Tag: POCSO case

  • ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ -‌ ಆಟೋ ಚಾಲಕ ಸೇರಿ ಇಬ್ಬರು ಅರೆಸ್ಟ್

    ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ -‌ ಆಟೋ ಚಾಲಕ ಸೇರಿ ಇಬ್ಬರು ಅರೆಸ್ಟ್

    ದಾವಣಗೆರೆ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಇಬ್ಬರನ್ನು ದಾವಣಗೆರೆಯ (Davanagere) ಆರ್‌ಎಂಸಿ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ.

    ಬಾಲಕಿ ಹಾಗೂ ಆಕೆಯ ಜೊತೆಗಿದ್ದ ಅಪ್ರಾಪ್ತ ಬಾಲಕ ಸೇರಿ ದಾವಣಗೆರೆ ಬಸ್‌ ನಿಲ್ದಾಣದಿಂದ ಆಟೋದಲ್ಲಿ ಮನೆಗೆ ಹೊರಟಿದ್ದರು. ಈ ವೇಳೆ, ಆಟೋ ಚಾಲಕ ಹಾಗೂ ಆತನ ಜೊತೆಗಿದ್ದ ಮತ್ತೊಬ್ಬ ಯುವಕ ಸೇರಿ ನಿರ್ಜನ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಬಾಲಕನ ಮೇಲೆ ಹಲ್ಲೆ ನಡೆಸಿ, ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. 2 ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ | ಡ್ರಾಪ್ ಕೊಡುವ ನೆಪದಲ್ಲಿ ಯುವತಿಯ ಮೇಲೆ ಗ್ಯಾಂಗ್ ರೇಪ್, ಇಬ್ಬರು ಅರೆಸ್ಟ್

    ದೌರ್ಜನ್ಯ ಎಸಗಿದ ಬಳಿಕ ಬಾಲಕಿಯ ಬಳಿ ಇದ್ದ ಮೊಬೈಲ್ ಹಾಗೂ ಹಣವನ್ನು ಕಾಮುಕರು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ಸಂಬಂಧ ಆರ್‌ಎಂಸಿ ಪೊಲೀಸ್ ಠಾಣೆಯಲ್ಲಿ ಬಾಲಕಿ ದೂರು ನೀಡಿದ್ದಳು. ಬಾಲಕಿ ದೂರು ನೀಡುತ್ತಿದ್ದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಕಾರವಾರ | ಮೆಡಿಕಲ್‌ ಟೆಸ್ಟ್‌ಗೆ ಕರೆತಂದಿದ್ದ ಆರೋಪಿ ಪರಾರಿ

  • ಕಲಾವಿದೆ ಅರ್ಚನಾ ಪಾಟೀಲ್ ವಿರುದ್ಧದ ಪೋಕ್ಸೊ ಕೇಸ್‌ ವಿಚಾರಣೆಗೆ ಸುಪ್ರೀಂ ತಡೆ

    ಕಲಾವಿದೆ ಅರ್ಚನಾ ಪಾಟೀಲ್ ವಿರುದ್ಧದ ಪೋಕ್ಸೊ ಕೇಸ್‌ ವಿಚಾರಣೆಗೆ ಸುಪ್ರೀಂ ತಡೆ

    ನವದೆಹಲಿ: ಪೋಕ್ಸೊ ಪ್ರಕರಣ ಎದುರಿಸುತ್ತಿರುವ ಬೆಂಗಳೂರಿನ ಕಲಾವಿದೆ ಅರ್ಚನಾ ಪಾಟೀಲ್ ವಿರುದ್ಧ ವಿಚಾರಣಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ‌

    ಪೋಕ್ಸೊ ಕಾಯ್ದೆಗೆ ಬಾಲಕ, ಬಾಲಕಿ ಎಂಬ ಲಿಂಗಬೇಧವಿಲ್ಲ. ಹೂವಿನಂತೆ ಅರಳಬೇಕಾದ ವಯೋಮಾನದಲ್ಲಿ ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯಗಳನ್ನು ತಡೆಯಲು ರೂಪಿಸಿರುವ ಕಠಿಣ ಶಾಸನವಾಗಿದೆ ಎಂದು ಪೋಕ್ಸೊ ಕಾಯ್ದೆಯನ್ನು ಹೈಕೋರ್ಟ್ ವ್ಯಾಖ್ಯಾನಿಸಿತ್ತು. ದೇಶದಲ್ಲೇ ಮೊದಲು ಎನ್ನಬಹುದಾದ ಪ್ರಕರಣವೊಂದರಲ್ಲಿ ಮಹಿಳೆಯ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ರದ್ದುಪಡಿಸಲು ಆಗಸ್ಟ್‌ನಲ್ಲಿ ನಿರಾಕರಿಸಿತ್ತು. ಇದನ್ನೂ ಓದಿ: ದರ್ಶನ್‌ಗೆ ಜೈಲಲ್ಲಿ ಹಾಸಿಗೆ, ದಿಂಬು ನೀಡದ ವಿಚಾರ – ‘ಜೈಲು ಪರಿಶೀಲಿಸಿ ರಿಪೋರ್ಟ್‌ ಕೊಡಿ’: ಕಾನೂನು ಪ್ರಾಧಿಕಾರಕ್ಕೆ ಕೋರ್ಟ್ ಆದೇಶ

    ಪ್ರಕರಣದ ಆರೋಪಿ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಸುಂದರೇಶ್ ಹಾಗೂ ಸತೀಶ್ ಚಂದ್ರ ಶರ್ಮಾ ಅವರಿದ್ದ ದ್ವಿಸದಸ್ಯ ಪೀಠವು ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಲು ನಿರ್ದೇಶನ ನೀಡಿದೆ.

