Tag: POCSO case

  • ಹಾವೇರಿ | ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ನಾಲ್ವರು ಅರೆಸ್ಟ್‌

    ಹಾವೇರಿ | ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ನಾಲ್ವರು ಅರೆಸ್ಟ್‌

    ಹಾವೇರಿ: ಕಾಮುಕನೊಬ್ಬ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಶಿಗ್ಗಾಂವಿಯ ಬಂಕಾಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ದೌರ್ಜನ್ಯ ಎಸಗಿದ ಆರೋಪಿ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಗಳನ್ನು ಗೋಣಿರುದ್ರಾ ಶಿಗ್ಗಟ್ಟಿ (24), ಮಂಜುನಾಥ ಶಿಗ್ಗಟ್ಟಿ (23) ಲಕ್ಷ್ಮಣ ಕಬನೂರ್ ಮತ್ತು ಮಾರುತಿ ಶಿಗಟ್ಟಿ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಬಂಧನಕ್ಕೊಳಗಾದ ನಾಲ್ವರಲ್ಲಿ ಮೂವರು ದೌರ್ಜನ್ಯ ಎಸಗಿದ ಆರೋಪಿ ಹಾಗೂ ಸಂತ್ರಸ್ತೆಯ ಕುಟುಂಬದ ಜೊತೆ ರಾಜಿ ಪಂಚಾಯತಿ ಮಾಡಿಸಿದ್ದರು. ದೌರ್ಜನ್ಯ ಎಸಗಿದ ಆರೋಪಿ ಸೇರಿದಂತೆ ನಾಲ್ವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪ್ರಿಯರಕನೊಂದಿಗೆ ಚಕ್ಕಂದವಾಡ್ತಾ ಸಿಕ್ಕಿಬಿದ್ದ ಪತ್ನಿ – ಆಕೆಯನ್ನ ಕೊಂದು ರುಂಡದೊಂದಿಗೆ ಪೊಲೀಸ್ ಠಾಣೆಗೆ ಬಂದ ಪತಿ

    ಬಂಧಿತ ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಪರ ಪುರುಷನೊಂದಿಗೆ ಸರಸಕ್ಕೆ ಅಡ್ಡಿ – ಅನ್ನಕ್ಕೆ ವಿಷ ಹಾಕಿ ಇಡೀ ಕುಟುಂಬವನ್ನೇ ಮುಗಿಸಲು ಯತ್ನಿಸಿದ್ದಾಕೆ ಅರೆಸ್ಟ್‌

  • ತನ್ನ ಬಾಯ್‌ಫ್ರೆಂಡ್‌ನಿಂದ ಮಗಳ ಮೇಲೆಯೇ ರೇಪ್‌ ಮಾಡಿಸಿದ್ದ ಬಿಜೆಪಿ ನಾಯಕಿ ಅರೆಸ್ಟ್‌

    ತನ್ನ ಬಾಯ್‌ಫ್ರೆಂಡ್‌ನಿಂದ ಮಗಳ ಮೇಲೆಯೇ ರೇಪ್‌ ಮಾಡಿಸಿದ್ದ ಬಿಜೆಪಿ ನಾಯಕಿ ಅರೆಸ್ಟ್‌

    ಡೆಹ್ರಾಡೂನ್‌ (ಹರಿದ್ವಾರ): ಪ್ರಪಂಚದಲ್ಲಿ ಕೆಟ್ಟ ಮಕ್ಕಳಿರುತ್ತಾರೆ, ಆದ್ರೆ ಕೆಟ್ಟ ತಾಯಿ ಇರುವುದಿಲ್ಲ ಎಂಬ ಮಾತಿಗೆ ಅಪ ಚಾರವೆಂಬಂತೆ, ಉತ್ತರಾಖಂಡದ ಹರಿದ್ವಾರದಲ್ಲಿ (Haridwar) ಬಿಜೆಪಿ ನಾಯಕಿ (BJP Women Leader) ನಡೆದುಕೊಂಡಿದ್ದಾಳೆ. ತನ್ನ ಬಾಯ್‌ಫ್ರೆಂಡ್ ಹಾಗೂ ಆತನ ಸ್ನೇಹಿತನಿಂದಲೇ ಸ್ವಂತ ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ ಮಾಡಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಹರಿದ್ವಾರದ ಬಿಜೆಪಿ ಮಹಿಳಾ ಮೋರ್ಚಾದ (BJP Mahila Morcha) ಮಾಜಿ ಅಧ್ಯಕ್ಷೆ ಅನಾಮಿಕಾ ಶರ್ಮಾ ತನ್ನ 13 ವರ್ಷದ ಮಗಳ ಮೇಲೆಯೇ ಅತ್ಯಾಚಾರ ಮಾಡಿಸಿದ್ದಾಳೆ. ಘಟನೆ ಸಂಬಂಧ ಅನಾಮಿಕಾ, ಆಕೆಯ ಬಾಯ್‌ಫ್ರೆಂಡ್ ಸುಮಿತ್ ಪತ್ವಾಲ್ ಮತ್ತು ಆತನ ಸ್ನೇಹಿತ ಶುಭಂನನ್ನ ಪೊಲೀಸರು (Haridwar Police) ಬಂಧಿಸಿದ್ದಾರೆ. ಪ್ರಕರಣ ಬೆಳಕಿಗೆ ಬಂದ ಬಳಿಕ ಬಿಜೆಪಿ ಆಕೆಯನ್ನ ಪಕ್ಷದಿಂದಲೇ ವಜಾ ಮಾಡಿದೆ. ಇದನ್ನೂ ಓದಿ: ಮೆಟ್ರೋ ನಿಲ್ದಾಣದ ಕೆಳಗೆ ಪೋಷಕರೊಟ್ಟಿಗೆ ಮಲಗಿದ್ದ 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ

    ಏನಿದು ಘಟನೆ?
    ಅನಾಮಿಕಾ ಶರ್ಮಾ 2024ರ ವರೆಗೆ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿದ್ದಳು. ನಂತರ ಪಕ್ಷದ ಸದಸ್ಯೆ ಆಗಿ ಮುಂದುವರಿದಿದ್ದಳು. ಆಕೆ ತನ್ನ ಗಂಡನಿಂದ ಬೇರ್ಪಟ್ಟಿದ್ದಳು. ಆದ್ರೆ ಮಗಳು ಅಪ್ಪನೊಂದಿಗೆ ಉಳಿದುಕೊಂಡಿದ್ದಳು. ಅಪರೂಪಕ್ಕೆ ತಾಯಿ ಬಳಿ ಬರುತ್ತಿದ್ದಳು. ಈ ವೇಳೆ ಅನಾಮಿಕಾ, ಸುಮಿತ್‌ನ ಪ್ರೇಮ ಸಂಪಾದಿಸಿ ಆತನ ಹೋಟೆಲ್‌ನಲ್ಲಿಯೇ ಉಳಿದುಕೊಂಡಿದ್ದಳು. ಜನವರಿಯಿಂದ ಮಾರ್ಚ್‌ ವೇಳೆ ಹರಿದ್ವಾರ, ಬೃಂದಾವನ ಮತ್ತು ಆಗ್ರಾದಲ್ಲಿ ಹಲವು ಬಾರಿ ಮಗಳ ಮೇಲೆ ಸುಮಿತ್ ಹಾಗೂ ಆತನ ಸ್ನೇಹಿತ ಶುಭಂನಿಂದ ಅತ್ಯಾಚಾರ ಮಾಡಿಸಿದ್ದಳು. ಈ ವಿಷಯವನ್ನ ತಂದೆಗೆ ಹೇಳದಂತೆ ಬೆದರಿಕೆಯೂ ಹಾಕಿದ್ದಳು ಎಂದು ವರದಿಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: Stampede Case | ಸಿಎಂ ಸೂಚನೆ ಬೆನ್ನಲ್ಲೇ ನಾಲ್ವರು ಅರೆಸ್ಟ್‌, ಉಳಿದವರು ಎಸ್ಕೇಪ್‌

    ಮಂಗಳವಾರ ನಡೆದ ಘಟನೆ ಬಗ್ಗೆ ಅಪ್ರಾಪ್ತೆ ತನ್ನ ತಂದೆಗೆ ಮಾಹಿತಿ ನೀಡಿದ್ದಳು. ಪರಿಣಾಮ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಪೋಕ್ಸೋ ಕಾಯ್ದೆ ಸೇರಿ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಬೆಂಗಳೂರು ಕಾಲ್ತುಳಿತಕ್ಕೆ 11 ಸಾವು ಕೇಸ್‌ – ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಸಿಎಂ ಸೂಚನೆ

  • ಸಂತ್ರಸ್ತೆ ಜೊತೆ ವಿವಾಹ; ಪೋಕ್ಸೊ ಕೇಸ್‌ ಅಪರಾಧಿಯನ್ನು ಜೈಲು ಶಿಕ್ಷೆಯಿಂದ ಪಾರು ಮಾಡಿದ ಸುಪ್ರೀಂ

    ಸಂತ್ರಸ್ತೆ ಜೊತೆ ವಿವಾಹ; ಪೋಕ್ಸೊ ಕೇಸ್‌ ಅಪರಾಧಿಯನ್ನು ಜೈಲು ಶಿಕ್ಷೆಯಿಂದ ಪಾರು ಮಾಡಿದ ಸುಪ್ರೀಂ

    ನವದೆಹಲಿ: ಪೋಕ್ಸೊ ಪ್ರಕರಣವೊಂದರಲ್ಲಿ ಸುಪ್ರೀಂ ಕೋರ್ಟ್‌ (Supreme Court) ಮಹತ್ವದ ತೀರ್ಪೊಂದನ್ನು ನೀಡಿದೆ. ಪೋಕ್ಸೊ (POCSO) ಕಾಯ್ದೆಯಡಿ ದೋಷಿಯಾಗಿದ್ದ ವ್ಯಕ್ತಿಯೊಬ್ಬನಿಗೆ ಸುಪ್ರೀಂ ಕೋರ್ಟ್ ಜೈಲು ಶಿಕ್ಷೆಯಿಂದ ರಕ್ಷಣೆ ನೀಡಿದೆ.

    ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ದ್ವಿ ಸದಸ್ಯ ಪೀಠವು, ಆರೋಪಿಯ ಶಿಕ್ಷೆಯನ್ನು ತಗ್ಗಿಸಿ, ಜೈಲು ಶಿಕ್ಷೆಯಿಂದ ವಿನಾಯಿತಿ ನೀಡಿತು. ಆರೋಪಿಯು ಸಂತ್ರಸ್ತೆಯನ್ನು ಮದುವೆಯಾಗಿರುವ ಕಾರಣವನ್ನು ಗಣನೆಗೆ ತೆಗೆದುಕೊಂಡು ಈ ತೀರ್ಪು ನೀಡಲಾಗಿದೆ. ಕಾನೂನು ಪ್ರಕ್ರಿಯೆಯು ಘಟನೆಗಿಂತ ಸಂತ್ರಸ್ತೆಗೆ ಹೆಚ್ಚಿನ ಸಮಸ್ಯೆಯನ್ನುಂಟುಮಾಡಿದೆ ಎಂದು ನ್ಯಾಯಾಲಯ ತಿಳಿಸಿತು. ಇದನ್ನೂ ಓದಿ: ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ & ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಕೇಂದ್ರ ಅಸ್ತು

    ಕಾನೂನಿನ ಕಟ್ಟುನಿಟ್ಟಾದ ಅನುಷ್ಠಾನದ ಜೊತೆಗೆ ಸಾಮಾಜಿಕ ನ್ಯಾಯ ಮತ್ತು ಸಂತ್ರಸ್ತೆಯ ಒಳಿತಿಗಾಗಿ ಈ ತೀರ್ಪನ್ನು ನೀಡಲಾಗಿದೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ಆದರೆ, ಈ ತೀರ್ಪು ಪೋಕ್ಸೊ ಕಾಯ್ದೆಯ ಗಂಭೀರತೆಯನ್ನು ಕಡಿಮೆಗೊಳಿಸುವುದಿಲ್ಲ ಎಂದು ಒತ್ತಿ ಹೇಳಿದೆ.

