Tag: poison

  • ಬದುಕಲು ಸಾಧ್ಯವಾಗುತ್ತಿಲ್ಲ, ದಯಮಾಡಿ ನನಗೆ ವಿಷ ಕೊಡಿ: ಜಡ್ಜ್‌ ಮುಂದೆ ದರ್ಶನ್‌ ಮನವಿ

    ಬದುಕಲು ಸಾಧ್ಯವಾಗುತ್ತಿಲ್ಲ, ದಯಮಾಡಿ ನನಗೆ ವಿಷ ಕೊಡಿ: ಜಡ್ಜ್‌ ಮುಂದೆ ದರ್ಶನ್‌ ಮನವಿ

    ಬೆಂಗಳೂರು: ದಯಮಾಡಿ ನನಗೆ ವಿಷ (Poison) ಕೊಡಿ ಎಂದು ನಟ ದರ್ಶನ್‌ (Darshan) ನ್ಯಾಯಾಧೀಶರ (Judge) ಮುಂದೆ ಮನವಿ ಮಾಡಿದ್ದಾರೆ.

    ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾಗಿ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ಸೇರಿ ಇನ್ನಿತರ ಆರೋಪಿಗಳನ್ನು ರಾಜ್ಯದ ಇತರೆ ಕಾರಾಗೃಹಗಳಿಗೆ ವರ್ಗಾವಣೆ ಮಾಡುವಂತೆ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿ ಹಾಗೂ ಹೆಚ್ಚುವರಿ ಹಾಸಿಗೆ ಹಾಗೂ ದಿಂಬು ನೀಡುವಂತೆ ದರ್ಶನ್ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿ ವಿಚಾರಣೆ ಇಂದು ನಗರದ 64ನೇ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯಿತು.

    ವಿಚಾರಣೆ ಸಂದರ್ಭದಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಪರಪ್ಪನ ಅಗ್ರಹಾರದಿಂದ ಹಾಜರಾದ ದರ್ಶನ್‌, ನನಗೆ ದಯಮಾಡಿ ವಿಷ ನೀಡಿ. ಬಿಸಿಲು ನೋಡಿ ಬಹಳ ದಿನವಾಗಿದೆ. ಬಟ್ಟೆಗಳು ವಾಸನೆ ಬರುತ್ತಿವೆ. ಫಂಗಸ್‌ನಿಂದಾಗಿ ಇಲ್ಲಿ ಬದುಕಲು ಆಗುತ್ತಿಲ್ಲ. ದಯಮಾಡಿ ನನಗೆ ವಿಷ ನೀಡುವಂತೆ ಆದೇಶಿಸಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ದರ್ಶನ್ ಅಮೇಝಿಂಗ್ ವ್ಯಕ್ತಿ ಕ್ರಾಂತಿ ಸೆಟ್‍ನ ಮೆಲುಕು ಹಾಕಿದ ಪುಷ್ಪವತಿ

     

    ಈ ಮನವಿಗೆ ಜಡ್ಜ್‌ ಹಾಗೆಲ್ಲ ಆದೇಶ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು. ವಿಷ ಕೊಡಿ ಎಂದು ದರ್ಶನ್‌ ಮೂರು ಬಾರಿ ಬೇಡಿಕೊಂಡರೆ ಫಂಗಸ್‌ ಆಗಿದೆ ಎಂದು ಹಲವು ಬಾರಿ ಅಳಲು ತೋಡಿಕೊಂಡರು.  ದೈವ ಭಕ್ತರಾಗಿರುವ ದರ್ಶನ್‌ ಇಂದು ಹಣೆಗೆ ಕುಂಕುಮ ಹಚ್ಚಿಕೊಂಡು ವಿಚಾರಣೆಗೆ ಹಾಜರಾಗಿದ್ದು ವಿಶೇಷವಾಗಿತ್ತು.

    ಪ್ರಾಸಿಕ್ಯೂಷನ್ ಮತ್ತು ಹೆಚ್ಚುವರಿ ಹಾಸಿಗೆ ಹಾಗೂ ದಿಂಬು ನೀಡುವಂತೆ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಕೋರ್ಟ್‌ ಇಂದು ಮಧ್ಯಾಹ್ನ 3 ಗಂಟೆಗೆ ತೀರ್ಪು ಪ್ರಕಟಿಸುವುದಾಗಿ ಹೇಳಿದೆ.

  • ಕಾರು ಅಪಘಾತದಲ್ಲಿ ರಿಷಭ್‌ ಪಂತ್‌ ಉಳಿಸಿದ್ದ ವ್ಯಕ್ತಿ ಪ್ರೇಯಸಿ ಜೊತೆ ಆತ್ಮಹತ್ಯೆಗೆ ಯತ್ನ – ಪ್ರಿಯತಮೆ ಸಾವು

    ಕಾರು ಅಪಘಾತದಲ್ಲಿ ರಿಷಭ್‌ ಪಂತ್‌ ಉಳಿಸಿದ್ದ ವ್ಯಕ್ತಿ ಪ್ರೇಯಸಿ ಜೊತೆ ಆತ್ಮಹತ್ಯೆಗೆ ಯತ್ನ – ಪ್ರಿಯತಮೆ ಸಾವು

    – ಪ್ರೀತಿಸಿದ್ದ ಜೋಡಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

    ಲಕ್ನೋ: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಿಷಭ್‌ ಪಂತ್‌ (Rishabh Pant) ಉಳಿಸಿದ್ದ ವ್ಯಕ್ತಿ ಮತ್ತು ಆತನ ಪ್ರೇಯಸಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿತ್ತು. ಈ ವೇಳೆ ಪ್ರಿಯತಮೆ ಮೃತಪಟ್ಟಿದ್ದಾಳೆ.

