– ಬೆಂಗಳೂರಿನ ದೇವರ ಬೀಸನಹಳ್ಳಿಯ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಘಟನೆ – ಹಿಡಿದು ಎಳೆತಂದು ಕಂಬಕ್ಕೆ ಕಟ್ಟಿ ಥಳಿಸಿದ ಸ್ಥಳೀಯರು
ಬೆಂಗಳೂರು: ಅನ್ಯ ಕೋಮಿನ ಯುವಕನೊಬ್ಬ ಚಪ್ಪಲಿ ಸಮೇತ ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹಗಳನ್ನು ಎಳೆದಾಡಿ, ಚಪ್ಪಲಿಯಿಂದ ಒದ್ದು ವಿಕೃತಿ ಮೆರೆದ ಘಟನೆ ದೇವರ ಬೀಸನಹಳ್ಳಿಯ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ನಡೆದಿದೆ.
ಅಕ್ಟೋಬರ್ 28ರಂದು ಬೆಳಗ್ಗೆ 8:30ರ ಸುಮಾರಿಗೆ ಘಟನೆ ನಡೆದಿದ್ದು, ಸ್ಥಳೀಯರು ಆಕ್ರೋಶ ಹೊರಗೆ ಹಾಕಿದ್ದಾರೆ. ದೇವರ ಬೀಸನಹಳ್ಳಿಯಲ್ಲಿ ಚಪ್ಪಲಿ ಹೊಲಿಯುವ ಅಂಗಡಿ ಇಟ್ಟುಕೊಂಡಿದ್ದ ಕಬೀರ್ ಈ ಕೃತ್ಯ ಎಸಗಿದ್ದಾನೆ.
ಈತ ವಿಶೇಷ ಚೇತನ ಎನ್ನಲಾಗುತ್ತಿದ್ದು ಘಟನೆಗೂ ಮುನ್ನ ಕಬೀರ್ ತನ್ನ ಧರ್ಮದ ಪರ ಘೋಷಣೆಗಳನ್ನು ಕೂಗುತ್ತಾ ಬಂದಿದ್ದ. ಮೆಡಿಕಲ್ ಅಂಗಡಿ ಮುಂದೆ ಇಟ್ಟಿದ್ದ ಗಣಪತಿ ದೇವರ ಫೋಟೋಗೆ ಸ್ಟಿಕ್‌ನಿಂದ ಹೊಡೆದಿದ್ದ. ಈ ವರ್ತನೆಯನ್ನು ಸ್ಥಳೀಯರು ವಿರೋಧಿಸಿದಾಗ ಕಬೀರ್ ನೇರವಾಗಿ ಹತ್ತಿರದಲ್ಲೇ ಇದ್ದ ವೇಣುಗೋಪಾಲಸ್ವಾಮಿ ದೇವಸ್ಥಾನದತ್ತ ಓಡಿದ್ದಾನೆ.
ಕಬೀರ್‌ನ ಈ ವಿಕೃತಿಯನ್ನು ಕಂಡು ದೇವಸ್ಥಾನದ ಸಿಬ್ಬಂದಿ ಮತ್ತು ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಕೂಡಲೇ ಆತನನ್ನು ಹಿಡಿದು ಹೊರಗೆ ಎಳೆದು ತಂದು ಮರಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ. ನಂತರ ಮರತ್ತಹಳ್ಳಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಸದ್ಯ ಆರೋಪಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಮರತ್ತಹಳ್ಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಆರೋಪಿ ತಂದಿದ್ದ ಬಾಟಲಿ, ಚಪ್ಪಲಿ ಮತ್ತು ಕಲ್ಲುಗಳನ್ನು ವಶಕ್ಕೆ ಪಡೆದಿದ್ದಾರೆ.
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಈವರೆಗಿನ ಮಾಹಿತಿಗಳ ಪ್ರಕಾರ ಈತ ಬಾಂಗ್ಲಾ ಮೂಲದವನಾಗಿದ್ದು ಅಕ್ರಮವಾಗಿ ನುಸುಳಿಕೊಂಡು ಬೆಂಗಳೂರಿಗೆ ಬಂದಿದ್ದಾನೆ ಎನ್ನಲಾಗುತ್ತಿದೆ.
ಇನ್ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದ ಬಾಲಕಿ ಸಿರಿಯ ತಾಯಿ ಶಿಲ್ಪಾಳನ್ನ ದರ್ಶನ್ ಎರಡನೇ ಮದುವೆಯಾಗಿದ್ದ. ಬಳಿಕ ದರ್ಶನ್ ತನ್ನ ಪ್ರೈವಸಿಯ ಬಗ್ಗೆ ತಲೆಕೆಡಿಸಿಕೊಂಡಿದ್ದ. ಹೀಗಾಗಿ ಆರೋಪಿಯು ಬಾಲಕಿಯ ಅಜ್ಜಿ ಇರೋತನಕ ಯಾವುದೇ ಕಿರಿಕ್ ಮಾಡುತ್ತಿರಲಿಲ್ಲ. ಆದರೆ ಆಕೆಯ ಅಜ್ಜಿ ಇತ್ತೀಚೆಗೆ ಮೃತಪಟ್ಟಿದ್ದರು.