    ಪ್ರಕರಣದಲ್ಲಿ ಆರೋಪಿಯು POCSO ಕಾಯ್ದೆಯಡಿ ಲೈಂಗಿಕ ಅಪರಾಧಕ್ಕೆ ಸಂಬಂಧಿಸಿದ ಆರೋಪದಲ್ಲಿ ದೋಷಿಯಾಗಿದ್ದ. ಆದರೆ, ಆರೋಪಿಯು ಸಂತ್ರಸ್ತೆಯೊಂದಿಗೆ ಮದುವೆಯಾಗಿದ್ದಾನೆ ಎಂಬ ಅಂಶವನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿತು. ಈ ಮದುವೆಯು ಒಪ್ಪಿಗೆಯಿಂದ ನಡೆದಿದ್ದು, ಇದು ಸಂತ್ರಸ್ತೆಯ ಜೀವನ ಮತ್ತು ಭವಿಷ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರಿದೆ ಎಂದು ಕೋರ್ಟ್ ತಿಳಿಸಿದೆ. ಇದನ್ನೂ ಓದಿ: Delhi Election| ಆಪ್‌ಗಿಂತ ಮೂರು ಪಟ್ಟು ಹೆಚ್ಚು ಖರ್ಚು ಮಾಡಿತ್ತು ಕಾಂಗ್ರೆಸ್‌ – 68 ಮಂದಿಗೆ ಬಿಜೆಪಿಯಿಂದ ತಲಾ 25 ಲಕ್ಷ

  • ಯುವತಿಯರ ಜೊತೆ ರಾಸಲೀಲೆ – ಮೊಬೈಲ್‌ನಲ್ಲಿ ವಿಡಿಯೋ ಅಲ್ಬಂ ಓಪನ್‌ ಮಾಡಿದ್ದ ಕಾಮುಕ ಅರೆಸ್ಟ್

    ಯುವತಿಯರ ಜೊತೆ ರಾಸಲೀಲೆ – ಮೊಬೈಲ್‌ನಲ್ಲಿ ವಿಡಿಯೋ ಅಲ್ಬಂ ಓಪನ್‌ ಮಾಡಿದ್ದ ಕಾಮುಕ ಅರೆಸ್ಟ್

    ಮಂಗಳೂರು: ಬೆಳ್ತಂಗಡಿಯಲ್ಲಿ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ ಕಳಿಸಿ ಕಿರುಕುಳ ನೀಡುತ್ತಿದ್ದ ಅನ್ಯಕೋಮಿನ ಯುವಕನನ್ನು ಹಿಂದೂಪರ ಸಂಘಟನೆಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

    ಬಂಧಿತನನ್ನು ಕಾರ್ಕಳ (Karkala) ನಿವಾಸಿ ಸೈಯದ್ ಎಂದು ಗುರುತಿಸಲಾಗಿದೆ. ಆರೋಪಿ ವಿದ್ಯಾರ್ಥಿನಿಯೊಬ್ಬಳಿಗೆ ಅಶ್ಲೀಲ ಸಂದೇಶ ಕಳಿಸಿ ಕಿರುಕುಳ ಕೊಡುತ್ತಿದ್ದ. ಆತನನ್ನು ಹಿಂದೂ ಸಂಘಟನೆ ಕಾರ್ಯಕರ್ತರು ಥಳಿಸಿ, ಮೊಬೈಲ್ ಪರಿಶೀಲಿಸಿದ್ದಾರೆ. ಈ ವೇಳೆ ನೂರಾರು ವಿದ್ಯಾರ್ಥಿನಿಯರು ಹಾಗೂ ಯುವತಿಯರೊಂದಿಗೆ ಸರಸ ಸಲ್ಲಾಪದಲ್ಲಿ ತೊಡಗಿದ್ದ ವೀಡಿಯೋಗಳು ಪತ್ತೆಯಾಗಿವೆ.

    ಕಾಮುಕನ ವಿರುದ್ಧ ಬೆಳ್ತಂಗಡಿ (Belthangady) ಪೊಲೀಸರು ಪೋಕ್ಸೋ ಕಾಯ್ದೆಯಡಿ (POCSO Case) ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿ ಕಾಲೇಜು ವಿದ್ಯಾರ್ಥಿಯಾಗಿದ್ದು, ಕಬ್ಬಡ್ಡಿ ಆಟಗಾರ ಎಂದು ತಿಳಿದು ಬಂದಿದೆ.

  • ಚಾಕೊಲೇಟ್ ಕೊಡುವ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರ – ಕಾಮುಕ ಅರೆಸ್ಟ್‌

    ಚಾಕೊಲೇಟ್ ಕೊಡುವ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರ – ಕಾಮುಕ ಅರೆಸ್ಟ್‌

    ಮಡಿಕೇರಿ: ಚಾಕೊಲೇಟ್ ಕೊಡುವ ನೆಪದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ವ್ಯಕ್ತಿಯೋರ್ವ ತನ್ನ ಮನೆಯಲ್ಲೇ ಅತ್ಯಚಾರ ಎಸಗಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಗ್ರಾಮಾಂತರ ಠಾಣಾ (Madikeri Rural Police Station) ವ್ಯಾಪ್ತಿಯಲ್ಲಿ ನಡೆದಿದೆ.