    ಆರೋಪಿ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿದ್ಧಾರ್ಥ ಲೂತ್ರಾ, ಪೋಕ್ಸೊ ಕಾಯ್ದೆಯ ಸೆಕ್ಷನ್ 3(1)(ಎ) ರಿಂದ 3(1)(ಸಿ) ವರೆಗಿನ ಸೆಕ್ಷನ್‌ಗಳು ನಿರ್ದಿಷ್ಟ ಲಿಂಗದವರಿಗೆ ಅನ್ವಯವಾಗುತ್ತದೆ. ಈ ಪ್ರಕರಣಕ್ಕೆ ಅನ್ವಯ ಆಗುವುದಿಲ್ಲ ಎಂದು ವಾದಿಸಿದರು.

    ಚಿತ್ರಕಲೆ ಹೇಳಿಕೊಡುವುದಾಗಿ ಮನೆಗೆ ಕರೆಸಿಕೊಂಡು 13 ವರ್ಷದ ಮಗನ ಮೇಲೆ ಅರ್ಚನಾ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಸಂತ್ರಸ್ತ ಬಾಲಕನ ತಾಯಿ ಹೆಚ್‌ಎಎಲ್ ಠಾಣೆಗೆ 2024ರ ಜೂನ್ 6ರಂದು ದೂರು ನೀಡಿದ್ದರು. ‘ನನ್ನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಬೇಕು’ ಎಂದು ಕೋರಿ ಆರೋಪಿತ ಮಹಿಳೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದನ್ನೂ ಓದಿ: ದೆಹಲಿ ಎನ್‌ಸಿಆರ್ ಪ್ರದೇಶದಲ್ಲಿ ಹಸಿರು ಪಟಾಕಿ ಸಿಡಿಸಲು ಅನುಮತಿ ನೀಡುವಂತೆ ಸುಪ್ರೀಂಗೆ ಮನವಿ

  • ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಪೋಕ್ಸೊ ಕೇಸ್ ಆರೋಪಿ ಆತ್ಮಹತ್ಯೆ

    ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಪೋಕ್ಸೊ ಕೇಸ್ ಆರೋಪಿ ಆತ್ಮಹತ್ಯೆ

    – ಅವಮಾನ ತಾಳಲಾಗದೇ ಕೋರ್ಟ್‌ನ 5ನೇ ಫ್ಲೋರ್‌ನಿಂದ ಬಿದ್ದು ಆತ್ಮಹತ್ಯೆಗೆ ಶರಣು

    ಬೆಂಗಳೂರು: ಸಿಟಿ ಸಿವಿಲ್ ಕೋರ್ಟ್ (City Civil Court) ಆವರಣದಲ್ಲಿ ಆರೋಪಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.

    ಕೋರ್ಟ್‌ನ 5ನೇ ಫ್ಲೋರ್‌ನಿಂದ ಬಿದ್ದು ಗೌತಮ್ ಎಂಬ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಚಾರಣೆ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದಿಂದ ಆರೋಪಿಯನ್ನು ಕೋರ್ಟ್ಗೆ ಕರೆತರಲಾಗಿತ್ತು. ಈ ವೇಳೆ ಕೋರ್ಟ್ನ ಮಹಡಿಯಿಂದ ಆರೋಪಿ ಜಿಗಿದಿದ್ದಾನೆ. ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಅಷ್ಟರಲ್ಲಾಗಲೇ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಮೈಸೂರು ದಸರೆಗೆ ಬಲೂನ್‌ ಮಾರಲು ಬಂದಿದ್ದ ಬಾಲಕಿಯ ಶವ ಪತ್ತೆ – ರೇಪ್‌ & ಮರ್ಡರ್‌ ಶಂಕೆ

    ಪೋಕ್ಸೊ ಕೇಸಲ್ಲಿ ಆರೋಪಿಯನ್ನ ಕೋರ್ಟ್‌ಗೆ ಕರೆತರಲಾಗಿತ್ತು. ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನ ಕೋರ್ಟ್ಗೆ ಕರೆತಂದಾಗ ಕುಟುಂಬದವರು ಕೂಡ ಉಪಸ್ಥಿತರಿದ್ದರು. ಅವಮಾನ ತಾಳಲಾರದೆ ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

  • ಪೋಕ್ಸೊ ಕೇಸಲ್ಲಿ ಚಾರ್ಜ್‌ಶೀಟ್‌ ಸಲ್ಲಿಸಲು ಲಂಚಕ್ಕೆ ಬೇಡಿಕೆ- ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್

    ಪೋಕ್ಸೊ ಕೇಸಲ್ಲಿ ಚಾರ್ಜ್‌ಶೀಟ್‌ ಸಲ್ಲಿಸಲು ಲಂಚಕ್ಕೆ ಬೇಡಿಕೆ- ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್

    – ಮಹಿಳಾ ಪಿಎಸ್‌ಐ ಪರಾರಿ

    ಬೆಂಗಳೂರು: ಲಂಚ ಸ್ವೀಕರಿಸುವ ವೇಳೆ ದೇವನಹಳ್ಳಿ ಪೊಲೀಸ್ ಸಿಬ್ಬಂದಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಮಹಿಳಾ ಪಿಎಸ್‌ಐ ಜಗದೇವಿ ಪರಾರಿಯಾಗಿದ್ದಾರೆ.