ಬಳಿಕ ತನ್ನ ಬುದ್ಧಿ ತೋರಿಸಲು ಶುರು ಮಾಡಿದ ದರ್ಶನ್, ಬಾಲಕಿಗೆ ಹೊಡೆದು ಬಡಿದು ಚಿತ್ರಹಿಂಸೆ ಕೊಡ್ತಿದ್ದ. ನಾಲ್ಕು ದಿನಗಳ ಹಿಂದೆ ಮನೆಗೆ ಬಂದಾಗ ಆರೋಪಿ ಬಾಲಕಿಯನ್ನ ಕೊಲೆ ಮಾಡಿದ್ದ. ಬಾಲಕಿಯನ್ನ ಕೊಲೆ ಮಾಡಿದ್ದಲ್ಲದೆ ಸಾಕ್ಷ್ಯ ನಾಶಕ್ಕೂ ಯತ್ನಿಸಿದ್ದ. ಆದರೆ ಅದೇ ವೇಳೆ ಶಿಲ್ಪಾ ಮನೆಗೆ ಬಂದಿದ್ದರಿಂದ ಗಾಬರಿಯಾದ ದರ್ಶನ್, ಆಕೆಯನ್ನ ರೂಮಿನಲ್ಲಿ ಕೂಡಿ ಹಾಕಿ ಎಸ್ಕೇಪ್ ಆಗಿದ್ದ.
ಪೊಲೀಸರು ಆತನ ಬೆನ್ನು ಬಿದ್ದು, ನೆಲಮಂಗಲ ಬಳಿ ಹೆಡೆಮುರಿ ಕಟ್ಟಿದ್ದಾರೆ. ಸದ್ಯ ಪ್ರೈವಸಿ ತೊಂದರೆಯಿಂದಲೇ ದರ್ಶನ್ ಬಾಲಕಿಯನ್ನು ಕೊಲೆ ಮಾಡಿರೋದು ಗೊತ್ತಾಗಿದೆ. ಪೊಲೀಸರು ಆತನನ್ನು ತೀವ್ರ ವಿಚಾರಣೆ ಒಳಪಡಿಸಿದ್ದು, ಮತ್ತಷ್ಟು ವಿಚಾರ ಬಯಲಾಗಲಿದೆ.
– ಯಾವುದೇ ಕಾರಣಕ್ಕೂ ರಾಜಕೀಯ ಹಿಂಬಾಲಕರಾಗಬೇಡಿ – ಪೊಲೀಸರ ಯಶಸ್ಸಿನಲ್ಲೇ, ಸರ್ಕಾರದ ಯಶಸ್ಸು
ಬೆಂಗಳೂರು: ಯಾವುದೇ ಸರ್ಕಾರ ಬಂದರೂ ನಿಮ್ಮ ಆತ್ಮವಿಶ್ವಾಸ ಹಾಗೂ ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬಾರದು. ಒಂದು ವೇಳೆ ರಾಜಿ ಮಾಡಿಕೊಂಡರೆ ಸಂಪೂರ್ಣವಾಗಿ ವ್ಯವಸ್ಥೆ ಕುಸಿಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar), ಪೊಲೀಸ್ ಅಧಿಕಾರಿಗಳಿಗೆ ಕಿವಿಮಾತು ಹೇಳಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಂಗಳವಾರ ಪೊಲೀಸ್ ಸಿಬ್ಬಂದಿ ಪೀಕ್ ಕ್ಯಾಪ್ ಪರಿಚಯ ಮತ್ತು ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸಮಾಜ ಹಾಗೂ ಸರ್ಕಾರ ಪೊಲೀಸರ ಮೇಲೆ ಬಹಳ ವಿಶ್ವಾಸ ಇಟ್ಟಿರುತ್ತದೆ. ನೀವೇ ಸಮಾಜ ರಕ್ಷಕರು. ನಾವು ಅಧಿಕಾರಕ್ಕೆ ಬಂದು ಪ್ರಮಾಣ ವಚನ ಸ್ವೀಕಾರ ಮಾಡುವ ವೇಳೆ ನಾನು ಸ್ವಲ್ಪ ಖಾರವಾಗಿಯೇ ಮಾತನಾಡಿದ್ದೆ ಎಂದಿದ್ದಾರೆ.
ಇಂದು ನೀವೆಲ್ಲರೂ ನಿಮ್ಮ ಸಮವಸ್ತ್ರವನ್ನು ಶಿಸ್ತಿನಿಂದ ಧರಿಸಿ, ಆತ್ಮವಿಶ್ವಾಸದಲ್ಲಿ ಕೂತಿದ್ದೀರಿ. ಆದರೆ ಕಳೆದ ಸರ್ಕಾರದ ಅವಧಿಯಲ್ಲಿ ಆಯುಧಪೂಜೆ ಸಂದರ್ಭ ಕೆಲವರು ವಿಜಯಪುರ ಹಾಗೂ ಉಡುಪಿಯಲ್ಲಿ ಸಮವಸ್ತ್ರ ತೆಗೆದು ಕೇಸರಿ ವಸ್ತ್ರ ಧರಿಸಿದ್ದರು. ರಾಜಕೀಯ ಒತ್ತಡ ಅಥವಾ ಬೇರೆಯವರನ್ನು ಮೆಚ್ಚಿಸಲು ಈ ರೀತಿ ಮಾಡಿದರೆ ನಿಮ್ಮನ್ನು ನೀವು ಮಾರಿಕೊಂಡಂತೆ. ನಿಮ್ಮ ವ್ಯಕ್ತಿತ್ವ, ಇಲಾಖೆಗೆ ಇರುವ ಘನತೆ ನಾಶವಾಗುತ್ತದೆ. ನೀವುಗಳು ರಾಜಕೀಯ ಹಿಂಬಾಲಕರಾಗುತ್ತೀರಿ. ಆಗ ನಿಮ್ಮನ್ನು ಯಾರು ನಂಬುತ್ತಾರೆ? ಹೀಗಾಗಿ ಇಂತಹ ಪದ್ಧತಿಗೆ ನೀವು ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡಬೇಡಿ ಎಂದು ನುಡಿದಿದ್ದಾರೆ.