    ಮಧು (45) ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಕಾಮುಕ. ನಿನ್ನೆ (ಸೋಮವಾರ) ಸಂಜೆ ತನ್ನ ಮಗಳಿಂದ ಬಾಲಕಿಗೆ ಪೋನ್ ಮಾಡಿ ಮನೆಗೆ ಕರೆಸಿಕೊಂಡಿದ್ದಾನೆ. ಬೇಸಿಗೆ ರಜೆ ಇರುವ ಕಾರಣ ಬಾಲಕಿ ಪೋಷಕರ ಬಳಿ ಸ್ನೇಹಿತೆ ಮನೆಗೆ ಹೋಗಿ ಬರುವುದಾಗಿ ತಿಳಿಸಿ ಹೋಗಿದ್ದಾಳೆ. ಮನೆಗೆ ಹೋದ ಸಂದರ್ಭದಲ್ಲಿ ಮಧು ತನ್ನ ಮಗಳಿಗೆ ಹಾಗೂ ಅಕೆಯ ಸ್ನೇಹಿತೆಗೆ ಚಾಕೊಲೇಟ್ ಕೊಟ್ಟಿದ್ದಾನೆ. ನಂತರ ತನ್ನ ಮಗಳಿಗೆ ಮಗಳಿಗೆ ಅಂಗಡಿಗೆ ಹೋಗಿ ಮತ್ತಷ್ಟು ಚಾಕೊಲೇಟ್ ತರುವಂತೆ ಹೇಳಿ ಕಳಿಸಿದ್ದಾನೆ‌.

    ಮಗಳು ಚಾಕೊಲೇಟ್‌ ತರಲು ಅಂಗಡಿಗೆ ಹೋದ ನಂತರ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಂತರ ಬಾಲಕಿಯ ಪೋಷಕರು ತನ್ನ ಮಗಳು ಮನೆಗೆ ಕಳುಹಿಸುವಂತೆ ಹೇಳಿದ್ದಾರೆ. ಆಗ ಮಧು ನಿಮ್ಮ ಮಗಳು ಬೆಳಿಗ್ಗೆ ಬರುತ್ತಾಳೆ ನನ್ನ ಮಗಳೊಂದಿಗೆ ಆಟವಾಡುತ್ತಿದ್ದಾಳೆ ಎಂದು ಹೇಳಿ ಫೋನ್‌ ಕರೆಯನ್ನ ಕಟ್‌ ಮಾಡಿದ್ದಾನೆ. ಅನುಮಾನಗೊಂಡ ಬಾಲಕಿಯ ಪೋಷಕರು ಮಗಳ ಸ್ನೇಹಿತೆಯ ಮನೆಗೆ ಹೋಗಿ ವಿಚಾರ ಮಾಡುವಾಗ ತನ್ನ ಮೇಲೆ ನಡೆದಿರುವ ಘಟನೆ ಬಗ್ಗೆ ಪೋಷಕರ ಬಳಿ ಬಾಲಕಿ ಹೇಳಿಕೊಂಡಿದ್ದಾಳೆ‌.

    ಕೂಲಿ ಕಾರ್ಮಿಕರಾಗಿದ್ದ ಬಾಲಕಿಯ ಪೋಷಕರು ಮಡಿಕೇರಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಳಿಕ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

  • ಕಲಬುರಗಿ | ಪೋಕ್ಸೊ ಪ್ರಕರಣದ ಆರೋಪಿಗೆ ಗಲ್ಲು ಶಿಕ್ಷೆ ಪ್ರಕಟ

    ಕಲಬುರಗಿ | ಪೋಕ್ಸೊ ಪ್ರಕರಣದ ಆರೋಪಿಗೆ ಗಲ್ಲು ಶಿಕ್ಷೆ ಪ್ರಕಟ

    ಕಲಬುರಗಿ: ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ಕೋರ್ಟ್ ಆರೋಪಿಗೆ ಗಲ್ಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.

    ಅಪರಾಧಿ ಯುವಕನನ್ನು ಆಳಂದ (Alanda) ತಾಲ್ಲೂಕಿನ ದೇವಂತಗಿ ಗ್ರಾಮದ ಗುಂಡೇರಾವ ಚೋಪಡೆ (28) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಕರ್ನಾಟಕದ ನಾಲ್ವರು ಜಡ್ಜ್‌ಗಳ ವರ್ಗಾವಣೆಗೆ ಶಿಫಾರಸು

    2023ರ ಜು.15ರಂದು ಆಳಂದ ತಾಲ್ಲೂಕಿನ ಗ್ರಾಮವೊಂದರ ಬಾಲಕಿ ಪುಸ್ತಕವೊಂದನ್ನು ತರಲು ಮತ್ತೊಂದು ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ ಅಪರಾಧಿ ಗುಂಡೇರಾವ ಬಾಲಕಿಯನ್ನು ಬಲವಂತವಾಗಿ ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದ. ಬಳಿಕ ಉಸಿರುಗಟ್ಟಿಸಿ ಸಾಯಿಸಿ, ಪಕ್ಕದ ಹೊಲದಲ್ಲಿದ್ದ ಬಾವಿಯೊಂದರಲ್ಲಿ ಶವವನ್ನು ಬೀಸಾಡಿ ಹೋಗಿದ್ದ. ಈ ಕುರಿತು ಆಳಂದ ತಾಲ್ಲೂಕಿನ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ತನಿಖಾಧಿಕಾರಿ ಭಾಸು ಚವ್ಹಾಣ ನೇತೃತ್ವದಲ್ಲಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

    ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು ಪೋಕ್ಸೊ ಕಾಯ್ದೆಯಡಿ ಆರೋಪಿಗೆ ಗಲ್ಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ, ಆದೇಶ ಹೊರಡಿಸಿದ್ದಾರೆ. ಅಲ್ಲದೆ, ಕಾನೂನು ಪ್ರಾಧಿಕಾರದ ವತಿಯಿಂದ 4 ಲಕ್ಷ ರೂ. ಪರಿಹಾರವನ್ನು ಮೃತ ಬಾಲಕಿಯ ತಾಯಿಗೆ ನೀಡಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ.ತುಪ್ಪದ ಅವರು ವಾದ ಮಂಡಿಸಿದ್ದರು.