    70 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, 50 ಸಾವಿರ ಲಂಚ ಸ್ವೀಕರಿಸುತ್ತಿದ್ದ ಸಮಯದಲ್ಲಿ ದೇವನಹಳ್ಳಿ ಪೊಲೀಸ್ ಠಾಣಾ ಸಿಬ್ಬಂದಿ ಅಮರೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪೋಕ್ಸೊ ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಸಲು ಪೊಲೀಸರು ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಮಹಿಳೆಯೊಬ್ಬರು ನೀಡಿದ್ದ ದೂರಿನನ್ವಯ ಲೋಕಾಯುಕ್ತ ಅಧಿಕಾರಿಗಳಿಂದ ಕಾರ್ಯಾಚರಣೆ ನಡೆಸಲಾಗಿತ್ತು.

    ದೇವನಹಳ್ಳಿ ಠಾಣೆ ಪಿಎಸ್‌ಐ ಜಗದೇವಿ, ಕಾನ್ಸ್‌ಟೇಬಲ್‌ಗಳಾದ ಮಂಜುನಾಥ್, ಅಮರೇಶ್ ವಿರುದ್ದ ದೂರು ದಾಖಲಾಗಿತ್ತು. ಪೋಕ್ಸೊ ಕೇಸ್‌ನಲ್ಲಿ ಚಾರ್ಜ್‌ಶೀಟ್ ಹಾಕಲು 70 ಸಾವಿರ ಲಂಚ ಕೇಳಿದ್ದರು. ಸದ್ಯ ಲೋಕಾಯುಕ್ತ ದಾಳಿ ವೇಳೆ ಪಿಎಸ್‌ಐ ಜಗದೇವಿ ಹಾಗೂ ಕಾನ್ಸ್‌ಟೇಬಲ್ ಮಂಜುನಾಥ್ ಪರಾರಿಯಾಗಿದ್ದಾರೆ. ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.

  • ಶಿವಮೊಗ್ಗ | ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ

    ಶಿವಮೊಗ್ಗ | ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ

    ಶಿವಮೊಗ್ಗ: 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು (Student) ಗಂಡು ಮಗುವಿಗೆ ಜನ್ಮ ನೀಡಿರುವುದು ಶಿವಮೊಗ್ಗ (Shivamogga) ಜಿಲ್ಲೆಯಿಂದ ವರದಿಯಾಗಿದೆ.

    ಬಾಲಕಿ ಹೊಟ್ಟೆ ನೋವು ಎಂದು ಶಾಲೆಗೆ ರಜೆ ಹಾಕಿದ್ದಳು. ರಜೆ ಹಾಕಿದ್ದ ಎರಡು ದಿನದ ಬಳಿಕ ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ. ತಕ್ಷಣವೇ ಆಕೆಯನ್ನ ಕುಟುಂಬಸ್ಥರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. 7 ತಿಂಗಳಿಗೆ ಮಗು ಜನಿಸಿದ್ದು, 1.8 ಕೆಜಿ ತೂಕವಿದ್ದು, ಬಾಲಕಿ ಹಾಗೂ ಮಗು ಆರೋಗ್ಯವಾಗಿದ್ದಾರೆ. ಇದನ್ನೂ ಓದಿ: ಅಪ್ರಾಪ್ತನಿಂದ ರೇಪ್‌- 2 ತಿಂಗಳ ಗರ್ಭಿಣಿಯಾದ ಅಪ್ರಾಪ್ತೆ

    ಘಟನೆ ಬೆಳಕಿಗೆ ಬಂದ ಬೆನ್ನಲ್ಲೆ, ಮಕ್ಕಳ ರಕ್ಷಣಾ ಘಟಕ, ಮಕ್ಕಳ ಕಲ್ಯಾಣ ಸಮಿತಿ ಸಿಬ್ಬಂದಿ ಹಾಗೂ ಪೊಲೀಸರು ದೂರು ದಾಖಲಿಸಿಕೊಂಡು ಬಾಲಕಿಯ ವಿಚಾರಣೆ ನಡೆಸಿದ್ದಾರೆ. ಈ ವೇಳೆ ತನ್ನ ಮೇಲೆ ನಡೆದ ದೌರ್ಜನ್ಯದ ಬಗ್ಗೆ ಬಾಲಕಿ ಗೊಂದಲದ ಹೇಳಿಕೆ ನೀಡಿದ್ದಾಳೆ ಎಂದು ತಿಳಿದು ಬಂದಿದೆ. ಇದರಿಂದ ಬಾಲಕಿಯ ಕೌನ್ಸೆಲಿಂಗ್ ನಡೆಸಿದ ಬಳಿಕ ಹೆಚ್ಚಿನ ವಿಚಾರಣೆ ನಡೆಸಲು ನಿರ್ಧಾರಿಸಲಾಗಿದೆ.

