾಕಿಸ್ತಾನ ಅಳಿವಿನ ಅಂಚಿನತ್ತ ಸಾಗುತ್ತಿದೆ ಮತ್ತು ಹಣದುಬ್ಬರ ಸಮಸ್ಯೆ ಎದುರಿಸಲಾಗುತ್ತಿದೆ ಎಂದು ಆರೋಪಿಸಿ ಮಾರ್ಚ್ 8 ರಂದು ವಿರೋಧ ಪಕ್ಷಗಳು ರಾಷ್ಟ್ರೀಯ ಅಸೆಂಬ್ಲಿ ಸಚಿವಾಲಯದ ಮುಂದೆ ಅವಿಶ್ವಾಸ ನಿರ್ಣಯ ಸಲ್ಲಿಸಿದ್ದವು. ಇದರಿಂದಾಗಿ ಮಾರ್ಚ್ 25ರಂದು ಇಮ್ರಾನ್ ಖಾನ್‍ರನ್ನು ಪದಚ್ಯುತಿಗೊಳಿಸಲು ಅವಿಶ್ವಾಸ ಗೊತ್ತುವಳಿ ಮಂಡಿಸಲು ದಿನಾಂಕ ನಿಗದಿಪಡಿಸಲಾಗಿತ್ತು.

    ಪಾಕಿಸ್ತಾನದ ಸಂಸತ್ತು 15 ಅಂಶಗಳ ಅಜೆಂಡಾ ಬಿಡುಗಡೆ ಮಾಡಿತ್ತು. ಇದರಲ್ಲಿ ಅವಿಶ್ವಾಸ ನಿರ್ಣಯ ಗೊತ್ತುವಳಿಯೂ ಸೇರಿದೆ. ಆರ್ಥಿಕತೆಯನ್ನೂ ಇಮ್ರಾನ್ ಖಾನ್ ಸಮರ್ಪಕವಾಗಿ ನಿರ್ವಹಿಸಿಲ್ಲ. ಹಣದುಬ್ಬರ ಪ್ರಮಾಣ ಎರಡಂಕಿಗೆ ಹೆಚ್ಚಾಗಿರುವ ಕಾರಣ ದಿನಬಳಕೆ ವಸ್ತುಗಳ ಬೆಲೆ ಹೆಚ್ಚಾಗಿದೆ. ಜನಸಾಮಾನ್ಯರಲ್ಲಿ ಸರ್ಕಾರದ ಬಗ್ಗೆ ಅಸಮಾಧಾನ ಮನೆಮಾಡಿದ್ದು, ರಾಜಕೀಯ ಭವಿಷ್ಯಕ್ಕೆ ಆತಂಕ ತಂದೊಡ್ಡಿದೆ. ವಿರೋಧ ಪಕ್ಷಗಳ ನಾಯಕರ ವಿರುದ್ಧ ಆಡಳಿತಾರೂಢ ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ನಡೆದುಕೊಂಡ ರೀತಿಯ ಬಗ್ಗೆ ಜನರಲ್ಲಿ ಕೆಟ್ಟ ಅಭಿಪ್ರಾಯ ಮೂಡಿದೆ. ವಿರೋಧ ಪಕ್ಷಗಳು ಒಗ್ಗೂಡಲು ಸಹ ಇದು ಮುಖ್ಯಕಾರಣವಾಗಿದೆ ಎಂಬ ಅಂಶವನ್ನು ಇದರಲ್ಲಿ ಉಲ್ಲೇಖಿಸಲಾಗಿತ್ತು. ಇದನ್ನೂ ಓದಿ: ತಾಲಿಬಾನ್ ಹೊಸ ಕಾನೂನು – ಪುರುಷರೊಂದಿಗೆ ಮಹಿಳೆಯರು ಪಾರ್ಕ್‌ಗೆ ಹೋಗುವಂತಿಲ್ಲ