ಕರ್ನಾಟಕ ಪೊಲೀಸರಿಗೆ ಪೀಕ್ ಕ್ಯಾಪ್ ಮುಕುಟ
ಕರ್ನಾಟಕ ರಾಜ್ಯ ಪೊಲೀಸ್ ಸಿಬ್ಬಂದಿಯ ಪೀಕ್ ಕ್ಯಾಪ್ ವಿತರಣೆ ಹಾಗೂ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಮತ್ತು ಸನ್ಮಿತ್ರ ಕೈಪಿಡಿ ಬಿಡುಗಡೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಗೃಹಸಚಿವರಾದ ಜಿ.ಪರಮೇಶ್ವರ್ ಅವರೊಂದಿಗೆ ಭಾಗವಹಿಸಿದೆ. ಈ ವೇಳೆ ಹಳೇ ಕಾಲದ ಸ್ಲೋಚ್ ಹ್ಯಾಟ್… pic.twitter.com/0ZRV3snWzS
ನಗರದ ಮನೆಗೆಲಸದವರ ನೋಂದಣಿ, ದಾಖಲೆ ಬಗ್ಗೆ ಗಮನ
ಫೋನ್ ಬಂದ ಬಳಿಕ ಸೈಬರ್ ಅಪರಾಧ ಹೆಚ್ಚಾಗಿವೆ. ಇದನ್ನು ಹತೋಟಿಗೆ ತರಲು, ಮೇಲಾಧಿಕಾರಿಗಳು ಮಾತ್ರವಲ್ಲ, ಕೆಳ ಹಂತದ ಅಧಿಕಾರಿಗಳು ತಯಾರಾಗಬೇಕು. ಬೆಂಗಳೂರು ನಗರ ಹಾಗೂ ಇತರೇ ನಗರ ಪ್ರದೇಶಗಳಲ್ಲಿ ಪ್ರತಿ ಮನೆಯಲ್ಲಿ ಮನೆಗೆಲಸದವರು, ಚಾಲಕರು, ಕಾವಲುಗಾರರ ನೋಂದಣಿ ಇಟ್ಟುಕೊಳ್ಳಬೇಕು. ಆಗ ಎಷ್ಟೋ ಮಟ್ಟಿಗೆ ಅಪರಾಧ ನಿಯಂತ್ರಣಕ್ಕೆ ಬರುತ್ತದೆ ಎಂದು ತಿಳಿಸಿದ್ದಾರೆ.
ನಮ್ಮ ನೆರೆ ಮನೆಯವರಾದ ಆದಿಕೇಶವಲು ಎಂಬುವವರ ಮನೆಯಲ್ಲಿ ಕಳ್ಳತನವಾಗಿ ಎಷ್ಟೋ ದಿನಗಳಾದರೂ ಅವರಿಗೆ ಗೊತ್ತಾಗಿರಲಿಲ್ಲ. ಆಭರಣ ಮಾರಾಟವಾಗಿ ಬೇರೆಯವರು ಧರಿಸಿದ್ದನ್ನು ನೋಡಿದ ಬಳಿಕ ಮನೆಯಲ್ಲಿ ಬಂದು ಹುಡುಕುತ್ತಾರೆ. ಮೂರು ವರ್ಷಗಳ ಬಳಿಕ ಕಳ್ಳತನವಾಗಿದೆ ಎಂದು ತಿಳಿಯಿತು. ಹೀಗಾಗಿ ನೀವು ಪ್ರತಿ ಮನೆಯಲ್ಲಿ ಕೆಲಸ ಮಾಡುವವರ ದಾಖಲೆ ಇಟ್ಟುಕೊಳ್ಳಿ. ಈ ಬಗ್ಗೆ ಆಲೋಚನೆ ಮಾಡಿ ಎಂದು ಸಲಹೆ ನೀಡಿದ್ದಾರೆ.
ಪೊಲೀಸರ ಯಶಸ್ಸಿನಲ್ಲೇ, ಸರ್ಕಾರದ ಯಶಸ್ಸು
ಪೊಲೀಸ್ ಅಧಿಕಾರಿಗಳಿಗೆ ಆತ್ಮವಿಶ್ವಾಸ ಮೂಡಿಸಲು ಐತಿಹಾಸಿಕ ತೀರ್ಮಾನ ಮಾಡಲಾಗಿದೆ. ನಿಮಗೆಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಗಡಿಯಲ್ಲಿ ಸೈನಿಕ, ಗಡಿಯೊಳಗೆ ಆರಕ್ಷಕ. ಇವರಿಬ್ಬರೂ ನಮ್ಮ ನಾಡಿಗೆ ರಕ್ಷಣೆ ನೀಡುತ್ತಿದ್ದಾರೆ ಎಂದು ನುಡಿದಿದ್ದಾರೆ.
