Tag: Poison Gas

  • ಮಂಗಳೂರಿನ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆ – ಮೂವರು ಕಾರ್ಮಿಕರ ಸಾವು

    ಮಂಗಳೂರಿನ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆ – ಮೂವರು ಕಾರ್ಮಿಕರ ಸಾವು

    ಮಂಗಳೂರು: ಫ್ಯಾಕ್ಟರಿಯೊಂದರಲ್ಲಿ ವಿಷಾನಿಲ ಸೋರಿಕೆಯಾಗಿ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಎಸ್‌ಇಝೆಡ್ ವ್ಯಾಪ್ತಿಯ ಮೀನಿನ ಫ್ಯಾಕ್ಟರಿಯಲ್ಲಿ ನಡೆದಿದೆ.

    ಭಾನುವಾರ ರಾತ್ರಿ ಕಾರ್ಮಿಕರು ಟ್ಯಾಂಕ್ ಶುಚಿಗೊಳಿಸುತ್ತಿದ್ದ ಸಂದರ್ಭದಲ್ಲಿ ವಿಷಾನಿಲ ಸೋರಿಕೆಯಾಗಿದೆ. ಘಟನೆಯಲ್ಲಿ ಪಶ್ಚಿಮ ಬಂಗಾಳ ಮೂಲದ ಸಮಿರುಲ್ಲ ಇಸ್ಲಾಂ, ಉಮರ್ ಫಾರೂಕ್, ನಿಜಾಮುದ್ದೀನ್ ಸಾಜ್ ಮೃತಪಟ್ಟಿದ್ದಾರೆ. ಮಿರಾಜುಲ್ಲ್ ಇಸ್ಲಾಂ, ಸರಾಫತ್ ಆಲಿ, ಅಜನ್ ಆಲಿ, ಕರೀಬುಲ್ಲ, ಅಫ್ತಲ್ ಮಲ್ಲಿಕ್ ಸೇರಿದಂತೆ ಹಲವರು ಗಂಭೀರ ಸ್ಥಿತಿಯಲ್ಲಿದ್ದಾರೆ. ಇದನ್ನೂ ಓದಿ: ಮಳೆಯಬ್ಬರಕ್ಕೆ ಮಾವು ಸೇರಿದಂತೆ ವಿವಿಧ ಬೆಳೆಗಳು ನಾಶ

    POLICE JEEP

    ಭಾನುವಾರ ರಾತ್ರಿ ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕನ್ನು ಶುಚಿಗೊಳಿಸಲು ಕೆಳಗಿಳಿದಿದ್ದ. ಈ ವೇಳೆ ಏಕಾಏಕಿ ಅಸ್ವಸ್ಥಗೊಂಡು ಬಿದ್ದಿದ್ದಾನೆ. ಕೂಡಲೇ ಆತನನ್ನು ರಕ್ಷಿಸಲು 8 ಮಂದಿ ಕಾರ್ಮಿಕರು ಹೋಗಿದ್ದು, ಅವರೆಲ್ಲರ ಉಸಿರಾಟದಲ್ಲಿ ಏರುಪೇರು ಉಂಟಾಗಿ ಅಸ್ವಸ್ಥಗೊಂಡಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಹಿಂಸಾಚಾರ ಪೂರ್ವನಿಯೋಜಿತ ಸಂಚು: ಬಿರುಗಾಳಿ ಎಬ್ಬಿಸಿದ ವಾಟ್ಸಪ್‌ ಆಡಿಯೋ

    ಅಸ್ವಸ್ಥಗೊಂಡ ಎಲ್ಲಾ ಕಾರ್ಮಿಕರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಡಿಸಿಪಿ ಹರಿರಾಂ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  • ACಯ ವಿಷಾನಿಲ ಸೋರಿಕೆ- ಒಂದೇ ಕುಟುಂಬದ ನಾಲ್ವರು ಸಾವು

    ACಯ ವಿಷಾನಿಲ ಸೋರಿಕೆ- ಒಂದೇ ಕುಟುಂಬದ ನಾಲ್ವರು ಸಾವು

    ಬಳ್ಳಾರಿ: ಎಸಿಯ ವಿಷಾನಿಲ ಸೋರಿಕೆಯಾಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ಘನ ಘೋರ ದುರಂತವೊಂದು ನಡೆದುಹೋಗಿದೆ.

    ವೆಂಕಟ್ ಪ್ರಶಾಂತ್ (42), ಪತ್ನಿ ಚಂದ್ರಕಲಾ (38), ಮಕ್ಕಳಾದ ಅದ್ವಿಕ್ (16) ಪ್ರೇರಣಾ (8) ಮೃತರಾಗಿದ್ದಾರೆ. ಎಸಿಯ ವಿಷಾನಿಲ ಸೋರಿಕೆಯಿಂದ ಒಂದೇ ಕುಟುಂಬದ ನಾಲ್ವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ರಾಘವೇಂದ್ರ ಶೆಟ್ಟಿ ಹಾಗೂ ಅವರ ಪತ್ನಿ ರಾಜಶ್ರೀ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಬೆಡ್‌ರೂಮ್‌ನಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿತ್ತು. ತಕ್ಷಣವೇ ಎಚ್ಚೆತ್ತ ರಾಘವೇಂದ್ರ ಶೆಟ್ಟಿ ಬಾಗಿಲು ತೆರೆಯಲು ಹರಸಾಹಸಪಟ್ಟರು. ಅಷ್ಟೊತ್ತಲ್ಲೇ ಮಗ ಹಾಗೂ ಮೊಮ್ಮಕ್ಕಳು ಮಲಗಿದ್ದ ಬೆಡ್ ರೂಂಗೆ ದಟ್ಟ ಹೊಗೆ ಆವರಿಸಿತ್ತು. ಮನೆ ಬಹುತೇಕ ಸುಟ್ಟು ಹೋಗಿದೆ. ಮರಿಯಮ್ಮನಹಳ್ಳಿ ಪೊಲೀಸರು ತನಿಖೆ ನಡೆಸಿದ್ದಾರೆ.