    2022 ರಲ್ಲಿ ಭಾರತೀಯ ಕ್ರಿಕೆಟಿಗ ರಿಷಭ್ ಪಂತ್ ಅವರ ಕಾರು ಅಪಘಾತವಾಗಿತ್ತು. ಅವರ ಜೀವವನ್ನು ಉಳಿಸಿದ್ದ 25 ವರ್ಷದ ಯುವಕ ರಜತ್ ಕುಮಾರ್, ಫೆ.9 ರಂದು ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಬುಚ್ಚಾ ಬಸ್ತಿ ಎಂಬ ಹಳ್ಳಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ.

    ಕುಮಾರ್ ಮತ್ತು 21 ವರ್ಷದ ಗೆಳತಿ ಮನು ಕಶ್ಯಪ್ ಇವರಿಬ್ಬರ ಪ್ರೀತಿಗೆ ಕುಟುಂಬಗಳು ವಿರೋಧ ವ್ಯಕ್ತಪಡಿಸಿದ್ದವು. ಹೀಗಾಗಿ, ಇಬ್ಬರೂ ವಿಷ ಸೇವಿಸಿದ್ದಾರೆ ಎನ್ನಲಾಗಿದೆ. ಕಶ್ಯಪ್ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾಳೆ. ಕುಮಾರ್ ಇನ್ನೂ ಗಂಭೀರ ಸ್ಥಿತಿಯಲ್ಲಿದ್ದಾನೆ.

    ಬೇರೆ ಬೇರೆ ಜಾತಿಯವರಾದ ಕಾರಣ ಮನೆಯವರು ಒಪ್ಪಿರಲಿಲ್ಲ. ಎರಡೂ ಕುಟುಂಬಗಳು ಬೇರೆಡೆ ವಿವಾಹಗಳನ್ನು ನಿಶ್ಚಯ ಮಾಡಿಕೊಂಡಿದ್ದವು. ಇದು ಅವರನ್ನು ಆತ್ಮಹತ್ಯೆಗೆ ಪ್ರೇರೇಪಿಸಿದೆ. ಕುಮಾರ್‌ ವಿರುದ್ಧ ಕಶ್ಯಪ್‌ ತಾಯಿ ಗಂಭೀರ ಆರೋಪ ಮಡಿದ್ದಾರೆ.

    2022ರ ಡಿಸೆಂಬರ್‌ನಲ್ಲಿ ರಿಷಭ್‌ ಪಂತ್‌ ದೆಹಲಿಯಿಂದ ಉತ್ತರಾಖಂಡಕ್ಕೆ ಕಾರಿನಲ್ಲಿ ತೆರಳುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿತ್ತು. ಆಗ ಕ್ರಿಕೆಟಿಗನನ್ನು ರಕ್ಷಿಸುವಲ್ಲಿ ಕುಮಾರ್‌ ಪ್ರಮುಖ ಪಾತ್ರ ವಹಿಸಿದ್ದ.

  • ಕರುಳಬಳ್ಳಿಗೆ ವಿಷ ಉಣಿಸಿ ತಾನೂ ವಿಷ ಸೇವಿಸಿದ ತಾಯಿ – ಮಗಳು ಸಾವು, ತಾಯಿ ಚಿಂತಾಜನಕ

    ಕರುಳಬಳ್ಳಿಗೆ ವಿಷ ಉಣಿಸಿ ತಾನೂ ವಿಷ ಸೇವಿಸಿದ ತಾಯಿ – ಮಗಳು ಸಾವು, ತಾಯಿ ಚಿಂತಾಜನಕ

    ತುಮಕೂರು: ಕರುಳಬಳ್ಳಿಗೆ ವಿಷ ಉಣಿಸಿದ ತಾಯಿ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರು (Tumakuru) ಜಿಲ್ಲೆಯ ಗುಬ್ಬಿ (Gubbi) ತಾಲೂಕಿನ ತ್ಯಾಗಟೂರು ಬಳಿಯ ಬೊಮ್ಮರಸನಹಳ್ಳಿಯಲ್ಲಿ ನಡೆದಿದೆ.