    ನಿಂಬರ್ಗಾ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣವು ಜಿಲ್ಲೆಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.ಇದನ್ನೂ ಓದಿ: ನೆಲಕ್ಕೆ ಬಿದ್ರೂ ಬಿಡದೆ ಡೆಲಿವರಿ ಬಾಯ್ ಮೇಲೆ ಹಲ್ಲೆ ಮಾಡಿ ವಿಂಗ್ ಕಮಾಂಡರ್ ದರ್ಪ

  • ಹುಬ್ಬಳ್ಳಿ ಬಾಲಕಿ ಕೊಲೆ ಕೇಸ್ – ಮರಣೋತ್ತರ ಪರೀಕ್ಷೆಯಲ್ಲಿ ಅತ್ಯಾಚಾರ ನಡೆಸಿರೋ ಬಗ್ಗೆ ಸಾಕ್ಷ್ಯ ಲಭ್ಯ, ಪೋಕ್ಸೋ ಕೇಸ್ ದಾಖಲು

    ಹುಬ್ಬಳ್ಳಿ ಬಾಲಕಿ ಕೊಲೆ ಕೇಸ್ – ಮರಣೋತ್ತರ ಪರೀಕ್ಷೆಯಲ್ಲಿ ಅತ್ಯಾಚಾರ ನಡೆಸಿರೋ ಬಗ್ಗೆ ಸಾಕ್ಷ್ಯ ಲಭ್ಯ, ಪೋಕ್ಸೋ ಕೇಸ್ ದಾಖಲು

    – ಆರೋಪಿ ಒಳಉಡುಪಿನಲ್ಲಿ ಬಾಲಕಿಯ ಲೆಗ್ಗಿನ್ಸ್ ಬಟ್ಟೆ ಪತ್ತೆ

    ಹುಬ್ಬಳ್ಳಿ: ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಿತೇಶ್‌ ಕುಮಾರ್ ಮರಣೋತ್ತರ ಪರೀಕ್ಷೆಯಲ್ಲಿ (Postmortem) ಅತ್ಯಾಚಾರ ನಡೆಸಿರುವ ಬಗ್ಗೆ ಸಾಕ್ಷ್ಯ ಲಭ್ಯವಾಗಿದ್ದು, ಆರೋಪಿ ಒಳ ಉಡುಪಿನಲ್ಲಿ ಬಾಲಕಿಯ ಲೆಗ್ಗಿನ್ಸ್ ಬಟ್ಟೆ ಪತ್ತೆಯಾಗಿದೆ. ಇದೀಗ ಆರೋಪಿಯ ವಿರುದ್ಧ ಪೋಕ್ಸೋ ಕೇಸ್ (Pocso Case) ದಾಖಲಾಗಿದೆ.

    ಇಂದು ಕಿಮ್ಸ್ (KIMS) ಆಸ್ಪತ್ರೆಯಲ್ಲಿ ಆರೋಪಿಯ ಮರಣೋತ್ತರ ಪರೀಕ್ಷೆ ನಡೆದಿದ್ದು, ಈ ವೇಳೆ ಅತ್ಯಾಚಾರ ನಡೆಸಿರುವ ಬಗ್ಗೆ ಸಾಕ್ಷ್ಯ ಲಭ್ಯವಾಗಿದೆ. ವಿಕೃತ ಕಾಮಿಯಂತೆ ಆರೋಪಿ ವರ್ತಿಸಿದ್ದು, ಆತನ ಒಳಉಡುಪಿನಲ್ಲಿ ಬಾಲಕಿಯ ಲೆಗ್ಗಿನ್ಸ್ ಬಟ್ಟೆ ಪತ್ತೆಯಾಗಿದೆ ಎಂದು ಕಿಮ್ಸ್ ವೈದ್ಯ ಮೂಲದಿಂದ ಮಾಹಿತಿ ತಿಳಿದುಬಂದಿದೆ.ಇದನ್ನೂ ಓದಿ: ಹುಬ್ಬಳ್ಳಿ | ಬಾಲಕಿ ಕೊಲೆ ಕೇಸ್ – ಆರೋಪಿಗೆ ಗುಂಡಿಟ್ಟ `ಲೇಡಿ ಸಿಂಗಂ’ಗೆ ಮುಂದಿನ ತಿಂಗಳಲ್ಲೇ ಮದುವೆ!

    ಪೊಲೀಸರು ಈಗಾಗಲೇ ಆರೋಪಿಯನ್ನು ಎನ್ಕೌಂಟರ್ ಮಾಡಿದ್ದು, ಆರೋಪಿ ವಿರುದ್ಧ ಪೋಕ್ಸೋ, ಅಪಹರಣ ಮತ್ತು ಕೊಲೆ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಘಟನೆ ಏನು?
    ಸೈಕೋಪಾತ್ ಒಬ್ಬ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಬಿಹಾರ ಮೂಲದ ಸೈಕೋಪಾತ್ ಬಾಲಕಿಯನ್ನ ಶೆಡ್‌ಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದನು. ಬಾಲಕಿ ಚೀರಾಟ ಕೇಳಿ ಅಲ್ಲೇ ಇದ್ದ ಸ್ಥಳೀಯರು ಶೆಡ್‌ನತ್ತ ಬಂದಿದ್ದರು. ಜನ ಬರುತ್ತಿರುವುದನ್ನು ಕಂಡ ಸೈಕೋಪಾತ್ ಭಯದಿಂದ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಿ, ಎಸ್ಕೇಪ್ ಆಗಿದ್ದನು.

    ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆಯಲೆಂದು ಹೋಗಿದ್ದರು. ಈ ವೇಳೆ ಪೊಲೀಸರ ಮೇಲೆ ಕಲ್ಲು ತೂರಿ, ಎಸ್ಕೇಪ್ ಆಗಲು ಯತ್ನಿಸಿದ್ದ. ಒಮ್ಮೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ರೂ ಕೇಳದೇ ಪೊಲೀಸರ ಮೇಲೆ ಕಲ್ಲು ತೂರಿದ್ದ. ಈ ವೇಳೆ ಹುಬ್ಬಳ್ಳಿ ಪೊಲೀಸರು ಆತ್ಮರಕ್ಷಣೆಗಾಗಿ ಫೈರಿಂಗ್ ಮಾಡಿದ್ದರು. ಅಶೋಕನಗರ ಪೊಲೀಸ್ ಠಾಣೆಯ ಮಹಿಳಾ ಪಿಎಸ್‌ಐ ಅನ್ನಪೂರ್ಣ (PSI Annapurna) ಅವರು ಹಾರಿಸಿದ ಗುಂಡು ಬೆನ್ನಿಗೆ ತಾಗಿ ಗಾಯಗೊಂಡಿದ್ದ ಆರೋಪಿಯನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ, ಚಿಕಿತ್ಸೆ ಫಲಿಸದೇ ಆರೋಪಿ ರಿತೇಶ್ ಸಾವನ್ನಪ್ಪಿದ್ದ.ಇದನ್ನೂ ಓದಿ: ಹುಬ್ಬಳ್ಳಿ | 5 ವರ್ಷದ ಬಾಲಕಿ ಹತ್ಯೆ – ಕುರುಬ ಸಂಪ್ರದಾಯದಂತೆ ನೆರವೇರಿದ ಅಂತ್ಯಕ್ರಿಯೆ

  • ಪೋಕ್ಸೊ ಕೇಸ್‌ | ವಿಶೇಷ ನ್ಯಾಯಾಲಯದ ಖುದ್ದು ಹಾಜರಾತಿ ಆದೇಶಕ್ಕೆ ಹೈಕೋರ್ಟ್‌ ತಡೆ

    ಪೋಕ್ಸೊ ಕೇಸ್‌ | ವಿಶೇಷ ನ್ಯಾಯಾಲಯದ ಖುದ್ದು ಹಾಜರಾತಿ ಆದೇಶಕ್ಕೆ ಹೈಕೋರ್ಟ್‌ ತಡೆ

    ಬೆಂಗಳೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (B.S. Yediyurappa) ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ  (POCSO Case) ಖುದ್ದು ಹಾಜರಾಗುವಂತೆ ನೀಡಿದ್ದ ವಿಶೇಷ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್‌ (High Court) ತಡೆ ನೀಡಿದೆ.

    ವಿಶೇಷ ನ್ಯಾಯಾಲಯದ ಸಮನ್ಸ್ ಹಾಗೂ ಕೋರ್ಟ್ ಕಾಗ್ನಿಜೆನ್ಸ್ ರದ್ದು ಮಾಡುವಂತೆ ಕೋರಿ ಬಿಎಸ್‍ವೈ ಮತ್ತು ಇತರ ಮೂವರು ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ಏಕಸದಸ್ಯ ಪೀಠ ಸಮನ್ಸ್ ಆದೇಶಕ್ಕೆ ತಡೆ ನೀಡಿದೆ.

    ಮುಂದಿನ ವಿಚಾರಣೆಯವರೆಗೂ ಫಾಸ್ಟ್ ಟ್ರ್ಯಾಕ್ ಕೋರ್ಟ್‍ಗೆ ಹಾಜರಾತಿಗೆ ವಿನಾಯಿತಿ ನೀಡಲಾಗಿದೆ. ಈ ಮೂಲಕ ಮಾ.15ರಂದು ಅವರು ಫಾಸ್ಟ್ ಟ್ರ್ಯಾಕ್ ಕೋರ್ಟ್‍ಗೆ ಖುದ್ದು ಹಾಜರಾಗುವುದರಿಂದ ಬಚಾವ್ ಆಗಿದ್ದಾರೆ. ಶನಿವಾರ ಖುದ್ದು ವಿಚಾರಣೆ ಹಾಜರಾಗುವಂತೆ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು.

    ಬಿಎಸ್‍ವೈ ಅರ್ಜಿಯ ವಿವರವಾದ ವಿಚಾರಣೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿದೆ.

    ಯಡಿಯೂರಪ್ಪ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ವಾದ ಮಂಡಿಸಿದರು. ಈ ಹಿಂದೆ ಹೈಕೋರ್ಟ್ ಮೆರಿಟ್ಸ್ ಆಧಾರದಲ್ಲಿ ತೀರ್ಮಾನಿಸಿರಲಿಲ್ಲ. ವಿಚಾರಣೆ ವೇಳೆ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿತ್ತು. ಖುದ್ದು ಹಾಜರಾತಿಯಿಂದಲೂ ಹೈಕೋರ್ಟ್ ವಿನಾಯಿತಿ ನೀಡಿತ್ತು.

    ಫೆ.2, 2024 ರಂದು ಬಾಲಕಿಯೊಬ್ಬಳನ್ನು ಅನುಚಿತವಾಗಿ ಸ್ಪರ್ಶಿಸಿದ ಆರೋಪ ಅವರ ಮೇಲಿದೆ. ಈ ಸಂಬಂಧ 1 ತಿಂಗಳ ಬಳಿಕ ಪೊಲೀಸ್ ಆಯುಕ್ತರಿಗೆ  ಬಾಲಕಿಯ ತಾಯಿ ದೂರು ನೀಡಿದ್ದರು. ಆಕೆಯ ತಾಯಿಯ ಹೇಳಿಕೆ ಮೇಲೆ ಆರೋಪಪಟ್ಟಿ ದಾಖಲಿಸಲಾಗಿತ್ತು.