    ಇಂದು (ಸೆ.1) ಮಕ್ಕಳ ಕಲ್ಯಾಣ ಸಮಿತಿ ಸಿಬ್ಬಂದಿ ಬಾಲಕಿಯ ಕೌನ್ಸೆಲಿಂಗ್ ನಡೆಸಲಿದ್ದಾರೆ. ಬಾಲಕಿ ಹಾಗೂ ಮಗುವಿನ ಮೇಲೆ ಅಧಿಕಾರಿಗಳು ತೀವ್ರ ನಿಗಾ ಇಟ್ಟಿದ್ದಾರೆ. ಇದನ್ನೂ ಓದಿ: 15 ವರ್ಷದ ಬಾಲಕಿ ವಿವಾಹವಾಗಿ ಸಿಕ್ಕಿಬಿದ್ದ ಗ್ರಾಮ ‌ಪಂಚಾಯಿತಿ ಅಧ್ಯಕ್ಷ

  • 15 ವರ್ಷದ ಬಾಲಕಿ ವಿವಾಹವಾಗಿ ಸಿಕ್ಕಿಬಿದ್ದ ಗ್ರಾಮ ‌ಪಂಚಾಯಿತಿ ಅಧ್ಯಕ್ಷ

    15 ವರ್ಷದ ಬಾಲಕಿ ವಿವಾಹವಾಗಿ ಸಿಕ್ಕಿಬಿದ್ದ ಗ್ರಾಮ ‌ಪಂಚಾಯಿತಿ ಅಧ್ಯಕ್ಷ

    – ಅಧ್ಯಕ್ಷನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

    ಚಿಕ್ಕೋಡಿ: ಗ್ರಾಮ ಪಂಚಾಯಿತಿ ಅಧ್ಯಕ್ಷನೊಬ್ಬ 15 ವರ್ಷದ ಬಾಲಕಿಯನ್ನು ವಿವಾಹವಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ಸಾಪುರ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

    ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತವರು ಜಿಲ್ಲೆ ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಸಚಿವ ಸತೀಶ್‌ ಜಾರಕಿಹೊಳಿ‌ ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬಸ್ಸಾಪುರ ಗ್ರಾಮ ಇದು.

    ಬಸ್ಸಾಪುರ ಗ್ರಾಪಂ ಅಧ್ಯಕ್ಷ ‌ಭೀಮಶಿ ಕಾಲಿಮಣಿ ಎಂಬಾತನಿಂದ ಈ ಕೃತ್ಯ ನಡೆದಿದೆ. ಬಾಲ್ಯ ವಿವಾಹ ಮಾಡಿಕೊಂಡ ಗ್ರಾಪಂ ಅಧ್ಯಕ್ಷ ಭೀಮಶಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹುಕ್ಕೇರಿ ತಾಲೂಕಿನ ಯಮಕನಮರಡಿ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. 2023ರ ನ.5 ರಂದು ಅಪ್ರಾಪ್ತೆ ಜೊತೆಗೆ ಭೀಮಶಿ ಕಾಲಿಮಣಿ ವಿವಾಹವಾಗಿದ್ದ.

    ಬಂಧನದ ಭೀತಿಯಿಂದ ತಪ್ಪಿಸಿಕೊಳ್ಳಲು ಗ್ರಾಪಂ ಅಧ್ಯಕ್ಷ ಭೀಮಶಿ ಕಳ್ಳಾಟ ನಡೆಸುತ್ತಿದ್ದಾನೆ‌. ದೂರು ಬಂದ ತಕ್ಷಣವೇ ಬಸ್ಸಾಪುರ ಗ್ರಾಮಕ್ಕೆ ನಾಲ್ಕು ಸಲ ಮಕ್ಕಳ ರಕ್ಷಣಾ ತಂಡ ಹೋಗಿದೆ. ಜಿಲ್ಲಾ ‌ಮಕ್ಕಳ ರಕ್ಷಣಾಧಿಕಾರಿ ಡಾ. ಪ್ರವೀಣ ನೇತೃತ್ವದ ತಂಡ ನಾಲ್ಕು ಸಲ ಬಸ್ಸಾಪುರಕ್ಕೆ ಭೇಟಿ ನೀಡಿದೆ. ಆದರೂ, ಬಾಲಕಿ ಪತ್ತೆಹಚ್ಚಲು ಮಕ್ಕಳ ರಕ್ಷಣಾ ‌ತಂಡ ವಿಫಲವಾಗಿದೆ. ಈ ಮಧ್ಯೆಯೇ ಆಕೆ ಪ್ರಾಪ್ತ ವಯಸ್ಸಿನವಳು ಎಂಬ ದಾಖಲೆಯನ್ನು ಅಧ್ಯಕ್ಷ ಬಿಡುಗಡೆ ಮಾಡಿದ್ದ.