    ಇಂದ್ರಮ್ಮ ಸ್ವಂತ ಮಗಳಿಗೆ ವಿಷ ಉಣಿಸಿ ತಾನೂ ವಿಷ ಸೇವಿಸಿದ ಪರಿಣಾಮ ಮಗಳು ದೀಕ್ಷಿತಾ (6) ಸಾವನ್ನಪ್ಪಿದ್ದು, ತಾಯಿ ಸ್ಥಿತಿ ಚಿಂತಾಜನಕವಾಗಿದೆ. ಮಧುಗಿರಿ ಮೂಲದ ಇಂದ್ರಮ್ಮ ಬೊಮ್ಮರಸನಹಳ್ಳಿಯಲ್ಲಿ ವಾಸವಾಗಿದ್ದರು. ಶ್ರೀರಂಗಯ್ಯ ಎಂಬವರನ್ನು ಮದುವೆಯಾಗಿದ್ದ ಇಂದ್ರಮ್ಮ ದಾಂಪತ್ಯದಲ್ಲಿ ಬಿರುಕು ಮೂಡಿ ಗಂಡನನ್ನು ಬಿಟ್ಟು ಮಗಳೊಂದಿಗೆ ವಾಸವಾಗಿದ್ದಳು. ಇದನ್ನೂ ಓದಿ: ಹೆಚ್‌ಡಿಕೆ ಬಣ್ಣದ ಬಗ್ಗೆ ಜಮೀರ್ ನಿಂದನೆ – ವಿವಾದದ ಬಳಿಕ ಪ್ರೀತಿಯಿಂದ ಕರೆದಿದ್ದು ಅಂತ ಸ್ಪಷ್ಟನೆ

    ತನ್ನ ಹೆಣ್ಣು ಮಗುವನ್ನು ಕೊಂದು ತಾನು ವಿಷ ಕುಡಿದು ಇಂದ್ರಮ್ಮ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಇಂದ್ರಮ್ಮಳ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.  ಇದನ್ನೂ ಓದಿ: Karwar| ಕೈಗಾ ನ್ಯೂಕ್ಲಿಯರ್ ಪ್ಲಾಂಟ್‌ನಲ್ಲಿ ಗುಂಡು ಹಾರಿಸಿಕೊಂಡು ರಕ್ಷಣಾ ಸಿಬ್ಬಂದಿ ಆತ್ಮಹತ್ಯೆ

  • ನೀರಿನ ಟ್ಯಾಂಕ್‌ಗೆ ವಿಷಬೆರಕೆ: ವಾಟರ್‌ಮನ್ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

    ನೀರಿನ ಟ್ಯಾಂಕ್‌ಗೆ ವಿಷಬೆರಕೆ: ವಾಟರ್‌ಮನ್ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

    ರಾಯಚೂರು: ಗ್ರಾಮಕ್ಕೆ ಸರಬರಾಜಾಗುವ ನೀರಿನ ಟ್ಯಾಂಕ್‌ಗೆ (Water Tank) ವಿಷ ಬೆರಕೆಯಾಗಿರುವ ಘಟನೆ ಜಿಲ್ಲೆಯ ಲಿಂಗಸುಗೂರು (Lingasuguru) ತಾಲ್ಲೂಕಿನ ತವಗ ಗ್ರಾಮದಲ್ಲಿ ನಡೆದಿದೆ.

    ನೀರಿನ ಟ್ಯಾಂಕ್‌ಗೆ ವಿಷ ಬೆರಕೆಯಾಗಿದ್ದು, ಗ್ರಾಮ ಪಂಚಾಯಿತಿ ವಾಟರ್‌ಮನ್ (WaterMan) ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ.ಇದನ್ನೂ ಓದಿ: ಲಂಡನ್‌ನಲ್ಲಿರುವ ಬಸವೇಶ್ವರ ಪುತ್ಥಳಿಗೆ ನಮನ ಸಲ್ಲಿಸಿದ ಪೂಜಾ ಗಾಂಧಿ

    ನೀರು ಬಿಟ್ಟ ಕೂಡಲೇ ಕೆಲ ಗ್ರಾಮಸ್ಥರು ನೀರು ವಾಸನೆ ಬರುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಕೂಡಲೇ ನೀರನ್ನು ಪರಿಶೀಲಿಸಿದಾಗ ಅನುಮಾನ ಮೂಡಿ ನೀರಿನ ಸರಬರಾಜನ್ನು ನಿಲ್ಲಿಸಲಾಗಿದೆ. ಟ್ಯಾಂಕ್ ಬಳಿ ಬೀಳುವ ನೀರು ಸಹ ನೊರೆ, ದುರ್ವಾಸನೆಯಿಂದ ಕೂಡಿದ್ದಕ್ಕೆ ಅನುಮಾನ ಮೂಡಿದೆ. ವಾಟರ್‌ಮನ್ ಆದೆಪ್ಪ ಕೂಡಲೇ ಟ್ಯಾಂಕ್ ಖಾಲಿ ಮಾಡಿದ್ದಾನೆ ಹಾಗೂ ನೀರನ್ನು ಯಾರು ಬಳಸದಂತೆ ಎಚ್ಚರಿಕೆ ನೀಡಿದ್ದಾನೆ. ಇದರಿಂದ ಭಾರೀ ಅನಾಹುತ ತಪ್ಪಿದೆ.