  • ಪೋಕ್ಸೊ ಕೇಸ್‌ನಲ್ಲಿ ಬಿಎಸ್‌ವೈಗೆ ಶುರುವಾಯ್ತು ಸಂಕಷ್ಟ – ಕೋರ್ಟ್‌ನಿಂದ ಸಮನ್ಸ್ ಜಾರಿ

    ಪೋಕ್ಸೊ ಕೇಸ್‌ನಲ್ಲಿ ಬಿಎಸ್‌ವೈಗೆ ಶುರುವಾಯ್ತು ಸಂಕಷ್ಟ – ಕೋರ್ಟ್‌ನಿಂದ ಸಮನ್ಸ್ ಜಾರಿ

    ಬೆಂಗಳೂರು: ಪೋಕ್ಸೊ ಕೇಸ್‌ನಲ್ಲಿ (POCSO Case) ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ (B.S.Yediyurappa) ಅವರಿಗೆ ಮತ್ತೆ ಸಂಕಷ್ಟ ಶುರುವಾಗಿದೆ. ಕಾಗ್ನಿಜೆನ್ಸ್‌ ಆರಂಭಿಸಿದ ಕೋರ್ಟ್‌ನಿಂದ ಸಮನ್ಸ್‌ ಜಾರಿಯಾಗಿದೆ.

    ನಿನ್ನೆಯಷ್ಟೇ ಹುಟ್ಟುಹಬ್ಬ ಆಚರಿಸಿಕೊಂಡ ಖುಷಿಯಲ್ಲಿದ್ದ ಮಾಜಿ ಸಿಎಂ ಬಿಎಸ್‌ವೈಗೆ ಸಂಕಷ್ಟ ಶುರುವಾಗಿದೆ. ಪೋಕ್ಸೊ ಕೇಸ್‌ನಲ್ಲಿ ಬಿಎಸ್‌ವೈಗೆ ಫಾಸ್ಟ್‌ಟ್ರ್ಯಾಕ್ ಕೋರ್ಟ್ 1 ರಿಂದ ಸಮನ್ಸ್ ಜಾರಿಯಾಗಿದ್ದು, ಮಾ.15 ಕ್ಕೆ ಖುದ್ದು ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿ ನ್ಯಾಯಾಲಯ ಆದೇಶಿಸಿದೆ. ಇದನ್ನೂ ಓದಿ: ನಟ ದರ್ಶನ್‌ಗೆ ಇನ್ಮುಂದೆ ದೇಶಾದ್ಯಂತ ಸಂಚಾರಕ್ಕೆ ಅವಕಾಶ – ಹೈಕೋರ್ಟ್ ಆದೇಶ

    ಪೋಕ್ಸೊ‌ ಕೇಸ್‌ನಲ್ಲಿ ಕೋರ್ಟ್ ಕಾಗ್ನಿಜೆನ್ಸ್ ತೆಗೆದುಕೊಂಡಿದ್ದು, ಕಾಗ್ನಿಜೆನ್ಸ್ ತೆಗೆದುಕೊಂಡ ಬೆನ್ನಲ್ಲೇ ಸಮನ್ಸ್ ಜಾರಿಯಾಗಿದೆ. ಹೈಕೋರ್ಟ್‌ನಲ್ಲಿ ಪ್ರಕರಣ ರದ್ದು ಮಾಡುವಂತೆ ಬಿಎಸ್‌ವೈ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹಳೆಯ ಕಾಗ್ನಿಜೆನ್ಸ್ ರದ್ದು ಮಾಡಿದ್ದ ಹೈಕೋರ್ಟ್, ಹೊಸದಾಗಿ ಕಾಗ್ನಿಜೆನ್ಸ್ ತೆಗೆದುಕೊಳ್ಳಬಹುದು ಅಂತ ಆದೇಶ ಮಾಡಿತ್ತು.

    ಅಲ್ಲದೇ, ನಿರೀಕ್ಷಣಾ ಜಾಮೀನು ಮುಂದುವರೆಸಿತ್ತು. ಇದೀಗ ಸಿಐಡಿ ಸಲ್ಲಿಸಿರುವ ಚಾರ್ಜ್‌ಶೀಟ್ ಮೇಲೆ ಕೋರ್ಟ್‌ನಲ್ಲಿ ವಿಚಾರಣೆ ಆರಂಭವಾಗಿದೆ. ಇದನ್ನೂ ಓದಿ: ಮತ್ತೆರಡು ವಿಧೇಯಕ ವಾಪಸ್ – ರಾಜ್ಯಪಾಲರು vs ರಾಜ್ಯ ಸರ್ಕಾರದ ನಡುವೆ ಮುಂದುವರಿದ ಜಟಾಪಟಿ

  • ಕನ್ನಡದಲ್ಲಿ ಮಾತನಾಡು ಎಂದಿದ್ದಕ್ಕೆ ಹಲ್ಲೆ – ಈಗ ನಿರ್ವಾಹಕನ ಮೇಲೆಯೇ ಪೋಕ್ಸೋ ಕೇಸ್‌ ದಾಖಲು

    ಕನ್ನಡದಲ್ಲಿ ಮಾತನಾಡು ಎಂದಿದ್ದಕ್ಕೆ ಹಲ್ಲೆ – ಈಗ ನಿರ್ವಾಹಕನ ಮೇಲೆಯೇ ಪೋಕ್ಸೋ ಕೇಸ್‌ ದಾಖಲು

    ಬೆಂಗಳೂರು: ಕನ್ನಡದಲ್ಲಿ (Kannada) ಮಾತನಾಡು ಎಂದಿದ್ದಕ್ಕೆ ನಿರ್ವಾಹಕನ (Conductor) ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದೆ. ಈಗ ನಿರ್ವಾಹಕ ಮಹಾದೇವ್‌ ಹುಕ್ಕೇರಿ ಮೇಲೆ ಪೋಕ್ಸೋ ಪ್ರಕರಣ (POCSO Case) ದಾಖಲಾಗಿದೆ.