ರಾಜ್ಯ ಪೊಲೀಸ್ ಇಲಾಖೆ ಎಂದರೆ ಬಹಳ ಗೌರವ ಪಡೆದಿದೆ. ನಾನು ಇತ್ತೀಚೆಗೆ ಹಿರಿಯ ವಕೀಲರು, ನ್ಯಾಯಾಧೀಶರನ್ನು ಭೇಟಿ ಮಾಡಿದಾಗ ನಮ್ಮ ರಾಜ್ಯದ ಅನೇಕ ಘಟನೆಗಳ ವಿಚಾರವಾಗಿ ಸರ್ಕಾರ ಎಸ್‌ಐಟಿ ರಚನೆ ಮಾಡಿ ಅವರು ತೆಗೆದುಕೊಂಡಿರುವ ನಿರ್ಧಾರ, ವರದಿ ಹಾಗೂ ನ್ಯಾಯಾಲಯ ಕೊಟ್ಟಿರುವ ತೀರ್ಪು ನೋಡಿ ಅವರು ಬಹಳ ಪ್ರಶಂಸೆ ವ್ಯಕ್ತಪಡಿಸಿದ್ದರು. ನಮ್ಮ ಪೊಲೀಸ್ ಅಧಿಕಾರಿಗಳು ಎಷ್ಟು ಸಮರ್ಥರಿದ್ದಾರೆ ಎಂಬುದಕ್ಕೆ ಇದೇ ಸಾಕ್ಷಿ. ನಾನು ಈ ಹಿಂದೆ ಮೈಸೂರು ಪರೇಡ್‌ಗೆ ಹೋಗಿದ್ದೆ. ನಿಮ್ಮ ಕಾರ್ಯಕ್ರಮದಲ್ಲಿ ಎಷ್ಟು ಸುಧಾರಣೆ ಕಂಡಿದೆ ಎಂದರೆ ರಾಷ್ಟ್ರಮಟ್ಟದ ಕಾರ್ಯಕ್ರಮಗಳ ರೀತಿ ನಡೆಯುತ್ತಿದೆ. ಪೊಲೀಸರ ಯಶಸ್ಸಿನಲ್ಲೇ, ನಾವು ಸರ್ಕಾರದ ಯಶಸ್ಸು ಕಾಣುತ್ತೇವೆ ಎಂದಿದ್ದಾರೆ.
ನಮ್ಮ ರಾಜ್ಯದ ಪೊಲೀಸ್ ಸಿಬ್ಬಂದಿ ಯಾವುದರಲ್ಲೂ ಕಡಿಮೆ ಇಲ್ಲ. 1988ರಲ್ಲಿ ನಾನು ವಿದ್ಯಾರ್ಥಿ ನಾಯಕನಾಗಿದ್ದಾಗ ವಿಶ್ವ ಯುವ ಸಮ್ಮೇಳನಕ್ಕೆ ಉತ್ತರ ಕೊರಿಯಾದ ಪ್ಯೋಂಗ್‌ಯಾಂಗ್‌ಗೆ ತೆರಳಿದ್ದೆ. ಆಗ ಅಲ್ಲಿನ ಪ್ರಮುಖ ವೃತ್ತವೊಂದರಲ್ಲಿ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಏಕಾಂಗಿಯಾಗಿ ಸಂಚಾರ ದಟ್ಟಣೆಯನ್ನು ನಿಭಾಯಿಸುತ್ತಿದ್ದರು. ನಾನು ಅವರ ಜೊತೆ ಮಾತನಾಡಿ ನಿಮಗೆ ಸಂಬಳ ಎಷ್ಟು ಎಂದು ಕೇಳಿದೆ. ಆಗ ಅವರು ಕೋಪಗೊಂಡು ನಾನು ದೇಶಕ್ಕಾಗಿ ಕೆಲಸ ಮಾಡುತ್ತಿದ್ದೇನೆ, ಸಂಬಳಕ್ಕಾಗಿ ಅಲ್ಲ ಎಂದು ಹೇಳಿದರು ಎಂದು ಮೆಲುಕು ಹಾಕಿದ್ದಾರೆ.
ಪರಮೇಶ್ವರ್ (Parameshwar) ಅವರು ಈ ಇಲಾಖೆಯ ಜವಾಬ್ದಾರಿ ತೆಗೆದುಕೊಂಡ ಬಳಿಕ ಹೊಸ ರೂಪ ನೀಡಿದ್ದು, ನನಗೆ ಬಹಳ ಸಂತೋಷವಿದೆ. ನಿಮ್ಮ ಹಿತಕ್ಕಾಗಿ ವಸತಿ ನಿಲಯ, ಸೇವೆ ವೇಳೆ ಮೃತರಾದರೆ ಪರಿಹಾರ, ಸನ್ಮಿತ್ರ ಕಾರ್ಯಕ್ರಮ ತರಲಾಗುತ್ತಿದೆ. ನಿಮಗೆ ನಿಮ್ಮ ಕುಟುಂಬಕ್ಕಾಗಿ ಅನೇಕ ಯೋಜನೆ ತರಲಾಗಿದೆ. ನಿಮ್ಮ ಮೇಲೆ ಸರ್ಕಾರಕ್ಕೆ ಅಪಾರ ವಿಶ್ವಾಸವಿದೆ. ನಿಮ್ಮ ಯಶಸ್ಸಿನಲ್ಲಿ ಸರ್ಕಾರದ ಯಶಸ್ಸು ಅಡಗಿದೆ. ಆಯುಕ್ತರಾದ ಸಲೀಂ ಅವರು ಸಂಚಾರ ದಟ್ಟಣೆ ವಿಚಾರವಾಗಿ ಬಹಳ ಅರಿವಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ (Bengaluru) 1.40 ಕೋಟಿ ಜನರಿದ್ದಾರೆ. 1.23 ಕೋಟಿ ವಾಹನಗಳಿವೆ. ನಾವು ಎಷ್ಟೇ ಪ್ರಯತ್ನಪಟ್ಟರೂ ಜನ ಸಾರ್ವಜನಿಕ ಸಾರಿಗೆಗಿಂತ ವೈಯಕ್ತಿಕ ಸಾರಿಗೆ ಮೇಲೆ ಆಸಕ್ತಿ ಹೊಂದಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರಸ್ತೆ ಅಗಲೀಕರಣ ಕಷ್ಟವಾಗಿದೆ. ನಮ್ಮ ಸರ್ಕಾರ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಬಿಬಿಸಿ ರಸ್ತೆ, ಟನಲ್ ರಸ್ತೆ, ಎಲಿವೇಟೆಡ್ ಕಾರಿಡಾರ್, ಡಬಲ್ ಡೆಕ್ಕರ್ ಸೇರಿದಂತೆ ಅನೇಕ ಯೋಜನೆ ಹಮ್ಮಿಕೊಂಡಿದ್ದೇವೆ. ಸಂಚಾರ ದಟ್ಟಣೆ ನಿವಾರಣೆಗೆ ಇರುವ ಸಲಹೆಗಳನ್ನು ನೀವೇ ಸರ್ಕಾರಕ್ಕೆ ಸಲ್ಲಿಸಿ ಎಂದಿದ್ದಾರೆ.