    ದುಷ್ಕರ್ಮಿಗಳು ಜೀವಹಾನಿ ಮಾಡಲು ಈ ಕೃತ್ಯ ಎಸಗಿರುವ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಪರ್ಯಾಯ ನೀರಿನ ವ್ಯವಸ್ಥೆ ಮಾಡುವಂತೆ ಆಗ್ರಹಿಸಿದ್ದಾರೆ. ವಾಟರ್‌ಮನ್ ಆದಪ್ಪ ದೂರು ನೀಡಿದ್ದು, ಹಟ್ಟಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: Mysuru Dasara: ಸುಧಾಮೂರ್ತಿ ಸಾಕಿದ ಶ್ವಾನ ಗೋಪಿಗೆ ಬಹುಮಾನ

  • ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ

    ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ

    ಕಲಬುರಗಿ: ವಿಷ (Poison) ಸೇವಿಸಿ ಪ್ರೇಮಿಗಳಿಬ್ಬರು (Lovers) ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಜಿಲ್ಲೆಯ ಚಿತ್ತಾಪುರ (Chittapura) ತಾಲೂಕಿನ ಚೌಕಿ ತಾಂಡಾದ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.

    ಚಿತ್ತಾಪುರ ತಾಲೂಕಿನ ಚೌಕಿ ತಾಂಡಾದ ಆಕಾಶ್ (18), ರಾಧಿಕಾ (15) ಎಂಬ ಇಬ್ಬರು ಪ್ರೇಮಿಗಳು ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಆಕಾಶ್ ಚಿತ್ತಾಪುರ ತಾಲೂಕಿನ ಕೊಲ್ಲೂರು ಗ್ರಾಮದ ನಿವಾಸಿಯಾಗಿದ್ದು, ರಾಧಿಕಾ ರಾಂಪೂರ್ ಹಳ್ಳಿ ನಿವಾಸಿಯಾಗಿದ್ದಳು. ಇಬ್ಬರು ಪ್ರೇಮಿಗಳು ಅಕ್ಕ ಪಕ್ಕದ ನಿವಾಸಿಗಳಾಗಿದ್ದು, ಕಳೆದೊಂದು ವರ್ಷದಿಂದ ಒಬ್ಬರಿಗೊಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಇದನ್ನೂ ಓದಿ: ಗೃಹಿಣಿ ಅನುಮಾನಾಸ್ಪದ ಸಾವು ಪ್ರಕರಣ – ರಾಗಿ ಮುದ್ದೆಗೆ ಸೈನೈಡ್ ಬೆರೆಸಿದ್ದೆ ಎಂದ ಪತಿರಾಯ!

    ಮಂಗಳವಾರ ತಡರಾತ್ರಿ ಇದ್ದಕ್ಕಿದ್ದಂತೆ ಆಕಾಶ್ ವಿಷ ಕುಡಿದು ತನ್ನ ತಾಯಿಗೆ ಫೋನ್ ಕರೆ ಮಾಡಿದ್ದ ಎಂದು ತಿಳಿದುಬಂದಿದೆ. ವಿಷ ಕುಡಿದ ಮಾಹಿತಿ ದೊರಕುತ್ತಿದ್ದಂತೆ ಆಸ್ಪತ್ರೆಗೆ ಸಾಗಿಸುವ ಹೊತ್ತಲ್ಲಿ ಮಾರ್ಗಮಧ್ಯೆಯೇ ಇಬ್ಬರೂ ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೌಟುಂಬಿಕ ಕಲಹ – ಪತ್ನಿಯ ತಲೆಗೆ ಕಬ್ಬಿಣದ ರಾಡ್‍ನಿಂದ ಹೊಡೆದು ಹತ್ಯೆಗೈದ ಪತಿ

  • ವಿಷ ಕುಡಿದ ವ್ಯಕ್ತಿಯನ್ನು ತಮ್ಮ ಕಾರಿನಲ್ಲೇ ಆಸ್ಪತ್ರೆಗೆ ಸಾಗಿಸಿ ಜೀವ ಉಳಿಸಿದ ಶಾಸಕ

    ವಿಷ ಕುಡಿದ ವ್ಯಕ್ತಿಯನ್ನು ತಮ್ಮ ಕಾರಿನಲ್ಲೇ ಆಸ್ಪತ್ರೆಗೆ ಸಾಗಿಸಿ ಜೀವ ಉಳಿಸಿದ ಶಾಸಕ

    ದಾವಣಗೆರೆ: ವಿಷ (Poison) ಕುಡಿದಿದ್ದ ವ್ಯಕ್ತಿಯನ್ನು ಮಾಯಕೊಂಡ (Mayakonda) ಶಾಸಕ ಬಸವಂತಪ್ಪ (Basavantappa) ತಮ್ಮ ಕಾರಿನಲ್ಲಿಯೇ ಆಸ್ಪತ್ರೆಗೆ (Hospital) ಸಾಗಿಸಿ ಜೀವ ಉಳಿಸಿದ್ದಾರೆ.