    ಅಧ್ಯಕ್ಷ ಬಂಧನದ ಭೀತಿಯಿಂದ ‌ಪತ್ನಿಯ ನಕಲಿ ಜನನ ಪ್ರಮಾಣ ಪತ್ರ ವೈರಲ್ ಮಾಡಿದ್ದ ಎನ್ನಲಾಗಿದೆ. ಶಾಲಾ‌ ಟ್ರಾನ್ಸ್‌ಫರ್ ಸರ್ಟಿಫಿಕೇಟ್ ಜೊತೆಗೆ ಹೊಸ ಜನನ ಪ್ರಮಾಣದ ‌ದಾಖಲೆ‌ ಹೋಲಿಕೆ ಮಾಡಿದ ಅಧಿಕಾರಿಗಳು‌, ಗ್ರಾಪಂ ಅಧ್ಯಕ್ಷ ‌ಭೀಮಶಿ ಕಾಲಿಮಣಿ ಬಾಲ್ಯ ವಿವಾಹ ಆಗಿರುವುದು ದೃಢವಾಗಿದೆ. ಕೃತ್ಯ‌ ಎಸಗಿರುವುದು ದೃಢವಾದ ಹಿನ್ನೆಲೆಯಲ್ಲಿ ಗ್ರಾಪಂ ‌ಅಧ್ಯಕ್ಷನ‌ ವಿರುದ್ಧ ಪೋಕ್ಸೊ ಕೇಸ್ ದಾಖಲಾಗಿದೆ.

  • ಪತಿಯನ್ನು ಪತ್ನಿ ನದಿಗೆ ತಳ್ಳಿದ್ದ ಆರೋಪ ಪ್ರಕರಣ – ಪತಿ ತಾತಪ್ಪ ಸೇರಿ 10 ಜನರ ವಿರುದ್ಧ ಪೋಕ್ಸೋ ಕೇಸ್

    ಪತಿಯನ್ನು ಪತ್ನಿ ನದಿಗೆ ತಳ್ಳಿದ್ದ ಆರೋಪ ಪ್ರಕರಣ – ಪತಿ ತಾತಪ್ಪ ಸೇರಿ 10 ಜನರ ವಿರುದ್ಧ ಪೋಕ್ಸೋ ಕೇಸ್

    ರಾಯಚೂರು: ಜಿಲ್ಲೆಯ ಗುರ್ಜಾಪುರ ಬ್ಯಾರೇಜ್ ಬಳಿ ಫೋಟೋ ತೆಗೆಯುವ ನೆಪದಲ್ಲಿ ಪತಿಯನ್ನು ಪತ್ನಿ ನದಿಗೆ ತಳ್ಳಿದ ಆರೋಪ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಅಪ್ರಾಪ್ತೆಯನ್ನು ವಿವಾಹವಾಗಿದ್ದ ಹಿನ್ನೆಲೆ ಬಾಲ್ಯವಿವಾಹ ನಿಷೇಧ ಕಾಯಿದೆ ಅಡಿ ಪ್ರಕರಣದಲ್ಲಿ ಸಿಲುಕಿದ್ದ ಪತಿ ತಾತಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಹಾಗೂ 10 ಮಂದಿ ವಿರುದ್ಧ ಪೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲಾಗಿದೆ.

    ರಾಯಚೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಈಗ ಹೆಚ್ಚುವರಿಯಾಗಿ ಬಿಎನ್‌ಎಸ್, ಪೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲಾಗಿದೆ. ಅಪ್ರಾಪ್ತೆಗೆ ಮದುವೆ ಮಾಡಿಸಿ, ಮೊದಲ ರಾತ್ರಿಗೆ ಬಾಲಕಿಯನ್ನು ಕಳುಹಿಸಿರುವ ಆರೋಪದ ಹಿನ್ನೆಲೆ ಹೆಚ್ಚುವರಿ ಏಳು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಫೋಟೊ ತೆಗೆಯುವ ನೆಪದಲ್ಲಿ ಪತಿಯನ್ನು ನದಿಗೆ ತಳ್ಳಿದ ಕೇಸ್‌ಗೆ ಟ್ವಿಸ್ಟ್‌ – 16ರ ಬಾಲಕಿ ಮದುವೆಯಾಗಿದ್ದ ತಾತಪ್ಪ

    ಜು.21 ರಂದು ರಾಯಚೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ತಾತಪ್ಪ , ಆತನ ತಾಯಿ ಹಾಗೂ ಅಪ್ರಾಪ್ತೆಯ ತಾಯಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಈಗ ಮದುವೆ ಮಾಡಿಸಿದ ಸಂಬಂಧಿಕರು ಸೇರಿ 10 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸ್ ಅಧಿಕಾರಿಗಳು ತ್ವರಿತಗತಿಯಲ್ಲಿ ಅಪ್ರಾಪ್ತೆಗೆ ನ್ಯಾಯ ಕೊಡಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಪತಿಯನ್ನ ಪತ್ನಿ ನದಿಗೆ ತಳ್ಳಿದ್ದ ಆರೋಪ ಪ್ರಕರಣಕ್ಕೆ ಟ್ವಿಸ್ಟ್ – ಪತಿ ವಿರುದ್ಧ ಮಹಿಳಾ ಠಾಣೆಯಲ್ಲಿ ಕೇಸ್ ದಾಖಲು

  • ಅಪ್ರಾಪ್ತೆ ಮೇಲೆ 2 ವರ್ಷಗಳಿಂದ ಅತ್ಯಾಚಾರ ಎಸಗಿದ ಆರೋಪ – RCB ಸ್ಟಾರ್‌ ಯಶ್‌ ದಯಾಳ್‌ ವಿರುದ್ಧ ಪೋಕ್ಸೊ ಕೇಸ್‌

    ಅಪ್ರಾಪ್ತೆ ಮೇಲೆ 2 ವರ್ಷಗಳಿಂದ ಅತ್ಯಾಚಾರ ಎಸಗಿದ ಆರೋಪ – RCB ಸ್ಟಾರ್‌ ಯಶ್‌ ದಯಾಳ್‌ ವಿರುದ್ಧ ಪೋಕ್ಸೊ ಕೇಸ್‌

    ಜೈಪುರ: ಬಾಲಕಿಯೊಬ್ಬಳ ಮೇಲೆ 2‌ ವರ್ಷಗಳಿಂದ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಸ್ಟಾರ್‌ ವೇಗಿ ಯಶ್ ದಯಾಳ್‌ಗೆ (Yash Dayal) ವಿರುದ್ಧ ಪೋಕ್ಸೋ ಪ್ರಕರಣ (POCSO Case)ಲಾಗಿದೆ.