  • ವಿಷ ಅನಿಲ ಸೇವಿಸಿ ಇಬ್ಬರು ನೌಕರರು ಸಾವು

    ವಿಷ ಅನಿಲ ಸೇವಿಸಿ ಇಬ್ಬರು ನೌಕರರು ಸಾವು

    ಆನೇಕಲ್: ಖಾಸಗಿ ಬ್ಯಾಟರಿ ಕಾರ್ಖಾನೆಯಲ್ಲಿ ವಿಷಾನಿಲ ಸೇವಿಸಿ ಇಬ್ಬರು ನೌಕರರ ಸಾವನ್ನಪ್ಪಿರುವ ಘಟನೆ ಎಕ್ಸಿಡ್ ಬ್ಯಾಟರಿ ಕಂಪೆನಿಯಲ್ಲಿ ನಡೆದಿದೆ.

    ಹೊಸೂರು ಸಮೀಪದ ಕೋತಪಲ್ಲಿ ಗ್ರಾಮದ ನಾಗೇಶ್ (25) ಮತ್ತು ಸೂಡಪುರಂ ಗ್ರಾಮದ ಮಂಜುನಾಥ್ (32) ಸಾವನ್ನಪ್ಪಿದ ಗುತ್ತಿಗೆ ಕೆಲಸಗಾರರು. ಕರ್ನಾಟಕದ ಬಿಲ್ಲಾಪುರ ಹಾಗೂ ತಮಿಳುನಾಡಿನ ಸೇವಗಾನ ಪಳ್ಳಿಯಲ್ಲಿರುವ ಕಂಪೆನಿಯಲ್ಲಿ ತ್ಯಾಜ್ಯ ತೊಟ್ಟಿಯನ್ನು ಸರಿಪಡಿಸುವಾಗ ಈ ಅವಘಡ ನಡೆದಿದೆ.

    ಸ್ಥಳಕ್ಕೆ ಬಾಗಲೂರು ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಆಗಮಸಿದ್ದು, ಈ ಘಟನೆ ಸಂಬಂಧಪಟ್ಟಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವಿಷಕಾರಿ ಅನಿಲ ಸೋರಿಕೆಯಿಂದಾಗಿ 6 ಜನ ಕಾರ್ಮಿಕರು ದುರ್ಮರಣ

    ವಿಷಕಾರಿ ಅನಿಲ ಸೋರಿಕೆಯಿಂದಾಗಿ 6 ಜನ ಕಾರ್ಮಿಕರು ದುರ್ಮರಣ

    ಹೈದರಾಬಾದ್: ಖಾಸಗಿ ಸ್ಟೀಲ್ ಮಿಲ್ ರೋಲಿಂಗ್ ಘಟಕದಲ್ಲಿ ವಿಷಕಾರಿ ಅನಿಲ ಸೋರಿಕೆಯಾದ ಪರಿಣಾಮ ಆರು ಜನ ಕಾರ್ಮಿಕರು ಮೃತಪಟ್ಟಿರುವ ಘಟನೆ ತೆಲಂಗಾಣದ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ.

    ತಡಿಪತ್ರಿ ಪ್ರದೇಶದಲ್ಲಿದ್ದ ಸ್ಟೀಲ್ ಮಿಲ್ ಘಟಕದಲ್ಲಿ ನಿರ್ವಹಣೆ ಕಾರ್ಯ ಮುಗಿದ ನಂತರ ಪರೀಕ್ಷೆ ನಡೆಸುತ್ತಿದ್ದ ವೇಳೆ ಅನಿಲ ಸೋರಿಕೆಯಾಗಿದ್ದರಿಂದ ಅವಘಢ ಸಂಭವಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಅಶೋಕ್ ಕುಮಾರ್ ತಿಳಿಸಿದ್ದಾರೆ.

    ಪ್ರಾಥಮಿಕ ಮಾಹಿತಿ ಪ್ರಕಾರ, ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಾರ್ಬನ್ ಮೊನಾಕ್ಸೈಡ್ ಸೋರಿಕೆಯೇ ಅವಘಡಕ್ಕೆ ಕಾರಣವಾಗಿದೆ. ಸದ್ಯಕ್ಕೆ ರಕ್ಷಣಾಕಾರ್ಯ ಮುಂದುವರೆದಿದ್ದು, ಇನ್ನು ಎಷ್ಟು ಜನ ಗಾಯಗೊಂಡಿದ್ದಾರೆ ಎನ್ನುವುದು ತಿಳಿದುಬಂದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ತಡಿಪತ್ರಿಯ ಸ್ಟೀಲ್ ಘಟಕವು ಬ್ರೆಜಿಲಿಯನ್ ನ ಗೇರ್ಡಾ ಸಂಸ್ಥೆಗೆ ಸೇರಿದ್ದು, ಅತಿ ಹೆಚ್ಚು ಸ್ಟೀಲ್ ಅನ್ನು ಉತ್ಪಾದಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಎನ್. ಚೀನಾ ರಾಜಪ್ಪ ಮೃತರ ಸಾವಿಗೆ ಸಂತಾಪ ಸೂಚಿಸಿದ್ದಾರೆ.