    ದಾವಣಗೆರೆ (Davangere) ತಾಲೂಕು ಅಣಬೇರು ಗ್ರಾಮದಲ್ಲಿ ಘಟನೆ ನಡೆದಿದ್ದು, ರೇವಣಸಿದ್ದಪ್ಪ (45) ಎಂಬ ವ್ಯಕ್ತಿ ಕುಡಿದ ಮತ್ತಿನಲ್ಲಿ ವಿಷ ಸೇವಿಸಿದ್ದ. ಆತನನ್ನು ಚಿಕಿತ್ಸೆಗೆ ಕರೆದೊಯ್ಯಲು ಅಂಬುಲೆನ್ಸ್‌ಗೆ ಕರೆ ಮಾಡಲಾಗಿತ್ತು. ಆದರೆ 1 ಗಂಟೆ ಕಾದರೂ ಅಂಬುಲೆನ್ಸ್ ಬಾರದ ಹಿನ್ನೆಲೆ ಪಕ್ಕದ ಗ್ರಾಮಕ್ಕೆ ಭೇಟಿ ನೀಡಿದ್ದ ಶಾಸಕ ಬಸವಂತಪ್ಪ ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಿದ್ದಾರೆ. ಇದನ್ನೂ ಓದಿ: ಮುರುಘಾ ಶ್ರೀಗಳಿಗೆ ಮತ್ತೆ ಅರೆಸ್ಟ್ ವಾರೆಂಟ್ ಜಾರಿ

    ವಿಷ ಕುಡಿದು 1 ಗಂಟೆಯಿಂದ ನರಳಾಡುತ್ತಿದ್ದ ವ್ಯಕ್ತಿಯ ಸ್ಥಿತಿ ಗಂಭೀರ ಆಗಿದ್ದರಿಂದ ವಿಷಯ ತಿಳಿಯುತ್ತಿದ್ದಂತೆ ತಕ್ಷಣ ತಮ್ಮ ಕಾರಿನಲ್ಲಿ ಆತನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ದಾವಣಗೆರೆಯ ಸಿಜೆ ಆಸ್ಪತ್ರೆಗೆ ವ್ಯಕ್ತಿಯನ್ನು ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಶಾಸಕರ ಸಮಯಪ್ರಜ್ಞೆಯಿಂದ ಜೀವವೊಂದು ಉಳಿದಿದೆ. ಇದನ್ನೂ ಓದಿ: ಕಾರ್ಯಕ್ರಮಕ್ಕೆ ಬಂದಿದ್ದ ಕೆನಡಾ ಉರ್ದು ಸಾಹಿತಿಗೆ ಹೃದಯಾಘಾತ

  • 15 ವರ್ಷದಲ್ಲಿ ಒಮ್ಮೆಯೂ ತವರಿಗೆ ಕಳುಹಿಸದೆ ಕಿರುಕುಳ – ವಿಷ ಕುಡಿಸಿ ಪತ್ನಿಯ ಕೊಂದ ದುರುಳ ಪತಿ

    15 ವರ್ಷದಲ್ಲಿ ಒಮ್ಮೆಯೂ ತವರಿಗೆ ಕಳುಹಿಸದೆ ಕಿರುಕುಳ – ವಿಷ ಕುಡಿಸಿ ಪತ್ನಿಯ ಕೊಂದ ದುರುಳ ಪತಿ

    ಕಲಬುರಗಿ: 15 ವರ್ಷದಲ್ಲಿ ಒಮ್ಮೆಯೂ ತವರು ಮನೆಗೆ ಕಳುಹಿಸದೆ ಗೃಹಿಣಿಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದಲ್ಲದೇ ಆಕೆಗೆ ವಿಷ (Poison) ಕುಡಿಸಿ ಕೊಂದಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯಲ್ಲಿ ನಡೆದಿದೆ.

    ಕಲಬುರಗಿ ತಾಲೂಕಿನ ಬಬಲಾದ್ (Babalad) ಗ್ರಾಮದಲ್ಲಿ ಘಟನೆ ನಡೆದಿದ್ದು, ಲಾಲ್‌ಬಿ (35) ಮೃತಪಟ್ಟ ಮಹಿಳೆ. ಲಾಲ್‌ಬಿಯನ್ನು ಬಬಲಾದ್ ಗ್ರಾಮದ ಖಾಸೀಂ ಸಾಬ್ ಜೊತೆ ಮದುವೆ ಮಾಡಿ ಕೊಡಲಾಗಿತ್ತು. ಮದುವೆಯಾದಾಗಿನಿಂದ ಲಾಲ್‌ಬಿಗೆ ಗಂಡನ ಮನೆಯವರು ನಿರಂತರ ಕಿರುಕುಳ ನೀಡುತ್ತಿದ್ದರು. ಮಾತ್ರವಲ್ಲದೇ ಕಳೆದ 15 ವರ್ಷಗಳಲ್ಲಿ ಒಮ್ಮೆಯೂ ತವರು ಮನೆಗೆ ಕಳುಹಿಸದೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದರು ಎಂದು ಲಾಲ್‌ಬಿ ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ನಿಯಂತ್ರಣ ತಪ್ಪಿ ಕಂಟೈನರ್‌ಗೆ ಡಿಕ್ಕಿ ಹೊಡೆದ ಟಿಟಿ – 12 ಮಂದಿ ಸಾವು, 23 ಮಂದಿಗೆ ಗಾಯ