    ಹೌದು.‌ 2025ರ ಐಪಿಎಲ್‌ (IPL 2025) ಮುಕ್ತಾಯಗೊಂಡ ಕೆಲ ದಿನಗಳಿಂದ ಸ್ಟಾರ್‌ ವೇಗಿಗೆ ಮೇಲಿಂದ ಮೇಲೆ ಸಂಕಷ್ಟ ಎದುರಾಗುತ್ತಿದೆ. ಕೆಲ ದಿನಗಳ ಹಿಂದೆಯಷ್ಟೇ ಗಾಜಿಯಾಬಾದ್‌ನ ಯುವತಿಯೊಬ್ಬಳು ದಯಾಳ್ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿ, ದೂರು ದಾಖಲಿಸಿದ್ದರು. ಈ ಸಂಬಂಧ ಕೇಸ್‌ ಕೂಡ ದಾಖಲಾಗಿತ್ತು. ಇದೀಗ ಅಪ್ರಾಪ್ತೆ ಮೇಲೆ ಅತ್ಯಾಚಾರ (Minor Girl Rape) ಎಸಗಿರುವ ಆರೋಪ ಮೇಲೆ ಪೋಕ್ಸೋ ಕೇಸ್‌ ದಾಖಲಾಗಿದೆ. ಇದನ್ನೂ ಓದಿ: ಹಲವು ಮಹಿಳೆಯರ ಜೊತೆ ಅಫೇರ್‌ ಇಟ್ಕೊಂಡಿದ್ದ – ಯಶ್‌ ದಯಾಳ್‌ ವಿರುದ್ಧ ಮಹಿಳೆಯಿಂದ ಮತ್ತೊಂದು ಆರೋಪ

    Yash Dayal 2 1

    ಬಾಲಕಿಯೊಬ್ಬಳ ಮೇಲೆ 2 ವರ್ಷಗಳಿಂದ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಜೈಪುರದ ಸಂಗನೇರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಭಾವನಾತ್ಮಕವಾಗಿ ನನ್ನನ್ನ ಕಟ್ಟಿಹಾಕಿ, ಕ್ರಿಕೆಟ್‌ ವೃತ್ತಿ ಜೀವನದಲ್ಲಿ ಉತ್ತಮ ಅವಕಾಶ ಕೊಡಿಸುವುದಾಗಿ ಆಮಿಷ ಒಡ್ಡಿದ್ದಾನೆ. ಆಮಿಷ ಒಡ್ಡಿ 2 ವರ್ಷಗಳ ಕಾಲ ಪದೇ ಪದೇ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾಳೆ. ಇದನ್ನೂ ಓದಿ: ಆರ್‌ಸಿಬಿ ಆಟಗಾರ ಯಶ್ ದಯಾಳ್ ವಿರುದ್ಧ FIR – ಸಂತ್ರಸ್ತೆ ಹೇಳಿಕೆ ದಾಖಲಿಸಿಕೊಂಡ ಬಳಿಕ ಪೊಲೀಸರ ಕ್ರಮ

    ಹೋಟೆಲ್‌ನಲ್ಲಿ ಮೊದಲ ಬಾರಿಗೆ ಲೈಂಗಿಕ ದೌರ್ಜನ್ಯ
    ಕ್ರಿಕೆಟ್‌ ವೃತ್ತಿಜೀವನದ ಬಗ್ಗೆ ಸಲಹೆ ನೀಡುವುದಾಗಿ, ಉತ್ತಮ ಭವಿಷ್ಯ ಕಲ್ಪಿಸುವುದಾಗಿ ಹೇಳಿದ್ದ ದಯಾಳ್‌ ಜೈಪುರದ ಸೀತಾಪುರ ಹೋಟೆಲ್‌ಗೆ ಕರೆದಿದ್ದ. ಅಲ್ಲಿ ಮೊದಲ ಬಾರಿಗೆ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಪ್ರಕರಣ ನಡೆದಾಗ ನನಗೆ 17 ವರ್ಷ ವಯಸ್ಸಾಗಿತ್ತು. ಅಲ್ಲಿಂದ 2 ವರ್ಷಗಳ ಕಾಲ ಪದೇ ಪದೇ ನನ್ನ ಮೇಲೆ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾಳೆ. ಈ ಹಿನ್ನೆಲೆ ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