ದಾವಣಗೆರೆ: ಇಬ್ಬರು ಬೈಕ್ ಕಳ್ಳರನ್ನು ಹರಿಹರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 16.52 ಲಕ್ಷ ರೂ. ಮೌಲ್ಯದ 30 ಬೈಕ್‍ಗಳನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತ ಆರೋಪಿಗಳನ್ನು ಚಿಕ್ಕಮಗಳೂರಿನ ಪ್ರತಾಪ್ ಹಾಘೂ ಬಳ್ಳಾರಿ ಜಿಲ್ಲೆಯ ಬೋಜರಾಜ್ ಎಂದು ಗುರುತಿಸಲಾಗಿದೆ. ಆರೋಪಿಗಳು ಹರಿಹರದ ಇಂದಿರಾನಗರ, ವಿದ್ಯಾನಗರ ಸೇರಿದಂತೆ ಹಲವು ಕಡೆ ಬೈಕ್ ಕಳ್ಳತನ ಮಾಡಿದ್ದರು. ಪ್ರಕರಣದ ಬೆನ್ನು ಹತ್ತಿದ್ದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪೊಲೀಸರು ಕಾನೂನು ಪ್ರಕ್ರಿಯೆ ಮುಗಿಸಿ ಮಾಲೀಕರಿಗೆ ಬೈಕ್‍ಗಳನ್ನು ಮರಳಿಸಿದ್ದಾರೆ. ಪೊಲೀಸರ ಕಾರ್ಯಕ್ಕೆ ಎಸ್‍ಪಿ ಉಮಾ ಪ್ರಶಾಂತ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮಂಗಳೂರು: ಪ್ರಚೋದನಕಾರಿ ಭಾಷಣ ಆರೋಪದಡಿ ಎಫ್‌ಐಆರ್ ದಾಖಲಾಗಿದ್ದ ಕಲ್ಲಡ್ಕ ಪ್ರಭಾಕರ ಭಟ್ (Kalladka Prabhakar Bhat) ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್ ಆದೇಶ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು (Puttur) ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಆದೇಶ ನೀಡಿದೆ. ನ್ಯಾಯಾಲಯದ ಮುಂದಿನ ವಿಚಾರಣೆಯವರೆಗೆ ಬಂಧನ ಸಹಿತ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿ, ಅಕ್ಟೋಬರ್ 29ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಏನಿದು ಪ್ರಕರಣ?
ಪ್ರಚೋದನಕಾರಿ ಭಾಷಣ ಆರೋಪದಡಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಅ.20ರಂದು ಪುತ್ತೂರು ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಭಾಷಣ ಮಾಡಿದ್ದರು. ಭಾಷಣದ ವೇಳೆ ಧಾರ್ಮಿಕ ದ್ವೇಷ ಹಾಗೂ ಮಹಿಳೆಯರ ಘನತೆಗೆ ಧಕ್ಕೆ ಮಾಡಿದ್ದಾರೆ ಎಂದು ಈಶ್ವರಿ ಪದ್ಮುಂಜ ಎಂಬವವರು ನೀಡಿದ ದೂರಿನ ಅನ್ವಯ ಎಫ್‌ಐಆರ್ ದಾಖಲಾಗಿತ್ತು. ಭಾರತೀಯ ನ್ಯಾಯ ಸಂಹಿತೆ 2023ರ 79, 196, 299, 302 ಹಾಗೂ 3(5) ಕಲಂಗಳ ಅಡಿಯಲ್ಲಿ ಪ್ರಭಾಕರ ಭಟ್ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸರು ಅ.30ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದರು.
ಹೀಗಾಗಿ ಕಲ್ಲಡ್ಕ ಪ್ರಭಾಕರ ಭಟ್ ಪೊಲೀಸರ ಎಫ್‌ಐಆರ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ಸದ್ಯ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಮುಂದಿನ ವಿಚಾರಣೆವರೆಗೆ ಬಂಧನ ಸಹಿತ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.
ಭಾನುವಾರ ರಾತ್ರಿ ಯುವತಿ ವಿಚಾರಕ್ಕೆ ಗಿರೀಶ್ ಹಾಗೂ ಸೀನನ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಇದರಿಂದ ಗಿರೀಶ್ ಮೇಲೆ ಸೀನ ಕೋಪಗೊಂಡಿದ್ದ. ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಗಿರೀಶ್ ಇಂದು ಬೆಳಿಗ್ಗೆ 11 ಗಂಟೆ ಸುಮಾರಿನಲ್ಲಿ ಸಾರಿಗೆ ಬಸ್ ನಿಲ್ದಾಣದಲ್ಲಿರುವ ಶೌಚಾಲಯಕ್ಕೆ ಹೋಗಿ ಹೊರಗೆ ಬಂದಿದ್ದ.