    ಪಾಕಿಸ್ತಾನದ ಸಂಸತ್ತು 342 ಸದಸ್ಯಬಲ ಹೊಂದಿದೆ. ಅಧಿಕಾರಕ್ಕೆ ಬರಲು 172 ಸದಸ್ಯ ಬಲ ಅಗತ್ಯವಿದೆ. ಇಮ್ರಾನ್ ಖಾನ್‍ರ ಪಿಟಿಐ ನೇತೃತ್ವದ ಮೈತ್ರಿಕೂಟವು ಈ ಹಿಂದೆ 179 ಸದಸ್ಯಬಲ ಹೊಂದಿತ್ತು. ಪಿಟಿಐ ಪಕ್ಷದ 155 ಸಂಸದರು ಸಂಸತ್ತಿನಲ್ಲಿದ್ದರು. ಅವಿಶ್ವಾಸ ಗೊತ್ತುವಳಿಯಲ್ಲಿ ಪಾಲ್ಗೊಳ್ಳುವುದಾಗಿ 3 ಪ್ರಮುಖ ಮಿತ್ರಪಕ್ಷಗಳು ಹೇಳಿಕೆ ನೀಡಿದ್ದವು. ಪಾಕಿಸ್ತಾನದ ಸಂಸತ್ತಿನಲ್ಲಿ ವಿರೋಧ ಪಕ್ಷಗಳು 163 ಸ್ಥಾನಗಳನ್ನು ಹೊಂದಿವೆ. ಪಿಟಿಐ ಪಕ್ಷ ತೊರೆದಿರುವ ಸಂಸದರು ವಿರೋಧ ಪಕ್ಷಗಳೊಂದಿಗೆ ಕೈಜೋಡಿಸಿರುವುದರ ಪರಿಣಾಮ ಇದೀಗ ಇಮ್ರಾನ್ ಖಾನ್ ಪಿಎಂ ಕುರ್ಚಿ ಬಿಟ್ಟು ಕೊಡಬೇಕಾಗಿದೆ.

  • ಬೊಮ್ಮಾಯಿ ಆರೋಗ್ಯ ವಿಚಾರಿಸಿ ಸಲಹೆ ನೀಡಿದ ಪ್ರಧಾನಿ ಮೋದಿ

    ಬೊಮ್ಮಾಯಿ ಆರೋಗ್ಯ ವಿಚಾರಿಸಿ ಸಲಹೆ ನೀಡಿದ ಪ್ರಧಾನಿ ಮೋದಿ

    ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯವನ್ನು ಪ್ರಧಾನಿ ನರೇಂದ್ರ ಮೋದಿಯವರು ವಿಚಾರಿಸಿದ್ದಾರೆ.

    ಇಂದು ಸಂಜೆ 4:30ರ ಸುಮಾರಿಗೆ ಸಿಎಂಗೆ ದೂರವಾಣಿ ಕರೆ ಮಾಡಿರುವ ಪ್ರಧಾನಿ, ಆರೋಗ್ಯ ಹೇಗಿದೆ ಎಂದು ವಿಚಾರಿಸಿದ್ದಾರೆ. ಅಲ್ಲದೆ ಸೂಕ್ತ ಚಿಕಿತ್ಸೆ ಪಡೆಯಿರಿ ಎಂಬ ಸಲಹೆ ನೀಡಿದ್ದಾರೆ. ಸುಮಾರು ಐದು ನಿಮಿಷಗಳ ಕಾಲ ನಡೆದ ಮಾತುಕತೆ ನಡೆದಿದೆ.

    ಇತ್ತ ಬೊಮ್ಮಾಯಿಯವರು ಕೂಡ ತಮಗೆ ಕೋವಿಡ್ ತಗಲಿರುವ ಬಗ್ಗೆ ವಿವರಣೆ ನೀಡಿದ್ದಾರೆ. ತಮ್ಮ ಜೊತೆಗೆ ಕುಟುಂಬದ ಇಬ್ಬರು ಸದಸ್ಯರಿಗೂ ಸೋಂಕು ತಗುಲಿದೆ ಎಂದಿದ್ದಾರೆ. ಈ ವೇಳೆ ಪ್ರಧಾನಿ, ಎಲ್ಲರೂ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳಿ ಎಂದು ಸಲಹೆಯಿತ್ತಿದ್ದಾರೆ.