    ಬಸ್‌ನಲ್ಲೇ ಕೆಟ್ಟ ದೃಷ್ಟಿಯಿಂದ ನೋಡಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಮಾರಿಹಾಳ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

    ಕನ್ನಡ ಮಾತನಾಡಿ ಎಂದಿದ್ದಕ್ಕೆ ನನ್ನ ಮೇಲೆ ಹಲ್ಲೆಯಾಗಿದೆ ಎಂದು ಮಹಾದೇವ್‌ ಆರೋಪಿಸಿದ್ದರು. ಆ ದೂರನ್ನಾಧರಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

    ಈ ಪ್ರಕರಣ ರಾಜ್ಯಾದ್ಯಂತ ಸುದ್ದಿಯಾಗುತ್ತಿದ್ದಂತೆ ಇಂದು ನಸುಕಿನ ಜಾವ 2:30ರ ವೇಳೆಗೆ ಬಾಲಕಿಯಿಂದ ದೂರು ದಾಖಲಾಗಿದೆ. ಪೋಕ್ಸೋ ಬಗ್ಗೆ ಶುಕ್ರವಾರ ಬೆಳಗ್ಗೆಯಿಂದ ರಾತ್ರಿಯವರೆಗೂ ಎಲ್ಲೂ ಪ್ರಸ್ತಾಪವೇ ಆಗಿಲ್ಲ. ಆದರೆ ನಿರ್ವಾಹಕ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ರಾತ್ರೋರಾತ್ರಿ ಪೋಕ್ಸೋ ಪ್ರಕರಣ ದಾಖಲಾಗಿರುವುದು ಹಲವು ಅನುಮಾನಗಳನ್ನು ಹುಟ್ಟಿಹಾಕಿದೆ. ತುಂಬಿದ್ದ ಬಸ್‌ನಲ್ಲಿ ಬಾಲಕಿಯನ್ನ ಕೆಟ್ಟ ದೃಷ್ಟಿಯಿಂದ ನೋಡಲು ಹೇಗೆ ಸಾಧ್ಯ ಎಂಬ ಪ್ರಶ್ನೆ ಎದ್ದಿದೆ.

    ಪೋಕ್ಸೋ ಪ್ರಕರಣ ದಾಖಲಾದ ಬಗ್ಗೆ ಪಬ್ಲಿಕ್‌ ಟಿವಿಗೆ ಪ್ರತಿಕ್ರಿಯಿಸಿದ ಮಹಾದೇವ್‌ ಅವರು, ನನಗೆ ದೂರು ನೀಡಿದ ಹುಡುಗಿಯಷ್ಟು ಪ್ರಾಯದ ಮಗಳಿದ್ದಾಳೆ. ಪ್ರಕರಣದ ದಿಕ್ಕು ತಪ್ಪಿಸಲು ನನ್ನ ಮೇಲೆ ಸುಳ್ಳು ಕೇಸ್‌ ದಾಖಲಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

     

    ಏನಿದು ಘಟನೆ?
    ಬೆಳಗಾವಿ-ಸುಳೇಬಾವಿ ಮಾರ್ಗಮಧ್ಯೆ ಸಂಚರಿಸುವ ಬಸ್‌ನಲ್ಲಿ ಟಿಕೆಟ್‌ ತೆಗೆದುಕೊಳ್ಳುವ ವಿಚಾರಕ್ಕೆ ಗಲಾಟೆ ನಡೆದಿತ್ತು. ಮಾಧ್ಯಮಗಳ ಜೊತೆ ಮಾತನಾಡಿದ್ದ ಮಹಾದೇವ್‌, ಬಿಕೆ ಬಾಳೇಕುಂದ್ರಿಗೆ ಸಿಬಿಟಿಯಿಂದ ಯುವಕ ಮತ್ತು ಯುವತಿ ಬಸ್ ಹತ್ತಿದ್ದರು. ಯುವತಿ ಎರಡು ಫ್ರೀ ಟಿಕೆಟ್‌ ಎಂದು ಹೇಳಿ ಟಿಕೆಟ್‌ ಪಡೆದಳು. ಯುವಕ ಟಿಕೆಟ್‌ ಪಡೆದಿರಲಿಲ್ಲ. ಈ ವಿಚಾರಕ್ಕೆ ನಾನು ಪ್ರಶ್ನೆ ಮಾಡಿದ್ದೆ. ನೀವು ಟಿಕೆಟ್​ ಪಡೆಯುವಾಗ ಸರಿಯಾಗಿ ಹೇಳಿ ತೆಗೆದುಕೊಳ್ಳಬೇಕು ಎಂದು ಆಕೆ ತಿಳಿ ಹೇಳಿದ್ದೆ. ಈ ಸಂದರ್ಭದಲ್ಲಿ ಆಕೆ ಮರಾಠಿಯಲ್ಲಿ ಮಾತಾಡು, ಮರಾಠಿ ಕಲಿತುಕೊಳ್ಳಬೇಕು ಎಂದು ನನಗೆ ಮರಾಠಿಯಲ್ಲೇ ಬೈದಳು. ಮುಂದೆ ಬಾಳೇಕುಂದ್ರಿ ಕೆಎಚ್ ಬರುತ್ತಿದ್ದಂತೆ ಅವರ ಕಡೆಯ 20 ಜನರು ನನ್ನ ಮೇಲೆ ಹಲ್ಲೆ ಮಾಡಲು ಬಂದರು. ತಲೆ, ಮೈ, ಕೈಗೂ ಹೊಡೆದಿದ್ದಾರೆ ಎಂದು ತಿಳಿಸಿದರು.