ಈ ವೇಳೆ ಕಾದು ನಿಂತಿದ್ದ ಸೀನ ಮಚ್ಚು ಹಿಡಿದು ಗಿರೀಶ್ ಮೇಲೆ ಅಟ್ಯಾಕ್ ಮಾಡಿ ಮನಬಂದಂತೆ ಕೊಚ್ಚಿ ಎಸ್ಕೇಪ್ ಆಗಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಿರೀಶ್‌ನನ್ನು ಅಂಬ್ಯುಲೆನ್ಸ್‌ನಲ್ಲಿ ಜಿಲ್ಲಾಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹಾಸನ: ಬಣ್ಣಬಣ್ಣದ ಮಾತಾಡಿ ಹಲವಾರು ಜನರಿಂದ ಲಕ್ಷ ಲಕ್ಷ ಹಣ (Money) ಪಡೆದು ವಂಚಿಸಿದ್ದ (Fraud Case) ಮಹಿಳೆಯನ್ನು ಜನ ಅಟ್ಟಾಡಿಸಿ ಹೊಡೆದ ಘಟನೆ ಹಾಸನದ (Hassan) ಅರಳೇಪೇಟೆಯಲ್ಲಿ ನಡೆದಿದೆ.
ಟೈಲರ್ ಶಾಪ್ ನಡೆಸುತ್ತಿದ್ದ ಮಹಿಳೆ ಹೇಮಾವತಿ ಎಂಬಾಕೆ, ಹಲವರ ಬಳಿ ಚಿಟ್ಸ್‍ನಲ್ಲಿ 1 ಕೋಟಿ ರೂ. ಚೀಟಿ ಹಾಕಿದ್ದೇನೆ ಎಂದು ಸ್ಲಿಪ್ ತೋರಿಸಿ ಹಣ ಪಡೆದಿದ್ದಳು. ಅಲ್ಲದೇ ಮಗಳನ್ನು ವಿದೇಶದಲ್ಲಿ ಇಂಜಿನಿಯರಿಂಗ್ ಓದಿಸುವುದಕ್ಕೆ, ಒಂದು ಕೋಟಿ ರೂ. ಮನೆ ಖರೀದಿಸಿದ್ದೇನೆಂದು ಹೇಳಿ ಹಲವರಿಂದ ಸಾಲ ಪಡೆದಿದ್ದಳು.
ಚಿನ್ನಾಭರಣ ಅಡವಿಟ್ಟು ಜನ ಲಕ್ಷ ಲಕ್ಷ ಸಾಲ ಕೊಟ್ಟಿದ್ದರು. ಸುಮಾರು 3 ಕೋಟಿಗೂ ಅಧಿಕ ಹಣ ಪಡೆದು ಮೋಸ ಮಾಡಿರುವ ಆರೋಪ ಮಹಿಳೆ ಮೇಲಿದೆ. ಹೆಂಡತಿ ವಂಚನೆಗೆ ಪತಿ ವಿರೂಪಾಕ್ಷಪ್ಪ ಸಾಥ್ ನೀಡಿದ್ದಾರೆ ಎಂದು ಜನ ಆರೋಪಿಸಿದ್ದಾರೆ. ಇನ್ನೂ ಓರ್ವ ಮಹಿಳೆಯಿಂದಲೇ 45 ಲಕ್ಷ ರೂ. ಹಣ ಪಡೆದು ವಂಚನೆ ಮಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಬೆಳಗಾವಿ | 2,000 ಹಣಕ್ಕಾಗಿ ಹರಿಯಿತು ಯುವಕನ ನೆತ್ತರು
ವಂಚನೆಗೊಳಗಾದ ಜನ ಮಹಿಳೆಯನ್ನು ರಸ್ತೆಯಲ್ಲಿ ಅಟ್ಟಾಡಿಸಿ ಹಲ್ಲೆ ನಡೆಸಿದ್ದಾರೆ. ಹಲ್ಲೆಯ ವೀಡಿಯೋ ಮೊಬೈಲ್‍ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಯಾದಗಿರಿ: ಜಿಲ್ಲೆಯಲ್ಲಿ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಶಹಾಪುರ ತಾಲ್ಲೂಕಿನ ಚಾಮನಾಳ ತಾಂಡಾದಲ್ಲಿ ಮಹಿಳೆಯೊಬ್ಬರ (Yadagiri Women) ತಲೆ ಕೂದಲು ಕತ್ತರಿಸಿ, ಸುಣ್ಣ ಹಚ್ಚಿ, ಖಾರದ ಪುಡಿ ಎರಚಿ ಅಮಾನುಷವಾಗಿ ವರ್ತಿಸಿದ ಘಟನೆ ನಡೆದಿದೆ. ಪ್ರಕರಣ ಸಂಬಂಧ ಇಬ್ಬರನ್ನ ಬಂಧಿಸಲಾಗಿದ್ದು, 11 ಜನರ ವಿರುದ್ಧ ಕೆಂಭಾವಿ ಪೊಲೀಸ್ ಠಾಣೆಯಲ್ಲಿ (Kembhavi) ಕೇಸ್ ದಾಖಲಿಸಲಾಗಿದೆ.
ಅ.16 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕಸ್ತೂರಿಬಾಯಿ ಡಾಕಪ್ಪ ಮತ್ತು ಡಾಕಪ್ಪ ಚಿನ್ನಾರಾಠೋಡ ಬಂಧಿತ ಆರೋಪಿಗಳು. ಇನ್ನುಳಿದಂತೆ ವಿಜಯಕುಮಾರ ಕಿಶನ್ ರಾಠೋಡ (ರೌಡಿ ಶೀಟರ್) ಮತ್ತು ಇತರೆ ಹತ್ತು ಮಂದಿ ಆರೋಪಿಗಳು ತಮ್ಮ ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಿದ್ದು, ಮುಂಬೈ, ಪುಣೆಯಲ್ಲಿ ತಲೆ ಮರೆಸಿಕೊಂಡಿರುವ ಶಂಕೆ ಇದೆ ಎಂದು ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತೆ ಆರೋಗ್ಯ ಸಮಸ್ಯೆಯಿಂದಾಗಿ ಕಲಬುರಗಿ ಇರುವ ಚಿಕ್ಕಮ್ಮನ ಮನೆಗೆ ಆಗಾಗ ಹೋಗುತ್ತಿದ್ದಳು. ಆಕೆಯ ಅಳಿಯ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ. ಆದ್ರೆ ಆರೋಪಿಗಳು ಅಳಿಯನ ಜೊತೆಗೆ ಸಂಬಂಧ ಇಟ್ಟುಕೊಂಡು ಓಡಿ ಹೋಗಿ ಮರ್ಯಾದೆ ತೆಗೆದಿದ್ದೀಯಾ ಅಂತ ನಿಂದಿಸಿ ಮನಸೋಇಚ್ಛೆ ಥಳಿಸಿದ್ದಾರೆ. ಸುಮಾರು 11 ಜನ ಗಂಗೂಭಾಯಿಯನ್ನ ಒದ್ದು ನೆಲಕ್ಕೆ ಕೆಡವಿದ್ದಾರೆ. ಆಕೆಯನ್ನ ಹಿಡಿದು ತಲೆಕೂದಲು ಕತ್ತರಿಸಿದ್ದಾರೆ. ನಂತರ ತಲೆಗೆ ಸುಣ್ಣ ಹಚ್ಚಿ, ಮೈಮೇಲೆ ಕಾರದಪುಡಿ ಹಾಕಿ ದುಷ್ಕೃತ್ಯ ಎಸಗಿದ್ದಾರೆ. ಜೊತೆಗೆ ಜೀವ ಬೆದರಿಕೆ ಹಾಕಲಾಗಿದೆ ಎಂಬ ಆರೋಪ ಕೂಡ ಕೇಳಿಬಂದಿದೆ.
ಘಟನೆ ಸಂಬಂಧ ಕೆಂಭಾವಿ ಪೋಲಿಸ್ ಠಾಣೆಯಲ್ಲಿ 11 ಜನರ ವಿರುದ್ಧ ಕೇಸ್ ದಾಖಲಾಗಿದ್ದು, ಕಸ್ತೂರಿಭಾಯಿ, ಡಾಕಪ್ಪ ಇಬ್ಬರನ್ನ ಬಂಧಿಸಲಾಗಿದೆ. ಇನ್ನುಳಿದ ವಿಜಯಕುಮಾರ್, ತಿಪ್ಪಣ್ಣ, ರಮೇಶ, ದೇವಿಭಾಯಿ, ತಿಪ್ಪಿಭಾಯಿ, ರೂಪ್ಲಿಭಾಯಿ, ಅನುಸೂಯಾ, ಚಾವಳಿಭಾಯಿ, ತಿಪ್ಪಣ್ಣ ನಾಯ್ಕ್ ಆರೋಪಿಗಳಿಗಾಗಿ ಕೆಂಭಾವಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.
ಮೈಸೂರು: ತಿ.ನರಸೀಪುರ ತಾಲೂಕಿನ ಬನ್ನೂರು ಹೈವೇ ಬಳಿಯ ಭ್ರೂಣ ಪರೀಕ್ಷೆ ( Fetal Tests) ಕೇಂದ್ರದ ಪ್ರಕರಣದಲ್ಲಿ ಕಿಂಗ್ ಪಿನ್ ಶ್ಯಾಮಲಾ ಓದಿದ್ದು ಬಿಎಸ್ಸಿ ನರ್ಸಿಂಗ್. ಓದು ಮುಗಿಸಿದ ಕೂಡಲೇ ಈಕೆ ನರ್ಸಿಂಗ್ ಹೋಂ ಆರಂಭಿಸಿದ್ದಳು ಎಂದು ತಿಳಿದುಬಂದಿದೆ.