    ಕೆಲ ದಿನಗಳ ಹಿಂದಷ್ಟೇ ಗಾಜಿಯಾಬಾದ್‌ನ ಯುವತಿಯೊಬ್ಬಳು ಯಶ್ ದಯಾಳ್ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿ, ದೂರು ದಾಖಲಿಸಿದ್ದರು. ಎಫ್‌ಐಆರ್‌ ಕೂಡ ದಾಖಲಾಗಿತ್ತು. ಈ ನಡುವೆ ಅಲಹಾಬಾದ್‌ ಹೈಕೋರ್ಟ್‌ ದಯಾಳ್‌ ಬಂಧನಕ್ಕೆ ತಡೆ ನೀಡಿತ್ತು. ಇದಾದ ಕೆಲ ದಿನಗಳಲ್ಲೇ ಪೋಕ್ಸೋ ಕೇಸ್‌ ದಾಖಲಾಗಿದೆ. ಇದನ್ನೂ ಓದಿ: ಆರ್‌ಸಿಬಿ ಸ್ಟಾರ್‌ ವೇಗಿ ಯಶ್‌ ದಯಾಳ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ – FIR ದಾಖಲು

  • I Love You ಅನ್ನೋದ್ರಲ್ಲಿ ಲೈಂಗಿಕ ಉದ್ದೇಶವಿಲ್ಲ – ಬಾಂಬೆ ಹೈಕೋರ್ಟ್‌

    I Love You ಅನ್ನೋದ್ರಲ್ಲಿ ಲೈಂಗಿಕ ಉದ್ದೇಶವಿಲ್ಲ – ಬಾಂಬೆ ಹೈಕೋರ್ಟ್‌

    ಮುಂಬೈ: ನಾನು ನಿನ್ನನ್ನು ಪ್ರೀತಿಸುತ್ತೇನೆ ಎನ್ನುವುದು ಭಾವನೆಗಳ ಅಭಿವ್ಯಕ್ತಿಯೇ ಹೊರತು ಅದರಲ್ಲಿ ಲೈಂಗಿಕ ಉದ್ದೇಶ ಇರುವುದಿಲ್ಲ’ ಎಂದು ಬಾಂಬೆ ಹೈಕೋರ್ಟ್‌ನ (Bombay High Court) ನಾಗ್ಪುರ ಪೀಠ ಅಭಿಪ್ರಾಯಪಟ್ಟಿದೆ.

    2015ರಲ್ಲಿ ವ್ಯಕ್ತಿಯೊಬ್ಬ 17 ವರ್ಷದ ಬಾಲಕಿಯೊಬ್ಬಳ ಕೈಹಿಡಿದು ‘I Love You’ ಎಂದು ಹೇಳಿದ್ದಕ್ಕೆ ಲೈಂಗಿಕ ಕಿರುಕುಳ ಆರೋಪದಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಸೆಷನ್ ನ್ಯಾಯಾಲಯವು, ತಪ್ಪಿತಸ್ಥ ಎಂದು ಪರಿಗಣಿಸಿ ಪೋಕ್ಸೋ ಕಾಯ್ದೆಯಡಿ (POCSO Case) 2017ರಲ್ಲಿ ಮೂರು ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿತ್ತು. ಕೆಳಹಂತದ ನ್ಯಾಯಾಲಯದ ಆದೇಶವನ್ನು ವ್ಯಕ್ತಿಯು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಇದನ್ನೂ ಓದಿ: ವಾಲ್ಮೀಕಿ ಹಗರಣ| ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆ – ಎಸ್‌ಐಟಿ ರದ್ದು, ಸಿಬಿಐ ತನಿಖೆಗೆ ಆದೇಶ

    ಸೆಷನ್ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿದ ಹೈಕೋರ್ಟ್‌, ವ್ಯಕ್ತಿಯ ವಿರುದ್ಧದ ಆರೋಪದಲ್ಲಿ ಯಾವುದೇ ಲೈಂಗಿಕ ಉದ್ದೇಶ ಕಂಡುಬಂದಿಲ್ಲ. ‘ನಾನು ನಿನ್ನನ್ನು ಪ್ರೀತಿಸುತ್ತೇನೆ’ ಎಂದು ಪದಗಳಲ್ಲಿ ಹೇಳಿದರೆ ಅದರಲ್ಲಿ ಯಾವುದೇ ಲೈಂಗಿಕ ಉದ್ದೇಶ ಇರುವುದಿಲ್ಲ ಎಂದು ನ್ಯಾ. ಊರ್ಮಿಳಾ ಜೋಶಿ ಫಾಲ್ಕೆ ಅವರಿದ್ದ ಪೀಠ ತನ್ನ ಆದೇಶದಲ್ಲಿ ಹೇಳಿದೆ.

    ‘ಅನುಚಿತ ಸ್ಪರ್ಶ, ಬಲವಂತದಿಂದ ಬಟ್ಟೆ ತೆಗೆಯುವುದು, ಅಸಭ್ಯ ಸನ್ನೆಗಳು ಲೈಂಗಿಕ ಉದ್ದೇಶವಾಗಿದ್ದು, ಇವುಗಳು ಮಹಿಳೆಯ ಘನತೆಗೆ ಅವಮಾನ ಮಾಡಿದಂತೆ ಆಗುತ್ತದೆ. ʻಐ ಲವ್ ಯುʼಎಂದರೆ ಅದು ಲೈಂಗಿಕ ಉದ್ದೇಶ ಎಂದು ಹೇಳಲು ಬೇರೆಯದೇ ‘ವ್ಯಾಖ್ಯಾನದ ಅಗತ್ಯವಿದೆ’ ಎಂದು ಪೀಠ ಹೇಳಿದೆ.