    ಇದೇ ವೇಳೆ ಸಿಎಂ ಅವರು, ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆಯೂ ಪ್ರಧಾನಿಗಳಿಗೆ ಮಾಹಿತಿ ನಿಡಿದರು. ಇದೀಗ ಬೆಂಗಳೂರಿನಲ್ಲಿ ವರ್ಚುವಲ್ ಆಗಿ ಸಭೆ ನಡೆಸುತ್ತಿದ್ದೇನೆ. ಜನವರಿ 13ರಂದು ಸಂಜೆ ತಾವು ಕರೆದಿರುವ ಕೋವಿಡ್ ವರ್ಚುಯಲ್ ಸಭೆಗೆ ಪೂರ್ವಭಾವಿ ರೂಪದಲ್ಲಿ ಈ ಸಭೆ ನಡೆಸುತ್ತಿದ್ದೇನೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. ಇದನ್ನೂ ಓದಿ: ಬೊಮ್ಮಾಯಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

    ಲಸಿಕೆ ಅಭಿಯಾನವನ್ನು ತೀವ್ರಗೊಳಿಸಲಾಗಿದೆ. ತಜ್ಞರು ನೀಡುವ ಸಲಹೆಗಳನ್ನು ಆಧರಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು. ಹೀಗೆ ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿಯ ಕುರಿತು ಪ್ರಧಾನಿಗಳೀಗೆ ಸಿಎಂ ವಿವರಣೆ ನೀಡಿದರು. ಇದನ್ನೂ ಓದಿ: ಸಿಎಂ ಬಸವರಾಜ ಬೊಮ್ಮಾಯಿ ಪುತ್ರನಿಗೂ ಕೋವಿಡ್

  • ಸ್ವೀಡನ್ ಪ್ರಥಮ ಮಹಿಳಾ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿ ಒಂದೇ ದಿನಕ್ಕೆ ರಾಜೀನಾಮೆ ನೀಡಿದ ಆ್ಯಂಡರ್ಸನ್‌

    ಸ್ವೀಡನ್ ಪ್ರಥಮ ಮಹಿಳಾ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿ ಒಂದೇ ದಿನಕ್ಕೆ ರಾಜೀನಾಮೆ ನೀಡಿದ ಆ್ಯಂಡರ್ಸನ್‌

    ಸ್ಟಾಕ್‌ಹೋಮ್‌: ಸ್ವೀಡನ್‌ ದೇಶದ ಪ್ರಥಮ ಮಹಿಳಾ ಪ್ರಧಾನ ಮಂತ್ರಿ ಮ್ಯಾಗ್ಡಲೀನಾ ಆ್ಯಂಡರ್ಸನ್‌ ಅಧಿಕಾರ ವಹಿಸಿಕೊಂಡ 12 ಗಂಟೆಯೊಳಗಡೆಯೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    ಗ್ರೀನ್ಸ್‌ ಪಕ್ಷವು ಆ್ಯಂಡರ್ಸನ್‌ ಅವರ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿತ್ತು. ಈ ವೇಳೆ ಆಂಡರ್ಸನ್‌ ಅವರನ್ನು ನಾಯಕಿ ಎಂದು ಘೋಷಿಸಿದ ನಂತರ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಆದರೆ ಗ್ರೀನ್ಸ್‌ ಪಕ್ಷವು ಮೈತ್ರಿಯಿಂದ ಹೊರನಡೆದಿದ್ದು, ಆ್ಯಂಡರ್ಸನ್‌ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುವಂತಾಗಿದೆ. ಜೊತೆಗೆ ತಮ್ಮ ಬಜೆಟ್‌ ಮಂಡಿಸುವಲ್ಲಿಯೂ ವಿಫಲರಾಗಿದ್ದಾರೆ. ಇದನ್ನೂ ಓದಿ: ಕತ್ರಿನಾ, ವಿಕ್ಕಿ ಮದುವೆಯಲ್ಲಿ ಅತಿಥಿಗಳ ಮೊಬೈಲ್‌ ಬಳಕೆಗೆ ನಿಷೇಧ