    ಕಳೆದ ರಾತ್ರಿ ಲಾಲ್‌ಬಿಗೆ ಮನೆಯಲ್ಲಿ ಹಲ್ಲೆ ಮಾಡಿ ಜಮೀನಿಗೆ ಕಳುಹಿಸಿದ್ದರು. ಈ ವೇಳೆ ಖಾಸೀಂ ಸಾಬ್ ಜಮೀನಿನಲ್ಲಿ ಲಾಲ್‌ಬಿಗೆ ವಿಷ ಕುಡಿಸಿ ಕೊಲೆ ಮಾಡಿದ್ದಾನೆ ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಬಗ್ಗೆ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಿರುಕುಳಕ್ಕೆ ಬೇಸತ್ತು ಗುತ್ತಿಗೆದಾರ ಆತ್ಮಹತ್ಯೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜಿಲ್ಲಾಧಿಕಾರಿ ಕಚೇರಿಯ ಮೆಟ್ಟಿಲಲ್ಲೇ ವಿಷ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ ವಿಕಲಚೇತನ

    ಜಿಲ್ಲಾಧಿಕಾರಿ ಕಚೇರಿಯ ಮೆಟ್ಟಿಲಲ್ಲೇ ವಿಷ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ ವಿಕಲಚೇತನ

    ಕಲಬುರಗಿ: ವಿಕಲಚೇತನ ವ್ಯಕ್ತಿಯೊಬ್ಬ ಜಿಲ್ಲಾಧಿಕಾರಿ ಕಚೇರಿಯ ಮೆಟ್ಟಿಲ ಮೇಲೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರಗಿಯಲ್ಲಿ (Kalaburagi) ನಡೆದಿದೆ.

    ಗ್ರಾಮ ಪಂಚಾಯಿತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದ ವಿಕಲಚೇತನ ಅಣವೀರಪ್ಪ ಗೌಡಗಾಂವ್‌ನನ್ನು ಟಾರ್ಗೆಟ್ ಮಾಡಿಕೊಂಡಿದ್ದ ಒಂದು ಗುಂಪು ವಿನಾಕಾರಣ ಆತನ ವಿರುದ್ಧ ಇಲ್ಲ ಸಲ್ಲದ ದೂರು ದಾಖಲು ಮಾಡಿ ಕೆಲಸದಿಂದ ತೆಗೆಯೋದಕ್ಕೆ ಮುಂದಾಗಿತ್ತು. ಇದರಿಂದ ನೊಂದಿದ್ದ ಆತ ಗುರುವಾರ ಕಲಬುರಗಿ ಜಿಲ್ಲಾಧಿಕಾರಿ ಬಳಿ ತನ್ನ ನೋವನ್ನು ತೋಡಿಕೊಳ್ಳಲು ಬಂದಿದ್ದ. ಆದರೆ ಜಿಲ್ಲಾಧಿಕಾರಿ ಕಚೇರಿಯ ಮೆಟ್ಟಿಲ ಮೇಲೆಯೇ ವಿಷ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ್ದಾನೆ.

    ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ನಿವಾಸಿಯಾಗಿರುವ ಅಣವೀರಪ್ಪ ಉಡಚಣ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದ. ಆದರೆ ಅಫಜಲಪುರ ತಾಲೂಕಿನ ಬಸವರಾಜ್ ಹಡಪದ ಹಾಗೂ ಟೀಮ್ ಈತನನ್ನು ಮತ್ತು ಈತನ ಜೊತೆಗಿದ್ದವರನ್ನು ಕೆಲಸದಿಂದ ತೆಗೆದು ಹಾಕಿಸಲು ಪ್ಲ್ಯಾನ್ ಮಾಡಿ ಇವರ ವಿರುದ್ಧ ಮೇಲಾಧಿಕಾರಿಗಳಿಗೆ ಸುಳ್ಳು ದೂರು ದಾಖಲು ಮಾಡೋದಕ್ಕೆ ಮುಂದಾಗಿದ್ದರು. ಇದರಿಂದ ಮನನೊಂದು ಇಂದು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡೋದಕ್ಕೆ ಬಂದಿದ್ದ ಅಣವೀರಪ್ಪ ಏಕಾಏಕಿ ವಿಷ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ್ದಾನೆ. ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೋಡಿಸಿದ್ದಾರೆ. ಇದನ್ನೂ ಓದಿ: ರೋಹಿಣಿ ಸಿಂಧೂರಿಗೆ ಸಂಕಷ್ಟ

    ವಿಷ ಸೇವಿಸಿ ಅಸ್ವಸ್ಥಗೊಂಡ ಅಣವೀರಪ್ಪ ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಸವರಾಜ್ ಹಡಪದ ಕೂಡ ಆರಂಭದಲ್ಲಿ ಅಫಜಲಪುರ ತಾಲೂಕಿನಲ್ಲಿ ತಾಲೂಕು ವಿವಿಧ ಪುರ್ನವಸತಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದ. ಕೆಲಸ ಮಾಡುವಾಗ ಬ್ಲ್ಯಾಕ್‌ಮೇಲ್ ಮಾಡಿ ಹಣ ವಸೂಲಿ ಮಾಡೋದಕ್ಕೆ ಮುಂದಾಗಿದ್ದ. ಈ ಹಿನ್ನೆಲೆಯಲ್ಲಿ ಆತನನ್ನು ಕೆಲಸದಿಂದ ತೆಗೆದು ಹಾಕಲಾಗಿತ್ತು.