    ಏನಿದು ಪ್ರಕರಣ?
    ಬಾಲಕಿಯೊಬ್ಬಳು ಕಾಲೇಜಿನಿಂದ ಮನೆಗೆ ವಾಪಸ್‌ ಆಗುವಾಗ, ಆರೋಪಿ ಕೈಹಿಡಿದು ಹೆಸರು ಕೇಳಿದ್ದಾನೆ. ನಂತರ ‘ಐ ಲವ್ ಯು’ ಎಂದಿದ್ದಾನೆ. ಆತನಿಂದ ತಪ್ಪಿಸಿಕೊಂಡು ಮನೆಗೆ ಹೋಗಿದ್ದ ಬಾಲಕಿ, ತನ್ನ ತಂದೆಗೆ ಮಾಹಿತಿ ನೀಡಿದ್ದಳು. ಬಳಿಕ ಈ ಸಂಬಂಧ ದೂರು ದಾಖಲಾಗಿತ್ತು. ಇದನ್ನೂ ಓದಿ: ಲಲಿತ್ ಮೋದಿಗೆ ಶಾಕ್ – ಬಿಸಿಸಿಐನಿಂದ ಇಡಿ ದಂಡ ಪಾವತಿಸಲು ಕೋರಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ

  • 7 ವರ್ಷದ ಬಾಲಕಿ ಮೇಲೆ ಅಪ್ರಾಪ್ತರಿಂದಲೇ ಅತ್ಯಾಚಾರ – ಇಬ್ಬರು ಬಾಲಕರು ಅರೆಸ್ಟ್‌

    7 ವರ್ಷದ ಬಾಲಕಿ ಮೇಲೆ ಅಪ್ರಾಪ್ತರಿಂದಲೇ ಅತ್ಯಾಚಾರ – ಇಬ್ಬರು ಬಾಲಕರು ಅರೆಸ್ಟ್‌

    ದಾವಣಗೆರೆ: ಮನೆಯ ಮುಂಭಾಗ ಆಟವಾಡುತ್ತಿದ್ದ ಬಾಲಕಿಯನ್ನು ಇಬ್ಬರು ಅಪ್ರಾಪ್ತ ಬಾಲಕರು ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ದಾವಣಗೆರೆ (Davanagere) ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.

    ಮನೆಯ ಅಕ್ಕಪಕ್ಕದ ಬಾಲಕರು ಏಳು ವರ್ಷದ ಬಾಲಕಿಯ ಪರಿಚಯ ಮಾಡಿಕೊಂಡಿದ್ದರು. ಭಾನುವಾರ ಸಂಜೆ ಮನೆಯ ಮುಂಭಾಗ ಬಾಲಕಿ ಆಡವಾಡುತ್ತಿದ್ದಳು. ಈ ವೇಳೆ ಅಲ್ಲಿಗೆ ಬಂದ 15 ಹಾಗೂ 17 ವರ್ಷದ ಇಬ್ಬರು ಅಪ್ರಾಪ್ತರು ಆಕೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ. ಇದನ್ನೂ ಓದಿ: Honeymoon Murder | ರಾಜ್‌ನ ಆಭರಣ, 5 ಲಕ್ಷ ನಗದು, ಪಿಸ್ತೂಲ್ ಇದ್ದ ಹಂತಕಿಯ ಬ್ಯಾಗ್ ಮುಚ್ಚಿಟ್ಟಿದ್ದ ಫ್ಲ್ಯಾಟ್‌ ಓನರ್ ಅರೆಸ್ಟ್

    ಆಟವಾಡುತ್ತಿದ್ದ ಮಗಳು ಕಾಣಿಸದ ಹಿನ್ನಲೆ ಬಾಲಕಿಯ ತಾಯಿ ಅಕ್ಕಪಕ್ಕ ಹುಡುಕಿಕೊಂಡು ಹೋಗಿದ್ದಾರೆ. ಮಗಳನ್ನು ಹುಡುಕಿಕೊಂಡು ನೆರೆ ಮನೆಗೆ ಹೋದಾಗ ಇಬ್ಬರು ಅಪ್ರಾಪ್ತ ಬಾಲಕರು ಅತ್ಯಾಚಾರ ಎಸಗಿದ್ದು ಗೊತ್ತಾಗಿದೆ. ಈ ಸಂಬಂಧ ಬಾಲಕಿಯ ತಾಯಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಇಬ್ಬರು ಬಾಲಕರನ್ನು ಬಂಧಿಸಿದ್ದಾರೆ.

    ಪೊಲೀಸರು, ಬಾಲಕರಿಗೆ ವೈದ್ಯಕೀಯ ತಪಾಸಣೆ ಮಾಡಿಸಿ, ಪೋಕ್ಸೋ ಪ್ರಕರಣ (POCSO Case) ದಾಖಲಿಸಿದ್ದಾರೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಬಾಲಕಿಗೆ ಚಿಕಿತ್ಸೆ ನೀಡಲಾಗಿದೆ. ಇದನ್ನೂ ಓದಿ: ಕೃಷಿ ಹೊಂಡದಲ್ಲಿ ತಾಯಿ-ಮಗಳ ಶವ ಪತ್ತೆ; ಪತಿ, ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