    ವಲಸಿಗರ ವಿರೋಧಿ ಮಸೂದೆಯನ್ನು ಸಂಸತ್‌ನಲ್ಲಿ ಮಂಡಿಸಲಾಯಿತು. ಆದರೆ ಮಸೂದೆಗೆ ಗ್ರೀನ್ಸ್‌ ಪಕ್ಷವು ವಿರೋಧ ವ್ಯಕ್ತಪಡಿಸಿ ಮೈತ್ರಿಯಿಂದ ಹೊರನಡೆದಿದೆ ಎನ್ನಲಾಗಿದೆ. ಇದಾದ ಬಳಿಕ, “ನಾನು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸ್ಪೀಕರ್‌ಗೆ ತಿಳಿಸಿದ್ದೇನೆ” ಎಂದು ಆ್ಯಂಡರ್ಸನ್‌ ಪ್ರತಿಕ್ರಿಯಿಸಿದ್ದಾರೆ.

    ಮೊದಲ ಬಾರಿಗೆ ಬಲಪಂಥೀಯರಿಗಾಗಿ ರೂಪಿಸಿರುವ ಮಸೂದೆ ಇದಾಗಿದೆ. ಅದಕ್ಕೆ ನಮ್ಮ ವಿರೋಧವಿದೆ ಎಂದು ಗ್ರೀನ್ಸ್‌ ಪಕ್ಷವು ತಿಳಿಸಿದೆ. ಇದನ್ನೂ ಓದಿ: ಅಮೆರಿಕ, ಭಾರತದ ತಂತ್ರಕ್ಕೆ ಒಪೆಕ್‌ ಗರಂ – ಮತ್ತೆ ಏರಿಕೆ ಆಗುತ್ತಾ ತೈಲ ಬೆಲೆ?

    ಆಂಡರ್ಸನ್‌ ಅವರು ಬುಧವಾರವಷ್ಟೇ ಪ್ರಧಾನಿಯಾಗಿ ಅಧಿಕಾರಿ ಸ್ವೀಕರಿಸಿದ್ದರು. ರಾಜಕೀಯ ಪಲ್ಲಟದಿಂದಾಗಿ ಮಾರನೇ ದಿನವೇ ರಾಜೀನಾಮೆ ನೀಡಿದ್ದಾರೆ. ಸ್ವತಂತ್ರವಾಗಿ ಸರ್ಕಾರ ರಚಿಸಿ ಮತ್ತೆ ಪ್ರಧಾನಿಯಾಗುವ ಇಂಗಿತವನ್ನೂ ಅವರು ವ್ಯಕ್ತಪಡಿಸಿದ್ದಾರೆ. ‌

  • ಪಕ್ಷ ಬೇರೆಯಾದ್ರೂ ಗುಣಕ್ಕೆ ಮತ್ಸರವಿಲ್ಲ- ಮೋದಿಯನ್ನು ಹೊಗಳಿದ ಪ್ರಮೋದ್ ಮಧ್ವರಾಜ್

    ಪಕ್ಷ ಬೇರೆಯಾದ್ರೂ ಗುಣಕ್ಕೆ ಮತ್ಸರವಿಲ್ಲ- ಮೋದಿಯನ್ನು ಹೊಗಳಿದ ಪ್ರಮೋದ್ ಮಧ್ವರಾಜ್

    ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್ ನಾಯಕ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಹಿರಂಗವಾಗಿ ಗುಣಗಾನ ಮಾಡಿದ್ದಾರೆ. ಈ ವಿಚಾರ ಕರಾವಳಿ ಕಾಂಗ್ರೆಸ್ಸಿನಲ್ಲಿ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ಕಾಂಗ್ರೆಸ್ ವಾಟ್ಸಾಪ್ ಗ್ರೂಪಲ್ಲಿ ಪರ ವಿರೋಧ ಚರ್ಚೆ ಶುರುವಾಗಿದೆ.