    ಬಸವರಾಜ್ ಹಡಪದ ತನ್ನ ಕೆಲಸ ಕಳೆದುಕೊಳ್ಳಲು ಅಣವೀರಪ್ಪ ಮತ್ತು ಆತನ ಜೊತೆಗಿದ್ದವರೇ ಕಾರಣ ಎಂದುಕೊಂಡು ಅವರಿಗೆ ಟಾರ್ಚರ್ ಕೊಡುತ್ತಿದ್ದ. ಈತನ ಟಾರ್ಚರ್‌ಗೆ ನೊಂದು ಅಣವೀರಪ್ಪ ಪೊಲೀಸ್ ಠಾಣೆಯಲ್ಲಿ ಅಂಗವಿಕಲ ಜಿಲ್ಲಾ ಕಲ್ಯಾಣಾಧಿಕಾರಿ ಸೇರಿ ಜಿಲ್ಲಾಧಿಕಾರಿಗಳಿಗೆ ಸಾಕಷ್ಟು ಬಾರಿ ದೂರು ನೀಡಿದ್ದ. ಆದರೆ ಯಾವುದೇ ಪ್ರಯೋಜನ ಆಗಿರದಿದ್ದರಿಂದ ಮನನೊಂದು ಆತ್ಮಹತ್ಯಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ಬಿಜೆಪಿ, ಜೆಡಿಎಸ್ ಮೈತ್ರಿ? – ಶಾ, ಹೆಚ್‌ಡಿಡಿ ಸಭೆಯ ಇನ್‌ಸೈಡ್‌ ಸ್ಟೋರಿ

    ಆತ್ಮಹತ್ಯೆ ಯತ್ನದ ಬಗ್ಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ಅಂಗವಿಕಲ ಕಲ್ಯಾಣ ಅಧಿಕಾರಿ ಈ ರೀತಿಯ ಘಟನೆ ಆಗಬಾರದು, ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಅಣವೀರಪ್ಪ ಸೇರಿ ನಮ್ಮ ಇಲಾಖೆಯ ಅಧಿಕಾರಿಗಳ ಬೆನ್ನಿಗೆ ನಿಲ್ಲುವ ಭರವಸೆ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಕ್ಕಳಿಗೆ ಜಾಮೂನಿನಲ್ಲಿ ವಿಷ ಹಾಕಿದ ತಂದೆ – ಬಳಿಕ ತಾನೂ ಆತ್ಮಹತ್ಯೆಗೆ ಯತ್ನ

    ಮಕ್ಕಳಿಗೆ ಜಾಮೂನಿನಲ್ಲಿ ವಿಷ ಹಾಕಿದ ತಂದೆ – ಬಳಿಕ ತಾನೂ ಆತ್ಮಹತ್ಯೆಗೆ ಯತ್ನ

    ರಾಮನಗರ: ಕೌಟುಂಬಿಕ ಕಲಹ (Family Dispute) ಹಿನ್ನೆಲೆ ಮಕ್ಕಳಿಬ್ಬರಿಗೆ ವಿಷವುಣಿಸಿದ (Poison) ತಂದೆ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಮನಗರ (Ramanagara) ತಾಲೂಕಿನ ಕ್ಯಾಸಾಪುರ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಕುಮಾರ್ (38) ತನ್ನ ಇಬ್ಬರು ಹೆಣ್ಣುಮಕ್ಕಳಿಗೆ ಜಾಮೂನಿನಲ್ಲಿ (Gulab Jamun) ವಿಷ ಬೆರಸಿ ತಿನ್ನಿಸಿ ತಾನೂ ವಿಷ ಸೇವಿಸಿದ್ದಾರೆ. ಸದ್ಯ ಮೂವರ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇದನ್ನೂ ಓದಿ: ಲಸಿಕೆ ಹಾಕ್ತಿದ್ದಾಗಲೇ ಕುಸಿದ ಅಂಗನವಾಡಿಯ ಮೇಲ್ಛಾವಣಿ- ಮಗುವಿನ ತಲೆಗೆ ಗಾಯ

    ಕೌಟುಂಬಿಕ ಕಲಹದಿಂದ ಕೆಲ ತಿಂಗಳ ಹಿಂದೆ ಪತ್ನಿ ತವರು ಮನೆ ಸೇರಿದ್ದರು. ಎರಡು ಮಕ್ಕಳನ್ನು ನೋಡಿಕೊಳ್ಳುತ್ತಿದ್ದ ಕುಮಾರ್ ಹೆಂಡತಿ ವಾಪಸ್ ಬಾರದಿದ್ದಕ್ಕೆ ಮನನೊಂದು ಮಕ್ಕಳಿಗೂ ವಿಷವುಣಿಸಿ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಕುರಿತು ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಟಿಕ್‌ಟಾಕ್ ಸುಂದರಿಗೆ ಕಂಟಕವಾಯ್ತು ಮೊಬೈಲ್ ಗೀಳು – ಪ್ರೀತಿಸಿ ಮದ್ವೆಯಾಗಿದ್ದ ಮಡದಿಯನ್ನೇ ಕೊಂದ ಪತಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಫೇಸ್ ಬುಕ್ ಲೈವ್ ಬಂದು ವಿಷ ಕುಡಿದ ಕಾಮಿಡಿಯನ್ : ಆತಂಕದಲ್ಲಿ ಫ್ಯಾನ್ಸ್