ಬನ್ನೂರು (Bannuru) ಮುಖ್ಯ ರಸ್ತೆಯಲ್ಲಿ 15 ಬೆಡ್‌ಗಳ ಆಸ್ಪತ್ರೆ ಆರಂಭಿಸಿ ಅಲ್ಲಿ ಭ್ರೂಣ ಪರೀಕ್ಷೆ ದಂಧೆ ನಡೆಸುತ್ತಿದ್ದಳು. ಇದುವರೆಗೂ ಸುಮಾರು 200ಕ್ಕೂ ಹೆಚ್ಚು ಭ್ರೂಣ ಪರೀಕ್ಷೆ ಈ ಆಸ್ಪತ್ರೆಯಲ್ಲಿ ನಡೆದಿದೆ ಎಂಬ ಅಂಶ ತನಿಖೆಯಲ್ಲಿ ಬಹಿರಂಗವಾಗಿದೆ. ಶ್ಯಾಮಲಾ ತಮ್ಮ ಗೋವಿಂದರಾಜು ಕೂಡ ಕೃತ್ಯದಲ್ಲಿ ಭಾಗಿಯಾಗಿದ್ದ. ಏಜೆಂಟ್ ಪುಟ್ಟರಾಜು ಮೂಲಕ ಗಿರಾಕಿಗಳನ್ನು ಸ್ಕ್ಯಾನಿಂಗ್ ಕೇಂದ್ರಕ್ಕೆ ಕರೆಸುತ್ತಿದ್ದ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಮೈಸೂರಲ್ಲಿ ಭ್ರೂಣ ಲಿಂಗ ಪತ್ತೆ ಜಾಲ ದಂಧೆ – ಖಾಸಗಿ ಆಸ್ಪತ್ರೆ ಮಾಲಕಿ ಸೇರಿ ಐವರ ಬಂಧನ
ಪ್ರಕರಣ ಸಂಬಂಧ ಸಾಲಿಗ್ರಾಮ ತಾಲೂಕಿನ ಬೇರ್ಯ ಮೂಲದ ಶಿವಕುಮಾರ್, ಮೈಸೂರು (Mysuru) ತಾಲೂಕಿನ ಡಿ.ಸಾಲುಂಡಿ ಗ್ರಾಮದ ಹರೀಶ್ ವಶಕ್ಕೆ ಪಡೆಯಲಾಗಿದೆ. ಮಧ್ಯವರ್ತಿ ಪುಟ್ಟರಾಜು ಎಸ್ಕೇಪ್ ಆಗಿದ್ದಾನೆ. ಒಟ್ಟು ಐವರನ್ನು ಬಂಧಿಸಲಾಗಿದೆ. ಆರೋಪಿಗಳು ಒಂದು ಭ್ರೂಣಪತ್ತೆಗೆ 25 ರಿಂದ 35 ಸಾವಿರ ಚಾರ್ಜ್ ಮಾಡುತ್ತಿದ್ದರು. ಆಸ್ಪತ್ರೆಯಿಂದ ಕಾರಿನಲ್ಲಿ ಸ್ಕ್ಯಾನಿಂಗ್ ಮಿಷಿನ್ ತಂದು ಭ್ರೂಣ ಪತ್ತೆ ಮಾಡಲಾಗುತ್ತಿತ್ತು. ಶ್ಯಾಮಲಾ ಮನೆಯಲ್ಲಿಯೇ ಸ್ಕ್ಯಾನಿಂಗ್ ಮಿಷಿನ್ ಕೂಡ ಇತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬನ್ನೂರು ಹೈವೇ ಬಳಿಯ ಹುಣಗನಹಳ್ಳಿ ವ್ಯಾಪ್ತಿಯ ಫಾರಂ ಹೌಸ್ ಒಂದರಲ್ಲಿ ಲಿಂಗ ಭ್ರೂಣ ಪತ್ತೆ ಮಾಡಲಾಗುತ್ತಿತ್ತು. ದಾಳಿ ವೇಳೆ 4 ಗರ್ಭಿಣಿಯರು ಭ್ರೂಣ ಲಿಂಗ ಪತ್ತೆಗೆ ಹಾಜರಿದ್ದರು. ಈ ಕೇಂದ್ರದಲ್ಲಿ ಸ್ಕ್ಯಾನಿಂಗ್‌ಗೆ ಬಳಕೆ ಮಾಡುವ ಉಪಕರಣವು ಇತ್ತು. ಈ ಹಿನ್ನೆಲೆಯಲ್ಲಿ ಹೆರಿಗೆ ಪೂರ್ವ ಭ್ರೂಣ ಲಿಂಗ ಪತ್ತೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಕೆಲವರನ್ನು ವಶಕ್ಕೆ ಪಡೆಯಲಾಗಿದೆ.
ಚಿತ್ರದುರ್ಗ: ಮನೆಗೆ ಫೋನ್ ಕರೆ ಮಾಡಿದ ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ವಸತಿ ಶಾಲೆಯ ಶಿಕ್ಷಕ ವೀರೇಶ್ ಹಿರೇಮಠನನ್ನು ಬಂಧಿಸಿದ ಪೊಲೀಸರು ಜೈಲಿಗೆ ಅಟ್ಟಿದ್ದಾರೆ.
ವಿಡಿಯೋ ವೈರಲ್ ಆದ ಬಳಿಕ ನಾಪತ್ತೆಯಾಗಿದ್ದ ವೀರೇಶ್‌ನನ್ನು ಪೊಲೀಸರು ಕಲಬುರಗಿಯಲ್ಲಿ ಬಂಧಿಸಿದ್ದರು.
ತಡರಾತ್ರಿ ಆರೋಪಿಯನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು. ನ್ಯಾಯಾಧೀಶರು 2 ದಿನ ನ್ಯಾಯಾಂಗ ಬಂಧನ ವಿಧಿಸಿದ ಹಿನ್ನೆಲೆಯಲ್ಲಿ ವೀರೇಶ್‌ನನ್ನು ಚಿತ್ರದುರ್ಗ ಜೈಲಿಗೆ ಕಳುಹಿಸಿದ್ದಾರೆ.
ಏನಿದು ಪ್ರಕರಣ?
ಗುರು ತಿಪ್ಪೇಸ್ವಾಮಿ ದೇವಸ್ಥಾನದ ಅಧೀನದ ವೇದ ಅಧ್ಯಯನ ಶಾಲೆಯ ಶಿಕ್ಷಕ ವೀರೇಶ್ ಹಿರೇಮಠ್ ವಿದ್ಯಾರ್ಥಿಯನ್ನು ನೆಲಕ್ಕೆ ತಳ್ಳಿ ಎಲ್ಲೆಂದರಲ್ಲಿ ಮನಬಂದಂತೆ ಒದ್ದಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.