    ವರ್ಷದ ಹಿಂದೆ ವೃಂದಾವನಸ್ಥರಾದ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿಯವರಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದೆ. ದೆಹಲಿಯಲ್ಲಿ ಪ್ರಶಸ್ತಿ ಸ್ವೀಕರಿಸಿದ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಉಡುಪಿಗೆ ಆಗಮಿಸಿದ್ದಾರೆ. ಗುರುವಾರ ಸಂಜೆ ಪ್ರಶಸ್ತಿ ಮತ್ತು ಶ್ರೀಗಳ ಸ್ವಾಗತ ಸಮಾರಂಭದಲ್ಲಿ ಅಷ್ಟಮಠಾಧೀಶರು, ಜನಪ್ರತಿನಿಧಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.

    ಈ ಸಂದರ್ಭ ನಡೆದ ಸಭೆಯಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಭಾಗಿಯಾಗಿ ಭಾಷಣ ಮಾಡಿದರು. ಪದ್ಮವಿಭೂಷಣ ಇವತ್ತು ಸ್ವಾಮೀಜಿಯವರನ್ನು ಹುಡುಕಿಕೊಂಡು ಬಂದಿದೆ. ಹಿಂದೆ ಎಲ್ಲಾ ಅರ್ಜಿ ಹಾಕಿದವರಿಗೆ ಪ್ರಶಸ್ತಿ ಕೊಡುವ ಕ್ರಮ ಇತ್ತು. ಇವತ್ತು ನರೇಂದ್ರ ಮೋದಿಯವರ ಸರ್ಕಾರ ಬಂದ ಮೇಲೆ ಪ್ರಶಸ್ತಿಯನ್ನು ಹುಡುಕಿಕೊಂಡು ಹೋಗುವಂತಹ ಸಂದರ್ಭ. ಪಕ್ಷ ಬೇರೆಯಾದರೂ ಗುಣಕ್ಕೆ ಮತ್ಸರ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ನಮ್ಮ ಕುಟುಂಬಕ್ಕೆ MLC ಟಿಕೆಟ್ ಕೊಡಬೇಕು ಅಂತ ಹೇಳಿಲ್ಲ, ಕೇಳಿಲ್ಲ: ಪ್ರಜ್ವಲ್ ರೇವಣ್ಣ

    ನಾನು ವಿರೋಧ ಪಕ್ಷದಲ್ಲಿ ಇರುವವನು. ಆದರೂ ಅವರ ಒಳ್ಳೆಯ ಕೆಲಸಗಳನ್ನು ಶ್ಲಾಘಿಸಲೇಬೇಕು ಎಂದರು. ಈ ಮಾತಿನ ತುಣುಕು ಕರಾವಳಿಯಲ್ಲಿ ಚರ್ಚೆಗೀಡಾಗಿದೆ. ಉಡುಪಿಯ ಕಾಂಗ್ರೆಸ್ ಬಿಜೆಪಿ ವಾಟ್ಸಪ್ ಗ್ರೂಪ್ ಗಳಲ್ಲಿ ವೀಡಿಯೋ ಓಡಾಡುತ್ತಿದೆ. ಸಭೆಯಲ್ಲಿ ಪರ್ಯಾಯ ಅದಮಾರು ಶ್ರೀ, ಪಲಿಮಾರು ಹಿರಿಯ ಕಿರಿಯ ಸ್ವಾಮೀಜಿ, ಸೋದೆ ಸ್ವಾಮೀಜಿ, ಉಡುಪಿ ಶಾಸಕ ರಘುಪತಿ ಭಟ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ರಾಷ್ಟ್ರೀಯ ಮಹಿಳಾ ಆಯೋಗ ಸದಸ್ಯೆ ಶ್ಯಾಮಲಾ ಕುಂದರ್ ವೇದಿಕೆಯಲ್ಲಿ ಇದ್ದರು.

  • ನಿರುದ್ಯೋಗ ದಿನ ಆಚರಿಸಿ ಪಿಎಂಗೆ ನಿಮ್ಮ ಪದವಿ ಪ್ರಮಾಣ ಪತ್ರ ಹಿಂದಿರುಗಿಸಿ: ಡಿ.ಕೆ. ಶಿವಕುಮಾರ್ ಕರೆ

    ನಿರುದ್ಯೋಗ ದಿನ ಆಚರಿಸಿ ಪಿಎಂಗೆ ನಿಮ್ಮ ಪದವಿ ಪ್ರಮಾಣ ಪತ್ರ ಹಿಂದಿರುಗಿಸಿ: ಡಿ.ಕೆ. ಶಿವಕುಮಾರ್ ಕರೆ

    ಬೆಂಗಳೂರು: ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ನುಡಿದಂತೆ ನಡೆದುಕೊಳ್ಳಲು ವಿಫಲರಾಗಿದ್ದಾರೆ. ಹೀಗಾಗಿ ನಿರುದ್ಯೋಗ ದಿನ ಆಚರಣೆ ಜತೆಗೆ ನಿರುದ್ಯೋಗಿ ಯುವಕರು ತಮ್ಮ ಪದವಿ ಪ್ರಮಾಣ ಪತ್ರವನ್ನು ಮೋದಿ ಅವರಿಗೆ ಹಿಂದಿರುಗಿಸಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕರೆಕೊಟ್ಟಿದ್ದಾರೆ.

    ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದ ಡಿಕೆಶಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕಾರಣಿಗಳು ನುಡಿದಂತೆ ನಡೆಯಬೇಕು. ಅದೇ ನಮ್ಮ ನೀತಿ ಹಾಗೂ ಧರ್ಮ. ನಾವು ಜನರ ಸೇವೆ ಮಾಡಲು ಬಂದಿದ್ದು, ಕೊಟ್ಟ ಮಾತು ಉಳಿಸಿಕೊಳ್ಳಬೇಕು. ಇದನ್ನು ನಮ್ಮ ದೇಶ ಹಾಗೂ ನಾಡಿನ ಎಲ್ಲ ಧರ್ಮದಲ್ಲೂ ಬಸವಣ್ಣನವರ ಕಾಲದಿಂದಲೂ ನಾಯಕರು ಪ್ರತಿಪಾದಿಸಿಕೊಂಡು ಬಂದಿದ್ದಾರೆ ಎಂದರು.

    ಪ್ರಧಾನಿ ನರೇಂದ್ರ ಮೋದಿ ಅವರು ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದು ಮಾತು ಕೊಟ್ಟಿದ್ದರು. 2 ಕೋಟಿ ಸರ್ಕಾರಿ ಉದ್ಯೋಗ ನೀಡಲು ಸಾಧ್ಯವಾಗದಿದ್ದರೂ ಕನಿಷ್ಠ ಖಾಸಗಿ ಉದ್ಯೋಗಗಳಾದರೂ ಸೃಷ್ಟಿಯಾಗುವಂತೆ ಮಾಡಬೇಕಿತ್ತು. ಉದ್ಯೋಗ ಸೃಷ್ಟಿಗೆ ಅಗತ್ಯ ನೀತಿ ರೂಪಿಸಬೇಕಾಗಿತ್ತು ಎಂದರು. ಇದನ್ನೂ ಓದಿ: ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸಿದ ಯುವ ಕಾಂಗ್ರೆಸ್

    ಕೋವಿಡ್ ಸಂದರ್ಭದಲ್ಲಿ ದೇಶದಲ್ಲಿ 2 ಕೋಟಿ ಉದ್ಯೋಗ ನಷ್ಟವಾಗಿದೆ. ಸರ್ಕಾರ ಉದ್ಯೋಗ ಸೃಷ್ಟಿ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರ ಜನ್ಮದಿನವನ್ನು ನಮ್ಮ ಯೂಥ್ ಕಾಂಗ್ರೆಸ್ ವತಿಯಿಂದ ನಿರುದ್ಯೋಗ ದಿನವನ್ನಾಗಿ ಆಚರಣೆ ಮಾಡಿದ್ದಾರೆ. ಇದರಲ್ಲಿ ತಪ್ಪೇನಿದೆ?’ ಕೇವಲ ನಿರುದ್ಯೋಗ ದಿನ ಆಚರಣೆ ಮಾಡುವುದಷ್ಟೇ ಅಲ್ಲ, ಎಲ್ಲ ನಿರುದ್ಯೋಗಿ ಯುವಕರು ತಮ್ಮ ಪದವಿ ಪ್ರಮಾಣ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಿಂದಿರುಗಿಸಬೇಕು ಎಂದು ಕರೆ ನೀಡುತ್ತೇನೆ ಎಂದರು.

  • ಗಣೇಶ ಹಬ್ಬಕ್ಕೆ ಶುಭಕೋರಿದ ಪ್ರಧಾನಿ, ರಾಷ್ಟ್ರಪತಿ

    ಗಣೇಶ ಹಬ್ಬಕ್ಕೆ ಶುಭಕೋರಿದ ಪ್ರಧಾನಿ, ರಾಷ್ಟ್ರಪತಿ

    ನವದೆಹಲಿ: ದೇಶಾದ್ಯಂತ ಸಂಭ್ರಮದಿಂದ ಆಚರಿಸುತ್ತಿರುವ ಗಣೇಶ ಹಬ್ಬಕ್ಕೆ ಟ್ವಿಟ್ಟರ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಭಾಶಯ ಕೋರಿದ್ದಾರೆ.

    ನಿಮ್ಮೆಲ್ಲರಿಗೂ ಗಣೇಶ ಚತುರ್ಥಿಯ ಶುಭಾಶಯಗಳು. ಗಣೇಶ ಹಬ್ಬದ ಮೂಲಕ ಪ್ರತಿಯೊಬ್ಬರ ಜೀವನಕ್ಕೂ ಸುಖ, ಶಾಂತಿ, ಸಂತೋಷ, ಅದೃಷ್ಟ ಮತ್ತು ಉತ್ತಮ ಆರೋಗ್ಯವನ್ನು ತರಲಿ. ಗಣಪತಿ ಬಪ್ಪ ಮೋರಿಯಾ ಎಂದು ಮೋದಿ ದೇಶದ ಜನತೆಗೆ ಶುಭಕೋರಿದ್ದಾರೆ. ಇದನ್ನೂ ಓದಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡಿದ ಸಿಎಂ

    ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೂಡ ದೇಶದ ಜನತೆ ಟ್ಟಿಟ್ಟರ್ ಮೂಲಕ ಶುಭಾಶಯ ತಿಳಿದ್ದು, ಗಣಪತಿ ಬಪ್ಪ ಮೋರಿಯಾ. ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಹಾರ್ದಿಕ ಶುಭಾಶಯಗಳು. ಕೋವಿಡ್-19 ವಿರುದ್ಧ ವಿಘ್ನನಿವಾರಕ ಗಣೇಶ ನಮ್ಮ ಪ್ರಯತ್ನವನ್ನು ಯಶಸ್ವಿಗೊಳಿಸಲಿ ಮತ್ತು ಎಲ್ಲರನ್ನೂ ಸಂತೋಷ ಮತ್ತು ಶಾಂತಿಯಿಂದ ಆಶೀರ್ವದಿಸಲಿ ಎಂದು ಹಾರೈಸುತ್ತೇನೆ. ನಾವೆಲ್ಲರೂ ಈ ಹಬ್ಬವನ್ನು ಕೋವಿಡ್ ಸ್ನೇಹಿಯಾಗಿ ಆಚರಿಸೋಣ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಫಸ್ಟ್ ಟೈಂ ವಾಯುಸೇನೆ ವಿಮಾನ ರಾಷ್ಟ್ರೀಯ ಹೆದ್ದಾರಿಯಲ್ಲಿ ತುರ್ತು ಲ್ಯಾಂಡಿಂಗ್

  • ಪ್ರಧಾನಿ ಮೋದಿ ಭಾವಚಿತ್ರಕ್ಕೆ ಅಪಮಾನ – ದೂರು ದಾಖಲು

    ಪ್ರಧಾನಿ ಮೋದಿ ಭಾವಚಿತ್ರಕ್ಕೆ ಅಪಮಾನ – ದೂರು ದಾಖಲು

    ಚಿಕ್ಕಮಗಳೂರು: ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರವಿರುವ ನಾಮಫಲಕಕ್ಕೆ ಕಿಡಿಗೇಡಿಗಳು ಸೆಗಣಿ ಹೊಡೆದು, ಮಸಿ ಬಳಿದು ಅಪಮಾನ ಮಾಡಿರುವ ಘಟನೆ ಜಿಲ್ಲೆಯ ಕಳಸ ತಾಲೂಕಿನ ಸಂಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್.ಕೆ.ಮೇಗಲ್ ಗ್ರಾಮದ ಬಳಿ ನಡೆದಿದೆ.

    ಎಸ್.ಕೆ.ಮೇಗಲ್ ಗ್ರಾಮದ ಸಮೀಪದ ಬಸ್ತಿಗದ್ದೆ ಬಳಿ ಕೇಂದ್ರ ಸರ್ಕಾರದ ಧೀನದಯಾಳ್ ಗ್ರಾಮ ಜ್ಯೋತಿ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ತಿಳಿಸಲು ಪ್ರಧಾನಿ ನರೇಂದ್ರ ಮೋದಿಯ ಭಾವಚಿತ್ರವಿರುವ ಫಲಕವನ್ನ ಹಾಕಲಾಗಿತ್ತು. ಈ ಫಲಕದಲ್ಲಿ ಇದ್ದ  ನರೇಂದ್ರ ಮೋದಿ ಭಾವಚಿತ್ರಕ್ಕೆ ಕಿಡಿಗೇಡಿಗಳು ಸಗಣಿ ಹೊಡೆದು, ಮಸಿ ಬಳಿದು ವಿರೂಪಗೊಳಿಸಿದ್ದಾರೆ.

    ಸಮಾಜದಲ್ಲಿ ಶಾಂತಿ ಕದಡುವ ಇಂತಹಾ ದುಷ್ಕೃತ್ಯವನ್ನ ಎಸಗಿದವರನ್ನ ಕೂಡಲೇ ಬಂಧಿಸಿ ಸೂಕ್ತ ಕ್ರಮಕೈಗೊಳ್ಳಿ ಎಂದು ಕಳಸ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಮಹೇಶ್ ಒತ್ತಾಸಿದ್ದಾರೆ. ಈ ಬಗ್ಗೆ ಕುದುರೆಮುಖ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ: ಮೈಸೂರಲ್ಲಿ ಗ್ಯಾಂಗ್‍ರೇಪ್ ನಡೆದು 4 ದಿನ – ಕಾಮುಕರ ಅರೆಸ್ಟ್ ಯಾವಾಗ?

    ಪ್ರಧಾನ ಮಂತ್ರಿಗಳು ಕೈಗೊಳ್ಳುತ್ತಿರುವ ಜನಪರ ಯೋಜನೆಗಳನ್ನು ಸಹಿಸದ ಕೆಲ ಕಿಡಿಗೇಡಿಗಳು ಅವರಿಗೆ ಅವಮಾನ ಮಾಡುವ ಉದ್ದೇಶದಿಂದ ಈ ರೀತಿ ಕೃತ್ಯ ಎಸಗಿದ್ದಾರೆ. ಇದು ಪಕ್ಷದ ಕಾರ್ಯಕರ್ತರ ಮನಸ್ಸಿಗೆ ನೋವಾಗಿದೆ. ಇಂತಹ ಘಟನೆಯಿಂದ ಸಮಾಜದಲ್ಲಿ ಶಾಂತಿ ಕದಡಿದಂತಾಗುತ್ತದೆ. ಹಾಗಾಗಿ ಪೊಲೀಸರು ಕೂಡಲೇ ಇಂತಹಾ ನೀಚ ಕೃತ್ಯವನ್ನ ಎಸಗಿದವರನ್ನ ಪತ್ತೆ ಹಚ್ಚಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.