    ಫೇಸ್ ಬುಕ್ ಲೈವ್ ಬಂದು ವಿಷ ಕುಡಿದ ಕಾಮಿಡಿಯನ್ : ಆತಂಕದಲ್ಲಿ ಫ್ಯಾನ್ಸ್

    ಮಹಿಳೆಯಿಂದಾಗಿ ನಾನು ಮೂರ್ನಾಲ್ಕು ಲಕ್ಷ ರೂಪಾಯಿ ಸಾಲ ಮಾಡಿದ್ದೇವೆ. ಲಿವ್ ಇನ್ ರಿಲೇಷನ್ ಶಿಪ್ ನಿಂದಾಗಿ ನಾನು ಬ್ಲಾಕ್ ಮೇಲ್ ಗೆ ಒಳಗಾಗಿದ್ದೇನೆ. ಮತ್ತೆ ನನ್ನ ಮೇಲೆ ದೂರು ದಾಖಲಾಗಿದೆ ಎನ್ನುತ್ತಲೇ ಕಪಿಲ್ ಶರ್ಮಾ ಶೋ ಸೇರಿದಂತೆ ಹಲವು ಕಾಮಿಡಿ (Comedian) ಶೋಗಳಲ್ಲಿ ನಟಿಸಿರುವ ತೀರ್ಥಾನಂದ (Tirthanand Rao) ವಿಷ  (Poison) ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

    ಹಿಂದಿಯ ಹೆಸರಾಂತ ಟಾಕ್ ಶೋ ಮಾಸ್ಟರ್ ಕಪಿಲ್ ಶರ್ಮಾ ಸೇರಿದಂತೆ ಹಲವರೊಂದಿಗೆ ತೆರೆ ಹಂಚಿಕೊಂಡಿರುವ ತೀರ್ಥಾನಂದ ರಾವ್, ಮಹಿಳೆಯೊಬ್ಬರ ಜೊತೆ ಲಿವ್ ಇನ್ ರಿಲೇಷನ್ ಶಿಪ್ ನಲ್ಲಿ ಇದ್ದರಂತೆ. ಆ ಮಹಿಳೆಯೇ ಇವರಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದಾರಂತೆ. ಅಲ್ಲದೇ, ಇವರ ವಿರುದ್ಧವೇ ಪೊಲೀಸರಿಗೆ ದೂರು ನೀಡಿದ್ದಾರಂತೆ. ಇದರಿಂದಾಗಿ ಮನನೊಂದಿದ್ದೇನೆ ಮತ್ತು ಸಾಲ ಮಾಡಿಕೊಂಡಿದ್ದೇನೆ ಎಂದು ಫೇಸ್ ಬುಕ್ ಲೈವ್ (Facebook Live) ನಲ್ಲಿ ಹೇಳಿಕೊಂಡಿದ್ದಾರೆ ತೀರ್ಥಾನಂದ. ಇದನ್ನೂ ಓದಿ:ಕನಕದಾಸನಾಗಿ ಕಂಗೊಳಿಸಲಿದ್ದಾರೆ ರಿಯಲ್‌ ಸ್ಟಾರ್‌ ಉಪೇಂದ್ರ

    ತನ್ನ ಸಾವಿಗೆ ಆ ಮಹಿಳೆಯೇ ಕಾರಣವೆಂದೂ ಹೇಳಿರುವ ಅವರು, ವಿಷ ಕುಡಿಯುತ್ತಲೇ ಕಿಡಿಕಾರುತ್ತಾರೆ. ಇದನ್ನು ಗಮನಿಸುವ ಅವರ ಸ್ನೇಹಿತರು ಮತ್ತು ಆಪ್ತರು ಕೂಡಲೇ ಅವರ ಮನೆಗೆ ಧಾವಿಸಿ, ತೀರ್ಥಾನಂದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಅವರ ಆರೋಗ್ಯದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಹಾಗಾಗಿ ಅಭಿಮಾನಿಗಳು ಸಹಜವಾಗಿಯೇ ಆತಂಕ ವ್ಯಕ್ತಪಡಿಸಿದ್ದಾರೆ.

    ತೀರ್ಥಾನಂದ ಈ ರೀತಿ ಮಾಡುತ್ತಾ ಇರುವುದು ಇದೇ ಮೊದಲೇನೂ ಅಲ್ಲ ಎನ್ನಲಾಗುತ್ತಿದೆ. ಮೂರು ವರ್ಷಗಳ ಹಿಂದೆ ಹೀಗೆಯೇ ಫೇಸ್ ಬುಕ್ ಲೈವ್ ಗೆ ಬಂದು ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಹೇಳಲಾಗುತ್ತಿದೆ. ಹೀಗಾಗಿ ಅವರಿಗೆ ಮಾನಸಿಕ ಕಾಯಿಲೆ ಇರಬಹುದು ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ.